Connect with us

State

ತೆರಿಗೆ ಪಾವತಿಗೆ ಹೆಚ್ಚಿನ ಕಾಲಾವಕಾಶ, ಸರಳ ವಿಧಾನಕ್ಕಾಗಿ ಅಗತ್ಯ ಕಾನೂನು ತಿದ್ದುಪಡಿ: ಡಿಸಿಎಂ ಡಿ.ಕೆ. ಶಿವಕುಮಾರ್

Published

on

ಬೆಂಗಳೂರು: ಆಸ್ತಿ ತೆರಿಗೆಗೆ ಹೆಚ್ಚಿನ ಕಾಲಾವಕಾಶ ಹಾಗೂ ಅದರಲ್ಲಿರುವ ತೊಡಕುಗಳನ್ನು ನಿವಾರಣೆ ಮಾಡಲು ಅನೇಕ ಅರ್ಜಿಗಳು ಬಂದಿವೆ. ಹೀಗಾಗಿ ತೆರಿಗೆ ಪಾವತಿಗೆ ಕಾಲಾವಕಾಶ ಕಲ್ಪಿಸಿ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳ ಜತೆ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

ಆರ್ ಬಿಎಎನ್ಎಂಎಸ್ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಹೇಳಿದ್ದಿಷ್ಟು

“ಇಂದು ಅಹವಾಲು ತಂದಿರುವವರ ಪೈಕಿ ಅನೇಕರು ವಸತಿ ನಿವೇಶನಗಳಲ್ಲಿ ಮಾಣಿಜ್ಯ ಕಟ್ಟಡಗಳನ್ನು ಕಟ್ಟಿದ್ದಾರೆ. ಇದಕ್ಕೆ ತೆರಿಗೆ ಹಾಗೂ ದಂಡ ಹೆಚ್ಚಾಗಿದೆ ನಮಗೆ ಸಮಯಾವಕಾಶ ಬೇಕು ಎಂಬ ಮನವಿ ಸಲ್ಲಿಸುತ್ತಿದ್ದಾರೆ. ನಾಗರೀಕರಿಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಅವರಿಗೆ ಮತ್ತಷ್ಟು ಸಮಯಾವಕಾಶ ನೀಡುತ್ತೇವೆ. ಇನ್ನು ಸರಳ ವ್ಯವಸ್ಥೆ ಜಾರಿಗೆ ತರಲು ಅಗತ್ಯ ಕಾನೂನು ತಿದ್ದುಪಡಿ ಮಾಡುತ್ತೇವೆ. ನಾಗರೀಕರು ಕೂಡ ನಮಗೆ ಸಹಾಯ ಮಾಡಬೇಕು. ವಸತಿ ನಿವೇಶನಗಳಲ್ಲಿ ವಾಣಿಜ್ಯ ಉದ್ದೇಶಕ್ಕೆ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಜನರು ಕೂಡ ತಮ್ಮ ಆಸ್ತಿಗೆ ತಕ್ಕಂತೆ ತೆರಿಗೆ ಪಾವತಿ ಮಾಡಿ ಸಹಕಾರ ನೀಡಬೇಕು. ಆಗ ನಾವು ಕೂಡ ಜನರಿಗೆ ಸಹಾಯ ಮಾಡಬಹುದು” ಎಂದು ತಿಳಿಸಿದರು.

ಜನರಿಗೆ ಎಷ್ಟು ದಿನ ಕಾಲಾವಕಾಶ ನೀಡುತ್ತೀರಿ ಎಂದು ಕೇಳಿದಾಗ, “ಕೆಲವರಿಗೆ ಮೂರು ದಿನ, ಒಂದು ವಾರದಲ್ಲಿ ಪಾವತಿ ಮಾಡುವಂತೆ ನೊಟೀಸ್ ನೀಡಲಾಗಿದೆ. ಅಧಿಕಾರಿಗಳು ಕಾನೂನಿನ ಅಡಿಯಲ್ಲಿ ಕೆಲಸ ಮಾಡುತ್ತಿದ್ದರೂ ನಾವು ಹೋದ ಕಡೆಗಳಲ್ಲಿ ಜನರು ಈ ಬಗ್ಗೆ ತಮ್ಮ ನೋವು ಹೇಳಿಕೊಳ್ಳುತ್ತಿದ್ದಾರೆ. ಹೀಗಾಗಿ ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.

ಕನ್ನಡದ ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದೆ:

ಸಚಿವ ಸಂಪುಟ ಸಭೆಯಲ್ಲಿ ಕನ್ನಡ ನಾಮಫಲಕ ವಿಚಾರವಾಗಿ ತೆಗೆದುಕೊಂಡಿರುವ ಕ್ರಮದ ಬಗ್ಗೆ ಕೇಳಿದಾಗ, “ಇದು ಕರ್ನಾಟಕ ಸರ್ಕಾರಕ್ಕೆ ಕನ್ನಡ ಭಾಷೆ ಬಗೆಗಿರುವ ಬದ್ಧತೆ. ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಭಾಷೆ ಇರಬೇಕು. ಈ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಹೋರಾಟ ಮಾಡುತ್ತಿದ್ದು, ಕಾನೂನಿನಲ್ಲಿ ಇದಕ್ಕೆ ಅವಕಾಶವಿದೆ. ಉಳಿದಂತೆ ಅವರು ಯಾವುದೇ ಭಾಷೆಯಲ್ಲಿ ಹಾಕಿಕೊಳ್ಳಲಿ. ಕನ್ನಡಕ್ಕೆ ಹೆಚ್ಚಿನ ಆದ್ಯತೆ ಇರಬೇಕು. ವ್ಯಾಪಾರ ಮಾಡುವವರು ಕನ್ನಡ ತಾಯಿ ಹಾಗೂ ಭೂಮಿಗೆ ಗೌರವ ನೀಡಬೇಕು” ಎಂದು ತಿಳಿಸಿದರು.

ಅಮಾಯಕರಿಗೆ ಅನ್ಯಾಯ ಆಗಬಾರದು:

ಕೆ.ಜೆ ಹಳ್ಳಿ ಡಿ.ಜೆ ಹಳ್ಳಿ ಬಂಧಿತರ ಬಿಡುಗಡೆ ವಿಚಾರವಾಗಿ ಕುಟುಂಬಸ್ಥರ ಒತ್ತಾಯದ ಬಗ್ಗೆ ಕೇಳಿದಾಗ, “ನಾವು ಏನೇ ಮಾಡಿದರೂ ಕಾನೂನು ವ್ಯಾಪ್ತಿಯಲ್ಲಿ ಮಾಡಬೇಕು. ಈ ಬಗ್ಗೆ ಹೆಚ್ಚು ಮಾತನಾಡಲು ಆಗುವುದಿಲ್ಲ. ಬಿಜೆಪಿ ಸರ್ಕಾರ ಕೆಲವು ಸೆಕ್ಷನ್ ಗಳನ್ನು ಪ್ರಯೋಗ ಮಾಡಿರುವುದರಿಂದ ಅವರು ಹೊರಬರಲು ಆಗುತ್ತಿಲ್ಲ. ಕಾನೂನಿನ ಅಡಿಯಲ್ಲಿ ನ್ಯಾಯ ಒದಗಿಸಿಕೊಡಬೇಕು. ಈ ಬಗ್ಗೆ ಶಾಸಕರು ನಮ್ಮ ಬಳಿ ಚರ್ಚೆ ಮಾಡಿದ್ದು ಕಾನೂನು ತಂಡದ ಜತೆ ಮಾತನಾಡಿ ತೀರ್ಮಾನ ಮಾಡುತ್ತೇವೆ. ಕಾನೂನು ಕೈಗೆತ್ತಿಕೊಂಡವರ ವಿರುದ್ಧದ ಕ್ರಮಕ್ಕೆ ನಮ್ಮ ಅಭ್ಯಂತರವಿಲ್ಲ. ಕೆಲವು ಅಮಾಯಕರು ಇದರಲ್ಲಿ ಸಿಲುಕಿದ್ದಾರೆ ಎಂಬ ಕೂಗು ಇದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜತೆ ಮಾತನಾಡುತ್ತೇನೆ” ಎಂದು ತಿಳಿಸಿದರು.

ಹೆಚ್ಚುವರಿ ಡಿಸಿಎಂ ವಿಚಾರವಾಗಿ ಹೈಕಮಾಂಡ್ ಉತ್ತರ:

ಸರ್ಕಾರದಲ್ಲಿ ಮೂವರು ಡಿಸಿಎಂ ಮಾಡಬೇಕು ಎಂಬ ವಿಚಾರವಾಗಿ ನಡೆಯುತ್ತಿರುವ ಚರ್ಚೆ ಬಗ್ಗೆ ಕೇಳಿದಾಗ, “ಹೆಚ್ಚುವರಿ ಡಿಸಿಎಂ ವಿಚಾರವಾಗಿ ಹೈ ಕಮಾಂಡ್ ನಾಯಕರು ಉತ್ತರ ನೀಡುತ್ತಾರೆ. ನಾನು ಆ ಬಗ್ಗೆ ಉತ್ತರ ನೀಡುವುದಿಲ್ಲ. ಸಂಸತ್ ಚುನಾವಣೆಯನ್ನು ಗೆಲ್ಲಬೇಕು. ಅದಕ್ಕಾಗಿ ಎಲ್ಲರೂ ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡೋಣ” ಎಂದು ತಿಳಿಸಿದರು.

Continue Reading
Click to comment

Leave a Reply

Your email address will not be published. Required fields are marked *

State

ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣ: ಆರೋಪಿ ರನ್ಯಾರಾವ್‌ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

Published

on

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಎ1 ಆರೋಪಿ ರನ್ಯಾರಾವ್‌ ಹಾಗೂ ಎ2 ಆರೋಪಿ ತರುಣ್ ರಾಜ್ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ ಎಂದು ಹೈಕೋರ್ಟ್‌ನ ಏಕಸದಸ್ಯ ಪೀಠವೂ ಆದೇಶ ಹೊರಡಿಸಿದೆ.

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ನಟಿ ರನ್ಯಾರಾವ್‌ ಹಾಗೂ ಆಪ್ತ ತರುಣ್ ರಾಜ್ ಜಾಮೀನು ಕೋರಿ ಹೈಕೋರ್ಟ್‌ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆಯನ್ನು ಇಂದು(ಏಪ್ರಿಲ್‌.26) ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಏಕಸದಸ್ಯ ಪೀಠವೂ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ತೀರ್ಪು ನೀಡಿದೆ.

ನಟಿ ರನ್ಯಾರಾವ್‌ ಅವರ ಜಾಮೀನು ಅರ್ಜಿ ಇಲ್ಲಿಯವರೆಗೆ 2 ಬಾರಿ ವಜಾ ಆಗಿದೆ. ಹೀಗಾಗಿ ಇನ್ನೂ ಮುಂದಿನ ಒಂದು ವರ್ಷಗಳ ಕಾಲ ರನ್ಯಾರಾವ್ ಖಾಯಂ ವಿಳಾಸ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಇರಬೇಕಾಗುತ್ತದೆ.

Continue Reading

State

ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Published

on

ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್‌ ಅವರು ನಿಧನರಾಗಿದಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಕೀರ್ತಿಪತಾಕೆಯನ್ನು ಆಗಸದೆತ್ತರಕ್ಕೆ ಹಾರಿಸಿದ್ದ ಖ್ಯಾತ ಭೌತ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ಅವರ ನಿಧನದಿಂದ ಆಘಾತವಾಗಿದೆ ಎಂದಿದ್ದಾರೆ.

ಕರ್ನಾಟಕ ಮೂಲದ ಡಾ.ಕಸ್ತೂರಿರಂಗನ್ ಅವರಿಗೆ ನಮ್ಮ ರಾಜ್ಯದ ಬಗ್ಗೆ ಅಪಾರವಾದ ಪ್ರೀತಿ ಮತ್ತು ಕಾಳಜಿ ಇತ್ತು. ಭಾರತದ ಹೆಮ್ಮೆಯ ಇಸ್ರೋ ಸಂಸ್ಥೆಗೆ ದೀರ್ಘ ಕಾಲ ಅಧ್ಯಕ್ಷರಾಗಿ ಮತ್ತು ಕೇಂದ್ರದ ಬಾಹ್ಯಾಕಾಶ ಮಂಡಳಿಯ ನಿರ್ದೇಶಕರಾಗಿ ಡಾ.ಕಸ್ತೂರಿ ರಂಗನ್ ಅವರು ಸಲ್ಲಿಸಿದ ಸೇವೆಯಿಂದಾಗಿ ಭಾರತ ಇಂದು ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಿದೆ ಎಂದು ಹೇಳಿದ್ದಾರೆ.

ಡಾ.ಕಸ್ತೂರಿ ರಂಗನ್ ಅವರನ್ನು ಕಳೆದುಕೊಂಡಿರುವ ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

Continue Reading

State

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ಪ್ರಕರಣ: ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ಆರ್‌.ಅಶೋಕ್‌

Published

on

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸುವ ಮೂಲಕ ಅವರ ಧಾರ್ಮಿಕ ಭಾವನೆಗಳಿಗೆ, ಹಕ್ಕುಗಳಿಗೆ ಚ್ಯುತಿ ತಂದ ರಾಜ್ಯ ಸರ್ಕಾರದ ನಡೆ ವಿರುದ್ಧ ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೆ ಲಿಖಿತ ದೂರು ಸಲ್ಲಿಸಿ, ನಾಗರೀಕರ ಸಂವಿಧಾನದತ್ತ ಹಕ್ಕುಗಳು ಹಾಗು ಘನತೆಯನ್ನು ರಕ್ಷಿಸುವ ನಿಟ್ಟಿನಲ್ಲಿ, ಈ ಪ್ರಕರಣದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಏಪ್ರಿಲ್.23 ರಂದು, ರಾಜ್ಯಾದ್ಯಂತ ಹಲವಾರು ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ತಮ್ಮ ಭಯಭೀತ ಧಾರ್ಮಿಕ ಚಿಹ್ನೆಗಳಾದ ಜನಿವಾರ (ಯಜ್ಞೋಪವೀತ), ಶಿವದಾರ ಇತ್ಯಾದಿಗಳನ್ನು ತೆಗೆದುಹಾಕಲು ಒತ್ತಾಯಿಸಿ ಕರ್ನಾಟಕ ಸರ್ಕಾರವು ವೈಯಕ್ತಿಕ ನಂಬಿಕೆಗಳ ಉಲ್ಲಂಘನೆಯ ಘಟನೆಗಳ ಬಗ್ಗೆ ನಾನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದೇನೆ ಎಂದಿದ್ದಾರೆ.

ಇಂತಹ ಕಾನೂನುಬಾಹಿರ ಮತ್ತು ತಾರತಮ್ಯದ ಅಭ್ಯಾಸಗಳಿಂದ ಭವಿಷ್ಯವು ಅಪಾಯಕ್ಕೆ ಸಿಲುಕಬಾರದು ಎಂದು ನಾಗರಿಕರ, ವಿಶೇಷವಾಗಿ ಯುವಕರ ಹಕ್ಕುಗಳು ಮತ್ತು ಘನತೆಯನ್ನು ಕಾಪಾಡಲು ತ್ವರಿತ ಮತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ನಾನು ಆಯೋಗಕ್ಕೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

Continue Reading

Trending

error: Content is protected !!