Connect with us

Mysore

ಮಡಿವಾಳ ಮಾಚಿದೇವರಂತಹ ತತ್ವ , ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು: ಟಿ.ಜಿ. ಸುರೇಶ್ ಆಚಾರ್

Published

on

ತಿ.ನರಸೀಪುರ: ಸಂತ, ಸಮಾಜ ಸುಧಾರಕ ಶ್ರೀ ವೀರ ಮಡಿವಾಳ ಮಾಚಿದೇವರ ಜಯಂತಿಯನ್ನು ತಾಲೂಕು ಆಡಳಿತ ಮತ್ತು ತಾಲೂಕು ವೀರ ಮಡಿವಾಳ ಮಾಚಿದೇವರ ಸಂಘದ ಸಹಯೋಗದಲ್ಲಿ ಆಚರಿಸಲಾಯಿತು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರದಲ್ಲಿ ಶ್ರೀ ಮಾಚಿ ದೇವರ ಭಾವಚಿತ್ರಕ್ಕೆ ತಹಸೀಲ್ದಾರ್ ಟಿ.ಜಿ. ಸುರೇಶ್ ಆಚಾರ್ ಪುಷ್ಪಾರ್ಚನೆ ಮಾಡಿ ನಂತರ ಮಾತನಾಡಿದ ಅವರು, ಶರಣ ಜಯಂತಿ ಆಚರಣೆ ಕೇವಲ ನಾಮಕಾವಸ್ಥೆ ಆಗಬಾರದು. ಮಹನೀಯ ತತ್ವ ಮತ್ತು ಆದರ್ಶಗಳನ್ನು ನಾವು ಅಳವಡಿಸಿಕೊಳ್ಳುವ ಮುಖೇನ ಅವರ ವ್ಯಕ್ತಿತ್ವಕ್ಕೆ ಗೌರವ ಸಲ್ಲಿಸುವಂತಾಗಬೇಕು ಎಂದರು.

ತಳ ಸಮುದಾಯಗಳ ಹಿಂದುಳಿಯುವಿಕೆ ಶಿಕ್ಷಣದ ಕೊರತೆ ಒಂದು ಪ್ರಮುಖ ಅಂಶವಾಗಿದೆ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಸಮುದಾಯದ ಜನರು ತಮ್ಮ ಮಕ್ಕಳಿಗೆ ಕೇವಲ ಕುಲಕಸುಬನ್ನು ಮಾತ್ರ ಕಲಿಸದೆ ಮೌಲ್ಯಯುತ ಶಿಕ್ಷಣ ಕೊಡಿಸುವ ಕಡೆ ಹೆಚ್ಚು ಗಮನ ಕೇಂದ್ರೀಕರಿಸಬೇಕು. ಆಗಮಾತ್ರ ಸಮುದಾಯದ ಏಳಿಗೆ ಸಾಧ್ಯವಾಗುತ್ತದೆ ಎಂದರು.


ತಾಲೂಕು ಶ್ರೀ ವೀರ ಮಡಿವಾಳ ಮಾಚಿದೇವರ ಸಂಘದ ಅಧ್ಯಕ್ಷ ಬಿ.ಎಸ್.ರವಿ ಮಾತನಾಡಿ, ನಮ್ಮ ಸಮುದಾಯ ರಾಜಕೀಯ ಸ್ಥಾನಮಾನ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಲು ಎಲ್ಲರು ಸಂಘಟನೆಗೊಳ್ಳಬೇಕು. ಫೆ.20ರಂದು ಬನ್ನೂರು ಹೋಬಳಿ ಘಟಕದ ವತಿಯಿಂದ ಮಡಿವಾಳ ಮಾಚಿದೇವರ ಜಯಂತಿ ಆಚರಣೆಯನ್ನು ಬನ್ನೂರಿನ ಫುಟ್ ಬಾಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಹಲವು ಗಣ್ಯರು, ವಿವಿಧ ಮಠಗಳ ಶ್ರೀಗಳು ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಗ್ರೇಡ್ -2 ತಹಸೀಲ್ದಾರ್ ರಾಜಾಕಾಂತ್, ಸವಿತಾ ಸಮಾಜದ ಮುಖಂಡ ಸಿದ್ದೇಶ್, ತಾಲೂಕು ವೀರ ಮಡಿವಾಳ ಮಾಚಿದೇವರ ಸಂಘದ ಗೌರವಾಧ್ಯಕ್ಷ ನಿಂಗರಾಜ್,ಉಪಾಧ್ಯಕ್ಷ ಪ್ರಭುಲಿಂಗಶೆಟ್ಟಿ,ಪ್ರಧಾನ ಕಾರ್ಯದರ್ಶಿ ಕೆ.ಮಹದೇವಶೆಟ್ಟಿ, ಸಹಕಾರ್ಯದರ್ಶಿ ಚಿದರವಳ್ಳಿ ರಂಗಸ್ವಾಮಿ, ಖಜಾಂಚಿ ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಮ್ಮ,ಮಹಿಳಾ ಪ್ರಧಾನ ಕಾರ್ಯದರ್ಶಿ ಮಹದೇವಮ್ಮ,ಸಂಚಾಲಕರಾದ ಮಾಯಿಗಯ್ಯ,ನಿಂಗಶೆಟ್ಟಿ, ನಿಂಗರಾಜು,ಮೋಹನ್ ಕುಮಾರ್,
ಸಂಚಾಲಕಿ ಶಿಲ್ಪಾ, ಬನ್ನೂರು ಹೋಬಳಿ ಅಧ್ಯಕ್ಷೆ ಗೀತಾ, ಪ್ರಧಾನ ಕಾರ್ಯದರ್ಶಿ ಮಂಗಳಾ, ಮುಖಂಡರಾದ ಮಹದೇವ್, ಮೋಹನ್,ಮಹೇಶ್, ಸಿದ್ದರಾಜು, ಕುಮಾರ್, ಕಾಂತರಾಜ್,ಮಹೇಶ್ ಕುಮಾರ್, ಬಸವರಾಜು,ಕುಮಾರ್, ಹನುಮಂತ್,ಚೆಲುವಯ್ಯ ಇತರರು ಹಾಜರಿದ್ದರು.

Continue Reading

Mysore

ರಾಜ್ಯ ಸರ್ಕಾರ ಮನರೇಗಾ ಬಗ್ಗೆ ಅಪಪ್ರಚಾರ ಮಾಡುತ್ತಿದೆ: ಸದಾನಂದ

Published

on

ತಿ.ನರಸೀಪುರ: ಅಭಿವೃದ್ಧಿ ಭಾರತ ಕನಸು ಹೊತ್ತು ಪುನರ್ ನಾಮಕರಣಗೊಂಡಿರುವ ಜಿ ರಾಮ್ ಜಿ ಯೋಜನೆಗೆ ರಾಜ್ಯ ಸರ್ಕಾರ ತನ್ನ ಪಾಲಿನ ಅನುದಾನ ಹೊಂದಿಸಲಾಗದೆ ಯೋಜನೆ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಮಾಜಿ ಜಿ.ಪಂ. ಸದಸ್ಯ ಮತ್ತು ಎಂಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಸದಾನಂದ ಆರೋಪಿಸಿದರು.

ಪಟ್ಟಣದ ಕಬಿನಿ ಅತಿಥಿಗೃಹದಲ್ಲಿ ಕರೆಯಲಾಗಿದ್ದ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಅವರು, ಮನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವ ಸದುದ್ದೇಶದಿಂದ ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಿ ರಾಮ್ ಜಿ (ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್) ಎಂದು ಮರುನಾಮಕರಣ ಮಾಡಿದೆ.

ಯೋಜನೆಯ ಒಟ್ಟು ಅನುದಾನದ ಪೈಕಿ ಕೇಂದ್ರ ಸರ್ಕಾರ ಶೇ.60 ಮತ್ತು ರಾಜ್ಯ ಸರ್ಕಾರ ಶೇ.40 ಅನುದಾನವನ್ನು ನೀಡುವಂತೆ ಹಂಚಿಕೆ ಮಾಡಿದ್ದು, ರಾಜ್ಯ ಸರ್ಕಾರ ತನ್ನ ಪಾಲಿನ ಅನುದಾನವನ್ನು ಜನರ ಕೂಲಿಗಾಗಿ ವ್ಯಯಿಸಲಾಗದೆ ಯೋಜನೆಯ ಬಗ್ಗೆ ಜನರಿಗೆ ತಪ್ಪು ಮಾಹಿತಿ ನೀಡಿ ಅಪ್ರಚಾರ ನಡೆಸುತ್ತಿದೆ ಎಂದು ಕಿಡಿಕಾರಿದರು.

ಈ ಹಿಂದೆ ಇದೇ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಗ್ರಾಮೀಣ ಜನರಿಗೆ ವರ್ಷಕ್ಕೆ 100 ದಿನಗಳು ಕೂಲಿ ನೀಡಲಾಗುತ್ತಿತ್ತು. ಆದರೆ, ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ ಜನರಿಗೆ ಪ್ರತಿ ವರ್ಷಕ್ಕೆ 125 ದಿನಗಳ ಕೂಲಿ ನೀಡುವುದರ ಜತೆಗೆ ಕೂಲಿ ಮೊತ್ತವನ್ನು ಕೂಡ ಹೆಚ್ಚಳ ಮಾಡಿದೆ. ಇದನ್ನು ಸಹಿಸಲಾಗದ ರಾಜ್ಯ ಸರ್ಕಾರ ಜನರ ದಿಕ್ಕು ತಪ್ಪಿಸುತ್ತಿದೆ ಎಂದರು.

ರಾಜ್ಯ ಕಾಂಗ್ರೇಸ್ ಸರ್ಕಾರ ತನ್ನ ರಾಜಕೀಯ ಗುಲಾಮಗಿರಿತನವನ್ನು ಮುಂದುವರೆಸುತ್ತಿದ್ದು, ಕಾಂಗ್ರೇಸ್ ಅಧಿಕಾರದಲ್ಲಿದ್ದ ಅವಧಿಯಲ್ಲಿ ಜಾರಿಗೆ ಬಂದ ಎಲ್ಲ ಯೋಜನೆಗಳಿಗೆ ನೆಹರು ಮನೆತನದ ಹೆಸರುಗಳನ್ನು ಬಿಟ್ಟರೆ ಬೇರಾವ ಹೆಸರುಗಳನ್ನು ನಾಮಕರಣ ಮಾಡಿಲ್ಲ, ರಾಜೀವ್ ಗಾಂಧಿ ವಿಶ್ವ ವಿದ್ಯಾಲಯ, ಇಂದಿರಾ ಗಾಂಧಿ ವಿಶ್ವವಿದ್ಯಾಲಯ, ರಾಜೀವ್ ಗಾಂಧಿ ವಸತಿ ಯೋಜನೆ, ಇಂದಿರಾ ಕ್ಯಾಂಟೀನ್ ಯೋಜನೆಗಳು ಇದಕ್ಕೆ ತಾಜಾ ಉದಾಹರಣೆ. ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯಡಿ ಜಾರಿಗೆ ಬಂದ ಯೋಜನೆಗೆ ಇಂದಿರಾ ಕ್ಯಾಂಟೀನ್ ಹೆಸರಿಡುವ ಬದಲು ಕಾಂಗ್ರೆಸ್‌ ಪಕ್ಷಕ್ಕಾಗಿ ಪ್ರಮಾಣಿಕವಾಗಿ ದುಡಿದ ಪಿ.ವಿ.ನರಸಿಂಹ ರಾವ್, ಲಾಲ್ ಬಹದ್ದೂರ್‌ ಶಾಸ್ತ್ರಿ, ಡಿ.ದೇವರಾಜ ಅರಸು ಇಲ್ಲವೇ ಅಂಬೇಡ್ಕರ್ ಅವರ ಹೆಸರನ್ನು ಇಡಬಹುದಿತ್ತು. ಆದರೆ, ಈ ಯೋಜನೆಗೆ ಇಂದಿರಾ ಕ್ಯಾಂಟೀನ್ ಎಂದು ನಾಮಕರಣ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ರಾಜಕೀಯ ಗುಲಾಮಗಿರಿ ಮನಸ್ಥಿತಿಯನ್ನು ಜಗತ್ತಿಗೆ ತೋರ್ಪಡಿಸಿದ್ದಾರೆ ಎಂದು ಕಿಡಿಕಾರಿದರು.

ಪತ್ರಿಕಾಗೋಷ್ಠಿಯಲ್ಲಿ ಜಿ.ಪಂ ಮಾಜಿ ಸದಸ್ಯವೆಂಕಟರಮಣಸ್ವಾಮಿ, ಮಂಡಲ ಅಧ್ಯಕ್ಷ ಶಿವಕುಮಾರ್ (ಸತ್ಯಪ್ಪ ) ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದಯಾನಂದ ಪಟೇಲ್, ಪುರಸಭೆ ಮಾಜಿ ಸದಸ್ಯ ಎಸ್.ಕೆ.ಕಿರಣ್, ಟೌನ್ ಅಧ್ಯಕ್ಷ ನಂಜುಂಡಸ್ವಾಮಿ, ಡಾ.ಮಲ್ಲಿಕಾರ್ಜುನ ಸ್ವಾಮಿ, ಕಿರಗಸೂರು ಮಹದೇವಸ್ವಾಮಿ, ರಾಜಶೇಖರ್, ಪುಟ್ಟಸ್ವಾಮಿ ಇತರರು ಹಾಜರಿದ್ದರು.

Continue Reading

Mysore

ಮೈಸೂರು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿ ಮಾಡಲು ಅಧಿಕಾರಿಗಳು ಶ್ರಮಿಸಿ: ಡಾ: ಪಿ. ಶಿವರಾಜ್

Published

on

ಮೈಸೂರು:  ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿ ಮಾಡಲು ಅಧಿಕಾರಿಗಳು ಶ್ರಮಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ: ಪಿ.ಶಿವರಾಜ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಾಲ್ಯ ವಿವಾಹ ಸಮಾಜದ ಪಿಡುಗಾಗಿದ್ದು, ಬಾಲ್ಯ ವಿವಾಹವನ್ನು ತಡೆಗಟ್ಟಲು ಸಾರ್ವಜನಿಕರು ಅಧಿಕಾರಿಗಳೊಂದಿಗೆ ಕೈಜೋಡಿಸಬೇಕು. ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣ ಅಧಿಕಾರಿಗಳ ಗಮನಕ್ಕೆ ತಂದು ತಡೆಗಟ್ಟಬೇಕು ಎಂದರು.

ಫೆ.11 ರಂದು ಕಾರ್ಯಾಗಾರ:
2025 26 ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಚಲಿತ ಮಕ್ಕಳ ಸಮಸ್ಯೆಗಳನ್ನು ಕುರಿತು ಒಂದು ದಿನದ ತರಬೇತಿ ಕಾರ್ಯಗಾರವನ್ನು ಫೆಬ್ರವರಿ 11 ರಂದು ಬಾಲ್ಯ ವಿವಾಹ ನಿಷೇಧಾಧಿಕಾರಿಗಳಿಗೆ ಆಯೋಜಿಸಲಾಗುವುದು ಎಂದರು.
ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿರುತ್ತದೆ. ಎಲ್ಲಾ ಇಲಾಖೆಗಳಿಂದ ಸರ್ಕಾರದಿಂದ ನೇಮಿಸಲ್ಪಟ್ಟಿರುವ ಎಲ್ಲಾ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಗಾರಕ್ಕೆ ಹಾಜರಾಗಿ ತರಬೇತಿಯನ್ನು ಪಡೆದು ಮೈಸೂರು ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಳ್ಳುವುದರ ಮೂಲಕ ಕಾರ್ಯಗಾರವನ್ನು ಯಶಸ್ವಿಗೊಳಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಎಸ್. ಮಂಜು ಮಾತನಾಡಿ, 18 ವರ್ಷದ ಒಳಗಿನ ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಆಗಿದ್ದು, ಪ್ರತಿಯೊಬ್ಬ ಅಧಿಕಾರಿಯು ಮಕ್ಕಳ ಹಕ್ಕುಗಳನ್ನ ರಕ್ಷಣೆ ಮಾಡುವುದರ ಮೂಲಕ ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪ್ರತಿಯೊಬ್ಬರು ಸಹಕರಿಸಬೇಕೆಂದರು.


ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ‌ ಎನ್. ಟಿ.ಯೋಗೇಶ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯಕ್ರಮ ಸಂಯೋಜನಾಧಿಕಾರಿ ವಿಜಯ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಉದಯ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ರಾಘವೇಂದ್ರ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರವಿಚಂದ್ರ ಸದಸ್ಯ ಮಹದೇವ್ ಕೋಟೆ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದರು.

Continue Reading

Mysore

ಡ್ರಗ್ಸ್ ಲ್ಯಾಬ್ ಪತ್ತೆ: ಕೈಗಾರಿಕೆಗಳ ತಪಾಸಣೆಗೆ 14 ತಂಡ ರಚನೆ

Published

on

ಮೈಸೂರು: ಮೈಸೂರಿನಲ್ಲಿ ಡ್ರಗ್ಸ್ ಪ್ರಯೋಗಾಲಯ ಇದ್ದ ಬಗ್ಗೆ ರಾಷ್ಟಿçÃಯ ಮಾದಕ ವಸ್ತು ನಿಯಂತ್ರಣಾ ದಳ(ಎನ್‌ಸಿಬಿ) ಖಚಿತ ಪಡಿಸಿದ ಬೆನ್ನಲ್ಲೇ ಮೈಸೂರು ನಗರ ಪೊಲೀಸರು ಎಚ್ಚೆತ್ತುಕೊಂಡಿದ್ದು, 14 ತಂಡಗಳನ್ನು ರಚಿಸಿಕೊಂಡು ಕೈಗಾರಿಕಾ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಹಾಗೂ ಡಿಸಿಪಿ ಸುಂದರ್ ರಾಜ್ ಅವರ ನೇತೃತ್ವದಲ್ಲಿ ಎಸಿಪಿ ರವಿಪ್ರಸಾದ್ ಉಸ್ತುವಾರಿಯಲ್ಲಿ ಇನ್ಸ್‌ಪೆಕ್ಟರ್‌ ಹಾಗೂ ಸಬ್‌ಇನ್ಸ್‌ಪೆಕ್ಟರ್‌ ಗಳನ್ನು ಒಳಗೊಂಡ 14 ತಂಡಗಳನ್ನು ರಚಿಸಲಾಗಿದೆ. ಸದರಿ ತಂಡಗಳು ಈಗಾಗಲೇ ಮೂರು ದಿನಗಳಿಂದಲೂ ಕೈಗಾರಿಕಾ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ರಸಾಯನಿಕ ಪದಾರ್ಥಗಳ ಆಧಾರಿತ ಕೈಗಾರಿಕೆಗಳು, ಉತ್ಪಾದನಾ ಘಟಕಗಳು, ಕೈಗಾರಿಕಾ ಶೆಡ್‌ಗಳನ್ನು ಗುರಿಯಾಗಿಸಿಕೊಂಡು ಪರಿಶೀಲನೆ ನಡೆಸಲಾಗುತ್ತಿದೆ. ಹೆಬ್ಬಾಳು, ಹೂಟಗಳ್ಳಿ, ಕೂರ್ಗಳ್ಳಿ, ಮೇಟಗಳ್ಳಿ, ಬನ್ನಿಮಂಟಪ, ಹಿನಕಲ್ ಕೈಗಾರಿಕಾ ಪ್ರದೇಶಗಳಲ್ಲಿ ತಪಾಸಣೆ ತೀವ್ರಗೊಳಿಸಿದ್ದಾರೆ. ಮೈಸೂರು ನಗರ, ಮೈಸೂರು ಜಿಲ್ಲೆ ಹಾಗೂ ಮಂಡ್ಯ ಜಿಲ್ಲೆಯ ವ್ಯಾಪ್ತಿಯ 250ಕ್ಕೂ ಹೆಚ್ಚು ಕೈಗಾರಿಕೆಗಳಲ್ಲಿ ತಪಾಸಣೆ ನಡೆಸಲಾಗಿದೆ.

ಕಳೆದ ವರ್ಷ ಜುಲೈ ತಿಂಗಳಲ್ಲಿ ನಗರದ ರಿಂಗ್ ರಸ್ತೆಯ ಸಿದ್ದಿಕಿ ನಗರ ಸಮೀಪ ಮುಂಬೈ ಪೊಲೀಸರ ವಿಶೇಷ ತಂಡ ದಾಳಿ ನಡೆಸಿ ಎಂಡಿಎಂಎ ಮಾದಕ ವಸ್ತು ತಯಾರಿಕಾ ಘಟಕವನ್ನು ಪತ್ತೆ ಹಚ್ಚಿದ್ದರು. ಇತ್ತೀಚೆಗೆ ನವದೆಹಲಿಯ ಎನ್‌ಸಿಬಿ ತಂಡದವರು ಹೆಬ್ಬಾಳು ಕೈಗಾರಿಕಾ ಪ್ರದೇಶದ ಪಿನಾಯಿಲ್ ತಯಾರಿಕಾ ಘಟಕದಲ್ಲಿ ಡ್ರಗ್ಸ್ ಪ್ರಯೋಗಾಲಯ ಇರುವುದನ್ನು ಕಂಡು ಹಿಡಿದಿದ್ದರು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Continue Reading

Trending

error: Content is protected !!