Connect with us

Mandya

ಸಂಕಷ್ಟದಲ್ಲಿರುವ ರೈತರಿಗೆ ತುರ್ತಾಗಿ ಬರ ಪರಿಹಾರ ನೀಡಿ

Published

on

ಮಂಡ್ಯ : ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ವಿರೋಧಿಸಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣ ಸಮಿತಿ ಸೋಮವಾರವು ಹೋರಾಟ ಮುಂದುವರೆಸಿತು.

ನಗರದ ಸರ್ ಎಂ.ವಿ.ಪ್ರತಿಮೆ ಎದುರು ಸಮಿತಿಯ ಮುಖಂಡರು, ಪ್ರಗತಿಪರ, ಕನ್ನಡಪರ ಸಂಘಟನೆ ಕಾರ್ಯಕರ್ತರು ಹೋರಾಟ ನಡೆಸಿ ನೀರು ಸಂರಕ್ಷಣೆ ಮಾಡದ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಮಿತಿಯ ಸಂಘಟನಾ ಕಾರ್ಯದರ್ಶಿ ಸುನಂದ ಜಯರಾಮ್ ಮಾತನಾಡಿ, ಕಾವೇರಿ ನದಿ ನೀರು ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ನಿರಂತರ ದ್ರೋಹ ಮಾಡುತ್ತಿವೆ, ನೀರಿನ ಸಂರಕ್ಷಣೆ ಮಾಡದೆ ರೈತರಿಗೆ ಸಂಕಷ್ಟ ತಂದೊಡ್ಡಿದೆ, ಭೀಕರ ಬರ ಪರಿಸ್ಥಿತಿಯಲ್ಲಿ ಬೆಳೆ ನಷ್ಟವಾಗಿ ಸಂಕಷ್ಟ ಪರಿಸ್ಥಿತಿಯಲ್ಲಿರುವ ರೈತರಿಗೆ ಬೆಳೆ ಪರಿಹಾರ ನೀಡಿಲ್ಲ, ಈ ಕೂಡಲೇ ರೈತರಿಗೆ ಬರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಮಳೆ ಅಭಾವದಿಂದ ನೀರಿನ ಕೊರತೆ ಎದುರಾಗಿ ಬೆಳೆಗಳೆಲ್ಲ ನೀರಿಲ್ಲದೆ ಒಣಗಿ ಹೋದವು ಇದೀಗ ಜನ ಜಾನುವಾರುಗಳಿಗೆ ಕುಡಿಯಲು ನೀರಿಲ್ಲದಂತಾಗಿದೆ, ನಾಲೆ ಆಧುನಿಕರಣ ನೆಪಯೊಡ್ಡಿ ನೀರು ಬಿಡದಿರುವುದು ಸರಿಯಲ್ಲ, ಈ ತಕ್ಷಣ ಕಾಮಗಾರಿ ಸ್ಥಗಿತಗೊಳಿಸಿ ನಾಲೆಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿದರು.

ಮೂರು ರಾಜಕೀಯ ಪಕ್ಷಗಳು ಮಹಿಳೆಯರನ್ನು ವಸ್ತುವನ್ನಾಗಿ ನೋಡಿ ಕೀಳು ಮನೋಭಾವ ತೋರಿವೆ, ಮಹಿಳೆಯರನ್ನು ಅವಮಾನಿಸುವ ಕೆಲಸವನ್ನು ಚುನಾವಣೆ ವೇಳೆ ಮಾಡುತ್ತಿವೆ, ಇಂತಹ ಮಹಿಳಾ ವಿರೋಧಿ ನೀತಿಯನ್ನು ಖಂಡಿಸಲಾಗುವುದು, ಮಹಿಳೆಯರಿಗೆ ಅಪಮಾನ ಮಾಡಿದ ವೇಳೆ ಪುರುಷರು ಬೀದಿಗಿಳಿದು ಹೋರಾಟ ಮಾಡಬೇಕು, ಮಹಿಳಾ ವಿರೋಧಿ ನಡೆ ವಿರುದ್ಧ ಕೈಜೋಡಿಸಬೇಕು ಎಂದು ಹೇಳಿದರು.

ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆಯನ್ನು ಬಿಗಿಗೊಳಿಸಬೇಕು, ಆರೋಪಿಯ ವಿರುದ್ಧ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಬೇಕು, ಹೆಣ್ಣು ಮಗಳನ್ನು ಕ್ರೂರತ್ವದಿಂದ ಕೊಲೆ ಮಾಡಿರುವ ಪ್ರಕರಣ ಇದಾಗಿದ್ದು, ಯಾವುದೇ ಕಾರಣಕ್ಕೂ ತಿರುಚಲು ಮುಂದಾಗಬಾರದು, ಆರೋಪಿಯನ್ನು ಉಗ್ರ ಶಿಕ್ಷೆಗೆ ಗುರಿಪಡಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಬೋರಯ್ಯ. ರೈತ ಸಂಘದ ಇಂಡುವಾಳು ಚಂದ್ರಶೇಖರ್, ಮುದ್ದೆಗೌಡ, ಕರವೇ ಶಂಕರೇಗೌಡ, ಡಾ.ನಾರಾಯಣ್. ಸತ್ಯಭಾಮ, ಎಂ.ವಿ.ಕೃಷ್ಣ, ಜಯರಾಮ, ಜವರಯ್ಯ, ಮಲ್ಲೇಶ್, ಲಂಬೋದರ, ಎ.ಎಲ್.ಬಸವೇಗೌಡ ನೇತೃತ್ವ ವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಬೃಹತ್ ಕಾಲ್ನಡಿಗೆ ಜಾಥಾಗೆ ಜಿಲ್ಲಾಧಿಕಾರಿ ಚಾಲನೆ

Published

on

ಮಂಡ್ಯ : 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ–2026ರ ಅಂಗವಾಗಿ ಹಮ್ಮಿಕೊಳ್ಳಲಾದ ಬೃಹತ್ ಕಾಲ್ನಡಿಗೆ ಜಾಥಾಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ರಸ್ತೆ ಸುರಕ್ಷತೆಯ ಮಹತ್ವವನ್ನು ವಿವರಿಸಿ ಮಾತನಾಡಿದ ಅವರು, ಅತಿವೇಗ, ಮದ್ಯಪಾನ ಮಾಡಿ ವಾಹನ ಚಾಲನೆ, ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಧರಿಸದೇ ಚಾಲನೆ ಮಾಡುವುದು ಅಪಘಾತಗಳಿಗೆ ಪ್ರಮುಖ ಕಾರಣಗಳಾಗಿವೆ ಎಂದು ತಿಳಿಸಿದರು.

ಸಂಚಾರ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ರಸ್ತೆ ಅಪಘಾತಗಳಿಂದ ಉಂಟಾಗುವ ಜೀವಹಾನಿ ಹಾಗೂ ಆಸ್ತಿ ನಷ್ಟವನ್ನು ತಡೆಯಲು ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರೂ ಸಂಚಾರ ನಿಯಮಗಳನ್ನು ಪಾಲಿಸುವುದು, ರಸ್ತೆ ಸುರಕ್ಷತೆಯನ್ನು ಕಾಪಾಡುವುದು ಹಾಗೂ ಅಪಘಾತ ರಹಿತ ಸಮಾಜ ನಿರ್ಮಾಣಕ್ಕೆ ಸಹಕರಿಸುವುದು ಎಂಬ ಪ್ರತಿಜ್ಞೆಯನ್ನು ಸ್ವೀಕರಿಸಿದರು.

Continue Reading

Mandya

ಸರ್ಕಾರಿ ಶಾಲೆಗಳು ಉಳಿಸಲು ಎಲ್ಲರೂ ಮುಂದಾಗಬೇಕು: ಪ್ರಸನ್ನ

Published

on

ಮದ್ದೂರು:  ಸರ್ಕಾರಿ ಶಾಲೆಗಳು ಉಳಿಸಲು ನಿಟ್ಟಿನಲ್ಲಿ ಸರ್ಕಾರದ ಜತೆಗೆ ಶಾಲೆಯ ಹಿರಿಯ ವಿದ್ಯಾರ್ಥಿಗಳು, ದಾನಿಗಳು ಹಾಗೂ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಮುಂದಾಬೇಕೆಂದು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಸನ್ನ ಮನವಿ ಮಾಡಿದರು.

ತಾಲೂಕಿನ ಆತಗೂರು ಹೋಬಳಿ ಹೊಸಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸ್ವಂತ ಹಣದಲ್ಲಿ ಟ್ರಾಕ್ ಸೂಟ್ ವಿತರಿಸಿದ ಮಾತನಾಡಿದರು.

ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಹಲವಾರು ವಿದ್ಯಾರ್ಥಿಗಳು ರಾಷ್ಟ್ರ ಮತ್ತು ಅಂತರಾಷ್ಟ್ರಿಯ ಮಟ್ಟದಲ್ಲಿ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ. ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಯಲ್ಲಿ ಓದುವುದರಿಂದ ಪಾಲಕರಿಗೆ ಆರ್ಥಿಕ ಹೊರೆ ಕಡಿಮೆಯಾಗುತ್ತದೆ ಎಂದರು.

ಸರ್ಕಾರಿ ಶಾಲೆಗಳು ಗ್ರಾಮೀಣ ಪ್ರದೇಶದಲ್ಲಿ ಉಳಿಯಬೇಕು ಎಂಬ ಉದ್ದೇಶದಿಂದ ನಮ್ಮ ಊರಿನ ಶಾಲಾ ಮಕ್ಕಳು ಖಾಸಗಿ ಶಾಲಾ ಮಕ್ಕಳಿಗೆ ಕಡಿಮೆ ಇಲ್ಲಾದಂತೆ ಇರಬೇಕು ಎಂಬ ಉದ್ದೇಸದಿಂದ ಮಕ್ಕಳಿಗೆ ಟ್ರಾಕ್ ಸೀಟ್ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಮುಖ್ಯ ಶಿಕ್ಷಕ ರಮೇಶ್ ಮಾತನಾಡಿ, ನಾವು ಮುಂದಿನ ದಿನಗಳಲ್ಲಿ ಶಾಲೆಗೆ ದಾಖಲಾತಿ ಪ್ರಮಾಣ ಹೆಚ್ಚಾಗಬೇಕು ಎಂದರೆ ನಾವು ಸಹ ಮಕ್ಕಳಿಗೆ ಸರ್ಕಾರ ನೀಡುವ ಸಮವಸ್ತ್ರ ಜತೆಗೆ ಟ್ರಾಕ್ ಸೂಟ್ ನೀಡಿದರೆ ಚೆನ್ನಾಗಿರುತ್ತಾದೆ ಎಂಬ ಉದ್ದೇಶದಿಂದ ಎಸ್‌ಡಿಎಂಸಿಯವರಿಗೆ ತಿಳಿಸಿದಾಗ ಅಧ್ಯಕ್ಷರು ಸಮವಸ್ತ್ರ ನೀಡಿದ್ದಾರೆ. ಮಕ್ಕಳು ಇದರ ಸದುಪಯೋಗ ಪಡೆದುಕೊಂಡು ಓದಿನ ಕಡೆ ಗಮನ ಹರಿಸಬೇಕು ಎಂದು ಹೇಳಿದರು.

ಶಿಕ್ಷಕ ರಾಮದಾಸ್, ಅಡುಗೆ ಸಿಬಂದಿ ಸೌಮ್ಯ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Continue Reading

Mandya

ಫೆ. 6ಕ್ಕೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ: ಎಚ್.ಆರ್.ಅನಂತೇಗೌಡ

Published

on

ಮದ್ದೂರು: ನಗರದ ಶಿವಪುರದ ಪೂರ್ಣಪ್ರಜ್ಞಾ ಕಾನ್ವೆಂಟ್‌ನಲ್ಲಿ ಫೆ. 6 ರಂದು ಬೆಳಗ್ಗೆ 10.30 ಕ್ಕೆ ಬೃಹತ್ ವಿಜ್ಞಾನ ವಸ್ತು ಪ್ರದರ್ಶನ, 2024-25 ನೇ ಸಾಲಿನ ಸಂಸ್ಥೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ಹಾಗೂ ವೈದ್ಯಕಿಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಎಚ್.ಆರ್.ಅನಂತೇಗೌಡ ತಿಳಿಸಿದರು.

ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ಮತ್ತು ಆಧುನಿಕ ತಂತ್ರಜ್ಞಾನದ ಬಗ್ಗೆ ತಿಳಿಸುವ ಉದ್ದೇಶದಿಂದ ವಿಜ್ಞಾನ ವಸ್ತುಪ್ರದರ್ಶನ ಹಮ್ಮಿಕೊಂಡಿದ್ದು, ಶಾಲೆಯ ಎಲ್‌ಕೆಜಿಯಿಂದ  ಎಸ್‌ಎಸ್‌ಎಲ್‌ಸಿವರೆಗಿನ 1 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುವ ಜತೆಗೆ ವಿವಿಧ ಮಾದರಿಯ ವಿಜ್ಞಾನದ ಮಾದರಿಗಳನ್ನು ಮಾಡಿರುವುದು ವಿಶೇಷವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷರಾದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ, ಇಸ್ರೋ ವಿಜ್ಞಾನಿ ಡಾ.ಎಸ್.ವೆಂಕಟೇಶ್ವರ ಶರ್ಮ ಉದ್ಘಾಟನೆ ಹಾಗೂ ಶಾಸಕ ಕೆ.ಎಂ.ಉದಯ್ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಪಂ ಸಿಇಒ ಕೆ.ಎಆರ್.ನಂದಿನಿ, ಬಿಇಒ ಧನಂಜಯ, ನಿವೃತ್ತ ಬಿಇಒ ಬಿ.ಎನ್.ಮರಿಗೌಡ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆಂದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷೆ ಕಸ್ತೂರಿಅನಂತೇಗೌಡ ಇದ್ದರು.

Continue Reading

Trending

error: Content is protected !!