Connect with us

Mandya

ಡಾ.ಬಿ.ಆರ್ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನವನ್ನು ಅನುಸರಿಸಿ ಉಳಿಸಿಕೊಳ್ಳಬೇಕಾಗಿದೆ: ನಿ.ನ್ಯಾನಾಗಮೋಹನ ದಾಸ್

Published

on

ಮಂಡ್ಯ : ಡಾ.ಬಿ.ಆರ್.ಅಂಬೇಡ್ಕರ್ ರವರು ಹಾಗೂ ಹಿರಿಯರು ದೇಶದ ಬೆಳವಣಿಗೆಗೆ ನೀಡಿದ ಸಂವಿಧಾನವನ್ನು ಅನುಸರಿಸಿ ಉಳಿಸಿಕೊಳ್ಳುವ ಜವಾಬ್ದಾರಿ ಯುವಕರ ಮೇಲಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಅವರು ತಿಳಿಸಿದರು.

ಅವರು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಓದು ಅಧ್ಯಯನ ಶಿಬಿರ’ವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತದ ಸಂವಿಧಾನವು ಜಗತ್ತಿನ ಅತಿ ದೊಡ್ಡ ಸಂವಿಧಾನವಾಗಿದ್ದು, ಸಂವಿಧಾನ ರಚನೆಯಾಗಿ ಹಲವಾರು ವರ್ಷಗಳಾದರೂ ಅನೇಕರಿಗೆ ಸಂವಿಧಾನದ ರಚನೆ ಮತ್ತು ಅದರ ಮೂಲ ತತ್ವಗಳ ಬಗ್ಗೆ ತಿಳಿದೇ ಇಲ್ಲ ಎಂಬುದು ಯೋಚಿಸುವ ವಿಷಯವಾಗಿದೆ ಎಂದರು.

ಸಾರ್ವಜನಿಕರಿಗೆ ಉಪಯುಕ್ತವಾಗಲೆಂದು 2018 ರಲ್ಲಿ ನಾನು ‘ಸಂವಿಧಾನ ಓದು’ ಎಂಬ ಪುಸ್ತಕ ರಚಿಸಿದ್ದೇನೆ, ಕಳೆದ 6 ವರ್ಷದಲ್ಲಿ 2000 ಕ್ಕೂ ಹೆಚ್ಚು ಉಪನ್ಯಾಸವನ್ನು ಸಂವಿಧಾನದ ಬಗ್ಗೆ ನೀಡಿದ್ದೇನೆ. ಇಷ್ಟಾದರೂ ರಾಜ್ಯದ ಒಂದಿಷ್ಟು ಜನರನ್ನು ತಲುಪಲು ವಿಫಲರಾಗಿದ್ದೇವೆ. ಜಿಲ್ಲೆಯ ಯುವ ಜನರಿಗೆ ಸಂವಿಧಾನದ ಮಹತ್ವ ಮೂಲ ತತ್ವಗಳನ್ನು ತಿಳಿಸುವುದೇ ಈ ಶಿಬಿರದಲ್ಲಿ ಮೂಲ ಉದ್ದೇಶ. ಜೊತೆಗೆ ನಾವು ಅಭಿವೃದ್ಧಿಯತ್ತ ಸಾಗಲು ಇರುವ ಒಂದೇ ದಾರಿ ಎಂದರೆ ಅದು ಹಿರಿಯರು ಕೊಟ್ಟ ನಮ್ಮ ಸಂವಿಧಾನ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ಮಾತನಾಡಿ, ನಾನು ಯು.ಪಿ.ಎಸ್.ಸಿ. ಪರೀಕ್ಷೆ ಬರೆಯುವ ಸಮಯದಲ್ಲಿ ಮೊಟ್ಟ ಮೊದಲು ನಾನು ಓದಿದ್ದು ಸಂವಿಧಾನದ ಪುಸ್ತಕ. ಮೊದಲು ಓದುವಾಗ ಕಾನೂನಿನ ಭಾಷೆ ಅರ್ಥ ಮಾಡಿಕೊಳ್ಳಲು ಕಷ್ಟವಾಯಿತು. ಆದರೆ ಅದನ್ನು ಅರ್ಥ ಮಾಡಿಕೊಂಡಾಗ ಸಮಾಜದಲ್ಲಿ ಏನು ಮಾಡಬೇಕು ಏನು ಮಾಡಬಾರದು ಎಂಬ ಸಂಗತಿಯನ್ನು ಅರಿತುಕೊಂಡೆ ಎಂದರು.

ನಮಗೆ ಕಷ್ಟ ಬಂದಾಗ ಯಾರೂ ನಮ್ಮ ಜೋತೆ ನಿಲ್ಲುವುದಿಲ್ಲ. ನಮ್ಮ ಬದುಕಿನ ಹೋರಾಟವನ್ನು ನಾವೇ ಮಾಡಬೇಕು. ಅದು ಜೀವನದ ತತ್ವ. ನಮ್ಮನ್ನು ಹೊರತು ಪಡಿಸಿ ನಮ್ಮನ್ನು ಕಾಪಾಡುವ ಶಕ್ತಿ ಯಾರಿಗಾದರೂ ಇದೆ ಎಂದರೆ ಅದು ಕೇವಲ ಭಾರತೀಯ ಸಂವಿಧಾನಕ್ಕೆ ಮಾತ್ರ ಎಂದು ಹೇಳಿದರು.

ಸಭೆಯಲ್ಲಿ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಪುಟ್ಟಮಾಧು, ನಗರಸಭೆ ಮಾಜಿ ಅಧ್ಯಕ್ಷ ಸಿದ್ಧರಾಜು,ಮಹಿಳಾ ರೈತ ಮುಖಂಡರಾದ ಸುನಂದ ಜೈರಾಮ್, ದಲಿತ ಹಕ್ಕುಗಳ ಸಮಿತಿ ಮುಖಂಡರಾದ ಕೃಷ್ಣ.ಆರ್, ಕಾರ್ಮಿಕ ಮುಖಂಡರಾದ ಸಿ.ಕುಮಾರಿ ಮತ್ತು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Continue Reading

Mandya

ಪತ್ರಕರ್ತರಿಗೆ ಪರಿಹಾರದ ಚೆಕ್ ವಿತರಣೆ

Published

on

ಮಂಡ್ಯ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಮಂಡ್ಯ ನಗರ ಸಭೆಯಲ್ಲಿ ಮೀಸಲಿರಿಸಿದ್ದ ಆರೋಗ್ಯ ಪರಿಹಾರ ನಿಧಿಯಿಂದ ಹಿರಿಯ ಪತ್ರಕರ್ತರಾದ ಬಸವರಾಜ್ ಹೆಗಡೆ ಹಾಗೂ ಶೇಷು ಅವರಿಗೆ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.

ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಕೆ..ಎನ್.ನವೀನ್ ಕುಮಾರ್ ಹಾಗೂ ಮಾಜಿ ಅಧ್ಯಕ್ಷರಾದ ಬಿ.ಪಿ ಪ್ರಕಾಶ್ ಅವರು, ಪರಿಹಾರದ ಚೆಕ್ ವಿತರಣೆ ಮಾಡಿ ಆರೋಗ್ಯ ವಿಚಾರಿಸಿದರು.

ಬಸವರಾಜ್ ಹೆಗಡೆ ಹಾಗೂ ಶೇಷು ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಜಿಲ್ಲಾ ಸಂಘದ ಮನವಿ ಮೇರೆಗೆ ನಗರ ಸಭೆ ತಲಾ ಹತ್ತು ಸಾವಿರದ ಪರಿಹಾರದ ಚೆಕ್ ಅನ್ನು ನೀಡಿದೆ.

Continue Reading

Mandya

ಕರೀಘಟ್ಟ ದೇವರ ಕಾಡು‌ ಅರಣ್ಯ ಪ್ರದೇಶಕ್ಕೆ ಬೆಂಕಿ: 25 ಎಕರೆ ಅರಣ್ಯ ಭಸ್ಮ

Published

on

ಶ್ರೀರಂಗಪಟ್ಟಣ : ಕರೀಘಟ್ಟ ದೇವರ ಕಾಡು‌ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಮಾರು 25 ಎಕರೆ ಪ್ರದೇಶದ ಅರಣ್ಯ ಭಸ್ಮವಾಗಿದೆ.

ತಾಲ್ಲೂಕಿನ ಗಣಂಗೂರು ಐಬಿ ಎದುರುಗಿನ‌ ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ಮರ, ಗಿಡಗಳು ಸೇರಿದಂತೆ ಪ್ರಾಣಿ ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಬೆಂಕಿ ನಂದಿಸಿದ್ದಾರೆ.

Continue Reading

Mandya

ಫೈನಾನ್ಸ್‌ ಕಿರುಕುಳದಿಂದ ಮೃತರಾದ ತಾಯಿ-ಮಗನ ಕುಟುಂಬ ಭೇಟಿಯಾದ ಆರ್‌.ಅಶೋಕ್‌

Published

on

ಮಂಡ್ಯ: ಮೈಕ್ರೋ ಫೈನಾನ್ಸ್‌ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡದ್ದ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್‌ ಬ್ಯಾಂಕ್‌ನಲ್ಲಿ 6 ಲಕ್ಷ ಸಾಲ ಪಡೆದು, ಸಾಲ ತೀರಿಸಲಾಗದೆ ಬ್ಯಾಂಕ್‌ ಸಿಬ್ಬಂದಿಗಳ ಕಾಟದಿಂದ ಮನನೊಂದು ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ತಾಯಿ ಸಾವಿನಿಂದ ಮನನೊಂದ ಮಗ ರಂಜಿತ್‌ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇಂದು (ಫೆ.6) ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಜೆಡಿಎಸ್‌ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್‌, ಇಂಡವಾಳು ಸಚ್ಚಿದಾನಂದ ಮತ್ತಿತರರು ಸಾಥ್‌ ನೀಡಿದರು.

Continue Reading

Trending

error: Content is protected !!