Connect with us

State

ತುಮಕೂರನ್ನು ಎರಡನೇ ಬೆಂಗಳೂರಾಗಿ ಅಭಿವೃದ್ಧಿ ಮಾಡಲು ಸರ್ಕಾರ ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್

Published

on

ತುಮಕೂರು: ಬೆಂಗಳೂರಿನ ಮೇಲೆ ಹೆಚ್ಚುತ್ತಿರುವ ಒತ್ತಡ ತಗ್ಗಿಸಲು ತುಮಕೂರು ಜಿಲ್ಲೆಯನ್ನು ಎರಡನೇ ಬೆಂಗಳೂರಾಗಿ ಅಭಿವೃದ್ಧಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ತುಮಕೂರು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು;

“ತುಮಕೂರು ಜಿಲ್ಲೆ ಎರಡನೇ ಬೆಂಗಳೂರು ಆಗಿ ಪರಿವರ್ತನೆಯಾಗುವ ನಂಬಿಕೆ ಇದೆ. ಇಲ್ಲಿಯ ಸಂಸ್ಕೃತಿ, ಇಲ್ಲಿಯ ಜನ, ಇಲ್ಲಿಯ ನೆಲಕ್ಕೆ ತನ್ನದೇ ಆದ ಶಕ್ತಿ ಇದೆ. ತುಮಕೂರು ಜಿಲ್ಲೆಯನ್ನು ಹೊಸ ಬೆಂಗಳೂರಾಗಿ ಪರಿವರ್ತಿಸಲು ಮುಂದಿನ 50 ವರ್ಷಗಳ ಯೋಜನೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಬೆಂಗಳೂರಿನ ಸಚಿವನಾಗಿ ನಾನು ಬೆಂಗಳೂರಿನ ಒತ್ತಡ ಕಡಿಮೆ ಮಾಡಬೇಕು ಎಂದು ಆಲೋಚನೆ ಮಾಡಿದಾಗ, ರಾಮನಗರ, ಚನ್ನಪಟ್ಟಣ, ನೆಲಮಂಗಲ, ದೊಡ್ಡಬಳ್ಳಾಪುರ ನಂತರ ತುಮಕೂರು ಪರ್ಯಾಯವಾಗಿದೆ.

ಇಂದು ತುಮಕೂರು ಜಿಲ್ಲೆಯ ಸಾವಿರಾರು ಕೋಟಿಯ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಯುವಕರು, ಮಹಿಳೆಯರು, ರೈತರು ಭಾಗವಹಿಸಿದ್ದಾರೆ. ತುಮಕೂರು ಕಲ್ಪತರುನಾಡು. ಇತಿಹಾಸ ಹೊಂದಿರುವ ಧಾರ್ಮಿಕ ಕ್ಷೇತ್ರ ಕೂಡ ಆಗಿದೆ. ಮನಮೋಹನ್ ಸಿಂಗ್ ಅವರ ಕಾಲದಲ್ಲಿ ದೂರದೃಷ್ಟಿ ಇಟ್ಟುಕೊಂಡು ತುಮಕೂರಿನಲ್ಲಿ ಕೈಗಾರಿಕಾ ಪ್ರದೇಶ ಆರಂಭಿಸಲಾಯಿತು. ಈ ಭಾಗದ ಅಭಿವೃದ್ಧಿಗೆ ಬೆಂಗಳೂರಿನಿಂದ ಬೆಳಗಾವಿ ಮೂಲಕ ಪೂನಾಗೆ ಸಾಗುವ ಕಾರಿಡಾರ್ ಗೆ ನಾವು ಆದ್ಯತೆ ನೀಡಬೇಕಿದೆ.

ನೀವು ನಮಗೆ 135 ಕ್ಷೇತ್ರಗಳನ್ನು ಗೆಲ್ಲಿಸಿ ಅಧಿಕಾರ ನೀಡಿದ್ದೀರಿ. ನಾವು ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಇದರಿಂದ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಮನೆಯೊಡತಿಯರ ಖಾತೆಗೆ 2 ಸಾವಿರ ಹಣ ತಲುಪುತ್ತಿದೆ. ನಿಮ್ಮ ಮನೆ ಗೃಹಜ್ಯೋತಿ ಯೋಜನೆ ಬೆಳಗುತ್ತಿದೆ. ಸಿದ್ದರಾಮಯ್ಯ ಅವರ ಕನಸಿನ ಅನ್ನಭಾಗ್ಯ, ನಿರುದ್ಯೋಗ ಯುವಕರಿಗಾಗಿ ಯುವನಿಧಿ ಯೋಜನೆ ಜಾರಿಗೆ ತರಲಾಗಿದೆ.

ಈ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಆರ್ಥಿಕ ಶಕ್ತಿ ತುಂಬಿ ದೊಡ್ಡ ಬದಲಾವಣೆ ತರುತ್ತಿವೆ. ನಮ್ಮ ಸರ್ಕಾರ ಕೇವಲ ಗ್ಯಾರಂಟಿ ಯೋಜನೆ ಮಾತ್ರವಲ್ಲ, ಭವಿಷ್ಯದ ಬಗ್ಗೆ ಆಲೋಚನೆ ಮಾಡುತ್ತಿದೆ. ನಾನು ತುಮಕೂರಿಗೆ ಬಂದಾಗೆಲ್ಲಾ ನನಗೆ ಪಾವಗಡ ನೆನಪಾಗುತ್ತದೆ. ಪಾವಗಡದ ಜನರು ನನಗೆ ಕೊಟ್ಟ ಸಹಕಾರ ಮರೆಯಲು ಸಾಧ್ಯವಿಲ್ಲ. ಇನ್ನು 10 ಸಾವಿರ ಎಕರೆ ಭೂಮಿಯನ್ನು ಸೌರ ವಿದ್ಯುತ್ ಘಟಕಕ್ಕೆ ನೀಡಲು ರೈತರು ಮುಂದೆ ಬಂದಿದ್ದಾರೆ. ಈ ಭೂಮಿಯನ್ನು ಬಳಸಿಕೊಂಡು ಇನ್ನು 2 ಸಾವಿರ ಮೆ.ವ್ಯಾಟ್ ವಿದ್ಯುತ್ ಉತ್ಪಾದನೆಗೆ ಸರ್ಕಾರ ಕಾರ್ಯಕ್ರಮ ರೂಪಿಸುತ್ತಿದೆ.

ಈ ಭಾಗದಲ್ಲಿ ಉದ್ಯೋಗ ಸೃಷ್ಟಿಸಬೇಕು, ಬೆಂಗಳೂರಿಗೆ ವಲಸೆ ಬರುವುದನ್ನು ತಪ್ಪಿಸಲು ಕಾರ್ಯಕ್ರಮ ರೂಪಿಸಲಾಗುತ್ತಿದೆ. ಇದಕ್ಕಾಗಿ ಕೈಗಾರಿಕ ಪ್ರದೇಶಗಳ ಸ್ಥಾಪನೆಗೆ ಆದ್ಯತೆ ನೀಡಲಾಗಿದೆ. ದೇವರು ನಮಗೆ ವರ ಮತ್ತು ಶಾಪ ನೀಡುವುದಿಲ್ಲ. ಕೇವಲ ಅವಕಾಶ ನೀಡುತ್ತಾನೆ. ಈ ಅವಕಾಶದಲ್ಲಿ ನಾವು ಯಾವ ರೀತಿ ಬದಲಾವಣೆ ತರುತ್ತೇವೆ ಎಂಬುದು ಮುಖ್ಯ. ರೈತರ ಬದುಕಿನಲ್ಲಿ ಬದಲಾವಣೆ ತರಬೇಕು, ಈ ಭಾಗದ ಕೆರೆಗಳಿಗೆ ನೀರು ತುಂಬಿಸಬೇಕು ಎಂದು ಯೋಜನೆ ಜಾರಿ ಮಾಡಲು ಮುಂದಾಗಿದ್ದೇವೆ. ಈ ಸರ್ಕಾರ ಕೊಟ್ಟ ಮಾತಿನಂತೆ ನುಡಿದಂತೆ ನಡೆದಿದೆ. ನಿಮ್ಮ ಬದುಕು ಹಸನ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ. ಸರ್ಕಾರದ ಎಲ್ಲಾ ಇಲಾಖೆ ಸಚಿವರುಗಳು ಕೂಡ ನಿಮ್ಮ ಸೇವೆಗಾಗಿ ಹಗಲು ರಾತ್ರಿ ದುಡಿಯುತ್ತಿದ್ದಾರೆ.”

Continue Reading
Click to comment

Leave a Reply

Your email address will not be published. Required fields are marked *

State

ರಾಮೇಶ್ವರಂ ಕೆಫೆ ಸ್ಫೋಟ ನಡೆಸಿದ್ದು ತೀರ್ಥಹಳ್ಳಿಯ ಮುಸ್ಸಾವಿರ್‌ ಹುಸೇನ್‌; ಎನ್‌ಐಎ ಪತ್ರಿಕಾ ಪ್ರಕಟಣೆ ಬಿಡುಗಡೆ

Published

on

ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್‌ 1 ರಂದು ದೊಡ್ಡ ಸ್ಫೋಟವೊಂದು ನಡೆದಿತ್ತು. ಇದರ ತನಿಖೆ ಮುಂದುವರಿದಿದ್ದು ಇದೀಗ ಎನ್‌ಐಎ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಈ ಸ್ಫೋಟದ ಪ್ರಮುಖ ಆರೋಪಿ ತೀರ್ಥಹಳ್ಳಿಯ ಮುಸ್ಸಾವಿರ್‌ ಹುಸೇನ್‌ ಶಾಜಿಬ್‌ ಮತ್ತು ಸಹ ಸಂಚುಕೋರ ಅಬ್ದುಲ್‌ ಮಥೀನ್‌ ತಾಹಾ ಎಂದು ಹೇಳಿದೆ.

ಚಿಕ್ಕಮಗಳೂರಿನ ಕಳಸ ನಿವಾಸಿ ಮಝಮ್ಮಿಲ್‌ ಶರೀಫ್‌ ಎಂಬಾತ ಆರೋಪಿಗಳಿಗೆ ಲಾಜಿಸ್ಟಿಕ್ಸ್‌ ಬೆಂಬಲ ನೀಡಿದ್ದು ಈತನನ್ನು ಮಾ.26 ರಂದು ಬಂಧನ ಮಾಡಲಾಗಿದ್ದು, ಈತ ಕಸ್ಟಡಿಯಲ್ಲಿದ್ದಾನೆ. ಇನ್ನು ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಎನ್‌ಐಎ ತಂಡ ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದಿದೆ. ಹಾಗೂ ಇವರಿಗಾಗಿ ಎನ್‌ಐಎ 10 ಲಕ್ಷಗಳ ಬಹುಮಾನ ಕೂಡಾ ಘೋಷಣೆ ಮಾಡಿದೆ.

ಬಂಧಿತ ಆರೋಪಿಗಳ ಕಾಲೇಜು ಮತ್ತು ಶಾಲಾ ಸಮಯದ ಸ್ನೇಹಿತರು ಸೇರಿ ಎಲ್ಲಾ ಪರಿಚಯಸ್ಥರನ್ನು ಕರೆಸಿ ಪ್ರಕರಣದ ಸಾಕ್ಷ್ಯ ಮತ್ತು ಮಾಹಿತಿ ಸಂಗ್ರಹದ ವಿಚಾರಣೆ ನಡೆಯುತ್ತಿದೆ. ಹಾಗೂ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಎಲ್ಲರ ಸಹಕಾರವನ್ನು ಎನ್‌ಐಎ ಕೋರಿದೆ ಎಂದು ವರದಿಯಾಗಿದೆ.

Continue Reading

State

ನರೇಂದ್ರ ಮೋದಿ ಅವರ ಆಡಳಿತದಲ್ಲಿ ಮಾಡಿರುವ ಸಾಲದ ಹಣ ಎಲ್ಲಿ ಸೋರಿಹೋಗುತ್ತಿದೆ? – ಸಿದ್ದರಾಮಯ್ಯ ಪ್ರಶ್ನೆ

Published

on

ಅಶೋಕನ ಅನರ್ಥಶಾಸ್ತ್ರದಲ್ಲಿ ಪ್ರಧಾನಿ ಮೋದಿಯವರು ಮಾಡಿದ ಸಾಲದ ಲೆಕ್ಕವಿಲ್ಲವೇ?

ಸನ್ಮಾನ್ಯ ಆರ್ ಅಶೋಕ್ ಅವರೇ, ಯಾಕೆ ನಮ್ಮ ಕೈಯಲ್ಲಿ ಬಡಿಗೆ ಕೊಟ್ಟು ಬಡಿಸಿಕೊಳ್ಳುತ್ತೀರಿ? ರಾಜ್ಯ ಸರ್ಕಾರದ ಸಾಲದ ಲೆಕ್ಕ ಹೇಳಿದ್ದೀರಿ, ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದ ನಿಮ್ಮದೇ ಪಕ್ಷದ ಸರ್ಕಾರದ ಸಾಲದ ಕತೆಯನ್ನು ಸ್ವಲ್ಪ ಹೇಳಿ ಬಿಡಿ. ನೀವು ಮರೆತಿದ್ದರೆ ನಾನು ಹೇಳುತ್ತೇನೆ ಕೇಳಿ.

2014ರಲ್ಲಿ ಕೇವಲ ರೂ.55 ಲಕ್ಷ ಕೋಟಿಯಷ್ಟು ಇದ್ದ ಭಾರತದ ಸಾಲ ಈ ಹಣಕಾಸಿನ ವರ್ಷದಲ್ಲಿ ರೂ.183.67 ಲಕ್ಷ ಕೋಟಿಗೆ ತಲುಪಿದೆ. ಹತ್ತು ವರ್ಷಗಳಲ್ಲಿ ನರೇಂದ್ರ ಮೋದಿ ಅವರು ಮಾಡಿರುವ ಸಾಲ ರೂ.123 ಲಕ್ಷ ಕೋಟಿ. ಅಂದರೆ ಪ್ರತಿಯೊಬ್ಬ ಭಾರತೀಯನ ತಲೆಮೇಲೆ 92 ಸಾವಿರ ರೂಪಾಯಿಗಳ ಸಾಲದ ಹೊರೆ ಇದೆ. “ಸಬ್ ಕಾ ಸಾಥ್ ಸಬ್ ಕೋ ಸಾಲ”.

ಅಶೋಕ್ ಅವರೇ, ನಿಮಗೆ ಈ ಆರ್ಥಿಕ ವ್ಯವಹಾರಗಳು ಅರ್ಥವಾಗುವುದಿದ್ದರೆ ಸ್ವಲ್ಪ ಕೇಳಿಸಿಕೊಳ್ಳಿ. ನಮ್ಮ ರಾಜ್ಯ ಸರ್ಕಾರದ ಸಾಲ ‘’ಹಣಕಾಸು ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣಾ ಕಾಯ್ದೆ (ಎಫ್ ಆರ್ ಬಿ)ಯ ವ್ಯಾಪ್ತಿಯಲ್ಲಿಯೇ ಇದೆ. ನಮ್ಮ ಸಾಲ ಒಟ್ಟು ಸಾಲ ಒಂದು ಲಕ್ಷ ಕೋಟಿಯನ್ನು ಮೀರಿದ್ದರೂ ಅದು ನಮ್ಮ ಜಿಎಸ್‌ಡಿಪಿಯ ಶೇಕಡ 25ರ ಮಿತಿಯೊಳಗೆಯೇ ಇದೆ. ನಮ್ಮ ಹಣಕಾಸು ಕೊರತೆ ಕೂಡಾ ಜಿಎಸ್‌ಡಿಪಿಯ ಶೇಕಡಾ ಮೂರನ್ನು ಮೀರಿಲ್ಲ.

ಕೇಂದ್ರದ ಬಿಜೆಪಿ ಆಡಳಿತದಲ್ಲಿ ಸರ್ಕಾರದ ಸಾಲ ಮಾತ್ರ ಹೆಚ್ಚಾಗುತ್ತಿಲ್ಲ, ಅವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ವೈಯಕ್ತಿಕ ಸಾಲ ಕೂಡಾ ಹೆಚ್ಚಾಗುತ್ತಿದ್ದರೆ, ನಿರುದ್ಯೋಗದಿಂದಾಗಿ ಕುಟುಂಬದ ಆದಾಯ ಕುಸಿಯತ್ತಿದೆ. ಹಾಗಿದ್ದರೆ ನರೇಂದ್ರ ಮೋದಿ ಸರ್ಕಾರದ ಸಾಲದ ಹಣ ಎಲ್ಲಿ ಸೋರಿಹೋಗುತ್ತಿದೆ?

ಬೆಲೆ ಏರಿಕೆ, ನಿರುದ್ಯೋಗಗಳಿಂದಾಗಿ ತತ್ತರಿಸಿ ಹೋಗಿರುವ ರಾಜ್ಯದ ಜನತೆ ನಮ್ಮ ಗ್ಯಾರಂಟಿ ಮತ್ತು ಇತರ ಜನ ಕಲ್ಯಾಣ ಯೋಜನೆಗಳಿಂದಾಗಿ ಉಸಿರಾಡುವಂತಾಗಿದೆ. ಗ್ಯಾರಂಟಿ ಯೋಜನಗೆಳು ರಾಜ್ಯದ ಒಂದೂವರೆ ಕೋಟಿ ಕುಟುಂಬಗಳನ್ನು ನೇರವಾಗಿ ತಲುಪಿದೆ. 1.22 ಕೋಟಿ ಮಹಿಳೆಯರು ನಮ್ಮ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ನಮ್ಮ ಗ್ಯಾರಂಟಿ ಮತ್ತಿತರ ಕಲ್ಯಾಣ ಯೋಜನೆಗಳಿಂದಾಗಿ ಪ್ರತಿ ಕುಟುಂಬದ ಮಾಸಿಕ ಆದಾಯ ಏಳರಿಂದ ಹತ್ತು ಸಾವಿರ ರೂಪಾಯಿಗಳಷ್ಟು ಹೆಚ್ಚಾಗಿದೆ.

ಮಾನ್ಯ ಅಶೋಕ್ ಅವರೇ, ಬೆಂಗಳೂರು ನಗರದಲ್ಲಿ ಕೂತು ಆಧಾರವಿಲ್ಲದ ರಾಜಕೀಯ ಹೇಳಿಕೆಗಳನ್ನು ನೀಡುತ್ತಾ ಕಾಲ ಹರಣ ಮಾಡಬೇಡಿ. ಹಳ್ಳಿಗಳಿಗೆ ಹೋಗಿ ನಿಮ್ಮ ಪಕ್ಷದ ಬೆಂಬಲಿಗರ ಜೊತೆಯಲ್ಲಿಯೇ ಮಾತನಾಡಿ. ನಮ್ಮ ಸರ್ಕಾರದ ಯೋಜನೆಗಳಿಂದ ಅವರು ಏನನ್ನು ಪಡೆದುಕೊಳ್ಳುತ್ತಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೆ ಕೇಳಿ ನೋಡಿ. ಇಡೀ ಕರ್ನಾಟಕ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಮಾತನಾಡುತ್ತಿದೆ.

Continue Reading

State

ಎಂ.ಕೆ.ಬಾಸ್ಕರರಾವ್ ನಿಧನಕ್ಕೆ ಕೆಯುಡಬ್ಲ್ಯೂಜೆ ಕಂಬನಿ

Published

on

ಬೆಂಗಳೂರು:
ಸಂಯುಕ್ತ ಕರ್ನಾಟಕ ಮತ್ತು ಪ್ರಜಾವಾಣಿ ಪತ್ರಿಕೆಯಲ್ಲಿ ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರ ರಾವ್ ಅವರು ಇಂದು ನಿಧನರಾದರು.

ಕ್ರಿಯಾಶೀಲ ಪತ್ರಕರ್ತರಾಗಿದ್ದ ಭಾಸ್ಕರ ರಾವ್ ಅವರು ಅಂಕಣಕಾರರಾಗಿ ಮತ್ತು ಟಿವಿ ಡಿಬೇಟ್ ಗಳಲ್ಲಿ ರಾಜಕೀಯ ವಿಶ್ಲೇಷಣೆಗಾರರಾಗಿ ಗಮನಸೆಳೆದಿದ್ದರು. ಅವರ ನಿಧನದಿಂದ ಸುದ್ದಿ ಮನೆಯ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಶೋಕಿಸಿದೆ.

ಕಲಬುರಗಿಯಲ್ಲಿ ನಡೆದ 36 ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಸ್ಕರ ರಾವ್ ಅವರಿಗೆ ಕೆಯುಡಬ್ಲ್ಯೂಜೆ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಮೂರು ತಿಂಗಳ ಹಿಂದೆ ಅವರ ಮನೆಗೆ ತೆರಳಿ ಮನೆಯಂಗಳದಲ್ಲಿ ನಮನ ಕಾರ್ಯಕ್ರಮದಲ್ಲಿ ಭಾಸ್ಕರ ರಾವ್‌ ದಂಪತಿಗಳನ್ನು ಕೆಯುಡಬ್ಲ್ಯೂಜೆ ಸನ್ಮಾನಿಸಿತ್ತು ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸ್ಮರಿಸಿದ್ದಾರೆ.

ಭಾಸ್ಕರ ರಾವ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ತಗಡೂರು ಪ್ರಾರ್ಥಿಸಿದ್ದಾರೆ.

Continue Reading

Trending

error: Content is protected !!