Kodagu
ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿ ದುರ್ಮರಣ

ವಿರಾಜಪೇಟೆ: ಸ್ನೇಹಿತನ ಹುಟ್ಟುಹಬ್ಬ ಆಚರಣೆಗೆ ಮನೆಗೆ ಬಂದ ಯುವಕ ರಸ್ತೆ ಅಪಘಾತದಲ್ಲಿ ಮರಣಹೊಂದಿದ ಘಟನೆ ವಿರಾಜಪೇಟೆ ಬಿಟ್ಟಂಗಾಲ ತಿರುವಿನಲ್ಲಿ ನಡೆದಿದೆ.
ಪೊನ್ನಂಪೇಟೆ ತಾಲೂಕು ಕಾನೂರು ಕಾಂತೂರು ನಿವಾಸಿ ಕೆ.ಎಸ್. ಸತೀಶ್ ಮತ್ತು ಸಂದ್ಯಾ ದಂಪತಿಗಳ ಪುತ್ರ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ದ್ವೀತಿಯ ಬಿ.ಕಾಂ, ವಿದ್ಯಾರ್ಥಿ ಕೆ.ಎಸ್. ಶ್ರವಣ್ (18) ಅಪಘಾತದಲ್ಲಿ ಮರಣ ಹೊಂದಿದ ಯುವಕ.
ಮೃತ ಶ್ರವಣ್ ಅವರ ತಂದೆ ಕೆ.ಎಸ್. ಸತೀಶ್ ಅವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸು ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ. ಮೃತ ಶರೀರವನ್ನು ಮರಣೋತ್ತರ ಪರೀಕ್ಷೆ ಒಳಪಡಿಸಿ ಮೃತ ದೇಹವನ್ನು ಸಂಬAಧಿಕರಿಗೆ ಹಸ್ತಾಂತರಿಸಿದ್ದಾರೆ.
Kodagu
ಉಗ್ರರ ದಾಳಿ ಖಂಡನೀಯ: ದೇಶದ ಭದ್ರತೆಗಾಗಿ ಎಲ್ಲರೂ ಒಗ್ಗಟ್ಟನ್ನು ಕಾಯ್ದುಕೊಳ್ಳಬೇಕು

ಮಡಿಕೇರಿ : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿ ೨೬ ಮಂದಿಯ ಸಾವಿಗೆ ಕಾರಣಕರ್ತರಾದ ಭಯೋತ್ಪಾದಕರ ವಿರುದ್ಧ ಕಠಿಣ ಕಾರ್ಯಾಚರಣೆ ನಡೆಸುವ ಮೂಲಕ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯ ಕೆ.ಎ.ಯಾಕುಬ್ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಮಾಯಕ ಪ್ರವಾಸಿಗರನ್ನು ಹತ್ಯೆ ಮಾಡಿರುವ ಘಟನೆ ಅತೀವ ಬೇಸರವನ್ನುಂಟು ಮಾಡಿದೆ. ಹೇಡಿತನದ ಭಯೋತ್ಪಾದಕರು ನಡೆಸಿರುವ ಹೇಯ ಕೃತ್ಯವನ್ನು ಕಟುವಾಗಿ ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.
ಉಗ್ರರ ಬೇಟೆಗಾಗಿ ಭಾರತೀಯ ಸೇನೆ ಈಗಾಗಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದು, ಇದು ಸ್ವಾಗತಾರ್ಹ ಕ್ರಮವಾಗಿದೆ. ಕೇಂದ್ರ ಸರ್ಕಾರ ಕೂಡ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಕೇಂದ್ರ ಗುಪ್ತಚರ ಇಲಾಖೆ ಕಟ್ಟೆಚ್ಚರ ವಹಿಸಬೇಕು. ದೇಶದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವ ದುಷ್ಟಶಕ್ತಿಗಳ ವಿರುದ್ಧ ಜನರು ಕೂಡ ಜಾಗೃತರಾಗಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಊಹಾಪೋಹಗಳಿಗೆ ಯಾರೂ ಕಿವಿಗೊಡಬಾರದು. ದೇಶದ ಭದ್ರತೆ ಮತ್ತು ಐಕ್ಯತೆಗಾಗಿ ಎಲ್ಲರೂ ಒಗ್ಗಟ್ಟನ್ನು ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
Kodagu
ಪಹಲ್ಗಾಮ್ ದಾಳಿ: ಕುಶಾಲನಗರ ಪಟ್ಟಣ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಖಂಡನೆ

ವರದಿ: ಝಕರಿಯ ನಾಪೋಕ್ಲು
ನಾಪೋಕ್ಲು : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ಕುಶಾಲನಗರ ನಗರ ಪಟ್ಟಣ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ತೀವ್ರವಾಗಿ ಖಂಡಿಸುತ್ತೇವೆ ಎಂದು ಅಧ್ಯಕ್ಷ ಕೈಝರ್ ಪೋರ್ಶೆರ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಮ್ಮು ಕಾಶ್ಮೀರದಲ್ಲಿ ಮತ್ತೆ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿರುವ ಪಾಕ್ ಬೆಂಬಲಿತ ಭಯೋತ್ಪಾದಕರ ಹೆಡೆಮುರಿ ಕಟ್ಟಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಇತ್ತೀಚಿನ ವರ್ಷಗಳಲ್ಲಿ ಜಮ್ಮು ಕಾಶ್ಮೀರಕ್ಕೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಸರ್ಕಾರ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ದೇಶದ ರಕ್ಷಣೆಯ ಹೊಣೆ ಹೊತ್ತಿರುವ ಕೇಂದ್ರ ಸರ್ಕಾರ ಉಗ್ರರಿಗೆ ನೆರವು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಬೇಕು ಎಂದು ಆಗ್ರಹಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಉಗ್ರರು ನಡೆಸಿದ ಹೇಯ ಕೃತ್ಯವನ್ನು ಯಾರೂ ಕ್ಷಮಿಸಲು ಸಾಧ್ಯವಿಲ್ಲ. ಈ ದಾಳಿಯನ್ನು ಸರ್ಕಾರ ಮತ್ತು ದೇಶದ ಜನತೆ ಗಂಭೀರವಾಗಿ ಪರಿಗಣಿಸಬೇಕು. ಎಲ್ಲರೂ ಒಗ್ಗಟ್ಟನ್ನು ಕಾಯ್ದುಕೊಂಡು ದೇಶದ್ರೋಹಿಗಳ ವಿರುದ್ಧ ಹೋರಾಟ ನಡೆಸಬೇಕು. ಸರ್ಕಾರ ಕೂಡಲೇ ಮೃತರ ಕುಟುಂಬಕ್ಕೆ ಆಸರೆಯಾಗಬೇಕೆಂದು ಕೈಝರ್ ಪೋರ್ಶೆರ ಅಗ್ರಹಿಸಿದ್ದಾರೆ.
Kodagu
ಕಾಡಾನೆ ದಾಳಿಗೆ ಕಾರ್ಮಿಕ ಬಲಿ: ಸ್ಥಳಕ್ಕೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಭೇಟಿ

ಸಿದ್ದಾಪುರ: ಮನೆಯಿಂದ ವಾಕಿಂಗ್ ತೆರಳಿದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ಮಾಡಿ ಬಲಿ ತೆಗೆದುಕೊಂಡ ಘಟನೆ ವಿರಾಜಪೇಟೆ ತಾಲೂಕಿನ ಅಮ್ಮತಿ ಸಮೀಪದ ಎಮ್ಮೆ ಗುಂಡಿ ಕಾಫಿ ತೋಟದ ಮುಖ್ಯ ರಸ್ತೆಯಲ್ಲಿ ಗುರುವಾರ ನಡೆದಿದೆ.
ಎಮ್ಮೆಗುಂಡಿ ಕಾಫಿ ತೋಟದ ಕಾರ್ಮಿಕನಾಗಿ ವಾಸವಾಗಿದ್ದ ಸೆಲ್ವಂ (ಚೆಲ್ಲಮೇಸ್ತ್ರಿ) (55) ಎಂಬುವವರೇ ಕಾಡಾನೆಯ ದಾಳಿಯಿಂದ ಪ್ರಾಣ ಕಳೆದುಕೊಂಡ ನತದೃಷ್ಟ ವ್ಯಕ್ತಿಯಾಗಿದ್ದಾರೆ.
ಬೆಳಿಗ್ಗೆ ಮನೆಯ ಸಮೀಪದ ಮುಖ್ಯರಸ್ತೆಯಲ್ಲಿ ವಾಯು ವಿಹಾರಕ್ಕೆ ನಡೆದು ಹೋಗುತ್ತಿದ್ದಾಗ ಸಮೀಪದ ಕಾಫಿ ತೋಟದಲ್ಲಿ ಬಿಡು ಬಿಟ್ಟಿದ್ದ ಮೂರು ಕಾಡಾನೆಗಳು ರಸ್ತೆ ದಾಟಲು ಬರುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಡಾನೆ ದಾಳಿಗೆ ಸಿಲುಕಿಕೊಂಡಿದ್ದಾರೆ. ದಾಳಿಯಿಂದ ತಪ್ಪಿಸಿ ಹೋಗಲು ಯತ್ನಿಸಿದ ಸಂದರ್ಭ ಆಕ್ರೋಶಗೊಂಡ ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾಡಾನೆಗಳ ಕಿರಿಚಾಟದ ಶಬ್ದ ಕೇಳಿದ ಸ್ಥಳೀಯರು ತಕ್ಷಣ ಸ್ಥಳಕ್ಕೆ ಬರುವಷ್ಟರಲ್ಲಿ ಕಾಡಾನೆ ಕಾರ್ಮಿಕನನ್ನು ಬಲಿ ತೆಗೆದುಕೊಂಡಿದೆ. ತಕ್ಷಣ ಸ್ಥಳಕ್ಕೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದೇ ಸಂದರ್ಭ ಕಾಡಾನೆ ಹಾವಳಿ ಮಿತಿಮೀರಿರುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಕಾಡಾನೆ ಹಾವಳಿ ಶಾಶ್ವತವಾಗಿ ತಡೆಗಟ್ಟಬೇಕೆಂದು ಕಾರ್ಮಿಕರು ಒತ್ತಾಯಿಸಿದ್ದಾರೆ.
ನಂತರ ಮೃತ ದೇಹವನ್ನು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಸವಗಾರದಲ್ಲಿರಿಸಿ ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.
ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಮೇರಿಯಂಡ ಸಂಕೇತ್ ಪೂವಯ್ಯ ಬೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ ಸರ್ಕಾರದಿಂದ ಸಿಗುವ 20 ಲಕ್ಷ ರೂ ಪರಿಹಾರವನ್ನು ತಕ್ಷಣವೇ ನೀಡಲಾಗುವುದು ಎಂದು ಹೇಳಿದ ಅವರು ಮುಖ್ಯಮಂತ್ರಿಗಳ ಕಾನೂನು ಸಲಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ ಎಸ್ ಪೊನ್ನಣ್ಣಅವರಿಗೆ ಘಟನೆಯ ಮಾಹಿತಿ ನೀಡಿದರು .
ನಂತರ ಶಾಸಕರು ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ತಕ್ಷಣವೇ ಕಾರ್ಯಚರಣೆ ಮೂಲಕ ಕಾಡಿಗಟ್ಟಬೇಕೆಂದು ಖಡಕ್ ಸೂಚನೆ ನೀಡಿದರು.
ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಕಾಡಾನೆ ಹಾವಳಿ ಇರುವ ಪ್ರದೇಶದಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಿ ಕಾಡಿಗಟ್ಟಲು ಮುಂದಾಗಿದ್ದಾರೆ.
ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಪಾಲಿಬೆಟ್ಟದ ಮೂಕೊಂಡ ವಿಜು ಸುಬ್ರಮಣಿ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಲ್ಲದೆ ಅರಣ್ಯ ಇಲಾಖೆಯ ನಿರ್ಲಕ್ಷ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ದಿನನಿತ್ಯ ಕಾಫಿ ತೋಟಗಳಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ಕೃಷಿ ಪಸಲು ನಾಶದೊಂದಿಗೆ ಪ್ರಾಣಹಾನಿಯಾಗುತ್ತಿದೆ. ಕಾರ್ಮಿಕರು, ಬೆಳೆಗಾರರು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ವರ್ಷಗಳಿಂದಲೂ ಅಮಾಯಕ ಜೀವಗಳು ಬಲಿಯಾಗುತ್ತಿದ್ದು ಕೊಡಗಿನ ಜನರ ತಾಳ್ಮೆಯನ್ನು ಪರೀಕ್ಷಿಸದೆ ಕಾಡು ಪ್ರಾಣಿಗಳ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟಬೇಕೆಂದು ಒತ್ತಾಯಿಸಿದ ಅವರು. ಕಾರ್ಮಿಕರು, ಬೆಳೆಗಾರರನ್ನ ಒಗ್ಗೂಡಿಸಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಚ್ಚರಿಸಿದರು.
ಈ ಸಂದರ್ಭ ಡಿಎಫ್ಓ ಜಗನ್ನಾಥ್, ಎಸಿಫ್ ಗೋಪಾಲ್, ಆರ್ ಎಫ್ ಓ ಶಿವರಾಮ್, ಗಂಗಾಧರ್ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು. ಮೃತ ಸೆಲ್ವಂ ಅವರ ಪತ್ನಿಗೆ ತುರ್ತು ಪರಿಹಾರವಾಗಿ 5 ಲಕ್ಷ ಚೆಕ್ ನ್ನು ನೀಡಲಾಯಿತು .
ಮೃತ ದೇಹವನ್ನು ಅಂತ್ಯಸಂಸ್ಕಾರ ನಡೆಸಲು ತಮಿಳುನಾಡಿನ ಮಧುರೈ ಆಂಬುಲೆನ್ಸ್ ಮೂಲಕ ಕೊಂಡೊಯಲಾಯಿತು.
ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
Mysore12 hours ago
ಅರಣ್ಯ ಇಲಾಖೆಯ ವಾಚರ್ ಆತ್ಮಹ*ತ್ಯೆ
-
Mysore14 hours ago
ನಂಜನಗೂಡಿನ ಸಬ್ ರಿಜಿಸ್ಟರ್ ಕಛೇರಿಗೆ ಬೀಗ: ಲೋಕಾಯುಕ್ತ ದಾಳಿ
-
National - International7 hours ago
ಪಹಲ್ಗಾಮ್ ದಾಳಿ; ಉಗ್ರರ ಜೊತೆ ಗುಂಡಿನ ಕಾಳಗದಲ್ಲಿ ವೀರ ಯೋಧ ಹುತಾತ್ಮ
-
State10 hours ago
ಕಾಶ್ಮೀರದ ಪೆಹಲ್ಗಾಮನಲ್ಲಿ ನಡೆದ ಉಗ್ರರ ದಾಳಿ ಖಂಡನೀಯ – ಮುಖ್ಯಮಂತ್ರಿ ಸಿದ್ದರಾಮಯ್ಯ
-
National - International8 hours ago
ದಾಳಿ ನಡೆಸಿದ ಉಗ್ರರಿಗೆ ಊಹೆಗೂ ಮೀರಿದ ಶಿಕ್ಷೆ ನೀಡಲಾಗುವುದು: ಪ್ರಧಾನಿ ನರೇಂದ್ರ ಮೋದಿ
-
Kodagu22 hours ago
ಕೊಂಗಾಣದಲ್ಲಿ ಕಣ್ಣನೂರಿನ ಕೋಲಿಯಾ ಆಸ್ಪತ್ರೆಯ ಮಾಲೀಕನ ಕೊ*ಲೆ
-
Kodagu12 hours ago
ಜಿಲ್ಲಾ ಮಟ್ಟದ ಜ್ಞಾನಜ್ಯೋತಿ ಕಾರುಣ್ಯ ಕಾರ್ಯಕ್ರಮ
-
Chamarajanagar10 hours ago
ಚಾಮರಾಜನಗರ: ಮಲೆ ಮಹದೇಶ್ವರ ಸ್ವಾಮಿ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್