Connect with us

Mandya

ಪ್ರಜ್ವಲ್ ರೇವಣ್ಣ ಹಾಗೂ ಹೆಚ್.ಡಿ ರೇವಣ್ಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಜನಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ

Published

on

ಮಂಡ್ಯ: ಪೆನ್ ಡ್ರೈವ್ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಎಚ್ ಡಿ ರೇವಣ್ಣ ಅವರ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಜನಪರ ಸಂಘಟನೆಗಳ ಒಕ್ಕೂಟ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಸರ್ ಎಂ ವಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಒಕ್ಕೂಟದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮುಖ್ಯಮಂತ್ರಿಗೆ ಮನವಿ ಪತ್ರ ರವಾನಿಸಿದರು.

ಹಾಸನದಲ್ಲಿ ಪೆನ್ ಡೈನ್ ಮುಖಾಂತರ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳನ್ನು ಹರಿಬಿಡಲಾಗಿದೆ. ಆ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇಂತಹ ಕೃತ್ಯದ ವಿರುದ್ಧ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ರೀತಿಯ ಚಿತ್ರಗಳು ಮತ್ತು ದೃಶ್ಯಗಳ ಮೂಲಕ ಮಹಿಳೆಯರ ಘನತೆ ಮತ್ತು ಖಾಸಗಿ ಬದುಕಿನ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕಿಡಿ ಕಾರಿದರು.

ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಎಚ್ ಡಿ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದನ್ನು ನೋಡಿದರೆ ಜನಪ್ರತಿನಿಧಿ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿರುವುದು ಕಾಣುತ್ತಿದೆ. ಯಾವುದೇ ವ್ಯಕ್ತಿಯ ಖಾಸಗಿ ಬದುಕಿನ ವಿಚಾರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವುದು ಅಪರಾದವಾಗುತ್ತದೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ಲಾಭವನ್ನಷ್ಟೇ ಗುರಿಯಾಗಿಸಿಕೊಂಡು ವಾಹಿಳೆಯರ ಖಾಸಗಿ ಬದುಕಿನ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳನ್ನು ಸಾರ್ವಜನಿಕವಾಗಿ ಬಿತ್ತರಿಸಿರುವುದು ಅತ್ಯಂತ ಹೀನ ಕೃತ್ಯವಾಗಿದೆ.

ಆದ್ದರಿಂದ ಕೃತ್ಯ ಎಸಗಿದವರಷ್ಟೇ ಅಲ್ಲದೆ ಬಹಿರಂಗ ಪಡಿಸಿದವರೂ ಶಿಕ್ಷಾರ್ಹವೇ ಆಗಿದ್ದು, ಹಾಗಾಗಿ ಪತ್ತೆ ಹಚ್ಚಿ ಸತ್ಯವನ್ನು ಬಹಿರಂಗ ಪಡಿಸಬೇಕು ಮತ್ತು ಇಂತಹ ಹೀನ ಕೃತ್ಯವನ್ನು ರಾಜಕೀಯಕ್ಕೆ ಬಳಸಿಕೊಳ್ಳಲು ಪ್ರಯತ್ನ ಮಾಡಿದವರನ್ನೂ ಶಿಕ್ಷೆಗೆ ಒಳಪಡಿಸಬೇಕು ಎಂದು ಪ್ರತಿಭಟನಾಕಾಋಉ ಒತ್ತಾಯಿಸಿದರು.

ದೂರು ದಾಖಲಿಸಲು ಸಿದ್ಧವಿರುವ ಮಹಿಳೆಯರಿಗೆ ಮಾಜಿ ಶಾಸಕ ಸಾ.ರಾ.ಮಹೇಶ್ ಬೆದರಿಕೆ ಹಾಕುತಿದ್ದಾರೆ ಎಂಬುದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇವರ ವಿರುದ್ಧವೂ ಸಹ ಕಾನೂನು ಕ್ರಮ ಜರುಗಿಸಬೇಕು.

ಪ್ರಕರಣ ಕುರಿತು ವಿಶೇಷ ತನಿಖಾ ತಂಡ ಸೂಕ್ತ ತನಿಖೆ ನಡೆಸಿ ಆರೋಪಿಗಳ ಬಂಧನಕ್ಕೆ ಮುಂದಾಗಬೇಕು,
ಪ್ರಕರಣದ ತನಿಖೆಗೆ ಜನಸ್ನೇಹಿ ಹಾಗೂ ಮಹಿಳಾ ಪರ ಸಂವೇದನೆ ಹೊಂದಿರುವ ಪೋಲೀಸ್ ಅಧಿಕಾರಿಗಳನ್ನು ಬಳಸಿಕೊಳ್ಳಬೇಕು, ಪ್ರಕರಣಕ್ಕೆ ನೇಮಕವಾಗಿರುವ ಪಬ್ಲಿಕ್ ಪ್ರಾಸಿಕ್ಯೂಟರ್ ಜೊತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ರನ್ನು ನೇಮಿಸಿ ತನಿಖೆ ಚುರುಕುಗೊಳಿಸಿ ಆದಷ್ಟು ಬೇಗ ಸತ್ಯಾಂಶ ಬಯಲು ಗೊಳಿಸಿ ಅಪರಾಧಕ್ಕೆ ತಕ್ಕ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಪ್ರಕರಣದಲ್ಲಿ ಪ್ರಭಾವಿಗಳು ಭಾಗಿಯಾಗಿರುವುದರಿಂದ ಯಾವುದೇ ಕಾರಣಕ್ಕೂ ಸಾಕ್ಷಿ ನಾಶವಾಗದಂತೆ ಎಚ್ಚರವಹಿಸಬೇಕು. ಧರ್ಮಸ್ಥಳದ ಸೌಜನ್ಯ ಪ್ರಸರಣದಲ್ಲಿ ಪ್ರಾಥಮಿಕ ತನಿಖೆಯಲ್ಲಿನ ಲೋಪದಿಂದ ನ್ಯಾಯ ನೀಡಲು ಸಾಧ್ಯವಾಗಿಲ್ಲ ಎಂಬುದನ್ನು ಸಿಬಿಐ ನ್ಯಾಯಾಲಯ ಹೇಳಿದೆ, ಹಾಗಾಗಿ ಪ್ರಾಥಮಿಕ ತನಿಖೆಯನ್ನು ಸಮರ್ಪಕವಾಗಿ ನಡೆಸಬೇಕು. ಪ್ರಜ್ವಲ್ ರೇವಣ್ಣ ಅವರನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮಹಿಳೆಯರ ಖಾಸಗಿ ಮತ್ತು ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳನ್ನು ಪೆನ್ ಡೈನ್ ಮುಖಾಂತರ ಸಾರ್ವಜನಿಕರಿಗೆ ವಿತರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಡಲು ಕಾರಣವಾದವರನ್ನು ಸಹ ಪತ್ತೆಹಚ್ಚಿ ಬಂಧಿಸಿ ಅವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ಪ್ರಜ್ವಲ್ ರೇವಣ್ಣ ನಡೆಸಿರುವ ಲೈಂಗಿಕ ದೌರ್ಜನ್ಯ ಚಿತ್ರೀಕರಣ ಮಾಡಿದವರು ಯಾರು ಪೆನ್ ಡ್ರೈವ್ ಯಾರಿಂದ ಬಂತು, ಯಾರು ಯಾರಿಗೆ ಪೆನ್ ಡ್ರೈವ್ ಹಂಚಿಕೆಯಾಗಿದೆ ಮತ್ತು ಯಾವ ಮೊಬೈಲ್‌ನಿಂದ ಚಿತ್ರೀಕರಣವಾಗಿದೆ ಎನ್ನುವುದನ್ನು ಪತ್ತೆ ಹಚ್ಚಬೇಕು. ಪೆನ್‌ ಡ್ರೈವ್ ಲೈಂಗಿಕ ದೌರ್ಜನ್ಯದಲ್ಲಿ ಸಂತ್ರಸ್ತರಾಗಿರುವ ಮಹಿಳೆಯ ಗೌಪ್ಯತೆಯನ್ನು ಕಾಯಬೇಕು ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಸಂತ್ರಸ್ತ ಮಹಿಳೆಯರಿಗಾಗಿ ಪ್ರತ್ಯೇಕ ಕೌನ್ಸಿಲಿಂಗ್ ಕೇಂದ್ರಗಳನ್ನು ತೆರೆಯಬೇಕು. ಹಾಗೂ ಸಂತ್ರಸ್ಥ ಮಹಿಳೆಯರಿಗೆ ದೂರು ದಾಖಲಿಸಲು ಅನುಕೂಲವಾಗುವಂತೆ ಹಾಸನ ಹಾಗೂ ಬೆಂಗಳೂರಿನಲ್ಲಿ ಪ್ರತ್ಯೇಕವಾದ ದೂರು ಕೇಂದ್ರಗಳನ್ನು ಸ್ಥಾಪಿಸಬೇಕು. ಜೊತೆಗೆ ದೂರು ದಾಖಲಿಸಲು ಬರುವ ಸಂತ್ರಸ್ಥ ಮಹಿಳೆಯರಿಗೆ ಸೂಕ್ತ ಭದ್ರತೆ ಮತ್ತು ಪ್ರಯಾಣ ವ್ಯವಸ್ಥೆ ಒದಗಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವವನ್ಬು ಜನಪರ ಒಕ್ಕೂಟದ ದೇವಿ, ಸಿ ಕುಮಾರಿ, ಸುನಂದಜಯರಾಮ್, ಲತಾ,ಸುಶೀಲಾ,ಮಂಜುಳಾ ಭರತ್ ರಾಜ್, ಪ್ರೇಮಮ್ಮ, ಮಹಾದೇವಮ್ಮ, ಸತ್ಯಭಾಮ, ರೈತ ಸಂಘದ ಕೆಂಪೂಗೌಡ, ಕಾಂಗ್ರೆಸ್ ಮುಖಂಡರಾದ ಅಂಜನಾ ಶ್ರೀಕಾಂತ್, ವಿಜಯಲಕ್ಷ್ಮಿ ರಘುನಂದನ್ ಸೇರಿದಂತೆ ಇತರರು ವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಬದಲಾಗುತ್ತಿರುವ ಹೊಸ ಆವಿಷ್ಕಾರಗಳಿಗೆ ತಕ್ಕಂತೆ ಸಂಘದ ಸಿಬ್ಬಂದಿಗಳು ಹೊಂದಿಕೊಳ್ಳುವ ಅನಿವಾರ್ಯತೆಯಿದೆ : ಧನಂಜಯ್

Published

on

ಮಂಡ್ಯ : ಬದಲಾಗುತ್ತಿರುವ ಹೊಸ ಆವಿಷ್ಕಾರಗಳಿಗೆ ತಕ್ಕಂತೆ ಸಂಘದ ಸಿಬ್ಬಂದಿಗಳು ಹೊಂದಿಕೊಳ್ಳುವ ಅನಿವಾರ್ಯತೆ ಇರುವುದಾಗಿ ಶಾಖಾ ಸಮಿತಿ ಸದಸ್ಯ ಜಿ. ಧನಂಜಯ ದರಸಗುಪ್ಪೆ ಕಿವಿ ಮಾತು ಹೇಳಿದರು.

ನಗರದ ಅಶೋಕನಗರ ಒಂದನೇ ಕ್ರಾಸ್ ನಲ್ಲಿರುವ ‘ ದಿ ಪಾವಗಡ ಸೌಹಾರ್ಧ ಮಲ್ಟಿಪರ್ಪಸ್ ಕೋ -ಆಪರೇಟಿವ್ ಸೊಸೈಟಿ ಲಿ,’ ಮಂಡ್ಯ ಶಾಖೆಯಲ್ಲಿ, ಮಂಡ್ಯ -ರಾಮನಗರ, ಮೈಸೂರು -ತುಮಕೂರು ಶಾಖೆಯ ಸಿಬ್ಬಂದಿಗಳಿಗೆ ಆಯೋಜಿಸಿದ್ದ, “ತರಬೇತಿ ಕಾರ್ಯಕ್ರಮ” ಉದ್ಘಾಟಿಸಿ ಮಾತನಾಡುತ್ತಾ, 22 ವರುಷಗಳ ಹಿಂದೆ ಪ್ರಾರಂಭಗೊಂಡ ಸಂಸ್ಥೆ ತಹಲ್ ವರೆವಿಗೂ, ಪ್ರತಿವರ್ಷವೂ ಲಾಭದಲ್ಲಿಯೇ ನಡೆಯುತಲಿದ್ದು, ದಿ ಪಾವಗಡ ಸಂಸ್ಥೆ, ರಾಜ್ಯದಲ್ಲಿಯೇ ಪ್ರತಿಷ್ಠಿತ-ಆರ್ಥಿಕ ಸದೃಢ ಹಾಗೂ ಸೇವಾ ಮನೋಭಾವದ ಸೌಹಾರ್ಧ ಸಂಸ್ಥೆಯಾಗಿ ಮುನ್ನಡೆಯುತ್ತಿದೆ ಎಂದರು‌

ಬದ್ಧತೆ – ವಿಧೇಯತೆ – ಪ್ರಾಮಾಣಿಕತೆ – ಪಾರದರ್ಶಕತೆ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ಪಂಚ ದ್ಯೇಯಗಳೊಂದಿಗೆ ಪ್ರಾರಂಭವಾದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಬಿ. ಹೆಚ್. ಕೃಷ್ಣರೆಡ್ಡಿ ಮಾತನಾಡಿ, ಆಡಳಿತ ಮಂಡಳಿ ನಿರ್ದೇಶಕರ-ಷೇರುದಾರರ-ಸಿಬ್ಬಂದಿಗಳ-ಸಹಕಾರದೊಂದಿಗೆ ಯಶಸ್ವಿಯಾಗಿ ಮುನ್ನಡೆಸುತ್ತಿರುವುದಕ್ಕೆ ಅಭಿನಂದನಾರ್ಹರು ಎಂದರು. ಆಡಳಿತ ಮಂಡಳಿ ನಿರ್ದೇಶನಗಳಿಗನುಗುಣವಾಗಿ, ಹೊಸ ಹೊಸ ಆವಿಷ್ಕಾರ ಹಾಗೂ ನಾವಿನ್ಯತೆಗಳಿಗೆ ತಕ್ಕಂತೆ ಹೊಂದಿಕೊಂಡು, ಸಿಬ್ಬಂದಿಗಳು ಶ್ರದ್ದೆ ಹಾಗೂ ಪ್ರಾಮಾಣಿಕವಾಗಿ ಕ್ರಿಯಾಶೀಲವಾಗಿ ಸೇವೆ ಸಲ್ಲಿಸುವ ಮೂಲಕ ಸಂಘದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಕರೆ ನೀಡಿದರು.

ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡ್ಯ ಶಾಖಾ ಸಮಿತಿಯ ಅಧ್ಯಕ್ಷ ನರಸಿಂಹ ಮೂರ್ತಿ ಶೆಟ್ಟಿ ವಹಿಸಿದ್ದರು. ಸದಸ್ಯರಾದ ನಾರಾಯಣ ರೆಡ್ಡಿ, ಗೋವರ್ಧನ್ ರೆಡ್ಡಿ, ಮಂಡ್ಯ ಶಾಖಾ ವ್ಯವಸ್ಥಾಪಕ ಜಯಶಂಕರ ಶೆಟ್ಟಿ, ಉಪಸ್ಥಿತರಿದ್ದರು.

ತುಮಕೂರು ಶಾಖೆಯ ಹಿರಿಯ ವ್ಯವಸ್ಥಾಪಕ ಹಾಗೂ ಅಭಿವೃದ್ಧಿ ತಂಡದ ಮುಖ್ಯಸ್ಥ ನರಸರೆಡ್ಡಿ, ರಾಮನಗರ ಶಾಖೆ ವ್ಯವಸ್ಥಾಪಕ ರುದ್ರೇಶ್, ತರಬೇತುದಾರ ಅನಿಲ್ ರವರುಗಳು ವಿವಿಧ ಶಾಖೆಯ ಸಿಬ್ಬಂದಿಗಳಿಗೆ ತರಬೇತಿ ನೀಡಿದರು.

Continue Reading

Mandya

ಕನ್ನಡ ಸಾಹಿತ್ಯ ಪರಿಷತ್ ಬೈಲಾ ತಿದ್ದುಪಡಿಗೆ ಖಂಡನೆ : ಮಹೇಶ್‌ ಜೋಶಿ ನಿರ್ಧಾರಕ್ಕೆ ಕಿಡಿ

Published

on

ಮಂಡ್ಯ: ಕಸಾಪ ಬೈಲಾ ತಿದ್ದುಪಡಿ ಮಾಡಲು ಹೊರಟಿರುವ ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ್‌ ಜೋಶಿ ಅವರ ನಿರ್ಧಾರದ ವಿರುದ್ಧ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಕಾರ್ಯಕಾರಿ ಮಂಡಳಿ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳು ನ್ಯಾಯಾಲಯಕ್ಕೆ ಮಾಹಿತಿ ನೀಡಲು ನಿರ್ಣಯ ಕೈಗೊಂಡಿವೆ.

ನಗರದ ಕರ್ನಾಟಕ ಸಂಘದ ಕೆವಿಎಸ್ ಭವನದಲ್ಲಿ ನಡೆದ ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ಮಹೇಶ್ ಜೋಶಿ ವಿರುದ್ಧ ಆಕ್ರೋಶ ವ್ಯಕ್ತವಾಯಿತು. ಸಮ್ಮೇಳನ ಮುಗಿದ ಮಾರನೇ ದಿನ ಪರಿಷತ್‌ನ ಬೈಲಾ ನಿಯಮ ಉಲ್ಲಂಘಿಸಿ ಕಾರ್ಯಕಾರಿ ಮಂಡಳಿ ರದ್ದುಪಡಿಸಿ ಹೊಸ ಕಾರ್ಯಕಾರಿ ಮಂಡಳಿ ರಚನೆ ಮಾಡಲಾಗಿತ್ತು. ಇದರ ವಿರುದ್ಧ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದವರಿಗೆ ಸದಸ್ಯತ್ವ ರದ್ದುಪಡಿಸುವ ನೋಟಿಸ್ ನೀಡಲಾಗಿದ್ದು, ಅದಕ್ಕೆ ತಕ್ಕ ಉತ್ತರ ನೀಡುವ ಬಗ್ಗೆ ನಿರ್ಧರಿಸಲಾಯಿತು.

ಅಲ್ಲದೆ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಬೈಲಾದ 21/1ರಲ್ಲಿರುವಂತೆ ನಿಯಮವನ್ನು ಬಳ್ಳಾರಿ ಯಲ್ಲಿ ನಡೆಯಲಿರುವ ಸರ್ವ ಸದಸ್ಯರ ಸಭೆಗೆ ಹಾಜರು ಪಡಿಸಲು ಮುಂದಾಗಿರುವುದು ಸರಿಯಲ್ಲ. ನ್ಯಾಯಾಲಯ ದಲ್ಲಿದ್ದಾಗ ಯಾವುದೇ ಬೈಲಾದ ನಿಯಮ ರದ್ದುಪಡಿಸಲು ಬರುವುದಿಲ್ಲ.

ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಇರುವ ವಿಶೇಷ ಅಧಿಕಾರದ ನಿಯಮವನ್ನು ಕಸಾಪ ಬೈಲಾದಲ್ಲಿ ಸೇರಿಸುವ ಮೂಲಕ ರಾಜ್ಯಾಧ್ಯಕ್ಷರು ಸಹ ಅವರ ಸರಿಸಮಾನ ಎಂದು ಪರಮೋಚ್ಛ ಅಧಿಕಾರ ಪಡೆಯಲು ಮುಂದಾಗಿದ್ದಾರೆ. ಅದರ ಮೂಲಕ ಯಾರನ್ನಾದರೂ ಸದಸ್ಯತ್ವದಿಂದ ತೆಗೆದು ಹಾಕಬಹುದು ಅಥವಾ ಸೇರಿಸಬಹುದು.

ಆದರೆ, ಸಂವಿಧಾನ ಪರಿಚ್ಛೇದ 164(1) ಅಡಿಯಲ್ಲಿ ಯಾವುದೇ ಸಂಘ-ಸಂಸ್ಥೆಗಳಿಗೆ ಈ ಅಧಿಕಾರ ಪಡೆಯುವ ಅಧಿಕಾರವಿಲ್ಲ. ಇದರ ಬಗ್ಗೆ ತಜ್ಞರ ಜೊತೆ ಚರ್ಚಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.

ಮಹೇಶ್‌ ಜೋಶಿ ಅವರ ನಿರ್ಣಯ, ನಿರ್ಧಾರದ ಬಗ್ಗೆ ಶೀಘ್ರದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದು. ಜೊತೆಗೆ ಜಿಲ್ಲೆಯಲ್ಲಿ ಕನ್ನಡಪರ ಸಂಘಟನೆಗಳೊಡಗೂಡಿ ಪ್ರತಿಭಟನೆ ನಡೆಸುವ ಬಗ್ಗೆ ತೀರ್ಮಾನಿಸಲಾಯಿತು.

ಸಭೆಯಲ್ಲಿ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್‌ ಗೌಡ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಕಸಾಪ ಮಾಜಿ ಅಧ್ಯಕ್ಷರಾದ ಪ್ರೊ.ಜಿ.ಟಿ.ವೀರಪ್ಪ, ಮೀರಾ ಶಿವಲಿಂಗಯ್ಯ, ಎಂ.ವಿ.ಧರಣೇಂದ್ರಯ್ಯ, ರೈತ ನಾಯಕಿ ಸುನಂದಜಯರಾಂ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Continue Reading

Mandya

ದೇವಾಲಯಗಳು ಮನಸ್ಸಿಗೆ ಶಾಂತಿ, ನೆಮ್ಮದಿ ನೀಡುವ ಶ್ರದ್ಧಾ ಕೇಂದ್ರಗಳು : ಎನ್.ಚಲುವರಾಯಸ್ವಾಮಿ

Published

on

ಕೆ.ಆರ್.ಪೇಟೆ : ದೇವಾಲಯಗಳು ನಮ್ಮ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ನೀಡುವ ಶ್ರದ್ಧಾ ಕೇಂದ್ರಗಳಾಗಿದ್ದು, ದೈವದ ಮಾರ್ಗದಲ್ಲಿ ಸಾಗಿದರೆ ಯಶಸ್ಸು ನಿಶ್ಚಿತ ಎಂದು ಜಿಲ್ಲಾ ಉಸ್ತವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಅವರು ಕೆ.ಆರ್.ಪೇಟೆ ಗ್ರಾಮ ದೇವತೆ ಶ್ರೀ ದೊಡ್ಡಕೇರಮ್ಮ ನೂತನ ದೇವಾಲಯದ ಉದ್ಘಾಟನೆ ಹಾಗೂ ಶ್ರೀರಥದ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಶಿಥಿಲವಾಗಿದ್ದ ಗ್ರಾಮದೇವತೆಯ ದೇವಾಲಯವನ್ನು ವಾಸ್ತುಬದ್ಧವಾಗಿ ನೂತನವಾಗಿ ನಿರ್ಮಿಸಿ ನಾಗರೀಕ ಸಮಾಜ ಮೆಚ್ಚುವಂತಹ ಕೆಲಸ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು. ದೇವರ ಸ್ಮರಣೆ ಹಾಗೂ ಪೂಜೆಯಿಂದ ಕಾಲ ಕಾಲಕ್ಕೆ ಮಳೆಯಾಗಿ ಉತ್ತಮ ಬೆಳೆಯಾಗಿ ಸಮಾಜದಲ್ಲಿ ಶಾಂತಿ ಹಾಗೂ ನೆಮ್ಮದಿ ನೆಲಸಲಿ. ಅನ್ನಧಾತರಾದ ರೈತರ ಬಾಳು ಬಂಗಾರವಾಗಲಿ ಎಂದು ಅವರು ಶುಭ ಹಾರೈಸಿದರು.

ಶಾಸಕ ಹೆಚ್.ಟಿ.ಮಂಜು ಕಾರ್ಯಕ್ರಮದಲ್ಲಿ ಭಾಗವಹಿಸಿ ಗ್ರಾಮಸ್ಥರು ನೀಡಿದ ಹೃದಯಸ್ಪರ್ಶಿ ಅಭಿನಂದನೆಯನ್ನು ಸ್ವೀಕರಿಸಿದರು.

ಸಮಾಜ ಸೇವಕರಾದ ಸ್ಟಾರ್ ಚಂದ್ರು, ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್, ಟಿಎಪಿಸಿಎಂಎಸ್ ಅಧ್ಯಕ್ಷ ಬಿ. ಎಲ್.ದೇವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ. ನಾಗೇಂದ್ರಕುಮಾರ್, ಪುರಸಭೆ ಅಧ್ಯಕ್ಷೆ ಪಂಕಜಾ, ಉಪಾಧ್ಯಕ್ಷೆ ಸೌಭಾಗ್ಯ, ಸ್ಥಾಯಿಸಮಿತಿ ಅಧ್ಯಕ್ಷ ರವೀಂದ್ರಬಾಬು, ಕಸಬಾ ಸೊಸೈಟಿ ಅಧ್ಯಕ್ಷ ಪುರುಷೋತ್ತಮ್, ಚಿನಕುರಳಿ ರಮೇಶ್, ಉಧ್ಯಮಿ ಬಿ. ರಾಜಶೇಖರ್, ವಕೀಲ ಬಿ. ನಾಗೇಶ್, ಪುರಸಭೆ ಸದಸ್ಯರಾದ ಕೆ.ಎಸ್. ಪ್ರಮೋದ್, ಬಸ್ ಸಂತೋಷ್, ನಟರಾಜ್, ಮಹಾದೇವಿ, ಸುಗುಣ, ಕೆ.ಸಿ.ಮಂಜುನಾಥ್, ಗ್ರಾಮದ ಯಜಮಾನರಾದ ಹೆಗ್ಗಡಿ ಕೃಷ್ಣೆಗೌಡ, ಪಟೇಲ್ ಚಂದ್ರಣ್ಣ, ಪುರಸಭೆ ಮಾಜಿ ಅಧ್ಯಕ್ಷ ಚಂದ್ರೆಗೌಡ, ಕೆ.ಸಿ. ವಾಸು, ಉಧ್ಯಮಿ ಹೆಚ್.ಎಂ.ಸಿ ಚಂದ್ರಶೇಖರ್ ಸೇರಿದಂತೆ ಸಾವಿರಾರು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಡಾ.ಅಶೋಕ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ, ಪೊಲೀಸ್ ಇನ್ಸ್ ಪೆಕ್ಟರ್ ಸುಮಾರಾಣಿ, ಗ್ರಾಮದ ಮುಖಂಡರಾದ ಪಟೇಲ್ ಚಂದ್ರಣ್ಣ, ಹೆಗ್ಗಡಿ ಕೃಷ್ಣೆಗೌಡ ಅವರನ್ನು ಸಚಿವ ಚಲುವರಾಯಸ್ವಾಮಿ ಅವರು ಸನ್ಮಾನಿಸಿ ಗೌರವಿಸಿದರು.

Continue Reading

Trending

error: Content is protected !!