State
ತುಂಗಭದ್ರಾ ಅಣೆಕಟ್ಟೆ ಗೇಟ್ ಮುರಿದ ಪ್ರಕರಣ: ನೀರು ಖಾಲಿ ಮಾಡುವ ಕಾರ್ಯ ಆರಂಭ
ಹೊಸಪೇಟೆ (ವಿಜಯನಗರ): ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್ ಗೇಟ್ ಮುರಿದು ಹೋಗಿರುವುದರಿಂದ ನೀರು ಖಾಲಿ ಮಾಡುವ ಸಲುವಾಗಿ ಎಲ್ಲಾ 33 ಗೇಟ್‌ಗಳನ್ನು ತೆರೆದು ಸುಮಾರು 1 ಲಕ್ಷ ಕ್ಯುಸೆಕ್‌ನಷ್ಟು ನೀರನ್ನು ನದಿಗೆ ಬಿಡಲಾಗುತ್ತಿದೆ.ತುಂಗಭದ್ರಾ ಮಂಡಳಿಯ ಕಾರ್ಯದರ್ಶಿ ಒ.ಆರ್.ಪಿ.ರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ವೈಕುಂಠ ಅತಿಥಿಗೃಹದಲ್ಲಿ ಭಾನುವಾರ ನಸುಕಿನಲ್ಲೇ ಸಭೆ ಆರಂಭಿಸಿದ್ದಾರೆ. ತುಂಗಭದ್ರಾ ಜಲಾಶಯದಲ್ಲಿ ನೀರು ಭರ್ತಿಯಾಗಿದ್ದು, 60 ಟಿಎಂಸಿ ಅಡಿಯಷ್ಟು ಹೊರಹಾಕಿದರೆ ಅಂದರೆ 20 ಅಡಿ ನೀರಿನ ಮಟ್ಟ ಇಳಿಸಿದರೆ ಮಾತ್ರ ಗೇಟ್ ದುರಸ್ತಿ ಸಾಧ್ಯ ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ನೀರು ಹೊರಗೆ ಬಿಡುವ ಕಾರ್ಯ ಇದೀಗ ನಡೆಯುತ್ತಿದೆ. ಸುಮಾರು 2 ಲಕ್ಷ ಕ್ಯುಸೆಕ್ ನೀರನ್ನು ಸತತ ನಾಲ್ಕು ದಿನ ಬಿಟ್ಟರೆ ಮಾತ್ರ ಈ ಮಟ್ಟ ತಲುಪಬಹುದು ಎಂದು ಹೇಳಲಾಗುತ್ತಿದೆ. ಶನಿವಾರ ಮಧ್ಯರಾತ್ರಿ 12ರ ಸುಮಾರಿಗೆ ಗೇಟ್‌ನ ಚೈನ್ ಲಿಂಕ್ ಮುರಿದು, ಕ್ರಸ್ಟ್ ಗೇಟ್ ನೀರಲ್ಲಿ ಕೊಚ್ಚಿ ಹೋಗಿರುವುದರಿಂದ ಈ ಬೆಳವಣಿಗೆ ನಡೆದಿದೆ.
State
ಮೆಟ್ರೋ ದರ ಏರಿಕೆ: ಹೈಕ್ ಸಿದ್ದರಾಮಯ್ಯ ಎಂದು ಜರಿದ ಬಿಜೆಪಿ
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
ಬಿಎಂಆರ್‌ಸಿಎಲ್ ಅಣಿಯಾಗಿರುವಾಗಲೇ ರಾಜ್ಯ ಬಿಜೆಪಿ, ಸಿಎಂ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಟೀಕೆ ಮಾಡಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ಇನ್ನುಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೈಕ್ ಸಿದ್ದರಾಮಯ್ಯ ಎಂದು ಕರೆಯಬೇಕು ಜರಿದಿದೆ.
ರಾಜ್ಯದಲ್ಲಿ ಸಾರಿಗೆ ನಿಗಮಗಳಿಗೆ ಐಸಾ ಐಸಾ ಯೋಜನೆ ಕೊಟ್ಟು ಬಸ್‌ಗಳನ್ನು ತಳ್ಳುವಂತೆ ಮಾಡಿರುವ ಭ್ರಷ್ಟ ಸಿದ್ದರಾಮಯ್ಯ ಅವರು ಇದೀಗ ಎಲ್ಲಾ ಹೈಕ್ ಹೈಕ್ ಎನ್ನುತ್ತಾ 48% ಮೆಟ್ರೋ ಪ್ರಯಾಣ ದರವನ್ನು ಏರಿಕೆ ಮಾಡುವ ಮೂಲಕ ಹೈಕ್ ರಾಮಯ್ಯ ಎನಿಸಿಕೊಂಡಿದ್ದಾರೆ.
ಬಸ್ ಪ್ರಯಾಣವೂ ದುಬಾರಿ ಮೆಟ್ರೋ ಬಲು ದುಬಾರಿ ಆಗಿದೆ. ಜನರಿಗೆ ಅಕ್ಕಿಯನ್ನೂ ಕೊಡುತ್ತಿಲ್ಲ, ಗೃಹ ಲಕ್ಷ್ಮಿ ಹಣವನ್ನು ನೀಡುತ್ತಿಲ್ಲ. ದುಡಿದು ತಿನ್ನೋಣ ಎಂದರೆ ಎಲ್ಲಾ ದರವನ್ನು ಏರಿಕೆ ಮಾಡಿ ಬಡವರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿದೆ ರಾಜ್ಯ ಕಾಂಗ್ರೆಸ್ ಸರಕಾರ ಎಂದು ಬಿಜೆಪಿ ಕಿಡಿಕಾರಿದೆ.
State
ಪರಿಶಿಷ್ಟರ ಹಣವು ಸಾಮಾಜಿಕ ಹೂಡಿಕೆಯಾಗಬೇಕೇ ಹೊರತು, ಸಾಮಾಜಿಕ ಖರ್ಚಾಗಬಾರದು: ಡಾ. ಎಚ್.ಸಿ.ಮಹದೇವಪ್ಪ
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಇಂದು ವಿಧಾನಸೌಧದ ಕೊಠಡಿ ಸಂಖ್ಯೆ 334 ರಲ್ಲಿ SCSP ನೋಡಲ್ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿದೆರು.
ಈ ಸಂದರ್ಭದಲ್ಲಿ ಅವರು ಮಾತನಾಡಿ, ನಿಗದಿತ ಅವಧಿಯ ಒಳಗಾಗಿ SCSP ಅನುದಾನವನ್ನು ಬಳಸಿಕೊಂಡು ಪರಿಶಿಷ್ಟರ ಅಭಿವೃದ್ಧಿಗೆ flag ship ಯೋಜನೆಗಳನ್ನು ರೂಪಿಸಬೇಕೆಂದು ಸೂಚಿಸಿದರು.
ಸಹಕಾರಿ ವಲಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರಿಶಿಷ್ಟರ ನೊಂದಾವಣೆ ಮಾಡಿಸುವುದು ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿದರು.
ಮುಖ್ಯವಾಗಿ ಸಮಾಜ ಕಲ್ಯಾಣ ಇಲಾಖೆಯಿಂದ SCSP ಹಣವನ್ನು ಪಡೆಯುವ ಇಲಾಖೆಗಳು ಸುಮ್ಮನೇ ಹಣ ಖರ್ಚು ಮಾಡದೇ ಸೂಕ್ತ ರೀತಿಯಲ್ಲಿ ಯೋಜನೆಗಳನ್ನು ಮಾಡುವ ಮೂಲಕ ಪರಿಶಿಷ್ಟ ಸಮುದಾಯದ ಹಣ ಸದ್ಬಳಕೆಯತ್ತ ಗಮನ ಹರಿಸಬೇಕೆಂದು ತಿಳಿಸಿದರು.
ಅಧಿಕಾರಿಗಳು ಮೌಲ್ಯಮಾಪನದ ಕಡೆ ಹೆಚ್ಚು ಗಮನ ಹರಿಸಿ, ವಸತಿ ಇಲ್ಲದ ಜನರು ಎಷ್ಟು ಮಂದಿ ಇದ್ದಾರೆ, ಕೃಷಿಯಲ್ಲಿ ತೊಂದರೆ ಅನುಭವಿಸುತ್ತಿರುವ ಪರಿಶಿಷ್ಟ ಸಮುದಾಯದವರು ಎಷ್ಟು ಮಂದಿ ಇದ್ದಾರೆ ಮತ್ತು ಯಾರಿಗೆಲ್ಲಾ ನಾವು ಉದ್ಯಮಗಳನ್ನು ಮಾಡಲು, ಕೌಶಲ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು ಎಂಬುದರ ಕುರಿತು ಅಧಿಕಾರಿ ಮಿತ್ರರು ನೇರವಾಗಿ ಜನರ ಬಳಿ ಹೋಗಿ ವಾಸ್ತವಗಳನ್ನು ಅರಿಬೇಕೆಂದು ತಿಳಿಸಿದರು.
ಇನ್ನು ಪರಿಶಿಷ್ಟ ಸಮುದಾಯದವರಿಗೆ ಮನೆ ಕಟ್ಟಲು 5 ಲಕ್ಷ ರೂಪಾಯಿಯ unit fund ಅನ್ನು ನಿಗದಿಗೊಳಿಸುವ ಕುರಿತು ಕ್ಯಾಬಿನೆಟ್ ನಲ್ಲಿ ಚರ್ಚಿಸುವುದಾಗಿ ಹೇಳಿದರು.
ಉನ್ನತ ಶಿಕ್ಷಣ ಮಾಡುತ್ತಿರುವ ಮಕ್ಕಳಿಗೆ ತೊಂದರೆ ಆಗದ ರೀತಿಯಲ್ಲಿ ಅವರಿಗೆ ಬರಬೇಕಾದ ವಿದ್ಯಾರ್ಥಿ ವೇತನವನ್ನು ನಿಗದಿತ ಸಮಯಕ್ಕೆ ಕಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವ ಸಂದರ್ಭದಲ್ಲಿ ಕೆಲವೊಂದು ಗೊಂದಲ ಉಂಟಾಗಿದ್ದು, ಈ ಗೊಂದಲವನ್ನು ಶೀಘ್ರದಲ್ಲಿ ಪರಿಹಾರ ಮಾಡುವುದಾಗಿ ಅಧಿಕಾರಿಗಳು ತಿಳಿಸಿದರು.
ಇನ್ನು ಸರ್ಕಾರದ ಎಲ್ಲಾ ಇಲಾಖೆಗಳೂ ಕೂಡಾ ಪರಿಶಿಷ್ಟರ ಹಣವನ್ನು ಸಾಮಾಜಿಕ ಖರ್ಚು ( Social Expenditure) ಎಂದು ಭಾವಿಸದೇ ಅದನ್ನು ಸಾಮಾಜಿಕ ಹೂಡಿಕೆ ( Social Investment ) ಆಗಿ ವಿನಿಯೋಗಿಸಿದರೆ ಮಾತ್ರ ಪರಿಶಿಷ್ಟರ ಏಳಿಗೆ ಸಾಧ್ಯ ಎಂಬುದಾಗಿ ತಿಳಿದರು.
ನಿಗದಿತ ಅವಧಿಯಲ್ಲಿ ಹಣ ಖರ್ಚು ಮಾಡದೇ SCSP/TSP ಕಾಯ್ದೆಯ ಆಶಯಗಳನ್ನು ಮರೆತು, ನಿಯಮಬಾಹಿರವಾಗಿ ವರ್ತಿಸಿದರೆ ಮತ್ತು ಅನುದಾವನ್ನು ಬಳಸುವಲ್ಲಿ ನಿರ್ಲಕ್ಷ್ಯ ತೋರಿದರೆ ಸಮಾಜ ಕಲ್ಯಾಣ ಇಲಾಖೆಯು ಸಿಂಗಲ್ ವಿಂಡೋ ಏಜೆನ್ಸಿ ಮೂಲಕ ಖರ್ಚಾಗದ ಹಣವನ್ನು ಹಿಂಪಡೆದು, ಪರಿಶಿಷ್ಟ ಸಮುದಾಯಗಳಿಗೆ ಪೂರಕ ಯೋಜನೆಗಳನ್ನು ನೀಡಲಿದೆ ಎಂಬ ಸಂಗತಿಯನ್ನು ಪ್ರಮುಖವಾಗಿ ತಿಳಿಸಿದರು.
State
ಬಿ.ಎಸ್ ಯಡಿಯೂರಪ್ಪ ಸಿಎಂ ಆಗಲು ರಮೇಶ್ ಜಾರಕಿಹೊಳಿ ಕಾರಣ: ಯತ್ನಾಳ್ ಟಾಂಗ್
ವಿಜಯಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ಸತೀಶ್ ಜಾರಕಿಹೊಳಿ ಕಾರಣ. ಅವರು ಕಾಂಗ್ರೆಸ್ ಪಕ್ಷದಿಂದ 17 ಜನ ಶಾಸಕರನ್ನು ಕರೆದುಕೊಂಡು ಬರದೇ ಹೋಗಿದ್ದರೇ ಯಡಿಯೂರಪ್ಪ ಸಿಎಂ ಆಗಲು ಆಗುತ್ತಿರಲಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ಟಾಂಗ್ ಕೊಟ್ಟಿದ್ದಾರೆ.
ಬಿಎಸ್‌ವೈ ಮುಖ್ಯಮಂತ್ರಿಯಾಗಿ, ನೀವೆಲ್ಲಾ ಇಷ್ಟು ದುಡ್ಡು ಮಾಡಲು ರಮೇಶ್ ಜಾರಕಿಹೊಳಿಯೇ ಕಾರಣ. ನಿಮ್ಮ ಸಂಪಾದನೆ ಬಗ್ಗೆ ಇಡೀ ಜಗತ್ತಿಗೆ ಗೊತ್ತಿದೆ ಎಂದು ಯತ್ನಾಳ್ ಬಾಂಬ್ ಹಾಕಿದ್ದಾರೆ.
ರಮೇಶ್ ಜಾರಕಿಹೊಳಿ ಅವರು ಎಸ್‌ಟಿ ಸಮುದಾಯದ ನಾಯಕ. ಅವರನ್ನು ಹಗುರವಾಗಿ ಕಾಣುವುದು ಬೇಡ. ಸಚಿವರಾಗಿಯೂ ಉತ್ತಮ ಕೆಲಸ ಮಾಡುತ್ತಿದ ಜಾರಕಿಹೊಳಿ ಅವರನ್ನು ಬಲಿಕೊಟ್ಟವರು ಯಾರು? ಎಂದು ಬಿವೈವಿ ಅವರನ್ನು ಪ್ರಶ್ನಿಸಿದ್ದಾರೆ.
ಪ್ರಜಾತಂತ್ರ ವ್ಯವಸ್ಥೆಯಲ್ಲಿ ಒಳ್ಳೆಯ ನಾಯಕ ಅಧ್ಯಕ್ಷನಾಗಬೇಕಾಗದೇ ಚುನಾವಣೆ ಮೂಲಕ ಆಯ್ಕೆಯಾಗಬೇಕು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಚುನಾವಣೆಗೆ ನಿಲ್ಲುವುದಕ್ಕೆ ಎಲ್ಲರಿಗೂ ಮುಕ್ತ ಸ್ವಾತಂತ್ರ್ಯವಿದೆ. ವಿಜಯೇಂದ್ರ ಅವರು ಸ್ಪರ್ಧೆ ಮಾಡಲಿ, ಸಾಮಾನ್ಯ ಕಾರ್ಯಕರ್ತರು ಸ್ಪರ್ಧೆ ಮಾಡಲಿ. ಚುನಾವಣೆ ಪ್ರಕಟಗೊಂಡ ಬೆನ್ನಲ್ಲೇ ನಾವು ಏನೋ ಪ್ರಕಟಣೆ ಮಾಡುವುದಿದೆ. ಅದನ್ನು ಮಾಡುತ್ತೇವೆ. ಯಾವುದೇ ಕಾರಣಕ್ಕೂ ಚುನಾವಣೆಯಿಂದ ಹಿಂದೆ ಸರಿಯುವುದಿಲ್ಲ. ಕಲುಷಿತ ವ್ಯಕ್ತಿಗಳಿಂದ ಬಿಜೆಪಿ ಮುಕ್ತ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಯತ್ನಾಳ್ ಹೇಳಿದರು.
-
Kodagu20 hours ago
ಅಖಿಲ ಕೊಡವ ಸಮಾಜದ ಹೇಳಿಕೆಗೆ ನಮ್ಮ ವಿರೋಧವಿದೆ, ಹೋರಾಟ ಮುಂದುವರಿಯಲಿದೆ – ಕನೆಕ್ಟಿಂಗ್ ಕೊಡವಾಸ್ ಸಂಘಟನೆ ಸ್ಪಷ್ಟನೆ
-
Kodagu19 hours ago
ಕಿಡಿಗೇಡಿಗಳನ್ನು ಬಂಧಿಸದೇ ನಡೆಸುವ ಶಾಂತಿ ಮಾತುಕತೆಗೆ ನಮ್ಮ ಬೆಂಬಲವಿಲ್ಲ: ಯುಕೊ ಸ್ಪಷ್ಟನೆ
-
Tech17 hours ago
ಮೊಬೈಲ್ ಬಳಕೆದಾರರಿಗೆ ದೂರ ಸಂಪರ್ಕ ಇಲಾಖೆಯಿಂದ ಗೂಡ್ ನ್ಯೂಸ್ : ಪ್ರತಿಯೊಬ್ಬರು ತಿಳಿದುಕೊಳ್ಳಲೇಬೇಕಾದ ಮಾಹಿತಿ
-
Sports21 hours ago
Champions Trophy 2025ಕ್ಕೆ ಟೀಂ ಇಂಡಿಯಾ ಪ್ರಕಟ: ಗಿಲ್ಗೆ ಉಪನಾಯಕ ಪಟ್ಟ
-
Cinema23 hours ago
ನಟ ಸೈಫ್ ಅಲಿ ಖಾನ್ಗೆ ಚಾಕು ಇರಿತ ಪ್ರಕರಣ: ಪತ್ನಿ ಕರೀನಾ ಕಪೂರ್ ಫಸ್ಟ್ ರಿಯಾಕ್ಷನ್!
-
National - International23 hours ago
ಕೊಲ್ಕತ್ತಾ ವೈದ್ಯ ಮೇಲಿನ ಅತ್ಯಾಚಾರ ಪ್ರಕರಣ: 57 ದಿನಗಳಲ್ಲಿ ತೀರ್ಪು ಪ್ರಕಟ; ರಾಯ್ ದೋಷಿ
-
Mysore20 hours ago
ಮೈಸೂರು ವಿವಿ ಗೌರವ ಡಾಕ್ಟರೇಟ್ ತಂದ ಖುಷಿ
-
Mysore19 hours ago
ಮೈಸೂರಿನ ಮಾರುಕಟ್ಟೆಗೆ ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು