Connect with us

Hassan

ಅರಕಲಗೂಡಿನಲ್ಲಿ ಶಂಕಿತ ಉಗ್ರನ ಬಂಧನ : ಬೆಚ್ಚಿಬಿದ್ದ ಹಾಸನ ಜನತೆ

Published

on

ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ಕೂಲಿ ಕಾರ್ಮಿಕರ ಜೊತೆ ಅಡಗಿ ಕುಳಿತಿದ್ದ, ಶಂಕಿತ ಉಗ್ರನೊಬ್ಬನನ್ನ ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಮತ್ತು ಹಾಸನದಲ್ಲಿ ಶಂಕಿತ ಉಗ್ರ ಚಟುವಟಿಕೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಚಿಕ್ಕಬಳ್ಳಾಪುರದ ಶಬ್ಬಿರ್ ಹಾಗೂ ಹಾಸನದ ಸಿಕಂದ‌ರ್ ಶೇಕ್ ಎಂಬವರ ಹೆಸರುಗಳು ಈ ಪ್ರಕರಣದಲ್ಲಿ ಕೇಳಿಬಂದಿದೆ.

ಗುಪ್ತಚರ ಇಲಾಖೆಯಿಂದ ಲಭಿಸಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿದ್ದು, ಸಾಮಾಜಿಕ ಜಾಲತಾಣ ಹಾಗೂ ಟೆಲಿಗ್ರಾಂ ಚಟುವಟಿಕೆಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ಆರೋಪಿಗಳು ಯಾವುದೇ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದಾರೆಯೇ ಎಂಬುದನ್ನು ತನಿಖೆ ಮೂಲಕ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಇಂದು ಬೆಳಗ್ಗೆ ಮಫ್ತಿಯಲ್ಲಿ ಬಂದ ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ ಪೊಲೀಸರು, ಅರಕಲಗೂಡಿನ ಸಮೀಪದ ಹಳ್ಳಿಯೊಂದರಲ್ಲಿ ಡಾಂಬರ್ ಕೆಲಸ ಮಾಡುತ್ತಿದ್ದ ಸಿಕಂದರ್, ಹಾಗೂ ಆತನ ಜೊತೆಗಿದ್ದ ಶಂಕಿತ ಉಗ್ರ ಶಬ್ಬೀರ್ ಎಂಬ ಇಬ್ಬರನ್ನ ಸದ್ಯಕ್ ಪೊಲೀಸರು ವಶಕ್ಕೆ ಪಡೆದು, ಬೆಂಗಳೂರಿನ ಕಡೆ ಕರೆದೊಯ್ದಿದ್ದಾರೆ. ಎಂದು ಅರಕಲಗೂಡು ತಾಲೂಕಿನ ಪೊಲೀಸ್ ಅಧಿಕಾರಿಯೊಬ್ಬರು ಜನಮಿತ್ರ ಕ್ಕೆ ಮಾಹಿತಿ ನೀಡಿದ್ದಾರೆ.

Continue Reading

Hassan

ಆಲೂರಿನಲ್ಲಿ ರಕ್ತದಾನ ಶಿಬಿರ: 30ಕ್ಕೂ ಹೆಚ್ಚು ಮಂದಿಯಿಂದ ರಕ್ತದಾನ

Published

on

ವರದಿ : ಸತೀಶ್ ಚಿಕ್ಕಕಣಗಾಲು

ಆಲೂರು: ರಕ್ತದಾನ ಶಿಬಿರವು ವಿದ್ಯಾರ್ಥಿಗಳಲ್ಲಿ ಸಮಾಜಮುಖಿ ಸೇವೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ ಉದ್ದೇಶವನ್ನು ಹೊಂದಿದೆ, ಯುವಕರು ರಕ್ತದಾನಕ್ಕೆ ಮುಂದಾಗಬೇಕು ಎಂದು ಹಾಸನದ ಹಿಮ್ಸ್ ಬೋಧಕ ಆಸ್ಪತ್ರೆಯ ರಕ್ತ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಡಿ.ಎನ್ ನಾಗಲಕ್ಷ್ಮಿ ತಿಳಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಯಂ ಪ್ರೇರಿತವಾಗಿ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಒಬ್ಬ ವ್ಯಕ್ತಿ ನೀಡುವ ರಕ್ತ ಹಲವಾರು ಜನರ ಜೀವ ಉಳಿಸಲು ಸಹಕಾರಿಯಾಗುತ್ತದೆ. ಜತಗೆ ರಕ್ತದಾನ ಮಾಡುವುದರಿಂದ ಉಪಯೋಗವಿದೆ ಎಂದು ರಕ್ತದಾನದ ಮಹತ್ವವನ್ನು ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ರಮೇಶ್ ಮಾತನಾಡಿ, ರಕ್ತದಾನ ಕುರಿತು ಸಮಾಜದಲ್ಲಿರುವ ಅನಗತ್ಯ ಭಯ ಮತ್ತು ತಪ್ಪು ಕಲ್ಪನೆಗಳನ್ನು ದೂರಮಾಡಿ, ಅರ್ಹ ವ್ಯಕ್ತಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.ಮೂವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನವನ್ನು ಮಾಡಿ ರಕ್ತದಾನ ಶಿಬಿರದ ಯಶಸ್ಸಿಗೆ ಕಾರಣರಾದರು.

ಕಾರ್ಯಕ್ರಮದಲ್ಲಿ ಹಾಸನದ ತೇರಾ ಪಂಥ್ ಯುವ ಪರಿಷತ್ತಿನ ಸದಸ್ಯರಾದ ನಿತೇಶ್, ಕಾಲೇಜಿನ ಪ್ರಾಧ್ಯಾಪಕರಾದ ನಟರಾಜ ಜೆ.ಜಿ., ಗೌತಮ್ ಎಸ್., ಮಧುಚೇತನ್, ಶ್ರೀನಿವಾಸ, ಸರಿತಾ ರೆಡ್‌ ಕ್ರಾಸ್ ಹಾಗೂ ಎನ್.ಎಸ್.ಎಸ್. ಸಂಚಾಲಕರಾದ ಡಾ.ರಾಘವೇಂದ್ರ ಹಾಗೂ ಕಾಲೇಜಿನ ಎಲ್ಲಾ ಅಧ್ಯಾಪಕರು, ಕಚೇರಿ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪೋಟೋ ಕ್ಯಾಪ್ಶನ್: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಯಂ ಪ್ರೇರಿತವಾಗಿ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.

Continue Reading

Hassan

ಮಹಿಳೆ ಮೇಲೆ ಹ*ಲ್ಲೆ : ವ್ಯಕ್ತಿ ಬಂಧನ

Published

on

ಬೇಲೂರು: ಪಟ್ಟಣದ ಗುರಪ್ಪಗೌಡ ರಸ್ತೆಯಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ವಿರುದ್ಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಗುರಪ್ಪಗೌಡ ರಸ್ತೆಯ ನಿವಾಸಿ ಗಿರಿಜಾ (29) ಅವರು ನೀಡಿದ ದೂರಿನ ಮೇರೆಗೆ ಸ್ವಾಮಿ ಅಲಿಯಾಸ್ ಪ್ರದೀಪ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸೆ.24ರಂದು ರಾತ್ರಿ ಸುಮಾರು 9.30ರ ವೇಳೆಯಲ್ಲಿ ಘಟನೆ ನಡೆದಿದ್ದು, ಹಲ್ಲೆಯಿಂದ ಗಿರಿಜಾ ಅವರಿಗೆ ಗಂಭೀರ ಗಾಯವಾಗಿದ್ದು, ಅವರ ಪತಿ ಬಸವರಾಜು (32) ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಬೇಲೂರು ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ.270/2026ರಂತೆ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದೆ.

ಘಟನೆ ಕುರಿತು ಬೇಲೂರು ಸಿಪಿಐ ರೇವಣ್ಣ ಮಾತನಾಡಿ, ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಘಟನೆಯ ಸಂಪೂರ್ಣ ಮಾಹಿತಿ ಹಾಗೂ ಸಾಕ್ಷ್ಯಗಳನ್ನು ಕಲೆಹಾಕಲಾಗುತ್ತಿದ್ದು, ತನಿಖೆಯ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Continue Reading

Hassan

ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಅನುಮತಿ ಇಲ್ಲದೆ ಡಿಜೆ ಬಳಕೆ: 15 ಮಂದಿ ವಿರುದ್ಧ 4 ಎಫ್‌ಐಆರ್

Published

on

ಹಾಸನ: ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಅನುಮತಿ ಇಲ್ಲದಿದ್ದರೂ ಡಿಜೆ ಬಳಸಿದ ಆರೋಪದ ಹಿನ್ನೆಲೆಯಲ್ಲಿ 1ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಹಾಸನ ನಗರದ ಸಾಹಿತ್ಯ ಪರಿಷತ್ ಭವನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಗಣಪತಿಯ ವಿಸರ್ಜನಾ ಮೆರವಣಿಗೆ ಸೆ.23ರಂದು ನಡೆದಿತ್ತು. ಈ ವೇಳೆ ಅನುಮತಿ ಇಲ್ಲದೆ ನಾಲ್ಕು ಡಿಜೆಗಳನ್ನು ಬಳಸಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.5 ಮಂದಿ ವಿರುದ್ಧ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಒಟ್ಟು ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ.


ಡಿಜೆ ಬಳಕೆಯಿಂದ ಶಬ್ದ ಮಾಲಿನ್ಯ ಉಂಟಾಗಿ ಸಾರ್ವಜನಿಕರಿಗೆ ಮಾನಸಿಕ ಕಿರಿಕಿರಿ ಉಂಟಾಗಿದೆ ಎಂಬ ಆರೋಪದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಹಾಸನ ನಗರ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ಗಳಾದ ಪ್ರಿಯಾಂಕ, ಸರೋಜಾಬಾಯಿ ಹಾಗೂ ಕಾನ್‌ಸ್ಟೆಬಲ್‌ಗಳಾದ ಹರೀಶ್ ಮತ್ತು ಲತೇಶ್ ನೀಡಿದ ಪ್ರತ್ಯೇಕ ದೂರುಗಳ ಆಧಾರದ ಮೇಲೆ ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ.

ಪ್ರಕರಣದಲ್ಲಿ ದಯಾನಂದ, ಅಭಿಷೇಕ್, ವಿಕ್ಕಿ, ಲೋಕಿ, ದಿನೇಶ್‌ಸಿಂಗ್, ಅನುಪ, ವಿಕಾಸ್, ಶರತ್, ಮಂಜು, ಚಂದನ್, ಮಹಿಪಾಲ್, ನವೀನ, ಚರಣ, ಮಧು ಹಾಗೂ ಪವನ್ ವಿರುದ್ಧ ಪ್ರಕರಣ ದಾಖಲಾಗಿದೆ.

ಇವರ ಪೈಕಿ ದಯಾನಂದ, ಅಭಿಷೇಕ್, ವಿಕ್ಕಿ, ಲೋಕಿ, ದಿನೇಶ್‌ಸಿಂಗ್, ಅನುಪ, ವಿಕಾಸ್, ಶರತ್, ಮಂಜು, ಚಂದನ್ ಹಾಗೂ ಮಹಿಪಾಲ್ ವಿರುದ್ಧ ನಾಲ್ಕೂ ಪ್ರಕರಣಗಳಲ್ಲಿ ಆರೋಪ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

Trending

error: Content is protected !!