Chamarajanagar
ಮದುವೆಗೆ ಆಗಮಿಸುತ್ತಿದ್ದ ವರನ ಮೇಲೆ ಚಾಕು ದಾಳಿ: ಮೂವರು ಆರೋಪಿಗಳ ಬಂಧನ
ಕೊಳ್ಳೇಗಾಲ: ಪಟ್ಟಣದಲ್ಲಿ ಮದುವೆಗೆ ಆಗಮಿಸುತ್ತಿದ್ದ ವರನ ಮೇಲೆ ಚಾಕು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಜ.29 ರಂದು ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವೇಳೆ, ವರ ರವೀಶ್ ಅವರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರು ಚಾಕುವಿನಿಂದ ದಾಳಿ ನಡೆಸಿ ಎಡ ತೋಳಿಗೆ ಗಾಯಗೊಳಿಸಿದ್ದರು.
ಈ ಕುರಿತು ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ತನಿಖೆ ನಡೆಸಲಾಯಿತು. ತನಿಖೆಯ ವೇಳೆ ವರನನ್ನು ಕೊಲೆ ಮಾಡಲು ಯತ್ನಿಸಿದ ಪ್ರಮುಖ ಆರೋಪಿಗಳಾದ ದರ್ಶನ್ ಮತ್ತು ಮಿಥುನ್ ಅವರನ್ನು ಇಂದು ಬಂಧಿಸಲಾಗಿದೆ. ಜೊತೆಗೆ, ಕೃತ್ಯದಲ್ಲಿ ವರನೊಂದಿಗೆ ಮದುವೆ ನಿಶ್ಚಯವಾಗಿದ್ದ ವಧುವೂ ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು, ಆಕೆಯನ್ನೂ ದಸ್ತಗಿರಿ ಮಾಡಲಾಗಿದೆ.

ಆರೋಪಿಗಳು ಬಳಸಿದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ತಲೆಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜ್ ಶ್ಲಾಘಿಸಿದ್ದಾರೆ.
Chamarajanagar
ಚಿಕ್ಕಮಾಲಾಪುರದಲ್ಲಿ ವನ್ಯಜೀವಿ ದಾಳಿ: ಕುರಿ ಬಲಿ
ಹನೂರು: ತಾಲೂಕಿನ ಚಿಕ್ಕಮಾಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂಟಮಾಲಪುರ ಗ್ರಾಮದ ಕೆರೆ ಸಮೀಪ ವನ್ಯಜೀವಿ ದಾಳಿಯಿಂದ ಕುರಿಯೊಂದು ಸಾವನ್ನಪ್ಪಿದ ಘಟನೆ ನಡೆದಿದೆ.
ಗೋವಿಂದ ನಾಯ್ಡು ಅವರಿಗೆ ಸೇರಿದ ಕುರಿಯ ಮೇಲೆ ಹುಲಿ ದಾಳಿ ನಡೆಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಕುರಿಯನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ ಎಂದು ಪ್ರತ್ಯಕ್ಷದರ್ಶಿ ನಾಗರಾಜು ಹೇಳಿದ್ದಾರೆ.

ಘಟನೆ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಜ್ಜೆ ಗುರುತುಗಳನ್ನು ಪರಿಶೀಲಿಸುತ್ತಿದ್ದಾರೆ. ದಾಳಿ ಮಾಡಿದ ಪ್ರಾಣಿಯ ಕುರಿತು ಖಚಿತಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ಈ ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ಉಂಟಾಗಿದ್ದು, ಅರಣ್ಯ ಇಲಾಖೆ ಹೆಚ್ಚುವರಿ ನಿಗಾ ವಹಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
Chamarajanagar
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ
ಗುಂಡ್ಲುಪೇಟೆ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ತಾಲೂಕಿನ ಮದ್ದೂರು ಚೆಕ್‌ಪೋಸ್ಟ್ ಬಳಿ ನಡೆದಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ವಾಹನಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
Chamarajanagar
ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಸಾ*ವು
ಹನೂರು : ಕುಡಿಯುವ ನೀರು ತೆಗೆದುಕೊಳ್ಳಲು ಹೋಗಿ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಲೊಕ್ಕನಹಳ್ಳಿ ಗ್ರಾಮದಲ್ಲಿ ಜರುಗಿದೆ.
ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಸಿದ್ದರಾಜಮ್ಮ ಮೃತ ದುರ್ದೈವಿ.

ಘಟನೆ ವಿವರ : ಮಧುವನಹಳ್ಳಿ ಗ್ರಾಮದಿಂದ ಲೊಕ್ಕನಹಳ್ಳಿ ಗ್ರಾಮದ ಜಮೀನೊಂದಕ್ಕೆ ಕೂಲಿಗಾಗಿ ಬಂದಿದ್ದ ಸಂದರ್ಭದಲ್ಲಿ ಕುಡಿಯಲು ನೀರು ತೆಗೆದುಕೊಳ್ಳಲು ಜಮೀನಿನಲ್ಲಿ ಇದ್ದಂತಹ ಕೃಷಿ ಹೊಂಡಕ್ಕೆ ತೆರಳಿದ್ದಾಗ ಆಯಾ ತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಸಾವನಪ್ಪಿರುತ್ತಾರೆ ಎಂದು ತಿಳಿದುಬಂದಿದೆ.
ಘಟನಾಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ
-
Special21 hours agoಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ: ಅರ್ಜಿ ಆಹ್ವಾನ!
-
Hassan24 hours agoಹಾಸನ ಜಿಲ್ಲೆಯಲ್ಲಿ ಭಾರೀ ಮಳೆ: ಕೆರೆ–ಕಟ್ಟೆಗಳು ತುಂಬಿ ರೈತರಲ್ಲಿ ಸಂತಸ
-
Special10 hours agoLPG ಸಿಲಿಂಡರ್ ಹೊಸ ನಿಯಮಗಳು: ಈ ತಪ್ಪು ಮಾಡಿದ್ರೆ ಗ್ಯಾಸ್ ಕನೆಕ್ಷನ್ ಬ್ಲಾಕ್ ಆಗಬಹುದು!
-
State23 hours agoಕರ್ನಾಟಕದಲ್ಲಿ ಗುಡುಗು–ಸಿಡಿಲು ಮಳೆ ಎಚ್ಚರಿಕೆ: ಆರೆಂಜ್, ಯೆಲ್ಲೋ ಅಲರ್ಟ್ IMDಯಿಂದ ಘೋಷಣೆ
-
Mandya54 minutes agoಸಿದ್ದರಾಮಯ್ಯನವರ ರಾಜೀನಾಮೆ ನಿರೀಕ್ಷಿತ: ಸುಮಲತಾ ಅಂಬರೀಷ್
-
National23 hours agoಈ ಬಾರಿ ಕೋಲ್ಕತ್ತಾದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
-
Politics22 hours agoಜೈಪುರದಲ್ಲಿ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ
-
Hassan2 hours agoಕೆ.ಎಂ. ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡುವಂತೆ ರಾಹುಲ್ ಗಾಂಧಿಗೆ ಮನವಿ ಮಾಡಿದ ಶ್ರೇಯಸ್ ಪಟೇಲ್
