Connect with us

Mysore

ಸ್ವಚ್ಚ ಭಾರತ್ ಅಭಿಯಾನದ ಸ್ವಚ್ಚತಾ ಕಾರ್ಯಕ್ರಮ

Published

on

ಮೈಸೂರು : ಸ್ವಚ್ಚ ಭಾರತ್ ಅಭಿಯಾನದ ಅಂಗವಾಗಿ ನಗರದ ಪೊಲೀಸ್ ಬಡಾವಣೆಯಲ್ಲಿ ಭಾನುವಾರ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

ಕರ್ನಾಟಕ ಮೃಗಾಲಯ ಪ್ರಾಧಿಕಾರ ಹಾಗೂ ರಮ್ಮನಹಳ್ಳಿ ಪಟ್ಟಣ ಪಂಚಾಯತ್ ಸಹಯೋಗದಲ್ಲಿ ಪೊಲೀಸ್ ಬಡಾವಣೆಯ ಎರಡನೇ ಹಂತದಲ್ಲಿರುವ (ಸರ್ದಾರ್ ವಲ್ಲಭಭಾಯ್ ಪಟೇಲ್ ನಗರ) ತಿಪ್ಪಯ್ಯನ ಕೆರೆ ಸುತ್ತಲಿನ ಪ್ರದೇಶ ವ್ಯಾಪ್ತಿಯಲ್ಲಿ ಭಾನುವಾರ ನಡೆದ ಸ್ವಚ್ಚತಾ ಕಾರ್ಯದಲ್ಲಿ ಬಡಾವಣೆಯ ‌ನಿವಾಸಿಗಳು ಹಾಗೂ ಪೌರಕಾರ್ಮಿಕರು ಪಾಲ್ಗೊಂಡಿದ್ದರು.

ಸ್ವಚ್ಚತಾ ಕಾರ್ಯ ಆರಂಭಕ್ಕೂ ಮುನ್ನ ಸ್ವಚ್ಚತೆಯಿಂದ ಮನೆ, ಮನ, ಪರಿಸರ ಹಾಗೂ ದೇಶಕ್ಕಾಗುವ ಲಾಭದ ಬಗ್ಗೆ ಸಾರ್ವಜನಿಕವಾಗಿ ಅರಿವು ಮೂಡಿಸಲಾಯಿತಲ್ಲದೆ, ಸದಾ ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಮೈಸೂರಿನ ಪ್ರಮುಖ ಹಾಗೂ ಅತಿ ದೊಡ್ಡ ಕೆರೆಗಳ ಪೈಕಿ ತಿಪ್ಪಯ್ಯನ ಕೆರೆ ಕೂಡ ಒಂದಾಗಿದ್ದು, ಇದನ್ನು ಮುಂದಿನ ತಲೆಮಾರಿಗೆ ಜತನದಿಂದ ಕಾಪಾಡಬೇಕಿದೆ. ಮೃಗಾಲಯ ಪ್ರಾಧಿಕಾರ ತನ್ನ ಇತಿಮಿತಿಯಲ್ಲಿ ಕೆರೆ ಸಂರಕ್ಷಣೆ ಮಾಡಬಹುದು. ಆದರೆ, ಇದನ್ನು ಸಂರಕ್ಷಿಸಬೇಕಾದ ಹೊಣೆ ಸ್ಥಳೀಯ ನಾಗರಿಕರ ಜವಾಬ್ದಾರಿಯಾಗಿದೆ ಎಂಬ ವಿಚಾರವನ್ನು ಮನದಟ್ಟು ಮಾಡಿಕೊಡಲಾಯಿತು.

Continue Reading
Click to comment

Leave a Reply

Your email address will not be published. Required fields are marked *

Mysore

ವಚನಗಳು ಮನುಷ್ಯನ ಆದರ್ಶ ಬದುಕಿಗೆ ದಾರಿದೀಪವಾಗಿವೆ: ಅರಳಿ ನಾಗರಾಜ್

Published

on

ವರದಿ: ಚನ್ನಬಸವಣ್ಣ

ತಿ.ನರಸೀಪುರ: ವಚನಗಳು ಮನುಷ್ಯನ ಆದರ್ಶ ಬದುಕಿಗೆ ದಾರಿದೀಪವಾಗಿವೆ ಎಂದು ನಿವೃತ್ತ ನ್ಯಾಯಾಧೀಶ ಅರಳಿ ನಾಗರಾಜ್ ಹೇಳಿದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಮೈಸೂರು,ತಾಲೂಕು ಶರಣ ಸಾಹಿತ್ಯ ಪರಿಷತ್ತು ತಿ.ನರಸೀಪುರ ಹಾಗೂ ಗ್ರಾಮ ವಿದ್ಯೋದಯ ಸಂಘ ಇವರ ಸಹಯೋಗದಲ್ಲಿ ಶನಿವಾರ ವಿದ್ಯೋದಯ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ದತ್ತಿ ಉಪನ್ಯಾಸ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಹೆತ್ತ ತಂದೆ ತಾಯಿಯರು,ವಿದ್ಯೆ ಕಲಿಸಿದ ಗುರುಗಳು ಸರಿಯಾದ ಮಾರ್ಗದರ್ಶನ ನೀಡುತ್ತಾರೋ ಗೊತ್ತಿಲ್ಲ,ಆದರೆ ವಚನಗಳು ಉತ್ತಮ,ಆದರ್ಶ ಬದುಕಿಗೆ ದಾರಿ ಮಾಡಿಕೊಡುವುದರಿಂದ ವಚನಗಳನ್ನು ಪ್ರತಿಯೊಬ್ಬರು ಕಲಿತು ಸಂಧರ್ಭ ಬಂದಾಗ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಮಕ್ಕಳು ಸಂಸ್ಕಾರವಂತರಾಗಬೇಕು, ತಂದೆ– ತಾಯಿ, ಗುರು ಹಿರಿಯರನ್ನು ಗೌರವಿಸಬೇಕು,.ಬಸವಣ್ಣ ತಮ್ಮ ವಚನಗಳ ಸಂದೇಶಗಳಲ್ಲಿ ಬಹಿರಂಗ ಶುದ್ಧಿಗೆ ನೀಡಿದಷ್ಟೇ ಪ್ರಾಧಾನ್ಯತೆಯನ್ನು ಅಂತರಂಗ ಶುದ್ಧಿಗೂ ನೀಡಿದ್ದರು. ವಚನಗಳ ಆದರ್ಶಗಳನ್ನು ಜನರು ಮೈಗೂಡಿಸಿಕೊಳ್ಳುವ ಮೂಲಕ ಸಾತ್ವಿಕ ಬದುಕು ಕಟ್ಟಿಕೊಳ್ಳಬಹುದಾಗಿದೆ ಎಂದು ಸಲಹೆ ನೀಡಿದರು

ಸಂಸ್ಕಾರದಿಂದ ಬದುಕು ಸಾರ್ಥಕವಾಗುತ್ತದೆ. ಆಧುನಿಕತೆಯ ಭರಾಟೆಯಲ್ಲಿ ಕಳೆದು ಹೋಗುತ್ತಿರುವ ಇಂದಿನ ಪೀಳಿಗೆಯವರಿಗೆ ಸಂಸ್ಕಾರ ಅಗತ್ಯವಿದೆ. ಈ ನಿಟ್ಟಿನಲ್ಲಿ ತಾಯಂದಿರ ಪಾತ್ರ ಮಹತ್ತರವಾಗಿದೆ. ಜೀವನದ ನಿಜ ಸತ್ಯ, ಅಂಕು-ಡೊಂಕುಗಳನ್ನು ತಿದ್ದಿ ಹೇಳುವುದು ಹಿರಿಯರ ಕೆಲಸ. ಅದನ್ನು ಪಾಲಿಸುವುದು, ಆಚರಣೆಗೆ ತರುವುದು ಕಿರಿಯರ ಜವಾಬ್ದಾರಿ ಎಂದು ಹೇಳಿದರು.

ಖೋ ಖೋ ವಿಶ್ವ ಕಪ್ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ತೋರಿದ ಚೈತ್ರಾರನ್ನು ಸನ್ಮಾನಿಸಿ ಮಾತನಾಡಿದ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ‌ ಅಧ್ಯಕ್ಷ ಹೆಳವರ ಹುಂಡಿ ಸಿದ್ದಪ್ಪ ಮಾತನಾಡಿ ಬಸವಾದಿ ಶರಣರು ತಮ್ಮ ವಚನ ಸಾಹಿತ್ಯದಲ್ಲಿ ಜನಸಾಮಾನ್ಯರಿಗೆ ಅರ್ಥವಾಗುವ ಭಾಷೆಯನ್ನು ಕೊಟ್ಟು ಕನ್ನಡ ಭಾಷೆಯ ಹಿರಿಮೆ ಗರಿಮೆ ಹೆಚ್ಚಿಸಿದರು. ಶರಣರು ತಮ್ಮ ವಚನಗಳ ಮೂಲಕ ಸರಳವಾಗಿ ಜೀವನಮೌಲ್ಯ, ವೈಚಾರಿಕ ಬದುಕು, ಮೌಢ್ಯಗಳ ಧಿಕ್ಕಾರವನ್ನು ಹರಡಿದರು ಎಂದರು.

ಕೇಂದ್ರ ಸರ್ಕಾರ ಅರ್ಜುನ, ರಾಜ್ಯ ಏಕಲವ್ಯ ಪ್ರಶಸ್ತಿ ನೀಡಲಿ: ಖೋ ಖೋ ವಿಶ್ವ ಕಪ್ ಪಂದ್ಯಾವಳಿಯಲ್ಲಿ ರಾಷ್ಟ್ರದ ಹಿರಿಮೆಯನ್ನು ಪ್ರಪಂಚಕ್ಕೆ ಕೊಂಡೊಯ್ದು ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ನಮ್ಮ ತಾಲೂಕಿನ ಹೆಮ್ಮೆಯ ಕುವರಿ ಚೈತ್ರಾರವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.ಗಳನ್ನು ನೀಡಿರುವುದು ಸರಿಯಲ್ಲ. ಮಹಾರಾಷ್ಟ್ರ ಸರ್ಕಾರವು ಅಲ್ಲಿನ ಕ್ರೀಡಾ ಪಟುಗಳಿಗೆ 2.25 ಕೋಟಿ ರೂ,ಹಾಗು ಮದ್ಯ ಪ್ರದೇಶ ಸರ್ಕಾರ 1.50 ಕೋಟಿ ರೂ.ಗಳನ್ನು ಕೊಟ್ಟು ಸಾಧನೆಗೆ ಪ್ರೋತ್ಸಾಹ ನೀಡಿದೆ.ಆದರೆ ರಾಜ್ಯ ಸರ್ಕಾರ ಮಾತ್ರ ಕ್ರೀಡಾಪಟುಗಳಿಗೆ ಉತ್ತೇಜನ ನೀಡುತ್ತಿಲ್ಲ.ಇಂತಹ ವ್ಯವಸ್ಥೆಯಲ್ಲಿ‌ ಕ್ರೀಡಾಪಟುಗಳು ಸಾಧನೆ ಮಾಡುವುದಾದರು ಹೇಗೆ ಎಂದು ಬೇಸರ ವ್ಯಕ್ತ ಪಡಿಸಿದ ಸಿದ್ದಪ್ಪ ಕೇಂದ್ರ ಸರ್ಕಾರ ಅರ್ಜುನ ಪ್ರಶಸ್ತಿ ಹಾಗು ರಾಜ್ಯ ಸರ್ಕಾರ ನೀಡುವ ಅಭಿಮನ್ಯು ಪ್ರಶಸ್ತಿಯನ್ನು ಚೈತ್ರಾ ರಿಗೆ ನೀಡಿ ಗೌರವಿಸಬೇಕೆಂದು ಒತ್ತಾಯಿಸಿದರು.

ಶಿಕ್ಷಣ ಊಟದಂತೆ, ಕ್ರೀಡೆ ಉಪ್ಪಿನ ಕಾಯಿ ಇದ್ದಂತೆ: ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಶ್ವ ಕಪ್ ಖೋ ಖೋ ಆಟಗಾರ್ತಿ ಬಿ.ಚೈತ್ರಾ ಶಿಕ್ಷಣ ಊಟ ಇದ್ದಂತೆ,ಕ್ರೀಡೆ ಉಪ್ಪಿನ ಕಾಯಿ ಇದ್ದಂತೆ,ಹಾಗಾಗಿ ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಹೆಚ್ಚಿನ ರೀತಿಯಲ್ಲಿ ವಿದ್ಯಾರ್ಥಿಗಳು ತೊಡಗಿಕೊಂಡು ಯಶಸ್ಸು ಸಾಧಿಸಬೇಕು. ಬರೀ ಕ್ರೀಡೆ ಮಾತ್ರವೇ ಅಲ್ಲದೇ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣ ಮಾಡಬೇಕಿದೆ ಎಂದರು.

ಜೀವನದಲ್ಲಿ ಸೋಲು ಗೆಲುವು ಎಂಬುದು ಆಟದ ತರಹ,ಗೆದ್ದವರಿಗೆ ಮತ್ತೆ ಸೋಲಬಾರದೆಂಬ ಛಲವಿದ್ದರೆ, ಸೋತವರಿಗೆ ಗೆಲ್ಲಲೇ ಬೇಕೆಂಬ ಛಲವಿರುತ್ತೆ. ನಾನೂ‌ ಕೂಡ ಸೋತು ಸೋತು ನಂತರ ಗೆದ್ದು ವಿಶ್ವಕಪ್ ನಲ್ಲಿ ಯಶಸ್ಸು ಗಳಿಸಿದ್ದೇನೆ ಸತತ ಪ್ರಯತ್ನದಿಂದ ಗೆಲುವು ಸಾಧ್ಯ ಎಂದರು.

ವಾಟಾಳು ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮಿಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು.

ಇದೇ ವೇಳೆ ಪಿ ಕಾರ್ಡ್ ಬ್ಯಾಂಕಿನ ನಿರ್ದೇಶಕರಾಗಿ ಚುನಾವಣೆಯಲ್ಲಿ ಆಯ್ಕೆಯಾದ ಮಾಡ್ರಹಳ್ಳಿ ಎಂ.ಶಿವಮೂರ್ತಿ, ಎನ್.ಎನ್.ಮಹದೇವಸ್ವಾಮಿ ಹಾಗೂ ಮಹೇಶ್ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯೋದಯ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಪಿ. ಮಹದೇವಸ್ವಾಮಿ, ಶರಣ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಚಂದ್ರಶೇಖರ್,ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೋಮಶೇಖರಪ್ಪ, ಉಪಾಧ್ಯಕ್ಷ ಮಹದೇವಸ್ವಾಮಿ,ವೀರಶೈವ ಮಹಾಸಭಾದ ಅಧ್ಯಕ್ಷ ಎಸ್ ಎಂ ಆರ್ ಪ್ರಕಾಶ್,ಕ್ಷೇತ್ರ ಬಿಜೆಪಿ ಅಧ್ಯಕ್ಷ ಸತ್ಯಪ್ಪ, ಬೆನಕನಹಳ್ಳಿ ಪ್ರಭುಸ್ವಾಮಿ, ಮೂಗೂರು ಕುಮಾರಸ್ವಾಮಿ, ರಾಜಶೇಖರ್, ಅಡಿಟರ್ ಮಂಜುನಾಥ್, ಬಸವ ಬಳಗದ ಅಧ್ಯಕ್ಷ ಪರಮೇಶ್ ಪಟೇಲ್, ಸೀಹಳ್ಳಿ ಗುರುಮೂರ್ತಿ,ಮೆಡಿಕಲ್ ಕುಮಾರ್, ಕೆಇಬಿ ನಿವೃತ್ತ ನೌಕರ ಸಿದ್ದಲಿಂಗಸ್ವಾಮಿ ಮತ್ತಿತರಿದ್ದರು.

Continue Reading

Mysore

65 ಕೋಟಿ ವೆಚ್ಚದಲ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಾಣ: ಶಾಸಕ ಡಿ.ರವಿಶಂಕರ್ ಭರವಸೆ

Published

on

ವರದಿ: ಎಸ್ ಬಿ ಹರೀಶ್ ಸಾಲಿಗ್ರಾಮ

ಸಾಲಿಗ್ರಾಮ: 65 ಕೋಟಿ  ರೂಗಳ ವೆಚ್ಚದಲ್ಲಿ ತಾಲೂಕು ಸರ್ಕಾರಿ ಆಸ್ಪತ್ರೆ ಮಾಡಲಾಗುವುದು ಎಂದು ಶಾಸಕ ಡಿ. ರವಿಶಂಕರ್ ಹೇಳಿದರು.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಡಯಾಲಿಸಿಸ್ ಘಟಕವನ್ನು ಉದ್ಘಾಟಿಸಿ ಮಾತನಾಡಿ, ಇದು ಕೇಂದ್ರ ಬಿಂದುವಾಗಿರುವ ಕಾರಣ ಮಹಿಳೆಯರೇ ಜಾಸ್ತಿ ಆಸ್ಪತ್ರೆಗೆ ಬರುತ್ತಾರೆ. ಹಾಗಾಗಿ ಅನುಕೂಲಕ್ಕಾಗಿ ಹೆಚ್ಚಾಗಿ ವೈದ್ಯರುಗಳ ನೇಮಕ ಮಾಡಿ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ತೆರೆಯಲಾಗುವುದು. ಹಲವು ರೀತಿಯ ಸಮಸ್ಯೆಗಳು ಈ ಆಸ್ಪತ್ರೆಯಲ್ಲಿ ಇವೆ, ಅರೋಗ್ಯ ಸಚಿವರಿಗೆ ಮನವಿ ಮಾಡಿ ಸಮಸ್ಯೆ ಬಗ್ಗೆ ಹರಿಸಲಾಗುವುದು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ಕರೆದು ಈ ನೂತನ ತಾಲೂಕಿಗೆ ಬೇಕಾಗಿರುವ, ತಾಲೂಕು ಪಂಚಾಯತಿ ಕಟ್ಟಡ, ಮಿನಿ ವಿಧಾನಸೌಧ ಸೇರಿದಂತೆ ಎಲ್ಲಾ ರೀತಿಯ ಕಟ್ಟಡಗಳನ್ನು ನಿರ್ಮಿಸಲು ಸೂಚನೆ ನೀಡಿದ್ದಾರೆ. ಈ ತಾಲೂಕಿನ  ಸಂಪೂರ್ಣ ಜವಾಬ್ದಾರಿ ನನ್ನ ಮೇಲೆ ಇದೆ ನಾನು ಹಂತ ಹಂತವಾಗಿ ಏನೇ ಸಮಸ್ಯೆಗಳಿದ್ದರೂ ಬಗೆಹರಿಸುತ್ತೇನೆ ಇದು ಶತಸಿದ್ದ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಡಿಹೆಚ್‌ಓ ಡಾ.ಕುಮಾರಸ್ವಾಮಿ, ಟಿಹೆಚ್‌ಓ ಡಾ.ನಟರಾಜ್, ತಹಶೀಲ್ದಾರ್ ನರಗುಂದ, ತಾಲೂಕು ಪಂಚಾಯತಿ ಇಓ ರವಿಕುಮಾರ್, ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಶೋಕ್, ತಜ್ಞ ವೈದ್ಯ ಡಾ.ಮಂಜುನಾಥ್, ಡಾ.ಕೀರ್ತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಉದಯಶಂಕರ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಎಲ್.ಎಂ.ಸಣ್ಣಪ್ಪ, ಮಂಜೇಗೌಡ, ಬಸವರಾಜು, ಅಶ್ವಿನಿ, ದಿನೇಶ್, ಗೋಪಾಲ, ಗ್ರಾ.ಪಂ ಅಧ್ಯಕ್ಷ ಸುವರ್ಣ, ಉಪಾಧ್ಯಕ್ಷ ಶಶಿಕಲಾ, ಸಿಡಿಸಿ ಅಧ್ಯಕ್ಷರಾದ ಅಪ್ಪು ಶ್ರೀನಿವಾಸ್, ಎಸ್.ಎಮ್.ಪರೀಕ್ಷಿತ್, ಸಂತೋಷ, ಸಯ್ಯದ್, ಸೌಕತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Continue Reading

Mysore

ಲೋಕಾಯುಕ್ತ ಬಲೆಗೆ ಬಿದ್ದ ಬೆಟ್ಟದಪುರ ಸಬ್ ಇನ್ಸ್ಪೆಕ್ಟರ್ ಶಿವಶಂಕರ್

Published

on

ವರದಿ: ಬೆಕ್ಕರೆ ಸತೀಶ್ ಆರಾಧ್ಯ

ಪಿರಿಯಾಪಟ್ಟಣ: ತಾಲೂಕಿನ ಬೆಟ್ಟದಪುರ ಆರಕ್ಷಕ ಠಾಣೆ ಸಬ್ ಇನ್ಸ್ಪೆಕ್ಟರ್ ಶಿವಶಂಕರ್ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ.

ಪ್ರಕರಣವೊಂದನ್ನ ಇತ್ಯರ್ಥಗೊಳಿಸುವ ಸಲುವಾಗಿ ಜಪ್ತಿ ಮಾಡಿದ ಮೊಬೈಲ್, ಕೊಲೆ ಯತ್ನ ಪ್ರಕರಣಗಳಲ್ಲಿ ಒಬ್ಬರಿಗೆ ಅನುಕೂಲ ಮಾಡಿಕೊಡಲು ವ್ಯಕ್ತಿಯೊರ್ವರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದು ಈ ಸಂಬಂಧ ಹೈಕೋರ್ಟ್ ವಕೀಲರೊಬ್ಬರು ಲೋಕಾಯುಕ್ತರಿಗೆ ನೀಡಿದ ದೂರಿನ ಮೇರೆಗೆ ಶುಕ್ರವಾರ ರಾತ್ರಿ ವೇಳೆ ಪೊಲೀಸ್ ಠಾಣೆಯಲ್ಲಿ 80 ಸಾವಿರ ಹಣ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ತಡರಾತ್ರಿವರೆಗೂ ಪರಿಶೀಲನೆ ನಡೆಸಿದ್ದಾರೆ.

ದಾಳಿಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಮಹಾಂತೇಶ್, ಇನ್ಸ್ಪೆಕ್ಟರ್ ಗಳಾದ  ಅಶೋಕ್ ಕುಮಾರ್ ಹಾಗೂ ರವಿಕುಮಾರ್ ಮತ್ತು ಸಿಬ್ಬಂದಿ ಇದ್ದರು.

Continue Reading

Trending

error: Content is protected !!