Connect with us

State

ಸುಪ್ರೀಂನಿಂದ ದರ್ಶನ್‌ ಜಾಮೀನು ರದ್ದು| ಬೇರೆ ಜೈಲಿಗೆ ಹೋಗದಂತೆ ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ: ದರ್ಶನ್‌ ಪರ ವಕೀಲ ಹೇಳಿಕೆ

Published

on

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಎ2 ಆರೋಪಿ ದರ್ಶನ್‌ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದುಗೊಳಿಸಲಾಗಿದೆ ಎಂದು ಆದೇಶ ಹೊರಡಿಸಿದೆ. ಹಾಗಾಗಿ ಇಂದು ದರ್ಶನ್‌ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಪರಪ್ಪನ ಅಗ್ರಹಾರ ಸೆಂಟ್ರಲ್‌ ಜೈಲು ಹೊರತು ಪಡಿಸಿ ಬೇರೆ ಜೈಲಿಗೆ ಸ್ಥಳಾಂತರ ಮಾಡಬೇಡಿ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದೇವೆ ಎಂದು ದರ್ಶನ್‌ ಪರ ವಕೀಲ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಪ್ರಕರಣದ ವಿಚಾರಣೆ ಬೆಂಗಳೂರಿನಲ್ಲೇ ನಡೆಯುವುದರಿಂದ ನ್ಯಾಯಾಲಯದಲ್ಲಿ ಅವರ ಫಿಸಿಕಲ್ ಹಾಜರಾತಿ ಕಡ್ಡಾಯವಾಗಿದೆ. ವಕೀಲರಾದ ನಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್ ಬಳಿ ಮಾಹಿತಿ ತೆಗೆದುಕೊಳ್ಳಬೇಕಾಗುತ್ತದೆ. ಅವರನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಿದರೆ ಅಲ್ಲಿಗೆ ಹೋಗಿ ಮಾಹಿತಿ ಪಡೆಯುವುದು ಕಷ್ಟ ಆಗುತ್ತದೆ ಎಂಬುದನ್ನು ನ್ಯಾಯಾಲಕ್ಕೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ನಾವು ನ್ಯಾಯಾಲಯಕ್ಕೆ ಅರ್ಜಿ ಸಹ ಹಾಕಿದ್ದೇವೆ. ಅದನ್ನು ಪರಿಗಣಿಸುವುದಾಗಿ ಸಾಹೇಬರು ಹೇಳಿದ್ದಾರೆ. ಸುಪ್ರೀಂ ಕೋರ್ಟ್​​ನಲ್ಲಿ ರಿವ್ಯೂವ್​​ಗೆ ಹೋಗಲು ಅವಕಾಶ ಇದೆ. ಆದರೆ ಆ ಬಗ್ಗೆ ಯಾವ ಚರ್ಚೆಯೂ ನಮ್ಮಲ್ಲಿ ನಡೆದಿಲ್ಲ. ಮುಂದಿನ ದಿನಗಳಲ್ಲಿ ಆ ಬಗ್ಗೆ ತೀರ್ಮಾನ ನಾವು ತೆಗೆದುಕೊಳ್ಳುವವರಿದ್ದೇವೆ ಎಂದಿದ್ದಾರೆ.

ಕಳೆದ ಬಾರಿ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾಗ ಸಿಗರೇಟ್ ಸೇದುತ್ತಾ ರಾಜಾಥಿತ್ಯ ಪಡೆದ ಫೋಟೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಲಾಯರ್​​ಗೆ ಪ್ರಶ್ನೆ ಎದುರಾಗಿದೆ. ‘ಜೈಲಿನಲ್ಲಿ ಹೇಗೆ ಇರಬೇಕು ಎಂಬ ಬಗ್ಗೆ ನಾವು ಯಾವುದೇ ಸಲಹೆ ನೀಡಿಲ್ಲ. ಯಾವ ರೀತಿ ಇರಬೇಕೋ ಆ ಹುಷಾರಿನಲ್ಲಿ ದರ್ಶನ್ ಇರುತ್ತಾರೆ. ಎಲ್ಲ ಆರೋಪಿಗಳನ್ನು ಪರಪ್ಪನ ಅಗ್ರಹಾರದಲ್ಲಿ ಆಗಸ್ಟ್ 23ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳಿಸಿಲಾಗಿದೆ’ ಎಂದು  ಮಾಹಿತಿ ನೀಡಿದ್ದಾರೆ.

Continue Reading

Special

ಅಂಧತ್ವ ಮುಕ್ತ ಕರ್ನಾಟಕದತ್ತ ಆಶಾಕಿರಣ ಯೋಜನೆಯ ಮಹತ್ವದ ಹೆಜ್ಜೆ!!

Published

on

ರಾಜ್ಯದಲ್ಲಿ ಅಂಧತ್ವವನ್ನು ತಡೆಗಟ್ಟುವ ಹಾಗೂ ಪ್ರತಿಯೊಬ್ಬರಿಗೂ ಗುಣಮಟ್ಟದ ಕಣ್ಣಿನ ಆರೈಕೆ ಸೇವೆಗಳನ್ನು ತಲುಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಆಶಾಕಿರಣ ಯೋಜನೆ ಗಮನಾರ್ಹ ಯಶಸ್ಸು ಸಾಧಿಸಿದೆ. ಕಣ್ಣಿನ ಆರೋಗ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರ ಜೊತೆಗೆ, ದೃಷ್ಟಿದೋಷ ಹೊಂದಿರುವವರಿಗೆ ಅಗತ್ಯ ಚಿಕಿತ್ಸೆ ಮತ್ತು ನೆರವು ಒದಗಿಸುವ ಮೂಲಕ ಈ ಯೋಜನೆ ಸಾವಿರಾರು ಜನರ ಬದುಕಿನಲ್ಲಿ ಹೊಸ ಬೆಳಕನ್ನು ತಂದಿದೆ.

ರಾಜ್ಯಾದ್ಯಂತ 393 ಆಶಾಕಿರಣ ದೃಷ್ಟಿ ಕೇಂದ್ರಗಳು:
ಸಾರ್ವಜನಿಕರಿಗೆ ಸಮೀಪದಲ್ಲೇ ಕಣ್ಣಿನ ಆರೋಗ್ಯ ಸೇವೆಗಳು ದೊರೆಯುವಂತೆ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಒಟ್ಟು 393 ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಕೇಂದ್ರಗಳಲ್ಲಿ ಕಣ್ಣಿನ ತಪಾಸಣೆ, ದೃಷ್ಟಿದೋಷ ಪತ್ತೆ, ಚಿಕಿತ್ಸಾ ಸಲಹೆ ಹಾಗೂ ಅಗತ್ಯ ವೈದ್ಯಕೀಯ ಸೇವೆಗಳನ್ನು ಒದಗಿಸಲಾಗುತ್ತಿದೆ.

ಮಕ್ಕಳಿಗೆ ಉಚಿತ ಕನ್ನಡಕ ವಿತರಣೆ:
ಆಶಾಕಿರಣ ಯೋಜನೆಯಡಿ ಇದುವರೆಗೆ 50 ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಉಚಿತ ಕನ್ನಡಕಗಳನ್ನು ವಿತರಿಸಲಾಗಿದೆ. ಶಾಲಾ ಮಕ್ಕಳಲ್ಲಿ ಕಂಡುಬರುವ ದೃಷ್ಟಿದೋಷಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಿ, ಅವರಿಗೆ ಅಗತ್ಯ ಕನ್ನಡಕಗಳನ್ನು ನೀಡುವುದರಿಂದ ಅವರ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುತ್ತಿದೆ. ಸ್ಪಷ್ಟ ದೃಷ್ಟಿಯಿಂದ ಮಕ್ಕಳು ಆತ್ಮವಿಶ್ವಾಸದಿಂದ ಶಿಕ್ಷಣ ಮುಂದುವರಿಸಲು ಈ ಯೋಜನೆ ನೆರವಾಗುತ್ತಿದೆ.

ಮನೆ ಬಾಗಿಲಿಗೆ ಕಣ್ಣಿನ ಆರೈಕೆ ಸೇವೆ:
ಈ ಯೋಜನೆಯ ವಿಶೇಷತೆಯೆಂದರೆ ಕಣ್ಣಿನ ಆರೈಕೆ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವುದು. ಆರೋಗ್ಯ ಸಿಬ್ಬಂದಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ದೃಷ್ಟಿ ಪರೀಕ್ಷೆ ನಡೆಸುತ್ತಿದ್ದಾರೆ. ಕಣ್ಣಿನ ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣವೇ ಸೂಕ್ತ ಚಿಕಿತ್ಸೆಗೆ ಸಂಪರ್ಕ ಕಲ್ಪಿಸಲಾಗುತ್ತಿದೆ.

ಉಚಿತ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ:
ದೃಷ್ಟಿದೋಷ ಅಥವಾ ಇತರ ಕಣ್ಣಿನ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಉಚಿತ ಚಿಕಿತ್ಸೆ, ಅಗತ್ಯವಿದ್ದಲ್ಲಿ ಶಸ್ತ್ರಚಿಕಿತ್ಸೆ ಹಾಗೂ ಕನ್ನಡಕ ವಿತರಣೆಯಂತಹ ಸೌಲಭ್ಯಗಳನ್ನು ಯೋಜನೆಯಡಿ ಒದಗಿಸಲಾಗುತ್ತಿದೆ. ಇದರಿಂದ ಆರ್ಥಿಕವಾಗಿ ಹಿಂದುಳಿದ ವರ್ಗದ ಜನರಿಗೆ ಹೆಚ್ಚಿನ ಪ್ರಯೋಜನ ದೊರೆಯುತ್ತಿದೆ.

ಆಶಾಕಿರಣ ಯೋಜನೆ ಕೇವಲ ಆರೋಗ್ಯ ಸೇವೆಯ ಕಾರ್ಯಕ್ರಮವಾಗಿರದೆ, ಸಮಾಜದಲ್ಲಿ ಧನಾತ್ಮಕ ಬದಲಾವಣೆಗೆ ಕಾರಣವಾಗಿರುವ ಜನಪರ ಯೋಜನೆಯಾಗಿದೆ. ಉತ್ತಮ ದೃಷ್ಟಿ, ಉತ್ತಮ ಆರೋಗ್ಯ ಮತ್ತು ಉತ್ತಮ ಜೀವನಮಟ್ಟವನ್ನು ಖಚಿತಪಡಿಸುವ ಮೂಲಕ ಕರ್ನಾಟಕವನ್ನು ಅಂಧತ್ವ ಮುಕ್ತ ರಾಜ್ಯವನ್ನಾಗಿಸುವ ಗುರಿಯತ್ತ ಈ ಯೋಜನೆ ಯಶಸ್ವಿಯಾಗಿ ಸಾಗುತ್ತಿದೆ.

Continue Reading

Politics

ಪುಟ್ಟ ಕಂದಮ್ಮಗಳ ಆರೋಗ್ಯಕ್ಕಾಗಿ ನಾಳೆ ಪೋಲಿಯೋ ಹನಿ ಹಾಕಿಸಲು ಮರೆಯದಿರಿ: ಡಿಕೆಶಿ

Published

on

ಬೆಂಗಳೂರು:   ನಾಳೆ ಪೋಲಿಯೋ ಲಸಿಕಾ ಅಭಿಯಾನ ಇರಲಿದ್ದು, ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಎರಡು ಹನಿ ಲಸಿಕೆ ಹಾಕಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

 

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮುದ್ದು ಮಕ್ಕಳ ಮುಗುಳ್ನಗೆ ಸದಾ ಹಸಿರಾಗಿರಲು, (ನಾಳೆ) ಜೂ.28 ರಂದು ನಿಮ್ಮ ಮನೆಯ ಐದು ವರ್ಷದೊಳಗಿನ ಪುಟ್ಟ ಕಂದಮ್ಮಗಳಿಗೆ ಪೋಲಿಯೋ ಲಸಿಕೆ ಹಾಕಿಸಲು ಮರೆಯದಿರಿ ಎಂದು ತಿಳಿಸಿದ್ದಾರೆ.

ಅಂಗವೈಕಲ್ಯದ ನೆರಳು ಮಗುವಿನ ಭವಿಷ್ಯವನ್ನು ಆವರಿಸದಂತೆ ತಡೆಯಲು ಈ ಎರಡು ಹನಿಗಳ ಶಕ್ತಿ ಅಪಾರವಾದದ್ದು. ನಮ್ಮ ಹೆಮ್ಮೆಯ ಭಾರತವನ್ನು ಪೋಲಿಯೋ ಮುಕ್ತವಾಗಿ ಮುಂದುವರೆಸುವ ನಾವೆಲ್ಲರೂ ಕೈಜೋಡಿಸೋಣ ಎಂದು ಹೇಳಿದ್ದಾರೆ.

Continue Reading

Politics

ಬಿಡದಿ ಟೌನ್‌ಶಿಪ್‌: ರೈತರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿ – ವಿ. ಸೋಮಣ್ಣ

Published

on

ದಾವಣಗೆರೆ: ಬಿಡದಿ ಟೌನ್‌ಶಿಪ್ ನಿರ್ಮಾಣ ವಿಚಾರದಲ್ಲಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ರೈತರೊಂದಿಗೆ ಚರ್ಚಿಸಿ, ಎಲ್ಲ ಆಯಾಮಗಳನ್ನು ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಸಲಹೆ ನೀಡಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಟೌನ್‌ಶಿಪ್ ಯೋಜನೆ ಜಾರಿಗೆ ಮುಂದಾಗಿದ್ದರು. ನಂತರ ಅದೇ ಯೋಜನೆಯನ್ನು ರದ್ದುಪಡಿಸಿದ್ದರು. ಆದ್ದರಿಂದ ಈ ವಿಷಯದಲ್ಲಿ ಸರ್ಕಾರ ರೈತರ ಅಭಿಪ್ರಾಯಕ್ಕೂ ಆದ್ಯತೆ ನೀಡಿ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.

ಇದೇ ವೇಳೆ ಅಯೋಧ್ಯೆ ಶ್ರೀರಾಮ ಮಂದಿರ ಹುಂಡಿ ಹಣ ಕಳ್ಳತನ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಸೋಮಣ್ಣ, ಉತ್ತರ ಪ್ರದೇಶ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿರುವುದಾಗಿ ತಿಳಿಸಿದರು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಮತ್ತು ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಯಲಿದೆ ಎಂದು ಹೇಳಿದರು.

Continue Reading

Trending

error: Content is protected !!