Connect with us

State

ಪಕ್ಷ ಎಲ್ಲ ನಿಷ್ಠಾವಂತರಿಗೆ ಟಿಕೆಟ್ ಕೊಟ್ಟಿದೆ: ಬಸವರಾಜ ಬೊಮ್ಮಾಯಿ ನಾಳೆ, ನಾಡಿದ್ದು ಉಳಿದ ಅಭ್ಯರ್ಥಿಗಳ ಟಿಕೆಟ್ ಘೋಷಣೆ

Published

on

ಚಿತ್ರದುರ್ಗ: ಬಿಜೆಪಿ ಎಲ್ಲ ನಿಷ್ಠಾವಂತರಿಗೇ ಟಿಕೆಟ್ ಕೊಟ್ಟಿದೆ. ಉಳಿದ ಕ್ಷೇತ್ರಗಳ ಟಿಕೆಟ್ ನಾಳೆ ಅಥವಾ ನಾಡಿದ್ದು ಹೆಸರು ಪ್ರಕಟ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಮಾದಾರ ಚೆನ್ನಯ್ಯ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶಿರ್ವಾದ ಪಡೆದು ನಂತರ ಮಾತನಾಡಿದ ಅವರು, ಚುನಾವಣೆಗೂ ಮುನ್ನ ಶ್ರೀಗಳ ದರ್ಶನಕ್ಕೆ ಬಂದಿದ್ದೇವೆ
ಒಳ್ಳೆಯ ಕಾರ್ಯ ಮಾಡುವಂತೆ ಶ್ರೀಗಳು ತಿಳಿಸಿದ್ದಾರೆ. ನಾನು ಅದೇ ರೀತಿ ಕೆಲಸ‌ ಮಾಡಿಕೊಂಡು ಬಂದಿದ್ದೇನೆ ಎಂದರು‌.
ಚಿತ್ರದುರ್ಗ ಲೋಕಸಭಾ ಟಿಕೆಟ್ ಘೋಷಣೆ ಕುರಿತು ಪಾರ್ಲಿಮೆಂಟ್ರಿ ಬೋರ್ಡ್ ಕಮಿಟಿಯಲ್ಲಿ ಚರ್ಚೆ ಆಗಿದೆ. ಮಾದಾರ ಚೆನ್ನಯ್ಯ ಶ್ರೀಗಳ ಹೆಸರು ಕೇಳಿಬಂದ ವಿಚಾರ ನಾನು ಎಲ್ಲೂ ಚರ್ಚೆ ಮಾಡಿಲ್ಲ. ಹಾಲಿ ಎಂಪಿಗೆ ಟಿಕೆಟ್ ತಪ್ಪುತ್ತದೆ ಅನ್ನುವುದು ಊಹಾಪೋಹಾ ಎಂದು ಹೇಳಿದರು.
ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸಭೆ ಕರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಶ್ವರಪ್ಪ ಅವರೊಂದಿಗೆ ನಾನು, ನಮ್ಮ ವರಿಷ್ಠರು ಮಾತನಾಡಿದ್ದೇವೆ. ಎಲ್ಲಾ ಸರಿಹೋಗತ್ತದೆ‌ ಏನು ಆಗುವುದಿಲ್ಲ. ಹಾವೇರಿ ಸಂಸದ ಶಿವಕುಮಾರ ಉದಾಸಿ ಕೂಡ ನಮ್ಮ‌ ಜೊತೆಗೆ ಬರುತ್ತಾರೆ ಎಂದರು.
ನಾನು ಕಳೆದ 34 ವರ್ಷಗಳಿಂದ ರಾಜಕಾರಣದಲ್ಲಿದ್ದೀನೆ. ನನಗೆ ದೊಡ್ಡ ಪ್ರಮಾಣದ ಬೆಂಬಲಿಗರಿದ್ದಾರೆ. ನಾನು ಎರಡು ಬಾರಿ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸದಸ್ಯರಾಗಿ ಆಯ್ಕೆ ಜನರ ಜೊತೆಗಿದ್ದು ಕೆಲಸ ಮಾಡಿರುವುದರಿಂದ ಸಾಕಷ್ಟು ಜನ ಬೆಂಬಲಿಗರಿದ್ದಾರೆ ಎಂದರು.
ಸತ್ಯ ಗೆಲ್ಲುತ್ತದೆ:
ಇದೇ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಕೇಳಿ ಬಂದಿರುವ ಪೋಕ್ಸೊ ಪ್ರಕರಣದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಗೃಹ ಸಚಿವರು ಹೇಳಿಕೆ ಕೊಟ್ಟಿದ್ದಾರೆ. ಅದನ್ನು ಜವಾಬ್ದಾರಿಯಿಂದ ತನಿಖೆ ಮಾಡಬೇಕು ಎಂದು ಹೇಳಿದ್ದಾರೆ
ದೂರು ಕೊಟ್ಟವರು ಈ ಹಿಂದೆ ಬೇರೆಯವರ ಮೇಲೆ‌ ದೂರು ಕೊಟ್ಟಿದ್ದು, ಮಾನಸಿಕ ಅಸ್ವಸ್ಥತೆ ಕುರಿತು ವಿಚಾರಣೆ ಮಾಡುವುದಾಗಿ ಹೇಳಿದ್ದಾರೆ. ರಾಜಕಾರಣದಲ್ಲಿ ಯಡಿಯೂರಪ್ಪ ಅವರ ಹೆಸರಿಗೆ ಕಳಂಕ ತರುವಪ್ರಯತ್ನ ಮಾಡುತ್ತಾರೆ. ಇದರಲ್ಲಿ ಯಾವುದೇ ಸದುದ್ದೇಶ ಇಲ್ಲ. ತನಿಖೆಯಲ್ಲಿ ಸತ್ಯ ಹೊರಬರುತ್ತದೆ ಎನ್ನುವ ನಂಬಿಕೆ ಇದೆ. ಚುನಾವಣೆ ಸಂದರ್ಭದಲ್ಲಿ ಇಂಥ ಘಟನೆಗಳು ನಡೆಯುತ್ತವೆ
ಸತ್ಯಕ್ಕೆ ಯಾವತ್ತೂ ಜಯವಾಗುತ್ತದೆ ಎಂದು ಹೇಳಿದರು.

Continue Reading
Click to comment

Leave a Reply

Your email address will not be published. Required fields are marked *

State

ಎಚ್‌ಡಿ ಕುಮಾರಸ್ವಾಮಿ ಭೇಟಿ ಬಗ್ಗೆ ಸಚಿವ ಸತೀಶ್‌ ಜಾರಕಿಹೊಳಿ ಫಸ್ಟ್‌ ರಿಯಾಕ್ಷನ್‌

Published

on

ನವದೆಹಲಿ: ಸಚಿವ ಸತೀಶ್‌ ಜಾರಕಿಹೊಳಿ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ವಿಚಾರ ಇದೀಗ ರಾಜ್ಯದಲ್ಲಿ ಭಾರೀ ಕೋಲಾಹಲ ಎದ್ದಿದ್ದು, ಇದೀಗ ಸಚಿವ ಸತೀಶ್‌ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಯಾವ ಕಾರಣಕ್ಕೆ ಭೇಟಿ ಮಾಡಿದ್ದೆ ಎಂಬುದರ ಬಗ್ಗೆ ಹೈಕಮಾಂಡ್‌ ನಾಯಕರಿಗೆ ಹೇಳಿದ್ದೇನೆ. ಎಚ್‌ಡಿಕೆ ಭೇಟಿ ಕುರಿತು ಮಲ್ಲಿಕಾರ್ಜುನ ಖರ್ಗೆ ಹಾಗೂ ಸುರ್ಜೇವಾಲ ಅವರಿಗೂ ಮಾಹಿತಿ ನೀಡಿದ್ದೇನೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಎಚ್‌ಡಿಕೆ ಭೇಟಿ ಮಾಡಿದ್ದ ಬಗ್ಗೆ ನಾಳೆ ಎಲ್ಲವನ್ನೂ ಸಂಪೂರ್ಣವಾಗಿ ಹೇಳುತ್ತೇನೆ ಎಂದರು.

Continue Reading

State

ಹನಿಟ್ರ್ಯಾಪ್‌ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು: ಎಂಎಲ್‌ಸಿ ರಾಜೇಂದ್ರ ಹೊಸ ಬಾಂಬ್‌

Published

on

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ಟ್ವಿಸ್ಟ್‌ ಸಿಕ್ಕಿದ್ದು, ಹನಿಟ್ರ್ಯಾಪ್‌ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು ಎಂದು ಎಂಎಲ್‌ಸಿ ರಾಜೇಂದ್ರ ರಾಜಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ.

ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿಗೆ ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಡಿಜಿ ಅವರನ್ನು ಭೇಟಿ ಮಾಡಿ ದೂರು ನೀಡಿದ್ದೇನೆ. ಸಚಿವರು ಕೂಡ ಗೃಹ ಸಚಿವರಿಗೆ ದೂರು ನೀಡಿದ್ದಾರೆ. ನನ್ನ ಮೇಲೆ ಹನಿಟ್ರ್ಯಾಪ್‌ ಆಗಿಲ್ಲ. ದೂರವಾಣಿ ಕರೆ ಮೂಲಕ ಯತ್ನ ನಡೆಯುತ್ತಾ ಇತ್ತು ಎಂದರು.

ನವೆಂಬರ್.‌16ರಂದು ಮಗಳ ಹುಟ್ಟುಹಬ್ಬದ ದಿನ ಶಾಮಿಯಾನ ಹಾಕಲು ಸ್ವಲ್ಪ ಜನ ಬಂದಿದ್ದರು. ಆ ವೇಳೆ ನನ್ನನ್ನು ಹತ್ಯೆ ಮಾಡುವ ಪ್ರಯತ್ನ ನಡೆದಿತ್ತು ಎಂದು ಹೇಳಿದರು.

ಈ ಬಗ್ಗೆ ನನ್ನ ಆಪ್ತರ ಮೂಲಕ ಆಡಿಯೋ ಸಿಕ್ಕಿತು. ಆಡಿಯೋದಲ್ಲಿ 5 ಲಕ್ಷ ಸುಪಾರಿ ನೀಡಿದ್ರು. ಮೂರು ಜನ ಹತ್ಯೆ ಮಾಡಲು ಪ್ರಯತ್ನಿಸಿದ್ದರು ಎಂದು ಮಾಹಿತಿ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜಣ್ಣ ಹನಿಟ್ರ್ಯಾಪ್ ಪ್ರಕರಣ ಸಿಐಡಿಗೆ ಹೋಗಿದೆ. ಪೊಲೀಸರು ರಾಜಣ್ಣ ಮನೆಯಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ. ಮನೆ ಕೆಲಸದವರ ಹೇಳಿಕೆಯನ್ನು ಸಹ ಪಡೆದಿದ್ದಾರೆ. ಈ ಪ್ರಕರಣದ ನಾಯಕ ಯಾರು ಎಂದು ಗೊತ್ತಾಗುತ್ತಿಲ್ಲ. ನಾನು ಯಾರ ಹೆಸರನ್ನು ಕೂಡ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.

Continue Reading

State

ಹಾಲಿನ ದರ ಹೆಚ್ಚಳ ಬೆನ್ನಲ್ಲೇ ಮತ್ತೊಂದು ಶಾಕ್‌: ಯೂನಿಟ್‌ಗೆ 36 ಪೈಸೆ ವಿದ್ಯುತ್‌ ದರ ಹೆಚ್ಚಿಸಿದ ಸರ್ಕಾರ

Published

on

ಬೆಂಗಳೂರು: ಗುರುವಾರ ಕರ್ನಾಟಕದ ಜನತೆಗೆ ಬಿಗ್‌ ಶಾಕ್‌. ರಾಜ್ಯ ಸರ್ಕಾರ ಜನರಿಗೆ ಎರಡೆರೆಡು ಬಿಗ್‌ ಶಾಕ್‌ ಒಂದೇ ದಿನ ನೀಡಿದ್ದು, ಜನರಿಗೆ ದಿಕ್ಕೇ ತೋಚದಂತಾಗಿದೆ.

ಹಾಲಿನ ದರ ಪರಿಷ್ಕರಣೆ ಮಾಡಿ ಬೆಳಿಗ್ಗೆ ಶಾಕ್‌ ನೀಡಿದ್ದ ಸರ್ಕಾರ, ಈಗ ವಿದ್ಯುತ್‌ ದರ ಹೆಚ್ಚಿಸಿ ಮತ್ತೊಂದು ಶಾಕ್‌ ನೀಡಿದೆ.

ಇದೇ ಏ.1 ರಿಂದ ಪ್ರತಿ ಯೂನಿಟ್‌ ವಿದ್ಯುತ್‌ ಮೇಲೆ 36 ಪೈಸೆ ಹೆಚ್ಚಿಸಲಾಗುವುದು ಎಂದು ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಗುರುವಾರ ಆದೇಶ ಹೊರಡಿಸಿದೆ.

ವಿದ್ಯುತ್‌ ಪ್ರಸರಣ ಹಾಗೂ ಎಸ್ಕಾಂಗಳ ಸಿಬ್ಬಂದಿಗಳ ಪಿಂಚಣಿ ಹಾಗೂ ಗ್ರ್ಯಾಚುರಿ ಪಾವತಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಏಂದು ಕೆಇಆರ್‌ಸಿ ತಿಳಿಸಿದೆ.

 

 

 

Continue Reading

Trending

error: Content is protected !!