Connect with us

Kodagu

ಎಸ್‌ಡಿಟಿಯು ಪದಾಧಿಕಾರಿಗಳ ಪದಗ್ರಹಣ, ಕಾರ್ಮಿಕ ಮಾಹಿತಿ ಶಿಬಿರ

Published

on

ನೂತನ ಅಧ್ಯಕ್ಷರಾಗಿ ಅಣ್ಣ ಷರೀಫ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ರಜಾಕ್ ಪುನರ್ ಆಯ್ಕೆ

ಮಡಿಕೇರಿ: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ಕೊಡಗು ಜಿಲ್ಲಾಧ್ಯಕ್ಷರಾಗಿ ಕೆ.ಹೆಚ್.ಅಣ್ಣ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ರಜಾಕ್ ಎಂ.ಎ ಆಯ್ಕೆಯಾಗಿದ್ದಾರೆ.

ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಮಿಕ ಮಾಹಿತಿ ಶಿಬಿರ ಕುಶಾಲನಗರದ ಇಂದಿರಾ ಬಡಾವಣೆಯ ಮಲಯಾಳಿ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಿತು.


ಉಪಾಧ್ಯಕ್ಷರಾಗಿ ಇಬ್ರಾಹಿಂ ಹೊಸ ತೋಟ, ಕಾರ್ಯದರ್ಶಿಯಾಗಿ ಆಲಿ ಕೂಡಿಗೆ, ಸದಸ್ಯರಾಗಿ ಅಲ್ತಾಫ್ ಕೊಂಡಂಗೇರಿ, ಮೊಹಿದ್ದೀನ್ ಮಡಿಕೇರಿ, ಇಲ್ಯಾಸ್ ಕುಶಾಲನಗರ, ಹಸೀನಾ ಮಡಿಕೇರಿ ಹಾಗೂ ಅಜೀಜ್ ಕುಶಾಲನಗರ ಆಯ್ಕೆಯಾದರು.

ನೂತನ ಜಿಲ್ಲಾ ಸಮಿತಿಯ ಆಯ್ಕೆ ಪ್ರಕ್ರಿಯೆ ನಡೆಸಿ ಮಾತನಾಡಿದ ಎಸ್‌ಡಿಟಿಯು ರಾಜ್ಯ ಸಂಚಾಲಕ ಅಥಾವುಲ್ಲ ಜೋಕಟ್ಟೆ ಕಾರ್ಮಿಕರ ಹೋರಾಟ ಮತ್ತು ತ್ಯಾಗದ ಫಲವಾಗಿ ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿಗಾಗಿ ಹಲವು ಯೋಜನೆ ಹಾಗೂ ಕಾನೂನು ವಿವಿಧ ದೇಶಗಳಲ್ಲಿ ಅಸ್ತಿತ್ವಕ್ಕೆ ಬಂತು. ಭಾರತದಲ್ಲಿ ಸ್ವಾತಂತ್ರ್ಯ ನಂತರ ಹಲವು ರಾಜಕೀಯ ಪಕ್ಷಗಳು ವಿವಿಧ ಕಾರ್ಮಿಕ ಯೂನಿಯನ್ ಗಳನ್ನು ಹುಟ್ಟು ಹಾಕಿದವು. ಆದರೆ ಇಂದಿಗೂ ಕಾರ್ಮಿಕರು ವಿವಿಧ ರೀತಿಯ ಶೋ?ಣೆಗಳನ್ನು ಅನುಭವಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.


ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯವನ್ನು ಮನಗಂಡು ದುಡಿಯುವ ಕೈಗಳಿಗೆ ನ್ಯಾಯ ಎಂಬ ಧ್ಯೇಯದೊಂದಿಗೆ ಕಳೆದ 15 ವರ್ಷಗಳ ಹಿಂದೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನನ್ನು ಅಸ್ತಿತ್ವಕ್ಕೆ ತರಲಾಯಿತು ಎಂದರು.

ಕೊಡಗು ಜಿಲ್ಲಾ ಕಾರ್ಮಿಕ ಅಧಿಕಾರಿ ಕಾವೇರಿ ಅವರು ಕಾರ್ಮಿಕ ಇಲಾಖೆಯಿಂದ ನೀಡಲಾಗುವ ಸೌಲಭ್ಯಗಳ ಬಗ್ಗೆ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರಿಗೆ ಸಮಗ್ರ ಮಾಹಿತಿ ನೀಡಿದರು.

ಎಸ್‌ಡಿಟಿಯು ರಾಜ್ಯ ಸಹ ಸಂಚಾಲಕ ಖಾದರ್ ಪರಂಗಿಪೇಟೆ, ರಾಜ್ಯ ಸಮಿತಿ ಸದಸ್ಯ ಅಬೂಬಕ್ಕರ್ ಮದ್ದ, ಮಡಿಕೇರಿ ನಗರಸಭಾ ಸದಸ್ಯರಾದ ಅಮೀನ್ ಮೊಹಿಸಿನ್, ಎಂ.ಕೆ.ಮನ್ಸೂರ್ ಆಲಿ, ಕುಶಾಲನಗರದ ಮಾಜಿ ಸೈನಿಕ ಮೊಹಮ್ಮದ್ ನಬಿ, ಗುತ್ತಿಗೆದಾರ ಝಕ್ರಿಯ, ಕಾರ್ಮಿಕರ ಮತ್ತು ಚಾಲಕರ ಸಂಘದ ಜಿಲ್ಲಾಧ್ಯಕ್ಷ ಕುಮಾರ ಮತ್ತಿತರರು ಉಪಸ್ಥಿತರಿದ್ದರು.

ಕಳೆದ ಮೂರು ವರ್ಷಗಳ ಅವಧಿಯ ವರದಿಯನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಜಾಕ್ ಎಂ.ಎ ಸಭೆಗೆ ಮಂಡಿಸಿದರು.

Continue Reading

Kodagu

ಜನಸ್ನೇಹಿ ಶಾಸಕರ ಕುರಿತು ಅಪಸ್ವರ ಸರಿಯಲ್ಲ : ಎಂ.ಎ.ಉಸ್ಮಾನ್ ಅಸಮಾಧಾನ

Published

on

ಮಡಿಕೇರಿ: ಮಡಿಕೇರಿ ಕ್ಷೇತ್ರದ ಜನಸ್ನೇಹಿ ಶಾಸಕ ಡಾ.ಮಂತರ್ ಗೌಡ ಅವರು ಇತ್ತೀಚೆಗೆ ಹಿಂದೂ ಶೋಭಾಯಾತ್ರೆಯಲ್ಲಿ ಪಾಲ್ಗೊಂಡ ವಿಚಾರವನ್ನು ಕೆಲವರು ದೊಡ್ಡದು ಮಾಡಿ ಕ್ಷುಲ್ಲಕ ರಾಜಕಾರಣ ಮಾಡುತ್ತಿರುವುದು ಸರಿಯಲ್ಲವೆಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಎ.ಉಸ್ಮಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿವಿಧತೆಯಲ್ಲಿ ಏಕತೆ ಮತ್ತು ಸಮಾನತೆಯ ಆಶಯಕ್ಕೆ ಬದ್ಧರಾಗಿ ಕಾರ್ಯನಿರ್ವಹಿಸುತ್ತಿರುವ ಶಾಸಕ ಡಾ.ಮಂತರ್ ಗೌಡ ಅವರು ಸರ್ವಧರ್ಮೀಯರ ನೆಚ್ಚಿನ ಜನಪ್ರತಿನಿಧಿಯಾಗಿದ್ದಾರೆ. ಶಾಸಕರಾದವರು ಒಂದು ಧರ್ಮ ಅಥವಾ ಒಂದು ಸಮುದಾಯಕ್ಕೆ ಸೀಮಿತವಾಗಿರುವುದಿಲ್ಲ. ಅವರು ಪ್ರತಿಯೊಬ್ಬರನ್ನೂ ಪ್ರತಿನಿಧಿಸಬೇಕಾಗುತ್ತದೆ, ಆ ಕೆಲಸವನ್ನು ಮಡಿಕೇರಿ ಶಾಸಕರು ಉತ್ತಮ ರೀತಿಯಲ್ಲಿ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಓಲೈಕೆ ರಾಜಕಾರಣಕ್ಕಾಗಿ ತಮ್ಮತನವನ್ನು ಬಿಟ್ಟು ಮುಖವಾಡದ ರಾಜಕಾರಣವನ್ನು ಡಾ.ಮಂತರ್ ಗೌಡ ಅವರು ಎಂದಿಗೂ ಮಾಡಿಲ್ಲ. ಅಭಿವೃದ್ಧಿ ಕಾರ್ಯಗಳಲ್ಲಿ ಕೂಡ ತಾರತಮ್ಯ ಮಾಡದೆ ಪ್ರತಿಯೊಂದು ಜನಾಂಗಕ್ಕೂ ಮತ್ತು ಪ್ರತಿಯೊಂದು ಕ್ಷೇತ್ರಕ್ಕೂ ಸಮಾನ ಆದ್ಯತೆ ನೀಡುತ್ತಿದ್ದಾರೆ. ಮಡಿಕೇರಿ ಶಾಸಕರ ಸರಳತೆ ಮತ್ತು ಘನತೆಯ ಕುರಿತು ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಅಪಾರ ಅಭಿಮಾನ ಹೊಂದಿದ್ದಾರೆ. ಇದನ್ನು ಸಹಿಸದ ಕೆಲವು ಪಟ್ಟಭದ್ರಹಿತಾಸಕ್ತಿಗಳು ಮೊಸರನ್ನದಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಇಬ್ಬರು ಕಾಂಗ್ರೆಸ್ ಶಾಸಕರ ಗೆಲುವಿನ ನಂತರ ಕೊಡಗು ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಎಲ್ಲರೂ ನೆಮ್ಮದಿಯಿಂದ ಬದುಕುತ್ತಿದ್ದಾರೆ, ಎಲ್ಲಾ ಧರ್ಮದವರೂ ಒಗ್ಗೂಡಿ ಮುನ್ನಡೆಯುತ್ತಿದ್ದಾರೆ. ಇದಕ್ಕೆ ಶಾಸಕರುಗಳ ಇಚ್ಛಾಶಕ್ತಿ ಮತ್ತು ಸರ್ವಧರ್ಮೀಯರೊಂದಿಗೆ ಸಮಾನ ಮನೋಭಾವದಲ್ಲಿ ಬೆರೆಯುತ್ತಿರುವುದೇ ಕಾರಣವಾಗಿದೆ. ಕುಶಾಲನಗರದ ಮುಖ್ಯ ಬೀದಿಯಲ್ಲಿ ಹಿಂದೂ ಶೋಭಾಯಾತ್ರೆ ಸಾಗುತ್ತಿದ್ದಾಗ ಅದೇ ಮಾರ್ಗದಲ್ಲಿ ಪ್ರಯಾಣ ಬೆಳೆಸುತ್ತಿದ್ದ ಶಾಸಕ ಡಾ.ಮಂತರ್ ಗೌಡ ಅವರು ಕಾರಿನಿಂದಿಳಿದು ಶುಭ ಹಾರೈಸಿ, ಹಿರಿಯರಿಂದ ಆಶೀರ್ವಾದ ಪಡೆದಿರುವುದು ಕೊಡಗಿನ ಸಂಸ್ಕೃತಿಯ ಒಂದು ಭಾಗವಾಗಿದೆ.

ಶೋಭಾಯಾತ್ರೆಯಲ್ಲಿ ಹೆಜ್ಜೆ ಹಾಕಿದ ತಕ್ಷಣ ಶಾಸಕರು ದೊಡ್ಡ ತಪ್ಪು ಮಾಡಿದ್ದಾರೆ ಎಂದು ಪ್ರತಿಬಿಂಬಿಸುವ ಮೂಲಕ ಸಣ್ಣತನವನ್ನು ಕೆಲವರು ಪ್ರದರ್ಶಿಸುತ್ತಿರುವುದು ಸರಿಯಲ್ಲ ಮತ್ತು ರಾಜಕೀಯ ಲಾಭ, ನಷ್ಟದ ಕುರಿತು ಲೆಕ್ಕಾಚಾರವೂ ಅರ್ಥಹೀನವೆಂದು ಎಂ.ಎ.ಉಸ್ಮಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಪಾರ ಅಭಿವೃದ್ಧಿ ಕಾರ್ಯ ಮತ್ತು ಜನಸ್ನೇಹಿ ಗುಣದ ಮೂಲಕ ಸಮಾಜದಲ್ಲಿ ಸಾಮರಸ್ಯವನ್ನು ಮೂಡಿಸುತ್ತಾ ಮುನ್ನಡೆಯುತ್ತಿರುವ ಡಾ.ಮಂತರ್ ಗೌಡ ಅವರ ಕೈಬಲ ಪಡಿಸುವ ಕಾರ್ಯವನ್ನು ಪ್ರತಿಯೊಬ್ಬರು ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.

Continue Reading

Kodagu

ಫೆ. 7ಕ್ಕೆ ಕೆಎಸ್‌ಆರ್‌ಟಿಸಿ ನೂತನ ಬಸ್ಸು ನಿಲ್ದಾಣ ಉದ್ಘಾಟನೆ

Published

on

ಶನಿವಾರಸಂತೆ: ಶನಿವಾರಸಂತೆಯಲ್ಲಿ ಕೆಎಸ್ಆರ್ಟಿಸಿ ಸಂಸ್ಥೆಯ ಪುತ್ತೂರು ವಿಭಾಗದ ವತಿಯಿಂದ 1 ಕೋಟಿ 5 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಬಸ್ಸು ನಿಲ್ದಾಣದ ಉದ್ಘಾಟನಾ ಸಮಾರಂಭ ಫೆ.7 ರಂದು ಬೆಳಗ್ಗೆ 11.30 ಗಂಟೆಗೆ ನಡೆಯಲಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಬಸ್ಸು ನಿಲ್ದಾಣವನ್ನು ಕೊಡಗು ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಉದ್ಘಾಟಿಸುತ್ತಾರೆ. ಮಡಿಕೇರಿ ಶಾಸಕ ಡಾ.ಮಂಥರ್ ಗೌಡ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಾರಿಗೆ ಮತ್ತು ಮುಜರಾಯ ಖಾತೆ ಸಚಿವ ರಾಮಲಿಂಗರೆಡ್ಡಿ, ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಮತ್ತು ಗುಬ್ಬಿ ಕ್ಷೇತ್ರ ಶಾಸಕ ಎಸ್.ಆರ್.ಶ್ರೀನಿವಾಸ್, ಮುಖ್ಯ ಮಂತ್ರಿಯವರ ಕಾನೂನು ಸಲಹೆಗಾರ ಮತ್ತು ವೀರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮೈಸೂರು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯ ಸಭಾ ಸದಸ್ಯ ಅಜಯ್ ಮಾಕನ್, ಎಂಎಲ್‌ಸಿಗಳಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಬೋಜೇಗೌಡ, ಡಾ.ಧನುಂಜಯ್ ಸರ್ಜಿ, ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್.ಅರುಣ್ ಮಾಚಯ್ಯ, ಶನಿವಾರಸಂತೆ ಗ್ರಾ.ಪಂ.ಅಧ್ಯಕ್ಷೆ ಗೀತ ಹರೀಶ್, ಗ್ಯಾರೆಂಟಿ ಯೋಜನೆಗಳ ಅನುಸ್ಠಾನ ಸಮಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಜಿ.ಎಂ.ಕಾಂತರಾಜ್, ಸಾರಿಗೆ ಇಲಾಖೆ ಆಡಳಿತ ಅಧಿಕಾರಿ ಡಾ.ಎನ್.ವಿ.ಪ್ರಸಾದ್, ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ಮತ್ತು ಜಾಗೃತ ವಿಭಾಗದ ನಿರ್ದೇಶಕ ಡಾ.ಕೆ.ನಂದಿನಿದೇವಿ, ಕೊಡಗು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಮುಂತಾದವರು ಭಾಗವಹಿಸುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

Kodagu

ಸಿಪಿಎಲ್ ಲೋಗೋ ಅನಾವರಣ: ಕ್ರಿಶ್ಚಿಯನ್ ಪ್ರೀಮಿಯರ್ ಲೀಗ್‌ಗೆ ಅಧಿಕೃತ ಚಾಲನೆ

Published

on

ಸಿದ್ದಾಪುರ: ಸಿಜೆ ಬಿಲ್ಡ್‌ವೇರ್ ಪ್ರಸ್ತುತಿಯಲ್ಲಿ ಐಪಿಎಲ್ ಮಾದರಿಯಲ್ಲಿ ಆಯೋಜಿಸಲಾಗಿರುವ ಕ್ರಿಶ್ಚಿಯನ್ ಪ್ರೀಮಿಯರ್ ಲೀಗ್ (ಸಿಪಿಎಲ್) ಆವೃತ್ತಿ–1ರ ಅಧಿಕೃತ ಲೋಗೋ ಅನಾವರಣ ಕಾರ್ಯಕ್ರಮವು ನೆಲ್ಯಹುದಿಕೇರಿಯ ಕೋಫಿಯಾ ರೆಸ್ಟೋರೆಂಟ್‌ನಲ್ಲಿ ಬುಧವಾರ ಸಂಜೆ ನಡೆಯಿತು.
ಲೋಗೋ ಅನಾವರಣದ ಮೂಲಕ ಟೂರ್ನಿಗೆ ಅಧಿಕೃತ ಚಾಲನೆ ನೀಡಲಾಯಿತು.

ಏಪ್ರಿಲ್ 10 11 ಮತ್ತು 12ರಂದು ಸಿದ್ದಾಪುರದ ಪ್ರೌಢಶಾಲಾ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಕೊಡಗು ರೋಮನ್ ಕ್ಯಾಥೋಲಿಕ್ ಕ್ರಿಶ್ಚಿಯನ್ ಯುವಕರಿಗೆ ಕ್ರೀಡಾ ವೇದಿಕೆ ಒದಗಿಸುವ ಉದ್ದೇಶದಿಂದ ಈ ಲೀಗ್ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಸಿಜೆ ಬಿಲ್ಡ್‌ವೇರ್‌ನ ವ್ಯವಸ್ಥಾಪಕ ಪ್ರಿನ್ಸ್, ಸಂಸ್ಥೆ ಸದಾ ಕ್ರೀಡೆ, ಶಿಸ್ತು ಮತ್ತು ಸೌಹಾರ್ದತೆಯನ್ನು ಉತ್ತೇಜಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಯುವ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸಿಪಿಎಲ್‌ಗೆ ಬೆಂಬಲ ನೀಡಿದೆ ಎಂದು ತಿಳಿಸಿದರು. ಕ್ರಿಕೆಟ್ ಮೂಲಕ ಸಮುದಾಯದಲ್ಲಿ ಸ್ನೇಹಭಾವ, ಒಗ್ಗಟ್ಟು ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಬೆಳೆಸುವುದು ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ ಎಂದರು.

ವಿರಾಜಪೇಟೆ ತಾಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಾನ್ಸನ್ ಮಾತನಾಡಿ, ಕ್ರಿಶ್ಚಿಯನ್ ಯುವಕರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಈ ಕೊಡಗು ರೋಮನ್ ಕ್ಯಾಥೋಲಿಕ್ ಕ್ರಿಶ್ಚಿಯನ್  ಪ್ರೀಮಿಯರ್ ಲೀಗ್ ಕ್ರೀಡಾ ಸ್ಪೂರ್ತಿಯ ಜೊತೆಗೆ ಸಹೋದರತ್ವ ಮತ್ತು ಶಿಸ್ತು ಬೆಳೆಸುವ ಉತ್ತಮ ಪ್ರಯತ್ನವಾಗಿದೆ ಎಂದು ಶ್ಲಾಘಿಸಿದರು.

ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಆಯುಕ್ತ ಜಿಮ್ಮಿ ಸಿಕ್ವೇರಾ ಮಾತನಾಡಿ, ಕ್ರೀಡೆಯ ಮೂಲಕ ಯುವಕರನ್ನು ಸಮಾಜಮುಖಿಯಾಗಿ ರೂಪಿಸುವ ಉದ್ದೇಶದಿಂದ ಆರಂಭವಾದ ಸಿಪಿಎಲ್ ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡ ಮಟ್ಟದಲ್ಲಿ ಬೆಳೆಯಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ CB9 ಉಪಾಧ್ಯಕ್ಷ ಟೋಮಿ ಥಾಮಸ್, ಸಿಪಿಎಲ್ ಅಧ್ಯಕ್ಷ ಜಿಜೋ, ಸಂತ ಜೋಸೆಫ್ ಸೇವಾ ಸಂಘ ಉಪಾಧ್ಯಕ್ಷ ಜೋಷಿ, ಅನುಭವ್ ಕನ್‌ಸ್ಟ್ರಕ್ಷನ್ ವಿಜೇಶ್, ಸೂರ್ಯವರ್ಷಿ ಅಸೋಸಿಯೇಟ್ಸ್ ಜಾನ್ಸನ್, ಟಿ.ಪಿ. ಕನ್‌ಸ್ಟ್ರಕ್ಷನ್ ಅನೀಶ್, ಸಂತ ಜೋಸೆಫ್ ಸೇವಾ ಸಂಘ ಸದಸ್ಯರಾದ ಶಾಜಿ, ವಿನ್ಸಿ, ಜಾನಿ, ರೀಗಲ್ ಹಾಗೂ ಎಸ್‌ಜೆಸಿ ಕ್ರಿಕೆಟರ್ಸ್‌ನ ಯುವಕರು ಉಪಸ್ಥಿತರಿದ್ದರು

Continue Reading

Trending

error: Content is protected !!