Cultural
ಪುರಾತನ ಕಾಲದ ಶ್ರೀ ನಂಜುಂಡೇಶ್ವರ ಸ್ವಾಮಿ ದೇಗುಲದಲ್ಲಿ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ
ಆಲೂರು : ನೂರಾರು ವರ್ಷಗಳ ಪುರಾತನ ಕಾಲದ ಶ್ರೀ ನಂಜುಂಡೇಶ್ವರ ಸ್ವಾಮಿ ದೇಗುಲದಲ್ಲಿ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.ತಾಲ್ಲೂಕಿನ ಕಸಬಾ ಹೋಬಳಿ ಸೊಂಪುರ ಗ್ರಾಮದ ಸಮೀಪದಲ್ಲಿರುವ ನಂಜದೇವರ ಕಾವಲಿನಲ್ಲಿ ಸುಕ್ಷೇತ್ರ ನಂಜುಂಡೇಶ್ವರ ದೇವಾಲಯದಲ್ಲಿ 52ನೇ ಹುಣ್ಣಿಮೆ ಮಹೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಬೆಳಗಿನ ಜಾವದಿಂದಲೇ ದೇವಾಲಯ ಶುಚಿಗೊಳಿಸಿ ವಿವಿಧ ಹೂಗಳಿಂದ ಅಲಂಕರಿಸಿ ಪೂಜಾ ವಿಧಿ ವಿಧಾನಗಳು ಪ್ರಾರಂಭವಾಗಿ ವಿವಿಧ ಅಭಿಷೇಕ ಸೇರಿದಂತೆ ಅಲಂಕಾರ ಮಹಾ ಮಂಗಳಾರತಿ ತೀರ್ಥ ಪ್ರಸಾದ ಹಾಗೂ ಅನ್ನಸಂತರ್ಪಣೆ ನಡೆಯಿತು.

ಆಲೂರು ತಾಲೂಕು ಸೇರಿದಂತೆ ಹಲವೆಡೆಗಳಿಂದ ನೂರಾರು ಭಕ್ತರ ದಂಡು ಅಗಮಿಸಿ ಪೂಜಾ ಕಾರ‍್ಯದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.ವಿಶೇಷ ಎಂದರೆ ಭಕ್ತಾಧಿಗಳು ತಮ್ಮ ಇಷ್ಟಾರ್ಥ ಕೋರಿಕೆಗಾಗಿ ಹರಕೆ ಹೊರುತ್ತಿದ್ದು. ಕೋರಿಕೆಗಳು ಈಡೇರಿದ ನಂತರ ಭಕ್ತರು ಪ್ರತಿ ಸೋಮವಾರ, ಶುಕ್ರವಾರ, ಅಮಾವಾಸ್ಯೆ, ಹುಣ್ಣಿಮೆಯ ದಿನಗಳಂದು ವಿಶೇಷ ಪೂಜೆ, ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಭಕ್ತಾಧಿಗಳೇ ಸ್ವಯಂ ಪ್ರೇರಿತರಾಗಿ ಹಮ್ಮಿಕೊಳ್ಳುತ್ತ ಬಂದಿದ್ದಾರೆ ಎಂದು ದೇಗುಲ ಟ್ರಸ್ಟ್ ಅಧ್ಯಕ್ಷ ಈರಣ್ಣಯ್ಯ ತಿಳಿಸಿದ್ದಾರೆ.
Cultural
ಪಾಕಿಸ್ತಾನಿಯರನ್ನು ದೇಶದಿಂದ ಹೊರಗೆ ಕಳುಹಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು : ಡಾ.ಇಂದ್ರೇಶ್
ಮಂಡ್ಯ: ಕೇಂದ್ರ ಸರ್ಕಾರ ಪಾಕಿಸ್ತಾನಿ ಪ್ರಜೆಗಳನ್ನು ದೇಶದಿಂದ ಹೊರ ಹೋಗಲು, ದೇಶದ ರಾಜ್ಯ ಸರ್ಕಾರಗಳು ಗಡಿಪಾರು ಮಾಡುವಂತೆ ಆದೇಶಿಸಿದ್ದು, ರಾಜ್ಯದ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಪಾಕಿಸ್ತಾನಿ ಪ್ರಜೆಗಳನ್ನು ಪತ್ತೆಹಚ್ಚಿ ಪಾಕಿಸ್ತಾನಕ್ಕೆ ಮರಳಲು ಕ್ರಮ ವಹಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ ತಲೆ ತಗ್ಗಿಸುವ ರೀತಿ ಪಹಲ್ಗಾಮ್ ಹತ್ಯಾಕಾಂಡ ನಡೆದ ಹಿನ್ನಲೆ ಪಾಕಿಸ್ತಾನಿ ಪ್ರಜೆಗಳ ವೀಸಾ ರದ್ದು ಮಾಡಿದೆ . ದೇಶದ ಬಿಜೆಪಿ ಸರ್ಕಾರ ಇರುವ ಎಲ್ಲ ರಾಜ್ಯಗಳಲ್ಲಿ ಪಾಕಿಸ್ತಾನಿ ಪ್ರಜೆಗಳನ್ನು ದೇಶದಿಂದ ಹಿಂದಿರುಗಿಸಲು ಕ್ರಮವಹಿಸಿದ್ದು, ರಾಜ್ಯದಲ್ಲಿ ಮಾತ್ರ ಸದರಿ ಕೆಲಸ ಆಗುತ್ತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಓಟ್ ಬ್ಯಾಂಕ್ಗಾಗಿ ಅಲ್ಪಸಂಖ್ಯಾತರ ಓಲೈಕೆಯಿಂದಾಗಿ ಅವರ ಮೇಲಿನ ಪ್ರಕರಣಗಳ ಕುಲಾಸೆ ಮಾಡಿ, ಬಿಡುಗಡೆ ಮಾಡಿದ್ದರಿಂದಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ನಿಷೇಧ ಮಾಡಿದ್ದು, ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಎಲ್ಲಿದ್ದಾರೆ, ಯಾವ ಸಂಘಟನೆಯಲ್ಲಿದ್ದಾರೆ, ಯಾವ ಕೃತ್ಯವೆಸಗುತ್ತಿದ್ದಾರೆ ಇದರ ಬಗ್ಗೆ ಕ್ರಮ ವಹಿಸಲು ರಾಜ್ಯ ಸರ್ಕಾರ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.

ಅಂತೆಯೇ ದೇಶದಿಂದ ಪಾಕಿಸ್ತಾನಿ ಪ್ರಜೆಗಳನ್ನು ಹಿಂದಿರುಗಿಸುವಂತೆ ಕ್ರಮ ವಹಿಸಲು ನಾಳೆ(ಬುಧವಾರ) ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದರ ಜೊತೆಗೆ ಸಿದ್ದರಾಮಯ್ಯ ಅವರನ್ನು ಆಗ್ರಹಿಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿವೇಕ್, ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಮಾಧ್ಯಮ ವಕ್ತಾರ ನಾಗಾನಂದ್, ಚಂದ್ರು ಇದ್ದರು.
Cultural
ಶ್ರೀರಾಮನ ಚರಿತ್ರೆ ವಿಶ್ವಕ್ಕೆ ಸಾರಿದ ಶ್ರೀಮಹರ್ಷಿ ವಾಲ್ಮೀಕಿ — ಶಾಸಕ ದರ್ಶನ್ ಧ್ರುವನಾರಾಯಣ್

ನಂಜನಗೂಡು ನ.15
ಶ್ರೀ ರಾಮನ ಚರಿತ್ರೆಯನ್ನು ವಿಶ್ವಕ್ಕೆ ಸಾರಿದ ಮಹಾನ್ ನಾಯಕ ಶ್ರೀ ಮಹರ್ಷಿ ವಾಲ್ಮೀಕಿ ಅವರ ಆದರ್ಶ ಗುಣಗಳು ಪ್ರಜಾಪ್ರಭುತ್ವಕ್ಕೆ ಬಹು ಮುಖ್ಯವಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ನಂಜನಗೂಡು ತಾಲೂಕಿನ ಹುರ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಾಲ್ಮೀಕಿ ಸಮಾಜದ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ.ಅವುಗಳನ್ನು ಪ್ರತಿಯೊಬ್ಬರು ಸದ್ಬಳಕೆ ಪಡೆದುಕೊಳ್ಳುವ ಮೂಲಕ ಆರ್ಥಿಕ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು ಸಮಾಜದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವ ಮೂಲಕ ಎಲ್ಲಾ ರೀತಿಯ ಸಹಕಾರ ನೀಡುತ್ತೆನೆ ಎಂದರು.
ಸರ್ಕಾರಿ ಸೌಲಭ್ಯ ಪಡೆಯಲು ಯಾವುದೇ ಜಾತಿಭೇದ ಮಾಡಬೇಡಿ ಸಮಾಜಕ್ಕೆ ನಾವೆಲ್ಲರೂ ಒಂದೇ ಎಂಬ ಸಂದೇಶ ವಾಲ್ಮೀಕಿ ಸಮುದಾಯ ಸಾರಬೇಕು.ಎಲ್ಲರನ್ನೂ ಒಗ್ಗೂಡಿಸುವ ಮೂಲಕ ಯಾವುದೇ ಭಿನ್ನಾಭಿಪ್ರಾಯ ಬಾರದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಗ್ರಾಮದ ಎಲ್ಲ ನಾಯಕ ಸಮಾಜದವರನ್ನು ಒಟ್ಟಾಗಿ ಕರೆದೊಯ್ಯುವ ಜವಾಬ್ದಾರಿ ಇರಬೇಕು.ಶ್ರೀ ಮಹರ್ಷಿ ವಾಲ್ಮೀಕಿ ಅವರ ರಾಮಾಯಣದಲ್ಲಿ ಹೆಚ್ಚು ರೂಪಕ ಅಲಂಕಾರ ಬಳಕೆಯಾಗಿರುವುದ್ದರಿಂದ ಕಾಳಿದಾಸ ಕವಿ ಮಹರ್ಷಿ ವಾಲ್ಮೀಕಿ ಅವರನ್ನು ಕವಿಕುಲ ಚಕ್ರವರ್ತಿ ಎಂಬುದಾಗಿಯೋ ವರ್ಣಿಸಿದ್ದಾರೆ ಅಲ್ಲದೇ ಜಗತ್ತಿನ ಶ್ರೇಷ್ಠ ವಿಮಾರ್ಶಕ ಥಾಮಸ್ ಪ್ರಕಾರ ವಾಲ್ಮೀಕಿ ರಾಮಾಯಣ ಜಗತ್ತಿನ ಶ್ರೇಷ್ಠ ಕಾವ್ಯ ಸಂಪತ್ತು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕುಂಬ್ರಳ್ಳಿ ಸುಬ್ಬಣ್ಣ, ಶ್ರೀ ಕಂಠನಾಯಕ,ತಾ ಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್,ನಾಯಕ ಸಂಘದ ತಾಲ್ಲೂಕು ಅದ್ಯಕ್ಷ ಬಂಗಾರನಾಯಕ, ಕಾಂಗ್ರೆಸ್ ಯುವ ಘಟಕದ ಅದ್ಯಕ್ಷ ದೇಬೂರು ಆಶೋಕ್,ಗ್ರಾ ಪಂ ಅದ್ಯಕ್ಷೆ ತಾಯಮ್ಮ,
ದೊರೆಸ್ವಾಮಿನಾಯಕ,ಅಭಿನಂದನ್ ಪಾಟೀಲ್,ಗ್ರಾ ಪಂ ಸದಸ್ಯದೇವನಾಯಕ,ನಾಗನಾಯ್ಕ,ಶ್ರೀಕಂಠಸ್ವಾಮಿ,ಶಿವರಾಜು,ಪ್ರಕಾಶ್,ನಂಜುಂಡಸ್ವಾಮಿ, ಸಿದ್ದು,ಮಹೇಶ್, ಮಹೇಂದ್ರ, ಹಾಗೂ ಕಿಚ್ಚಿನ ಅಭಿಮಾನಿ ಬಳಗದವರು ಹಾಜರಿದ್ದರು.

ನಂಜನಗೂಡು ಮಹದೇವಸ್ವಾಮಿ ಪಟೇಲ್.
Cultural
ಬ್ರಹ್ಮ ಕುಮಾರೀಸ್ ಈಶ್ವರಿ ವಿಶ್ವವಿದ್ಯಾಲಯದ ವತಿಯಿಂದ ಪತ್ರಕರ್ತರ ಸಂಘದಲ್ಲಿ ರಕ್ಷಾಬಂಧನ
ಮಂಡ್ಯ: ನಗರದ ಬನ್ನೂರು ರಸ್ತೆಯಲ್ಲಿರುವ ಬ್ರಹ್ಮ ಕುಮಾರೀಸ್ ಈಶ್ವರಿಯ ವಿಶ್ವವಿದ್ಯಾಲಯದ ವತಿಯಿಂದ ಪತ್ರಕರ್ತರ ಸಂಘದಲ್ಲಿ ಸೋಮವಾರ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು .ಪತ್ರಕರ್ತರಿಗೆ ರಾಕಿ ಕಟ್ಟುವ ಮೂಲಕ ಕಾರ್ಯಕ್ರಮಕ್ಕೆ ಬ್ರಹ್ಮ ಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದ ಬಿ.ಕೆ.ಶ್ವೇತ ಚಾಲನೆ ನೀಡಿದರು.ನಂತರ ಬಿ.ಕೆ.ಶಾರದಾ ಅವರು ಮಾತನಾಡಿ, ನನ್ನ ಕರ್ಮ ನನ್ನನ್ನು ರಕ್ಷಣೆ ಮಾಡುತ್ತದೆ. ಪರಮಾತ್ಮನು ರಕ್ಷಿಸುತ್ತಾನೆ ಎಂದರು.ಸಮಾಜದಲ್ಲಿ ಕಾಮ, ಕ್ರೋಧ, ಮದ, ಮತ್ಸರಗಳು ಅತಿಯಾಗಿದೆ. ಹಾಗಾಗಿ ಪಂಚಕರ್ಮಗಳಿಂದ ನಮಗೆ ರಕ್ಷಣೆ ಬೇಕಿದೆ ಎಂದು ತಿಳಿಸಿದರು.

ಎಲ್ಲಾ ಆತ್ಮಗಳು ಒಳ್ಳೆಯ ಆತ್ಮಗಳಾಗಿದೆ. ಆದರೆ ಆತ್ಮದಲ್ಲಿನ ನಕರಾತ್ಮಕ ಭಾವನೆ ಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಆ ಶಕ್ತಿಯನ್ನು ಪಡೆದುಕೊಳ್ಳಬೇಕು ಎಂದರು. ವಿದ್ಯಾದೇವತೆ ಸರಸ್ವತಿಗೆ ಪರಮಾತ್ಮನ ಜ್ಞಾನವಿದೆ. ಹಾಗಾಗಿ ಆಕೆಯನ್ನು ವಿದ್ಯಾದೇವಿ ಎಂದು ಪೂಜಿಸುತ್ತೇವೆ ಎಂದು ತಿಳಿಸಿದ ಅವರು, ಆಧ್ಯಾತ್ಮಿಕ ಜ್ಞಾನವಿಲ್ಲದೆ ನಾವು ಏನನ್ನು ಸಾಧಿಸಲು ಆಗುವುದಿಲ್ಲ. ಈ ಜ್ಞಾನವಿದ್ದಲ್ಲಿ ವಿಕಾರಗಳಿಂದ ಮುಕ್ತಿ ಪಡೆಯಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಬಿಕೆ ಗೀತಾಂಜಲಿ, ಬಿಕೆ ಯಶೋಧ, ಬಿ.ಕೆ.ಪ್ರಶಾಂತ್ ಉಪಸ್ಥಿತರಿದ್ದರು.
-
State15 hours agoಡಿವೈಡರ್ಗೆ ಕಾರ್ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ
-
Hassan12 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
Hassan15 hours agoಅಂಬೇಡ್ಕರ್ ತತ್ತ್ವ, ಸಿದ್ಧಾಂತಗಳು ಶಾಶ್ವತ: ಸಂಸದ ಶ್ರೇಯಸ್ ಪಟೇಲ್
-
Mandya10 hours agoಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನ: ಮಾಲಾರ್ಪಣೆ ಮಾಡಿದ ಕೇಂದ್ರ ಸಚಿವ ಎಚ್ಡಿಕೆ
-
Chikmagalur18 hours agoಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಹ*ತ್ಯೆ
-
Hassan16 hours agoಸಿಎಂ, ಡಿಸಿಎಂ ಇಂದು ಹಾಸನ ಜಿಲ್ಲಾ ಪ್ರವಾಸ
-
Mysore15 hours agoಡ್ರೋನ್ ಕ್ಯಾಮರದ ರೆಕ್ಕೆ ತಗಲಿ ಶಾಸಕ ಅನಿಲ್ ಚಿಕ್ಕಮಾದು ಮುಖಕ್ಕೆ ಗಾಯ
-
Mysore9 hours agoಡಿ.14ರಂದು ‘ಮೈಸೂರು ಭವಿಷ್ಯದ ಅಭಿವೃದ್ಧಿ’ ಸಾರ್ವಜನಿಕ ಸಂವಾದ
