Kodagu
ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ತಿಮ್ಮಯ್ಯನವರ 119ನೇ ಜನ್ಮ ದಿನಾಚರಣೆ
ಮಡಿಕೇರಿ: ಜನರಲ್ ಕೆ.ಎಸ್.ತಿಮ್ಮಯ್ಯನವರ ೧೧೯ನೇ ಜನ್ಮ ದಿನಾಚರಣೆಯನ್ನು ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಆಚರಿಸಲಾಯಿತು.
ಕಾರ್ಯಕ್ರಮ ಪ್ರಯುಕ್ತ ಜನರಲ್ ತಿಮ್ಮಯ್ಯ ವೃತ್ತದಲ್ಲಿರುವ ಅವರ ಪ್ರತಿಮೆಗೆ ಗಣ್ಯರು, ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪುಷ್ಪ ನಮನ ಸಲ್ಲಿಸಿದರು. ವಿದ್ಯಾರ್ಥಿಗಳು ಪಥಸಂಚನದ ಮೂಲಕ ಅತಿಥಿಗಳಿಗೆ ಗೌರವ ವಂದನೆ ಸಲ್ಲಿಸಿದರು.

ನಂತರ ಶಾಲೆಯಲ್ಲಿ ನಡೆದ ಕಾರ್ಯಕ್ರಮ ಅಧ್ಯಕ್ಷತೆಯನ್ನು ಕೊಡವ ಸಮಾಜ ಮತ್ತು ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಅಧ್ಯಕ್ಷ ಮಂಡುವಂಡ ಮುತ್ತಪ್ಪ ವಹಿಸಿದ್ದರು.
ಈ ಸಂದರ್ಭ ನಿವೃತ್ತ ಲೆಫ್ಟಿನೆಂಟ್ ಜನರಲ್ ಡಾ.ಬಿ.ಎಂ.ಪ್ರಸಾದ್ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯದ ಪ್ರೇರಣಾ ಶಕ್ತಿಯಾಗಿ ಬೆಳೆಯಬೇಕು. ಜನರಲ್ ತಿಮ್ಮಯ್ಯನವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಶಿಕ್ಷಕರು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕೆಂದು ಕಿವಿ ಮಾತನ್ನು ಹೇಳಿದರು.
ಶಾಲಾ ಚಟುವಟಿಕೆಯಲ್ಲಿ ಪಾಲ್ಕೊಂಡು ವರ್ಷದ ಅತ್ಯುತ್ತಮ ವಿದ್ಯಾರ್ಥಿಗಳಾಗಿ ಯುಕ್ತಾ ನೀಲಮ್ಮ, ಮಾಸ್ಟರ್ ಧ್ರುವ ನಂಜಪ್ಪ, ಕುಮಾರಿ ಜನೀಷಾ ಸುಬ್ರಮಣಿ ಹೊರಹೊಮ್ಮಿದರು. ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಕೇಕಡ ದೇವಯ್ಯ, ಆಡಳಿತ ಅಧಿಕಾರಿ ಎನ್.ಎ.ಪೊನ್ನಮ್ಮ, ಸಂಚಾಲಕ ಕನ್ನಂಡ ಕವಿತಾ ಬೊಳ್ಳಪ್ಪ, ಪ್ರಾಂಶುಪಾಲೆ ಎಂ.ಜಿ.ಸವಿತಾ, ಆಡಳಿತ ಮಂಡಳಿ ಇತರ ಗಣ್ಯರು ಉಪಸ್ಥಿತರಿದ್ದರು. ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Kodagu
ಡಾ.ಬಿ.ಆರ್.ಅಂಬೇಡ್ಕರ್ ಜೀವನ ಸಾಧನೆಗಳನ್ನು ಅಧ್ಯಯನ ಮಾಡಿ: ವೆಂಕಟ್ ರಾಜಾ
ಮಡಿಕೇರಿ : ಡಾ.ಬಿ.ಆರ್.ಅಂಬೇಡ್ಕರ್ ಅವರ ಮೌಲ್ಯ, ಜೀವನ ಸಾಧನೆಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ‘ಪರಿನಿರ್ವಾಣ ದಿನ’ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶ ವಿದೇಶಗಳಲ್ಲಿ ಹಲವು ಸ್ನಾತಕೋತ್ತರ ಪದವಿ ಪಡೆದು ರಾಷ್ಟ್ರಕ್ಕೆ ಒಳ್ಳೆಯ ಸಂವಿಧಾನ ನೀಡಿದ್ದಾರೆ. ಅವರ ಜೀವನ ಸಂದೇಶಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದರು.
ದೇಶ ವಿದೇಶಗಳಲ್ಲಿ ಅಂಬೇಡ್ಕರ್ ಅವರ ಅಧ್ಯಯನ ಕೇಂದ್ರಗಳು ಹಾಗೂ ಸಂಶೋಧನಾ ಕೇಂದ್ರಗಳು ಇವೆ. ಇಡೀ ಪ್ರಪಂಚದಲ್ಲಿಯೇ ಅವರು ಅಜರಾಮರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಸ್ಮರಿಸಿದರು.

ದೇಶ ವಿದೇಶಗಳಲ್ಲಿಯೂ ಸಹ ಅವರ ಪ್ರತಿಮೆಯನ್ನು ಕಾಣಬಹುದಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಅಧ್ಯಯನಶೀಲತೆ ಮತ್ತು ಸಾಮಾಜಿಕ ಹೋರಾಟ ರಾಷ್ಟ್ರದಲ್ಲಿ ಒಂದು ರೀತಿ ಮಹಾನ್ ಕ್ರಾಂತಿ ಎಂದು ಜಿಲ್ಲಾಧಿಕಾರಿ ಅವರು ವರ್ಣಿಸಿದರು.
ಅಂಬೇಡ್ಕರ್ ಅವರ ಮೌಲ್ಯಗಳು ಹಾಗೂ ಮಾರ್ಗದರ್ಶನದಂತೆ ನಡೆದುಕೊಳ್ಳಬೇಕು. ಅವರು ಬರೆದಿರುವ ಸಂವಿಧಾನವನ್ನು ಸ್ಮರಿಸಿಕೊಂಡು ಅಭಿವೃದ್ಧಿಯತ್ತ ಚಿಂತನೆ ಮಾಡಬೇಕು. ಮುಂದಿನ ಪೀಳಿಗೆಗೆ ಮಾರ್ಗದರ್ಶಕರಾಗಿ ನಡೆದುಕೊಳ್ಳಬೇಕು ಎಂದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ ಅವರು ಮಾತನಾಡಿ, ಸುಮಾರು ಆರು ದಶಕಗಳ ಹೋರಾಟದ ನಂತರ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣವಾಗುತ್ತಿರುವುದು ಶ್ಲಾಘನೀಯ ಎಂದರು.
ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಸಂಬಂಧ ಜಿಲ್ಲಾಧಿಕಾರಿ ಅವರು ನುಡಿದಂತೆ ನಡೆದಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.

ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು. ನಗರಸಭೆ ಸದಸ್ಯರಾದ ಎಸ್.ಸಿ.ಸತೀಶ್, ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕರಾದ ದೀಪಕ್ ಪೊನ್ನಪ್ಪ, ಪ್ರಮುಖರಾದ ಮೋಹನ್ ಮೌರ್ಯ, ಪ್ರೇಮ್ ಕುಮಾರ್, ರಮೇಶ್, ಸಿದ್ದೇಶ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.
Kodagu
ಪುತ್ತರಿ ಹಿನ್ನೆಲೆ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಿದ ಸಿಎನ್‌ಸಿ
ಮಡಿಕೇರಿ: ಪತ್ತ್‌ಕಟ್ಟ್‌ನಾಡಿನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ನಡೆದ 32ನೇ ವರ್ಷದ ’ಪುತ್ತರಿ ನಮ್ಮೆ’ಯ ಹಿನ್ನೆಲೆ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
ವೀರ ಮರಣವನ್ನಪ್ಪಿದ ಕೊಡವರಿಗೆ ಗೌರವ ಸಲ್ಲಿಸಿ ಮಾತನಾಡಿದ ಎನ್.ಯು.ನಾಚಪ್ಪ ಅವರು 1790-92 ಮತ್ತು 1799ರ ನಡುವೆ ಕ್ರಮವಾಗಿ ಜನರಲ್ ಲಾರ್ಡ್ ಕಾರ್ನ್‌ವಾಲೀಸ್ ಹಾಗೂ ಜನರಲ್ ಲಾರ್ಡ್ ವೆಲ್ಲೆಸ್ಲಿ ನೇತೃತ್ವದಲ್ಲಿ ನಡೆದ 3ನೇ ಮತ್ತು 4ನೇ ಆಂಗ್ಲೋ-ಮೈಸೂರು ಯುದ್ಧಗಳಲ್ಲಿ ಆದಿಮ ಸಂಜಾತ ಏಕಜನಾಂಗೀಯ ಆನಿಮಿಸ್ಟಿಕ್ ನಂಬುಗೆಯ ಕೊಡವರು ತೋರಿದ ಶೌರ್ಯವನ್ನು ಸ್ಮರಿಸಿದರು.

ಡಿ.ವೀರರಾಜರ ಮಾರ್ಗದರ್ಶನದಲ್ಲಿ ಕೊಡವ ಸೈನ್ಯವು ಮೈಸೂರು ಸುಲ್ತಾನರ ವಿರುದ್ಧ ಬ್ರಿಟಿಷರೊಂದಿಗೆ ಸಮುದಾಯದ ಮಿಲಿಟರಿ ಮೈತ್ರಿಯನ್ನು ಮಾಡಿಕೊಂಡು ನಡೆಸಿದ ಯುದ್ಧದಲ್ಲಿ ಟಿಪ್ಪು ಸುಲ್ತಾನನಿಗೆ ಸೋಲಾಯಿತು. ಕೊಡವ ಯೋಧರ ವೀರಾವೇಶದಿಂದಲೇ ಮೈಸೂರು ಸುಲ್ತಾನರಿಗೆ 31 ಬಾರಿ ಸೋಲಾಗಿದೆ ಎಂದರು.
1785 ರಲ್ಲಿ ಮೈಸೂರು ಸುಲ್ತಾನರು ಹಾಗೂ ಫ್ರೆಂಚ್ ಪಡೆಗಳು ನಡೆಸಿದ ದೇವಟ್ ಪರಂಬು ದಾಳಿಯಿಂದಾದ ಕೊಡವ ನರಮೇಧದ ಪರಿಣಾಮ ಆಂಗ್ಲೋ-ಮೈಸೂರು ಯುದ್ಧಗಳಲ್ಲಿ ಕೊಡವ ಯೋಧರು ಭಾಗವಹಿಸಲು ಕಾರಣವಾಯಿತು. ವೀರ ಕೊಡವರ ಶೌರ್ಯವನ್ನು ಗೌರವಿಸುವುದಕ್ಕಾಗಿ ’ಪುತ್ತರಿ ನಮ್ಮೆ’ಯ ಪ್ರಯುಕ್ತ ಹಿತಿಯರನ್ನು ಸ್ಮರಿಸಲಾಯಿತು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಲಿಯಂಡ ಮೀನಾ ಪ್ರಕಾಶ್, ಕಲಿಯಂಡ ಪ್ರಕಾಶ್, ಜಮ್ಮಡ ಮೋಹನ್, ಕಾಂಡೇರ ಸುರೇಶ್, ಬೇಪಡಿಯಂಡ ದಿನು, ಅರೆಯಡ ಗಿರೀಶ್, ನಂದೇಟಿರ ರವಿ ಸುಬ್ಬಯ್ಯ, ಬೊಟ್ಟಂಗಡ ಗಿರೀಶ್, ಚಂಬಂಡ ಜನತ್, ಕಿರಿಯಮಾಡ ಶೆರಿನ್, ಪಾರ್ವಂಗಡ ನವೀನ್, ಕಿರಿಯಮಾಡ ಶಾನ್, ಮದ್ರಿರ ಕರುಂಬಯ್ಯ, ಅಪ್ಪೆಯಂಗಡ ಮಾಲೆ ಪೂಣಚ್ಚ ಹಾಗೂ ಚೊಕ್ಕಂಡ ಕಟ್ಟಿ ಪಾಲ್ಗೊಂಡಿದ್ದರು.
Kodagu
ಕಗ್ಗೋಡ್ಲುವಿನ ಹೂಕಾಡು ಪೈಸಾರಿಗೆ ಶಾಸಕ ಪೊನ್ನಣ್ಣ ಭೇಟಿ
ಮಡಿಕೇರಿ : ತಾಲೂಕು ಕಗ್ಗೋಡ್ಲುವಿನ ಹೂಕಾಡು ಪೈಸಾರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಭೇಟಿ ನೀಡಿದರು.
ಬಳಿಕ ಶಾಸಕರ ಅನುದಾನದ 25 ಲಕ್ಷಗಳಲ್ಲಿ ಕೈಗೆತ್ತಿಕೊಂಡಿರುವ ರಸ್ತೆ ದುರಸ್ತಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕರು, ಎಲ್ಲರಿಗೆ ಶುಭ ಕೋರಿದರು. ಬಳಿಕ ಮೇಕೇರಿಯ ಶಾಲೆ ಎದುರಿನ ಮುಖ್ಯ ರಸ್ತೆ ಬಳಿ, ನೂತನವಾಗಿ ಶಾಸಕರ ಅನುದಾನದಲ್ಲಿ ನಿರ್ಮಾಣ ಆಗುತ್ತಿರುವ ಬಸ್ ತಂಗುದಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಹಾಕತ್ತುರು ವಲಯ ಅಧ್ಯಕ್ಷರು ಪಿಯೂಸ್, ಮೇಕೇರಿ ವಲಯ ಪೊನ್ನಪ್ಪ, ಶಾರದಾ, ಜಗತ್, ವಿಜಯಲಕ್ಷ್ಮಿ, ಬೂತ್ ಅಧ್ಯಕ್ಷರು ಕೊರಗಪ್ಪ, ಶಂಕರ ಪೂಜಾರಿ, ತಿಮ್ಮಯ್ಯ, ಪಂಚಾಯಿತಿ ಸದಸ್ಯರು ಹನೀಫ್, ಸೂರಜ್ ಹೊಸೂರು, ಉದಯ ಅಯ್ಯಪ್ಪ, ಸಾಕಿಬ್, ಪ್ರಕಾಶ್, ಆಪ್ರು ರವೀಂದ್ರ, ರತ್ನಕರ್ ರೈ,ಅಭಿನ್ ರೈ ಹಾಗೂ ಉಪಸ್ಥಿತರಿದ್ದರು.
-
State19 hours agoಡಿವೈಡರ್ಗೆ ಕಾರ್ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ
-
Hassan16 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
Hassan19 hours agoಅಂಬೇಡ್ಕರ್ ತತ್ತ್ವ, ಸಿದ್ಧಾಂತಗಳು ಶಾಶ್ವತ: ಸಂಸದ ಶ್ರೇಯಸ್ ಪಟೇಲ್
-
Mandya14 hours agoಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನ: ಮಾಲಾರ್ಪಣೆ ಮಾಡಿದ ಕೇಂದ್ರ ಸಚಿವ ಎಚ್ಡಿಕೆ
-
Chikmagalur22 hours agoಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಹ*ತ್ಯೆ
-
Hassan20 hours agoಸಿಎಂ, ಡಿಸಿಎಂ ಇಂದು ಹಾಸನ ಜಿಲ್ಲಾ ಪ್ರವಾಸ
-
Mysore19 hours agoಡ್ರೋನ್ ಕ್ಯಾಮರದ ರೆಕ್ಕೆ ತಗಲಿ ಶಾಸಕ ಅನಿಲ್ ಚಿಕ್ಕಮಾದು ಮುಖಕ್ಕೆ ಗಾಯ
-
Mysore13 hours agoಡಿ.14ರಂದು ‘ಮೈಸೂರು ಭವಿಷ್ಯದ ಅಭಿವೃದ್ಧಿ’ ಸಾರ್ವಜನಿಕ ಸಂವಾದ
