Connect with us

Mandya

ಶಾಕ್ ಕೊಟ್ಟ ವೋಟರ್ ಲಿಸ್ಟ್: ಮಂಡ್ಯ ಜಿಲ್ಲಾಡಳಿತದ ವಿರುದ್ಧ 45 ಕ್ಕೂ ಹೆಚ್ಚು ಮತದಾರರಿಂದ ಪ್ರತಿಭಟನೆ

Published

on

ಮಳವಳ್ಳಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ದಾಸನದೊಡ್ಡಿ ಗ್ರಾಮದಲ್ಲಿ ಮತದಾರ ಪಟ್ಟಿಯಿಂದ ದೊಡ್ಡ ಎಡವಟ್ಟು ನಡೆದಿದ್ದು, ಹಲವು ವರ್ಷದಿಂದ ಮತದಾನ ಮಾಡಿಕೊಂಡು ಬಂದಿರುವ 45ಕ್ಕೂ ಹೆಚ್ಚು ಮತದಾರರ ಹೆಸರನ್ನು ಈ ಬಾರಿ ಲಿಸ್ಟ್‌ನಿಂದ ಕೈ ಬಿಟ್ಟಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಮತದಾನ ಮಾಡಲೆಂದು ಮತಗಟ್ಟೆಗೆ ಆಗಮಿಸಿದಾಗ ಈ ಅವಾಂತರ ಬೆಳಕಿಗೆ ಬಂದಿದ್ದು,‌ ಈ ಹಿನ್ನೆಲೆಯಲ್ಲಿ ದಾಸನದೊಡ್ಡಿ ಗ್ರಾಮಸ್ಥರು ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಮಾಹಿತಿ ಕೊಟ್ಟರೂ ಸ್ಥಳಕ್ಕೆ ಬಾರದ ಚುನಾವಣಾಧಿಕಾರಿ ವಿರುದ್ಧ ಧಿಕ್ಕಾರ ಕೂಗಿ ತಮ್ನ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Mandya

ಪತ್ರಕರ್ತರಿಗೆ ಪರಿಹಾರದ ಚೆಕ್ ವಿತರಣೆ

Published

on

ಮಂಡ್ಯ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಮಂಡ್ಯ ನಗರ ಸಭೆಯಲ್ಲಿ ಮೀಸಲಿರಿಸಿದ್ದ ಆರೋಗ್ಯ ಪರಿಹಾರ ನಿಧಿಯಿಂದ ಹಿರಿಯ ಪತ್ರಕರ್ತರಾದ ಬಸವರಾಜ್ ಹೆಗಡೆ ಹಾಗೂ ಶೇಷು ಅವರಿಗೆ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.

ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಕೆ..ಎನ್.ನವೀನ್ ಕುಮಾರ್ ಹಾಗೂ ಮಾಜಿ ಅಧ್ಯಕ್ಷರಾದ ಬಿ.ಪಿ ಪ್ರಕಾಶ್ ಅವರು, ಪರಿಹಾರದ ಚೆಕ್ ವಿತರಣೆ ಮಾಡಿ ಆರೋಗ್ಯ ವಿಚಾರಿಸಿದರು.

ಬಸವರಾಜ್ ಹೆಗಡೆ ಹಾಗೂ ಶೇಷು ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಜಿಲ್ಲಾ ಸಂಘದ ಮನವಿ ಮೇರೆಗೆ ನಗರ ಸಭೆ ತಲಾ ಹತ್ತು ಸಾವಿರದ ಪರಿಹಾರದ ಚೆಕ್ ಅನ್ನು ನೀಡಿದೆ.

Continue Reading

Mandya

ಕರೀಘಟ್ಟ ದೇವರ ಕಾಡು‌ ಅರಣ್ಯ ಪ್ರದೇಶಕ್ಕೆ ಬೆಂಕಿ: 25 ಎಕರೆ ಅರಣ್ಯ ಭಸ್ಮ

Published

on

ಶ್ರೀರಂಗಪಟ್ಟಣ : ಕರೀಘಟ್ಟ ದೇವರ ಕಾಡು‌ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಮಾರು 25 ಎಕರೆ ಪ್ರದೇಶದ ಅರಣ್ಯ ಭಸ್ಮವಾಗಿದೆ.

ತಾಲ್ಲೂಕಿನ ಗಣಂಗೂರು ಐಬಿ ಎದುರುಗಿನ‌ ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ಮರ, ಗಿಡಗಳು ಸೇರಿದಂತೆ ಪ್ರಾಣಿ ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಬೆಂಕಿ ನಂದಿಸಿದ್ದಾರೆ.

Continue Reading

Mandya

ಫೈನಾನ್ಸ್‌ ಕಿರುಕುಳದಿಂದ ಮೃತರಾದ ತಾಯಿ-ಮಗನ ಕುಟುಂಬ ಭೇಟಿಯಾದ ಆರ್‌.ಅಶೋಕ್‌

Published

on

ಮಂಡ್ಯ: ಮೈಕ್ರೋ ಫೈನಾನ್ಸ್‌ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡದ್ದ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್‌ ಬ್ಯಾಂಕ್‌ನಲ್ಲಿ 6 ಲಕ್ಷ ಸಾಲ ಪಡೆದು, ಸಾಲ ತೀರಿಸಲಾಗದೆ ಬ್ಯಾಂಕ್‌ ಸಿಬ್ಬಂದಿಗಳ ಕಾಟದಿಂದ ಮನನೊಂದು ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ತಾಯಿ ಸಾವಿನಿಂದ ಮನನೊಂದ ಮಗ ರಂಜಿತ್‌ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇಂದು (ಫೆ.6) ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಜೆಡಿಎಸ್‌ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್‌, ಇಂಡವಾಳು ಸಚ್ಚಿದಾನಂದ ಮತ್ತಿತರರು ಸಾಥ್‌ ನೀಡಿದರು.

Continue Reading

Trending

error: Content is protected !!