Connect with us

State

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸುಪ್ರೀಂ ಜಾಮೀನು ರದ್ದುಗೊಳಿಸಿ ಆದೇಶ: ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌

Published

on

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದುಗೊಂಡಿದೆ. ಇದರ ಬೆನ್ನಲ್ಲೇ ಪೊಲಿಸರು ದರ್ಶನ್, ಪವಿತ್ರಗೌಡ ಸೇರಿದಂತೆ ಐವರು ಆರೋಪಿಗಳನ್ನು ಮತ್ತೆ ಬಂಧಿಸಿ ನ್ಯಾಯಾಧೀಶರ ಮುಂದೆ ಅನ್ನಪೂರ್ಣೇಶ್ವರಿ ನಗರದ ಪೊಲೀಸರು ಹಾಜರುಪಡಿಸಿದ್ದಾರೆ.

ಈ ಕುರಿತು ಇದೀಗಸಿಸಿಹೆಚ್ 64ರ ನ್ಯಾಯಾಲಯದ ನ್ಯಾಯಾಧೀಶರಾದ  ಈರಪ್ಪಣ್ಣ ಪವಡಿ ನಾಯ್ಕ್ ಅವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.  ಈ ಆದೇಶದಂತೆ ಐವರು ಆರೋಪಿಗಳನ್ನು ಪೊಲೀಸರು, ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದಾರೆ. ಈ ಹಿಂದೆ ಬಳ್ಳಾರಿ ಜೈಲಿನಲ್ಲಿದ್ದ ಎ2 ಆರೋಪಿ ದರ್ಶನ್‌ಗೆ ಈ ಬಾರಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ.

ಐವರು ಆರೋಪಿಗಳು​ ಪರಪ್ಪನ ಅಗ್ರಹಾರ ಜೈಲಿಗೆ ಶಿಪ್ಟ್‌

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ  A1 ಪವಿತ್ರಾಗೌಡ, A2 ದರ್ಶನ್, A11 ನಾಗರಾಜು, A12 ಲಕ್ಷ್ಮಣ, A14 ಪ್ರದೋಶ್ ನನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಹೋಗಲಾಗುತ್ತಿದೆ. ಮಧ್ಯಂತರ ಜಾಮೀನು ಪಡೆದಾಗ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದರು. ಬೆಂಗಳೂರು ಜೈಲಿನಲ್ಲಿ ರಾಜಾತಿಥ್ಯ ಸ್ವೀಕರಿಸಿದ ಕಾರಣ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು. ಆರೋಪಿಗಳು ಜಾಮೀನು ಪಡೆಯುವಾಗ ಯಾವ ಜೈಲಿನಲ್ಲಿದ್ದರೋ, ಜಾಮೀನು ರದ್ದಾದಾಗಲೂ ಅದೇ ಜೈಲಿಗೆ ಹಾಕಲಾಗುತ್ತೆ. ಹೀಗಾಗಿ ದರ್ಶನ್ ಬಳ್ಳಾರಿ ಜೈಲಿಗೆ ಹೋಗುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಜಡ್ಜ್​ ಆದೇಶದ ಮೇರೆಗೆ ದರ್ಶನ್  ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

ಇನ್ನೂ ಎ6 ಆರೋಪಿ ಅನುಕುಮಾರ್‌  ಮತ್ತು ಎ8 ಆರೋಪಿ ಜಗದೀಶ್‌ ಅವರನ್ನು ನಾಳೆ ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ.

Continue Reading

Special

ರಾಜ್ಯದಲ್ಲಿ ನೇಮಕಾತಿ ಹಬ್ಬ: ಸರಣಿ ಉದ್ಯೋಗ ಅಧಿಸೂಚನೆಗಳಿಗೆ ಕ್ಷಣಗಣನೆ!!

Published

on

ರಾಜ್ಯದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿಗಳ ಸರಮಾಲೆ ಮುಂದುವರಿದಿದೆ. ಇತ್ತೀಚೆಗೆ ಸುಮಾರು 4,000 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಇದರ ಬೆನ್ನಲ್ಲೇ ವಿವಿಧ ಇಲಾಖೆಗಳ ಸಾವಿರಾರು ಹುದ್ದೆಗಳ ನೇಮಕಾತಿ ಪ್ರಕ್ರಿಯೆಗಳು ಆರಂಭವಾಗಲಿದ್ದು, ಅಭ್ಯರ್ಥಿಗಳಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ಪೊಲೀಸ್ ಇಲಾಖೆಯಲ್ಲಿ ಮತ್ತಷ್ಟು ನೇಮಕಾತಿ:
ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಯ ನಂತರ ಪೊಲೀಸ್ ಕಾನ್ಸ್‌ಟೇಬಲ್ (DAR/CAR), KSRP ಹಾಗೂ KSISF ವಿಭಾಗಗಳಲ್ಲಿನ ಹುದ್ದೆಗಳ ಭರ್ತಿಗೆ ಯಾವುದೇ ಕ್ಷಣದಲ್ಲಾದರೂ ಅಧಿಸೂಚನೆ ಪ್ರಕಟವಾಗುವ ಸಾಧ್ಯತೆ ಇದೆ. ಪೊಲೀಸ್ ಸೇವೆಗೆ ಸೇರಲು ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು ಈಗಿನಿಂದಲೇ ಸಿದ್ಧತೆ ಆರಂಭಿಸಬೇಕಾಗಿದೆ.

VAO ಮತ್ತು Group-C ಹುದ್ದೆಗಳ ನಿರೀಕ್ಷೆ:
ಮುಂದಿನ 8 ರಿಂದ 10 ದಿನಗಳ ಒಳಗೆ ಗ್ರಾಮ ಆಡಳಿತಾಧಿಕಾರಿ (VAO) ಹಾಗೂ Group-C ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗುವ ಸಾಧ್ಯತೆ ಇದೆ. ಗ್ರಾಮೀಣ ಆಡಳಿತ ಹಾಗೂ ವಿವಿಧ ಇಲಾಖೆಗಳ ಉದ್ಯೋಗಗಳಿಗಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಲಿದೆ.

ಶಿಕ್ಷಕರ ನೇಮಕಾತಿಗೆ ಸಿದ್ಧತೆ:
ಈ ತಿಂಗಳಲ್ಲಿಯೇ KRIES ವಸತಿ ಶಾಲೆಗಳು ಹಾಗೂ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಹೊರಬೀಳುವ ನಿರೀಕ್ಷೆಯಿದೆ. ಶಿಕ್ಷಕ ವೃತ್ತಿಯ ಕನಸು ಕಾಣುತ್ತಿರುವ ಸಾವಿರಾರು ಅಭ್ಯರ್ಥಿಗಳು ಈ ಪ್ರಕಟಣೆಯನ್ನು ಎದುರು ನೋಡುತ್ತಿದ್ದಾರೆ.

ಉನ್ನತ ಶಿಕ್ಷಣ ಇಲಾಖೆಯಲ್ಲಿ 2,000 ಹುದ್ದೆಗಳು:
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳು, ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿವಿಧ ಸಂಸ್ಥೆಗಳಲ್ಲಿ ಸಹಾಯಕ ಪ್ರಾಧ್ಯಾಪಕ, ಉಪನ್ಯಾಸಕ ಹಾಗೂ ಇತರ ಬೋಧಕ ಸಿಬ್ಬಂದಿ ಸೇರಿದಂತೆ ಸುಮಾರು 2,000 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಶೀಘ್ರದಲ್ಲೇ ಪ್ರಕಟವಾಗಲಿದೆ.

 

ಹೊಸ KAS ನೇಮಕಾತಿಗೂ ಸಜ್ಜು:
ಪ್ರಸ್ತುತ ನಡೆಯುತ್ತಿರುವ 384 ಗೆಜೆಟೆಡ್ ಪ್ರೊಬೆಷನರ್ಸ್ (KAS) ಹುದ್ದೆಗಳ ಸಂದರ್ಶನ ಪ್ರಕ್ರಿಯೆಯು ಜೂನ್ 10ರಂದು ಪೂರ್ಣಗೊಳ್ಳಲಿದ್ದು, ಅದರ ಬಳಿಕ ಹೊಸ KAS ನೇಮಕಾತಿ ಅಧಿಸೂಚನೆ ಹೊರಡಿಸಲು ಸರ್ಕಾರ ಅಂತಿಮ ಸಿದ್ಧತೆ ನಡೆಸುತ್ತಿದೆ ಎನ್ನಲಾಗಿದೆ.

ಮುಂಬರುವ ದಿನಗಳಲ್ಲಿ ಹಲವು ಪ್ರಮುಖ ನೇಮಕಾತಿ ಅಧಿಸೂಚನೆಗಳು ಪ್ರಕಟವಾಗುವ ಸಾಧ್ಯತೆ ಇರುವುದರಿಂದ, ಅಭ್ಯರ್ಥಿಗಳು ಅಗತ್ಯ ದಾಖಲೆಗಳು, ಅಧ್ಯಯನ ಸಾಮಗ್ರಿಗಳು ಹಾಗೂ ಪರೀಕ್ಷಾ ಸಿದ್ಧತೆಯನ್ನು ಈಗಿನಿಂದಲೇ ಪೂರ್ಣಗೊಳಿಸಿಕೊಳ್ಳುವುದು ಸೂಕ್ತ. ರಾಜ್ಯದಲ್ಲಿ ಸರ್ಕಾರಿ ಉದ್ಯೋಗಗಳ ಹೊಸ ಅಲೆ ಆರಂಭವಾಗಿರುವುದು ಉದ್ಯೋಗಾಕಾಂಕ್ಷಿಗಳಿಗೆ ಆಶಾದಾಯಕ ಬೆಳವಣಿಗೆಯಾಗಿದೆ.

Continue Reading

State

ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Published

on

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಮನ್ಸೂರ್ ಅಲಿ ಖಾನ್ ಮತ್ತು ಪವನ್ ಖೇರಾ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಇದೇ ವೇಳೆ, ಪಕ್ಷೇತರ ಅಭ್ಯರ್ಥಿಯಾಗಿ ಭೋಜನ ಸೋಮಯ್ಯ ಅವರು ವಿಧಾನಸೌಧದಲ್ಲಿ ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿಯಾಗಿರುವ ಎಂ. ಕೆ. ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಇನ್ನೊಂದೆಡೆ, ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ.ಹರಿಪ್ರಸಾದ್, ಪಿ.ವಿ.ಮೋಹನ್, ತಿಪ್ಪಣ್ಣಪ್ಪ ಕಮಕನೂರು ಹಾಗೂ ಬಿ.ಎಸ್.ಶ್ರೀನಿವಾಸ್ ಅವರು ನಾಮಪತ್ರ ಸಲ್ಲಿಕೆ ಮಾಡಿದರು.

ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ರಾಜಕೀಯ ವಲಯದಲ್ಲಿ ಗಮನ ಸೆಳೆದಿದ್ದು, ಮುಂದಿನ ಹಂತದ ಚುನಾವಣಾ ಚಟುವಟಿಕೆಗಳಿಗೆ ವೇದಿಕೆ ಸಿದ್ಧವಾಗಿದೆ.

Continue Reading

Politics

ರಾಜೀನಾಮೆ ಹಿಂಪಡೆದ ರಾಮಲಿಂಗಾರೆಡ್ಡಿ

Published

on

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಡೆದ ಬೆಳವಣಿಗೆಯೊಂದರಲ್ಲಿ, ಖಾತೆ ಹಂಚಿಕೆ ಕುರಿತ ಅಸಮಾಧಾನದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗರೆಡ್ಡಿ ಅವರು ತಮ್ಮ ನಿರ್ಧಾರವನ್ನು ವಾಪಸ್ ಪಡೆದಿದ್ದಾರೆ.

ಬೆಂಗಳೂರು ಅಭಿವೃದ್ಧಿ ಖಾತೆ ಬದಲು ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಅವರು ರಾಜೀನಾಮೆ ಸಲ್ಲಿಸಿದ್ದರು. ಆದರೆ ನಂತರ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಮನಗೊಳಿಸಿದೆ.

ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ ಅವರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ರಾಜೀನಾಮೆಯನ್ನು ಸ್ವೀಕರಿಸುವುದಿಲ್ಲ ಎಂದು ತಿಳಿಸಿದ್ದರಿಂದ ಅದನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ. ಜೊತೆಗೆ, ಖಾತೆ ಹಂಚಿಕೆ ವಿಚಾರವನ್ನು ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ನಿರ್ವಹಿಸಲಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಬೆಳವಣಿಗೆಯೊಂದಿಗೆ ರಾಜ್ಯ ಸಚಿವ ಸಂಪುಟದ ಒಳಗಿನ ಗೊಂದಲ ತಾತ್ಕಾಲಿಕವಾಗಿ ಶಮನಗೊಂಡಂತಾಗಿದೆ.

Continue Reading

Trending

error: Content is protected !!