Connect with us

National

U-19 World Cup| ವೈಭವ್‌ನ ಶತಕ: 6ನೇ ಬಾರಿಗೆ ಅಂಡರ್-19 ವಿಶ್ವಕಪ್ ಗೆದ್ದ ಟೀಂ ಇಂಡಿಯಾ

Published

on

ಹರಾರೆ: ಜಿಂಬಾಬ್ವೆಯ ಹರಾರೆ ಮೈದಾನದಲ್ಲಿ ಯಂಗ್‌ ಇಂಡಿಯಾ ತಂಡ ಇತಿಹಾಸ ಸೃಷ್ಟಿಸಿದೆ. ಅಂಡರ್- 19 ವಿಶ್ವಕಪ್‌ ಫೈನಲ್‌ನಲ್ಲಿ ಭಾರತ v/s ಇಂಗ್ಲೆಂಡ್ ತಂಡವನ್ನು ಬರೋಬ್ಬರಿ 100 ರನ್​ಗಳಿಂದ ಸೋಲಿಸಿದ್ದು, ಭಾರತ ಸತತ ಆರನೇ ಬಾರಿಗೆ ಅಂಡರ್- 19 ವಿಶ್ವಕಪ್ ಎತ್ತಿಹಿಡಿದಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 411 ರನ್ ಗಳಿಸಿತ್ತು.  ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವೂ 311 ರನ್​ಗಳಿಗೆ ಆಲೌಟ್ ಆಗುವ ಮೂಲಕ 100 ರನ್​ಗಳಿಂದ ಸೋಲೊಪ್ಪಿಕೊಂಡಿತು. ಭಾರತದ ಈ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿದ 14 ವರ್ಷದ ವೈಭವ್ ಸೂರ್ಯವಂಶಿ ಕೇವಲ 80 ಎಸೆತಗಳಲ್ಲಿ 175 ರನ್​ಗಳ  ಇನ್ನಿಂಗ್ಸ್ ಆಡಿದರು. ವೈಭವ್ ಅವರ ಈ ಇನ್ನಿಂಗ್ಸ್‌ನಲ್ಲಿ 15 ಸಿಕ್ಸರ್‌ಗಳು ಮತ್ತು 15 ಬೌಂಡರಿಗಳು ಸೇರಿದ್ದವು.

ವೈಭವ್‌ನ ಸ್ಫೋಟಕ ಶತಕ

ಈ ವೇಳೆ ವೈಭವ್ 39 ಎಸೆತಗಳಲ್ಲಿ ವೇದಾಂತ್ ತ್ರಿವೇದಿ ಅವರೊಂದಿಗೆ ಮೂರನೇ ವಿಕೆಟ್‌ಗೆ 89 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ವೈಭವ್ ವಿಕೆಟ್ ಪತನವಾದಾಗ ತಂಡದ ಮೊತ್ತ 251 ರನ್‌ ಆಗಿತ್ತು. ಇದರ ನಂತರ ಉಳಿದ 7 ಆಟಗಾರರು ಸ್ಕೋರ್​ ಬೋರ್ಡ್​ಗೆ 160 ರನ್ ಸೇರಿಸಿದರು. ವೇದಾಂತ್ 36 ಎಸೆತಗಳಲ್ಲಿ 32 ರನ್ ಗಳಿಸಿದರೆ, ವಿಹಾನ್ ಮಲ್ಹೋತ್ರಾ 36 ಎಸೆತಗಳಲ್ಲಿ 30 ರನ್ ಬಾರಿಸಿದರು. ಅಭಿಗ್ಯಾನ್ ಕುಂಡು 31 ಎಸೆತಗಳಲ್ಲಿ 40 ರನ್, ಅಂಬ್ರಿಸ್ ಕೇವಲ 18 ರನ್, ಕನಿಷ್ಕ್ ಚೌಹಾಣ್ 20 ಎಸೆತಗಳಲ್ಲಿ ಅಜೇಯ 37 ರನ್ ಗಳಿಸಿದರು. ಇಂಗ್ಲೆಂಡ್ ಪರ ಜೇಮ್ಸ್ ಮಿಂಟೊ ಮೂರು ವಿಕೆಟ್ ಪಡೆದರೆ, ಸೆಬಾಸ್ಟಿಯನ್ ಮಾರ್ಗನ್ ಮತ್ತು ಅಲೆಕ್ಸ್ ಗ್ರೀನ್ ತಲಾ ಎರಡು ವಿಕೆಟ್ ಪಡೆದಿದ್ದಾರೆ.

 ಏಕಾಂಗಿ ಹೋರಾಟ ಮಾಡಿದ ಫಾಕ್ನರ್ ಆಟ ವ್ಯರ್ಥ

ಭಾರತ ನೀಡಿದ 412 ರನ್‌ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ 40.2 ಓವರ್‌ಗಳಲ್ಲಿ 311 ರನ್‌ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ಪರ ಏಕಾಂಗಿ ಹೋರಾಟ ನಡೆಸಿದ ಕ್ಯಾಲೆಬ್ ಫಾಕ್ನರ್ 67 ಎಸೆತಗಳಲ್ಲಿ 115 ರನ್‌ಗಳ ಇನ್ನಿಂಗ್ಸ್ ಆಡಿದರು. ಆದರೆ ಇನ್ನೊಂದು ತುದಿಯಿಂದ ಅವರಿಗೆ ಉತ್ತಮ ಬೆಂಬಲ ಸಿಗಲಿಲ್ಲ. ಫಾಕ್ನರ್ ಹೊರತುಪಡಿಸಿ ಬೆನ್ ಡಾಕಿನ್ಸ್ 66 ಮತ್ತು ಬೆನ್ ಮೇಯಸ್ 45 ರನ್‌ಗಳ ಇನ್ನಿಂಗ್ಸ್ ಆಡಿದರು. ನಾಯಕ ಥಾಮಸ್ 31 ರನ್​ಗಳನ್ನು ನೀಡಿದರು. ಇಂಗ್ಲೆಂಡ್ ತಂಡ ಉತ್ತಮ ಪಡೆಯಿತ್ತಾದರೂ ಮಧ್ಯಮ ಓವರ್​ಗಳಲ್ಲಿ ಎಂಟು ಎಸೆತಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು. ಇದರಿಂದಾಗಿ ತಂಡಕ್ಕೆ ಬೃಹತ್ ಗುರಿಯನ್ನು ಬೆನ್ನಟ್ಟಲು ಸಾಧ್ಯವಾಗಲಿಲ್ಲ.

ಕೊನೆಗೂ 140 ಕೋಟಿ ಭಾರತೀಯರ ಕನಸು ನನಸಾಗಿದೆ. ಐಸಿಸಿ ಅಂಡರ್‌-19 ವಿಶ್ವಕಪ್‌ 2026ರ ಟ್ರೋಫಿಗೆ ‘ಯಂಗ್‌ ಇಂಡಿಯಾ’ ಮುತ್ತಿಟ್ಟಿದೆ.‌ ಹರಾರೆಯಲ್ಲಿ ಇಂದು ನಡೆದ ಫೈನಲ್‌ ಪಂದ್ಯದಲ್ಲಿ ವೈಭವ್‌ ಸೂರ್ಯವಂಶಿ ಸ್ಫೋಟಕ ಶತಕ ಹಾಗೂ ಸಂಘಟಿತ ಬೌಲಿಂಗ್‌ ನೆರವಿನಿಂದ ಇಂಗ್ಲೆಂಡ್‌ ವಿರುದ್ಧ ಭಾರತ 100 ರನ್‌ಗಳ ಭರ್ಜರಿ ಜಯಗಳಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

National

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ

Published

on

ನವದೆಹಲಿ,ಜು.: ಸಂಸತ್ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಲಿದೆ. ಆಗಸ್ಟ್ 13 ರವರೆಗೆ ಒಟ್ಟು 19 ದಿನಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಹಲವು ಪ್ರಮುಖ ಮಸೂದೆಗಳ ಮಂಡನೆಯಾಗಲಿದೆ.


ದೇಶದ ವಿವಿಧ ವಿಷಯಗಳ ಕುರಿತು ಆಡಳಿತಾರೂಢ ಎನ್‌ಡಿಎ ಮತ್ತು ವಿರೋಧ ಪಕ್ಷಗಳ ನಡುವೆ ಭಾರಿ ವಾಗ್ವಾದಗಳು ನಡೆಯುವ ಸಾಧ್ಯತೆಯಿದೆ. ಅಧಿವೇಶನ ಶುರುವಾಗುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇಂದಿನಿಂದ ಆಗಸ್ಟ್ 13 ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಪರಿಶೀಲನೆಗಾಗಿ ಎಂಟು ಪ್ರಮುಖ ಮಸೂದೆಗಳನ್ನು ಪಟ್ಟಿ ಮಾಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರೆನ್ ರಿಜಿಜು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

ಅಯೋಧ್ಯೆ ರಾಮಮಂದಿರದಲ್ಲಿನ ದೇಣಿಗೆ ಕಳ್ಳತನದ ಆರೋಪ, ನೀಟ್-ಯುಜಿ (NEET-UG) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಎಥೆನಾಲ್ ಮಿಶ್ರಣಕ್ಕೆ ಸಂಬಂಧಿಸಿದ ವಿವಾದಗಳು ಅಧಿವೇಶನದ ಆರಂಭದಿಂದಲೇ ಪ್ರಮುಖವಾಗಿ ಚರ್ಚೆಯಾಗುವ ನಿರೀಕ್ಷೆಯಿದೆ.

ಚರ್ಚೆಗೆ ನಿಗದಿಯಾಗಿರುವ ಪ್ರಮುಖ ಮಸೂದೆಗಳಲ್ಲಿ ‘ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಮಸೂದೆ, 2026’ ಸೇರಿದ್ದು, ಇದರ ಚರ್ಚೆಗೆ ನಾಲ್ಕು ಗಂಟೆಗಳ ಸಮಯವನ್ನು ನಿಗದಿಪಡಿಸಲಾಗಿದೆ. ಹಾಗೆಯೇ, ‘ಆದಾಯ ತೆರಿಗೆ (ತಿದ್ದುಪಡಿ) ಮಸೂದೆ, 2026’ ರ ಕುರಿತು ಲೋಕಸಭೆಯಲ್ಲಿ ಮೂರು ಗಂಟೆಗಳ ಕಾಲ ಚರ್ಚೆ ನಡೆಯಲಿದೆ.

 

Continue Reading

National

ಮೆಸ್ಸಿಯ ಕೊನೆಯ ವಿಶ್ವಕಪ್ ಕನಸು ಭಗ್ನ’ : ಸ್ಪೇನ್‌ಗೆ ವಿಶ್ವಕಪ್, ಅರ್ಜೆಂಟೀನಾ ಸೋಲು

Published

on

ನ್ಯೂಯಾರ್ಕ್: ಫುಟ್‌ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿಯ ಕೊನೆಯ ವಿಶ್ವಕಪ್ ಗೆಲ್ಲುವ ಕನಸು ಈಡೇರಲಿಲ್ಲ. 2026ರ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ವಿರುದ್ಧ ಅರ್ಜೆಂಟೀನಾ 1-0 ಗೋಲುಗಳ ಅಂತರದಲ್ಲಿ ಸೋತು, ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳಲು ವಿಫಲವಾಯಿತು. ಹೆಚ್ಚುವರಿ ಸಮಯದ 106ನೇ ನಿಮಿಷದಲ್ಲಿ ಫೆರಾನ್ ಟೊರೆಸ್ ಬಾರಿಸಿದ ಏಕೈಕ ಗೋಲು ಸ್ಪೇನ್‌ಗೆ ವಿಶ್ವಕಪ್ ಕಿರೀಟ ತಂದುಕೊಟ್ಟಿತು.

ಪಂದ್ಯದ ಆರಂಭದಿಂದಲೇ ಸ್ಪೇನ್ ಚೆಂಡಿನ ಮೇಲೆ ಹಿಡಿತ ಸಾಧಿಸಿ ಅರ್ಜೆಂಟೀನಾ ಮೇಲೆ ನಿರಂತರ ಒತ್ತಡ ಹೇರಿತು. ಮೆಸ್ಸಿ ನೇತೃತ್ವದ ಅರ್ಜೆಂಟೀನಾ ಕೆಲ ಅವಕಾಶಗಳನ್ನು ಸೃಷ್ಟಿಸಿದರೂ, ಸ್ಪೇನ್‌ನ ಸಂಘಟಿತ ರಕ್ಷಣೆಯನ್ನು ಭೇದಿಸಲು ಸಾಧ್ಯವಾಗಲಿಲ್ಲ. ಗೋಲ್‌ಕೀಪರ್ ಎಮಿಲಿಯಾನೊ ಮಾರ್ಟಿನೆಸ್ ಹಲವು ಅದ್ಭುತ ಸೇವ್‌ಗಳನ್ನು ಮಾಡಿ ತಂಡವನ್ನು ಪಂದ್ಯದಲ್ಲಿ ಉಳಿಸಿದ್ದರು.

ನಿಗದಿತ 90 ನಿಮಿಷಗಳಲ್ಲಿ ಯಾವುದೇ ತಂಡ ಗೋಲು ದಾಖಲಿಸದ ಕಾರಣ ಪಂದ್ಯ ಹೆಚ್ಚುವರಿ ಸಮಯಕ್ಕೆ ಸಾಗಿತು. 106ನೇ ನಿಮಿಷದಲ್ಲಿ ಫೆರಾನ್ ಟೊರೆಸ್ ನಿರ್ಣಾಯಕ ಗೋಲು ಬಾರಿಸಿ ಸ್ಪೇನ್‌ಗೆ ಮುನ್ನಡೆ ತಂದುಕೊಟ್ಟರು. ಕೊನೆಯ ಕ್ಷಣಗಳಲ್ಲಿ ಅರ್ಜೆಂಟೀನಾ ಸಮಬಲ ಸಾಧಿಸಲು ಹೋರಾಡಿದರೂ ಯಶಸ್ವಿಯಾಗಲಿಲ್ಲ.

ಈ ಗೆಲುವಿನೊಂದಿಗೆ ಸ್ಪೇನ್ 2010ರ ಬಳಿಕ ಎರಡನೇ ಬಾರಿ ಫಿಫಾ ವಿಶ್ವಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಮತ್ತೊಂದೆಡೆ, ಮೆಸ್ಸಿಗೆ ಇದು ವಿಶ್ವಕಪ್‌ನಲ್ಲಿ ಕೊನೆಯ ಪಂದ್ಯವಾಗುವ ಸಾಧ್ಯತೆ ಇದ್ದು, ಮತ್ತೊಮ್ಮೆ ಟ್ರೋಫಿ ಎತ್ತುವ ಅವರ ಕನಸು ಭಗ್ನಗೊಂಡಿತು.

Continue Reading

Hassan

ಚೆನ್ನಮ್ಮರವರ ನಿಧನ: ಸೋಮವಾರ ಅಂತ್ಯಕ್ರಿಯೆ

Published

on

ಬೆಂಗಳೂರು/ಹಾಸನ : ಇಂದು ರಾತ್ರಿ 9 ಗಂಟೆಗೆ ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಪದ್ಮನಾಭನಗರಕ್ಕೆ ರವಾನಿಸಲಾಗುತ್ತದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಗೆ ತರಲಿದ್ದು, ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಸೋಮವಾರ ಚೆನ್ನಮ್ಮ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುತ್ತದೆ.

Continue Reading

Trending

error: Content is protected !!