Connect with us

Mandya

ಕೇಂದ್ರ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮಂಡ್ಯದಲ್ಲಿ ರೈತರು ಪ್ರತಿಭಟನಾ ಧರಣಿ

Published

on

ಮಂಡ್ಯ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ಖಂಡಿಸಿ ಮಂಡ್ಯದಲ್ಲಿ ರೈತರು ಪ್ರತಿಭಟನಾ ಧರಣಿ ನಡೆಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಛೇರಿ ಎದುರು ಧರಣಿ ನಡೆಸಿ ರೈತ ವಿರೋಧಿ ಕಾಯ್ದೆಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನಾತ್ಮಕವಾಗಿ ಖಾತ್ರಿ ಗೊಳಿಸಬೇಕು. ಕನಿಷ್ಠ ಶೇ. 8.5 ಇಳುವರಿಗೆ ಕಬ್ಬಿನ ಎಫ್ ಆರ್ ಪಿ ದರ ನಿಗದಿಪಡಿಸಬೇಕು. ಬರ ಪರಿಹಾರದ ತಾರತಮ್ಯ ಸರಿಪಡಿಸಿ ಎಲ್ಲಾ ರೈತರಿಗೆ ಪರಿಹಾರ ಪಾವತಿಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ರೈತ ವಿರೋಧಿ 3 ಕಾಯ್ದೆಗಳನ್ನು ರಾಜ್ಯ ಸರ್ಕಾರ ರದ್ದು ಮಾಡಬೇಕು, ಕಾರ್ಮಿಕ ಕಾಯ್ದೆ ರದ್ದಿಗೆ ಮುಂದಾಗಬೇಕು. ಬ್ಯಾಂಕ್ ಮತ್ತು ವಿದ್ಯುತ್ ರಾಸಾಯೀಕರಣ ಕೈಬಿಡಲು ಕೇಂದ್ರ ಸರ್ಕಾರಕ್ಕೆ ಒತ್ತಡ ತರಬೇಕು. ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಬಾಕಿ ಹಣ ಪಾವತಿಸಬೇಕು. ಹಾಲು ಉತ್ಪಾದಕರಿಗೆ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಕೃಷಿ ಪಂಪ್ ಸೆಟ್ ಗಳಿಗೆ, ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುವ ರೈತರಿಗೆ ಅಕ್ರಮ ಸಕ್ರಮ ಪದ್ಧತಿಯನ್ನು ಮುಂದುವರಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯ ಜೀವನಾಡಿ ಕೃಷ್ಣರಾಜಸಾಗರ ಅಣೆಕಟ್ಟೆಯ ಸುರಕ್ಷತೆ ಹಿನ್ನೆಲೆಯಲ್ಲಿ ಜಲಾಶಯದ ವ್ಯಾಪ್ತಿಯಲ್ಲಿ ಶಾಶ್ವತವಾಗಿ ಗಣಿಗಾರಿಕೆಯನ್ನು ನಿಷೇಧ ಮಾಡಬೇಕು. ಯಾವುದೇ ಕಾರಣಕ್ಕೂ ಪರೀಕ್ಷಾರ್ಥ ಸ್ಫೋಟ(ಟ್ರಯಲ್ ಬ್ಲಾಸ್ಟ್) ಮಾಡಬಾರದು. ರೈತರ ಆತ್ಮಹತ್ಯೆ ತಡೆಗೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್ ಕೆಂಪೂಗೌಡ, ಗೋವಿಂದೇಗೌಡ, ಶಿವಳ್ಳಿ ಚಂದ್ರು, ಗೋರಾಪುರ ಶಂಕರಗೌಡ, ಜಿ.ಎಸ್ ಲಿಂಗಪ್ಪಾಜಿ, ಎಸ್.ಕೆ ರವಿ ಕುಮಾರ್, ಗೂಳೂರು ರಾಮಕೃಷ್ಣ, ಜವರೇಗೌಡ, ಎಂ.ಎಸ್ ವಿಜಯ್ ಕುಮಾರ್, ಟಿ.ಎಲ್ ವಿನೋದ್ ಬಾಬು, ವೈ.ಪಿ ಮಂಜುನಾಥ್, ಪ್ರಿಯಾ ರಮೇಶ್, ಲತಾ ಶಂಕರ್ ಸೇರಿದಂತೆ ಇತರರು ನೇತೃತ್ವ ವಹಿಸಿದ್ದರು.

Continue Reading

Mandya

ಕೆ.ಆರ್.ಎಸ್ ಅಣೆಕಟ್ಟೆಯಿಂದ ಹೆಚ್ಚು ನೀರು ಬಿಡುವ ಸಾಧ್ಯತೆ

Published

on

ಮಂಡ್ಯ: ಕೆ.ಆರ್.ಎಸ್ ಕನ್ನಂಬಾಡಿ ಅಣೆಕಟ್ಟೆಗೆ ಒಳ ಹರಿವು ಹೆಚ್ಚಳವಾಗುತ್ತಿರುವ ಹಿನ್ನಲೆ, ಅಣೆಕಟ್ಟೆಯಿಂದ ಯಾವ ಕ್ಷಣದಲ್ಲಾದ್ರೂ ಹೆಚ್ಚಿನ ನೀರು ಬಿಡಬಹುದು ಎಂದು ನದಿ ತೀರದ ನಿವಾಸಿಗಳಿಗೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಕಾವೇರಿ ಜಲನಯನ ಪ್ರದೇಶದಲ್ಲಿ ಹೆಚ್ಚಿನ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ, ಅಣೆಕಟ್ಟೆಗೆ ಒಳ ಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗುತ್ತಿದೆ. ಅಣೆಕಟ್ಟೆಯಿಂದ ಯಾವುದೇ ಕ್ಷಣದಲ್ಲಾದರೂ ಅಧಿಕ ನೀರನ್ನು ಕಾವೇರಿ ನದಿಗೆ ಬಿಡಬಹುದು ಎಂದು ಪ್ರಕಟಣೆ ಮೂಲಕ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಹಾಗಾಗಿ ಕಾವೇರಿ ನದಿ ತೀರದ ತಗ್ಗು ಪ್ರದೇಶದಲ್ಲಿ ವಾಷಿಸುತ್ತಿರುವ ಜನರು ‌ಮುಂಜಾಗ್ರತೆಯಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಪ್ರಸ್ತುತ ಅಣೆಕಟ್ಟೆಗೆ 44,452 ಕ್ಯೂಸೆಕ್ ನೀರು ಒಳ ಬರುತ್ತಿದ್ದು, 2,566 ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.

ಅಣೆಕಟ್ಟೆಯ ಗರಿಷ್ಟ ಮಟ್ಟ 124.80 ಅಡಿಯಾಗಿದ್ದು, ಇಂದು 116,60 ಅಡಿ ದಾಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Continue Reading

Mandya

ಸಿದ್ದಗಂಗಾಶ್ರೀ ಉದ್ಯಾನವನದಲ್ಲಿ ದಾಸೋಹ ಹುಣ್ಣಿಮೆ

Published

on

ಮಂಡ್ಯ : ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿರುವ ಪರಮಪೂಜ್ಯ ಡಾ.ಶ್ರೀಶ್ರೀ.ಶಿವಕುಮಾರ ಮಹಾಸ್ವಮೀಜಿ ಉದ್ಯಾನವನದಲ್ಲಿ ಜು.21ನೇ ಭಾನುವಾರ ಸಂಜೆ 6ಗಂಟೆಗೆ `ದಾಸೋಹ ಹುಣ್ಣಿಮೆ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಾಯಕಯೋಗಿ ಫೌಂಡೇಶನ್ ಅಧ್ಯಕ್ಷ ಎಂ.ಶಿವಕುಮಾರ್ ತಿಳಿಸಿದ್ದಾರೆ.

ಸುದೀರ್ಘ 111ವರ್ಷಗಳ ಕಾಲ ಕನ್ನಡನಾಡಿನ ನೆಲದಲ್ಲಿ ಅನ್ನ, ಅಕ್ಷರ, ಆಸರೆಯಂತಹ ತ್ರಿವಿಧ ದಾಸೋಹವನ್ನು ನಡೆಸಿ ನಡೆದಾಡುವ ದೇವರೆಂದೆ ಕೋಟ್ಯಾಂತರ ಭಕ್ತರ ಭಾವಕೋಶದಲ್ಲಿ ನೆಲೆಯಾಗಿರುವ ಸಿದ್ದಗಂಗಾ ಶ್ರೀಗಳ ಸಂಸ್ಮರಣೆಯ ಅಂಗವಾಗಿ ಪ್ರತಿ ತಿಂಗಳ ಹುಣ್ಣಿಮೆಯಂದು ಉದ್ಯಾನವನದಲ್ಲಿ `ದಾಸೋಹ ಹುಣ್ಣಿಮೆ’ ಮೂಲಕ ಹಸಿದವರಿಗೆ ಅನ್ನದಾಸೋಹ ನಡೆಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಾಸಕ ಪಿ.ರವಿಕುಮಾರ್‌ಗೌಡ ಗಣಿಗ ದಾಸೋಹಕ್ಕೆ ಚಾಲನೆ ನೀಡಲಿದ್ದು, ನಗರಸಭೆ ಸದಸ್ಯರಾದ ಕೆ.ವಿದ್ಯಾಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್ ದಾಸೋಹದ ಮಹತ್ವ ಕುರಿತು ಮಾತನಾಡಲಿದ್ದಾರೆ. ಸಿದ್ದಗಂಗಾಶ್ರೀ ಸೇವಾ ಸಮಿತಿ ಅಧ್ಯಕ್ಷ ಎಂ.ಆರ್.ಮಂಜುನಾಥ್, ಲಿಂಗಾಯತ ಮಹಾಸಭಾ ಅಧ್ಯಕ್ಷ ಎಂ.ಎಸ್.ಮಂಜುನಾಥ್‌ಬೆಟ್ಟಹಳ್ಳಿ, ಆಲಕೆರೆ ಗ್ರಾ.ಪಂ.ಮಾಜಿ ಸದಸ್ಯ ತರಕಾರಿ ಮಹೇಶ್ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದಿದ್ದಾರೆ

Continue Reading

Mandya

ದುರಸ್ಥಿಯಾಗದ ಮಹದೇವಪುರ ರಸ್ತೆ : ನೆಲಕ್ಕುರುಳುತ್ತಿರುವ ಬೈಕ್ ಸವಾರರು

Published

on

ಶ್ರೀರಂಗಪಟ್ಟಣ : ತಾಲ್ಲೂಕಿನ ಮಹದೇವಪುರ( ಬೋರೆ) ರಸ್ತೆಯು ದುರಸ್ಥಿಯಾಗದ ಕಾರಣ ಬೃಹತ್ ಗುಂಡಿಗಳಾಗಿ ಬೈಕ್ ಸವಾರರು ಆಯತಪ್ಪಿ ನೆಲಕ್ಕುರುಳುತ್ತಿದ್ದಾರೆ.

ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ರಸ್ತೆಯಲ್ಲಾ ಕೆಸರುಮಯವಾಗಿದ್ದು, ಅರಕೆರೆ – ಮೈಸೂರು ಮಾರ್ಗವಾಗಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಈ ರಸ್ತೆಯಲ್ಲಿ ಬಸ್ಸು, ಲಾರಿ, ಕಾರುಗಳು ಬರುವ ವೇಳೆ ಬೈಕ್ ಸವಾರರೇನಾದರೂ ಬಂದಲ್ಲಿ ಅವರ ಪರಿಸ್ಥಿತಿ ಹೇಳತೀರದಂತಾಗಿದೆ.

ಬಟ್ಟೆಯೆಲ್ಲಾ ಹಳ್ಳದಿಂದ ಚಿಮ್ಮುವ ನೀರಿನಿಂದಾಗಿ ಕೆಸರುಮಯವಾಗುವುದರ ಜೊತೆಗೆ ಸ್ವಲ್ಪ ಎಚ್ಚರ ತಪ್ಪಿದರೂ ಸ್ಕಿಡ್ ಆಗಿ ನೆಲಕ್ಕೆ ಜಾರು ಬೀಳುವುದು ಗ್ಯಾರಂಟಿ. ಈಗಾಗಲೇ ಈ ಜಾಗದಲ್ಲಿ ಹಲವಾರು ಮಂದಿ‌ ನೆಲಕ್ಕುರುಳಿ ಪೆಟ್ಟು ಮಾಡಿಕೊಂಡಿದ್ದು, ಹೆಚ್ಚಿನ ಅಚಘಢಗಳು ಸಂಭವಿಸುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಗಳು ರಸ್ತೆ ದುರಸ್ಥಿಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Continue Reading

Trending

error: Content is protected !!