Chikmagalur
ವಿಜೃಂಭಣೆಯಿಂದ ಜರುಗಿದ ಶ್ರೀ ಲಕ್ಷ್ಮಿವೆಂಕಟರಮಣ ಸ್ವಾಮಿ ದೇವಸ್ಥಾನದ ರಥೋತ್ಸವ
ವರದಿ : ಎಂ.ಪಿ.ಪ್ರದೀಪ್ ಹೆಬ್ಬಾರ್, ಜಯಪುರ.
ಜಯಪುರ : ಕೊಪ್ಪ ತಾಲೂಕು ಮೇಗುಂದಾ ಹೋಬಳಿ ಮುನಿವೃಂದಪುರ ಮೇಗೂರು ಶ್ರೀ ಲಕ್ಷ್ಮಿವೆಂಕಟರಮಣ ಸ್ವಾಮಿ ದೇವಸ್ಥಾನದ ರಥೋತ್ಸವವು ಬುಧವಾರ ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಧರ್ಮದರ್ಶಿಗಳಾದ ರಘುಪತಿ ಹೆಬ್ಬಾರ್, ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ತಲವಾನೆ, ಕಾರ್ಯದರ್ಶಿ ಗೋಪಾಲಕೃಷ್ಣ, ದೇವಸ್ಥಾನದ ಪ್ರಧಾನ ಅರ್ಚಕರಾದ ಲಕ್ಷ್ಮೀನರಸಿಂಹಮೂರ್ತಿ ಭಟ್, ನವೀನ ನಾಗೇಂದ್ರ ಭಟ್, ಶ್ರೀಕಾಂತ್ ಭಟ್, ಕೊಪ್ಪ ತಾಲೂಕು ಉಪ ತಹಸಿಲ್ದಾರ್ ಸುಧೀರ್, ಜಯಪುರ ನಾಡಕಚೇರಿ ರೆವೆನ್ಯೂ ಇನ್ಸ್‌ಪೆಕ್ಟರ್ ವಿನಯ, ಗ್ರಾಮ ಲೆಕ್ಕಾಧಿಕಾರಿ ಸೀತಾರಾಮ್ ಸೇರಿದಂತೆ ಸಹಸ್ರಾರು ಭಕ್ತಾದಿಗಳು ಭಾಗವಹಿಸಿದ್ದರು.
Chikmagalur
ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ: ಪಶ್ಚಿಮ ಘಟ್ಟಗಳ ಸೂಕ್ಷ್ಮ ಹುಲ್ಲುಗಾವಲು ಭಸ್ಮ
ಕೊಟ್ಟಿಗೆಹಾರ: ದಕ್ಷಿಣ ಕನ್ನಡ–ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ. ಮೂಡಿಗೆರೆ ಅರಣ್ಯ ವಲಯದೊಳಗೆ ಕಾಣಿಸಿಕೊಂಡಿರುವ ಬೆಂಕಿಯಿಂದ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಸಂಪೂರ್ಣವಾಗಿ ಧಗಧಗಿಸಿ ಉರಿಯುತ್ತಿದೆ.
ಗಾಳಿಯ ವೇಗ ಹೆಚ್ಚಿರುವುದರಿಂದ ಬೆಂಕಿ ಕ್ಷಿಪ್ರವಾಗಿ ಹರಡುತ್ತಿದ್ದು, ಅರಣ್ಯ ಸಂಪತ್ತಿಗೆ ಗಂಭೀರ ಹಾನಿಯಾಗುವ ಆತಂಕ ವ್ಯಕ್ತವಾಗಿದೆ. ಚಾರ್ಮಾಡಿ ಘಾಟಿಯ ರಸ್ತೆಯ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ ಸಂಚರಿಸುವ ವಾಹನ ಸವಾರರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ಇಲಾಖೆ ಮುಂಜಾಗ್ರತ ಕ್ರಮವಾಗಿ ಬೆಂಕಿ ರೇಖೆ ಮಾಡದೆ ನಿರ್ಲಕ್ಷ ವಹಿಸಿದ್ದರಿಂದ ಈ ಅನಾಹುತಕ್ಕೆ ಕಾರಣವಾಗಿದೆ. ಮಾಹಿತಿ ಪಡೆದ ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಪರಿಸ್ಥಿತಿಯನ್ನು ನಿರಂತರವಾಗಿ ನಿಗಾ ವಹಿಸಲಾಗುತ್ತಿದ್ದು, ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲು ತೀವ್ರ ಪ್ರಯತ್ನಗಳು ಮುಂದುವರಿದಿವೆ.
Chikmagalur
ನಾನು ರಾಮನಗರ ಜಿಲ್ಲೆ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ: ನಿಖಿಲ್ ಕುಮಾರಸ್ವಾಮಿ
ಚಿಕ್ಕಮಗಳೂರು : ರಾಮನಗರ ಜಿಲ್ಲೆ ನಮ್ಮ ತಂದೆಯವರ ಕರ್ಮ ಭೂಮಿ, 1994ರಲ್ಲಿ ಹಾಸನದಿಂದ ಬಂದಂತಹ ದೇವೇಗೌಡರಿಗೆ ರಾಜಕೀಯವಾಗಿ ಜನ್ಮ ಕೊಟ್ಟ ಭೂಮಿಯಾಗಿದೆ. ಹಾಗಾಗಿ ನಾನು ರಾಮನಗರ ಜಿಲ್ಲೆ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಇಂದು ಚಾಮರಾಜನಗರದಿಂದ ಸ್ಪರ್ಧೆ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬೇರೆ ಯಾವುದೇ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೂ ಇಲ್ಲ. ರಾಮನಗರದಲ್ಲಿ ನನ್ನನ್ನೇ ನಂಬಿರುವಂತಹ ಕಾರ್ಯಕರ್ತರು, ಮುಖಂಡರು, ಒಂದು ವರ್ಗವಿದ್ದು ನಮ್ಮನ್ನ ಪ್ರೀತಿಸುವ ಜನರಿದ್ದಾರೆ. ಇವತ್ತು ಜಿಲ್ಲೆಯಲ್ಲಿ ಸಣ್ಣಪುಟ್ಟ ಹಿನ್ನೆಡೆಗಳು ಆಗಿರಬಹುದು, ನಾನು ಒಪ್ಪಿಕೊಳ್ಳುತ್ತೇನೆ. ಕಳೆದ 4 ಚುನಾವಣೆಯಲ್ಲೂ ನಮ್ಮ ಜಿಲ್ಲೆಯ ಜನ ನಮ್ಮ ಕೈ ಬಿಟ್ಟಿಲ್ಲ ಎಂದು ಹೇಳಿದ್ದಾರೆ.

ರಾಜಕೀಯದ ಕೆಲ ಸಂದರ್ಭದಲ್ಲಿ ಚುನಾವಣೆಯಲ್ಲಿ ಏರು-ಪೇರು ಆಗಿದೆ. ನಾವು ಎಲ್ಲವನ್ನೂ ಸಮತೋಲನವಾಗಿ ತೆಗೆದುಕೊಂಡು ಹೋಗಬೇಕು, ಏಕೆಂದರೆ ಅಲ್ಲಿ ದುಡಿದಿದ್ದೇವೆ. ದೇವೇಗೌಡರ ಕುಟುಂಬ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದೆ ಎಂದಿದ್ದಾರೆ.
ದ್ವೇಷ ಭಾಷಣ ಕಾಯ್ದೆ ಜಾರಿಗೊಳಿಸಲು ಸರ್ಕಾರ ರಾಜ್ಯಪಾಲರ ಅಂಕಿತಕ್ಕೆ ಕಾದು ಕುಳಿತಿದ್ದರು. ಈ ಕಾಯ್ದೆ ಪತ್ರಿಕಾ ಮಾಧ್ಯಮವನ್ನ ಕಟ್ಟಿ ಹಾಕುವಂತದ್ದು, ಪ್ರಜಾಪ್ರಭುತ್ಬದಲ್ಲಿ ಪ್ರತಿಪಕ್ಷಗಳ ಹಕ್ಕನ್ನ ಸದೆಬಡಿಯವ ಹುನ್ನಾರ. ಈ ಕಾಯ್ದೆ ಜಾರಿಯಾಗಿದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾದ ಮಸೂದೆ ಆಗ್ತಿತ್ತು. ರಾಜ್ಯಪಾಲರು ಈ ಎಲ್ಲಾ ಅಂಶಗಳ ಗಮನಿಸಿ ಒಳ್ಳೆ ತೀರ್ಮಾನ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯಪಾಲರ ತೀರ್ಮಾನವನ್ನ ನಾವು ಸ್ವಾಗತ ಕೊರುತ್ತೇವೆ
ರಾಜ್ಯಪಾಲರ ಘನತೆಯನ್ನ ತಗ್ಗಿಸುವ ಕೆಲಸ ಸರ್ಕಾರದಿಂದ ಆಗಬಾರದು. ರಾಜ್ಯಪಾಲರನ್ನ ಮುಜುಗರಕ್ಕೆ ಸಿಲುಕಿಸಿ, ಗೌರವಕ್ಕೆ ದಕ್ಕೆ ತರುವ ಕೆಲಸವನ್ನ ಅವರಿಂದಲೇ ಮಾಡಿಸೋ ಕೆಲಸವನ್ನ ಸರ್ಕಾರ ಬಿಡಬೇಕು. ರಾಜ್ಯಪಾಲರು ಒಂದು ವಾಕ್ಯ ಓದುತ್ತಾರೋ. ಒಂದು ಪ್ಯಾರಾ ಓದಬೇಕಾ ಅಥವಾ ಒಂದು ಪದದಲ್ಲಿ ಮುಗಿಸಬೇಕಾ ಎಂಬುದು ಅವರಿಗೆ ಬಿಟ್ಟದ್ದು, ಮುಜಗರಕ್ಕೀಡು ಮಾಡುವ ಅಂಶ ಹಾಕಿದ್ರು ಅವುಗಳನ್ನ ನೋಡಿಯೇ ಅವರು ಅವರ ಘನತೆ ಉಳಿಸಿಕೊಂಡಿದ್ದಾರೆ. ಅವರ ನಿರ್ಧಾರ-ತೀರ್ಮಾನವನ್ನ ನಾವು ಸ್ವಾಗತಿಸುತ್ತೇವೆ ಎಂದಿದ್ದಾರೆ.
ಇನ್ನೊಂದು ತಿಂಗಳಲ್ಲಿ ಜಾತಿ ಜನಗಣತಿ ಬಿಡುಗಡೆ ವಿಚಾರ
ಜಾತಿ ಜನಗಣತಿ ಸಾಮಾಜಿಕ-ಆರ್ಥಿಕ-ಶೈಕ್ಷಣಿಕ ಹಾಗೂ ಹಿಂದುಳಿದ ವಿಚಾರಕ್ಕೆ ಆಗಬೇಕು. ಇದು ಮೇಲ್ನೋಟಕ್ಕೆ ರಾಜಕೀಯ ಉದ್ದೇಶದಿಂದ ಕೂಡಿರುವಂತಿದೆ. ಸರ್ಕಾರದ ಲೋಪದೋಶಗಳು, ಸಮಸ್ಯೆಗಳು ಎದುರಾದಾಗ ಅದರಿಂದ ಜಾರಿಕೊಳ್ಳಲು ಇವೆಲ್ಲಾ ಬರುತ್ತದೆ. ಆಗ ಜಾತಿಗಣತಿ-ಜನಗಣತಿಯನ್ನ ಮುಂದಿಟ್ಟು ಜನರ ದಿಕ್ಕು ತಪ್ಪಿಸುವುದು ಬೇಡ. ನೀವು ಮಾಡಿ ಅದಕ್ಕೆ ನಮ್ಮ ಸ್ವಾಗತವಿದೆ, ಅದರೆ ಅದು ಯಾವ ರೀತಿ ಇದೆ. ಜಾತಿಗಣತಿ ಜಾರಿ ಮಾಡುವ ಉದ್ದೇಶ ಸರಿ ಇರಬೇಕು. ನಿಮ್ಮ ವರದಿ ಜನರ ಮುಂದೆ ಪಾರದರ್ಶಕವಾಗಿರಬೇಕು ಎಂದು ಹೇಳಿದ್ದಾರೆ.
Chikmagalur
ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂಎಲ್ಸಿ ಸಿ.ಟಿ ರವಿ ಹಾಗೂ ಉಪಾಧ್ಯಕ್ಷರಾಗಿ ದಿನೇಶ್ ಹೊಸೂರು ಅವಿರೋಧವಾಗಿ ಆಯ್ಕೆ
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂಎಲ್ಸಿ ಸಿ.ಟಿ ರವಿ ಹಾಗೂ ಉಪಾಧ್ಯಕ್ಷರಾಗಿ ದಿನೇಶ್ ಹೊಸೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದೇ ಮೊದಲ ಬಾರಿಗೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾಗಿರುವ ಎಂಎಲ್ಸಿ ಸಿ.ಟಿ ರವಿ ಇದೀಗ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ.
ಕೊಪ್ಪ ತಾಲೂಕಿನ ಬಿಜೆಪಿ ಅಧ್ಯಕ್ಷರಾಗಿರುವ ದಿನೇಶ್ ಹೊಸೂರು ಅವರಿಗೆ ಉಪಾಧ್ಯಕ್ಷ ಸ್ಥಾನ ಲಭಿಸಿದೆ.

ಡಿಸಿಸಿ ಬ್ಯಾಂಕ್‌ನಲ್ಲಿ ಒಟ್ಟು 13 ನಿರ್ದೇಶಕ ಸ್ಥಾನಗಳಿದ್ದು, ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಸ್ಪರ್ಧೆಯಲ್ಲಿ ಕೊಪ್ಪದ ದಿನೇಶ್ ಹೊಸೂರು ಅವರು ಕಡೂರು ಶಾಸಕ ಕೆ.ಎಸ್. ಆನಂದ್ ವಿರುದ್ಧ ಸ್ಪರ್ಧಿಸಿ ಜಯ ಸಾಧಿಸಿದ್ದಾರೆ.
ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಚಿಕ್ಕಮಗಳೂರು ನಗರದ ರತ್ನಗಿರಿ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕ್ ಎದುರು ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಪಟಾಕಿ ಸಿಡಿಸಿ, ಘೋಷಣೆ ಕೂಗುವ ಮೂಲಕ ಕಾರ್ಯಕರ್ತರು ತಮ್ಮ ಸಂತಸ ವ್ಯಕ್ತಪಡಿಸಿದರು.
-
National24 hours agoದೇಶದ ನಿಯಮಗಳನ್ನು ಪಾಲಿಸಲು ಸಾಧ್ಯವಾಗದಿದ್ದರೆ ದೇಶ ಬಿಟ್ಟು ತೊಲಗಿ: ವಾಟ್ಸಪ್ಗೆ ಸುಪ್ರೀಂ ಎಚ್ಚರಿಕೆ
-
Hassan18 hours agoಎಸ್ಡಿಪಿಐ ಮುಖಂಡನ ಮೇಲೆ ಹಲ್ಲೆ ಆರೋಪ: ಮುನೀರ್ ಹಲ್ಲೆಗೊಳಗಾದ ಎಸ್ಡಿಪಿಐ ಮುಖಂಡ
-
Special18 hours agoಕಲೆ, ಸಾಹಿತ್ಯ, ನಾಟ್ಯ ಹಾಗೂ ಸಂಸ್ಕಾರದಲ್ಲಿ ಶ್ರೀಮಂತ ದೇಶ ಭಾರತ: ನ್ಯಾ.ಗೋಪಾಲಗೌಡ
-
State18 hours agoಕಮಿಷನ್ಗಾಗಿ ಡೀಲ್ ಆರೋಪದ ಆಡಿಯೋ ವೈರಲ್: ಗುತ್ತಿಗೆದಾರ ಸಂಘದ ಗೌರವಾಧ್ಯಕ್ಷ ಬಿ.ಜಗನ್ನಾಥ್ ಅಮಾನತು
-
Hassan17 hours agoಹಾಸನ ಮಹಾನಗರ ಪಾಲಿಕೆ ವಾರ್ಡ್ ಪುನರ್ ವಿಂಗಡಣೆ: ಕರಡು ಪ್ರಕಟ
-
Kodagu20 hours agoಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ
-
Hassan19 hours agoಪರೀಕ್ಷೆ ಎಂಬ ಭಯವನ್ನು ಮನಸ್ಸಿನಿಂದ ಹೋಗಲಾಡಿಸಬೇಕು: ಕೆ. ಟಿ. ಮೇಘನಾ
-
Mysore19 hours agoಕಚ್ಚಾ ತಂಬಾಕು ಮೇಲಿನ ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರ: ಸಂಸದ ಯದುವೀರ್
