National - International
ಜನಪ್ರಿಯ ಟಾಟಾ ಇಂಡಿಕಾದಿಂದ ಟಾಟಾ ನ್ಯಾನೋ ತನಕ ಎಲ್ಲವೂ ರತನ್ ಟಾಟಾ ಉತ್ಪನ್ನಗಳು !
Ratan Naval Tata: ರತನ್ ಟಾಟಾ ಅವರು ಈ ಹಿಂದೆ ತಮ್ಮ ಆರೋಗ್ಯದ ಬಗ್ಗೆ ಊಹಾಪೋಹಗಳನ್ನು ತಳ್ಳಿಹಾಕಿದ್ದರು. ಭಾರತದ ಅತಿದೊಡ್ಡ ಸಂಘಟಿತ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸನ್ಸ್‌ನ ಗೌರವಾನ್ವಿತ ಗೌರವ ಅಧ್ಯಕ್ಷ ರತನ್ ಟಾಟಾ ಅವರು ಬುಧವಾರ ರಾತ್ರಿ 86 ನೇ ವಯಸ್ಸಿನಲ್ಲಿ ನಿಧನರಾದರು. ದೀರ್ಘಕಾಲದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಸೋಮವಾರವಷ್ಟೇ, ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಮ್ಮ ಆರೋಗ್ಯದ ಸುತ್ತಲಿನ ಊಹಾಪೋಹಗಳನ್ನು ತಳ್ಳಿಹಾಕಿದ್ದರು ಮತ್ತು ವಯಸ್ಸಿನ ಕಾರಣದಿಂದಾಗಿ ಅವರು ರೋಟೀನ್ ವೈದ್ಯಕೀಯ ತನಿಖೆಗೆ ಒಳಗಾಗುತ್ತಿದ್ದಾರೆ ಎಂದು ಹೇಳಿದ್ದರು.
1991 ರಿಂದ 2012 ರವರೆಗೆ ಟಾಟಾ ಗ್ರೂಪ್ ಅನ್ನು ಮುನ್ನಡೆಸಿದ ವ್ಯಕ್ತಿಯಾಗಿದ್ದರು ರತನ್ ಟಾಟಾ. ಈ ಸಂದರ್ಭದಲ್ಲಿ ಟಾಟಾ ಸಂಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ವಿಸ್ತರಿಸಿದರು. ಕೇವಲ ಅತ್ಯುನ್ನತ ವ್ಯಾಪಾರ ಸಾಧನೆಗಳಲ್ಲಿ ಮಾತ್ರವಲ್ಲ “ಭಾರತ ಮತ್ತು ಭಾರತೀಯರನ್ನು ಮೊದಲು” ಎನ್ನುವ ನೀತಿಯನ್ನು ಅವರು ತಮ್ಮ ವ್ಯಾಪಾರದಲ್ಲಿ ಆಳವಾಗಿ ಅಳವಡಿಸಿಕೊಂಡಿದ್ದರು.
ಡಿಸೆಂಬರ್ 28, 1937 ರಂದು ಮುಂಬೈನಲ್ಲಿ ಜನಿಸಿದ ರತನ್ ಟಾಟಾ ಅವರು ಪ್ರತಿಷ್ಠಿತ ಪಾರ್ಸಿ ಕುಟುಂಬದಿಂದ ಬಂದವರು. ಮುಂಬೈಯನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡರು ಅವರ ಮೂಲ ಕುಟುಂಬ ಬಂದಿರುವುದು ಗುಜರಾತಿನಿಂದ. ಅವರ ತಾತ ಜಂಶೆಡ್ಡಿ ಟಾಟಾ ಭಾರತದ ಕೈಗಾರಿಕೋದ್ಯಮದ ಪಿತಾಮಹ. ಅಂತಹ ಕುಟುಂಬದಲ್ಲಿ ಮೂರನೆಯ ತಲೆಮಾರಿನವರಾಗಿ ಹುಟ್ಟಿ ಬೆಳೆದ ರತನ್ ಟಾಟಾರವರು 1962 ರಲ್ಲಿ ಕಾರ್ನೆಲ್ ವಿಶ್ವವಿದ್ಯಾನಿಲಯದಿಂದ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಪದವಿ ಪಡೆದರು.
ಕಾರ್ನೆಲ್ ವಿಶ್ವವಿದ್ಯಾನಿಲಯದಿಂದ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಪದವಿ ಪಡೆದ ಅವರು ಸ್ವಲ್ಪ ಸಮಯದ ನಂತರ ಟಾಟಾ ಕುಟುಂಬ ವ್ಯವಹಾರದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಮತ್ತು ಶೀಘ್ರವಾಗಿ 1991ರಲ್ಲಿ ಅತ್ಯಂತ ಸವಾಲಿನ ಅವಧಿಯಲ್ಲಿ ಟಾಟಾ ಸಂಸ್ಥೆಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ನಂತರ ಕೇವಲ 5.8 ಶತಕೋಟಿ ಡಾಲರ್ ಆದಾಯವನ್ನು ಹೊಂದಿದ್ದ ಗುಂಪಿಗೆ ಸವಾಲಿನ ಅವಧಿಯಲ್ಲಿ ಅವರ ಉಸ್ತುವಾರಿಯಲ್ಲಿ, ಕಂಪನಿಯು ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿತು ಮತ್ತು ಹೊಸ ಹೊಸ ಬ್ಯುಸಿನೆಸ್ ವೆಂಚರ್ ಳನ್ನು ಶುರು ಮಾಡಿತು. ಆ ಮೂಲಕ ಟಾಟಾ ಸಂಸ್ಥೆಗಳ ಆದಾಯವು 2011-12 ರ ವೇಳೆಗೆ 100 ಶತಕೋಟಿ ಅಮೆರಿಕನ್ ಡಾಲರ್ ಏರಿತು.
ಜನಪ್ರಿಯ ‘ಟಾಟಾ ಇಂಡಿಕಾ’ ರತನ್ ಟಾಟಾ ಉತ್ಪನ್ನ!
ಟಾಟಾ ಇಂಡಿಕಾವನ್ನು 1998 ರಲ್ಲಿ ಟಾಟಾ ಮೋಟಾರ್ಸ್ ಬಿಡುಗಡೆ ಮಾಡಿತು, ಮತ್ತು ಅದು ಡೀಸೆಲ್ ಎಂಜಿನ್ ಹೊಂದಿರುವ ಮೊದಲ ಭಾರತೀಯ ಹ್ಯಾಚ್‌ಬ್ಯಾಕ್ ಕಾರ್ ಆಗಿತ್ತು. ಆ ಕಾರು ತನ್ನ ಕಡಿಮೆ ಬೆಲೆ ಮತ್ತು ಅತ್ಯಧಿಕ ಮೈಲೇಜ್ ಗೋಸ್ಕರ ದೇಶ ವ್ಯಾಪ್ತಿಯಾಗಿ ಭರ್ಜರಿ ಮಾರಾಟ ಕಂಡಿತು. ಇದು ಟಾಟಾ ಮೋಟಾರ್ಸ್‌ನ ಮೊದಲ ಪ್ರಯಾಣಿಕ ಹ್ಯಾಚ್‌ಬ್ಯಾಕ್. ಟಾಟಾ ಇಂಡಿಕಾದ ಅಭೂತಪೂರ್ವ ಯಶಸ್ಸಿನ ನಂತರ ಇದೇ ಮಾದರಿಯ ಹಲವು ಕಾರುಗಳನ್ನು 2004 ರ ಅಂತ್ಯದಿಂದ ಯುರೋಪಿಯನ್ ಮತ್ತು ಆಫ್ರಿಕನ್ ದೇಶಗಳಿಗೆ ರಫ್ತು ಮಾಡಲಾಯಿತು. ಸರಿಸುಮಾರು 20 ವರ್ಷಗಳ ಕಾಲ ಜನಪ್ರಿಯ ಇಂಡಿಕಾ ಭಾರತದ ರಿಟೇಲ್ ಕಾರು ಮಾರುಕಟ್ಟೆಯಲ್ಲಿ ಕಾರುಬಾರು ಮಾಡಿತ್ತು. ಇತ್ತೀಚೆಗೆ ಐದು ವರ್ಷಗಳ ಹಿಂದೆ ಕಾರನ್ನು ಏಪ್ರಿಲ್ 2018 ರಲ್ಲಿ ನಿಲ್ಲಿಸಲಾಯಿತು.
ಟಾಟಾ ನ್ಯಾನೋ ಎಂಬ 1 ಲಕ್ಷದ ಕಾರು
ಬಹುಶಃ 2008 ರಲ್ಲಿ ಬಿಡುಗಡೆಯಾದ ಟಾಟಾ ನ್ಯಾನೋಗಿಂತ ರತನ್ ಟಾಟಾ ಅವರ ಭಾರತದ ಬದ್ಧತೆಯನ್ನು ಸೂಚಿಸುವ ಯಾವುದೇ ಯೋಜನೆ ಮತ್ತೊಂದು ಸುಲಭವಾಗಿ ಸಿಗಲಿಕ್ಕಿಲ್ಲ.
ಭಾರತೀಯ ಮಧ್ಯಮ ವರ್ಗದವರಿಗೆ ಕೈಗೆಟುಕುವ 1 ಲಕ್ಷ ರೂಪಾಯಿ ಬೆಲೆಯ ವಿಶ್ವದ ಅತ್ಯಂತ ಅಗ್ಗದ ಕಾರನ್ನು ರಚಿಸುವುದು ಅವರ ಉದ್ದೇಶವಾಗಿತ್ತು. ಅವರ ಉದ್ದೇಶವನ್ನು ಅವರು ಯಶಸ್ವಿಯಾಗಿ ಪೂರೈಸಿದರು. ಒಂದು ಲಕ್ಷದ, ವಿಶ್ವದ ಕಾರನ್ನು ಅವರು ವಿಶ್ವಕ್ಕೆ ಪರಿಚಯಿಸಿದರು.
ಅವರ ಅಧಿಕಾರಾವಧಿಯ ಉದ್ದಕ್ಕೂ, ರತನ್ ಟಾಟಾ ಅವರು ಜಾಗ್ವಾರ್ ಲ್ಯಾಂಡ್ ರೋವರ್ ಮತ್ತು ಕೋರಸ್ ಸ್ಟೀಲ್ ಸೇರಿದಂತೆ ಅಂತರಾಷ್ಟ್ರೀಯ ಕಂಪನಿಗಳನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಉಕ್ಕು, ಆಟೋಮೊಬೈಲ್ಗಳು, ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನದಂತಹ ಕ್ಷೇತ್ರಗಳಲ್ಲಿ ಪ್ರಮುಖ ಕೈಗಾರಿಕೋದ್ಯಮಿ ಯಾಗಿ ಅವರು ಹೊರಹೊಮ್ಮಿ ಅವರು ಟಾಟಾ ಗ್ರೂಪ್ ಅನ್ನು ಬೆಳೆಸಿದರು. ರತನ್ ಟಾಟಾ ಅವರು ಡಿಸೆಂಬರ್ 2012 ರಲ್ಲಿ ನಿವೃತ್ತರಾದರು. ಆಗ ಟಾಟಾ ಸನ್ಸ್ ಅವರಿಗೆ ಚೇರ್ಮನ್ ಎಮೆರಿಟಸ್ ಎಂಬ ಗೌರವ ಪ್ರಶಸ್ತಿಯನ್ನು ನೀಡಿತು.
ವ್ಯಾಪಾರದ ಹೊರತಾಗಿ, ರತನ್ ಟಾಟಾ ಅವರು ಲೋಕೋಪಕಾರಕ್ಕೂ ಬದ್ಧರಾಗಿದ್ದರು, ಇದು ಭಾರತದಲ್ಲಿ ಸಮುದಾಯ ಅಭಿವೃದ್ಧಿ ಮತ್ತು ಸಾಮಾಜಿಕ ಉಪಕ್ರಮಗಳ ಮೇಲೆ ಕೇಂದ್ರೀಕರಿಸುವ ಟಾಟಾ ಟ್ರಸ್ಟ್‌ಗಳ ನಾಯಕತ್ವದಲ್ಲಿ ಮುಂಚೂಣಿಯಲ್ಲಿತ್ತು, ಈಗಲೂ ಇದೆ. ಅವರು ಶಿಕ್ಷಣ, ಆರೋಗ್ಯ ಮತ್ತು ಗ್ರಾಮೀಣ ಅಭಿವೃದ್ಧಿಯನ್ನು ಸುಧಾರಿಸಲು ಸಮರ್ಪಿತರಾಗಿದ್ದರು, ಲೆಕ್ಕವಿಲ್ಲದಷ್ಟು ಜನರ ಮೇಲೆ ಅವರು ಶಾಶ್ವತವಾದ ಪ್ರಭಾವವನ್ನು ಬೀರಿದರು.
ರಾಷ್ಟ್ರದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ, ಪದ್ಮವಿಭೂಷಣ, ಮತ್ತು ಬ್ರಿಟಿಷ್ ಸಾಮ್ರಾಜ್ಯದ ನೈಟ್ ಗ್ರ್ಯಾಂಡ್ ಕ್ರಾಸ್ ಆಫ್ ದಿ ಮೋಸ್ಟ್ ಎಕ್ಸಲೆಂಟ್ ಆರ್ಡರ್ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳೊಂದಿಗೆ ಗೌರವಿಸಲ್ಪಟ್ಟ ರತನ್ ಟಾಟಾ ಅವರು ತಮ್ಮ ಕೆಲಸದ ಶ್ರದ್ಧೆ ಮತ್ತು ಸಮಗ್ರತೆಗಾಗಿ ಹೆಸರುವಾಸಿ. ಅವರ ಈ ಸಾವು ಸಮಸ್ತ ಭಾರತೀಯರನ್ನು ಚಂಚಲಗೊಳಿಸಿದೆ.
National - International
ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ರದ್ದುಗೊಳಿಸಲು ನಿರಾಕರಿಸಿದ ಸುಪ್ರೀಂ
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಉಳಿದ ಏಳು ಜನರಿಗೆ ನೀಡಿದ್ದ ಜಾಮೀನು ಅರ್ಜಿ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕರ್ನಾಟಕ ಸರ್ಕಾರಕ್ಕೆ ಅಲ್ಪ ಹಿನ್ನಡೆಯಾಗಿದ್ದರೂ ಮತ್ತೊಂದೆಡೆ ಅಲ್ಪ ಮುನ್ನಡೆಯಾಗಿದೆ.
ದರ್ಶನ್ ಜಾಮೀನು ಅರ್ಜಿ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಶುಕ್ರವಾರ (ಜ.24) ನಡೆಸಿದ ಕೋರ್ಟ್, ಜಾಮೀನು ರದ್ದುಗೊಳಿಸಲು ಸುಪ್ರೀಂ ನಿರಾಕರಿಸಿದೆ. ಅದ್ಯಾಗೋ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಪರಿಶೀಲಿಸಲು ಕೋರ್ಟ್ ಅನುಮತಿಸಿದೆ.
ಈ ಪ್ರಕರಣ ಸಂಬಂಧ ನ್ಯಾಯಾಮೂರ್ತಿಗಳಾದ ಜೆ.ಬಿ ಪರ್ದಿವಾಲಾ ಹಾಗೂ ಆರ್. ಮಹದೇವನ್ ಇದ್ದ ಪೀಠವು ದರ್ಶನ್ ಹಾಗೂ ಉಳಿದ ಆರು ಮಂದಿಗೆ ನೋಟಿಸ್ ಹೊರಡಿಸಿದೆ.
National - International
IAS, IPS ಸೇರಿದಂತೆ ವಿವಿಧ 979 ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ
UPSC Recruitment 2025 – IAS Notification : ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ದೇಶದ ಉನ್ನತ ಗ್ರೂಪ್ ಎ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಕೇಂದ್ರ ಲೋಕಸೇವಾ ಆಯೋಗವು (UPSC) ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ.
ಎಷ್ಟು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಮತ್ತು ಯಾವ ಯಾವ ಹುದ್ದೆಗಳು?
ಕೇಂದ್ರ ಲೋಕಸೇವಾ ಆಯೋಗವು ಪ್ರತಿವರ್ಷ ಈ ನೇಮಕಾತಿಯನ್ನು ನಡೆಸುತ್ತದೆ. ಪ್ರಸ್ತುತ ಈ ವರ್ಷ ಒಟ್ಟು 979 ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ. ಅವುಗಳಲ್ಲಿ IAS, IPS, IFS, IRS ಸೇರಿದಂತೆ ಹಲವು ಇಲಾಖೆಗಳ ಹುದ್ದೆಗಳು.
ಶೈಕ್ಷಣಿಕ ಅರ್ಹತೆ : ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ನೀವು ಯಾವುದಾದರು ಪದವಿ ಮುಗಿಸಿದ್ದರೆ ಸಾಕು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಿರಿ.
Prelims Exam ನಡೆಯುವ ದಿನಾಂಕ – ಪೂರ್ವಭಾವಿ ಪರೀಕ್ಷೆಯು 25 ಮೇ 2025 ರಂದು ರಾಜ್ಯದ ಬೆಂಗಳೂರು, ಮೈಸೂರು ಮತ್ತು ಧಾರವಾಡ ಜಿಲ್ಲೆಯಲ್ಲಿ ನಡೆಯಲಿದೆ.
ಅರ್ಜಿ ಸಲ್ಲಿಸಲು ಪ್ರಮುಖ ಮಾಹಿತಿ :
ಅರ್ಹತೆ ಇರುವ ಅಭ್ಯರ್ಥಿಗಳು ಫೆಬ್ರವರಿ 11 ನೇ ತಾರೀಕಿನ ಒಳಗಾಗಿ ಆನ್ಲೈನ್ ಮೂಲಕ ಕೆಳಗಿನ ನೀಡಿರುವ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು UPSC ಅಧಿಕೃತ ಜಾಲತಾಣದ ಲಿಂಕ್ – https://upsconline.gov.in/upsc/OTRP/
National - International
ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2025: ರಾಜ್ಯದ ಸ್ತಬ್ಧಚಿತ್ರಕ್ಕೆ ಪ್ರಶಸ್ತಿ ಲಭಿಸುವ ವಿಶ್ವಾಸವಿದೆ ಎಂದ ಆಯುಕ್ತ ಹೇಮಂತ ನಿಂಬಾಳ್ಕರ್
ನವದೆಹಲಿ: ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದ್ದು, ಈ ಬಾರಿ “ಲಕ್ಕುಂಡಿಯ ಶಿಲ್ಪಕಲೆಯ ತೊಟ್ಟಿಲು”ವಿಷಯಾಧಾರಿತ ಸ್ತಬ್ಧಚಿತ್ರವು ಅತ್ಯಂತ ಅತ್ಯಾಕರ್ಷಣೀಯವಾಗಿದ್ದು, ಗಣರಾಜ್ಯೋತ್ಸವದಲ್ಲಿ ಭಾಗವಹಿಸಲಿರುವ ರಾಜ್ಯದ ಸ್ತಬ್ಧಚಿತ್ರವು ಪ್ರಶಸ್ತಿ ಪಡೆಯುವ ವಿಶ್ವಾಸವಿದೆ ಎಂದು ವಾರ್ತಾ ಇಲಾಖೆಯ ಆಯುಕ್ತರಾದ ಹೇಮಂತ ನಿಂಬಾಳ್ಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಬಾರಿಯ ಗಣರಾಜ್ಯೋತ್ಸವದಲ್ಲಿ ರಾಜ್ಯದಿಂದ ಭಾಗವಹಿಸಲಿರುವ ಸ್ತಬ್ಧಚಿತ್ರವು ಗದಗಿನ ಲಕ್ಕುಂಡಿಯಲ್ಲಿರುವ ಮಂದಿರಕ್ಕೆ ಹೋಲುವಂತಿರುವ ಸ್ತಬ್ಧಚಿತ್ರವನ್ನು ಅಂತರರಾಷ್ಟ್ರೀಯ ಕಲಾವಿದ ಶಶಿಧರ ಅಡಪ ವಿನ್ಯಾಸಗೊಳಿಸಿದ್ದು, ದೆಹಲಿಯ ರಾಷ್ಟ್ರೀಯ ರಂಗಶಾಲಾ ಕ್ಯಾಂಪಿನಲ್ಲಿ ಕಳೆದ ಒಂದು ತಿಂಗಳಿನಿಂದ ರಾಜ್ಯದ 50ಕ್ಕೂ ಹೆಚ್ಚು ಜನ ಕಲಾವಿದರು,ಕುಶಲ ಕರ್ಮಿಗಳು ಮೈಕೊರೆಯುವ ಚಳಿಯಲ್ಲಿ ಸ್ತಬ್ಧಚಿತ್ರವನ್ನು ನಿರ್ಮಾಣಗೊಳಿಸಿದ್ದಾರೆ.
ಜ.23ರ ಗುರುವಾರ ನವದೆಹಲಿಯ ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ನಡೆದ ಸ್ತಬ್ಧಚಿತ್ರದ ಪೂರ್ವಾಭ್ಯಾಸದಲ್ಲಿ ರಾಜ್ಯದ ಲಕ್ಕುಂಡಿ ಶಿಲ್ಪಕಲೆಯ ತೊಟ್ಟಿಲು ಸ್ತಬ್ಧಚಿತ್ರಕ್ಕೆ ಎರಡೂ ಬದಿಯಲ್ಲಿ ನೆರೆದ ಜನಸ್ತೋಮವು ತಮ್ಮ ಹತ್ತಿರ ಸ್ತಬ್ಧಚಿತ್ರ ಬಂದಾಗ ಅದರ ವಿನ್ಯಾಸ, ಶಿಲ್ಪಕಲೆ, ಸಂಸ್ಕೃತಿ, ಸಾಂಪ್ರದಾಯಿಕ ಉಡುಗೆಯೊಂದಿಗೆ ಭಾಗವಹಿಸಿದ ಕಲಾವಿದರ ದೃಶ್ಯವನ್ನು ಕಂಡ ಜನರು ಕರತಾಡನ ಮೂಲಕ ಅಭೂತಪೂರ್ವವಾಗಿ ಸ್ವಾಗತಿಸಿ ಪ್ರಶಂಸೆ ವ್ಯಕ್ತಪಡಿಸಿದರು.
ಕರ್ತವ್ಯಪಥದಲ್ಲಿ ಸೇರಿದ ಜನರಿಂದ ನಿರೀಕ್ಷೆಗೂ ಮೀರಿ ಬಂದ ಪ್ರತಿಕ್ರಿಯೆಗೆ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವ ರಾಜ್ಯದ ಸ್ತಬ್ಧಚಿತ್ರಕ್ಕೆ ಪ್ರಶಸ್ತಿ ದೊರೆಯಲಿದೆ ಎಂಬ ವಿಶ್ವಾಸವನ್ನು ಆಯುಕ್ತರಾದ ಹೇಂಮಂತ್ ನಿಂಬಾಳ್ಕರ್ ಅವರು ವ್ಯಕ್ತಪಡಿಸಿದರು.
ಕರ್ತವ್ಯ ಪಥದಲ್ಲಿ ಸಾಗಿದ ಸ್ತಬ್ದಚಿತ್ರಕ್ಕೆ ಕನ್ನಡ ಸಾಹಿತ್ಯ ಇರುವ “ಶಿಲ್ಪಕಲೆಯ ತೊಟ್ಟಿಲು ನಮ್ಮ ಗದುಗಿನ ಲಕ್ಕುಂಡಿ” ಎಂಬ ಹಾಡಿಗೆ ಹೆಸರಾಂತ ಕಲಾವಿದ ಪ್ರವೀಣ ಡಿ.ರಾವ್ ಅವರ ಸಂಗೀತ ಸಂಯೋಜನೆಯ ನೀನಾದಕ್ಕೆ ಗದಗ, ಬೆಂಗಳೂರು, ಮೈಸೂರು ಹಾಗೂ ಧಾರವಾಡದಿಂದ ಆಗಮಿಸಿದ ಸ್ತಬ್ಧಚಿತ್ರದ ಕಲಾವಿದರು ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿ ಹೆಚ್ಚಿನ ಮೆರಗು ತಂದಿದ್ದಲ್ಲದಲೇ ಅಲ್ಲಿ ಸೇರಿದವರನ್ನು ರೋಮಾಂಚನಗೊಳಿಸಿತು.
ಸ್ತಬ್ದಚಿತ್ರದ ಮೇಲ್ಭಾಗದಲ್ಲಿ 10 ಜನ ಕಲಾವಿದರು ಸೇರಿದಂತೆ 18 ಜನ ಕಲಾವಿದರಿದ್ದು, ಸ್ತಬ್ಧಚಿತ್ರದ ಇಕ್ಕೆಲಗಳಲ್ಲಿ ನಾಲ್ಕು ಪುರುಷ-ಮಹಿಳೆಯರು ಸಾಂಪ್ರಾದಾಯಿಕ ಉಡುಗೆಯಲ್ಲಿ ಭಾಗವಹಿಸಿದ್ದು, ಸ್ತಬ್ಧಚಿತ್ರಕ್ಕೆ ಇನ್ನಷ್ಟು ಮೆರಗು ತಂದಿತು.
ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಲಕ್ಕುಂಡಿಯನ್ನು ಅದರ ಅದ್ಭುತ ಕಲ್ಲಿನ ವಾಸ್ತುಶಿಲ್ಪಕ್ಕಾಗಿ ‘ಶಿಲ್ಪಕಲೆಯ ತೊಟ್ಟಿಲು’ ಎಂದು ಕರೆಯಲಾಗುತ್ತದೆ. ಇಲ್ಲಿನ ಸುಂದರವಾದ ದೇವಾಲಯಗಳು, ಮೆಟ್ಟಿಲು ಬಾವಿಗಳು ಮತ್ತು ಚಾಲುಕ್ಯ ರಾಜವಂಶದ ಶಾಸನಗಳಿಗೆ ನೆಲೆಯಾಗಿದೆ. ಸಾಂಸ್ಕೃತಿಕ ಶಕ್ತಿ ಕೇಂದ್ರವಾಗಿರುವುದರ ಜೊತೆಗೆ, ಕ್ರಿ. ಶ. 10 ರಿಂದ 12 ನೇ ಶತಮಾನದ ನಡುವೆ ಲಕ್ಕುಂಡಿ ಒಂದು ದೊಡ್ಡ ವಾಣಿಜ್ಯ ಕೇಂದ್ರವಾಗಿತ್ತು. ಈ ನಗರವು ಹಲವಾರು ರಾಜವಂಶಗಳಿಂದ ಆಳಲ್ಪಟ್ಟಿತ್ತಾದರೂ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಚಾಲುಕ್ಯರ ರಾಜವಂಶ.
ಲಕ್ಕುಂಡಿಯು ಪ್ರಾಚೀನಾನ್ವೇಷಕರು ಮತ್ತು ವಾಸ್ತುಶಿಲ್ಪ ಪ್ರಿಯರ ಸ್ವರ್ಗವಾಗಿದೆ. ಇದು 50 ದೇವಾಲಯಗಳನ್ನು ಹೊಂದಿದ್ದು, ಅವುಗಳಲ್ಲಿ ಹೆಚ್ಚಿನವು ಶಿವನಿಗೆ ಸಮರ್ಪಿತವಾಗಿವೆ; 101 ಮೆಟ್ಟಿಲು ಬಾವಿಗಳು (ಕಲ್ಯಾಣಿ / ಪುಷ್ಕರಣಿ); ಮತ್ತು 29 ಶಾಸನಗಳು ಇಲ್ಲಿವೆ. ಇವುಗಳು ಕಲ್ಯಾಣಿ ಚಾಲುಕ್ಯರ ಕಲೆ, ಸಂಸ್ಕೃತಿ ಮತ್ತು ವಾಸ್ತುಶಿಲ್ಪದ ಶ್ರೇಷ್ಠತೆಯ ಸಂಕೇತವಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಿರ್ವಹಿಸುತ್ತಿರುವ ವಸ್ತುಸಂಗ್ರಹಾಲಯವು ಲಕ್ಕುಂಡಿಯ ಶ್ರೀಮಂತ ಶಿಲ್ಪಕಲೆಯನ್ನು ಪ್ರದರ್ಶಿಸುತ್ತಿದೆ.
ಸ್ತಬ್ಧಚಿತ್ರದ ಮುಂಭಾಗವು ಬ್ರಹ್ಮ ಜಿನಾಲಯ ದೇವಸ್ಥಾನದ ಬ್ರಹ್ಮನ ಪ್ರತಿಮೆಯನ್ನು ಹೊಂದಿದೆ. ಇದು ಲಕ್ಕುಂಡಿಯಲ್ಲಿರುವ ಅತ್ಯಂತ ಹಳೆಯ ಜೈನ ದೇವಾಲಯವಾಗಿದ್ದು ಭಗವಾನ್ ಮಹಾವೀರನಿಗೆ ಸಮರ್ಪಿತವಾಗಿದೆ. ಅದರ ನಂತರ ಬ್ರಹ್ಮ ಜಿನಾಲಯ ದೇವಸ್ಥಾನದ ತೆರೆದ ಕಂಬದ ಮಂಟಪವಿದೆ. ಸ್ತಬ್ಧಚಿತ್ರದ ಮುಖ್ಯ ವಿಭಾಗವು ಭವ್ಯವಾದ ಮತ್ತು ಅಲಂಕೃತವಾದ ಕಾಶಿ ವಿಶ್ವೇಶ್ವರ ದೇವಸ್ಥಾನ ಮತ್ತು ಶಿವನಿಗೆ ಸಮರ್ಪಿತವಾದ ನನ್ನೇಶ್ವರ ದೇವಸ್ಥಾನವನ್ನು ಪ್ರದರ್ಶಿಸುತ್ತದೆ.
-
Mysore9 hours ago
ಹೃದಯಾಘಾತದಿಂದ ಯುವರಾಜ ಕಾಲೇಜಿನ ಪ್ರಾಂಶುಪಾಲ ನಿಧನ
-
Kodagu10 hours ago
ಎ.ಸಿ.ಎಫ್ ಆಗಿ ವಾಟೇರಿರ ಕಾರ್ಯಪ್ಪ ಅಧಿಕಾರ ಸ್ವೀಕಾರ
-
Mysore7 hours ago
ಲೋಕಾಯುಕ್ತ ಸರ್ಕಾರದ ಕೈಗೊಂಬೆ: ಸಿಎಂ ಕ್ಲೀನ್ ಚೀಟ್ಗೆ ಹಳ್ಳಿಹಕ್ಕಿ ಪ್ರತಿಕ್ರಿಯೆ
-
Kodagu10 hours ago
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ದಕ್ಕಬೇಕು
-
Kodagu8 hours ago
ಕಡಂಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಬಿಡ್ಡಿಂಗ್ ಪ್ರಕ್ರಿಯೆ
-
State24 hours ago
ಬೆಂಗಳೂರು ಅರಮನೆ ಮೈದಾನದ ಜಾಗಕ್ಕೆ ಟಿ.ಡಿ.ಆರ್ ವಿತರಿಸುವುದು ರಾಜ್ಯದ ಹಿತಾಸಕ್ತಿಗೆ ಪ್ರತಿಕೂಲ: ಎಚ್.ಕೆ ಪಾಟೀಲ
-
Mysore11 hours ago
ಚರಂಡಿಯಲ್ಲಿ ಸಿಲುಕಿಕೊಂಡಿದ್ದ ಕರು ರಕ್ಷಣೆ
-
Kodagu6 hours ago
ಬೆಂಗಳೂರು ಒಕ್ಕಲಿಗ ಸಂಘದ ಸಹಯೋಗದೊಂದಿಗೆ ಪ್ರತಿಭಟನೆ ಸಿದ್ದತೆ