Connect with us

National

2023ರ ಚುನಾವಣೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್‌ ನೀಡಿದ ಸುಪ್ರೀಂ

Published

on

ನವದೆಹಲಿ: ಸಿಎಂ ಸಿದ್ದರಾಮಯ್ಯ 2023ರ ಚುನಾವಣೆಯಲ್ಲಿ ವರುಣಾ (a) ಕ್ಷೇತ್ರದಿಂದ ಆಯ್ಕೆಗೆ ಸಂಬಂಧಿಸಿದಂತೆ  ಅವರಿಗೆ ಸುಪ್ರೀಂ ಕೋರ್ಟ್‌  ನೋಟಿಸ್‌ ನೀಡಿದೆ.

ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿತ್ತು. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಮಾಡಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ನ್ಯಾ. ವಿಕ್ರಮನಾಥ್ ನೇತೃತ್ವದ ದ್ವಿಸದಸ್ಯ ಪೀಠವು, ಸಿಎಂ ಸಿದ್ದರಾಮಯ್ಯ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್‌ ನೀಡಿದೆ. ಕೆ. ಶಂಕರ್ ಎಂಬವರು ಮೇಲ್ಮನವಿ ಸಲ್ಲಿಸಿದ್ದರು. ಚುನಾವಣಾ ಅಕ್ರಮ ನಡೆಸಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಆರೋಪಿಸಲಾಗಿತ್ತು.

1951 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಯ ಅಡಿಯಲ್ಲಿ ಸಿದ್ದರಾಮಯ್ಯ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದರು. ಶಂಕರ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.

Continue Reading

National

ವೈಜಾಗ್‌ನ ಸಿಂಹಾಚಲಂ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ

Published

on

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಗೆಲುವಿನ ಬೆನ್ನಲ್ಲೇ ವಿರಾಟ್ ಕೊಹ್ಲಿ, ವೈಜಾಗ್‌ನ ಸಿಂಹಾಚಲಂ ದೇವಸ್ಥಾನದಲ್ಲಿ ವರಾಹ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕೊಹ್ಲಿ  ಏಕದಿನ ಸರಣಿಯಲ್ಲಿ ಅದ್ಭುತ  ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದು,  ಎರಡು ಶತಕ ಹಾಗೂ ಒಂದು ಅರ್ಧಶತಕ ಸೇರಿದಂತೆ 302 ರನ್ ಗಳಿಸಿದ್ದಾರೆ.

ಕೊನೆಯ ಏಕದಿನ ಪಂದ್ಯದಲ್ಲಿ ಕೊಹ್ಲಿ ಅಜೇಯ 65 ರನ್ ಗಳಿಸಿ 271 ರನ್‌ಗಳ ಗುರಿ ಬೆನ್ನಟ್ಟಿದ ಭಾರತವನ್ನು ಗೆಲುವಿನತ್ತ ಕೊಂಡೊಯ್ದರು. ಯಶಸ್ವಿ ಜೈಸ್ವಾಲ್ 116 ರನ್ ಮತ್ತು ರೋಹಿತ್ ಶರ್ಮಾ 75 ರನ್ ಗಳಿಸಿ ಸುಲಭ ಗೆಲುವಿಗೆ ಕೊಡುಗೆ ನೀಡಿದ್ದಾರೆ.

ವೈಜಾಗ್ ಪಂದ್ಯಕ್ಕೂ ಮುನ್ನ, ಮುಖ್ಯ ಕೋಚ್ ಗೌತಮ್ ಗಂಭೀರ್ ಸಹ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಸರಣಿಯ ಕೊನೆಯ ಏಕದಿನ ಪಂದ್ಯದಲ್ಲಿ ಗಂಭೀರ್ ತಮ್ಮ ಕಾರ್ಯತಂತ್ರ ಮೂಲಕ ಭಾರತವು ನಿರ್ಣಾಯಕ ಪಂದ್ಯದಲ್ಲಿ 9 ವಿಕೆಟ್‌ಗಳ ದೊಡ್ಡ ಗೆಲುವು ಸಾಧಿಸಲು ನೆರವಾಗಿದ್ದಾರೆ.
Continue Reading

National

ಭಾರತ, ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ರಾಷ್ಟ್ರ : ಪ್ರಹ್ಲಾದ್‌ ಜೋಶಿ

Published

on

ನವದೆಹಲಿ: ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಜಾಗತಿಕವಾಗಿ ಭಾರತ ಪ್ರಮುಖ ಪಾತ್ರ ವಹಿಸಿದ್ದು, 2025-26ನೇ ಆರ್ಥಿಕ ವರ್ಷದಲ್ಲಿ ಅತಿ ಹೆಚ್ಚು 31.25 GW ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯ ಸೇರ್ಪಡೆಯಾಗಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

ನವದೆಹಲಿಯಲ್ಲಿ ಇಂದು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಒಡಿಶಾದ ಪುರಿಯಲ್ಲಿ ನಡೆದ ಗ್ಲೋಬಲ್ ಎನರ್ಜಿ ಲೀಡರ್ಸ್ ಶೃಂಗಸಭೆ ಉದ್ದೇಶಿಸಿ ಮಾತನಾಡಿ, ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತ 24.28 GW ಸೌರಶಕ್ತಿ ಸೇರಿದಂತೆ 31.25 GW ಪಳೆಯುಳಿಕೆಯೇತರ ಸಾಮರ್ಥ್ಯವನ್ನು ದಾಖಲಿಸಿದೆ ಎಂದರು.
2022 ರಲ್ಲಿ 1 TW ನವೀಕರಿಸಬಹುದಾದ ಇಂಧನ ಸಾಮರ್ಥ್ಯಕ್ಕೆ 70 ವರ್ಷಗಳನ್ನು ತೆಗೆದುಕೊಂಡಿದ್ದರೆ, ಎರಡೇ ವರ್ಷದಲ್ಲಿ ಅಂದರೆ 2024ರ ವೇಳೆಗೆ 2 TW ಅನ್ನು ಸಾಧಿಸಲಾಗಿದೆ. ಜಾಗತಿಕವಾಗಿ ಈ ಸ್ಫೋಟಕ ಏರಿಕೆಗೆ ಭಾರತ ಪ್ರಮುಖ ಚಾಲಕವಾಗಿದೆ ಎಂದು ಹೇಳಿದರು.

ಕಳೆದ 11 ವರ್ಷಗಳಲ್ಲಿ ದೇಶದ ಸೌರ ಸಾಮರ್ಥ್ಯ ಕೇವಲ 2.8 GW ಇತ್ತು. ಇದೀಗ ಸುಮಾರು 130 GW ಗೆ ಬೆಳೆದಿದೆ. 2022 ಮತ್ತು 2024ರ ನಡುವೆ, ಭಾರತ ಜಾಗತಿಕ ಸೌರ ಸೇರ್ಪಡೆಗಳಿಗೆ 46 GW ಕೊಡುಗೆ ನೀಡಿದ್ದು, ಮೂರನೇ ಅತಿದೊಡ್ಡ ಕೊಡುಗೆದಾರ ರಾಷ್ಟ್ರವಾಗಿದೆ ಎಂದು ಹೇಳಿದರು.

ಭಾರತ ವಿಶ್ವದ 5ನೇ ಅತಿದೊಡ್ಡ ಕಲ್ಲಿದ್ದಲು ನಿಕ್ಷೇಪಗಳನ್ನು ಹೊಂದಿದ್ದಲ್ಲದೆ, ಕಲ್ಲಿದ್ದಲಿನ ಎರಡನೇ ಅತಿದೊಡ್ಡ ಬಳಕೆದಾರ ರಾಷ್ಟ್ರವಾಗಿದೆ. ಹೇರಳ ಕಲ್ಲಿದ್ದಲು ಇದ್ದರೂ ನವೀಕರಿಸಬಹುದಾದ ಇಂಧನ ಪರಿವರ್ತನೆ ವೇಗ ಪಡೆಯುತ್ತಿದೆ. ಕಲ್ಲಿದ್ದಲು ಮತ್ತು ನವೀಕರಿಸಬಹುದಾದ ಶಕ್ತಿಯೊಂದಿಗೆ ಸ್ಥಿರವಾಗಿ ಸಮತೋಲನಗೊಳಿಸುತ್ತಿದೆ ಎಂದರು.

2025ರ ಜಾಗತಿಕ ಇಂಧನ ನಾಯಕರ ಶೃಂಗಸಭೆ: ಪುರಿಯಲ್ಲಿ ನಡೆಯುವ ಜಾಗತಿಕ ಇಂಧನ ನಾಯಕರ ಶೃಂಗಸಭೆ (GELS) ಭಾರತದ ಶುದ್ಧ ಇಂಧನ ಪರಿವರ್ತನೆಯನ್ನು ವೇಗಗೊಳಿಸಲು ನೀತಿ ನಿರೂಪಕರು, ನಾವಿನ್ಯಕಾರರು ಮತ್ತು ಉದ್ಯಮ ನಾಯಕರನ್ನು ಒಟ್ಟುಗೂಡಿಸುವಲ್ಲಿ ಮಹತ್ತರ ಹೆಜ್ಜೆಯಾಗಿದೆ ಎದು ತಿಳಿಸಿದರು.

ಒಡಿಶಾ ಬಲವಾದ ಶುದ್ಧ ಇಂಧನ ಅಳವಡಿಕೆಯನ್ನು ಪ್ರದರ್ಶಿಸುತ್ತಿದೆ. 3.1 GW ಗಿಂತ ಹೆಚ್ಚು ನವೀಕರಿಸಬಹುದಾದ ಸಾಮರ್ಥ್ಯದೊಂದಿಗೆ ಈಗ ರಾಜ್ಯದ ಒಟ್ಟು ಸ್ಥಾಪಿತ ವಿದ್ಯುತ್ ಸಾಮರ್ಥ್ಯದ ಶೇ.34ಕ್ಕಿಂತ ಹೆಚ್ಚು ಪಾಲನ್ನು ಹೊಂದಿದೆ ಎಂದು  ಸಂತಸ ವ್ಯಕ್ತಪಡಿಸಿದರು.

ಪಿಎಂ ಸೂರ್ಯ ಘರ್ ಯೋಜನೆಯಡಿ 1.6 ಲಕ್ಷ ಮನೆಗಳು ಮೇಲ್ಛಾವಣಿ ಸೌರಶಕ್ತಿಗಾಗಿ ಅರ್ಜಿ ಸಲ್ಲಿಸಿದ್ದು, 23,000ಕ್ಕೂ ಹೆಚ್ಚು ಸ್ಥಾಪನೆಗಳು ಪೂರ್ಣಗೊಂಡಿವೆ ಮತ್ತು 19,200ಕ್ಕೂ ಹೆಚ್ಚು ಕುಟುಂಬಗಳು 147 ರೂ. ಕೋಟಿಗಿಂತ ಹೆಚ್ಚಿನ ಸಬ್ಸಿಡಿಯನ್ನು ನೇರವಾಗಿ ಬ್ಯಾಂಕ್ ಖಾತೆಗೆ ಪಡೆದಿವೆ ಎಂದು ಹೇಳಿದರು.

ಹೊಸ ಯುಟಿಲಿಟಿ-ಲೆಡ್ ಅಗ್ರಿಗೇಷನ್ (ಯುಎಲ್‌ಎ) ಮಾದರಿಯಡಿ ಒಡಿಶಾದಲ್ಲಿ ಮುಂದಿನ ದಿನಗಳಲ್ಲಿ 1.5 ಲಕ್ಷ ರೂಫ್‌ಟಾಪ್ ಸೌರ ಘಟಕಗಳು ಸ್ಥಾಪನೆಯಾಗಲಿದ್ದು, 7-8 ಲಕ್ಷ ನಾಗರಿಕರನ್ನು ಸಬಲೀಕರಣಗೊಳಿಸುತ್ತದೆ ಎಂದು ತಿಳಿಸಿದರು.

Continue Reading

National

ಲೋಕಸಭೆಯಲ್ಲಿ Right to Disconnect Bill ಮಂಡಿಸಿದ ಸಂಸದೆ ಸುಪ್ರಿಯಾ ಸುಳೆ

Published

on

ನವದೆಹಲಿ: ಆಫೀಸ್‌ ಕೆಲಸದ ನಂತರವೂ ಉದ್ಯೋಗಿಗಳು ಕರೆ, ಇಮೇಲ್‌ಗಳಿಗೆ ಹಾಜರಾಗುವುದನ್ನು ತಡೆಯಲು ಅವಕಾಶ ನೀಡುವ ರೈಟ್‌ ಟು ಡಿಸ್‌ಕನೆಕ್ಟ್‌ ಬಿಲ್‌ ಲೋಕಸಭೆಯಲ್ಲಿ ಮಂಡನೆಯಾಗಿದೆ.

ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರು ಈ ಖಾಸಗಿ ಮಸೂದೆಯನ್ನು ಮಂಡಿಸಿದ್ದಾರೆ. ಅಧಿಕೃತ ಕೆಲಸದ ಅವಧಿ ಮೀರಿ ಮತ್ತು ರಜಾದಿನಗಳಲ್ಲಿ ಕೆಲಸಕ್ಕೆ ಸಂಬಂಧಿಸಿದ ಕರೆಗಳು ಮತ್ತು ಇಮೇಲ್‌ಗಳಿಂದ ಸಂಪರ್ಕ ಕಡಿತಗೊಳಿಸುವ ಹಕ್ಕನ್ನು ಪ್ರತಿ ಉದ್ಯೋಗಿಗೆ ಈ ಮಸೂದೆ ನೀಡುತ್ತದೆ. ಇದರೊಂದಿಗೆ ನೌಕರರ ಕಲ್ಯಾಣ ಪ್ರಾಧಿಕಾರವನ್ನು ಸ್ಥಾಪಿಸಬೇಕೆಂಬ ಅಂಶ ಈ ಮಸೂದೆಯಲ್ಲಿದೆ.

ಸರ್ಕಾರ ಈ ಮಸೂದೆಯನ್ನು ಅಂಗೀಕರಿಸುವ ಸಾಧ್ಯತೆ ಬಹಳ ಕಡಿಮೆಯಿದೆ. ಹೆಚ್ಚಿನ ಸಂದರ್ಭಗಳಲ್ಲಿ ಸರ್ಕಾರವು ಪ್ರಸ್ತಾವಿತ ಮಸೂದೆಗೆ ಪ್ರತಿಕ್ರಿಯಿಸಿದ ನಂತರ ಖಾಸಗಿ ಸದಸ್ಯರ ಮಸೂದೆಗಳನ್ನು ಹಿಂಪಡೆಯಲಾಗುತ್ತದೆ.

ಏನಿದು ಖಾಸಗಿ ಮಸೂದೆ?

ಸಚಿವರಲ್ಲದ ಸಂಸತ್ ಸದಸ್ಯರು ಮಂಡಿಸುವ ಮಸೂದೆ ಇದಾಗಿದ್ದನ್ನು ಇದನ್ನು ಸರ್ಕಾರೇತರ ಮಸೂದೆ ಎಂದು ಕರೆಯುತ್ತಾರೆ. ಇದು ಸಾರ್ವಜನಿಕ ಮಸೂದೆಯ ವಿರುದ್ಧವಾಗಿದ್ದು, ಇದು ಒಬ್ಬ ವ್ಯಕ್ತಿ, ಗುಂಪು ಅಥವಾ ಪ್ರದೇಶದ ಮೇಲೆ ಪರಿಣಾಮ ಬೀರುವ ಕಾನೂನಿನ ಪ್ರಸ್ತಾವನೆಯಾಗಿರುತ್ತದೆ. ಸಂಸತ್ತಿನ ಖಾಸಗಿ ಸದಸ್ಯರು ಮಂಡಿಸುವ ಈ ಮಸೂದೆಯನ್ನು ಅಂಗೀಕರಿಸುವ ಪ್ರಕ್ರಿಯೆಯಲ್ಲಿ ಸರ್ಕಾರಿ ಮಸೂದೆಯಂತೆಯೇ ಅಂಗೀಕರಿಸಬೇಕಾಗುತ್ತದೆ.

Continue Reading

Trending

error: Content is protected !!