Mandya
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ – ವಿದ್ಯಾರ್ಥಿನಿ ನೇಹ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹ

ಮಂಡ್ಯ : ವಿದ್ಯಾರ್ಥಿನಿ ನೇಹಾ ಹಿರೇಮಠ್ ಭೀಕರ ಹತ್ಯೆ ಹಾಗೂ ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ವಿರೋಧಿಸಿ ಬಿಜೆಪಿ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ಮೆರವಣಿಗೆ ಹೊರಟ ಪಕ್ಷದ ಕಾರ್ಯಕರ್ತರು ಹಗೂ ಕಾಲೇಜು ವಿದ್ಯಾರ್ಥಿಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗುತ್ತಾ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ರಾಜ್ಯಪಾಲರಿಗೆ ಮನವಿ ಪತ್ರ ರವಾನಿಸಿದರು.
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಿದೆ, ಲವ್ ಜಿಹಾದ್ ಗೆ ಕಡಿವಾಣ ಹಾಕದ ಸರ್ಕಾರ ಎಂದು ಭಿತ್ತಿ ಫಲಕ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿನಿ ನೇಹಾಳನ್ನು ಉಗ್ರರ ರೀತಿಯಲ್ಲಿ ಹತ್ಯೆ ಮಾಡಲಾಗಿದೆ, ಕಾರ್ಪೊರೇಟರ್ ಮಗಳಿಗೆ ಸುರಕ್ಷತೆ ಇಲ್ಲವಾಗಿದ್ದು ಜನಸಾಮಾನ್ಯರ ರಕ್ಷಣೆ ಹೇಗೆ ಎಂಬುದು ಪ್ರಶ್ನೆಯಾಗಿದೆ, ಕೊಲೆಗಾರ ಫಯಾಜ್ ಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ನೇಹಾ ಪೋಷಕರಿಗೆ ಮುಖ್ಯಮಂತ್ರಿ ಸಾಂತ್ವನ ಹೇಳಲಿಲ್ಲ. ವೈಯಕ್ತಿಕ ಕಾರಣಕ್ಕೆ ಪ್ರಕರಣ ನಡೆದಿದೆ ಎಂದು ಹಗುರವಾಗಿ ಮಾತನಾಡಿ ಪ್ರಕರಣದ ಬಗ್ಗೆ ನಿರ್ಲಕ್ಷ್ಯತೆ ತೋರಿದ್ದಾರೆ, ವಿದ್ಯಾರ್ಥಿನಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಆಗ ಮಾತ್ರ ರಾಜ್ಯದಲ್ಲಿ ಇಂತಹ ಕ್ರೂರ ಹತ್ಯೆಗಳು ಮರುಕಳಿಸದಂತೆ ತಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು
ಕಳೆದ ಮೂರು ದಿನದಿಂದ ರಾಜ್ಯದಲ್ಲಿ 8 ಹತ್ಯೆಗಳು ನಡೆದಿದ್ದರೂ ಕಾಂಗ್ರೆಸ್ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಅಲ್ಪಸಂಖ್ಯಾತರ ತುಷ್ಟಿಕರಣ ನೀತಿ ಅನುಸರಿಸಿದೆ. ತುಷ್ಟಿಕರಣ ರಾಜಕಾರಣವು ಮೊದಲಿಂದಲೂ ಕಾಂಗ್ರೆಸ್ ಅನುಸರಿಸಿದೆ. ಕೆ.ಜಿ.ಹಳ್ಳಿ-ಡಿಜಿ ಹಳ್ಳಿಯಲ್ಲಿ ತನ್ನದೇ ಶಾಸಕರ ಮೇಲೆ ದಾಳಿ ನಡೆದರೂ ಸರ್ಕಾರ ಕ್ರಮವಹಿಸಲಿಲ್ಲ. ಮತ ಪಡೆಯುವುದಕ್ಕಾಗಿ ಅಲ್ಪಸಂಖ್ಯಾತರ ಓಲೈಸಿ, ದಲಿತರು, ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದೆ,ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಿರುವ ಮುಖ್ಯಮಂತ್ರಿ ನೈತಿಕ ಹೊಣೆ ಹೊರಬೇಕು. ಮಹಿಳೆಯರ ಬಗ್ಗೆ ಗೌರವ ಇದ್ದರೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂದವರಿಗೆ ರಾಜ್ಯ ಸರ್ಕಾರ ಬೆಂಬಲವಾಗಿದೆ, ಕೊಲೆಗಡುಕರಿಗೆ ರಕ್ಷಣೆ ನೀಡುತ್ತಿರುವ ಹೊಣೆಗೇಡಿ, ನಾಲಾಯಕ್ ಮುಖ್ಯಮಂತ್ರಿ,ಗೃಹ ಸಚಿವರನ್ನು ಮನೆಗೆ ಕಳುಹಿಸಲು ಹೋರಾಟ ಮಾಡಲಾಗುವುದು ಎಂದರು.
ಬಿಜೆಪಿ ರಾಜ್ಯ ಮಹಿಳಾಧ್ಯಕ್ಷೆ ಮಂಜುಳ, ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಇಂದ್ರೇಶ್ ಕುಮಾರ್,ಅಶೋಕ್ ಜಯರಾಮ್, ವಿದ್ಯಾನಾಗೇಂದ್ರ, ಚಂದಗಾಲು ಶಿವಣ್ಣ, ಅರವಿಂದ್, ಸಿ ಟಿ ಮಂಜುನಾಥ್, ನಾಗಾನಂದ, ಕೆ.ಎಲ್ ಆನಂದ್, ಶ್ರೀಧರ್, ವಿವೇಕ್, ಅರುಣ್ ಕುಮಾರ್, ರವಿಕುಮಾರ್, ಬಿ,ಟಿ ಶಿವಲಿಂಗಯ್ಯ ಸೇರಿದಂತೆ ಇತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
Mandya
ಪತ್ರಕರ್ತರಿಗೆ ಪರಿಹಾರದ ಚೆಕ್ ವಿತರಣೆ

ಮಂಡ್ಯ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಮಂಡ್ಯ ನಗರ ಸಭೆಯಲ್ಲಿ ಮೀಸಲಿರಿಸಿದ್ದ ಆರೋಗ್ಯ ಪರಿಹಾರ ನಿಧಿಯಿಂದ ಹಿರಿಯ ಪತ್ರಕರ್ತರಾದ ಬಸವರಾಜ್ ಹೆಗಡೆ ಹಾಗೂ ಶೇಷು ಅವರಿಗೆ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.
ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಕೆ..ಎನ್.ನವೀನ್ ಕುಮಾರ್ ಹಾಗೂ ಮಾಜಿ ಅಧ್ಯಕ್ಷರಾದ ಬಿ.ಪಿ ಪ್ರಕಾಶ್ ಅವರು, ಪರಿಹಾರದ ಚೆಕ್ ವಿತರಣೆ ಮಾಡಿ ಆರೋಗ್ಯ ವಿಚಾರಿಸಿದರು.
ಬಸವರಾಜ್ ಹೆಗಡೆ ಹಾಗೂ ಶೇಷು ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಜಿಲ್ಲಾ ಸಂಘದ ಮನವಿ ಮೇರೆಗೆ ನಗರ ಸಭೆ ತಲಾ ಹತ್ತು ಸಾವಿರದ ಪರಿಹಾರದ ಚೆಕ್ ಅನ್ನು ನೀಡಿದೆ.
Mandya
ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಬೆಂಕಿ: 25 ಎಕರೆ ಅರಣ್ಯ ಭಸ್ಮ

ಶ್ರೀರಂಗಪಟ್ಟಣ : ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಮಾರು 25 ಎಕರೆ ಪ್ರದೇಶದ ಅರಣ್ಯ ಭಸ್ಮವಾಗಿದೆ.
ತಾಲ್ಲೂಕಿನ ಗಣಂಗೂರು ಐಬಿ ಎದುರುಗಿನ ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ಮರ, ಗಿಡಗಳು ಸೇರಿದಂತೆ ಪ್ರಾಣಿ ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಬೆಂಕಿ ನಂದಿಸಿದ್ದಾರೆ.
Mandya
ಫೈನಾನ್ಸ್ ಕಿರುಕುಳದಿಂದ ಮೃತರಾದ ತಾಯಿ-ಮಗನ ಕುಟುಂಬ ಭೇಟಿಯಾದ ಆರ್.ಅಶೋಕ್

ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡದ್ದ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್ ಬ್ಯಾಂಕ್‌ನಲ್ಲಿ 6 ಲಕ್ಷ ಸಾಲ ಪಡೆದು, ಸಾಲ ತೀರಿಸಲಾಗದೆ ಬ್ಯಾಂಕ್ ಸಿಬ್ಬಂದಿಗಳ ಕಾಟದಿಂದ ಮನನೊಂದು ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ತಾಯಿ ಸಾವಿನಿಂದ ಮನನೊಂದ ಮಗ ರಂಜಿತ್ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇಂದು (ಫೆ.6) ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಜೆಡಿಎಸ್ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಇಂಡವಾಳು ಸಚ್ಚಿದಾನಂದ ಮತ್ತಿತರರು ಸಾಥ್ ನೀಡಿದರು.
-
State11 hours ago
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ
-
Kodagu8 hours ago
ಕೊಡವಾಮೆ ಬಾಳೋ ಪಾದಯಾತ್ರೆ: ಮಧ್ಯ ಮಾರಾಟ ನಿಷೇಧ
-
Chamarajanagar8 hours ago
ಚಿಕ್ಕಮಗಳೂರು: ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಪತ್ತೆ?
-
Kodagu13 hours ago
ಫೆ.7 ರ ಕೊಡವ ಪಾದಯಾತ್ರೆಗೆ ಸಿಎನ್ ಸಿ ಬೆಂಬಲ
-
Kodagu8 hours ago
ಕೊಟ್ಟಮುಡಿ ಝೀನತ್ ಯುವಕ ಸಂಘ ಅಧ್ಯಕ್ಷರಾಗಿ ಸೌಕತ್ ಆಯ್ಕೆ
-
Hassan7 hours ago
ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
-
Sports9 hours ago
ಏಕದಿನ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ ಆಸೀಸ್ ಆಲ್ರೌಂಡರ್ ಸ್ಟೋಯ್ನಿಸ್
-
Hassan6 hours ago
ಎಂಸಿಇ ಕಾಲೇಜು ಉಪಾಧ್ಯಕ್ಷರಿಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ