Connect with us

Chamarajanagar

Hannur|ಒಂದೇ ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ಜಟಾಪಟಿ

Published

on

ಹನೂರು : ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮುಖ್ಯಾಧಿಕಾರಿ ಕುರ್ಚಿಗೆ ಇಬ್ಬರು ಅಧಿಕಾರಿಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ನೆರೆದಿದ್ದ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಈ ಬೆಳವಣಿಗೆಗೆ ಸಾಕ್ಷಿಯಾದರು.

ಪ.ಪಂ.ನಲ್ಲಿ ಈ ಹಿಂದೆ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮೂರ್ತಿ ಅವರು ಪ್ರಕರಣ ವೊಂದರಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಹಿನ್ನಲೆ ಜಿಲ್ಲಾಧಿಕಾರಿ ಅವರು 2023, ಡಿ.14 ರಂದು ಕಡ್ಡಾಯ ನಿವೃತ್ತಿಗೆ ಆದೇಶ ಹೊರಡಿಸಿ ಕರ್ತವ್ಯದಿಂದ ಬಿಡುಗಡೆ ಗೊಳಿಸಿದ್ದರು. ಈ ಆದೇಶದ ವಿರುದ್ಧ ಮೂರ್ತಿ ಅವರು ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ಈ ಆದೇಶವನ್ನು ರದ್ದುಗೊಳಿಸಿ ಕರ್ತವ್ಯದ ಮರು ನೇಮಕಕ್ಕೆ ಆದೇಶಿಸಿತ್ತು. ಜತೆಗೆ ಇವರಿಗೆ ಬರಬೇಕಿದ್ದ ವೇತನ ಬಾಕಿ, ಸೇವೆಯ ನಿರಂತರತೆ ಹಾಗೂ ಸಿಗಬೇಕಾದ ಎಲ್ಲಾ ಪ್ರಯೋಜನ ಗಳನ್ನು 4 ವಾರದೊಳಗೆ ನೀಡಲು ಆದೇಶಿಸಿದೆ.

ಈ ಹಿನ್ನೆಲೆ ಮೂರ್ತಿ ಅವರು ಕರ್ತವ್ಯಕ್ಕೆ ಅವಕಾಶ ಮಾಡಿಕೊಡುವಂತೆ ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿ ಮಂಗಳವಾರ ಕರ್ತವ್ಯಕ್ಕೆ ಹಾಜರಾಗಲು ಪಪಂ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಕಾರ್ಯನಿರ್ವಹಿಸುತ್ತಿದ್ದ ಹಾಲಿ ಮುಖ್ಯಾಧಿಕಾರಿ ಅಶೋಕ್ ಅವರಲ್ಲಿ ಈ ಬಗ್ಗೆ ಕೇಳಿಕೊಂಡರು. ಆದರೆ, ಇದಕ್ಕೊಪ್ಪದ ಅಶೋಕ್ ಜಿಲ್ಲಾಧಿಕಾರಿ ಅವರಿಂದ ಅಧಿಕೃತ ಆದೇಶ ಪತ್ರವಿಲ್ಲದೆ ಈ ರೀತಿ ಕಚೇರಿಗೆ ಆಗಮಿಸಿರುವುದು ಕಾನೂನು ಬಾಹಿರ. ಹಾಗಾಗಿ ಡಿಸಿ ಅವರಿಂದ ಆದೇಶ ಪತ್ರ ಪಡೆದು ಕಚೇರಿಗೆ ಆಗಮಿಸಿ ಎಂದು ತಿಳಿಸಿದರು. ಈ ವೇಳೆ ಇಬ್ಬರ ನಡುವೆ ಅಧಿಕಾರಕ್ಕಾಗಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ತೀವ್ರ ವಾಗ್ವಾದವೇ ನಡೆಯಿತು. ಮೂರ್ತಿ ಅವರು ಕರ್ತವ್ಯಕ್ಕಾಗಿ ಪಟ್ಟುಹಿಡಿದು ಕುಳಿತಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಾರ್ವಜನಿಕರು ಹಾಗೂ ಕೆಲ ಪ.ಪಂ. ಸದಸ್ಯರು. ಬಳಿಕ ಮೂರ್ತಿ ಅವರು ಜಿಲ್ಲಾಧಿಕಾರಿ ಅವರಿಂದ ಆದೇಶ ಪತ್ರ ಪಡೆಯಲು ತೆರಳಿದರು. ಇಬ್ಬರು ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯುತ್ತಿರುವ ಸಂದರ್ಭದಲ್ಲೇ ನಗಾರಾಭಿವೃದ್ಧಿ ಯೋಜನಾಧಿಕಾರಿ ಸುಧಾ, ಅಶೋಕ್ ಅವರಿಗೆ ಕರೆಮಾಡಿ ಮೂರ್ತಿ ಅವರು ಕರ್ತವ್ಯಕ್ಕೆ ನೇಮಕ ಸಂಬಂಧ ಯಾವುದೇ ಆದೇಶ ಬಂದಿಲ್ಲ. ಹಾಗಾಗಿ ಈ ಸಂಬಂಧ ಪೊಲೀಸರಿಗೆ ದೂರು ನೀಡುವಂತೆ ಸೂಚಿಸಿದರು. ಈ ಸಂದರ್ಭ ಸಾರ್ವಜನಿಕರು ಹಾಗೂ ಕೆಲ ಸದಸ್ಯರು ಅಶೋಕ್‌ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಒಂದೇ ಹುದ್ದೆಗಾಗಿ ಇಬ್ಬರು ಅಧಿಕಾರಿಗಳು ಕಚೇರಿಯಲ್ಲಿ ಕಿತ್ತಾಡಿಕೊಂಡಿರುವುದರ ಬಗ್ಗೆ ಪಟ್ಟಣದ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಯಿತು.

Continue Reading

Chamarajanagar

ಸುರೇಶ್ ಎನ್. ಋಗ್ವೇದಿ ಅವರಿಗೆ ವಿಪ್ರ ವಿಕಾಸ ಪ್ರಶಸ್ತಿ

Published

on

ಚಾಮರಾಜನಗರ: ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷರು ಹಾಗೂ ಸಂಸ್ಕೃತಿ ಚಿಂತಕರಾದ ಸುರೇಶ್ ಎನ್ ಋಗ್ವೇದಿ ಅವರಿಗೆ ವಿಪ್ರ ವಿಕಾಸ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಮಾನ ಮನಸ್ಕರ ಮಾಧ್ಯಮ ಮಿತ್ರರ ವೇದಿಕೆಯ ಸಂಸ್ಥಾಪಕ ಕಾರ್ಯದರ್ಶಿ ಹನುಮೇಶ್ ಕೆ ಯಾವಗಲ್‌ ತಿಳಿಸಿದ್ದಾರೆ.

ಹಾಸನ ತಾಲೂಕಿನ ಬೇಲೂರಿನಲ್ಲಿ ಸಂಸ್ಕಾರ ಸಂಸ್ಕೃತಿ ಸಂಘಟನೆಗಾಗಿ ವಿಕಾಸ ಸಾರಥ್ಯದಲ್ಲಿ ಬೇಲೂರು ಹಬ್ಬ ಕಾರ್ಯಕ್ರಮವು ಜು.20 ರಂದು ಭಾನುವಾರ ಬೇಲೂರಿನ ಶ್ರೀ ಶೃಂಗೇರಿ ಶಾರದಾ ಪೀಠದ ಶ್ರೀ ಭಾರತಿ ತೀರ್ಥ ಸಭಾ ಭವನದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷರು ಹಾಗೂ ಸಂಸ್ಕೃತಿ ಚಿಂತಕರಾದ ಸುರೇಶ್ ಎನ್ ಋಗ್ವೇದಿ ಅವರಿಗೆ ವಿಪ್ರ ವಿಕಾಸ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ವಿಪ್ರ ವಿಕಾಸ ಪ್ರಶಸ್ತಿ ಸ್ವೀಕರಿಸಲ್ಲಿರುವ ಸುರೇಶ್ ಎನ್ ಋಗ್ವೇದಿ ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ರಾಷ್ಟ್ರೀಯ ಚಿಂತನೆ, ಸ್ವದೇಶಿ, ಯುವ ಸಂಘಟನೆ, ಪರಿಸರ ಸಂರಕ್ಷಣೆ, ಸಂಸ್ಕೃತಿ, ಪರಂಪರೆ, ರಾಷ್ಟ್ರೀಯ ಮೌಲ್ಯಗಳ ಪ್ರಸಾರ, ಶಿಕ್ಷಣ, ಕನ್ನಡ ನಾಡು ನುಡಿ ಹಾಗೂ ಸಮಾಜದ ಸಮಗ್ರ ವಿಕಾಸದ ಬೆಳವಣಿಗೆಯಲ್ಲಿ ಅಮೂಲ್ಯ ಸೇವೆಯನ್ನು ಸಲ್ಲಿಸುತ್ತಿದ್ದು ಇವರಿಗೆ ವಿಕಾಸ ಬೇಲೂರು ಹಬ್ಬ 2025 ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ದಿ.ಗರುಡನಗಿರಿ ನಾಗರಾಜ್ ಸ್ಮರಣಾರ್ಥ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

ಸುರೇಶ್ ಎನ್ ಋಗ್ವೇದಿಯವರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ , ಕರ್ನಾಟಕ ಗಮಕ ಕಲಾ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ, ಜೈ ಹಿಂದ್ ಪ್ರತಿಷ್ಠಾನದ ಅಧ್ಯಕ್ಷರು ಶ್ರೀ ಕೃಷ್ಣ ಪ್ರತಿಷ್ಠಾನದ ಅಧ್ಯಕ್ಷರು ಋಗ್ವೇದಿ ಯೂತ್ ಕ್ಲಬ್ ಗೌರವಾಧ್ಯಕ್ಷರು, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ವಿವಿಧ ಸಂಘಟನೆಗಳಲ್ಲಿ ಕ್ರಿಯಾಶೀಲರಾಗಿ, ಕಾರ್ಯನಿರ್ವಹಿಸಿದ್ದು, ಇತಿಹಾಸ ಉಪನ್ಯಾಸಕರಾಗಿ ಕಳೆದ 31 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.

Continue Reading

Chamarajanagar

ಹಸುಗೂಸನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋದ ಪೋಷಕರು

Published

on

ಚಾಮರಾಜನಗರ: ಒಂದು ವಾರದ ಹಿಂದೆ ಜನಿಸಿರುವ ಹಸುಗೂಸನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋಗಿರುವ ಘಟನೆ ಸಂಭವಿಸಿದೆ.

ತಾಲೂಕಿನ ಸಾಗಡೆ ಮತ್ತು ತಮ್ಮಡಹಳ್ಳಿ ಗ್ರಾಮಗಳ ನಡುವಿನ ರಸ್ತೆಯ ಬದಿಯಲ್ಲಿ ಹೆಣ್ಣು ಹಸುಗೂಸನ್ನು ಪೋಷಕರು ಬಿಟ್ಟು ಹೋಗಿದ್ದು, ಸಾಗಡೆ ಗ್ರಾಮದ ಪರಮೇಶ್ ಎಂಬುವವರು ಅದೇ ರಸ್ತೆಯಲ್ಲಿ ನಗರ ಕಡೆ ಸಂಚಾರ ಮಾಡುತ್ತಿದ್ದಾಗ ಹಸುಗೂಸು ಅಳುವ ಶಬ್ಧ ಕೇಳಿಬಂದಿದೆ.

ಸ್ಥಳಕ್ಕೆ ಬಂದು ನೋಡಿದಾಗ ಹೆಣ್ಣು ಮಗುವನ್ನು ರಸ್ತೆ ಬದಿಯಲ್ಲಿ ಬಿಟ್ಟಿರುವುದು ತಿಳಿದು, ಬಳಿಕ ಸಾಗಡೆ ಗ್ರಾಮದ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ಕರೆ ಮಾಡಿ ಮಾಹಿತಿ ತಿಳಿಸಿ ಮಗುವನ್ನು ಆಂಬುಲೆನ್ಸ್ ಮೂಲಕ ಚಾ.ನಗರ ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾರೆ. ಮಗುವಿನ ಪೋಷಕರು ಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ.

Continue Reading

Chamarajanagar

ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವು

Published

on

ಚಾಮರಾಜನಗರ: ಗುಂಡ್ಲುಪೇಟೆ – ಚಾಮರಾಜನಗರ ಮುಖ್ಯ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ರಾಮಸಮುದ್ರದ ನಿವಾಸಿ ಸಂತೋಷ್ (25) ಮೃತ ದುರ್ದೈವಿ. ಈತ ತೆರಕಣಾಂಬಿಯ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಮೃತ ಸಂತೋಷ್ ಬೈಕ್ ನಲ್ಲಿ ಗುಂಡ್ಲುಪೇಟೆ- ಚಾಮರಾಜನಗರ ಮುಖ್ಯ ರಸ್ತೆಯಲ್ಲಿ ಬರುವಾಗ ಕೆ.ಕೆ ಹುಂಡಿ ಗ್ರಾಮದ ಬಳಿ ವಾಹನವೊಂದು ಹೊಡೆದುಕೊಂಡು ಹೋಗಿರುವ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತ ದೇಹವನ್ನು ನಗರದ ಸಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಮುಂದಿನ ಕ್ರಮಕೈಗೊಳ್ಳಲಾಗಿದೆ. ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Trending

error: Content is protected !!