Connect with us

Mandya

ಮಾ.25 ಕ್ಕೆ ಆದಿಚುಂಚನಗಿರಿ ಗಂಗಾಧರೇಶ್ವರ ಸ್ವಾಮಿ ಮಹಾರಥೋತ್ಸವ

Published

on

ಮಾ.18 ರಿಂದ ಮಾ.26ರವರೆಗೆ ಜಾತ್ರಾ ಮಹೋತ್ಸವದ ಅಂಗವಾಗಿ ಮಠದಲ್ಲಿ ವಿವಿಧ ಕಾರ್ಯಕ್ರಮಗಳ ಆಯೋಜನೆ

ನಾಗಮಂಗಲ: ಆದಿಚುಂಚನಗಿರಿ ಜಾತ್ರಾ ಮಹೋತ್ಸವವು ಮಾ.18 ರಿಂದ 26ರ ವರೆಗೆ ಜರುಗಲಿದ್ದು, ಮಾ.25ರ ಸೋಮವಾರ ಬ್ರಾಹ್ಮಿ ಮುಹೂರ್ತದಲ್ಲಿ ಗಂಗಾಧರೇಶ್ವರ ಸ್ವಾಮಿಯ ಮಹಾರಥೋತ್ಸವ ನಡೆಯಲಿದೆ ಎಂದು ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಪ್ರಕಟಣೆ ತಿಳಿಸಿದ್ದಾರೆ.

ತಾಲ್ಲೂಕಿನ ಪುರಾಣ ಪ್ರಸಿದ್ಧ ಆದಿಚುಂಚನಗಿರಿ ಮಠದಲ್ಲಿ ಮಾ.18 ರಿಂದ‌ ಜಾತ್ರಾ ಮಹೋತ್ಸವವು ಪ್ರಾರಂಭವಾಗಲಿದ್ದು, ಮಾ.18 ರ ಸೋಮವಾರ ಬೆಳಿಗ್ಗೆ 6.30 ಕ್ಕೆ ಧರ್ಮಧ್ವಜ ಸ್ಥಾಪನೆ, ನಾಂದಿ ಪೂಜೆಯೊಂದಿಗೆ ಜಾತ್ರಾ ಮಹೋತ್ಸವಕ್ಕೆ ನಿರ್ಮಲಾನಂದನಾಥ ಸ್ವಾಮೀಜಿ ಅವರು ಚಾಲನೆ ನೀಡಲಿದ್ದಾರೆ. ಅಲ್ಲದೇ ಬೆಳಿಗ್ಗೆ 10ಗಂಟೆಯಿಂದ ಸಭಾ ಕಾರ್ಯಕ್ರಮಗಳು ಜರುಗುತ್ತವೆ. ಜೊತೆಗೆ ಮಾ.19 ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ದೇಶಿ ಕ್ರೀಡೆಗಳು, ಲಗೋರಿ, ರಂಗೋಲಿ ಸ್ಪರ್ಧೆ ಮತ್ತು ಮ್ಯಾರಥಾನ್ ಸ್ಪರ್ಧೆಗಳನ್ನು ಆಯೋಜಿಸಿದ್ದು, ಸಂಜೆ 6 ಗಂಟೆಗೆ ಸರ್ವಾಲಂಕೃತ ಶ್ರೀಚಂದ್ರಮೌಳೀಶ್ವರ ಸ್ವಾಮಿ ಉತ್ಸವ ಜರುಗಲಿದೆ. ಅಲ್ಲದೇ ಮಾ.20ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಕೃಷಿ ಉಪನ್ಯಾಸ ಮಾಲಿಕೆಯನ್ನು ರೈತರು ಮತ್ತು ಭಕ್ತರಿಗಾಗಿ ಆಯೋಜಿಸಲಾಗಿದೆ. ಜೊತೆಗೆ ಸಂಜೆ 6ಗಂಟೆಗೆ ಸರ್ವಾಲಂಕೃತ ಮಲ್ಲೇಶ್ವರ ಉತ್ಸವ ಜರುಗಲಿದೆ.

ಜೊತೆಗೆ ಮಾ.21ರ ಗುರುವಾರ ಬೆಳಿಗ್ಗೆ 9.30ಕ್ಕೆ ಸರಳ ಸಾಮೂಹಿಕ ವಿವಾಹ ಮತ್ತು ಹಿರಿಯ ದಂಪತಿಗಳಿಗೆ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿದೆ. ಸಂಜೆ 6 ಕ್ಕೆ ಸರ್ವಾಲಂಕೃತ, ಶ್ರೀ ಸಿದ್ದೇಶ್ವರಸ್ವಾಮಿ ಉತ್ಸವ ಜರುಗಲಿದೆ. ಮಾ.22ರ ಶುಕ್ರವಾರ ಬೆಳಿಗ್ಗೆ 7.30 ಕ್ಕೆ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ಸುವರ್ಣ ಕವಚ ಅಲಂಕಾರ ಮತ್ತು ಶ್ರೀ ಗಂಗಾಧರೇಶ್ವರ ಸ್ವಾಮಿಗೆ ರಜತ ನಾಗಾಭರಣ ಅಲಂಕಾರ ಪೂಜೆಗಳು ನಡೆಯಲಿದೆ. ಜೊತೆಗೆ ಬೆಳಿಗ್ಗೆ 10 ಗಂಟೆಗೆ ಒಕ್ಕಲಿಗರ ಸಂಘಗಳ ಪದಾಧಿಕಾರಿಗಳ ಸಮ್ಮಿಲನ ಕಾರ್ಯಕ್ರಮ, ಸಂಜೆ 6 ಕ್ಕೆ ಶ್ರೀ ಕಾಲಭೈರವೇಶ್ವರ ಸ್ವಾಮಿ ಹೂವಿನ ಪಾಲಕ್ಕಿ ಉತ್ಸವ ಮತ್ತು ಸ್ವಾಮೀಜಿ ಅವರ ಮುತ್ತಿನ ಪಾಲಕ್ಕಿ ಉತ್ಸವ ಜರುಗುತ್ತದೆ. ಮಾ.23ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಬಿ.ಜಿ.ಎಸ್ ಡರ್ಟ್ ಟ್ರ್ಯಾಕ್ ಬೈಕ್ ರೇಸ್ ನಡೆಯಲಿದೆ. ಸಂಜೆ 6 ಕ್ಕೆ ಜ್ವಾಲಪೀಠಾರೋಹಣ ಮತ್ತು ಸಿದ್ಧಸಿಂಹಾಸನ ಪೂಜೆ ಜರುಗುತ್ತದೆ. ರಾತ್ರಿ 8 ಕ್ಕೆ ಚಂದ್ರಮಂಡಲೋತ್ಸವ ಕಾರ್ಯಕ್ರಮಗಳು ಜರುಗಲಿವೆ.

ಅಲ್ಲದೇ ಮಾ.24ರ ಭಾನುವಾರ ಸಂಜೆ 6.30ಕ್ಕೆ ಸರ್ವಧರ್ಮ ಸಮ್ಮೇಳನ, ರಾತ್ರಿ 8ಕ್ಕೆ ಶ್ರೀ ಕಾಲಭೈರವೇಶ್ವರ ಸ್ವಾಮಿ ತಿರುಗಣಿ ಉತ್ಸವ, ರಾತ್ರಿ 9 ಶ್ರೀ ಕಾಲಭೈರವೇಶ್ವರಸ್ವಾಮಿ ಪುಷ್ಕರಣೆಯಲ್ಲಿ ತೆಪ್ಪೋತ್ಸವ, ರಾತ್ರಿ 9ಕ್ಕೆ ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿದೆ. ಜೊತೆಗೆ ಮಾ.25 ಸೋಮವಾರ ಬ್ರಾಹ್ಮ ಮುಹೂರ್ತದಲ್ಲಿ ಶ್ರೀ ಗಂಗಾಧರೇಶ್ವರಸ್ವಾಮಿ ಮಹಾರಥೋತ್ಸವ, ನಿರ್ಮಲಾನಂದನಾಥ ಸ್ವಾಮೀಜಿ ಅವರ ಅಡ್ಡಪಾಲಕ್ಕಿ ಉತ್ಸವ, ಸಂಜೆ 6 ಕ್ಕೆ ನೂರಾರು ಗ್ರಾಮ ದೇವರುಗಳ ಮೆರವಣಿಗೆ ಮುಖಾಂತರ ಗಿರಿಪ್ರದಕ್ಷಿಣೆ, ನಂತರ ಸರ್ವಾಲಂಕೃತ, ಶ್ರೀ ಸೋಮೇಶ್ವರಸ್ವಾಮಿ ಉತ್ಸವಗಳು ಜರುಗುತ್ತವೆ.ಅಲ್ಲದೇ ಜಾತ್ರೆಯ ಕೊನೆಯ ದಿನವಾದ ಮಾ.26 ಮಂಗಳವಾರ ಬೆಳಿಗ್ಗೆ 9ಕ್ಕೆ
ಧರ್ಮ ಧ್ವಜಾವರೋಹಣ, 9.30ಕ್ಕೆ ಬಿಂದು ಸರೋವರದಲ್ಲಿ ಅವಕೃಥ ಸ್ನಾನ

ಮತ್ತು ಮಹಾಭಿಷೇಕದೊಂದಿಗೆ ಜಾತ್ರೆಗೆ ತೆರೆಬೀಳಲಿದ್ದು, ನಾಡಿನಾದ್ಯಂತ ಇರುವ ಭಕ್ತರು ಜಾತ್ರೆಗೆ ಆಗಮಿಸಿ ಶ್ರೀಕಾಲಭೈರವಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟಣೆ ತಿಳಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Mandya

ಪತ್ರಕರ್ತರಿಗೆ ಪರಿಹಾರದ ಚೆಕ್ ವಿತರಣೆ

Published

on

ಮಂಡ್ಯ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಮಂಡ್ಯ ನಗರ ಸಭೆಯಲ್ಲಿ ಮೀಸಲಿರಿಸಿದ್ದ ಆರೋಗ್ಯ ಪರಿಹಾರ ನಿಧಿಯಿಂದ ಹಿರಿಯ ಪತ್ರಕರ್ತರಾದ ಬಸವರಾಜ್ ಹೆಗಡೆ ಹಾಗೂ ಶೇಷು ಅವರಿಗೆ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.

ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಕೆ..ಎನ್.ನವೀನ್ ಕುಮಾರ್ ಹಾಗೂ ಮಾಜಿ ಅಧ್ಯಕ್ಷರಾದ ಬಿ.ಪಿ ಪ್ರಕಾಶ್ ಅವರು, ಪರಿಹಾರದ ಚೆಕ್ ವಿತರಣೆ ಮಾಡಿ ಆರೋಗ್ಯ ವಿಚಾರಿಸಿದರು.

ಬಸವರಾಜ್ ಹೆಗಡೆ ಹಾಗೂ ಶೇಷು ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಜಿಲ್ಲಾ ಸಂಘದ ಮನವಿ ಮೇರೆಗೆ ನಗರ ಸಭೆ ತಲಾ ಹತ್ತು ಸಾವಿರದ ಪರಿಹಾರದ ಚೆಕ್ ಅನ್ನು ನೀಡಿದೆ.

Continue Reading

Mandya

ಕರೀಘಟ್ಟ ದೇವರ ಕಾಡು‌ ಅರಣ್ಯ ಪ್ರದೇಶಕ್ಕೆ ಬೆಂಕಿ: 25 ಎಕರೆ ಅರಣ್ಯ ಭಸ್ಮ

Published

on

ಶ್ರೀರಂಗಪಟ್ಟಣ : ಕರೀಘಟ್ಟ ದೇವರ ಕಾಡು‌ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಮಾರು 25 ಎಕರೆ ಪ್ರದೇಶದ ಅರಣ್ಯ ಭಸ್ಮವಾಗಿದೆ.

ತಾಲ್ಲೂಕಿನ ಗಣಂಗೂರು ಐಬಿ ಎದುರುಗಿನ‌ ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ಮರ, ಗಿಡಗಳು ಸೇರಿದಂತೆ ಪ್ರಾಣಿ ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಬೆಂಕಿ ನಂದಿಸಿದ್ದಾರೆ.

Continue Reading

Mandya

ಫೈನಾನ್ಸ್‌ ಕಿರುಕುಳದಿಂದ ಮೃತರಾದ ತಾಯಿ-ಮಗನ ಕುಟುಂಬ ಭೇಟಿಯಾದ ಆರ್‌.ಅಶೋಕ್‌

Published

on

ಮಂಡ್ಯ: ಮೈಕ್ರೋ ಫೈನಾನ್ಸ್‌ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡದ್ದ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್‌ ಬ್ಯಾಂಕ್‌ನಲ್ಲಿ 6 ಲಕ್ಷ ಸಾಲ ಪಡೆದು, ಸಾಲ ತೀರಿಸಲಾಗದೆ ಬ್ಯಾಂಕ್‌ ಸಿಬ್ಬಂದಿಗಳ ಕಾಟದಿಂದ ಮನನೊಂದು ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ತಾಯಿ ಸಾವಿನಿಂದ ಮನನೊಂದ ಮಗ ರಂಜಿತ್‌ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇಂದು (ಫೆ.6) ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಜೆಡಿಎಸ್‌ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್‌, ಇಂಡವಾಳು ಸಚ್ಚಿದಾನಂದ ಮತ್ತಿತರರು ಸಾಥ್‌ ನೀಡಿದರು.

Continue Reading

Trending

error: Content is protected !!