Connect with us

Mandya

ಸಂಸದೆ ಸುಮಲತಾ ಅಂಬರೀಷ್‌ ಅವರಿಗೆ ಕೊನೆ ದಿಶಾ ಸಭೆ

Published

on

ಅಕ್ರಮ ಗಣಿಗಾರಿಕೆ ವಿರುದ್ಧ ನಿಂತಿದ್ದಕ್ಕೆ ಪ್ರಾಣ ಬೆದರಿಕೆ: ಸಂಸದೆ

ರಾತ್ರಿಯ ಪಾಳಿಯದಲ್ಲೂ ವೈದ್ಯರಿಗೆ ಬಯೋಮೆಟ್ರಿಕ್‌ ಕಡ್ಡಾಯ

ಮಂಡ್ಯ: ಗಣಿ ವಿರುದ್ಧದ ನನ್ನ ಹೋರಾಟಕ್ಕೆ ಯಾರ ಬೆಂಬಲವೂ ಇರಲಿಲ್ಲ. ಅಕ್ರಮ ಗಣಿಗಾರಿಕೆ ವಿರುದ್ಧ ದನಿ ಎತ್ತಿದ್ದಕ್ಕೆ ಪ್ರಾಣ ಬೆದರಿಕೆ ಬಂದಿತು, ಆದರೂ ಕೆಆರ್‌ಎಸ್‌ ಅಣೆಕಟ್ಟೆ ಉಳಿಸುವ ಗುರಿಯನ್ನಿಟ್ಟುಕೊಂಡು ಅಕ್ರಮ ಗಣಿಗಾರಿಕೆ ನಡೆಸುವವರ ವಿರುದ್ಧ ಸಮರ ಮುಂದುವರಿಸಿದೆ ಎಂದು ಸಂಸದೆ ಸುಮಲತಾ ಅಂಬರೀಷ್‌ ಹೇಳಿದರು.

ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೇಂದ್ರ ವಲಯ, ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆ(ದಿಶಾ)ಯ ಕೊನೆಯ ಸಭೆಯಲ್ಲಿ ಅವರು ಮಾತನಾಡಿ ಗಮನ ಸೆಳೆದರು.

ಗಣಿ ವಿರುದ್ಧದ ನನ್ನ ಹೋರಾಟಕ್ಕೆ ಯಾರ ಬೆಂಬಲವೂ ಇರಲಿಲ್ಲ. ನಾನು ಗಣಿ ಹೋರಾಟಕ್ಕೆ ಇಳಿದಾಗ ನನಗೆ ನಿರಂತರವಾಗಿ ಒತ್ತಡ ಬರುತ್ತಿತ್ತು. ಗಣಿಗಾರಿಕೆ ಹೋರಾಟ ನಿಲ್ಲಿಸಬೇಕೆಂದು ಪ್ರಾಣ ಬೆದರಿಕೆಯನ್ನೂ ಹಾಕಿದ್ದರು. ಆದರೂ ನಾನು ಎದೆಗುಂದಲಿಲ್ಲ. ಅಕ್ರಮ ಗಣಿಗಾರಿಕೆ ನಡೆಯುವ ಸ್ಥಳಗಳಿಗೆ ಭೇಟಿ ನೀಡಿದೆ. ಆಗ ನನ್ನ ಮೇಲೆ ಹಲ್ಲೆ ನಡೆಸುವ ಪ್ರಯತ್ನವೂ ನಡೆದಿತ್ತು. ಆಗ ಕೆಲವು ಮಹಿಳೆಯರು ನನ್ನ ರಕ್ಷಣೆಗೆ ನಿಂತಿದ್ದರು ಎಂದು ವಿವರಿಸಿದರು.

ಅಕ್ರಮ ಗಣಿಗಾರಿಕೆ ವಿರುದ್ಧ ದಿಟ್ಟತನದ ಹೋರಾಟ ನಡೆಸಿದ ಪರಿಣಾಮವಾಗಿ ಹೈಕೋರ್ಟ್ ಕೃಷ್ಣರಾಜಸಾಗರ ಅಣೆಕಟ್ಟು ವ್ಯಾಪ್ತಿಯ 20 ಕಿ.ಮೀ. ಸುತ್ತ ಗಣಿಗಾರಿಕೆ ನಿಷೇಧಿಸಿದೆ. ಇದು ನನ್ನ ಹೋರಾಟಕ್ಕೆ ಸಿಕ್ಕ ಜಯ, ಕೆಆರ್‌ಎಸ್‌ ಉಳಿವಿಗಾಗಿ ಅಕ್ರಮವಾಗಿ ನಡೆಸುತ್ತಿದ್ದ ಗಣಿಗಾರಿಕೆ ವಿರುದ್ಧ ನಾನು ಹೋರಾಟ ಮಾಡಿದ್ದೇನೆ. ಯಾವ ಬೆದರಿಕೆಗೆ ಹೆದರದೆ ಹೋರಾಡಿದ್ದೇನೆ ಎಂದರು.

ಮಾ.20 ರೊಳಗೆ ಡ್ರೋನ್ ಸರ್ವೆ ಸಂರಕ್ಷಿತ ಅರಣ್ಯ ಪ್ರದೇಶ ಮತ್ತು ಕಂದಾಯ ಇಲಾಖೆ ವ್ಯಾಪ್ತಿಯ ಗಡಿ ಗುರುತು ಹಾಗೂ ಎಷ್ಟು ಪ್ರಮಾಣದಲ್ಲಿ ಗಣಿಗಾರಿಕೆ ನಡೆಸಲಾಗಿದೆ ಎನ್ನುವುದರ ಸಂಬಂಧ ಹೈಕೋರ್ಟ್ ಡ್ರೋನ್ ಸರ್ವೆ ನಡೆಸಲು ಆದೇಶಿಸಿರುವುದರಿಂದ ಮಾ.20 ರೊಳಗೆ ಜಿಲ್ಲೆಯಲ್ಲಿ ಡ್ರೋನ್ ಸರ್ವೆ ನಡೆಸುವ ಸಂಬಂಧ ಸರ್ಕಾರದಿಂದ ಮಾಹಿತಿ ಬಂದಿರುವುದಾಗಿ ಗಣಿ ಅಧಿಕಾರಿ ಸಭೆಗೆ ಮಾಹಿತಿ ನೀಡಿದಾಗ, ಕಳೆದೆರಡು ವರ್ಷಗಳಿಂದ ಇದೇ ಮಾತನ್ನೇ ಹೇಳುತ್ತಿದ್ದೀರಿ. ಕಳೆದ ನಾಲ್ಕರಿಂದ ಐದು ದಿಶಾ ಸಭೆಗಳಿಂದಲೂ ಇದನ್ನು ಕೇಳುತ್ತಲೇ ಇದ್ದೇನೆ. ಏನೂಂತನೇ ಅರ್ಥ ಆಗುತ್ತಿಲ್ಲ ಎಂದು ಸಂಸದರು ಬೇಸರ ವ್ಯಕ್ತಪಡಿಸಿದರು.

ಮಧ್ಯಪ್ರವೇಶಿಸಿದ ಜಿಲ್ಲಾಧಿಕಾರಿ ಡಾ.ಕುಮಾರ, ರಾಜ್ಯಮಟ್ಟದಲ್ಲೇ ಇದನ್ನು ಟೆಂಡರ್ ಕರೆದು ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ (ಕೆಎಸ್‌ಆರ್‌ಎಸ್‌ಎಸಿ)ದ ಮೂಲಕ ಡ್ರೋನ್ ಸರ್ವೆ ನಡೆಸಲಾಗುತ್ತಿದೆ. ಅದರಂತೆ ಮಂಡ್ಯ ಜಿಲ್ಲೆಯೊಳಗೆ ಮಾ.20 ರೊಳಗೆ ಡ್ರೋನ್ ಸರ್ವೆ ನಡೆಸಲಿದ್ದಾರೆ ಎಂದು ಸಮಾಧಾನಪಡಿಸಿದರು, ನಂತರ ಗಣಿ ಮಾಲೀಕರಿಂದ ರಾಜಧನ ಸಂಗ್ರಹಿಸುವಲ್ಲಿ ಹಿನ್ನಡೆಯಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಧನ ಸಂಗ್ರಹಕ್ಕೆ ಈಗಾಗಲೇ ಹಲವು ಬಾರಿ ನೋಟೀಸ್ ನೀಡಿದ್ದೇವೆ. ಆದರೂ ಅವರು ಹಣ ಪಾವತಿಸಿಲ್ಲ ಎಂದಾಗ, ನೋಟೀಸ್‌ಗಳನ್ನು ನೀಡುವುದರಿಂದ ಏನು ಪ್ರಯೋಜನ. ರಾಜಧನ ಪಾವತಿಸದವರ ವಿರುದ್ಧ ಕ್ರಮ ಕೈಗೊಳ್ಳುವುದು ಯಾವಾಗ. ಇದರೊಳಗೆ ಇನ್ನೇನಾದರೂ ವಿಷಯ ಇದೆಯಾ. ಅಭಿವೃದ್ಧಿಗೆ ಅನುದಾನದ ಕೊರತೆ ಇದೆ ಎಂಬ ಮಾತುಗಳು ಎಲ್ಲೆಡೆ ಕೇಳಿಬರುತ್ತಿವೆ. ಹೀಗಿರುವಾಗ ಸರ್ಕಾರಕ್ಕೆ ಬರಬೇಕಾದ ರಾಜಧನ ವಸೂಲಿಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಹೇಗೆ. ಸರ್ಕಾರ ಮತ್ತು ಅಧಿಕಾರಿಗಳಿಂದಲೇ ಅಕ್ರಮ ಗಣಿಕೋರರಿಗೆ ರಕ್ಷಣೆ ಸಿಗುತ್ತಿರುವಂತೆ ಕಾಣಿಸುತ್ತಿದೆ. ಇದಕ್ಕೆಲ್ಲಾ ಯಾರು ಜವಾಬ್ದಾರರು ಎಂದು ಜಿಲ್ಲಾಧಿಕಾರಿ ಸೇರಿದಂತೆ ಅಲ್ಲಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ರಾತ್ರಿ ಪಾಳಿಯ ವೈದ್ಯರಿಗೂ ಬಯೋಮೆಟ್ರಿಕ್‌: ರಾತ್ರಿ ಪಾಳಿ ವೈದ್ಯರಿಗೂ ಬಯೋಮೆಟ್ರಿಕ್ ಅಳವಡಿಸಿ ಮಿಮ್ಸ್ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ವೈದ್ಯರಿಗೂ ಬಯೋಮೆಟ್ರಿಕ್ ಅಳವಡಿಸಬೇಕೆಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್‌ಗೆ ಸೂಚಿಸಿದರು. ರಾತ್ರಿ ಪಾಳಿಯಲ್ಲಿ ವೈದ್ಯರು ಕರ್ತವ್ಯದಲ್ಲಿ ಇರುವುದಿಲ್ಲ, ಪಿಜಿ ವಿದ್ಯಾರ್ಥಿಗಳು ವೈದ್ಯರಿಗೆ ಫೋನ್ ಮಾಡಿ ಅವರು ನೀಡುವ ಸಲಹೆಯಂತೆ ಚಿಕಿತ್ಸೆ ನೀಡುತ್ತಿದ್ದಾರೆ. ಇದರಿಂದ ರೋಗಿಗಳು ಸಾಕಷ್ಟು ಪರದಾಡುವಂತಾಗಿದೆ ಎಂದು ದಿಶಾ ಸಮಿತಿ ಸದಸ್ಯರಾದ ಅಂಕರಾಜು ಮತ್ತು ಅರುಣಕುಮಾರಿ ಸಭೆಯ ಗಮನಕ್ಕೆ ತಂದರು.

ಇದಕ್ಕೆ ಉತ್ತರಿಸಿದ ಡಾ.ಶ್ರೀಧರ್, ವೈದ್ಯರು ಪಕ್ಕದ ಕೊಠಡಿಯಲ್ಲೇ ಇರುತ್ತಾರೆ. ಕರ್ತವ್ಯಕ್ಕೆ ಹಾಜರಾಗದವರಿಗೆ ನೋಟೀಸ್ ನೀಡಿದ್ದೇವೆ ಎಂದು ಸಮಜಾಯಿಷಿ ನೀಡಲು ಮುಂದಾದಾಗ ಸಂಸದೆ ಸುಮಲತಾ ಮಧ್ಯಪ್ರವೇಶಿಸಿ, ವೈದ್ಯರು ಇರುವುದೇ ಇಲ್ಲವೆಂದು ನಿಮ್ಮೆದುರಿನಲ್ಲೇ ಹೇಳುತ್ತಿದ್ದಾರೆ. ಪಕ್ಕದ ಕೊಠಡಿಯಲ್ಲಿ ವೈಧ್ಯರು ಇರುತ್ತಾರೆ ಎಂದ ಮೇಲೆ ಬಂದು ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲವೇಕೆ ಎಂದು ಪ್ರಶ್ನಿಸಿದರು.

ಸಭೆಯಲ್ಲಿ ಜಿಪಂ ಸಿಇಓ ಶೇಖ್ ತನ್‌ವೀರ್‌ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಶಾಸಕ ಪಿ.ರವಿಕುಮರ್‌ಗೌಡ ಭಾಗವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಎಚ್ಡಿಕೆ ಮಂಡ್ಯದಲ್ಲಿ ಅಬ್ಬರದ ಪ್ರಚಾರ

Published

on

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ – ಜೆಡಿಎಸ್ ಪಕ್ಷದ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಹಿರಂಗ ಪ್ರಚಾರದ ಕೊನೆಯ ದಿನ ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಶಕ್ತಿಪ್ರದರ್ಶಿಸಿದರು.

ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ರೋಡ್ ಶೋ ನಡೆಸಿದ ಹೆಚ್‍.ಡಿ ಕುಮಾರಸ್ವಾಮಿಗೆ ಅಪಾರ ಜನಸ್ತೋಮ ಬೆಂಬಲ ಸೂಚಿಸಿತು.

ಮಂಡ್ಯ ವಿಶ್ವವಿದ್ಯಾನಿಲಯ ಆವರಣದಿಂದ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆಗೂಡಿ ರೋಡ್ ಶೋ ಮೂಲಕ ಮತಯಾಚನೆಗೆ ಹೊರಟ ಮೈತ್ರಿ ಪಕ್ಷದ ಅಭ್ಯರ್ಥಿಗೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಜಯ ಘೋಷ ಮೊಳಗಿಸಿ ಹರ್ಷೋದ್ಗಾರದ ನಡುವೆ ಪುಷ್ಪಾರ್ಚನೆ ಮೂಲಕ ಹೆಜ್ಜೆ ಹಾಕಿದರು. ಅಪಾರ ಜನಸ್ತೋಮದ ನಡುವೆ ತೆರೆದ ವಾಹನದಲ್ಲಿ ಕೈ ಮುಗಿದು ನನ್ನ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು.


ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜನಸ್ತೋಮ ಉದ್ದೇಶಿಸಿ ಮಾತನಾಡಿದ ಮೈತ್ರಿ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಆಳುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಹಿರಂಗ ಪ್ರಚಾರದ ಕೊನೆಯ ದಿನ ಜಾತ್ಯತೀತ ಜನತಾದಳ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ಶಕ್ತಿಪ್ರದರ್ಶಿಸುವ ಮೂಲಕ ಮೈತ್ರಿ ಅಭ್ಯರ್ಥಿ ಗೆಲುವಿಗೆ ಅಣಿಯಾಗಿದ್ದಾರೆ.

Continue Reading

Mandya

ಕಾಂಗ್ರೆಸ್ ಪಕ್ಷದಿಂದ ಬೈಕ್ ರ್‍ಯಾಲಿ

Published

on

ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಎರು ಮಂಡ್ಯದಲ್ಲಿ ಬೈಕ್ ರ್‍ಯಾಲಿ ಮೂಲಕ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಶಾಸಕ ರವಿಕುಮಾರ್ ಗಣಿಗ ಜೊತೆಗೂಡಿ ಕೊನೆಯ ದಿನದ ಪ್ರಚಾರ ಮಾಡಿದರು.

ನಗರದ ಕಾರಿಮನೆ ಗೇಟ್ ನಿಂದ ಬೈಕ್ ರ್‍ಯಾಲಿ ಮೂಲಕ ಪ್ರಚಾರ ಆರಂಭಿಸಿದ ಕಾಂಗ್ರೆಸ್ ನಾಯಕರು, ಬೆಂಗಳೂರು ಮೈಸೂರು ಹೆದ್ದಾರಿ ಮೂಲಕ ಜಯ ಚಾಮರಾಜೇಂದ್ರ ಒಡೆಯರ್ ವೃತ್ತ, ಆರ್ ಪಿ ರಸ್ತೆ, ಅಂಬೇಡ್ಕರ್ ರಸ್ತೆ ಯಲ್ಲಿ ಮತಯಾಚಿಸಿ ಹೊಸಹಳ್ಳಿಯಲ್ಲಿ ಪ್ರಚಾರ ಮಾಡಿದರು.

ಕಾಂಗ್ರೆಸ್ ಪಕ್ಷ ಜನರ ಪರವಾದ ಪಕ್ಷವಾಗಿದ್ದು, ಗ್ಯಾರಂಟಿ ಯೋಜನೆಗಳ ಮೂಲಕ ಜನತೆಗೆ ಸವಲತ್ತು ದೊರಕಿಸಿಕೊಟ್ಟಿದೆ, ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮತ್ತಷ್ಟು ಜನಪರ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದು ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

Continue Reading

Mandya

ಕುಮಾರಸ್ವಾಮಿ ಪರ ಮತ ಪ್ರಚಾರ

Published

on

ಭಾರತೀನಗರ :ಕೆ.ಎಂ.ದೊಡ್ಡಿಯಲ್ಲಿನ 1 ಮತ್ತು 2ನೇ ಬ್ಲಾಕ್ನಲ್ಲಿ ಜಾ.ದಳ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಎನ್.ಡಿಎ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಪ್ರತೀ ಮನೆಯಲ್ಲಿ ಮತದಾರರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಕೊಟ್ಟ ಕೊಡುಗೆಗಳ ಹಾಗೂ ಅಭಿವೃದಧಿ ಕಾರ್ಯಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು, ರೈತರ ಉದ್ಧಾರಕ್ಕೋಸ್ಕರ ಸಾಲ ಮನ್ನಾ ಮಾಡಿದ್ದರು. ಹಾಗಾಗಿ ಕುಮಾರಸ್ವಾಮಿ ಅವರ ತೆನೆ ಹೊತ್ತ ಮಹಿಳೆ ಗುರುತಿಗೆ ಮತ ನೀಡುವ ಮೂಲಕ ಅತ್ಯಧಿಕ ಮತಗಳಿಂದ ಜಯಗಳಿಸುವಂತೆ ಮಾಡಬೇಕೆಂದು ಮನವಿ ಮಾಡಿದರು.
ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಪಕ್ಷದ ಪ್ರದಾನಮಂತ್ರಿ ನರೇಂದ್ರ ಮೋದಿ ಅವರು ಜನತೆಯ ಹಿತಕಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ, ರೈತರ ಶ್ರೇಯೋಬಿವೃದ್ಧಿ ಹಿನ್ನೆಯಲ್ಲಿಯೂ ಕೂಡ ಹಲವು ಯೋಜನೆಗಳನ್ನು ಜಾರಿ ಮಾಡಿದ್ದಾರೆ ಎಂದು ಮತದಾರರಿಗೆ ತಿಳಿಸಿ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಮೂಲಕ ಪ್ರದಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್, ಗ್ರಾಮ ಪಂಚಾಯತಿ ಸದಸ್ಯರಾದ ವೆಂಕಟೇಶ್, ಮುಖಂಡರಾದ ಮೊಬೈ ವೆಂಕಟೇಶ್, ಕುಮಾರ್ , ರವಿ, ವಿಶ್ವ ಶ್ರೀನಿವಾಸ್, ಪುನೀತ್, ವಿಕಾಸ್ (ಬೋರ), ಪ್ರಶಾಂತ್, ಲಕ್ಷ್ಮಮ್ಮ, ರಂಗಮ್ಮ ಮುಂತಾದವರುಗಳು ಭಾಗವಹಿಸಿದ್ದರು

Continue Reading

Trending

error: Content is protected !!