Kodagu
ಏಕವಚನ ಬಳಕೆ : ಸಿಎಂ ನಡೆಗೆ ಕೊಡಗು ಬಿಜೆಪಿ ಮಹಿಳಾ ಮೋರ್ಚಾ ಆಕ್ಷೇಪ
ಮಡಿಕೇರಿ: ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರ ಕುರಿತು ಏಕವಚನ ಪ್ರಯೋಗ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ಖಂಡನೀಯವೆಂದು ಕೊಡಗು ಜಿಲ್ಲಾ ಬಿಜೆಪಿಯ ಮಹಿಳಾ ಮೋರ್ಚಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಅವರು ಮುಖ್ಯಮಂತ್ರಿಗಳು ಕೇಂದ್ರದ ಮಹಿಳಾ ಸಚಿವರ ಕುರಿತು ಏಕವಚನ ಬಳಕೆ ಮಾಡುವ ಮೂಲಕ ಸಚಿವ ಸ್ಥಾನಕ್ಕೆ ಮತ್ತು ಸಚಿವರ ಹಿರಿತನಕ್ಕೆ ಅಗೌರವ ತೋರಿದ್ದಾರೆ. ಮಹಿಳೆಯರನ್ನು ದೇವತೆಗಳೆಂದು ಪರಿಗಣಿಸಿ ಗೌರವಿಸುವ ಈ ನಾಡಿನಲ್ಲಿ ಮುಖ್ಯಮಂತ್ರಿಯೊಬ್ಬರು ತಮ್ಮ ಘನತೆಗೆ ಮತ್ತು ನಾಡಿನ ಸಂಸ್ಕೃತಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

ತಾವು ಅಧಿಕಾರದಲ್ಲಿದ್ದ ಅವಧಿಯಲ್ಲೆಲ್ಲ ಹಲವು ಭಾರಿ ಏಕವಚನ ಪ್ರಯೋಗಿಸಿ ಹಿರಿಯರು ಹಾಗೂ ಮಹಿಳೆಯರಿಗೆ ಮುಜುಗರ ಉಂಟು ಮಾಡಿದ್ದಾರೆ. ಇವರ ನಡೆಯ ಕುರಿತು ಆಕ್ಷೇಪಗಳು ವ್ಯಕ್ತವಾದರೂ ತಪ್ಪನ್ನು ತಿದ್ದಿಕೊಳ್ಳುವ ಬದಲು ’ನಾನು ಗ್ರಾಮೀಣ ಸೊಗಡಿನವನು’ ಎಂದು ಸಮರ್ಥಿಸಿಕೊಳ್ಳುತ್ತಲೇ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ.
ಮುಖ್ಯಮಂತ್ರಿಗಳು ಗ್ರಾಮೀಣ ಸೊಗಡಿನವರೇ ಆಗಿದ್ದರೆ ತಮ್ಮ ಪಕ್ಷದ ಅಧಿನಾಯಕ ಹಾಗೂ ನಾಯಕಿಯ ಕುರಿತು ಕೂಡ ಏಕವಚನ ಬಳಸಲಿ ಎಂದು ಅನಿತಾ ಪೂವಯ್ಯ ಸವಾಲು ಹಾಕಿದ್ದಾರೆ.
ಇನ್ನು ಮುಂದಾದರೂ ಮಹಿಳೆಯರಿಗೆ ಮತ್ತು ಅವರು ಹೊಂದಿರುವ ಹುದ್ದೆಗೆ ಗೌರವ ನೀಡುವ ಮೂಲಕ ಮುಖ್ಯಮಂತ್ರಿಗಳು ತಮ್ಮ ಘನತೆಯನ್ನು ಉಳಿಸಿಕೊಳ್ಳಲಿ. ಇದೇ ವರ್ತನೆ ಮುಂದುವರೆದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
Kodagu
ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ: ಸಿಎಂರೊಂದಿಗೆ ಸಂವಾದ ನಡೆಸಿದ ಎ.ಎಸ್.ಪೊನ್ನಣ್ಣ
ಬೆಳಗಾವಿ/ಮಡಿಕೇರಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ.

ಈ ಅಧಿವೇಶನದಲ್ಲಿ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಂವಾದ ನಡೆಸಿದ್ದಾರೆ.
Kodagu
ಅಂತರಾಷ್ಟ್ರೀಯ ಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ: ಮಡಿಕೇರಿಯ ಎಸ್.ಅನ್ವಿತ್ ಚಾಂಪಿಯನ್
ಮಡಿಕೇರಿ: ಇತ್ತೀಚೆಗೆ ದುಬೈಯಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ 15ನೇ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅನ್ವಿತ್ ಎಸ್. ಜೂನಿಯರ್ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ.
ನಗರದ ಬ್ರೈನೋಬ್ರೈನ್ ಅಬಕಾಸ್ ಸಂಸ್ಥೆಯ ಮುಖ್ಯಸ್ಥರಾದ ಮಾಪಂಗಡ ಕವಿತಾ ಕರುಂಬಯ್ಯ ಅವರ ಬಳಿ ಎಸ್.ಅನ್ವಿತ್ ತರಬೇತಿ ಪಡೆಯುತ್ತಿದ್ದಾನೆ. ದುಬೈನ ಶೇಖ್ ರಶೀದ್ ಸಭಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ ಅನ್ವಿತ್ ಸೇರಿದಂತೆ ಕರ್ನಾಟಕ ರಾಜ್ಯದ ಆರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುಮಾರು 16 ದೇಶಗಳ 1,800 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮದೆನಾಡಿನ ಬಿಜಿಎಸ್ ಶಾಲೆಯ 3ನೇ ತರಗತಿಯ ವಿದ್ಯಾರ್ಥಿಯಾಗಿರುವ ಎಂಟು ವರ್ಷದ ಅನ್ವಿತ್ ಎಸ್. ಮದೆನಾಡು ಮದೆ ಮಹೇಶ್ವರ ಪದವಿಪೂರ್ವ ಕಾಲೇಜ್ ನ ಉಪನ್ಯಾಸಕ ಶ್ರೀನಿವಾಸ ವಿ. ಹಾಗೂ ಪವಿತ್ರ ಎಂ.ಎನ್ ದಂಪತಿಯ ಪುತ್ರ.
ಬಹುಮಾನ ವಿತರಣಾ ಸಮಾರಂಭದಲ್ಲಿ ಬಹುಮಾನ ವಿತರಿಸಿ ಮಾತನಾಡಿದ ಬ್ರೈನೋಬ್ರೈನ್ ಅಂತಾರಾಷ್ಟ್ರೀಯ ದುಬೈ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸುಬ್ರಮಣ್ಯಂ ಹಾಗೂ ತಾಂತ್ರಿಕ ನಿರ್ದೇಶಕ ಅರುಲ್ ಸುಬ್ರಹ್ಮಣ್ಯಂ ಅವರು ಅನ್ವಿತ್ ಸಾಧನೆಯನ್ನು ಶ್ಲಾಘಿಸಿದರು.

ಮಾರ್ಗದರ್ಶಕಿ ಮಾಪಂಗಡ ಕವಿತಾ ಕರುಂಬಯ್ಯ ಅವರು ಮಾತನಾಡಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಅನ್ವಿತ್, ರಾಷ್ಟ್ರಮಟ್ಟ ಮತ್ತು ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿರುವುದು ಹೆಮ್ಮೆ ಎನಿಸಿದೆ. ತಂದೆ ತಾಯಿಗಳ ಸಹಕಾರದಿಂದ ಅನ್ವಿತ್ ಚಿಕ್ಕ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ್ದು, ಅಂತಾರಾಷ್ಟ್ರೀಯ ಮಟ್ಟದ ಯಶಸ್ಸು ಅವರ ಕುಟುಂಬದವರಿಗೆ ಸಲ್ಲಬೇಕು ಎಂದರು.
Kodagu
ಶನಿವಾರಸಂತೆ – ಡಿ.10ಕ್ಕೆ ವಿದ್ಯುತ್ ವ್ಯತ್ಯಯ
ಮಡಿಕೇರಿ : 66/11 ಕೆ.ವಿ ಶನಿವಾರಸಂತೆ ಮತ್ತು 66/11 ಕೆವಿ ಮಲ್ಲಿಪಟ್ಟಣ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಈ ಉಪ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಮಾರ್ಗಗಳಲ್ಲ್ಲಿ ಡಿಸೆಂಬರ್, 10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಶನಿವಾರಸಂತೆ ಶಾಖೆಯ ಶನಿವಾರಸಂತೆ ಪಟ್ಟಣ, ಅಪ್ಪ್ಡಶೆಟ್ಟಳ್ಳಿ, ಮಾದ್ರೆ, ಚಿಕ್ಕಕೊಳತ್ತೂರು, ದುಂಡಳ್ಳಿ, ಬೆಂಬಳೂರು, ಬಿಳಹ, ಹಂಡ್ಲಿ, ಕಿತ್ತೂರು, ಸಂಪಿಗೆದಳ, ಮಾದ್ರದಳ್ಳಿ, ಮಣಗಲಿ, ಗೌಡಳ್ಳಿ, ಬೀಟಿಕಟ್ಟೆ, ಶುಂಠಿ, ಶಾಂತ್ವೇರಿ, ಬಸವನಕೊಪ್ಪ, ಕೊಡ್ಲಿಪೇಟೆ ಶಾಖೆಯ ಮುಳ್ಳೂರು, ಗೋಪಾಲಪುರ, ಜಾಗೇನಹಳ್ಳಿ, ನಿಡ್ತ, ಚೌಡೇನಹಳ್ಳಿ, ದೊಡ್ಡಳ್ಳಿ, ಹರೆಹೊಸೂರು, ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಬೆಸೂರು ಪಂಚಾಯಿತಿ, ನೀರುಗುಂದ, ನಿಲುವಾಗಿಲು, ದೊಡ್ಡಭಂಡಾರ, ಬ್ಯಾಡಗೊಟ್ಟ, ಕೊಡ್ಲಿಪೇಟೆ ಟೌನ್, ಅವರದಾಳು, ಬೆಂಬಳೂರು, ದೊಡ್ಡಕೊಡ್ಲಿ, ಕ್ಯಾತೆ, ದೊಡ್ಡಕುಂದಾ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
-
Mandya16 hours agoಡಿ.17ಕ್ಕೆ ಮಳವಳ್ಳಿಗೆ ರಾಷ್ಟ್ರಪತಿ ಆಗಮನ : ಜಿಲ್ಲಾಧಿಕಾರಿಗಳಿಂದ ಸ್ಧಳ ಪರಿಶೀಲನೆ
-
Mysore14 hours agoಮೈಸೂರು ದಸರಾ: ಮಹಿಳಾ ಉದ್ಯಮಿ ಉಪಸಮಿತಿಗೆ ಎಸ್. ರಂಗನಾಥ ಸಂಚಾಲಕರಾಗಿ ನೇಮಕ
-
Mandya22 hours agoಡಿ 10 ಶ್ರೀರಂಗಪಟ್ಟಣ ಸೇರಿದಂತೆ ವಿವಿದೆಡೆ ವಿದ್ಯುತ್ ಕಡಿತ
-
Hassan18 hours agoಜಿಲ್ಲಾ ಮಟ್ಟದ ಅಂತರಶಾಲಾ ಚೆಸ್ ಸ್ಪರ್ಧೆ ಯಶಸ್ವಿ
-
Hassan18 hours agoಎಂಸಿಇ ಕಾಲೇಜಿನ ಸಿವಿಲ್ ವಿಭಾಗದಲ್ಲಿ ಸ್ಪೋರ್ಟ್ಸ್ ವಿಜೇತರಿಗೆ ಸನ್ಮಾನ
-
Kodagu20 hours agoಸಂವಿಧಾನದ ರಕ್ಷಣೆ ನಮ್ಮೆಲ್ಲರ ಹೊಣೆ : ಗಾಯತ್ರಿ ನರಸಿಂಹ
-
Kodagu18 hours agoಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಕರ್ತರಿಗೆ ವಿಮೆ ಸೌಲಭ್ಯ
-
Hassan9 minutes agoವಾಲಿಬಾಲ್ ಪಂದ್ಯಾವಳಿಯಲ್ಲಿ ಜಗ್ಗಿಬಾಯ್ಸ್ ಪ್ರಥಮ ಸ್ಥಾನ
