Connect with us

Mandya

ತಮಿಳುನಾಡಿಗೆ ನೀರ ಹರಿಸಲು ಆದೇಶ – ಮಂಡ್ಯದಲ್ಲಿ ರೈತರ ಆಕ್ರೋಶ

Published

on

ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಅಣೆಕಟ್ಟೆಯಿಂದ ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸಬೇಕೆಂದು ಕಾವೇರಿ ನೀರು ನಿರ್ವಾಹಣ ಪ್ರಾಧಿಕಾರ ನೀಡಿರುವ ಆದೇಶಕ್ಕೆ ಮಂಡ್ಯ ಜಿಲ್ಲೆಯ ರೈತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ತಮಿಳುನಾಡಿಗೆ ನೀರು ಹರಿಸಲು ಆದೇಶಿಸಿರುವುದನ್ನು ಖಂಡಿಸಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ಕನ್ನಡಪರ, ಪ್ರಗತಿಪರ ಹಾಗೂ ರೈತ ಸಂಘಟನೆಗಳ ಕಾರ್ಯಕರ್ತರು ಮಂಡ್ಯ ನಗರದ ಸಂಜಯ ವೃತ್ತದಲ್ಲಿ ರಸ್ತೆತಡೆ ನಡೆಸಿದರು.

ಕಾವೇರಿ ನೀರು ನಿಯಂತ್ರಣ ಸಮಿತಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪ್ರತಿ ಬಾರಿ ಸಮಿತಿಯು ಕಾವೇರಿ ಕೊಳ್ಳದ ರೈತರಿಗೆ ಮರಣ ಶಾಸನ ಬರೆದು ರೈತರ ಬಾಳಿಗೆ ಬೆಂಕಿ ಇಡುತ್ತಿದೆ ಎಂದು ಕಿಡಿಕಾರದರು.

ಕಳೆದ ವರ್ಷ ಮುಂಗಾರು ಕೈ ಕೊಟ್ಟ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಎದುರಾಗಿ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಲಿಲ್ಲ. ಇದರಿಂದ ರೈತರು ಬೆಳೆ ಬೆಳೆಯಲು ಸಾಧ್ಯವಾಗಲಿಲ್ಲ. ಈಗಲೂ ಸಹ ಎರಡನೇ ಬೆಳೆ ಹಾಕಿಲ್ಲ. ಇದ್ದ ನೀರನ್ನು ಎಲ್ಲಾ ತಮಿಳುನಾಡಿಗೆ ನಿರಂತರವಾಗಿ ಹರಿಸಲಾಯಿತು.

ಇದೀಗ ಜಲಾಶಯಕ್ಕೆ ಸ್ವಲ್ಪ ಪ್ರಮಾಣದ ನೀರು ಹರಿದು ಬಂದಿದ್ದು, ಬೆಳೆ ಬೆಳೆಯಲು ನೀರು ನೀಡಿಲ್ಲ. ಕೇವಲ ಕೆರೆ ಕಟ್ಟೆಗಳಿಗೆ ಮಾತ್ರ ನೀರು ಹರಿಸಲಾಗಿದೆ. ಇಂತಹ ಪರಿಸ್ಥಿತಿ ಇರುವಾಗ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಪ್ರತಿನಿತ್ಯ ಒಂದು ಟಿಎಂಸಿ ನೀರು ಬಿಡಲು ಆದೇಶ ಮಾಡಿರುವುದು ಅವೈಜ್ಞಾನಿಕವಾಗಿದೆ.

ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಸಮಿತಿಯ ಆದೇಶವನ್ನು ಪಾಲನೆ ಮಾಡಬಾರದು. ಕೆ.ಆರ್.ಎಸ್ ಜಲಾಶಯದಲ್ಲಿ 26 ಟಿಎಂಸಿ ನೀರು ಸಂಗ್ರಹವಾಗಿದೆ. ನೆರೆ ರಾಜ್ಯಕ್ಕೆ 19 ಟಿಎಂಸಿ ನೀರು ಬಿಟ್ಟರೆ ಕಾವೇರಿ ಕೊಳ್ಳದ ರೈತರ ಗತಿ ಏನು ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ಕೇಂದ್ರ ಸಚಿವರಾಗಿರುವ ಎಚ್.ಡಿ.ಕುಮಾರಸ್ವಾಮಿರವರಿಗೆ ವಾಸ್ತವ ಪರಿಸ್ಥಿತಿ ಗೊತ್ತಿದೆ. ಇಲ್ಲಿನ ರೈತರ ಬವಣೆಯನ್ನು ಕಣ್ಣಾರೆ ಕಂಡಿದ್ದಾರೆ. ರೈತರು ಬೆಳೆ ಹಾಕದ ಪರಿಸ್ಥಿತಿಯಲ್ಲಿದ್ದಾರೆ‌ ಆ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದ ರೈತರಿಗೆ ಸಂಕಷ್ಟ ಪರಿಸ್ಥಿತಿಯಲ್ಲಿ ನ್ಯಾಯ ದೊರಕಿಸಿಕೊಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ವಿಧಾನಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ಕರ್ನಾಟಕದ ಕಾವೇರಿ ಕೊಳ್ಳ ಜಲಾಶಯಗಳಿಂದ ತಮಿಳುನಾಡಿಗೆ ಪ್ರತಿನಿತ್ಯ ಒಂದು ಟಿಎಂಸಿ ನೀರನ್ನು ಜು.31ರವರೆಗೆ ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಮಾಡಿರುವುದು ಆವೈಜ್ಞಾನಿಕ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಈ ಆದೇಶವನ್ಬು ಪಾಲಿಸಬಾರದು. ಬರಗಾಲದ ಹಿನ್ನೆಲೆಯಲ್ಲಿ ರೈತರು ಬೆಳೆ ಬೆಳೆಯಲು ಸಾಧ್ಯವಾಗಲಿಲ್ಲ. ಈಗಲೂ ಬೆಳೆ ಬೆಳೆಯುವ ಪರಿಸ್ಥಿತಿಯಲ್ಲಿ ಇಲ್ಲ. ಜಲಾಶಯಗಳು ಭರ್ತಿಯಾಗಿಲ್ಲ. ಆದರೂ ಸಹ ನೀರು ಹರಿಸಿ ಎಂದು ಆದೇಶ ಮಾಡಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಇಂತಹ ರೈತ ವಿರೋಧಿ ಆದೇಶವನ್ನು ಒಪ್ಪಬಾರದು ಎಂದು ಆಗ್ರಹಿಸಿದರು.

ಕನ್ನಡ ಸೇನೆ ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್ ಮಾತನಾಡಿ, ತಮಿಳುನಾಡಿಗೆ ನೀರು ಹರಿಸಿ ಎಂದು ಆದೇಶ ಮಾಡಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕದ ಕಾವೇರಿ ಕೊಳ್ಳ ಪ್ರದೇಶದ ವಾಸ್ತವ ಪರಿಸ್ಥಿತಿಯನ್ನು ಅರಿತಿಲ್ಲ. ಪ್ರತಿ ಬಾರಿ ನೀರು ಬಿಡಿ ಎಂದು ಆದೇಶ ಮಾಡುತ್ತಲೇ ಇದೆ. ಇರುವ 26 ಟಿಎಂಸಿಯಲ್ಲಿ 19 ಟಿಎಂಸಿ ನೀರು ಬಿಟ್ಟರೆ ಇಲ್ಲಿನ ರೈತರ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದರು.

ಕಾವೇರಿ ನದಿ ನೀರು ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗಿದ್ದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಧ್ಯಪ್ರವೇಶಿಸಿ ಇಲ್ಲಿನ ರೈತರಿಗೆ ನ್ಯಾಯ ದೊರಕಿಸಿ ಕೊಡಬೇಕು. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಚುನಾವಣೆಗಾಗಿ ಚನ್ನಪಟ್ಟಣದ ಹಳ್ಳಿಯನ್ನು ಸುತ್ತುತ್ತಿದ್ದಾರೆ. ಮೊದಲು ಕಾವೇರಿ ಕೊಳದ ಪ್ರದೇಶವನ್ನ ಸುತ್ತಾಡಿ ಪರಿಸ್ಥಿತಿಯನ್ನು ಅರಿಯಲಿ. ಸಚಿವರಾದ ನಂತರ ಒಂದು ಬಾರಿಯೂ ಕಾವೇರಿ ಕಣಿವೆ ಪ್ರದೇಶ ಪ್ರವಾಸ ಮಾಡಿಲ್ಲ ಏತಕ್ಕಾಗಿ ಇವರಿಗೆ ನೀರಾವರಿ ಸಚಿವ ಸ್ಥಾನ ಎಂದು ಕಿಡಿಕಾರಿದರು.

ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುನಂದ ಜಯರಾಂ, ರೈತಸಂಘದ ಇಂಡುವಾಳು ಚಂದ್ರಶೇಖರ್, ಮುದ್ದೇಗೌಡ, ಶಿವಳ್ಳಿ ಚಂದ್ರಶೇಖರ್, ಮಲ್ಲನಾಯಕನ ಕಟ್ಟೆ ವಿಜಯ್ ಕುಮಾರ್, ಪಿ.ಜಿ.ನಾಗೇಂದ್ರ, ಸತ್ಯಭಾಮ, ಗೌರಮ್ಮ, ಕಮಲಮ್ಮ, ಎಂ ಎಲ್ ತುಳಸೀದರ್ ಸೇರಿದಂತೆ ಮತ್ತಿತರರು ಭಾಗವಹಿಸಿದರು.

Continue Reading
Click to comment

Leave a Reply

Your email address will not be published. Required fields are marked *

Mandya

*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ ರೂಪ*

Published

on

*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ
ರೂಪ*

ಶ್ರೀರಂಗಪಟ್ಟಣ : ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆಯನ್ನ ಆಚರಿಸಲಾಗುತ್ತಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಎಂ.ಡಿ ರೂಪ ಹೇಳಿದರು.

ಪಟ್ಟಣದ ಶ್ರೀರಂಗನಾಥ ಕಲ್ಯಾಣ ಮಂಟಪದಲ್ಲಿ ಸಹಾಯಕ ಮತದಾರರ ನೊಂದಣಾಧಿಕಾರಿ, ತಾಲೂಕು ಆಡಳಿತ ಹಾಗೂ ಕಾನೂನು ಸೇವಾ ಸಮಿತಿ ಸಹಯೋಗದೊಂದಿಗೆ ನಡೆದ ರಾಷ್ಟೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು ೨೦೧೧ ರಿಂದ ಪ್ರತಿ ವರ್ಷ ಜ. ೨೫ ರಂದು ದೇಶಾದ್ಯಂತ ರಾಷ್ಟೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಹೊಸ ಮತದಾರರನ್ನು ಸೆಳೆಯುವ, ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದರು.

ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೆಚ್. ಮಹದೇವಪ್ಪ ಮಾತನಾಡಿ, ಭಾರತದ ಚುನಾವಣಾ ಆಯೋಗದ ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಭಾರತದಲ್ಲಿ ಶಾಸಕಾಂಗದ ಎಲ್ಲಾ ಹಂತಗಳಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದೆ. “ದೇಶದ ಮತದಾರರಿಗೆ ಮೀಸಲಾಗಿರುವ ಈ ದಿನವನ್ನು ಮತದಾರರಲ್ಲಿ ಜಾಗೃತಿ ಮೂಡಿಸಲು ಮತ್ತು ಚುನಾವಣಾ ಪ್ರಕ್ರಿಯೆಯ ತಿಳುವಳಿಕೆ ನೀಡಲು ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ಕಾಲೇಜು ವಿದ್ಯಾರ್ಥಿಗಳು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ನ್ಯಾಯಾಧೀಶರಾದ ಹರೀಶ್‌ಕುಮಾರ್, ಹನುಮಂತ ರಾಯಪ್ಪ, ತಹಸೀಲ್ದಾರ್ ಪರಶುರಾಮ್ ಸತ್ತಿಗೆರಿ, ಬಿಇಒ ಮಹೇಶ್, ಪುರಸಭೆ ಮುಖ್ಯಾಧಿಕಾರಿ ಎಂ.ರಾಜಣ್ಣ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆ ನೌಕರರು, ಕಾಲೇಜು ವಿದ್ಯಾರ್ಥಿಗಳು ಇದ್ದರು.

Continue Reading

Mandya

ಮಂಡ್ಯ ಜಿಲ್ಲಾಧಿಕಾರಿ ಡಾ: ಕುಮಾರ ಅವರಿಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ

Published

on

ಮಂಡ್ಯ : ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದ್ದು, ಇಂದು ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಾನಿತ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಶಸ್ತಿ ನೀಡಿ ಗೌರವಿಸಿದರು

Continue Reading

Mandya

ಜ.29 ರಂದು ನಬಾರ್ಡ್ ನೀತಿ ವಿರೋಧಿಸಿ ಪ್ರತಿಭಟನೆ

Published

on

ಮಂಡ್ಯ: ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ, ಮೈಕ್ರೋ ಫೈನಾನ್ಸ್ ಹಾವಳಿ ಕಿರುಕುಳ ತಡೆಗಟ್ಟಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜನವರಿ ೨೯ರ ಬೆಳಿಗ್ಗೆ ೧೧ಗಂಟೆಗೆ ಬೆಂಗೂರಿನ ರಿಸರ್ವ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಕಾರ ಕಳೆದ ಮೂರು ವರ್ಷದಿಂದ ಕೃಷಿ ಕ್ಷೇತ್ರಕ್ಕೆ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುತ್ತಿಲೇ ಬಂದಿದ್ದು, ಕಳೆದ ವರ್ಷ ರಾಜ್ಯಕ್ಕೆ ೫೬೦೦ ಕೋಟಿ ನೀಡಲಾಗಿದ್ದ ಸಾಲ ಪ್ರಸಕ್ತ ವರ್ಷಕ್ಕೆ ೨೩೪೦ಕ್ಕೆ ಇಳಿಸಿದೆ ಎಂದು ಆರೋಪಿಸಿದರು.

ರಾಜ್ಯಕ್ಕೆ ನೀಡುವ ಸಾಲದ ಮೊತ್ತವನ್ನು ಶೇ.೫೮ರಷ್ಟು ತಗ್ಗಿಸುವ ಮೂಲಕ ರಾಜ್ಯದ ಕೃಷಿ ವ್ಯವಸ್ಥೆಯನ್ನೇ ನಾಶ ಮಾಡಿದೆ. ರೈತರು ಹೆಚ್ಚು ಬಡ್ಡಿ ತೆತ್ತು ವಾಣಿಜ್ಯ ಬ್ಯಾಂಕುಗಳ ಮೊರೆ ಹೋಗಿ, ಖಾಸಗಿ ಸಾಲದ ಸುಳಿಗೆ ಸಿಲುಕೊಂಡು ಆತ್ಮಹತ್ಯೆಯ ಹಾದಿ ಹಿಡಿಯುವಂತಾಗಿದೆ. ಇದರಿಂದ ಸಂಪೂರ್ಣ ಕಾರ್ಪೋರೇಟ್ ಕಂಪನಿಗಳ ವಶಕ್ಕೆ ನೀಡಲು ಹುನ್ನಾರ ನಡೆಸುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಿದ್ದು, ಅವರ ಕಿರುಕುಳದಿಂದ ಗ್ರಾಮೀನ ಪ್ರದೇಶದ ಮಹಿಳೆಯರು ಹಾಗೂ ಇತರೆ ದುಡಿಯುವ ವರ್ಗ ಸಂಕಷ್ಟಕ್ಕೀಡಾಗಿದ್ದಾರೆ. ಇತ್ತೀಚೆಗೆ ರಾಮನಗರದಲ್ಲಿಯೂ ಮಹಿಳೆ ಆತ್ಮಹತ್ಯೆಗೆ ಶರಣಾದ ಪ್ರಕರಣ ನಡೆದಿದ್ದು, ಇದಕ್ಕೆ ಕೇಂದ್ರ ಸರ್ಕಾರದ ನಡೆಯೇ ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ರೈತರು, ಸ್ವ ಸಹಾಯ ಸಂಘಗಳು ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳು ಭಾಗವಹಿಸುವಂತೆ ಕರೆ ನೀಡಿದರು.

ಗೋಷ್ಠಿಯಲ್ಲಿ ಬೋರಾಪುರ ಶಂಕರೇಗೌಡ, ಲಿಂಗಪ್ಪಾಜಿ, ಅಣ್ಣಯ್ಯ, ವಿ.ಸಿ.ಉಮೇಶ್, ವಿಜಿಕುಮಾರ್, ಮಂಜು ಇತರರಿದ್ದರು.

Continue Reading

Trending

error: Content is protected !!