Chikmagalur
ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾ*ವು
ಕಡೂರು: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಮಾರು 60 ವರ್ಷದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಕಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಶಿವಾಜಿ ಬಿನ್ ವೆಂಕಪ್ಪ (ಸುಮಾರು 60 ವರ್ಷ) ಎಂದು ಗುರುತಿಸಲಾಗಿದೆ. ಅವರ ಪೂರ್ಣ ವಿಳಾಸ ಹಾಗೂ ಸಂಬಂಧಿಕರ ಮಾಹಿತಿ ತಿಳಿದುಬಂದಿಲ್ಲ.

ಅ.6ರಂದು ಸಂಜೆ ಸುಮಾರು 6.45ರ ವೇಳೆಗೆ ತಂಗಲಿ ತಾಂಡ್ಯ ಗ್ರಾಮದ ಸಮೀಪದ ಕಡೂರು–ಬಾಣಾವರ ರಾಷ್ಟ್ರೀಯ ಹೆದ್ದಾರಿ-69ರಲ್ಲಿ ಶಿವಾಜಿ ಅವರು ಗೆದ್ಲೆಹಳ್ಳಿ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ, ಯಾವುದೋ ವಾಹನದ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಅವರಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಅಪಘಾತದ ಬಳಿಕ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ.
ಡಿಕ್ಕಿಯ ಪರಿಣಾಮ ಶಿವಾಜಿ ಅವರ ಕೈ, ಸೊಂಟ ಹಾಗೂ ಮೂ ಗಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗಿತ್ತು. ಸ್ಥಳದಲ್ಲಿದ್ದ ಸಾರ್ವಜನಿಕರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಆಗಮಿಸಿದ್ದು, ಗಾರೆ ಕೆಲಸ ಮಾಡುತ್ತಿದ್ದ ರಾಜ ಹಾಗೂ ಅವರ ಸ್ನೇಹಿತ ನವೀನ್ ಗಾಯಾಳುವನ್ನು ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಶಿವಾಜಿ ಅವರನ್ನು ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಸುಮಾರು 10 ಗಂಟೆಗೆ ಮೃತಪಟ್ಟಿದ್ದಾರೆ.
ಮೃತ ಶಿವಾಜಿ ಅವರು ತಾವು ಅನಾಥರಾಗಿದ್ದು, ಯಾರೂ ಇಲ್ಲ ಎಂದು ಹೇಳಿಕೊಂಡಿದ್ದರು ಎನ್ನಲಾಗಿದೆ. ಅವರ ವಿಳಾಸ ಹಾಗೂ ಸಂಬಂಧಿಕರ ಮಾಹಿತಿ ತಿಳಿಯದ ಕಾರಣ ದೂರು ನೀಡಲು ವಿಳಂಬವಾಗಿದೆ ಎಂದು ಪಿರ್ಯಾದುದಾರ ರಾಜ ಪೊಲೀಸರಿಗೆ ತಿಳಿಸಿದ್ದಾರೆ.
ಅಪಘಾತಕ್ಕೆ ಕಾರಣವಾದ ಅಪರಿಚಿತ ವಾಹನ ಹಾಗೂ ಚಾಲಕನನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಕಡೂರು ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಮನವಿ ಮಾಡಲಾಗಿದೆ. ಅಲ್ಲದೆ, ಮೃತರ ಅಂತ್ಯಸಂಸ್ಕಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.
ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ವಾಹನ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Chikmagalur
ಮಳೆ ಇಲ್ಲ, ಬೆಳೆ ಇಲ್ಲ, ಸಾಲದ ಹೊರೆ: ಕಡೂರಿನಲ್ಲಿ ಮೂರು ದಿನಗಳ ಅಂತರದಲ್ಲಿ ಇಬ್ಬರು ರೈತರ ಆ*ತ್ಮಹ*ತ್ಯೆ
ಚಿಕ್ಕಮಗಳೂರು: ಮಳೆಯ ಕೊರತೆ, ಕೃಷಿ ನಷ್ಟ ಹಾಗೂ ಸಾಲದ ಹೊರೆ ರೈತಾಪಿ ಬದುಕನ್ನು ಸಂಕಷ್ಟಕ್ಕೆ ದೂಡಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ಮೂರು ದಿನಗಳ ಅಂತರದಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಕಡೂರು ತಾಲ್ಲೂಕಿನ ಭೈರಗೊಂಡನಹಳ್ಳಿ ಗ್ರಾಮದ ಬಸವರಾಜ್ (44) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಕೊತ್ತಿಗೆರೆ ಗ್ರಾಮದ ಶಂಕರಯ್ಯ (60) ವಿಷ ಸೇವಿಸಿ ಮೃತಪಟ್ಟಿದ್ದಾರೆ. ಇಬ್ಬರೂ ಕೃಷಿಗಾಗಿ ಖಾಸಗಿ ಫೈನಾನ್ಸ್ ಸಂಸ್ಥೆಗಳು ಹಾಗೂ ಕೈ ಸಾಲದ ಮೂಲಕ ಹಣ ಪಡೆದಿದ್ದರು ಎನ್ನಲಾಗಿದೆ.

ಭೈರಗೊಂಡನಹಳ್ಳಿ ಗ್ರಾಮದ ಬಸವರಾಜ್ ಅವರು ಮೂರು ಎಕರೆ ಜಮೀನಿನ ಅಭಿವೃದ್ಧಿಗಾಗಿ 4.80 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು. ಇನ್ನು ಕೊತ್ತಿಗೆರೆ ಗ್ರಾಮದ ಶಂಕರಯ್ಯ ಅವರು ಮೂರು ಎಕರೆ ಜಮೀನಿನಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ನಾಲ್ಕು ಲಕ್ಷ ರೂಪಾಯಿ ಸಾಲ ಮಾಡಿದ್ದರು ಎಂದು ತಿಳಿದುಬಂದಿದೆ. ಕಡೂರು ತಾಲ್ಲೂಕಿನಲ್ಲಿ ಮಳೆ ಕೈಕೊಟ್ಟಿರುವುದರಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದೆ. ಬೆಳೆ ನಿರೀಕ್ಷೆಯಲ್ಲಿದ್ದ ರೈತರು ಮಳೆಯ ಕೊರತೆ ಹಾಗೂ ಸಾಲದ ಮರುಪಾವತಿಯ ಒತ್ತಡದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲ ತೀರಿಸಲಾಗದೆ ಮನನೊಂದು ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಳೆ ಕೈಕೊಟ್ಟಿರುವ ಬೆನ್ನಲ್ಲೇ ಸಾಲದ ಹೊರೆ ರೈತರ ಬದುಕನ್ನು ಕಂಗೆಡಿಸುತ್ತಿದ್ದು, ಕೃಷಿ ಸಂಕಷ್ಟ ಮತ್ತೊಮ್ಮೆ ಅನ್ನದಾತರ ಬದುಕಿನ ಬಗ್ಗೆ ಆತಂಕ ಮೂಡಿಸಿದೆ.
Chikmagalur
ಕಾಫಿನಾಡ ಮಲೆನಾಡಿನಲ್ಲಿ ಹಿಂಗಾರು ಮಳೆ ಅಬ್ಬರ: ಬಿರುಗಾಳಿಗೆ ಹಾರಿ ಹೋದ ಶಾಲೆಯ ನೂರಾರು ಹೆಂಚುಗಳು!
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಹಿಂಗಾರು ಮಳೆ ಅಬ್ಬರ ಜೋರಾಗಿದೆ. ಮೂಡಿಗೆರೆ ತಾಲ್ಲೂಕಿನಾದ್ಯಂತ ಬಿರುಗಾಳಿಯೊಂದಿಗೆ ಧಾರಾಕಾರ ಮಳೆ ಸುರಿಯುತ್ತಿದ್ದು, ಗಾಳಿ-ಮಳೆಯ ಆರ್ಭಟಕ್ಕೆ ಜಾಣಿಗೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ನೂರಾರು ಹೆಂಚುಗಳು ಹಾರಿ ಹೋಗಿವೆ. ಮೂಡಿಗೆರೆ ತಾಲ್ಲೂಕಿನ ಜಾಣಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಿರುಗಾಳಿಯ ತೀವ್ರತೆಗೆ ಶಾಲೆಯ ಮೇಲ್ಛಾವಣಿಯ ಹೆಂಚುಗಳು ಹಾರಿ ಬಿದ್ದಿವೆ. ಇದರಿಂದ ಶಾಲೆಯ ಕಟ್ಟಡಕ್ಕೆ ಹಾನಿಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿದೆ.

ಇನ್ನು ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಸೇರಿದಂತೆ ಮಲೆನಾಡಿನ ವಿವಿಧ ಭಾಗಗಳಲ್ಲೂ ಮಳೆ ಅಬ್ಬರಿಸುತ್ತಿದೆ. ಹಲವು ದಿನಗಳಿಂದ ಮಳೆಯ ನಿರೀಕ್ಷೆಯಲ್ಲಿದ್ದ ಮಲೆನಾಡಿನ ಕಾಫಿ ಬೆಳೆಗಾರರು ಇದೀಗ ಮಳೆಯಾಗುತ್ತಿರುವುದರಿಂದ ಕಾಫಿ ಬೆಳೆ ಉಳಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ. ಒಂದೆಡೆ ಕಾಫಿ ಬೆಳೆಗೆ ಮಳೆಯ ಅಗತ್ಯವಿದ್ದರೆ, ಮತ್ತೊಂದೆಡೆ ಬಿರುಗಾಳಿ ಸಹಿತ ಮಳೆಯಿಂದಾಗಿ ಆಸ್ತಿ-ಪಾಸ್ತಿಗೆ ಹಾನಿಯಾಗುವ ಆತಂಕ ಎದುರಾಗಿದೆ. ಮಲೆನಾಡಿನಲ್ಲಿ ಹಿಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಹವಾಮಾನದ ಬದಲಾವಣೆಗಳತ್ತ ಜನರು ಗಮನಹರಿಸಿದ್ದಾರೆ.
Chikmagalur
ಬಿರುಗಾಳಿ ಮಳೆಗೆ ಹಾರಿಹೋದ ಶಾಲೆಯ ಹೆಂಚುಗಳು
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಿಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಮಲೆನಾಡಿನ ಹಲವು ಭಾಗಗಳಲ್ಲಿ ಬಿರುಗಾಳಿಯೊಂದಿಗೆ ಧಾರಾಕಾರ ಮಳೆ ಸುರಿಯುತ್ತಿದೆ.

ಮೂಡಿಗೆರೆ ತಾಲೂಕಿನ ಜಾಣಿಗೆ ಗ್ರಾಮದಲ್ಲಿ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಸರ್ಕಾರಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿಯ ನೂರಾರು ಹೆಂಚುಗಳು ಹಾರಿ ಹೋಗಿವೆ. ಗಾಳಿಯ ರಭಸಕ್ಕೆ ಮೇಲ್ಛಾವಣಿಯ ಹೆಂಚುಗಳು ಕಿತ್ತುಬಿದ್ದಿದ್ದು, ಶಾಲಾ ಕಟ್ಟಡಕ್ಕೆ ಹಾನಿಯಾಗಿದೆ.
ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್‌ನಲ್ಲೂ ಮಳೆ
ಮೂಡಿಗೆರೆ ತಾಲೂಕು, ಕೊಟ್ಟಿಗೆಹಾರ ಹಾಗೂ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲೂ ಮಳೆಯ ಅಬ್ಬರ ಮುಂದುವರಿದಿದೆ. ನಿರಂತರವಾಗಿ ಬಿರುಗಾಳಿ ಸಹಿತ ಮಳೆ ಸುರಿಯುತ್ತಿರುವುದರಿಂದ ಕೆಲವೆಡೆ ಜನಜೀವನದ ಮೇಲೂ ಪರಿಣಾಮ ಉಂಟಾಗಿದೆ.
ಕಾಫಿ ಬೆಳೆಗಾರರಲ್ಲಿ ಮಳೆ ನಿರೀಕ್ಷೆ
ಮಳೆಯ ಅಬ್ಬರದಿಂದ ಜನಜೀವನಕ್ಕೆ ತೊಂದರೆಯಾಗುತ್ತಿದ್ದರೂ, ಕಾಫಿ ಬೆಳೆಗಾರರು ಮಾತ್ರ ಮಳೆಯನ್ನೇ ಎದುರು ನೋಡುತ್ತಿದ್ದಾರೆ. ಕಾಫಿ ಬೆಳೆಗೆ ಅಗತ್ಯ ತೇವಾಂಶ ದೊರೆಯಲು ಹಿಂಗಾರು ಮಳೆ ಪ್ರಮುಖವಾಗಿರುವ ಹಿನ್ನೆಲೆಯಲ್ಲಿ ಮಲೆನಾಡಿನ ರೈತರು ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ.
-
Mysore22 hours agoನಂಜನಗೂಡು ದೇಬೂರು ಸರ್ಕಾರಿ ಕಾಲೇಜಿನ ಆವ್ಯವಸ್ಥೆ ಬಯಲು : ಮಾಜಿ ಶಾಸಕ ಬಿ.ಹರ್ಷವರ್ಧನ್ ಖುದ್ದು ಭೇಟಿ
-
National23 hours agoತಮಿಳುನಾಡಿಗೆ 15 ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ CWMA ಆದೇಶ
-
Chikmagalur20 hours agoಉಪ ವಲಯ ಅರಣ್ಯಾಧಿಕಾರಿ ರವಿಕುಮಾರ್ ಅಮಾನತು
-
Mysore23 hours agoನಾಳೆ ಅ.9ಕ್ಕೆ ನಂಜನಗೂಡಿನಲ್ಲಿ BSP ಬಹುಜನರ ಸಂಕಲ್ಪ ಸಮಾವೇಶ
-
National21 hours agoಜಿಎಸ್ಟಿ ಅಡಿಯಲ್ಲಿ ಬಂಧನ ಅಧಿಕಾರ ರದ್ದು ಪ್ರಸ್ತಾವನೆ: ವಿಚಾರಣಾ ಮಿತಿ ₹5 ಕೋಟಿಗೆ ಹೆಚ್ಚಳ
-
National4 hours agoಇಸ್ರೇಲ್ನಿಂದ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ಗೆ ಶೌರ್ಯ ಪ್ರಶಸ್ತಿ ಘೋಷಣೆ
-
Manglore2 hours agoಕೊರಿಯರ್ನಲ್ಲಿ ಎಂಡಿಎಂಎ ಸಾಗಿಸುತ್ತಿದ್ದ ಜಾಲಕ್ಕೆ ಪೊಲೀಸ್ ಬಲೆ- ಮೂವರು ಅರೆಸ್ಟ್, 1.58 ಕೋಟಿ ಮಾದಕದ್ರವ್ಯ ವಶಕ್ಕೆ
-
Chikmagalur2 hours agoಮಳೆ ಇಲ್ಲ, ಬೆಳೆ ಇಲ್ಲ, ಸಾಲದ ಹೊರೆ: ಕಡೂರಿನಲ್ಲಿ ಮೂರು ದಿನಗಳ ಅಂತರದಲ್ಲಿ ಇಬ್ಬರು ರೈತರ ಆ*ತ್ಮಹ*ತ್ಯೆ
