Hassan
ಸಮಾಜದಲ್ಲಿ ಹೆಣ್ಣಿನ ಸ್ಥಾನಮಾನ ದೊಡ್ಡದು: ಫಾದರ್ ಆಲ್ಡಿನ್ ಡಿಸೋಜಾ

ವರದಿ: ಸತೀಶ್ ಚಿಕ್ಕಕಣಗಾಲು
ಆಲೂರು : ಸಮಾಜದಲ್ಲಿ ಹೆಣ್ಣಿನ ಸ್ಥಾನಮಾನ ದೊಡ್ಡದು. ಎಲ್ಲಾ ಸ್ತರಗಳಲ್ಲೂ ಕೆಲಸ ಮಾಡುತ್ತಿರುವ ಹೆಣ್ಣು ಅಬಲೆಯಾಗಿ ಉಳಿದಿಲ್ಲ ಎಂದು ಸಿಎಂಎಸ್ಎಸ್ಎಸ್ ನ ನಿಯೋಜಿತ ನಿರ್ದೇಶಕ ಫಾದರ್ ಆಲ್ಡಿನ್ ಡಿಸೋಜಾ ಹೇಳಿದರು.
ತಾಲೂಕಿನ ಮಗ್ಗೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿಗೆ ಸೇರಿದ ಸಮುದಾಯ ಭವನದಲ್ಲಿ ಸಿ.ಎಂ.ಎಸ್.ಎಸ್.ಎಸ್ ಸಂಸ್ಥೆ, ಅಮರ ಜ್ಯೋತಿ ಮಹಾಸಂಘ ಮತ್ತು ಸ್ನೇಹಾಜ್ಯೋತಿ ಮಹಾಸಂಘಗಳ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತಾಯಿ, ಪತ್ನಿ, ಸಹೋದರಿ ಸೇರಿದಂತೆ ವಿವಿಧ ಪಾತ್ರಗಳನ್ನು ಸಮರ್ಥವಾಗಿ ನಿಭಾಯಿಸುವ ಮಹಿಳೆಗೆ ನಮ್ಮ ವಿಶೇಷ ಸ್ಥಾನವಿದೆ. ಆಕೆಯ ತ್ಯಾಗ ಮತ್ತು ಹೋರಾಟದ ಮನೋಭಾವ ಎಲ್ಲರಿಗೂ ಮಾದರಿಯಾದುದು ಎಂದು ಹೇಳಿದರು.
ಫಾದರ್ ರಾಜೇಂದ್ರ ಮಾತನಾಡಿ, ಹೆಣ್ಣು ಸಮಾಜದ ಕಣ್ಣಾಗುವ ಮೂಲಕ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಿದ್ದಾರೆ. ಎಲ್ಲಾ ರಂಗಗಳಲ್ಲೂ ಮಹಿಳೆಯರಿಂದು ಭಾಗವಹಿಸುತ್ತಿರುವುದನ್ನು ನಾವು ಕಾಣಬಹುದಾಗಿದೆ ಎಂದರು.
ಸಿಎಂಎಸ್ಎಸ್ಎಸ್ ನ ಪಿ.ಆರ್. ಒ ನಿರೀಕ್ಷ ಮಾತನಾಡಿ, ಮಹಿಳೆಯರು ಸಾಮಾಜಿಕ ಆರ್ಥಿಕ, ರಾಜಕೀಯ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಶಕ್ತರಾಗಬೇಕೆಂಬ ಉದ್ದೇಶದಿಂದ ಸಿ.ಎಂ.ಎಸ್.ಎಸ್.ಎಸ್ ಸಂಸ್ಥೆಯು ಹಮ್ಮಿಕೊಂಡಿರುವ ಕಾರ‍್ಯಕ್ರಮಗಳಾದ ಮಹಿಳಾ ಸಬಲೀಕರಣ, ವಿಕಲ ಚೇತರನ್ನು ಮುಖ್ಯವಾಹಿನಿಗೆ ತರುವುದು, ಆರೋಗ್ಯ ಮತ್ತು ಶಿಕ್ಷಣ, ಕೌಶಲ್ಯ ಅಭಿವೃದ್ದಿ ಮತ್ತು ಪರಿಸರ ಸಂರಕ್ಷಣೆಗಳಿಗೆ ಸಂಬಂಧಿಸದಂತೆ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ. ಪ್ರತಿಯೊಬ್ಬ ಮಹಿಳೆಯು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ಗ್ರಾಮದ ಲಕ್ಷ್ಮಿ, ಆಶ್ವಿನಿ, ರೂಪ, ಪಾಲಾಕ್ಷ, ನಸ್ತೀನ್ ಅಕ್ತರ್, ಸಿಸ್ಟರ್. ಮೇರಿ ಜೆರಾಲ್ಡಿನ್, ಪರಮೇಶ್, ಜೀವನ್ ಜೋಯಲ್, ಜಯಮ್ಮ ಸೇರಿದಂತೆ ಇನ್ನಿತರರು ಹಾಜರಿದ್ದರು.
Hassan
ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ಬಗರ್‌ಹುಕುಂಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಯಾವ ರೈತರಿಗೂ ಅನ್ಯಾಯ ಆಗದಂತೆ, ದಾಖಲೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಮುಂದಿನ ಸಭೆಯಲ್ಲಿ ಸಾಗುವಳಿ ಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು, ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಇತ್ತೀಚೆಗೆ ನಡೆದ ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ಅನೇಕ ವರ್ಷಗಳಿಂದ ಉಳುಮೆ ಮಾಡುತ್ತಿದ್ದು, ನಿಯಮಾನುಸಾರ ಅರ್ಜಿ ಸಲ್ಲಿಸಿ ಅನುಭವದಲ್ಲಿರುವ ರೈತರ ಜಮೀನುಗಳ ಬಳಿ ತೆರಳಿ ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಜಮೀನಿಗೆ ಸಂಬಂಧಿಸಿದಂತೆ ರೈತರನ್ನು ಅನಗತ್ಯವಾಗಿ ಕಚೇರಿಗೆ ಅಲೆದಾಡಿಸಬಾರದು. ಮಧ್ಯವರ್ತಿಗಳಿಗೆ ಅವಕಾಶ ನೀಡದೇ ಫಲಾನುಭವಿ ರೈತರಿಗೆ ಅನುಕೂಲ ಮಾಡಿಕೊಡಲು ಅಧಿಕಾರಿಗಳು ಮುಂದಾಗಬೇಕು. ಯಾವುದೇ ಸಮಸ್ಯೆ ಇದ್ದಲ್ಲಿ ಗಮನಕ್ಕೆ ತರಬೇಕು. ಅನ್ಯಾಯ ಆಗದಂತೆ ಪಾರದರ್ಶಕವಾಗಿ ಪರಿಶೀಲಿಸಿ, ನಿಯಮಾನುಸಾರ ಅರ್ಹ ರೈತರಿಗೆ ಸಾಗುವಳಿ ಪತ್ರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ತಹಶೀಲ್ ಮಲ್ಲಿಕಾರ್ಜುನ್ ಮಾತನಾಡಿ, ಎರಡು ವರ್ಷಗಳ ನಂತರ ಬಗರ್ ಹುಕುಂ ಸಮಿತಿ ಸಭೆ ನಡೆದಿದ್ದು, 26 ಫಲಾನುಭವಿಗಳ ಪೈಕಿ, ಗುರುವಾರ ನಡೆದ ಸಭೆಯಲ್ಲಿ ಎರಡು ಅರ್ಜಿಗಳನ್ನು ಅನುಮೋದಿಸಲಾಯಿತು. ಉಳಿದ 24 ಅರ್ಜಿಗಳಿಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲಿಸಿ ಮುಂದಿನ ಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಉಪ ತಹಶೀಲ್ದಾರ್ ಎಂ.ಎ.ಅಂಕೆಗೌಡ, ಭೂಮಿ ಸಂಯೋಜಕ ಪ್ರದೀಪ್, ಹೋಬಳಿಗಳ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಹಾಗು ಸಿಬ್ಬಂದಿಗಳು ಹಾಜರಿದ್ದರು.
ಪೋಟೋ ಕ್ಯಾಪ್ಶನ್: ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಇತ್ತೀಚೆಗೆ ನಡೆದ ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆಯಲ್ಲಿ ಶಾಸಕ ಸಿಮೆಂಟ್ ಮಂಜು ಭಾಗವಹಿಸಿ ಮಾತನಾಡಿದರು.
Hassan
ಜನಿವಾರ, ಕಾಶೀ ದಾರ ತೆಗೆಸಿರುವುದು ಖಂಡನೀಯ

ಹಾಸನ: ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಹಾಗೂ ಕೈಗೆ ಹಾಕಿದ್ದ ಕಾಶೀ ದಾರವನ್ನು ತೆಗೆದು ಹಾಕಲು ಹೇಳಿದ ಘಟನೆ ಅತ್ಯಂತ ಖಂಡನೀಯ ಎಂದು ಬಿಜೆಪಿ ಕಾರ್ಯಕರ್ತ ಹಾಗೂ ಬ್ರಾಹ್ಮಣ ಸಂಘದ ಸದಸ್ಯ ವೇಣುಗೋಪಾಲ್ ಬೇಸರವ್ಯಕ್ತಪಡಿಸಿದ್ದಾರೆ.
ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಅವರ ಅವರ ಧರ್ಮದ ಆಚರಣೆಗಳನ್ನು, ಇನ್ನೊಬ್ಬರಿಗೆ ತೊಂದರೆ ಆಗದಂತೆ, ಪಾಲಿಸುವ ಅವಕಾಶ ನೀಡಿದೆ. ಹೀಗಿರುವಾಗ ಸಾಮಾನ್ಯ ನಾಗರೀಕನ ಹಕ್ಕನ್ನು ಮೋಟಕುಗೊಳಿಸುವ ಪ್ರಯತ್ನವನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಅಲ್ಪಸಂಖ್ಯಾತರನ್ನು ಒಲೈಸುವ ನೆಪದಲ್ಲಿ ಬ್ರಾಹ್ಮಣ ಸಮಾಜದ ಧಾರ್ಮಿಕ ಆಚರಣೆಗಳನ್ನು ತಡೆಯುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
Hassan
ತಾಲೂಕಿನ ವಿವಿಧ ಚರ್ಚ್‌ಗಳಲ್ಲಿ ಶುಕ್ರವಾರ ಗುಡ್ ಪ್ರೈಡೆ ಅಂಗವಾಗಿ ವಿಶೇಷ ಪ್ರಾರ್ಥನೆಗಳು ನಡೆದವು.

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ತಾಲೂಕಿನ ವಿವಿಧ ಚರ್ಚ್‌ಗಳಲ್ಲಿ ಶುಕ್ರವಾರ ಗುಡ್ ಪ್ರೈಡೆ ಅಂಗವಾಗಿ ವಿಶೇಷ ಪ್ರಾರ್ಥನೆಗಳು ನಡೆದವು. ಹಲವು ಸಂಖ್ಯೆಯಲ್ಲಿ ಕ್ರೈಸ್ತ ಬಾಂಧವರು ಚರ್ಚ್‌ಗಳಲ್ಲಿ ಮೇಣದ ಬತ್ತಿ ಹಿಡಿದು ಪ್ರಾರ್ಥನೆ ಸಲ್ಲಿದ ದೃಶ್ಯ ಕಂಡು ಬಂತು.
ಆಲೂರು ತಾಲೂಕಿನ ಪಾಳ್ಯ ಹೋಬಳಿ ಜೋಸೆಫ್ ನಗರದ ಸಂತ ಜೋಸೆಫರ ಚರ್ಚ್‌ನಲ್ಲಿ ಹಾಗೂ ಮಗ್ಗೆ ಗ್ರಾಮದಲ್ಲಿರುವ ಸೆಂಟ್ ಫ್ರಾನ್ಸಿಸ್ ಕ್ಷವಿಯರ್ ಚರ್ಚ್‌ನಲ್ಲಿ ಯೇಸು ಕ್ರಿಸ್ತನು ಬಂಧನಕ್ಕೆ ಒಳಗಾಗುವುದರಿಂದ ಹಿಡಿದು ಶಿಲುಬೆಯ ಮೇಲೆ ಮರಣ ಹೊಂದುವ ತನಕದ ವಿವಿಧ ಘಟನೆಗಳನ್ನು ನೆನಪಿಸುವ ಪ್ರದರ್ಶನದ ಮೂಲಕ ಜನರಿಗೆ ಏಸು ಕ್ರಿಸ್ತನ ಕುರಿತ ಸಂದೇಶ ಸಾರಲಾಯಿತು. ನಂತರ ಯೇಸು ಕ್ರಿಸ್ತನು ಆಡಿದ ಮಹತ್ವದ ಏಳು ಮಾತುಗಳ ಕುರಿತು ಪ್ರವಚನ ನೀಡಲಾಯಿತು.
ಜೋಸೆಫ್ ನಗರದಲ್ಲಿರುವ ಜೋಸೆಫರ ಚರ್ಚ್ ನ ಧರ್ಮ ಗುರುಗಳಾದ ಒಂದನೆಯ ಫಾದರ್ ಆಲ್ವಿನ್ ಡಿಸೋಜಾ ಮಾತನಾಡಿ, ಕ್ರಿಶ್ಚಿಯನ್ ಧರ್ಮದಲ್ಲಿ ಮಹತ್ವದ ತಿರುವು ಪಡೆದ ಯೇಸುಕ್ರಿಸ್ತನ ಶಿಲುಬೆಗೇರಿಸುವಿಕೆಯ ಸನ್ನಿವೇಶವು ಗುಡ್ ಪ್ರೈಡೇಗೆ ಅಡಿಪಾಯವನ್ನು ಹಾಕಿದೆ. ಯೇಸುಕ್ರಿಸ್ತನು 2000 ಸಾವಿರ ವರ್ಷಗಳ ಹಿಂದೆ ಭೂಲೋಕಕ್ಕೆ ಮನುಷ್ಯ ಅವತಾರ ತಾಳಿ ಬಂದನು. ಮನುಷ್ಯನಂತೆ ಲೋಕದಲ್ಲಿ ಜೀವಿಸಿದನು. ಆದರೆ, ಪಾಪ ಮಾತ್ರ ಮಾಡಲಿಲ್ಲ. ಆದರೂ ಆಗಿನ ರೋಮ್ ಸಾಮ್ರಾಜ್ಯದಲ್ಲಿ ಯೆಹೂದ್ಯರು ಆತನನ್ನು ಶಿಲುಬೆಯ ಮರಣಕ್ಕೆ ಒಪ್ಪಿಸಿದರು. ಆದರೆ, ಆತನು ಮೂರು ದಿನಗಳ ನಂತರ ಪುನರುತ್ಥಾನವಾದನು. ಹೀಗಾಗಿ ಕ್ರೈಸ್ತರು ಕೂಡ ಲೋಕದಲ್ಲಿ ಇರುವಾಗ ಕ್ರಿಸ್ತನಿಗೆ ವಿರುದ್ಧವಾದ ಕೆಲಸಗಳನ್ನು ಮಾಡಬಾರದು. ಕ್ರಿಸ್ತನಂತೆ ಜೀವನ ಮಾಡಬೇಕು ಎಂದು ಸಂದೇಶ ನೀಡಿದರು.
ಪೋಟೋ ಕ್ಯಾಪ್ಶನ್: ಆಲೂರು ತಾಲೂಕಿನ ಪಾಳ್ಯ ಹೋಬಳಿ ಜೋಸೆಫ್ ನಗರದಲ್ಲಿರುವ ಸಂತ ಜೋಸೆಫರ ಚರ್ಚ್ ನಲ್ಲಿ ಶುಕ್ರವಾರ ಗುಡ್ ಪ್ರೈಡೆ ಅಂಗವಾಗಿ ವಿಶೇಷ ಪ್ರಾರ್ಥನೆಗಳು ನಡೆದವು.
-
Mandya21 hours ago
ಪತ್ನಿಯ ಶೀಲ ಶಂಕಿಸಿ ಪತಿಯಿಂದಲೇ ಬರ್ಬರ ಹತ್ಯೆ…!
-
Kodagu17 hours ago
ಹಾತೂರುವಿನಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ.
-
Chamarajanagar21 hours ago
ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನವೀನ್ ಅವಿರೋಧ ಆಯ್ಕೆ
-
Chamarajanagar21 hours ago
ಬೋನಿಗೆ ಬಿದ್ದ 3 ನೇ ಚಿರತೆ
-
Kodagu14 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Chamarajanagar12 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Chikmagalur15 hours ago
ಅಕ್ರಮ ಸಂಬಂಧಕ್ಕಾಗಿ ಪತಿಯನ್ನ ಕೊಂದ ಸತಿ
-
Chikmagalur14 hours ago
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.