Connect with us

Chamarajanagar

ಇಂದಿನಿಂದ ಪಟ್ಟಣದ ಅಧಿದೇವತೆ ಬೆಟ್ಟಳ್ಳಿ ಮಾರಮ್ಮನವರ ಜಾತ್ರಾ ಮಹೋತ್ಸವ

Published

on

ವರದಿ : ಗೋವಿಂದ ಕೆ ಗೌಡ ಹನೂರು

ಹನೂರು: ಪಟ್ಟಣದ ಅಧಿದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ ಮಾ 24 ರಿಂದ ನಾಲ್ಕು ದಿನಗಳ ಕಾಲ ನಡೆಯಲಿದ್ದು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

ಜಾತ್ರಾ ಮಹೋತ್ಸವ ಪ್ರಯುಕ್ತ ಮಾ.24 ಜಾಗರಣೆ ಸಮರ್ಪಣೆ, 25ರಂದು ರಥೋತ್ಸವ, ತಂಪು ಜ್ಯೋತಿ, 25ರಂದು ದೊಡ್ಡಬಾಯಿ ಬೀಗ, 27ರಂದು ಬೆಳಿಗ್ಗೆ ಅಗ್ನಿಕುಂಡ ದರ್ಶನ ನಡೆಯಲಿದೆ..

ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ 600 ವರ್ಷ ಗಳ ಇತಿಹಾಸವಿದ್ದು, ಪಟ್ಟಣದ ಜನತೆ ಗ್ರಾಮ ದೇವತೆಯಾಗಿ ಪೂಜಿಸುತ್ತಿದ್ದಾರೆ. ಈ ಜಾತ್ರೆ ಕೋಮುಸೌಹಾರ್ದತೆಯ ಸಾಮರಸ್ಯದ ಸಂಕೇತವಾಗಿದೆ. ಹಾಗೂ ಈಗಾಗಲೇ ಪಟ್ಟಣದಲ್ಲಿ ಕಳೆದ ಮಂಗಳವಾರದಿಂದಲೇ ಮಾಂಸ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಸಾಂಬಾರ ಪದಾರ್ಥಗಳ ಒಗ್ಗರಣೆ, ಗೋಬಿಮಂಚೂರಿ ಹಾಗೂ ಮಾಂಸಾಹಾರಿ ಹೋಟೆಲ್‌ಗಳು ಮುಚ್ಚಿವೆ. ಪಟ್ಟಣದಲ್ಲಿ ವಾಸವಿರುವ ಮುಸ್ಲಿಂ ಸಮುದಾಯದವರು ಸಹ ಮಾಂಸಾಹಾರವನ್ನು ತ್ಯಜಿಸಿದ್ದು ಜಾತ್ರಾ ಮಹೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡಿದ್ದಾರೆ.

ಮೊದಲ ದಿನವಾದ ಮಾರ್ಚ್ 24ರಂದು ತಡರಾತ್ರಿ ಜಾಗರ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ. ಈ ಜಾಗರ ಸಮರ್ಪಣೆಗೆ ಜನರು ಒಂದು ವಾರದ ಮುಂಚೆ ಅವರೆ, ಜೋಳ ಸೇರಿದಂತೆ ಇನ್ನಿತರ ದವಸ ಧಾನ್ಯಗಳನ್ನು ಮೊಳಕೆ ಬರಿಸಿ ಪ್ರತಿನಿತ್ಯ ಎದುರು ಪೂಜೆ ಸಲ್ಲಿಸುವುದರ ಮೂಲಕ ಬೆಳೆಸಿದ ಧಾನ್ಯಗಳ ಪೈರುಗಳನ್ನು (ಜಾಗರ) ವನ್ನು ಮಕ್ಕಳು, ಮಹಿಳೆಯರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಕೊಂಡೊಯ್ದು ಮಧ್ಯರಾತ್ರಿ ದೇವಸ್ಥಾನಕ್ಕೆ ಆಗಮಿಸಿ, ಜಾಗರವನ್ನು ದಾವಿಗೆ ಸಮರ್ಪಣೆ ಮಾಡುತ್ತಾರೆ.

ಎರಡನೇ ದಿನವಾದ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ರಥೋತ್ಸವ ಜರುಗಲಿದ್ದು ಇದೇ ದಿನ ತಂಪು ಜ್ಯೋತಿಯನ್ನು ಸಮರ್ಪಿಸುತ್ತಾರೆ. ಜಾತ್ರಾ ಮಹೋತ್ಸವದ ಮೂರನೇ ದಿನವಾದ ಬುಧವಾರ ಬಾಯಿ ಬೀಗಕಾರ್ಯಕ್ರಮ ನಡೆಯಲಿದ್ದು ಹಲವಾರು ಮಂದಿ ಬಾಯಿ ಬೀಗ ಹಾಕಿಸಿಕೊಂಡು ಹರಕೆ ತೀರಿಸಲಿದ್ದಾರೆ.

ಜಾತ್ರೆಯ ಕೊನೆಯ ದಿನ ಗುರುವಾರ ಬೆಳಗ್ಗೆ ಮುಂಜಾನೆಯಿಂದಲೇ ಶ್ರೀ ಬೆಟ್ಟಳ್ಳಿ ವಿಶೇಷ ಪೂಜೆಯನ್ನು ಸಲ್ಲಿಸಿ ಅಗ್ನಿಕುಂಡವನ್ನು ಎತ್ತಿ ಈ ವರ್ಷದ ಮಳೆಯ ಬೆಳೆಯ ಮೂಲಕ ಮಾಹಿತಿ ನೀಡಿದ ನಂತರ ಜಾತ್ರೆಗೆ ತೆರೆ ಬೀಳಲಿದೆ.

ಪಟ್ಟಣ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟ‌ರ್ ಆನಂದ್ ಮೂರ್ತಿ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

Continue Reading

Chamarajanagar

ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

Published

on

ಏ.19ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಚಾಮರಾಜನಗರ:- ಚಾಮರಾಜನಗರ ವಿಭಾಗ ವ್ಯಾಪ್ತಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮವು ವಿವಿಉಧ ಕಾಮಗಾರಿ ನಿರ್ವಹಿಸಲಿರುವ ಹಿನ್ನೆಲೆಯಲ್ಲಿ ಏಪ್ರಿಲ್ 19ರಂದು (ನಾಳೆ) ಚಾಮರಾಜನಗರ, ಹರದನಹಳ್ಳಿ ಮತ್ತು ಸಂತೇಮರಹಳ್ಳಿ ಉಪವಿಭಾಗಗಳ ವ್ಯಾಪ್ತಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ

5 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

 

ಕೋಡಿಮೋಳೆ, ಮಾದಾಪುರ, ಕಾಗಲವಾಡಿ, ಹರದನಹಳ್ಳಿ, ಬೇಡರಪುರ, ಟಿ.ಕೆ ಮೋಳೆ, ಶಿವಪುರ, ಗೂಳಿಪುರ, ಬದನಗುಪ್ಪೆ, ಪಣ್ಯದಹುಂಡಿ, ಬೆಂಡರವಾಡಿ, ಕೆಲ್ಲಂಬಳ್ಳಿ ಎನ್‌ಜೆವೈ, ಇಂಡಸ್ಟಿಯಲ್ ಏರಿಯಾ, ಕೆಇಡಿಪಿ 10 ಮತ್ತು 11, ಮುತ್ತಿಗೆ, ಹೆಗ್ಗೋಠಾರ, ಉಮ್ಮತ್ತೂರು, ಬಾಗಳಿ, ಲಿಂಗಣಾಪುರ, ಜನ್ನೂರು, ಜನ್ನೂರು ಹೊಸೂರು, ಹಳ್ಳಿಕೆರೆಹುಂಡಿ, ಗಣಗನೂರು, ಗಣಗನೂರುಪುರ, ನವಿಲೂರು, ಆಲ್ದೂರು, ಬಿಎಂಕೆ ಹುಂಡಿ, ಗೊದ್ದಲಹುಂಡಿ, ಕೊತ್ತಲವಾಡಿ, ಅರಕಲವಾಡಿ, ಯರಗನಹಳ್ಳಿ, ಸುವರ್ಣನಗರ, ಫ್ಯಾಕ್ಟರಿ, ಬಿಸಿಲವಾಡಿ, ಪುಣಜನೂರು, ಡೊಳ್ಳಿಪುರ, ಚನ್ನಪನಪುರ, ಅಮಚವಾಡಿ, ಮಾದಲವಾಡಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸಾರ್ವಜನಿಕರು ನಿಗಮದ ಜೊತೆ ಸಹಕರಿಸಬೇಕು. ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ 1912 ಕರೆ ಮಾಡುವಂತೆ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ

ತಿಳಿಸಿದ್ದಾರೆ.

Continue Reading

Chamarajanagar

ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನವೀನ್ ಅವಿರೋಧ ಆಯ್ಕೆ 

Published

on

 

ಯಳಂದೂರು ತಾಲೂಕಿನ ಅಂಬ್ರೆ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನವೀನ್ ಅವಿರೋಧವಾಗಿ ಆಯ್ಕೆಯಾದರು,

ಮಾತನಾಡಿ ಬೆಳೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದು ಇನ್ನಷ್ಟು ಜವಾಬ್ದಾರಿ ಹೆಚ್ಚಾಗಿದೆ. ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದರು,

ಈ ಸಂದರ್ಭದಲ್ಲಿ ಚುನಾವಣೆ ಅಧಿಕಾರಿ ಆದ ಚಂದ್ರಶೇಖರ್ ಮೂರ್ತಿ, ಉಪಾಧ್ಯಕ್ಷೆ ಮಾದೇವಮ್ಮ, ಸೇರಿದಂತೆ ಗ್ರಾಮ ಪಂಚಾಯಿತಿಯ ಸದಸ್ಯರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಕಾವ್ಯ ಕಾರ್ಯದರ್ಶಿ ಪುಟ್ಟರಾಜು ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು

Continue Reading

Chamarajanagar

ಬೋನಿಗೆ ಬಿದ್ದ 3 ನೇ ಚಿರತೆ

Published

on

ವರದಿ. ಮಂಜುಕುಮಾರ್ ಪಿ.

ಗುಂಡ್ಲುಪೇಟೆ: ತಾಲೂಕಿನ ಅಕ್ಕಲಪುರ ಗ್ರಾಮದಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದೆ

ಗ್ರಾಮದಲ್ಲಿ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ. ಈ ಚಿರತೆ ಅಕ್ಕಲಪುರ ಹಾಗೂ ಸುತ್ತ ಮುತ್ತಲಿನ ಗ್ರಾಮದ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿತ್ತು. ಇದನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರು. ಅದರಂತೆ ಅಕ್ಕಲಪುರ ಗ್ರಾಮದ BS ಸ್ವಾಮಿ ಎಂಬುವರ ಜಮೀನಿನಲ್ಲಿ ಇರಿಸಿದ್ದ ಬೋನಿನಲ್ಲಿ ಚಿರತೆ ಬಂಧಿಯಾಗಿದೆ. ಈ ಹಿಂದೆ ಎರಡೂ ಚಿರತೆಗಳು ಬೋನಿಗೆ ಬಿದ್ದಿವೆ. ಈವಾಗ ಮೂರನೇ ಚಿರತೆ ಸೇರಿಯಾಗಿದೆ

 

ಸುಮಾರು ದಿನಗಳಿಂದ ಅಕ್ಕಲಪುರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಪ್ರಾಣಿಗಳ ಬೇಟೆಗೆ ಸಂಚಾರ ಮಾಡುತ್ತಿದ್ದ ಚಿರತೆ ಬೋನಿಗೆ ಸರೆಯಾಗಿರುವುದರಿಂದ ಸಾರ್ವಜನಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

Continue Reading

Trending

error: Content is protected !!