Cultural
ಆದಿಚುಂಚನಗಿರಿ ವಿಶ್ವವಿದ್ಯಾಲಯ ಆಯೋಜಿಸಿದ್ದ “ಬೆಳಕು” ಶಿಕ್ಷಕರ ದಿನಾಚರಣೆ

ನಾಗಮಂಗಲ: ಪ್ರತಿಯೊಂದು ರಾಷ್ಟ್ರದ ಪ್ರಗತಿಯು ಆ ದೇಶದ ಶಿಕ್ಷಕರ ಜ್ಞಾನ ಮತ್ತು ಪ್ರಬುದ್ಧತೆಯ ಮೇಲೆ ನಿರ್ಧರಿಸಲ್ಪಡುತ್ತದೆ ಎಂದು ಆದಿಚುಂಚನಗಿರಿ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ ನುಡಿದರು. ಸೆಪ್ಟೆಂಬರ್ 20 ಬುಧವಾರ ತಾಲ್ಲೂಕಿನ ಬಿಜಿ ನಗರದ ಬಿಜಿಎಸ್ ಸಭಾಂಗಣದಲ್ಲಿ ಆದಿಚುಂಚನಗಿರಿ ವಿಶ್ವವಿದ್ಯಾಲಯ ಆಯೋಜಿಸಿದ್ದ “ಬೆಳಕು” ಶಿಕ್ಷಕರ ದಿನಾಚರಣೆಯ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ವಿಶ್ವದಲ್ಲಿ ಮಾನವ ದೇಹವು ಮೂರು ಆಯಾಮಗಳಿಂದ ಸುತ್ತುವರಿದಿದೆ, ಅಸ್ತಿತ್ವಕ್ಕೆ ಕಾರಣವಾದ ಬುದ್ಧಿ ಮನಸ್ಸು ಮತ್ತು ಅಹಂಗಳಿಂದ ಜ್ಞಾನೋದಯ ಹೊಂದುವುದೇ ಪ್ರಬುದ್ಧತೆ ಎಂದು 2500 ವರ್ಷಗಳ ಹಿಂದೆಯೇ ಜಗತ್ತಿಗೆ ತಿಳಿಸಿದ ಗೌತಮ ಬುದ್ಧನು ಶ್ರೇಷ್ಠ ಗುರು ಸ್ಥಾನದಲ್ಲಿ ನಿಂತರೆ, ತಮ್ಮ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲು ಇಚ್ಚಿಸಿದ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ರಂತಹ ಮಹಾನ್ ದಾರ್ಶನಿಕರು ಜ್ಞಾನದ ಮೇರು ಪಂಕ್ತಿಗೆ ಸೇರುತ್ತಾರೆ. ಇವರ ಆದರ್ಶ ಗುಣಗಳನ್ನು ಪಾಲಿಸುತ್ತಾ, ವ್ಯಕ್ತಿತ್ವ ವಿಕಸನದ ಸನ್ಮಾರ್ಗದಲ್ಲಿ ಮುನ್ನಡೆದು ಸರ್ವ ಗುರು ವೃಂದಕ್ಕೆ ಗೌರವ ನಮನ ಸಲ್ಲಿಸೋಣ ಎಂದು ಹಾರೈಸಿದರು.
ಸಾಂಸ್ಥಿಕ ಕಾಲೇಜುಗಳ ಪ್ರಾಧ್ಯಾಪಕರಾದ ಡಾ. ತೇಜಸ್ವಿ ಎಚ್ ಎಲ್, ಎ ಹೆಚ್ ಗೋಪಾಲ್, ಶೋಭಾ ಕೆ ಆರ್, ಡಾ. ತಮ್ಮಣ್ಣ ಗೌಡ, ಪ್ರಭಾವತಿ ಕೆ, ಪ್ರಕಾಶ್ ಹೆಚ್ ವಿ, ಡಾ. ರಾಜೇಶ್ ವಿ, ಕಾವ್ಯಶ್ರೀ, ಅನಲಾ ಟ್ಯಾಗೋರ್, ಶ್ವೇತ ಎ ಸಿ ಇವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ, ಸಂಶೋಧನೆಗಾಗಿ ಡಾ. ಅಮಿತಾ, ನಿವೃತ್ತ ಪ್ರಾಧ್ಯಾಪಕ ಶಂಕರಲಿಂಗೇಗೌಡ, ವಿಜಯ ಕುಮಾರ, ಡಾ. ವಿಜಯಲಕ್ಷ್ಮಿ ಹಾಗೂ
ಶಿಕ್ಷಣ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ, ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ತಾಲ್ಲೂಕಿನ ಎಂ ಹೊಸೂರು ಸರ್ಕಾರಿ ಶಾಲಾ ಶಿಕ್ಷಕ ಜಿ. ಪ್ರಶಾಂತ್ ರವರನ್ನು ಈ ವೇದಿಕೆಯಲ್ಲಿ ಗೌರವಿಸಿ ಸನ್ಮಾನಿಸಲಾಯಿತು.
ಆದಿಚುಂಚನಗಿರಿ ವಿಶ್ವವಿದ್ಯಾಲಯ ಉಪಕುಲಪತಿ ಡಾ ಎಂ ಎ ಶೇಖರ್ ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ ಶಿಕ್ಷಕರ ದಿನಾಚರಣೆಯ ಮಹತ್ವ ಮತ್ತು ವಿಶ್ವವಿದ್ಯಾಲಯದ ಕ್ಷೇತ್ರ ಕಾರ್ಯದ ವೈವಿಧ್ಯತೆಯನ್ನು ವಿವರಿಸಿದರು.
ಸಭಾ ಪೂರ್ವದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಸೌರಭ, ಕ್ರೀಡಾ ವಿಜೇತ ಕಾಲೇಜು ಹಾಗೂ ಶಿಕ್ಷಕರಿಗೆ ಬಹುಮಾನ ವಿತರಣೆ ಸಾಕಾರಗೊಂಡಿತು.
ಕಾರ್ಯಕ್ರಮದಲ್ಲಿ ರಿಜಿಸ್ಟ್ರಾರ್ ಡಾ. ಸಿ ಕೆ ಸುಬ್ಬರಾಯ, ಶೈಕ್ಷಣಿಕ ಮುಖ್ಯಸ್ಥರಾದ ಡಾ. ಬಿ ರಮೇಶ್, ಆಡಳಿತ ಮತ್ತು ಶೈಕ್ಷಣಿಕ ಸಲಹೆಗಾರ ಡಾ. ಈ ಎಸ್ ಚಕ್ರವರ್ತಿ, ಸಾಂಸ್ಥಿಕ ಕಾಲೇಜುಗಳ ಪ್ರಾಂಶುಪಾಲರುಗಳಾದ ಡಾ .ಬಿ ಕೆ ನರೇಂದ್ರ, ಡಾ. ಎಂ ಜಿ ಶಿವರಾಮು, ಡಾ. ಎ ಟಿ ಶಿವರಾಮು, ಡಾ. ಪ್ರಶಾಂತ್ ಕೆ, ಪ್ರೊ. ಎನ್ ರಾಮು, ಪ್ರೊ. ಚಂದ್ರಶೇಖರ್, ಡಾ. ಭಾರತಿರಮೇಶ್, ವಿ ಪುಟ್ಟಸ್ವಾಮಿ, ಟಿ ಎನ್ ಶಿಲ್ಪಾ, ಆಸ್ಪತ್ರೆ ನಿರ್ದೇಶಕ ಡಾ. ಶಿವಕುಮಾರ್, ಹಣಕಾಸು ಅಧಿಕಾರಿ ಬಿ ಕೆ ಉಮೇಶ್ ಹಾಗೂ ಇತರರಿದ್ದರು.
Cultural
ಶ್ರೀರಾಮನ ಚರಿತ್ರೆ ವಿಶ್ವಕ್ಕೆ ಸಾರಿದ ಶ್ರೀಮಹರ್ಷಿ ವಾಲ್ಮೀಕಿ — ಶಾಸಕ ದರ್ಶನ್ ಧ್ರುವನಾರಾಯಣ್

ನಂಜನಗೂಡು ನ.15
ಶ್ರೀ ರಾಮನ ಚರಿತ್ರೆಯನ್ನು ವಿಶ್ವಕ್ಕೆ ಸಾರಿದ ಮಹಾನ್ ನಾಯಕ ಶ್ರೀ ಮಹರ್ಷಿ ವಾಲ್ಮೀಕಿ ಅವರ ಆದರ್ಶ ಗುಣಗಳು ಪ್ರಜಾಪ್ರಭುತ್ವಕ್ಕೆ ಬಹು ಮುಖ್ಯವಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ನಂಜನಗೂಡು ತಾಲೂಕಿನ ಹುರ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಾಲ್ಮೀಕಿ ಸಮಾಜದ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ.ಅವುಗಳನ್ನು ಪ್ರತಿಯೊಬ್ಬರು ಸದ್ಬಳಕೆ ಪಡೆದುಕೊಳ್ಳುವ ಮೂಲಕ ಆರ್ಥಿಕ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು ಸಮಾಜದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವ ಮೂಲಕ ಎಲ್ಲಾ ರೀತಿಯ ಸಹಕಾರ ನೀಡುತ್ತೆನೆ ಎಂದರು.
ಸರ್ಕಾರಿ ಸೌಲಭ್ಯ ಪಡೆಯಲು ಯಾವುದೇ ಜಾತಿಭೇದ ಮಾಡಬೇಡಿ ಸಮಾಜಕ್ಕೆ ನಾವೆಲ್ಲರೂ ಒಂದೇ ಎಂಬ ಸಂದೇಶ ವಾಲ್ಮೀಕಿ ಸಮುದಾಯ ಸಾರಬೇಕು.ಎಲ್ಲರನ್ನೂ ಒಗ್ಗೂಡಿಸುವ ಮೂಲಕ ಯಾವುದೇ ಭಿನ್ನಾಭಿಪ್ರಾಯ ಬಾರದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಗ್ರಾಮದ ಎಲ್ಲ ನಾಯಕ ಸಮಾಜದವರನ್ನು ಒಟ್ಟಾಗಿ ಕರೆದೊಯ್ಯುವ ಜವಾಬ್ದಾರಿ ಇರಬೇಕು.ಶ್ರೀ ಮಹರ್ಷಿ ವಾಲ್ಮೀಕಿ ಅವರ ರಾಮಾಯಣದಲ್ಲಿ ಹೆಚ್ಚು ರೂಪಕ ಅಲಂಕಾರ ಬಳಕೆಯಾಗಿರುವುದ್ದರಿಂದ ಕಾಳಿದಾಸ ಕವಿ ಮಹರ್ಷಿ ವಾಲ್ಮೀಕಿ ಅವರನ್ನು ಕವಿಕುಲ ಚಕ್ರವರ್ತಿ ಎಂಬುದಾಗಿಯೋ ವರ್ಣಿಸಿದ್ದಾರೆ ಅಲ್ಲದೇ ಜಗತ್ತಿನ ಶ್ರೇಷ್ಠ ವಿಮಾರ್ಶಕ ಥಾಮಸ್ ಪ್ರಕಾರ ವಾಲ್ಮೀಕಿ ರಾಮಾಯಣ ಜಗತ್ತಿನ ಶ್ರೇಷ್ಠ ಕಾವ್ಯ ಸಂಪತ್ತು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕುಂಬ್ರಳ್ಳಿ ಸುಬ್ಬಣ್ಣ, ಶ್ರೀ ಕಂಠನಾಯಕ,ತಾ ಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್,ನಾಯಕ ಸಂಘದ ತಾಲ್ಲೂಕು ಅದ್ಯಕ್ಷ ಬಂಗಾರನಾಯಕ, ಕಾಂಗ್ರೆಸ್ ಯುವ ಘಟಕದ ಅದ್ಯಕ್ಷ ದೇಬೂರು ಆಶೋಕ್,ಗ್ರಾ ಪಂ ಅದ್ಯಕ್ಷೆ ತಾಯಮ್ಮ,
ದೊರೆಸ್ವಾಮಿನಾಯಕ,ಅಭಿನಂದನ್ ಪಾಟೀಲ್,ಗ್ರಾ ಪಂ ಸದಸ್ಯದೇವನಾಯಕ,ನಾಗನಾಯ್ಕ,ಶ್ರೀಕಂಠಸ್ವಾಮಿ,ಶಿವರಾಜು,ಪ್ರಕಾಶ್,ನಂಜುಂಡಸ್ವಾಮಿ, ಸಿದ್ದು,ಮಹೇಶ್, ಮಹೇಂದ್ರ, ಹಾಗೂ ಕಿಚ್ಚಿನ ಅಭಿಮಾನಿ ಬಳಗದವರು ಹಾಜರಿದ್ದರು.
ನಂಜನಗೂಡು ಮಹದೇವಸ್ವಾಮಿ ಪಟೇಲ್.
Cultural
ಪುರಾತನ ಕಾಲದ ಶ್ರೀ ನಂಜುಂಡೇಶ್ವರ ಸ್ವಾಮಿ ದೇಗುಲದಲ್ಲಿ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ

ಆಲೂರು : ನೂರಾರು ವರ್ಷಗಳ ಪುರಾತನ ಕಾಲದ ಶ್ರೀ ನಂಜುಂಡೇಶ್ವರ ಸ್ವಾಮಿ ದೇಗುಲದಲ್ಲಿ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.ತಾಲ್ಲೂಕಿನ ಕಸಬಾ ಹೋಬಳಿ ಸೊಂಪುರ ಗ್ರಾಮದ ಸಮೀಪದಲ್ಲಿರುವ ನಂಜದೇವರ ಕಾವಲಿನಲ್ಲಿ ಸುಕ್ಷೇತ್ರ ನಂಜುಂಡೇಶ್ವರ ದೇವಾಲಯದಲ್ಲಿ 52ನೇ ಹುಣ್ಣಿಮೆ ಮಹೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಬೆಳಗಿನ ಜಾವದಿಂದಲೇ ದೇವಾಲಯ ಶುಚಿಗೊಳಿಸಿ ವಿವಿಧ ಹೂಗಳಿಂದ ಅಲಂಕರಿಸಿ ಪೂಜಾ ವಿಧಿ ವಿಧಾನಗಳು ಪ್ರಾರಂಭವಾಗಿ ವಿವಿಧ ಅಭಿಷೇಕ ಸೇರಿದಂತೆ ಅಲಂಕಾರ ಮಹಾ ಮಂಗಳಾರತಿ ತೀರ್ಥ ಪ್ರಸಾದ ಹಾಗೂ ಅನ್ನಸಂತರ್ಪಣೆ ನಡೆಯಿತು.
ಆಲೂರು ತಾಲೂಕು ಸೇರಿದಂತೆ ಹಲವೆಡೆಗಳಿಂದ ನೂರಾರು ಭಕ್ತರ ದಂಡು ಅಗಮಿಸಿ ಪೂಜಾ ಕಾರ‍್ಯದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.ವಿಶೇಷ ಎಂದರೆ ಭಕ್ತಾಧಿಗಳು ತಮ್ಮ ಇಷ್ಟಾರ್ಥ ಕೋರಿಕೆಗಾಗಿ ಹರಕೆ ಹೊರುತ್ತಿದ್ದು. ಕೋರಿಕೆಗಳು ಈಡೇರಿದ ನಂತರ ಭಕ್ತರು ಪ್ರತಿ ಸೋಮವಾರ, ಶುಕ್ರವಾರ, ಅಮಾವಾಸ್ಯೆ, ಹುಣ್ಣಿಮೆಯ ದಿನಗಳಂದು ವಿಶೇಷ ಪೂಜೆ, ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಭಕ್ತಾಧಿಗಳೇ ಸ್ವಯಂ ಪ್ರೇರಿತರಾಗಿ ಹಮ್ಮಿಕೊಳ್ಳುತ್ತ ಬಂದಿದ್ದಾರೆ ಎಂದು ದೇಗುಲ ಟ್ರಸ್ಟ್ ಅಧ್ಯಕ್ಷ ಈರಣ್ಣಯ್ಯ ತಿಳಿಸಿದ್ದಾರೆ.
Cultural
ಬ್ರಹ್ಮ ಕುಮಾರೀಸ್ ಈಶ್ವರಿ ವಿಶ್ವವಿದ್ಯಾಲಯದ ವತಿಯಿಂದ ಪತ್ರಕರ್ತರ ಸಂಘದಲ್ಲಿ ರಕ್ಷಾಬಂಧನ

ಮಂಡ್ಯ: ನಗರದ ಬನ್ನೂರು ರಸ್ತೆಯಲ್ಲಿರುವ ಬ್ರಹ್ಮ ಕುಮಾರೀಸ್ ಈಶ್ವರಿಯ ವಿಶ್ವವಿದ್ಯಾಲಯದ ವತಿಯಿಂದ ಪತ್ರಕರ್ತರ ಸಂಘದಲ್ಲಿ ಸೋಮವಾರ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು .ಪತ್ರಕರ್ತರಿಗೆ ರಾಕಿ ಕಟ್ಟುವ ಮೂಲಕ ಕಾರ್ಯಕ್ರಮಕ್ಕೆ ಬ್ರಹ್ಮ ಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದ ಬಿ.ಕೆ.ಶ್ವೇತ ಚಾಲನೆ ನೀಡಿದರು.ನಂತರ ಬಿ.ಕೆ.ಶಾರದಾ ಅವರು ಮಾತನಾಡಿ, ನನ್ನ ಕರ್ಮ ನನ್ನನ್ನು ರಕ್ಷಣೆ ಮಾಡುತ್ತದೆ. ಪರಮಾತ್ಮನು ರಕ್ಷಿಸುತ್ತಾನೆ ಎಂದರು.ಸಮಾಜದಲ್ಲಿ ಕಾಮ, ಕ್ರೋಧ, ಮದ, ಮತ್ಸರಗಳು ಅತಿಯಾಗಿದೆ. ಹಾಗಾಗಿ ಪಂಚಕರ್ಮಗಳಿಂದ ನಮಗೆ ರಕ್ಷಣೆ ಬೇಕಿದೆ ಎಂದು ತಿಳಿಸಿದರು.
ಎಲ್ಲಾ ಆತ್ಮಗಳು ಒಳ್ಳೆಯ ಆತ್ಮಗಳಾಗಿದೆ. ಆದರೆ ಆತ್ಮದಲ್ಲಿನ ನಕರಾತ್ಮಕ ಭಾವನೆ ಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಆ ಶಕ್ತಿಯನ್ನು ಪಡೆದುಕೊಳ್ಳಬೇಕು ಎಂದರು. ವಿದ್ಯಾದೇವತೆ ಸರಸ್ವತಿಗೆ ಪರಮಾತ್ಮನ ಜ್ಞಾನವಿದೆ. ಹಾಗಾಗಿ ಆಕೆಯನ್ನು ವಿದ್ಯಾದೇವಿ ಎಂದು ಪೂಜಿಸುತ್ತೇವೆ ಎಂದು ತಿಳಿಸಿದ ಅವರು, ಆಧ್ಯಾತ್ಮಿಕ ಜ್ಞಾನವಿಲ್ಲದೆ ನಾವು ಏನನ್ನು ಸಾಧಿಸಲು ಆಗುವುದಿಲ್ಲ. ಈ ಜ್ಞಾನವಿದ್ದಲ್ಲಿ ವಿಕಾರಗಳಿಂದ ಮುಕ್ತಿ ಪಡೆಯಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಬಿಕೆ ಗೀತಾಂಜಲಿ, ಬಿಕೆ ಯಶೋಧ, ಬಿ.ಕೆ.ಪ್ರಶಾಂತ್ ಉಪಸ್ಥಿತರಿದ್ದರು.
-
State23 hours ago
ನಂದಿನಿ ಹಾಲು ಮತ್ತಷ್ಟು ದುಬಾರಿ: ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಅನುಮೋದನೆ
-
Hassan21 hours ago
ನನ್ನ ರಕ್ಷಿಸಿ, ಆಸ್ತಿ ಉಳಿಸಿಕೊಡಿ: ಡಿಸಿ ಕಛೇರಿ ಮುಂದೆ ವೃದ್ಧೆ ಅಳಲು
-
Chamarajanagar19 hours ago
ಗುಂಡ್ಲುಪೇಟೆ ಪಟ್ಟಣದ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಜಯಕುಮಾರ್ ಅಧಿಕಾರ ಸ್ವೀಕಾರ
-
Kodagu20 hours ago
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ
-
Hassan20 hours ago
ಹೊಸಕೋಟೆ ಸಹಕಾರ ಸಂಘಕ್ಕೆ 12ಜನ ನೂತನ ನಿರ್ದೇಶಕರ ಆಯ್ಕೆ
-
Hassan23 hours ago
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ಖಂಡಿಸಿ ದೂರು
-
Mysore19 hours ago
ಜಿಡಿ ಹರೀಶ್ಗೌಡ ಸಹಕಾರ ಸಂಘದ ಭ್ರಷ್ಟಾಚಾರ ಮುಚ್ಚಿಹಾಕಲು ಪ್ರತಿಭಟನೆ ಮಾಡುತ್ತಿದ್ದಾರೆ: ಎಚ್.ಪಿ.ಮಂಜುನಾಥ್
-
State16 hours ago
ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಜಸ್ಟ್ 4ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ : ಹೇಗೆ ಅರ್ಜಿ ಸಲ್ಲಿಸುವುದು?