Chamarajanagar
ಅಪರಿಚಿತ ಶವ : ವಾರಸುದಾರರ ಪತ್ತೆಗೆ ಸಹಕರಿಸಲು ಮನವಿ
ಚಾಮರಾಜನಗರ: ಬೇಡರಪುರ ಗ್ರಾಮದ ಬಳಿಯಿರುವ ಪ್ರೇಸ್ಟೀಜ್ ಫ್ಯಾಕ್ಟರಿಯ ಬಳಿ ಅಪರಿಚಿತ ಶವ ಪತ್ತೆಯಾಗಿದ್ದು, ವಾರಸುದಾರರ ಸುಳಿವಿಗೆ ಸಹಕರಿಸಲು ಕೋರಲಾಗಿದೆ.
ಸುಮಾರು 35 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯಾಗಿದ್ದು, 158 ಸೆಂ.ಮೀ ಎತ್ತರ, ಕೋಲು ಮುಖ, ತೆಳ್ಳನೆ ಶರೀರ, ಎಣ್ಣೆಗೆಂಪು ಮೈ ಬಣ್ಣ ಹೊಂದಿದ್ದು, ಕುರುಚಲು ಗಡ್ಡ, ಕಪ್ಪು ಮೀಸೆ ಹಾಗೂ ಕಪ್ಪು, ಬಿಳಿ ಮಿಶ್ರಿತ ತಲೆ ಕೂದಲು ಇರುತ್ತದೆ. ಕಪ್ಪು, ಹಸಿರು ಮತ್ತು ಬಿಳಿ ಮಿಶ್ರಿತ ಗೆರೆಗಳುಳ್ಳ ತುಂಬು ತೋಳಿನ ಶರ್ಟ್ ಧರಿಸಿದ್ದು, ಎದೆಯ ಭಾಗದಲ್ಲಿ ಎಸು ಎಂಬ ಹಚ್ಚೆ ಇರುತ್ತದೆ.

ಇವರ ವಾರಸದಾರರು ಇದ್ದಲ್ಲಿ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Chamarajanagar
ಡಾ.ಬಿ.ಆರ್. ಅಂಬೇಡ್ಕರ್ ಯುವಕರ ಸಂಘದ ನಾಮಫಲಕ ಉದ್ಘಾಟನೆ
ಚಾಮರಾಜನಗರ: ತಾಲೂಕಿನ ನಾಗವಳ್ಳಿ ಗ್ರಾಮದಲ್ಲಿ ನೂತನವಾಗಿ ನೊಂದಣಿಯಾದ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ನಾಮಫಲಕ ಉದ್ಘಾಟನೆಯನ್ನು ಗ್ರಾಮದ ಯಜಮಾನರು ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮದ ಯಜಮಾನರು, ಗ್ರಾಮ ಪಂಚಾಯಿತಿ ಸದಸ್ಯರು, ಬೌದ್ಧವಿಹಾರದ ಉಪಾಸಕರು, ಗ್ರಾಮದ ಮುಖಂಡರು, ಯುವಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.
Chamarajanagar
ಕಠಿಣ ಶ್ರಮದಿಂದ ಗೆಲುವು ಖಚಿತ: ಡಾ. ಶಾಂತರಾಜು
ಚಾಮರಾಜನಗರ: ಕಠಿಣ ಪರಿಶ್ರಮದಿಂದ ಕ್ರೀಡೆಯನ್ನು ಅಭ್ಯಾಸ ಮಾಡಿದರೆ ಗೆಲುವು ಖಚಿತವಾಗಲಿದೆ ಎಂದು ಚಾ.ನಗರ ವಿವಿ ದೈಹಿಕ ಶಿಕ್ಷಣದ ನಿರ್ದೇಶಕ ಡಾ.ಶಾಂತರಾಜು ಸಲಹೆ ನೀಡಿದರು.
ಚಾ.ನಗರ ವಿವಿಯ ಆವರಣದಲ್ಲಿ ಕ್ರೀಡಾಪಟುಗಳಿಗೆ ಶುಭ ಹಾರೈಸಿ ಮಾತನಾಡಿದರು. ಡಿ.10 ರಿಂದ 14 ರ ವರೆಗೆ ಆಂಧ್ರಪ್ರದೇಶದಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ ವಿಶ್ವವಿದ್ಯಾನಿಲಯದ ವಾಲಿಬಾಲ್ ಪಂದ್ಯಾವಳಿಯಲ್ಲಿ ಚಾಮರಾಜನಗರ ವಿಶ್ವವಿದ್ಯಾನಿಲಯದ ತಂಡವು ಭಾಗವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿವಿಯ ಹಣಕಾಸು ಅಧಿಕಾರಿ ನಾಗೇಶ್ ಮಾತನಾಡಿ ಕ್ರೀಡಾಪಟುಯಲ್ಲಿ ಸೋಲು ಗೆಲುವು ಸಹಜ ಆದರೆ ಭಾಗವಹಿಸುವುದು ಬಹಳ ಮುಖ್ಯ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ತಂಡದ ತರಬೇತುದಾರ ಜಯಶಂಕರ್, ಪುಟ್ಟರಾಜು, ತಂಡದ ಮ್ಯಾನೇಜರ್ ಡಾ.ಶಂಕರ್, ಕ್ರೀಡಾ ಸಲಹಾ ಸಮಿತಿ ಸದಸ್ಯ ಜಿ ಬಂಗಾರು, ತಂಡದ ನಾಯಕ ಕಿರಣ್, ಕ್ರೀಡಾ ವಿದ್ಯಾರ್ಥಿಗಳಾದ ರಾಹುಲ್, ಅಭಿ, ವಿಕಾಸ್, ಯಶವಂತ್ ನಾಯಕ್, ಕಾರ್ತಿಕ್ ಯಶವಂತ್, ಮಹದೇವಪ್ರಸಾದ್, ಸಿದ್ದರಾಜು, ಸಂಜಯ್, ಪ್ರವೀಣ್ ಇತರ ವಿದ್ಯಾರ್ಥಿಗಳು ಹಾಜರಿದ್ದರು.
Chamarajanagar
ಶ್ರೀರಾಮಚಂದ್ರ ವಿದ್ಯಾ ಸಂಸ್ಥೆಯಲ್ಲಿ ಅಂಬೇಡ್ಕರ್ ರವರ 69 ನೇ ಪರಿನಿರ್ವಾಣ ದಿನ
ಚಾಮರಾಜನಗರ: ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಿಂದ ಇತ್ತೀಚೆಗೆ ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗಿದೆ. ಅಂಬೇಡ್ಕರ್ ಅವರನ್ನು ದೇಶದ ಮೂಲೆ ಮೂಲೆಗಳಲ್ಲಿ ನೆನೆಯುತ್ತಾರೆ ಎಂದು ಶ್ರೀರಾಮಚಂದ್ರ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎಂ.ಎಸ್.ಮಾದಯ್ಯ ತಿಳಿಸಿದರು.
ನಗರದ ನ್ಯಾಯಾಲಯ ರಸ್ತೆಯಲ್ಲಿ ಇರುವ ಶ್ರೀರಾಮಚಂದ್ರ ವಿದ್ಯಾ ಸಂಸ್ಥೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರ 69 ನೇ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರದ ಮುಂದೆ ಕ್ಯಾಂಡಲ್ ಬೆಳಗಿಸಿ ನಮನ ಸಲ್ಲಿಸಿ ಅವರು ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ಸರ್ವರಿಗೂ ನ್ಯಾಯವನ್ನು ಒದಗಿಸಿ ಕೊಟ್ಟಿದ್ದಾರೆ. ಅವರ ಚಿಂತನೆಗಳನ್ನು ವಿದ್ಯಾರ್ಥಿಗಳು ಅರಿತರೆ ಉತ್ತಮ ವಿದ್ಯಾಥಿಯಾಗಬಹುದು ಎಂದು ಹೇಳಿದರು.
ಸಂಸ್ಥೆಯ ಕಾರ್ಯದರ್ಶಿ ರುದ್ರಮೂರ್ತಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ರತ್ನಮ್ಮ, ದೈಹಿಕ ಶಿಕ್ಷಕ ರಂಗಸ್ವಾಮಿ, ಕುಮಾರ್ ಯಶ್ ಪಾಲ್, ಪರಶಿವಮೂರ್ತಿ ಮಂಜುಳ ಹಾಗೂ ಇತರರು ಉಪಸ್ಥಿತರಿದ್ದರು.
-
State10 hours agoಡಿವೈಡರ್ಗೆ ಕಾರ್ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ
-
Hassan6 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
State22 hours agoSSLC ಪಾಸ್ ಆದವರಿಗೆ ಸರ್ಕಾರಿ ನೌಕರಿ ಚಾನ್ಸ್! ಸಂಪೂರ್ಣ ಮಾಹಿತಿ ಇಲ್ಲಿದೆ…
-
Mysore24 hours agoನಾಳೆಯಿಂದ ಸಿಗ್ಮಾ ಆಸ್ಪತ್ರೆಯಲ್ಲಿ ಉಚಿತ ಥೈರಾಯ್ಡ್ ತಪಾಸಣೆ
-
National23 hours agoಪಲಾಶ್ ಮುಚ್ಚಲ್ರೊಂದಿಗೆ ಮದುವೆ ಮುಂದೂಡಿದ ನಂತರ ಮೊದಲ ಪೋಸ್ಟ್ ಹಂಚಿಕೆಕೊಂಡ ಸ್ಮೃತಿ ಮಂದಾನ
-
Hassan9 hours agoಅಂಬೇಡ್ಕರ್ ತತ್ತ್ವ, ಸಿದ್ಧಾಂತಗಳು ಶಾಶ್ವತ: ಸಂಸದ ಶ್ರೇಯಸ್ ಪಟೇಲ್
-
Chikmagalur12 hours agoಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಹ*ತ್ಯೆ
-
National24 hours agoಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸುವಂತೆ ಧರ್ಮೇಂದ್ರ ಪ್ರಧಾನ್ಗೆ ಪತ್ರ ಬರೆದ ಎಚ್ಡಿಕೆ
