Location
ರಾಮೇಶ್ವರ ಕಫೆಯಲ್ಲಿ ಸ್ಪೋಟ: ತನಿಖೆ ತೀವ್ರವಾಗಿ ನಡೆಯುತ್ತಿದೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಖಚಿತ: ಮುಖ್ಯಮಂತ್ರಿ ಸಿದ್ದರಾಮಯ್ಯ*

*ರಾಮೇಶ್ವರ ಕಫೆಯಲ್ಲಿ ಸ್ಪೋಟ: ತನಿಖೆ ತೀವ್ರವಾಗಿ ನಡೆಯುತ್ತಿದೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಖಚಿತ: ಮುಖ್ಯಮಂತ್ರಿ ಸಿದ್ದರಾಮಯ್ಯ*
ಮೈಸೂರು, ಮಾರ್ಚ್ 01: ಬೆಂಗಳೂರಿನ ರಾಮೇಶ್ವರ ಕಫೆಯಲ್ಲಿ ನಡೆದಿರುವ ಸ್ಪೋಟ ಘಟನೆಯ ತನಿಖೆ ತೀವ್ರವಾಗಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಪ್ರಾಥಮಿಕ ತನಿಖೆಯ ಪ್ರಕಾರ ಅದು ಸಣ್ಣ ಪ್ರಮಾಣದ ಸುಧಾರಿತ ಸ್ಪೋಟಕವಾಗಿತ್ತು ಎಂದು ತಿಳಿದುಬಂದಿದೆ, ಪೂರ್ಣ ವರದಿಗಾಗಿ ಕಾಯುತ್ತಿದ್ದೇನೆ ಎಂದು ತಿಳಿಸಿದರು.
ಕ್ಯಾಶಿಯರ್ ಬಳಿ ಟೋಕನ್ ಪಡೆದು ಅಲ್ಲಿ ತಿಂಡಿ ತಿಂದಿರುವ ವ್ಯಕ್ತಿ, ಬ್ಯಾಗ್ ಇಟ್ಟು ಬಂದಿದ್ದಾನೆ ಎಂಬ ಮಾಹಿತಿ ದೊರೆತಿದೆ ಎಂದರು. ಸುಮಾರು ಎಂಟು ಜನರಿಗೆ ಗಾಯಗಳಾಗಿವೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಸಿ ಟಿವಿ ಕ್ಯಾಮರಾ ಪರೀಕ್ಷಿಸಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಗೃಹ ಸಚಿವರಿಗೆ ಸ್ಥಳಕ್ಕೆ ಭೇಟಿ ನೀಡುವಂತೆ ತಿಳಿಸಲಾಗಿದೆ. ಇನ್ನು ಸ್ವಲ್ಪ ಹೊತ್ತಿನಲ್ಲಿಯೇ ಸ್ಪಷ್ಟ ಮಾಹಿತಿ ದೊರೆಯಲಿದೆ ಎಂದರು.
*ಕಠಿಣ ಕ್ರಮ*
ರಾಜ್ಯದಲ್ಲಿ ಇಂಥದ್ದು ನಡೆಯಬಾರದಿತ್ತು. ಮಂಗಳೂರಿನಲ್ಲಿ ಆಗಿದ್ದು ಬಿಟ್ಟರೆ ಪುನ: ಇಂಥ ಘಟನೆ ಸಂಭವಿಸಿದೆ. ಯಾರು ಇದನ್ನು ಮಾಡಿದ್ದಾರೆ ಎಂದು ಪತ್ತೆ ಹಚ್ಚಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಲಲಾಗುವುದು ಎಂದರು.
*ರಾಜಕಾರಣ ಮಾಡಬಾರದು*
ವಿರೋಧ ಪಕ್ಷಗಳು ಈ ವಿಷಯಗಳ ಬಗ್ಗೆ ರಾಜಕಾರಣ ಮಾಡಬಾರದು. ಎಲ್ಲರೂ ಸಹಕರಿಸಬೇಕು ಎಂದರು. ಪೋಲಿಸರೊಂದಿಗೆ ಮಾತನಾಡಿದ್ದು, ಸದ್ಯದಲ್ಲಿಯೇ ಪೂರ್ಣ ಚಿತ್ರಣ ಸಿಗಲಿದೆ. ವಿಚಾರಣೆ ತ್ವರಿತಗತಿಯಲ್ಲಿ ನಡೆದಿದೆ ಎಂದರು ಹೇಳಿದರು.
*ದೇಶದಲ್ಲಿ ಶೇ 5 ರಷ್ಟು ಮಾತ್ರ ಬಡತನ:ಪರಿಶೀಲನೆ ಅಗತ್ಯ*
ನೀತಿ ಆಯೋಗದವರು ನೀಡಿರುವ ವರದಿ ಪ್ರಕಾರ ಕಳೆದ 10 ವರ್ಷಗಳಲ್ಲಿ ಬಡತನ ಶೇ 5ರಷ್ಟು ಮಾತ್ರ ಇದೆ ಎಂದು ಹೇಳಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ ಅದನ್ನು ಪರಿಶೀಲಿಸಬೇಕಿದೆ. ಅದು ಸಮೀಕ್ಷೆಯ ವರದಿಯಲ್ಲ. ಅವರು ಹೇಳಿರುವುದು ಸತ್ಯವೋ ಅಸತ್ಯವೋ ಎಂದು ತಿಳಿಯಬೇಕಿದೆ. ಬಡತನ 5% ಕಡಿಮೆಯಾಗಿದ್ದರೆ ಅದು ಖುಷಿ ಪಡುವ ವಿಚಾರ. ಪರಿಸ್ಥಿತಿ ನೋಡಿದರೆ ಆ ರೀತಿ ಕಾಣುವುದಿಲ್ಲ. ಬಡತನ ರೇಖೆಗಿಂತ ಕೆಳಗಿರುವ 82 ಕೋಟಿ ಕುಟುಂಬಗಳಿಗೆ ಅಕ್ಕಿ ಕೊಡಲಾಗುತ್ತಿದೆ ಎಂದರು.
*ಬಿಜೆಪಿ 50 ಕೋಟಿ ಆಮಿಷ ಒಡ್ಡುತ್ತಿದೆ :ನಮ್ಮ ಶಾಸಕರು ಆಮಿಷಕ್ಕೆ ಬಲಿಯಾಗುವುದಿಲ್ಲ*
ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶವನ್ನು ಬಿಜೆಪಿ ಗುರಿಯಾಗಿಸಿಕೊಂಡಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಬಿಜೆಪಿ ಎಂದಿಗೂ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದೇ ಇಲ್ಲ. ಆಪರೇಷನ್ ಕಮಲ ಮಾಡಿಯೇ ಬಂದಿದ್ದಾರೆ. 113 ಕ್ಕಿಂತ ಹೆಚ್ಚು ಗೆದ್ದೇ ಇಲ್ಲ. 2018 ರಲ್ಲಿ 100 ಗೆದ್ದಿದ್ದರು. ಕರ್ನಾಟಕದಲ್ಲಿಯೂ ಆಪರೇಷನ್ ಕಮಲ ಪ್ರಯತ್ನ ಮಾಡುತ್ತಾರೆ. ಆದರೆ ನಮ್ಮ ಶಾಸಕರು ಅವರ ಆಸೆ ಆಮಿಷಗಳಿಗೆ ಬಲಿಯಾಗುವುದಿಲ್ಲ. ಅವರು ಈಗ 50 ಕೋಟಿ ಆಮಿಷವೊಡ್ಡುತ್ತಿದ್ದಾರೆ ಎಂದು ತಿಳಿಸಿದರು.
—
Hassan
ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ಸುಖ ಶಾಂತಿ ಸಿಗುವ ಸ್ಥಳವೇ ದೇವಸ್ಥಾನ.ಆ ಭಾವವೇ ದೇವರು. ಶುದ್ಧ ಮನಸ್ಸು, ಅತ್ಯುತ್ತಮ ಕಾಯಕ ಸ್ವರ್ಗ ಸೃಷ್ಟಿಸುವ ಎರಡು ಮಾರ್ಗಗಳು. ಈ ದೇವಸ್ಥಾನ ಸ್ವರ್ಗಾನುಭವ ಕಲ್ಪಿಸುವ ಶಕ್ತಿ ಸ್ಥಾನ ಎಂದು ಮಾಜಿ ಶಾಸಕ ಹೆಚ್. ಕೆ ಕುಮಾರಸ್ವಾಮಿ ಹೇಳಿದರು.
ತಾಲೂಕಿನ ದೊಡ್ಡಕಣಗಾಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕವಳಿಕೆರೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿ, ಮೌಲ್ಯಯುತ ಬದುಕು ನಮ್ಮದಾಗಿಸಿಕೊಂಡು, ಸಮಾಜದೆಡೆಯಲ್ಲಿ ಅರ್ಥಪೂರ್ಣ ಹೆಜ್ಜೆ ನಮ್ಮದಾದಲ್ಲಿ ಸುಂದರ ಜೀವನ ನಮ್ಮದಾಗುವದು. ಈ ಕಾರ್ಯಸಿದ್ದಿ ಆಂಜನೇಯ ಭಕ್ತರ ಅತೀ ದೊಡ್ಡ ಶಕ್ತಿ ದೇವ ಎನ್ನುವದಕ್ಕೆ ಇಲ್ಲಿ ಕೂಡಿ, ಸಂಭ್ರಮಿಸುತ್ತಿರುವ ಅಸಂಖ್ಯಾತ ಭಕ್ತರೇ ಸಾಕ್ಷಿಯಾಗಿದ್ದು ಇಲ್ಲಿ ಜರುಗುವ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಇಲ್ಲಿಯ ಭಕ್ತರ ಉದ್ಧರಿಸಿ ನಾಡು ದೇಶ ಮತ್ತಷ್ಟು ಸಂಪನ್ನಗೊಳಿಸಲಿ ಎಂದು ಶುಭ ಹಾರೈಸಿದರು.
ಜಿಲ್ಲಾ ಬಿಜೆಪಿ ಮಹಿಳಾ ಮುಖಂಡರಾದ ಪ್ರತಿಭಾ ಮಂಜುನಾಥ್ ಮಾತನಾಡಿ, ಎಲ್ಲಿ ನಿಸ್ವಾರ್ಥತೆ ಇರುತ್ತದೋ ಅಲ್ಲಿ ಶಕ್ತಿ ಇರುತ್ತದೆ. ಆ ಶಕ್ತಿಯೇ ದೇವರು.ಕವಳಿಕೆರೆ ಗ್ರಾಮದಲ್ಲಿ ಆಂಜನೇಯ ಸ್ವಾಮಿ ಲೋಕಾರ್ಪಣೆಗೊಂಡಿರುವುದು ಇಲ್ಲಿಯ ಜನರ ಪರಿಶುದ್ಧ ಭಾವನೆಗಳ ಸಂಕೇತವಾಗಿದೆ.. ಈ ದೇವಸ್ಥಾನ ನಿರ್ಮಿಸಲು ಕಾರಣರಾದವರನ್ನು ಸ್ಮರಣೆ ಮಾಡಬೇಕು
ಶಾಸಕ ಸಿಮೆಂಟ್ ಮಂಜು ಪತ್ನಿ ಪ್ರತಿಭಾ ಮಂಜುನಾಥ್, ಕಾಂಗ್ರೆಸ್ ಮುಖಂಡ ಮುರಳಿಮೋಹನ್ ಸೇರಿದಂತೆ ತಾಲೂಕಿನ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ರೇಣುಕಧರ್ಮ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಿರಿಯಣ್ಣಗೌಡ, ಸದಸ್ಯೆ ಸುಧಾ ನಾಗೇಂದ್ರ, ತೀರ್ಥೇಶ್, ಹಿರಿಯ ಮುಖಂಡ ಪಟೇಲ್ ಹೀರೇಗೌಡ, ಮತ್ತು ದೇವಸ್ಥಾನ ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
Chamarajanagar
ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿ.ಎಂ ಘೋಷಣೆ

ಮಲೈ ಮಹದೇಶ್ವರ ಲಾಡು ಪ್ರಸಾದಕ್ಕೂ ತಿರುಪತಿ ಮಾದರಿಯಲ್ಲಿ ನಂದಿನಿ ತುಪ್ಪ ಬಳಕೆಗೆ ಸಭೆ ನಿರ್ಣಯ
ಮಲೈ ಮಹದೇಶ್ವರ ಬೆಟ್ಟ .ಏಪ್ರಿಲ್ 24: ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ಇತರೆ ನಿರ್ಣಯಗಳು…
*ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಒಂದೂವರೆ ವರ್ಷದಿಂದ ಜಾರಿ ಆಗದೇ ಇರುವುದಕ್ಕೆ ಮುಖ್ಯಮಂತ್ರಿಗಳು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರನ್ನು ತೀವ್ರವಾಗಿ ಪ್ರಶ್ನಿಸಿದರು.
*ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ ಎ.ಇ.ಇ ಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಅವರಿಗೆ ಸೂಚಿಸಿದರು.
*ಹಿಂದಿನ ಸಭೆಯ ನಿರ್ಣಯದಂತೆ ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಸಿಎಂ ತರಾಟೆಗೆ ತೆಗೆದುಕೊಂಡರು.
*ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ ಸೇರಿದ ಜಾಗದಲ್ಲಿ ನೆಲೆಸಿರುವ 13 ಕುಟುಂಬಗಳಿಗೆ ಪರ್ಯಾಯ ಸ್ಥಳ ಒದಗಿಸಿ ಸ್ಥಳಾಂತರಿಸುವ ಮತ್ತು ಉಳಿದಿರುವವರನ್ನು ಹಾಗೇ ಉಳಿಸಿ, ಹೊಸದಾಗಿ ವಾಣಿಜ್ಯ ಉದ್ದೇಶದ ನಿರ್ಮಾಣಗಳಿಗೆ ಅವಕಾಶ ಆಗದಂತೆ ಖಚಿತವಾಗಿ ತಡೆಯುವ ಬಗ್ಗೆ ಚರ್ಚೆ ನಡೆಸಲಾಯಿತು.
*ಮಲೈ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಆಗುವುದನ್ನು ಸಂಪೂರ್ಣ ತಡೆಯಬೇಕು. ಚಾಳಿ ಬಿದ್ದ ಆರೋಪಿಯೊಬ್ಬ ಗಡಿಪಾರು ಆದರೂ ಅಕ್ರಮ ಮಾರಾಟ ಮಾಡುತ್ತಿರುವುದನ್ನು ಅಧಿಕಾರಿಗಳಿಂದ ತಿಳಿದ ಸಿಎಂ ಅವರನ್ನು ತಕ್ಷಣ ಕಠಿಣ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.
*ಪ್ರಾಧಿಕಾರದಲ್ಲಿ ಕೆಲಸ ಮಾಡುವ 66 ಕಾರ್ಮಿಕ ಕುಟುಂಬಗಳಿಗೆ ತಲಾ 20 ಲಕ್ಷ ವೆಚ್ಚದಲ್ಲಿ, ಒಟ್ಟು 12-13 ಕೋಟಿ ವೆಚ್ಚದಲ್ಲಿ ಆದಷ್ಟು ಬೇಗ ನೂತನ ಮನೆ ಕಟ್ಟಿ ಕೊಡಲು ಸಭೆ ನಿರ್ಣಯ.
*ಮಲೈ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ , ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದು. ಮದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆ ನಿರ್ಣಯಿಸಿತು.
ಸಭೆಯಲ್ಲಿ ಪಶು ಸಂಗೋಪನೆ,ರೇಷ್ಮೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್,ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ,
ಸಾಲೂರು ಶ್ರೀಗಳಾದ ಶಾಂತಮಲ್ಲಿಕಾರ್ಜುನ ಸ್ವಾಮಿ, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ,ಎ.ಆರ್.ಕೃಷ್ಣ ಮೂರ್ತಿ,ಎಂ.ಆರ್.ಮಂಜುನಾಥ್,ಡಾ.ಡಿ.ತಿಮ್ಮಯ್ಯ,ಉನ್ನತ ಅಧಿಕಾರಿಗಳಾದ ಬಿ.ಬಿ.ಕಾವೇರಿ,ಜಿಲ್ಲಾಧಿಕಾರಿ ಶಿಲ್ಪಾ ನಾಗ್,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕಧಿಕಾರಿಗಳಾದ ಮೋನಾ ರೋತ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ಬಿ.ಟಿ.ಕವಿತಾ,ಪ್ರಾಧಿಕಾರದ ಸದಸ್ಯರು,ಇನ್ನಿತರ ಗಣ್ಯರು,ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Kodagu
ಉಗ್ರರ ದಾಳಿ ಖಂಡನೀಯ: ದೇಶದ ಭದ್ರತೆಗಾಗಿ ಎಲ್ಲರೂ ಒಗ್ಗಟ್ಟನ್ನು ಕಾಯ್ದುಕೊಳ್ಳಬೇಕು

ಮಡಿಕೇರಿ : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿ ೨೬ ಮಂದಿಯ ಸಾವಿಗೆ ಕಾರಣಕರ್ತರಾದ ಭಯೋತ್ಪಾದಕರ ವಿರುದ್ಧ ಕಠಿಣ ಕಾರ್ಯಾಚರಣೆ ನಡೆಸುವ ಮೂಲಕ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯ ಕೆ.ಎ.ಯಾಕುಬ್ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಮಾಯಕ ಪ್ರವಾಸಿಗರನ್ನು ಹತ್ಯೆ ಮಾಡಿರುವ ಘಟನೆ ಅತೀವ ಬೇಸರವನ್ನುಂಟು ಮಾಡಿದೆ. ಹೇಡಿತನದ ಭಯೋತ್ಪಾದಕರು ನಡೆಸಿರುವ ಹೇಯ ಕೃತ್ಯವನ್ನು ಕಟುವಾಗಿ ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.
ಉಗ್ರರ ಬೇಟೆಗಾಗಿ ಭಾರತೀಯ ಸೇನೆ ಈಗಾಗಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದು, ಇದು ಸ್ವಾಗತಾರ್ಹ ಕ್ರಮವಾಗಿದೆ. ಕೇಂದ್ರ ಸರ್ಕಾರ ಕೂಡ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಕೇಂದ್ರ ಗುಪ್ತಚರ ಇಲಾಖೆ ಕಟ್ಟೆಚ್ಚರ ವಹಿಸಬೇಕು. ದೇಶದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವ ದುಷ್ಟಶಕ್ತಿಗಳ ವಿರುದ್ಧ ಜನರು ಕೂಡ ಜಾಗೃತರಾಗಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಊಹಾಪೋಹಗಳಿಗೆ ಯಾರೂ ಕಿವಿಗೊಡಬಾರದು. ದೇಶದ ಭದ್ರತೆ ಮತ್ತು ಐಕ್ಯತೆಗಾಗಿ ಎಲ್ಲರೂ ಒಗ್ಗಟ್ಟನ್ನು ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
-
Mysore12 hours ago
ಅರಣ್ಯ ಇಲಾಖೆಯ ವಾಚರ್ ಆತ್ಮಹ*ತ್ಯೆ
-
Mysore13 hours ago
ನಂಜನಗೂಡಿನ ಸಬ್ ರಿಜಿಸ್ಟರ್ ಕಛೇರಿಗೆ ಬೀಗ: ಲೋಕಾಯುಕ್ತ ದಾಳಿ
-
State10 hours ago
ಕಾಶ್ಮೀರದ ಪೆಹಲ್ಗಾಮನಲ್ಲಿ ನಡೆದ ಉಗ್ರರ ದಾಳಿ ಖಂಡನೀಯ – ಮುಖ್ಯಮಂತ್ರಿ ಸಿದ್ದರಾಮಯ್ಯ
-
National - International6 hours ago
ಪಹಲ್ಗಾಮ್ ದಾಳಿ; ಉಗ್ರರ ಜೊತೆ ಗುಂಡಿನ ಕಾಳಗದಲ್ಲಿ ವೀರ ಯೋಧ ಹುತಾತ್ಮ
-
Kodagu22 hours ago
ಕೊಂಗಾಣದಲ್ಲಿ ಕಣ್ಣನೂರಿನ ಕೋಲಿಯಾ ಆಸ್ಪತ್ರೆಯ ಮಾಲೀಕನ ಕೊ*ಲೆ
-
National - International7 hours ago
ದಾಳಿ ನಡೆಸಿದ ಉಗ್ರರಿಗೆ ಊಹೆಗೂ ಮೀರಿದ ಶಿಕ್ಷೆ ನೀಡಲಾಗುವುದು: ಪ್ರಧಾನಿ ನರೇಂದ್ರ ಮೋದಿ
-
Kodagu12 hours ago
ಜಿಲ್ಲಾ ಮಟ್ಟದ ಜ್ಞಾನಜ್ಯೋತಿ ಕಾರುಣ್ಯ ಕಾರ್ಯಕ್ರಮ
-
Chamarajanagar9 hours ago
ಚಾಮರಾಜನಗರ: ಮಲೆ ಮಹದೇಶ್ವರ ಸ್ವಾಮಿ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್