Connect with us

Hassan

ಆನ್‌ಲೈನ್‌ನಲ್ಲಿ ನಂಬಿಸಿ ವಂಚನೆ – ಹಾಸನ ಮೂಲದ ಎಂಟು ಆರೋಪಿಗಳ ಬಂಧನ

Published

on

ಮಡಿಕೇರಿ : ಕುಶಾಲನಗರ ಒಂದರ ಹೋಟೇಲ್ ಮತ್ತು ಲಾಡ್ಜ್ ಮೇನೇಜರ್ ಎಂದು ಹೆಸರು ಹೇಳಿಕೊಂಡು ಲಾಡ್ಜ್‌ನಲ್ಲಿ ಹೆಂಗಸರಿಂದ ಸೆಕ್ಸ್/ಮಸಾಜ್ ಮಾಡಿಸುವುದಾಗಿ ನಂಬಿಸಿ ಆನ್‌ಲೈನ್‌ನಲ್ಲಿ ಹಣ ಪಡೆದು ವಂಚನೆ ಮಾಡಿರುವವರನ್ನು ಕೊಡಗು ಜಿಲ್ಲಾ ಪೊಲೀಸರು ಪತ್ತೆಹಚ್ಚಿದ್ದಾರೆಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಸ್.ರಾಮರಾಜನ್‌ ತಿಳಿಸಿದ್ದಾರೆ.


ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಎಸ್.ರಾಮರಾಜನ್‌ ಆರೋಪಿಗಳೆಲ್ಲ ಹಾಸನ ಜಿಲ್ಲೆಯವರಾಗಿದ್ದಾರೆಂದು ತಿಳಿಸಿದರು.


ಹಾಸನ ಜಿಲ್ಲೆಯ ಮಂಜುನಾಥ (೨೯), ಸಂದೀಪ್‌ ಕುಮಾರ್‌ ಸಿ.ಎಸ್‌ (೨೫), ರಾಕೇಶ್‌ ಸಿ.ಬಿ (೨೪), ಜಯಲಕ್ಷ್ಮಿ ಕೆ (೨೯), ಸಹನ ಎಸ್‌ (೧೯), ಪಲ್ಲವಿ (೩೦), ಅಭಿಷೇಕ್‌ (೨೪) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಅಪ್ರಾಪ್ತ ಬಾಲಕಿ ಬಂಧಿತ ಆರೋಪಿಗಳು ಎಂದು ತಿಳಿಸಿದರು. ಆರೋಪಿಗಳಿಂದ ೨ ಕಾರು, ೧೭ ಮೊಬೈಲ್‌, ೧ ಟ್ಯಾಬ್‌, ೧ ಲ್ಯಾಪ್‌ ಟಾಪ್‌, ೨೪೮೦೦ ರೂ ನಗದನ್ನು ವಶಕ್ಕೆ ಪಡೆಯಲಾಗಿದೆ ಎಂದರು.


ಘಟನೆ ವಿವರ : ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬೈಚನಹಳ್ಳಿ ನಿವಾಸಿ ಮಂಜು ಎಂಬುವವರು ಜೂ.೨೯ ರಂದು ಮೊಬೈಲ್ ನಲ್ಲಿರುವ Locanto App ನಲ್ಲಿ Kushalnagar Top Model Sexy Aunties Service Available Kushalnagar- 23 0 ಸೈಟ್‌ನಲ್ಲಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿದ್ದು, ಒಬ್ಬ ವ್ಯಕ್ತಿ ಮಾತನಾಡಿ ನಾನು ಕುಶಾಲನಗರದ ಒಂದರಲ್ಲಿರುವ ಲಾಡ್ಜ್ ಮೇನೇಜರ್ ಎಂಬುದಾಗಿ ಪರಿಚಯಿಸಿಕೊಂಡು ಲಾಡ್ಜ್‌ನಲ್ಲಿ ಹೆಂಗಸರಿಂದ ಸೆಕ್ಸ್/ಮಸಾಜ್ ಮಾಡಿಸಲಾಗುವುದು ಹಾಗೂ ಆನ್‌ಲೈನ್ ಮೂಲಕ ಮುಂಗಡವಾಗಿ ಹಣ ಕಳುಹಿಸಿದರೆ ಈಗಲೇ ಹೆಂಗಸರ ಏರ್ಪಾಡು ಮಾಡಲಾಗುವುದು ಎಂದು ತಿಳಿಸಿ ದೂರುದಾರರ Whatsapp ಗೆ ಕೆಲವು ಹೆಂಗಸರ ಭಾವಚಿತ್ರಗಳನ್ನು ಕಳುಹಿಸಿ ಕೊಟ್ಟು ಒಂದು ಗಂಟೆಗೆ ರೂ. 1500/- ಮತ್ತು ಒಂದು ರಾತ್ರಿಗೆ ರೂ. 4000/- ಗಳ ಹಣ ನೀಡಬೇಕಾಗುವುದು ಎಂದು ಹೇಳಿರುತ್ತಾರೆ.


ದೂರುದಾರರೂ ಗೂಗಲ್ ಪೇ ಮುಖಾಂತರ ರೂ. 1500/- ಹಣವನ್ನು ಕಳುಹಿಸಿದ್ದು, ಅದೇ ವ್ಯಕ್ತಿ ಕರೆ ಮಾಡಿ ಲಾಡ್ಜ್ ಬಳಿ ಬಂದು ಲೋಕೇಷನ್ ಕಳುಹಿಸುವಂತೆ ಮತ್ತು ಯಾವ ಬಣ್ಣದ ಬಟ್ಟೆ ಹಾಕಿದ್ದೀರಾ ಎಂದು ತಿಳಿಸುವಂತೆ ಹೇಳಿರುತ್ತಾರೆ. ಆ ವ್ಯಕ್ತಿಯು ಹೇಳಿರುವಂತೆ ಲಾಡ್ಜ್‌ ಬಳಿ ಹೋಗಿ ಕರೆ ಮಾಡಿದಾಗ ಪುನಃ ಆನ್‌ಲೈನ್‌ನಲ್ಲಿ ಹಣ ಹಾಕಬೇಕು ಎಂದು ಹೇಳಿದ್ದರಿಂದ ಅನುಮಾನ ಬಂದು ಲಾಡ್ಜ್ ಗೆ ತೆರಳಿ ರಿಸೆಪ್‌ಶನ್‌ನಲ್ಲಿ ಈ ಮೇಲಿನ ವಿಚಾರ ಹೇಳಿದಾಗ ಆ ತರಹದ ಯಾವುದೇ ರೀತಿಯ ಅವ್ಯವಹಾರ ಇರುವುದಿಲ್ಲ ಹಾಗೂ ಇದೇ ವಿಚಾರ ಹೇಳಿಕೊಂಡು 3-4 ಜನ ಬಂದಿದ್ದರು ನಿಮಗೆ ಯಾರೋ ಮೋಸ ಮಾಡಿದ್ದಾರೆ ಪೊಲೀಸ್ ಠಾಣೆಗೆ ದೂರು ಕೊಡಿ ಎಂದು ತಿಳಿಸಿರುತ್ತಾರೆ.


ಅದರಂತೆ ಅಪರಿಚಿತ ವ್ಯಕ್ತಿಗಳು ಹೋಟೇಲ್ ಮತ್ತು ಲಾಡ್ಜ್ ಮೇನೇಜರ್ ಎಂದು ಹೆಸರು ಹೇಳಿಕೊಂಡು ಲಾಡ್ಜ್‌ನಲ್ಲಿ ಹೆಂಗಸರಿಂದ ಸೆಕ್ಸ್ ಮಸಾಜ್ ಮಾಡಿಸುವುದಾಗಿ ನಂಬಿಸಿ ಆನ್‌ಲೈನ್‌ನಲ್ಲಿ ಹಣ ಪಡೆದು ವಂಚನೆ ಮಾಡಿರುವವರನ್ನು ಪತ್ತೆಹಚ್ಚಿ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಜೂ.೨೯ ರಂದು ದೂರು ಸ್ವೀಕರಿಸಿದ್ದು, ಕುಶಾಲನಗರ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ.


ಸದರಿ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲು ಆರ್.ವಿ. ಗಂಗಾಧರಪ್ಪ, ಡಿವೈಎಸ್‌ಪಿ, ಸೋಮವಾರಪೇಟೆ ಉಪವಿಭಾಗ, ಪ್ರಕಾಶ್.ಬಿ.ಜಿ, ಪಿಐ, ಚಂದ್ರಶೇಖರ್.ಹೆಚ್.ವಿ. ಪಿಎಸ್‌ಐ ಹೆಚ್.ಟಿ.ಗೀತಾ, ಪಿಎಸ್‌ಐ ಕುಶಾಲನಗರ ನಗರ ಪೊಲೀಸ್ ಠಾಣೆ ಹಾಗೂ ಉಪ ವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು ಮತ್ತು ತಾಂತ್ರಿಕ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ಅಪರಾಧ ಕೃತ್ಯಕ್ಕೆ ಸಂಬಂಧಿಸಿದ ಮಾಹಿತಿ, ಸಾಕ್ಷ್ಯಾಧರಗಳನ್ನು ಕಲೆಹಾಕಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಜು.೬ ರಂದು ಹಾಸನ ಜಿಲ್ಲೆ ಮೂಲದ 08 ಜನ ಆರೋಪಿಗಳನ್ನು ಬೆಂಗಳೂರುನಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Hassan

ವಿಶ್ವ ಪರಿಸರ ದಿನಾಚರಣೆ ಆಚರಿಸಿದ ಪೋದಾರ್ ಪರಿಸರ ಸ್ನೇಹಿಗಳು

Published

on

ಹಾಸನ: ಬಿ. ಕಾಟಿಹಳ್ಳಿ ದೂರವಾಣಿ ನಗರದಲ್ಲಿ ಹೊಸದಾಗಿ ನಿರ್ಮಿಸಿರುವ ಪಂಚಮುಖಿ ಪಾರ್ಕ್ ಉದ್ಯಾನದಲ್ಲಿ “ವಿಶ್ವ ಪರಿಸರ ದಿನಾಚರಣೆ”ಯ ಅಂಗವಾಗಿ ಪೋದಾರ್ ಪರಿಸರ ಸ್ನೇಹಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಗಣ್ಯರು ಭಾಗಿಯಾಗಿ ಗಿಡ ನೆಟ್ಟು ಸಸ್ಯೋತ್ಸವ ಆಚರಣೆ ಅರ್ಥ ಪೂರ್ಣವಾಗಿ ಆಚರಿಸಲಾಯಿತು.

Continue Reading

Hassan

ಬಿರುಗಾಳಿ ಸಹಿತ ಮಳೆಗೆ ಭಾರೀ ಪ್ರಮಾಣದಲ್ಲಿ ಭೂಕುಸಿತ

Published

on

ಹಾಸನ : ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಭಾರೀ  ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದೆ.

ಈ ಘಟನೆ ಸಕಲೇಶಪುರ ತಾಲ್ಲೂಕಿನ, ಹೆಗ್ಗದ್ದೆ ಗ್ರಾಮದ ಬಳಿ ಶಿರಾಡಿಘಾಟ್ ರಸ್ತೆ ಎನ್‌ಎಚ್‌- 75 ರಲ್ಲಿ ನಡೆದಿದೆ. ಮೊದಲೇ ಭೂಕುಸಿತವಾಗಿದ್ದರಿಂದ ಒಂದು ಬದಿ ರಸ್ತೆ ಸಂಚಾರ ಬಂದ್ ಮಾಡಿದ್ದ ಅಧಿಕಾರಿಗಳು ಇಟಾಚಿ ಮೂಲಕ ನಡೆಯುತ್ತಿದ್ದ ಮಣ್ಣು ತೆರವು ಕಾರ್ಯಾಚರಣೆ ಮಾಡುತ್ತಿದ್ದರು. ಹೀಗಾಗಿ  ವಾಹನಗಳ ಸಂಚಾರ ಬಂದ್ ಮಾಡಲಾಗಿತ್ತು.

ಈ ವೇಳೆ ಮತ್ತೆ ದೊಡ್ಡ ಪ್ರಮಾಣದಲ್ಲಿ ಕುಸಿದ ಭೂಮಿ ಮರಗಳ ಸಮೇತ ಕುಸಿದು ರಸ್ತೆ ಪೂರ್ತಿ ಜಖಂಗೊಂಡಿದೆ. ಇನ್ನೂ ವಾಹನಗಳ ಸಂಚಾರವನ್ನು ಬಂದ್  ಮಾಡಿದ್ದರಿಂದ  ದೊಡ್ಡ ಅನಾಹುತ ತಪ್ಪಿದೆ.

Continue Reading

Hassan

ಮರಿ ಸತ್ತು ಮೂರು ದಿನವಾದರೂ ಸ್ಥಳ ಬಿಟ್ಟು ಕದಲದ ತಾಯಿಯಾನೆ

Published

on

ಅರೇಹಳ್ಳಿ: ತನ್ನ ಮರಿ ಸತ್ತು ಮೂರು ದಿನ ಕಳೆದರೂ ತಾಯಿಯಾನೆ ತಾನು ಹೋದಲೆಲ್ಲಾ ಮೃತ ಮರಿಯಾನೆಯನ್ನು ತನ್ನೊಂದಿಗೆ ಎಳೆದುಕೊಂಡು ಹೋಗುತ್ತಿರುವ ಮನಕಲಕುವ ಘಟನೆ ಬೇಲೂರು ತಾಲೂಕು ಅರೇಹಳ್ಳಿ ಹೋಬಳಿಯ ಶಿರಗುರ ಗ್ರಾಮದ ಜಾಕ್‌ನಳ್ಳಿ ಎಸ್ಟೇಟ್ ಬಳಿ ನಡೆದಿದೆ.

ಘಟನೆ ಹಿನ್ನೆಲೆ:

ಕಳೆದ ಶನಿವಾರ ಗರ್ಭಿಣಿ ಹೆಣ್ಣಾನೆ ಮರಿಯಾನೆಗೆ ಜನ್ಮ ನೀಡಿದೆ. ಆದರೆ ಹುಟ್ಟುವ ವೇಳೆ ಮರಿಯು ಸ್ಥಳದಲ್ಲೆ ಮೃತಪಟ್ಟಿದೆ. ತಾಯಿ ಆನೆ ತನ್ನ ಮರಿ ಜೀವಂತವಾಗಿದೆ ಎಂದು ತಿಳಿದು ಕಾಲಿನಿಂದ ಒದ್ದು ಬದುಕಿಸುವ ಪ್ರಯತ್ನ ಮಾಡಿದರೂ ಸಹ ಮೃತ ಮರಿ ಮೇಲೇಳದಿರುವುದನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ದೃಶ್ಯ ಸೆರೆಹಿಡಿದಿದ್ದಾರೆ.

ಜೋರು ಮಳೆ ಸುರಿಯುತ್ತಿರುವುದರ ಜೊತೆಗೆ ಸತ್ತ ಮರಿಯನ್ನು ಎಳೆದುಕೊಂಡು ಹೋಗುತ್ತಿರುವುದು ಎಂಥ ಕಲ್ಲು ಮನಸ್ಸಿನವರಿಗೂ ಕರುಳು ಚುರುಕ್ ಎನ್ನುವಂತಿದೆ ಈ ದೃಶ್ಯಾವಳಿ. ತನ್ನ ಕರುಳ ಕುಡಿ ಇನ್ನೂ ಬದುಕಿದೆ ಎಂಬ ಭ್ರಮೆಯಲ್ಲಿರುವ ಮಾತೃ ಹೃದಯ ಯಾರನ್ನೂ ಕೂಡ ಹತ್ತಿರ ಹೋಗಲು ಬಿಡುತ್ತಿಲ್ಲ. ಭಾನುವಾರವಷ್ಟೆ ಅರೇಹಳ್ಳಿ ಸಮೀಪದ ಕೆಸಗುಲಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಮರಿಯೊಂದಿಗೆ ತಾಯಿಯಾನೆಯೂ ಸಹ ಮೃತಪಟ್ಟಿತ್ತು. ಈ ಘಟನೆ ಜನಮಾನಸದಲ್ಲಿ ಮಾಸುವ ಮುನ್ನವೇ ಮತ್ತೊಂದು ಮರಿ ಮೃತಪಟ್ಟಿರುವುದು ಪ್ರಾಣಿ ಪ್ರಿಯರಿಗೆ ಅತೀವ ನೋವನ್ನುಂಟುಮಾಡಿದೆ.

“ಕಳೆದೆರಡು ದಿನಗಳ ಹಿಂದೆ ಮೃತಪಟ್ಟ ಮರಿಯೊಂದಿಗೆ ತಾಯಿಯಾನೆ ತೆರಳುತ್ತಿರುವುದು ಬೇಸರ ತಂದಿದೆ. ಹೀಗಾಗಿ ಸಿಬ್ಬಂದಿಗಳನ್ನು ಹತ್ತಿರ ಹೋಗಲು ಬಿಡುತ್ತಿಲ್ಲ. ಮರಿ ವಾಸನೆ ಬಂದರೆ ತಾಯಿಯಾನೆ ತನ್ನಿಂತಾನೆ ಬೇರೆಯಾಗುತ್ತದೆ” ಎಂದು
ಬೇಲೂರಿನ ಆರ್‌ಎಫ್‌ಒ ಅಧಿಕಾರಿ ಯತೀಶ್ ತಿಳಿಸಿದ್ದಾರೆ.

Continue Reading

Trending

error: Content is protected !!