Chikmagalur
ಕಾಫಿನಾಡಲ್ಲಿ ನಿಲ್ಲದ ಕಾಡಾನೆ ದಾಳಿ: ಕಾರ್ಮಿಕ ಗಣಪತಿ ಪ್ರಾಣಾಪಾಯದಿಂದ ಪಾರು
ಚಿಕ್ಕಮಗಳೂರು : ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಮತ್ತೊಂದು ಕಾಡಾನೆ ದಾಳಿ ಪ್ರಕರಣ ದಾಖಲಾಗಿದ್ದು, ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿದೆ. ಆದರೆ ಕಾರ್ಮಿಕ ಗಣಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆ ಸಮೀಪದ ಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರ್ಮಿಕ ಗಣಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರ್ಮಿಕ ಶಿವಮೊಗ್ಗ ಜಿಲ್ಲೆ ಸೊರಬ ಮೂಲದ ಗಣಪತಿ ಎಂದು ಗುರುತಿಸಲಾಗಿದೆ.

ತೋಟದಲ್ಲೇ ಮೂರು ಕಾಡಾನೆಗಳು ಬೀಡು ಬಿಟ್ಟಿವೆ. ಆನೆ ದಾಳಿಯಿಂದ ಪ್ರಜ್ಞೆ ತಪ್ಪಿರೋ ಕೂಲಿ ಕಾರ್ಮಿಕ, ಬದುಕಿರುವ ಸಾಧ್ಯತೆ ತೀರಾ ಕಡಿಮೆ ಎಂದು ಹೇಳಲಾಗುತ್ತಿದೆ. ಈ ಘಟನೆಯಿಂದ ಕಾರ್ಮಿಕನ ಎಡಗೈ ನಡುಗುತ್ತಿದ್ದು ಪ್ರಜ್ಞಾಹೀನನಾಗಿದ್ದಾರೆ.
ಕಾರ್ಮಿಕ ಗಣಪತಿಯನ್ನು ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಶಿವಮೊಗ್ಗಕ್ಕೆ ರವಾನಿಸಲಾಗಿದೆ.
ಇನ್ನೂ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chikmagalur
ಗ್ರಾ.ಪಂ.ಸದಸ್ಯ ಗಣೇಶ್ ಕೊಲೆ ಪ್ರಕರಣ: ಐವರ ಬಂಧನ, ಮೂವರಿಗಾಗಿ ತೀವ್ರ ಶೋಧ
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಪಕ್ಷದ ಗ್ರಾ.ಪಂ. ಸದಸ್ಯ ಗಣೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನ ಆರೋಪಿಗಳಲ್ಲಿ ಐವರನ್ನು ಬಂಧಿಸಿದ್ದು, ಮೂವರಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.
ಚಿಕ್ಕಮಗಳೂರು ಎಸ್‌ಪಿ ವಿಕ್ರಂ ಅಮಟೆ ಅವರು ನಾಲ್ಕು ತಂಡ ರಚಿಸಿ ತನಿಖೆಗೆ ಸೂಚಿಸಿದ್ದರು. ಹಾಗಾಗಿ ತಲೆಮರೆಸಿಕೊಂಡಿರೋ ಅಜಯ್, ನಿಥಿನ್ ಅಲಿಯಾಸ್ ಸೈನ್ಸ್, ದರ್ಶನ್ ಅಲಿಯಾಸ್ ಜಪಾನ್ ಗಾಗಿ ತೀವ್ರ ಶೋಧ ಕಾರ್ಯಾಚರಣೆ ಮಾಡಲಾಗುತ್ತಿದೆ. ಮೊನ್ನೆಯಿಂದ ತಲೆಮರೆಸಿಕೊಂಡಿರೋ ಮೂವರಿಗಾಗಿ ತೀವ್ರ ಹುಡುಕಾಟವನ್ನು ಸಖರಾಯಪಟ್ಟಣದಲ್ಲಿ ಮುಂದುವರಿಸಿದ್ದು, ಪೊಲೀಸ್‌ರು ಬಿಗಿ ಬಂದೋಬಸ್ತ್ ಮಾಡಲಾಗಿದೆ.

ನಿನ್ನೆ 100 ಪೊಲೀಸರು, ಒಂದು ಕೆ.ಎಸ್.ಆರ್.ಪಿ ತುಕಡಿ ನಿಯೋಜಿಸಿದ್ದ ಪೊಲೀಸ್ ಇಲಾಖೆಯೂ, ಇಂದು ಮತ್ತೆ ಸಖರಾಯಪಟ್ಟಣದಲ್ಲಿ 80 ಪೊಲೀಸರ ನಿಯೋಜನೆ ಮಾಡಿದೆ. ಅಲ್ಲದೇ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದೆ.
Chikmagalur
ಜನಸಂಪರ್ಕ ಸಭೆ: ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಬಗ್ಗೆ ಸಚಿವರ ಭರವಸೆ
ಚಿಕ್ಕಮಗಳೂರು: ರಾಜ್ಯದ ಎಲ್ಲ ಜಿಲ್ಲೆಗಳ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆಗಳನ್ನು ನಡೆಸಿ ಪರಿಹಾರ ಕಲ್ಪಿಸುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಪ್ರತೀ ಜಿಲ್ಲೆಯಲ್ಲಿ ಜನಸಂಪರ್ಕ ಸಭೆ ನಡೆಸಲಾಗುತ್ತಿದ್ದು, ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ ಎಂದು ರಾಜ್ಯ ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ಇಂದು ಆಯೋಜಿಸಿದ್ದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕೆ ರಾಜಧಾನಿಗೆ ಬರುವ ಬದಲು ಆಯಾ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗಿದ್ದು, ಅವೆಲ್ಲಕ್ಕೂ ಅಧಿಕಾರಿಗಳ ಮೂಲಕ ಅಗತ್ಯ ಕ್ರಮ ಕೈಗೊಂಡು ಪರಿಹಾರ ಒದಗಿಸಲಾಗುವುದು ಎಂದರು.
ಶಾಸಕ ಹೆಚ್.ಡಿ.ತಮ್ಮಯ್ಯ ಮಾತನಾಡಿ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನರ ಬಳಿಗೆ ಸರ್ಕಾರವೇ ತೆರಳಿ ಜನರ ಸಮಸ್ಯೆಗಳನ್ನು ಅರಿತು ಬಗೆಹರಿಸಬೇಕು ಎಂಬ ಪರಿಕಲ್ಪನೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ನಿರ್ದೇಶನದಂತೆ ಈ ಸಭೆ ನಡೆಸಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಈಗಾಗಲೇ 4 ರಿಂದ 6 ಬಾರಿ ಜನಸಂಪರ್ಕ ಸಭೆಗಳನ್ನು ಯಶಸ್ವಿಯಾಗಿ ನಡೆಸಿರುವ ಕೀರ್ತಿ ನಮ್ಮ ಉಸ್ತುವಾರಿ ಸಚಿವರಿಗೆ ಸಲ್ಲುತ್ತದೆ ಎಂದರು.
ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪಿಸಲಾಗಿದ್ದು, ರಾಜ್ಯದಲ್ಲೇ ನಮ್ಮ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಸುಮಾರು 2,012 ಕೋಟಿ ರೂ. ಈ ಐದು ಗ್ಯಾರಂಟಿ ಯೋಜನೆಗಳಿಗೆ ಈ ಜಿಲ್ಲೆಯಲ್ಲಿ ವಿನಿಯೋಗವಾಗುತ್ತಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.
ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಪ್ರಾಸ್ತಾವಿಕ ಮಾತನಾಡಿ, ಕಳೆದ ಎರಡೂವರೆ ವರ್ಷದಲ್ಲಿ ಜನತಾ ದರ್ಶನ ಕಾರ್ಯಕ್ರಮಗಳನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ನಡೆಸಲಾಗಿದೆ. ಅದರಲ್ಲಿ ಒಟ್ಟು ನಾವು ೮೨೯ ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ಅವುಗಳಲ್ಲಿ 496 ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಆ ಪೈಕಿ ಶೇ.27 ರಷ್ಟು ಅರ್ಜಿಗಳನ್ನು ಸಕಾರಾತ್ಮಕವಾಗಿ ಇತ್ಯರ್ಥಪಡಿಸಿರುವುದಾಗಿ ತಿಳಿಸಿದರು.

ಮುಖ್ಯಮಂತ್ರಿಗಳ ಜನತಾದರ್ಶನ ಕಾರ್ಯಕ್ರಮದಲ್ಲೂ ಈ ಜಿಲ್ಲೆಯ 49 ಅರ್ಜಿಗಳು ಸ್ವೀಕೃತಿಯಾಗಿವೆ. ಉಳಿದಂತೆ ಶಾಸಕರುಗಳು ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನತಾ ದರ್ಶನ ಮತ್ತು ಸಮ್ಮೇಳನಗಳನ್ನು ನಡೆಸಿದ್ದಾರೆ. ಅಲ್ಲದೆ, ಜಿಲ್ಲಾ ಪಂಚಾಯಿತಿಯಿಂದ ಗ್ರಾ.ಪಂ. ಮಟ್ಟದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕಳೆದ ಒಂದು ವರ್ಷದಲ್ಲಿ ನಮ್ಮ ಜಿಲ್ಲೆಯಲ್ಲಿ 8,92,290 ಅರ್ಜಿಗಳು ಸ್ವೀಕೃತಿಯಾಗಿವೆ. ಸುಮಾರು ಶೇ.10 ರಿಂದ 12 ರಷ್ಟು ಅರ್ಜಿಗಳನ್ನು ಇತ್ಯರ್ಥಪಡಿಸಲು ಸಾಧ್ಯವಾಗಿಲ್ಲ. ಇದಕ್ಕೆ ತಂತ್ರಾಂಶದಲ್ಲಿನ ಸಮಸ್ಯೆಗಳು ಕಾರಣವಾಗಿದೆ. ಅದನ್ನು ಸರಿಪಡಿಸಲು ಈಗ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮಲ್ಲಿ 94 ಸಾವಿರ ಪೌತಿ ಖಾತೆಗಳಿದ್ದವು. ಅವುಗಳಲ್ಲಿ ಇದುವರೆಗೆ 22 ಸಾವಿರ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿದೆ. ಪ್ರಾದೇಶಿಕ ಸಾರಿಗೆ ಇಲಾಖೆ, ಸರ್ವೇ ಇಲಾಖೆಗೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳ ಇತ್ಯರ್ಥಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಇದಲ್ಲದೆ ತಂತ್ರಾಂಶಗಳನ್ನು ಸದ್ಭಳಕೆ ಮಾಡಿಕೊಂಡು ಪ್ರತಿಯೊಂದು ಅರ್ಜಿಯನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇವುಗಳಲ್ಲಿ ಶೇ.58 ರಷ್ಟು ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಅವುಗಳಲ್ಲಿ ಪೋಡಿ ಪ್ರಕರಣಗಳು, ದಾರಿಗೆ ಸಂಬಂಧಿಸಿದ ಅರ್ಜಿಗಳು, ಆರ್‌ಟಿಸಿ ಸರಿಪಡಿಸುವಿಕೆ ಪ್ರಕರಣಗಳು ಪ್ರಮುಖವಾದವು ಎಂದರು.

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಟಿ.ಡಿ.ರಾಜೇಗೌಡ, ಶಾಸಕ ಜಿ.ಹೆಚ್.ಶ್ರೀನಿವಾಸ್, ಮೆಸ್ಕಾಂ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರೂ ಆದ ಹರೀಶ್ ಕುಮಾರ್, ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಕ.ರಾ.ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷರಾದ ಬಿ.ಹೆಚ್.ಹರೀಶ್, ಜಿ.ಪಂ. ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಜಿಲ್ಲಾಮಟ್ಟ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.
Chikmagalur
‘ಮಾದರಿ ಗ್ರಾಮ’ ಪಿ.ಹೊಸಹಳ್ಳಿಯಲ್ಲಿ 50 ಲಕ್ಷ ವೆಚ್ಚದ ವಿದ್ಯುತ್ ಉನ್ನತೀಕರಣಕ್ಕೆ ಚಾಲನೆ
ಶ್ರೀರಂಗಪಟ್ಟಣ : ತಾಲೂಕಿನ ವ್ಯಾಪ್ತಿಯಲ್ಲಿ ‘ಮಾದರಿ ಗ್ರಾಮ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪಿ.ಹೊಸಹಳ್ಳಿ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದ ವಿದ್ಯುತ್ ಮೂಲ ಉನ್ನತೀಕರಣಕ್ಕೆ ಚಾಲನೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಭೂಮಿಪೂಜೆ ಮೂಲಕ ಚಾಲನೆ ನೀಡಿದರು.
ಗ್ರಾಮವನ್ನು ಉನ್ನತೀಕರಿಸಿ, ಉನ್ನತೀಕರಿಸಿದ ಗ್ರಾಮವನ್ನಾಗಿಸಲು ಈ ಗ್ರಾಮದ ಜೊತೆಗೆ ಐದು ಗ್ರಾಮಗಳ ಮೂಲಭೂತ ಸೌಲಭ್ಯಗಳನ್ನು ಉನ್ನತೀಕರಿಸುತ್ತಿರುವುದಾಗಿ ಅವರು ತಿಳಿಸಿದರು.

ಪ್ರತೀ ಗ್ರಾಮಗಳಿಗೆ ತಲಾ 50 ಲಕ್ಷ ರೂ.ಗಳಂತೆ ತುರ್ತಾಗಿ ಅವಶ್ಯಕತೆಯಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಗುತ್ತಿಗೆದಾರರು ಗುಣಮಟ್ಟದ ಕೆಲಸ ನಿರ್ವಹಿಸಬೇಕೆಂದು ಸೂಚನೆ ನೀಡಿದರು.
ಈ ಯೋಜನೆಯಲ್ಲಿ ಶಿಥಿಲವಾಗಿರುವ ಶಿಥಿಲವಾಗಿರುವ ವಿದ್ಯುತ್ ಕಂಬಗಳನ್ನು ಬದಲಾಯಿಸುವುದು, ಅಗತ್ಯವಿರುವ ಕಡೆಗೆ ಹೊಸ ಕಂಬಗಳನ್ನು ಹಾಗೂ ಪರಿವರ್ತಕಗಳನ್ನು ಅಳವಡಿಸಲು, ವೋಲ್ಟೇಜ್ ಗುಣಮಟ್ಟವನ್ನು ಹೆಚ್ಚಿಸುವುದು, ವಿದ್ಯುತ್ ಅಡಚಣೆಯನ್ನು ಆದಷ್ಟು ಕನಿಷ್ಠ ಮಟ್ಟಕ್ಕೆ ಇಳಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು.

ಜೊತೆಗೆ ಶ್ರೀರಂಗಪಟ್ಟಣ ವ್ಯಾಪ್ತಿಯ ರೈತರಿಗೆ ಉತ್ಕ್ರುಷ್ಟ ಗುಣಮಟ್ಟದ ಹಾಗೂ ಅಡಚಣೆ ರಹಿತ 3 – ಫೇಸ್ ವಿದ್ಯುತ್ ಸರಬರಾಜು ನೀಡಲು ಅನುಕೂಲವಾಗುವಂತೆ ಒಟ್ಟು 55 ಕೋಟಿ ವೆಚ್ಚದಲ್ಲಿ ತಲಾ 2 ಪಂಪ್ ಸೆಟ್ ಗಳಿಗೆ ಪ್ರತ್ಯೇಕ 25kva ಅಳವಡಿಸುವ ಪ್ರಗತಿಯಲ್ಲಿರುವುದಾಗಿ ತಿಳಿಸಿದರು.
ಈ ವೇಳೆ ಚೆಸ್ಕಾಂ ಎಇಇ ಮಂಜುನಾಥ ಪ್ರಸಾದ್, ಗುತ್ತಿಗೆದಾರ ಐ ಕಾಂ ಇನ್ಫ್ರಾ ಪ್ರೈ ಲಿ. ನ ಅರುಣ್ ಕುಮಾರ್, ಗ್ರಾ.ಪಂ.ಅಧ್ಯಕ್ಷ ಚಲುಚರಾಜು, ಪಿಡಿಓ ಶಶಿಕಲಾ, ಸದಸ್ಯ ಸಾಗರ್, ಮುಖಂಡರಾದ ಪುಟ್ಟರಾಮಣ್ಣ, ಕೃಷ್ಣಮೂರ್ತಿ ಸೇರಿದಂತೆ ಗ್ರಾಮಸ್ಥರು, ಚುನಾಯಿತ ಪ್ರತಿನಿಧಿಗಳು ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
-
Kodagu24 hours agoಪುತ್ತರಿ ಹಿನ್ನೆಲೆ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಿದ ಸಿಎನ್ಸಿ
-
Chamarajanagar24 hours agoಕಠಿಣ ಶ್ರಮದಿಂದ ಗೆಲುವು ಖಚಿತ: ಡಾ. ಶಾಂತರಾಜು
-
Mysore23 hours agoಪಠ್ಯದಿಂದ ಡಾ.ಅಂಬೇಡ್ಕರ್ ಹೊರಗಿಡುವ ಹುನ್ನಾರ: ಪ್ರೊ.ಪ್ರಸನ್ನಕುಮಾರ್ ಕೆರಗೋಡು ಶಂಕೆ
-
Mandya24 hours agoಮಂಡ್ಯ ಇತಿಹಾಸದಲ್ಲಿ ಮೈಶುಗರ್ ಶಾಲೆಗೆ ವಿಶೇಷ ಸ್ಥಾನವಿದೆ : ಎಲ್ಲರೂ ಸೇರಿ ಶಾಲೆ ಉಳಿಸೋಣ – ಹೆಚ್ಡಿಕೆ
-
Mysore23 hours agoಕಳಲೆ ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವನಾರಾಯಣ್
-
Hassan23 hours agoಕ್ರೀಡೆಯು ಪರಿಪೂರ್ಣ ವ್ಯಕ್ತಿತ್ವಕ್ಕೆ ನಾಂದಿಯಾಗಬಲ್ಲದು : ಡಾ. ಅಕ್ಷಯ್ ಎಸ್. ಗೌಡ.
-
Manglore24 hours agoಮಂಗಳೂರು: ಹೈಕೋರ್ಟ್ ಪೀಠ ಸ್ಥಾಪನೆಗೆ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಿಂದ ಪೂರಕ ಸ್ಪಂದನೆ
-
Mandya24 hours agoತಂಬಾಕು ಮುಕ್ತ ಗ್ರಾಮಕ್ಕಾಗಿ ಸಂಕಲ್ಪ
