Connect with us

Mandya

ತಂತ್ರಜ್ಞಾನದ ಅರಿವು ಶಾಸಕರಿಗಿಲ್ಲ: ಆಕ್ರೋಶ

Published

on

ಕುಮಾರಸ್ವಾಮಿ ಅವರ ಎದೆಮೇಲೆ ಐದು ಇಂಚಿನ ಕೊಯ್ದ ಗಾಯ ಇದೆ

ಗಾಯ ಮೂರೇ ದಿನದಲ್ಲಿ ವಾಸಿಯಾಗುವ ತಂತ್ರಜ್ಞಾನದ ಅರಿವು ಶಾಸಕರಿಗಿಲ್ಲ: ಆಕ್ರೋಶ

ಜೆಡಿಎಸ್‌ನಲ್ಲಿ ಅಧಿಕಾರ ಉಂಡ ಕುಟುಂಬದವರೇ ಎಚ್‌ಡಿಕೆ ಹೀಯಾಳಿಸುತ್ತಿದ್ದಾರೆ

ಮಂಡ್ಯ: ಕುಮಾರಸ್ವಾಮಿ ಅವರಿಗೆ ಹೃದಯ ಸಮಸ್ಯೆ ಇದೆ. ಯಾರು ಅವರ ಎದೆಯನ್ನು ನೋಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ಅವರ ಎದೆ ಮೇಲೆ 5 ಇಂಚು ಕೊಯ್ದ ಗಾಯದ ಗುರುತು ಇದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ  ಹೇಳಿದರು.

ಶ್ರೀರಂಗಪಟ್ಟಣದ ಟಿಎಪಿಸಿಎಂಎಸ್ ಸಭಾಂಗಣದಲ್ಲಿ ಭಾನುವಾರ ನಡೆದ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಸಚಿವರು, ಶಾಸಕರು ಮನಬಂದಂತೆ ಮಾತನಾಡುತ್ತಿರುವುದನ್ನು ರಾಜ್ಯದ ಜನತೆ ನೋಡುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಜನತೆಯೇ ತಕ್ಕ ಉತ್ತರ ನೀಡುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಕುಮಾರಸ್ವಾಮಿ ಅವರಿಗೆ ಹೃದಯ ಸಮಸ್ಯೆ ಇದೆ. ಯಾರು ಅವರ ಎದೆಯನ್ನು ನೋಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ಅವರ ಎದೆ ಮೇಲೆ 5 ಇಂಚು ಕೊಯ್ದ ಗಾಯದ ಗುರುತು ಇದೆ. ಅದು ಇನ್ನೂ ಮಾಯ್ದಿಲ್ಲ. ಇದನ್ನು ತಿಳಿಯದ ಕೆಲವರು ಅವರ ವಿರುದ್ಧ ಲೇವಡಿ ಮಾಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಹೊಸ ತಂತ್ರಜ್ಞಾನವನ್ನು ಎಲ್ಲರೂ ಗೂಗಲ್‌ನಲ್ಲಿ ಸರ್ಚ್‌ ಮಾಡಬಹುದು. ಮೂರೇ ದಿನದಲ್ಲಿ ಚೇತರಿಸಿಕೊಳ್ಳುವಷ್ಟರ ಮಟ್ಟಿಗೆ ತಾಂತ್ರಿಕತೆ ಬೆಳೆದಿದೆ. ಆದರೆ ಕ್ಷೇತ್ರದ ಶಾಸಕರಿಗೆ ಈ ಬಗ್ಗೆ ಅರಿವೇ ಇಲ್ಲ. ನಮ್ಮ ಪಕ್ಷದಲ್ಲೇ ಬೆಳೆದು, ಇಡೀ ಕುಟುಂಬವೇ ನಮ್ಮ ಪಕ್ಷದಲ್ಲಿ ಅಧಿಕಾರ ಅನುಭವಿಸಿ ಈಗ ನಮ್ಮ ವಿರುದ್ಧವೇ ಮಾತನಾಡುತ್ತಿದ್ದಾರೆ. ಜನತೆ ಇದನ್ನು ನೋಡುತ್ತಿದ್ದಾರೆ. ಅವರೇ ಎಲ್ಲದ್ದಕ್ಕೂ ಉತ್ತರ ನೀಡುತ್ತಾರೆ ಎಂದರು.

ಬದಲಾದ ಕಾಲಘಟ್ಟದಲ್ಲಿ ನಾನು ಅನಿರೀಕ್ಷಿತವಾಗಿ ರಾಜಕೀಯಕ್ಕೆ ಬರಬೇಕಾಯಿತು. 2019 ರಲ್ಲಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೆ. ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲೂ ನಮ್ಮದೇ ಪಕ್ಷದ ಶಾಸಕರು ಇದ್ದರು. ಆದರೂ ನಾನು ಸೋಲನ್ನೂ ಅನುಭವಿಸಬೇಕಾಯಿತು. ಆಗ ನಮ್ಮ ಕಾರ್ಯಕರ್ತರಿಗೆ ನೋವು ಆಕ್ರೋಶ ಉಂಟುಮಾಡಿತ್ತು. ಇದಕ್ಕೆ ಮತದಾರರು, ಕಾರ್ಯಕರ್ತರು ಹೊಣೆಯಲ್ಲ, ನಾವೇ ಹೊಣೆ ಎಂದು ಸಮರ್ಥಿಸಿಕೊಂಡರು.

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದಾಗಲೆಲ್ಲ ರಾಜ್ಯದಲ್ಲಿ ಬರ ಬರುತ್ತಿದೆ. ಕಳೆದ 2013 ಹಾಗೂ ಈಗ ಎರಡೂ ಕಾಲಘಟ್ಟದಲ್ಲೂ ಮಳೆ ಇಲ್ಲದೆ ಬರ ಬಂದಿದೆ, 2018 ರಲ್ಲಿ ಬರದಿಂದ ರಾಜ್ಯದಲ್ಲಿ ಸಾವಿರಾರು ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅಂದು ರೈತರ ಮನೆಗೆ ತೆರಳಿದ್ದ ಕುಮಾರಸ್ವಾಮಿ ಅವರು ಕುಟುಂಬಕ್ಕೆ ಸಾಂತ್ವನ ಹೇಳಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಒಂದು ಬಾರಿ ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರು. 2018ರಲ್ಲಿ ಕಾಂಗ್ರೆಸ್-ಜೆಡಿಎಸ್ ಅಧಿಕಾರ ಹಿಡಿಯಿತು. ನಾವು ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬಂದಿಲ್ಲ. ಸಾಲ ಮನ್ನಾ ಮಾಡಲಾಗದು ಎಂದು ಕುಮಾರಸ್ವಾಮಿ ಹೇಳಬಹುದಿತ್ತು. ಆದರೆ ಕುಮಾರಸ್ವಾಮಿ ಹಾಗೆ ಮಾಡಲಿಲ್ಲ. ಕಾಂಗ್ರೆಸ್ಸಿಗರ ವಿರೋಧದ ನಡುವೆಯೂ 25 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದರು ಎಂದರು.

ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಅಣ್ಣ ತಮ್ಮನ ರೀತಿ ಕೆಲಸ ಮಾಡಬೇಕು. ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಮಂಜುನಾಥ್ ಅವರ ಪರ ಪಕ್ಷಾತೀತವಾಗಿ ಅಲೆ ಎದ್ದಿದೆ. ಯಾರೂ ಮೈಮರೆಯದೆ ಕಾರ್ಯಕರ್ತರು ಕೆಲಸ ಮಾಡಬೇಕು. ಕುಮಾರಸ್ವಾಮಿ ಅವರ ಗೆಲವು ಮಂಡ್ಯ ಜನರ ಗೆಲುವಾಗಬೇಕು. ಐದು ಗ್ಯಾರಂಟಿಗಳನ್ನು ಇಟ್ಟುಕೊಂಡು ಚುನಾವಣೆ ಮಾಡುತ್ತಿದ್ದಾರೆ. ಫಲಾನುಭವಿಗಳ ಸಭೆ ಮಾಡಿ ಕೋಟ್ಯಾಂತರ ರೂ. ಖರ್ಚು ಮಾಡುವ ಮೂಲಕ ನಾವು ನುಡಿದಂತೆ ನಡೆದಿದ್ದೇವೆ ಎನ್ನುತ್ತಾರೆ ಎಂದು ಆರೋಪಿಸಿದರು.

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮಾತನಾಡಿ, ಈ ಹಿಂದೆ ಕುಮಾರಸ್ವಾಮಿ ಅವರು ಮೈತ್ರಿ ಆದಾಗ ಕುಮಾರಸ್ವಾಮಿ ಆರೋಗ್ಯ ಹಾಳಾಗಲಿಲ್ಲವೇ ಎಂದು ಸಚಿವ ಚಲುವರಾಯಸ್ವಾಮಿಗೆ ತಿರುಗೇಟು ನೀಡಿದ ಅವರು, ಬಿಜೆಪಿ ಜೆಡಿಎಸ್ ಮೈತ್ರಿ ಶ್ರೀರಾಮನ ಆರ್ಶಿವಾದ, ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸುವವರೆಗೂ ಕಾರ್ಯಕರ್ತರು ನಿದ್ರೆ ಮಾಡಲ್ಲ, ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಏನು‌ ಓದಿದ್ದಾರೋ ಗೊತ್ತಿಲ್ಲ, ಕುಮಾರಸ್ವಾಮಿ ಹಾರ್ಟ್ ಆಪರೇಷನ್ ಬಗ್ಗೆ ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ದೇಶ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದರೆ ಅದಕ್ಕೆ ಕಾರಣ ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ, 2014 ರಲ್ಲಿ ಮೊದಲ ಬಾರಿಗೆ ಮೋದಿ ಅವರು ಪ್ರಧಾನಿ ಆದಾಗ ದೇವೇಗೌಡರ ಬಗ್ಗೆ ತೋರಿದ ಔದಾರ್ಯ ಮರೆಯಲು ಸಾಧ್ಯವಿಲ್ಲ, ಕಾಂಗ್ರೆಸ್ ಅದಃ ಪತನವು ಶ್ರೀರಂಗಪಟ್ಟಣದಿಂದಲೇ ಆರಂಭವಾಗುತ್ತದೆ. ಪ್ರಚಂಡ ಬಹುಮತದಲ್ಲಿ ಕುಮಾರಸ್ವಾಮಿ ಗೆಲವು ಸಾಧಿಸುತ್ತಾರೆ, ಈಗಾಗಲೇ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ, ಕೇವಲ ಲೀಡ್ ಗಾಗಿ ಹೋರಾಟ ಮಾತ್ರ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಶಾಸಕ ಸುರೇಶ್‌ಗೌಡ ಮಾತನಾಡಿ, ಇಡೀ ದೇಶ ಮಂಡ್ಯ ಕ್ಷೇತ್ರದತ್ತ ನೋಡುತ್ತಿದೆ, ಮಂಡ್ಯದಲ್ಲಿ ಏನು ನಡೆಯುತ್ತಿದೆ ಎಂದು ಜನ ಕೇಳುತ್ತಿದ್ದಾರೆ, ಮಂಡ್ಯ ಅಂದರೆ ಇಂಡಿಯಾ ಹೃದಯವಂತನ ಬಗ್ಗೆ ಶಾಸಕ ಮಾತನಾಡುತ್ತಿದ್ದಾರೆ, ಅಧಿಕಾರ ಇದ್ದಾಗ ಕಣ್ಣುಗಳು ಎಲ್ಲೋ ನೋಡುತ್ತವೆ, ದುಡ್ಡಿನ ಮದ ಹಾಗೆ ಮಾಡಿಸುತ್ತಿದೆ. ಜಿಲ್ಲೆಯಲ್ಲಿ ಕೆಲ ಶ್ಯಾಡೋ ಶಾಸಕರು ಇದ್ದಾರೆ
ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರ ತಂದೆ ಬದುಕಿದ್ದಾರೆ ಈತನಿಗೆ ಬುದ್ದಿ ಕಲಿಸುತ್ತಿದ್ದರು ಎಂದು ಹರಿಯಾಯ್ದರು.

ಅಧಿಕಾರ ಯಾರಿಗೂ ಶಾಶ್ವತವಲ್ಲ, ಪಾಪ ಕಾಡುತ್ತದೆ ಹಾಗಾಗಿ ಕುಮಾರಸ್ವಾಮಿ ‌ಕ್ಷಮೆ ಕೇಳಬೇಕು. ಚಲುವರಾಯಸ್ವಾಮಿ ದುರಂಕಾರ ಇದೀಗ ರಮೇಶ್ ಬಂಡಿಸಿದ್ದೇಗೌಡನಿಗೆ ಬಂದಿದೆ, ಅವನ ಸಹವಾಸ ಮಾಡಿ ದುರಂಕಾರ ಬಂದಿದೆ, ರೈತರು ಸಂಕಷ್ಟದಲ್ಲಿ ಇದ್ದಾರೆ, ಅವರ ಪರವಾಗಿ ಕಾಂಗ್ರೆಸ್ ಅವರು‌ ನಿಲ್ಲಬೇಕಿತ್ತು, ನಾಲೆಗಳಿಗೆ ನೀರು ಹರಿಸಬೇಕಿತ್ತು, ದುಡ್ಡು ಇರುವವರೂ ಅವರ ಬಳಿಗೆ ಹೋಗುತ್ತಾರೆ, ಚೆನ್ನಾಗಿರುವ ಹಸ ಕರೆದುಕೊಂಡು ಬಂದು ಚೆನ್ನಾಗಿ ಹಾಲು ಕರೆದುಕೊಳ್ಳುತ್ತಿದ್ದಾರೆ
ಸ್ಟಾರ್ ಚಂದ್ರು ಅಭ್ಯರ್ಥಿ ಆಗಿರುವುದಕ್ಕೆ ವ್ಯಂಗ್ಯವಾಡಿದರು.

ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿ, ಶ್ರೀರಂಗಪಟ್ಟಣದ ಶಾಸಕನಿಗೆ ಏನು ಆಗಿದೀಯೋ ಗೊತ್ತಿಲ್ಲ, ಈ ಹಿಂದೆ ಕೂಡ ಮಹಿಳೆಯರ ಬಗ್ಗೆ ಕೆಟ್ಟಾದಾಗಿ ಮಾತನಾಡಿ ಮಹಿಳೆಯರಿಂದಲೇ ಏಡ್ಸ್ ಬರುತ್ತೆ ಅಂದಿದ್ದರು, ಹೀಗಾಗಿ ಅಂದಿನ ಸಿಇಒ ರೋಹಿಣಿ ಸಿಂಧೂರಿ ಅವರು ದೂರು ಕೊಡಲು ಹೋಗಿದ್ದರು, ಇಡೀ ಕುಟುಂಬಕ್ಕೆ ರಕ್ಷಣೆ ಕೊಟ್ಟ ಕುಮಾರಸ್ವಾಮಿ ಬಗ್ಗೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಮಾತನಾಡುತ್ತಿದ್ದಾರೆ, ಇದರಿಂದ ಶ್ರೀರಂಗಪಟ್ಟಣದ ಬಗ್ಗೆ ಅಪಖ್ಯಾತಿ ತರುತ್ತಿದ್ದಾರೆ ಎಂದು ಆರೋಪಿಸಿದರು.

ಮಾಜಿ ಸಚಿವ ಕೆ.ಸಿ.ನಾರಾಯಣ್‌ಗೌಡ ಮಾತನಾಡಿ, ಎರಡು ಬಾರಿ ಸಿಎಂ ಆಗಿ ಉತ್ತಮ ಸೇವೆ ಸಲ್ಲಿಸಿರೋ ಕುಮಾರಸ್ವಾಮಿ ಅವರು ಮಂಡ್ಯಕ್ಕೆ ಅಭ್ಯರ್ಥಿ ಆಗಿದ್ದಾರೆ, ಇದು ತುಂಬಾ ಸಂತೋಷ, ದೊಡ್ಡ ಶಕ್ತಿ, ಹೆಚ್ಚು ಬಹುಮತದಿಂದ ಕುಮಾರಸ್ವಾಮಿ ಗೆಲ್ಲುತ್ತಾರೆ, ಅದನ್ನ ಯಾರು ತಡೆಯಲು ಸಾದ್ಯವಿಲ್ಲ, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಕುಮಾರಸ್ವಾಮಿ ಶಿಷ್ಯ
ಕುಮಾರಸ್ವಾಮಿ ಎದುರಿಗೆ ಬಂದರೇ ಅವಿತು ಕುಳಿತುಕೊಳ್ಳುತ್ತಾರೆ ಎಂದು ಟೀಕಿಸಿದರು.

ಕುಮಾರಸ್ವಾಮಿ ಅಭ್ಯರ್ಥಿ ಆಗುತ್ತಾರೆ ಎಂದು ಗೊತ್ತಾಗಿದ್ದರೆ, ಸ್ಟಾರ್ ಚಂದ್ರು ಅಭ್ಯರ್ಥಿ ಆಗುತ್ತಿರಲಿಲ್ಲ, ಕಾಂಗ್ರೇಸ್ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಚಳಿಜ್ವರ ಬಂದಿದೆ. ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಮಂತ್ರಿ ಆಗುತ್ತಾರೆ, ಜೆಡಿಎಸ್ ನವರು ಮನೆಯಿಂದ ದುಡ್ಡು ಹಾಕಿ ಚುನಾವಣೆ ಮಾಡುತ್ತಾರೆ, ಅಂತಹ ಕಾರ್ಯಕರ್ತರು ಜೆಡಿಎಸ್‌ನಲ್ಲಿ ಇದ್ದಾರೆ ಎಂದು ತಿಳಿಸಿದರು.

ಶಾಸಕ ಎಚ್‌.ಟಿ.ಮಂಜು, ಮುಖಂಡರಾದ ಇಂದ್ರೇಶ್‌, ಇಂಡುವಾಳು ಸಚ್ಚಿದಾನಂದ, ಸಿ.ಪಿ.ಉಮೇಶ್, ಶ್ರೀಧರ್, ದಶರಥ, ತಿಲಕ್‌, ದಯಣ್ಣ ಭಾಗವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಎಚ್ಡಿಕೆ ಮಂಡ್ಯದಲ್ಲಿ ಅಬ್ಬರದ ಪ್ರಚಾರ

Published

on

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ – ಜೆಡಿಎಸ್ ಪಕ್ಷದ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಹಿರಂಗ ಪ್ರಚಾರದ ಕೊನೆಯ ದಿನ ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಶಕ್ತಿಪ್ರದರ್ಶಿಸಿದರು.

ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ರೋಡ್ ಶೋ ನಡೆಸಿದ ಹೆಚ್‍.ಡಿ ಕುಮಾರಸ್ವಾಮಿಗೆ ಅಪಾರ ಜನಸ್ತೋಮ ಬೆಂಬಲ ಸೂಚಿಸಿತು.

ಮಂಡ್ಯ ವಿಶ್ವವಿದ್ಯಾನಿಲಯ ಆವರಣದಿಂದ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆಗೂಡಿ ರೋಡ್ ಶೋ ಮೂಲಕ ಮತಯಾಚನೆಗೆ ಹೊರಟ ಮೈತ್ರಿ ಪಕ್ಷದ ಅಭ್ಯರ್ಥಿಗೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಜಯ ಘೋಷ ಮೊಳಗಿಸಿ ಹರ್ಷೋದ್ಗಾರದ ನಡುವೆ ಪುಷ್ಪಾರ್ಚನೆ ಮೂಲಕ ಹೆಜ್ಜೆ ಹಾಕಿದರು. ಅಪಾರ ಜನಸ್ತೋಮದ ನಡುವೆ ತೆರೆದ ವಾಹನದಲ್ಲಿ ಕೈ ಮುಗಿದು ನನ್ನ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು.


ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜನಸ್ತೋಮ ಉದ್ದೇಶಿಸಿ ಮಾತನಾಡಿದ ಮೈತ್ರಿ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಆಳುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಹಿರಂಗ ಪ್ರಚಾರದ ಕೊನೆಯ ದಿನ ಜಾತ್ಯತೀತ ಜನತಾದಳ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ಶಕ್ತಿಪ್ರದರ್ಶಿಸುವ ಮೂಲಕ ಮೈತ್ರಿ ಅಭ್ಯರ್ಥಿ ಗೆಲುವಿಗೆ ಅಣಿಯಾಗಿದ್ದಾರೆ.

Continue Reading

Mandya

ಕಾಂಗ್ರೆಸ್ ಪಕ್ಷದಿಂದ ಬೈಕ್ ರ್‍ಯಾಲಿ

Published

on

ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಎರು ಮಂಡ್ಯದಲ್ಲಿ ಬೈಕ್ ರ್‍ಯಾಲಿ ಮೂಲಕ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಶಾಸಕ ರವಿಕುಮಾರ್ ಗಣಿಗ ಜೊತೆಗೂಡಿ ಕೊನೆಯ ದಿನದ ಪ್ರಚಾರ ಮಾಡಿದರು.

ನಗರದ ಕಾರಿಮನೆ ಗೇಟ್ ನಿಂದ ಬೈಕ್ ರ್‍ಯಾಲಿ ಮೂಲಕ ಪ್ರಚಾರ ಆರಂಭಿಸಿದ ಕಾಂಗ್ರೆಸ್ ನಾಯಕರು, ಬೆಂಗಳೂರು ಮೈಸೂರು ಹೆದ್ದಾರಿ ಮೂಲಕ ಜಯ ಚಾಮರಾಜೇಂದ್ರ ಒಡೆಯರ್ ವೃತ್ತ, ಆರ್ ಪಿ ರಸ್ತೆ, ಅಂಬೇಡ್ಕರ್ ರಸ್ತೆ ಯಲ್ಲಿ ಮತಯಾಚಿಸಿ ಹೊಸಹಳ್ಳಿಯಲ್ಲಿ ಪ್ರಚಾರ ಮಾಡಿದರು.

ಕಾಂಗ್ರೆಸ್ ಪಕ್ಷ ಜನರ ಪರವಾದ ಪಕ್ಷವಾಗಿದ್ದು, ಗ್ಯಾರಂಟಿ ಯೋಜನೆಗಳ ಮೂಲಕ ಜನತೆಗೆ ಸವಲತ್ತು ದೊರಕಿಸಿಕೊಟ್ಟಿದೆ, ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮತ್ತಷ್ಟು ಜನಪರ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದು ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

Continue Reading

Mandya

ಕುಮಾರಸ್ವಾಮಿ ಪರ ಮತ ಪ್ರಚಾರ

Published

on

ಭಾರತೀನಗರ :ಕೆ.ಎಂ.ದೊಡ್ಡಿಯಲ್ಲಿನ 1 ಮತ್ತು 2ನೇ ಬ್ಲಾಕ್ನಲ್ಲಿ ಜಾ.ದಳ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಎನ್.ಡಿಎ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಪ್ರತೀ ಮನೆಯಲ್ಲಿ ಮತದಾರರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಕೊಟ್ಟ ಕೊಡುಗೆಗಳ ಹಾಗೂ ಅಭಿವೃದಧಿ ಕಾರ್ಯಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು, ರೈತರ ಉದ್ಧಾರಕ್ಕೋಸ್ಕರ ಸಾಲ ಮನ್ನಾ ಮಾಡಿದ್ದರು. ಹಾಗಾಗಿ ಕುಮಾರಸ್ವಾಮಿ ಅವರ ತೆನೆ ಹೊತ್ತ ಮಹಿಳೆ ಗುರುತಿಗೆ ಮತ ನೀಡುವ ಮೂಲಕ ಅತ್ಯಧಿಕ ಮತಗಳಿಂದ ಜಯಗಳಿಸುವಂತೆ ಮಾಡಬೇಕೆಂದು ಮನವಿ ಮಾಡಿದರು.
ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಪಕ್ಷದ ಪ್ರದಾನಮಂತ್ರಿ ನರೇಂದ್ರ ಮೋದಿ ಅವರು ಜನತೆಯ ಹಿತಕಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ, ರೈತರ ಶ್ರೇಯೋಬಿವೃದ್ಧಿ ಹಿನ್ನೆಯಲ್ಲಿಯೂ ಕೂಡ ಹಲವು ಯೋಜನೆಗಳನ್ನು ಜಾರಿ ಮಾಡಿದ್ದಾರೆ ಎಂದು ಮತದಾರರಿಗೆ ತಿಳಿಸಿ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಮೂಲಕ ಪ್ರದಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್, ಗ್ರಾಮ ಪಂಚಾಯತಿ ಸದಸ್ಯರಾದ ವೆಂಕಟೇಶ್, ಮುಖಂಡರಾದ ಮೊಬೈ ವೆಂಕಟೇಶ್, ಕುಮಾರ್ , ರವಿ, ವಿಶ್ವ ಶ್ರೀನಿವಾಸ್, ಪುನೀತ್, ವಿಕಾಸ್ (ಬೋರ), ಪ್ರಶಾಂತ್, ಲಕ್ಷ್ಮಮ್ಮ, ರಂಗಮ್ಮ ಮುಂತಾದವರುಗಳು ಭಾಗವಹಿಸಿದ್ದರು

Continue Reading

Trending

error: Content is protected !!