Mandya
ದೇಶವನ್ನು ತಂಬಾಕು ಮುಕ್ತ ವಲಯ ವನ್ನಾಗಿ ಮಾಡೋಣ: ನ್ಯಾ.ಆನಂದ
ಮಂಡ್ಯ: ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ
ದೇಶವನ್ನು ತಂಬಾಕು ಮುಕ್ತ ಗೊಳಿಸೋಣ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಆನಂದ ಎಂ ಅವರು ತಿಳಿಸಿದರು.
ಅವರು ನಗರದ ಜಿಲ್ಲಾ ಆಸ್ಪತ್ರೆ 2ನೇ ಮಹಡಿ ಇ ಎನ್ ಟಿ ಸಭಾಂಗಣದಲ್ಲಿ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಮಕ್ಕಳೇ ನಾಳೆ ದೇಶದ ಪ್ರಜೆಗಳಾಗಿ ಅಭಿವೃದ್ಧಿಗೆ ಕೈ ಜೋಡಿಸುತ್ತಾರೆ. ಮಕ್ಕಳು ಉತ್ತಮ ಪ್ರಜೆಗಳೊಂದಿಗೆ ಆರೋಗ್ಯಯುತ ಪ್ರಜೆಗಳಾಗಬೇಕು. ತಂಬಾಕು ದೇಹದಲ್ಲಿ ಶ್ವಾಸಕೋಶ ಸೇರಿದಂತೆ ಬಹಳಷ್ಟು ಅಂಗಗಳಿಗೆ ತೊಂದರೆ ಉಂಟುಮಾಡುತ್ತದೆ ಎಂಬ ವಿಷಯವನ್ನು ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಮನದಟ್ಟು ಮಾಡಬೇಕು. ಈ ಕೆಲಸದಲ್ಲಿ ವೈದ್ಯರು ಹಾಗೂ ಶಿಕ್ಷಕರ ಕಾರ್ಯ ಮಹತ್ವದಾಗಿದ್ದು, ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನ ಪ್ರದೇಶವನ್ನು ತಂಬಾಕು ಮುಕ್ತಗೊಳಿಸಲು ಕೈಜೋಡಿಸಬೇಕು ಎಂದರು.
ಈ ವರ್ಷದ ವಿಶ್ವ ತಂಬಾಕು ರಹಿತ ದಿನದ ಘೋಷವಾಕ್ಯವಾದ ತಂಬಾಕು ಉದ್ಯಮದ ಹಸ್ತಕ್ಷೇಪ ದಿಂದ ಮಕ್ಕಳನ್ನು ರಕ್ಷಿಸುವುದು ಎಂಬ ವಾಕ್ಯವನ್ನು ಹೇಳಲಾಗಿದೆ ಕಾರಣ ತಂಬಾಕಿಗೆ ಚಿಕ್ಕ ಮಕ್ಕಳೇ ಹೆಚ್ಚಾಗಿ ಅವಲಂಬಿತರಾಗಿದ್ದಾರೆ, ತಂಬಾಕಿನಿಂದ ಮಕ್ಕಳನ್ನು ರಕ್ಷಿಸಬೇಕು ಎಂಬುದು ಘೋಷ ವಾಕ್ಯದ ಅರ್ಥ ಎಂದರು.
ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಲೊಕೇಶ್.ಟಿ ಅವರು ಮಾತನಾಡಿ, ತಂಬಾಕು ಎಂಬುವುದು ಮನುಷ್ಯನ ಜೀವನವನ್ನೇ ಹಾಳು ಮಾಡುವ ಮಾರಕವಾದ ವಸ್ತು. ಇದರಿಂದ ಪ್ರತಿಯೊಬ್ಬರು ಜಾಗರೂಕತೆಯಿಂದ ಇರಿ ತಂಬಾಕು ಎಂಬ ಚಟಕ್ಕೆ ಯಾರು ಕೂಡ ದಾಸರಾಗಬೇಡಿ ಎಂದರು.
ಜೈಲಿನಲ್ಲಿ ಇರುವ ಕೈದಿಗಳಿಗೆ ತಂಬಾಕು ಸೇವನೆಯಿಂದ ದೂರವಿಡಲು ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕಾರಾಗೃಹ ಇಂದು ತಂಬಾಕು ಮುಕ್ತ ವಲಯವಾಗಿದೆ ಎಂದರು.
ತಂಬಾಕು ಸೇವನೆಯಿಂದ ಹೊರ ಬರುವುದಕ್ಕೆಂದೆ ಕೈದಿಗಳಿಗೆ ಚ್ವಿಂಗಮ್ (chewing gum) ಕೊಟ್ಟು ಅಭ್ಯಾಸ ಮಾಡಿಸಿ ತಂಬಾಕು ಸೇವನೆ ನಿಲ್ಲಿಸಲಾಗಿದೆ ಎಂದರು.
ಸಂಪನ್ಮೂಲ ವ್ಯಕ್ತಿಗಳಾದ ಸಮುದಾಯ ಆರೋಗ್ಯ ಶಾಸ್ತ್ರ ವಿಭಾಗ ಸಹಾಯಕ ಪ್ರಾಧ್ಯಾಪಕರಾದ ಡಾ.ಸಿದ್ದಲಿಂಗಪ್ಪ ಹೂಗರ್ ಅವರು ಮಾತನಾಡಿ, ತಂಬಾಕನ್ನು ಮೊದಲಿಗೆ ಯಾರು ಕೂಡ ತಮ್ಮ ಸ್ವಂತ ಹಣದಿಂದ ಸೇವಿಸುವದಿಲ್ಲ. ಯಾರೋ ಕೊಟ್ಟಂತಹ ತಂಬಾಕನ್ನು ಸೇವಿಸಿರುವವರೇ ಹೆಚ್ಚು. ತಂಬಾಕು ಸೇವನೆ ಸಹವಾಸದಿಂದ ಬರುತ್ತದೆ. ತಂಬಾಕು ಸೇವನೆ ಮಾಡುವವರ ಸಹವಾಸ ಮಾಡಿ ಬಹಳಷ್ಟು ಜನ ತಂಬಾಕು ಎಂಬ ಚಟಕ್ಕೆ ದಾಸರಾಗಿ ಹೋಗಿದ್ದಾರೆ ಎಂದರು.
ತಂಬಾಕಿನಿಂದ ಕೂದಲು ಮತ್ತೆ ಉಗುರುಗಳಿಗೆ ಹಾನಿ ಆಗುತ್ತಿರಲಿಲ್ಲ. ಆದರೆ ಇತ್ತೀಚೆಗೆ ಬಂದ ವರದಿಯ ಪ್ರಕಾರ ತಂಬಾಕು ಎನ್ನುವುದು ಇಡೀ ದೇಹವನ್ನೆ ಆವರಿಸಿಕೊಳ್ಳುತ್ತಿದೆ. ಎಲ್ಲರೂ ತಮ್ಮ ಮನೆಯಲ್ಲಿರುವವರು ತಂಬಾಕು ಸೇವನೆ ಮಾಡದಂತೆ ನೋಡಿಕೊಳ್ಳಿ. ಸೇವನೆ ಮಾಡುತ್ತಿರುವವರಿಗೂ ಕೂಡ ತಿಳಿಸಿ ಬುದ್ದಿ ಹೇಳಬೇಕು ಎಂದರು.
ಕಾರ್ಯಕ್ರಮದ ಕೊನೆಯಲ್ಲಿ ನಮ್ಮ ದೇಶವನ್ನು ತಂಬಾಕು ಮುಕ್ತ ಮಾಡುತ್ತೇವೆ ಎಂದು ಎಲ್ಲರಿಗೂ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಮಂಡ್ಯ ವೈದ್ಯಕೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಾದ ನರಸಿಂಹಸ್ವಾಮಿ ಪಿ, ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯಕೀಯ ಅಧೀಕ್ಷಕರು ಶಿವಕುಮಾರ್.ಜಿ, ಜಿಲ್ಲಾ ಶಸ್ತ್ರ ಚಿಕಿತ್ಸಕರು ಡಾ.ಗಾಯಿತ್ರಿ, ಜಿಲ್ಲಾ ತರಬೇತಿ ಕೇಂದ್ರ ಪ್ರಾಂಶುಪಾಲರು ಡಾ.ಮಮತ ಹೆಚ್.ಎಂ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ ಜಿ.ಎಸ್, ಐ.ಎಂ.ಎ ಅಧ್ಯಕ್ಷ ಡಾ.ಮರಿಗೌಡ, ಮಿಮ್ಸ್ ಸಮುದಾಯ ಆರೋಗ್ಯ ಶಾಸ್ತ್ರ ವಿಭಾಗದ ಡಾ.ಹರೀಶ್ ಬಿ.ಆರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ.ವೇಣುಗೋಪಾಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Mandya
ಫೆ.13ಕ್ಕೆ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಮಹಾದ್ವಾರ ರಾಜಗೋಪುರ ಲೋಕಾರ್ಪಣೆ : ಶ್ರೀ ಸೋಮೇಶ್ವರನಾಥ ಸ್ವಾಮೀಜಿ
ನಾಗಮಂಗಲ : ತಾಲೂಕಿನ ಹಾಲತಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಮಹಾದ್ವಾರದ ನೂತನ ರಾಜಗೋಪುರ ಉದ್ಘಾಟನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮ ವು ಫೆಬ್ರವರಿ 13ರಂದು ನಡೆಯಲಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಸೋಮೇಶ್ವರನಾಥ ಸ್ವಾಮೀಜಿಗಳು ತಿಳಿಸಿದರು
ಅವರು ತಾಲೂಕಿನ ಶಾಖಾಮಠದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿ, ಶ್ರೀ ಮಠವು ಆಯೋಜನೆ ಮಾಡಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಜಿಯವರ ದಿವ್ಯ ಆಶೀರ್ವಾದಗಳೊಂದಿಗೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ದೇವಾಲಯದ ಮಹಾ ದ್ವಾರದ 64 ಅಡಿಯ ನೂತನ ರಾಜಗೋಪುರದ ಉದ್ಘಾಟನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮವನ್ನು ಇದೇ ತಿಂಗಳು ಫೆ. 13ರಂದು ಶುಕ್ರವಾರ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಅಮೃತ ಹಸ್ತದಿಂದ ಲೋಕಾರ್ಪಣೆ ಮಾಡಲಿದ್ದಾರೆ.

ಇದೇ ಸಮಾರಂಭದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ದಿನಾಂಕ 11. 12. ರಂದು ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು ಫೆ.12 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪೂಜಾ ಕಾರ್ಯಕ್ರಮಗಳಲ್ಲಿ ಅಕ್ಕಪಕ್ಕದ ಗ್ರಾಮದಿಂದ ಸುಮಾರು 60 ಗ್ರಾಮ ದೇವತೆಗಳು ಸೇರಲಿವೆ.
ಸಮಾರಂಭಕ್ಕೆ ನಾಡಿನ ಗಣ್ಯರು ಮುಖ್ಯಸ್ಥರು ಧಾರ್ಮಿಕ ಭಕ್ತರು ಆಗಮಿಸಲಿದ್ದಾರೆ. ಫೆ.13 ರಂದು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ನೂತನ ಗೋಪುರ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ರಥೋತ್ಸವ ಜರಗಲಿದೆ.

ಭಕ್ತಾದಿಗಳು ಇದೇ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ತಿಳಿಸಿದರು.
Mandya
ಫೆ.13 ರಿಂದ 19 ರವರೆಗೆ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ
ಮಂಡ್ಯ: ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ ಮತ್ತು ಯುವ ಜನೋತ್ಸವ ಕಾರ್ಯಕ್ರಮವನ್ನು ಫೆ.13 ರಿಂದ 19ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 9 ರವರೆಗೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿಶ್ವ ವಿದ್ಯಾಲಯದ ಮುಖ್ಯಸ್ಥರಾದ ಶಾರದ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಲ್ಲಿ ದೇವರ ಆದ್ಯಾತ್ಮ ಭಾವದ ಆಚರಣೆ ಮಹಾಶಿವರಾತ್ರಿಯ ಅಂಗವಾಗಿ ಕಾರ್ಯಕ್ರಮ ಯೋಜನೆ ಮಾಡಲಾಗಿದೆ ಎಂದರು.

ಏಳು ದಿನ ನಡೆಯಲಿರುವ ಕಾರ್‍ಯಕ್ರಮದಲ್ಲಿ 21 ಅಡಿ ಎತ್ತರದ ಶಿವಲಿಂಗ, ಭೂಲ್ ಬುಲಯ್ಯ, ಸ್ವರ್ಗ, ಮೈಂಡ್ ಸ್ಪಾ, ಉದ್ಬವಲಿಂಗ, ಸಹಸ್ರಲಿಂಗಗಳು ಆಕರ್ಷಣೆಯಾಗಲಿವೆ ಎಂದು ಹೇಳಿದರು.
ಗೋಷ್ಠಿಯಲ್ಲಿ ವಿಶ್ವವಿದ್ಯಾಲಯದ ವಿಜಯಲಕ್ಷ್ಮಿ ಹಾಜರಿದ್ದರು.
Mandya
ಅನಿರ್ದಿಷ್ಟಾವಧಿ ಧರಣಿ ಮಾಡುತ್ತಿದ್ದ ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು
ಮದ್ದೂರು: ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾಮವನ್ನು ಸೇರ್ಪಡೆ ಮಾಡಿರುವುದನ್ನು ಖಂಡಿಸಿ ಸೋಮವಾರ ಬೆಂಗಳೂರು ಮೈಸೂರು ಹೆದ್ದಾರಿಯ ಸರ್ವೆ ರಸ್ತೆ ತಡೆ ನಡೆಸುತ್ತಿದ್ದ 80 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.
ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾ.ಪಂ. ಸೇರ್ಪಡೆ ವಿರೋಧಿಸಿ ಗೆಜ್ಜಲಗೆರೆ ಗ್ರಾಮದ ಗ್ರಾ.ಪಂ.ಕಚೇರಿಯ ಮುಂದೆ ಗ್ರಾಮಸ್ಥರು ಹಾಗೂ ರೈತ ಸಂಘದ ಕಾರ್ಯಕರ್ತರು ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆಯನ್ನು ನಡೆಸುತ್ತಿದ್ದರು.

ಧರಣಿ ಪ್ರತಿಭಟನೆಯು 50 ದಿನ ಪೂರೈಸಿದ ಹಿನ್ನೆಲೆಯಲ್ಲಿ ಸೋಮವಾರ ರೈತ ಪರ ಹೋರಾಟಗಾತಿ ಸುನಂದಾ ಜಯರಾಮ್ ನೇತೃತ್ವದಲ್ಲಿ ಸುಮಾರು 300 ಕ್ಕೂ ಹೆಚ್ಚು ಗ್ರಾಮಸ್ಥರು ಮೈಸೂರು ಬೆಂಗಳೂರು ಸವರ್ಿಸ್ ಹೆದ್ದಾರಿಯಲ್ಲಿ ಸಂಚಾರ ತಡೆ ಮಾಡಿ ಪ್ರತಿಭಟನೆಯನ್ನು ನಡೆಸುತ್ತಿದರು.
ಎತ್ತಿನಗಾಡಿ ಹಾಗೂ ಜಾನುವಾರುಗಳೊಂದಿಗೆ ಗ್ರಾಮಸ್ಥರು ಆಗಮಿಸಿ ಮಹಾತ್ಮ ಗಾಂಧೀಜಿ ಭಾವಚಿತ್ರದೊಂದಿಗೆ ಹೆದ್ದಾರಿಯಲ್ಲೇ ಕುಳಿತು ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಹಾಗೂ ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅದಕ್ಕೂ ಮೊದಲು ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿರವರು ರಸ್ತೆ ತಡೆಯನ್ನು ಕೈಬಿಡಲು ಪ್ರತಿಭಟನಾ ಕಾರರನ್ನು ಮನವೊಲಿಸಲು ಪ್ರಯತ್ನಿಸಿದರಾದರೂ ಪ್ರಯೋಜವಾಗಲಿಲ್ಲ. ನಂತರ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು ರೈತ ಪರ ಹೋರಾಟಗಾತಿ ಸುನಂದಾ ಜಯರಾಮು, ಲಿಂಗಪ್ಪಾಜಿ, ಶಂಕರ್, ಜಿ.ಪಿ.ಯೋಗೇಶ್, ವೀರಪ್ಪ, ಚಂದ್ರಶೇಖರ, ಗೌರಮ್ಮ, ಜಯಮ್ಮ ಸೇರಿದಂತೆ ಸುಮಾರು 80 ಕ್ಕೂ ಹೆಚ್ಚು ಪ್ರತಿಟನಾಕಾರರನ್ನು ವಶಕ್ಕೆ ಪಡೆದು 3 ವಾಹನಗಳಲ್ಲಿ ಮಂಡ್ಯದ ಪೊಲೀಸ್ ಠಾಣೆಗೆ ಕರೆದೋಯ್ದರು.
ಪ್ರತಿಭಟನೆಯಲ್ಲಿ ಹಿನ್ನೆಲೆಯಲ್ಲಿ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ರೈತ ಪರ ಹೋರಾಟಗಾತಿ ಸುನಂದಾ ಜಯರಾಮ್ ಮಾತನಾಡಿ, ನಗರಸಭೆಗೆ ಗೆಜ್ಜಲಗೆರೆ ಗ್ರಾಮವನ್ನು ಸೇರ್ಪಡೆ ಮಾಡಿರುವ ಕ್ರಮ ಖಂಡಿಸಿ ಗ್ರಾಮಸ್ಥರು ನಿರಂತರವಾಗಿ 50 ದಿನಗಳ ಹೋರಾಟವನ್ನು ನಡೆಸುತ್ತಿದ್ದರೂ, ಸಕರ್ಾರದ ಯಾವುದೇ ಪ್ರತಿನಿಧಿಗಳು ಅಧಿಕಾರಿಗಳು ರೈತರ, ಗ್ರಾಮಸ್ಥರು ಆಶೋತ್ತರಗಳಿಗೆ ಸ್ಪಂದಿಸದೆ ನಿರ್ಲಕ್ಷ ಮಾಡಿದ್ದಾರೆ ಎಂದು ಆರೋಪಿಸಿದರು.
ಇದರ ವಿರುದ್ಧವಾಗಿ ಗೆಜ್ಜಲಗೆರೆ ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆ ತಡೆಯಲು ಗ್ರಾಮಸ್ಥರು ಒಗ್ಗಟ್ಟಿನಿಂದ ಹೋರಾಟ ಮಾಡಲು ಹೊರಟಾಗ ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತ ಅವಕಾಶ ಮಾಡಿಕೊಡದೆ ರೈತರ ಹೋರಾಟವನ್ನು ದಿಕ್ಕು ತಪ್ಪಿಸುವ ಸಲುವಾಗಿ ರೈತರನ್ನು, ಮಹಿಳೆಯರು ಮತ್ತು ಗ್ರಾಮಸ್ಥರನ್ನು ಭಯಭೀತರನ್ನಾಗಿ ಮಾಡುವ ಉದ್ದೇಶದಿಂದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸುಮಾರು 80 ಕ್ಕೂ ಹೆಚ್ಚು ಗ್ರಾಮಸ್ಥರನ್ನು ಬಂಧಿಸಿರುವುದು ಖಂಡನೀಯವೆಂದು ಆಕ್ರೋಶ ವ್ಯಕ್ತಪಡಿಸಿದರು.
ಗೆಜ್ಜಲಗೆರೆ ಗ್ರಾಪಂಯನ್ನು ಮದ್ದೂರು ನಗರಸಭೆಯಿಂದ ಕೈ ಬಿಡುವತನಕ ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆಯನ್ನು ನಿರಂತರವಾಗಿ ಮುಂದುವರೆಸಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಅಪರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ತಿಮ್ಮಯ್ಯ, ಡಿವೈಎಸ್ಪಿ ಯಶವಂತ ಕುಮಾರ್, ಸಿಪಿಐ ನವೀನ್ ಕುಮಾರ್ ನೇತೃತ್ವದಲ್ಲಿ ನೂರಾರು ಮಂದಿ ಪೊಲೀಸ್ ಸಿಬ್ಬಂದಿ ಬಂದೋಬಸ್ತ್ನಲ್ಲಿ ಭಾಗವಹಿಸಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಚಂದ್ರಶೇಖರ್, ಲಿಂಗಪ್ಪಾಜಿ, ಮುದ್ದೇಗೌಡ್ರು, ಕೆ.ಬೊರೇಗೌಡ, ವಿರೇಶ್, ಗುರುಮೂತರ್ಿ, ಮಂಜಣ್ಣ, ಜಗದೀಶ್, ರಾಮಲಿಂಗಯ್ಯ, ಯೋಗೇಶ್ ಸೇರಿದಂತೆ ಇತರರು ಇದ್ದರು.
-
Mandya13 hours agoಕೆರೆ ಒತ್ತುವರಿ ತೆರವುಗೊಳಿಸದಿದ್ದರೆ ಶಿಸ್ತು ಕ್ರಮ: ಸಮಯ ನಿಗದಿಗೊಳಿಸಿ ಸೂಚನೆ ನೀಡಿದ ಡಿಸಿ ಡಾ.ಕುಮಾರ
-
Mandya14 hours agoಬೂದನೂರು ಗ್ರಾಮ ಪಂಚಾಯತಿಗೆ ನೇಮಕವಾಗಿರುವ ಆಡಳಿತಾಧಿಕಾರಿಗೆ ಗ್ರಾಮಸ್ಥರಿಂದ ಭವ್ಯ ಸ್ವಾಗತ
-
Hassan14 hours agoಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಎಚ್ಡಿಕೆ ಅಭಿಮಾನಿಗಳಿರುವ ಕ್ಷೇತ್ರ: ನಿಖಿಲ್ ಕುಮಾರಸ್ವಾಮಿ
-
Chamarajanagar21 hours agoಚಿರತೆ ದಾಳಿ: ಹಸು ಬಲಿ ಗ್ರಾಮಸ್ಥರಲ್ಲಿ ಆತಂಕ
-
Mysore19 hours agoಹಣ್ಣುಗಳ ಮಹತ್ವ, ಪೌಷ್ಟಿಕಾಂಶದ ಬಗ್ಗೆ ಅರಿವು ಮೂಡಿಸಿದ ರವಿ ಮಹದೇವ್
-
Mandya12 hours agoಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಿ : ಮನೋಜ್ ಕುಮಾರ್ ಮೀನಾ
-
Special8 hours agoಸ್ತ್ರೀ ಶಕ್ತಿ ಪ್ಯಾಕೇಜ್: ಮಹಿಳೆಯರಿಗೆ ಭದ್ರತೆಯಿಲ್ಲದೇ 10 ಲಕ್ಷದವರೆಗೆ ಸಾಲ!
-
Mandya11 hours agoಫೆ.13 ರಿಂದ 19 ರವರೆಗೆ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ
