Sports
ಏಕದಿನ ತಂಡಕ್ಕೆ ವರುಣ್ ಚಕ್ರವರ್ತಿ ಆಯ್ಕೆ: ಚಾಂಪಿಯನ್ಸ್ ಟ್ರೋಫಿ ಮೇಲೆ ಕಣ್ಣು..!
ನವದೆಹಲಿ: ಭಾರತ ತಂಡದ ಮಿಸ್ಟ್ರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರು ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧ ಮುಕ್ತಾಯಗೊಂಡ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿದ ವರುಣ್ ಚಕ್ರವರ್ತಿ ಮೇಲೆ ಆಯ್ಕೆಗಾರರ ಸಮಿತಿ ಕಣ್ಣಾಕಿದ್ದು, ಮುಖ್ಯ ಕೋಚ್ ಗೌತಮ್ ಗಂಭೀರ್ ಸಲಹೆ ಮೇರೆಗೆ ವರುಣ್ ಅವರನ್ನು ಏಕದಿನ ತಂಡಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ.
ಪ್ರಸಕ್ತ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧ 5 ಟಿ20 ಪಂದ್ಯಗಳಿಂದ 14 ವಿಕೆಟ್ ಪಡೆದು ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದರು.
ಇದಕ್ಕೆ ಪುಷ್ಟಿ ನೀಡುವಂತೆ ಇಂದು (ಫೆ.4) ನೆಟ್ಸ್‌ನಲ್ಲಿ ವರುಣ್ ಚಕ್ರವರ್ತಿ ಅಭ್ಯಾಸ ಮಾಡುತ್ತಿರುವುದು ಕಂಡುಬಂದಿದೆ. ಇನ್ನು ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಟೀಂ ಇಂಡಿಯಾ ಉಪ ನಾಯಕ ಶುಭ್‌ಮನ್ ಗಿಲ್, ವರುಣ್ ಚಕ್ರವರ್ತಿ ಅವರು ಏಕದಿನ ತಂಡವನ್ನು ಸೇರಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಇತ್ತ ಚಾಂಪಿಯನ್ಸ್ ಟ್ರೋಫಿಗೆ ಅಧಿಕೃತ ತಂಡದಲ್ಲಿ ಬದಲಾವಣೆ ಮಾಡಲು ಅಜಿತ್ ಅಗರ್ಕರ್ ಬಳಗಕ್ಕೆ ಫೆ.12 ರಂದು ಕೊನೆಯ ದಿನವಾಗಿದ್ದು, ಇಂಗ್ಲೆಂಡ್ ವಿರುದ್ಧದ ಪ್ರದರ್ಶನದ ಮೇಲೆ ಆಯ್ಕೆ ಪ್ರಕ್ರಿಯೆ ಅಂತಿಮಗೊಳ್ಳಲಿದೆ.
ಈಗಾಗಲೇ ತಂಡದಲ್ಲಿ ಅನುಭವಿ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್ ಹಾಗೂ ವಾಷಿಂಗ್‌ಟನ್ ಸುಂದರ್ ಸ್ಥಾನ ಪಡೆದಿದ್ದು, ಯಾರಿಗೆ ಕೋಕ್ ನೀಡಿ ವರುಣ್ ಅವರನ್ನು ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಆಡಲಿಸಲಾಗುವುದು ಎಂಬ ಬಗ್ಗೆ ಇನ್ನಷ್ಟೆ ತಿಳಿಯಬೇಕಿದೆ.
Sports
Ind v/s SA 1st T-20: ಸೌತ್ ಆಫ್ರಿಕಾ ಆಲೌಟ್, ಟೀಂ ಇಂಡಿಯಾಗೆ 101 ರನ್‌ಗಳ ಭರ್ಜರಿ ಜಯ
ಕಟಕ್: ಹಾರ್ದಿಕ್ ಪಾಂಡ್ಯ ಅವರ ಸ್ಫೋಟಕ ಅರ್ಧಶತಕ, ಬೌಲರ್‌ಗಳು ಸಾಂಘಿಕ ಪ್ರದರ್ಶನದಿಂದಾಗಿ ಸೌತ್ ಆಫ್ರಿಕಾ ವಿರುದ್ಧ ಮೊದಲ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾ 101 ರನ್‌ಗಳಿಂದ ಭರ್ಜರಿ ಜಯಗಳಿಸಿದೆ
Sports
KSCA ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ನೇಮಕ
ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸೇರಿ ಒಟ್ಟು 16 ಸ್ಥಾನಗಳಿಗೆ ಇಂದು ಬೆಳಗ್ಗೆಯಿಂದ ಸಂಜೆ ವರೆಗೆ ಮತದಾನ ನಡೆದಿದ್ದು, ಇದೀಗ ಮತದಾನ ಎಣಿಕೆಯಲ್ಲಿ ವೆಂಕಟೇಶ್ ಪ್ರಸಾದ್ 191 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಇದರೊಂದಿಗೆ ವೆಂಕಟೇಶ್ ಪ್ರಸಾದ್ 12 ವರ್ಷಗಳ ನಂತರ ಮತ್ತೆ ಅಧ್ಯಕ್ಷರಾಗಿ ಕೆಎಸ್‌ಸಿಎಗೆ ವಾಪಸ್ಸಾಗಿದ್ದಾರೆ.
ಮಾಜಿ ಕ್ರಿಕೆಟಿಗರಾದ ಜಾವಗಲ್ ಶ್ರೀನಾಥ್ ಮತ್ತು ಅನಿಲ್ ಕುಂಬ್ಳೆ ಬಣದ ವೆಂಕಟೇಶ್ ಪ್ರಸಾದ್‌ಗೆ ಒಟ್ಟು 749 ಮತಗಳು ಬಿದ್ದಿದ್ದರೆ, ಬ್ರಿಜೇಶ್ ಪಾಟೀಲ್ ಬಣದ ಶಾಂತಕುಮಾರ್‌ಗೆ 558 ಮತಗಳು ಲಭವಿಸಿವೆ. ಇದರೊಂದಿಗೆ ವೆಂಕಟೇಶ್ ಪ್ರಸಾದ್ 191 ಮತಗಳ ಅಂತರದಿಂದ ವಿರೋಧಿ ಶಾಂತಕುಮಾರ್ ಅವರನ್ನು ಮಣಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನೂ ವೆಂಕಟೇಶ್ ಪ್ರಸಾದ್ ಬಣದಿಂದ ಸುಜಿತ್ ಸೋಮಸುಂದರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರೆ, ಮಧುಕರ್ ಅವರು ಖಜಾಂಚಿಯಾಗಿ ನೇಮಕವಾಗಿದ್ದಾರೆ. ಅಲ್ಲದೇ ಕೆಎಸ್‌ಸಿಎ ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಮೆನನ್ ಗೆಲುವು ಸಾಧಿಸಿದ್ದಾರೆ. ಈ ಬಾರಿ ಒಟ್ಟು 1315 ಮತಗಳ ಚಲಾವಣೆಯಾಗಿವೆ. 2013 ರಲ್ಲಿ 1351 ಮತಗಳ ಚಲಾವಣೆಗೊಂಡಿದ್ದವು. ಕೆಎಸ್ಸಿಎ ಇತಿಹಾಸದಲ್ಲಿ 2013ರಲ್ಲೇ ಅತಿ ಹೆಚ್ಚು ಮತದಾನವಾಗಿತ್ತು.
ಪರಾಜಿತ ಅಥ್ಯರ್ಥಿ ಶಾಂತಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡಿದ್ದರಿಂದ ವೆಂಕಟೇಶ್ ಪ್ರಸಾದ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಆದ್ರೆ, ಕೊನೆ ಕ್ಷಣದಲ್ಲಿ ಶಾಂತಕುಮಾರ್ ಅವರು ಕೋರ್ಟ್ ಮೊರೆ ಹೋಗಿದ್ದು, ಶಾಂತಕುಮಾರ್ ಅವರ ನಾಮಪತ್ರ ಸಿಂಧುಗೊಳಿಸಿ ಚುನಾವಣೆ ನಡೆಸುವಂತೆ ಆದೇಶ ನೀಡಿತ್ತು. ಅದರಂತೆ ಇಂದು ನಡೆದ ಚುನಾವಣೆಯಲ್ಲೂ ಸಹ ವೆಂಕಟೇಶ್ ಪ್ರಸಾದ್ ಗೆದ್ದು ಬೀಗಿದ್ದಾರೆ.
12 ವರ್ಷಗಳ ನಂತರ ಮತ್ತೆ ಕೆಎಸ್‌ಸಿಎಗೆ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್
ವೆಂಕಟೇಶ್ ಈ ಹಿಂದೆ 2010ರಿಂದ 2013ರ ವರೆಗೆ ಕೆಎಸ್‌ಸಿಎ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಆಗ ಅನಿಲ್ ಕುಂಬ್ಳೆ ಅಧ್ಯಕ್ಷರಾಗಿದ್ದರು. ಜಾವಗಲ್ ಶ್ರೀನಾಥ್ ಕಾರ್ಯದರ್ಶಿಯಾಗಿದ್ದರು. ಇದೀಗ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ 12 ವರ್ಷಗಳ ಬಳಿಕ ಮತ್ತೆ ಕೆಎಸ್‌ಸಿಎಗೆ ವಾಪಸ್ಸಾಗಿದ್ದಾರೆ.
1994ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ವೆಂಕಿ, ಟೀಂ ಇಂಡಿಯಾದ ಯಶಸ್ವಿ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ. 33 ಟೆಸ್ಟ್ ಪಂದ್ಯದಿಂದ 96 ವಿಕೆಟ್ ಕಬಳಿಸಿದ್ದರೆ, 161 ಏಕದಿನ ಪಂದ್ಯದಿಂದ 196 ವಿಕೆಟ್ ಉರುಳಿಸಿದ್ದಾರೆ.
Sports
ಮೌನ ಮುರಿದು ಮದುವೆ ವಂದತಿಗಳಿಗೆ ಫುಲ್‌ಸ್ಟಾಪ್ ಇಟ್ಟ ಸ್ಮೃತಿ ಮಂದಾನ
ಮುಂಬೈ: ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರೊಂದಿಗಿನ ಮದುವೆ ಮುಂದೂಡಿಕೆ ಬಗ್ಗೆ ಕೆಲ ದಿನಗಳಿಂದ ಹರಿದಾಡುತ್ತಿದ್ದ ನಾನಾ ವದಂತಿಗಳಿಗೆ ಟೀಂ ಇಂಡಿಯಾ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನ ತೆರೆ ಎಳೆದಿದ್ದಾರೆ.
ಮದುವೆಯನ್ನು ರದ್ದುಗೊಳಿಸಿರುವುದಾಗಿ ಖುದ್ದು ಸ್ಮೃತಿ ಅವರೇ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಎಲ್ಲಾ ವದಂತಿಗಳಿಗೆ ಫುಲ್‌ಸ್ಟಾಪ್ ಇಟ್ಟಿದ್ದಾರೆ. ಅಲ್ಲದೇ ಈ ಹೇಳಿಕೆಯೊಂದಿಗೆ ಈ ವಿಷಯ ಕೊನೆಗೊಳಿಸಲು ಬಯಸುತ್ತೇನೆ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಸ್ಮೃತಿಮಂದಾನ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಏನಿದೆ?
ಕಳೆದ ಕೆಲ ವಾರಗಳಿಂದ ನನ್ನ ಜೀವನದ ಬಗ್ಗೆ ಸಾಕಷ್ಟು ಊಹಾಪೋಹಗಳು ಹಬ್ಬಿವೆ. ಹಾಗಾಗಿ ಈ ಸಮಯದಲ್ಲಿ ನಾನು ಮಾತನಾಡುವುದು ಮುಖ್ಯ ಅಂತ ಭಾವಿಸಿ ಮಾತನಾಡ್ತಿದ್ದೇನೆ. ನಾನು ತುಂಬಾ ಖಾಸಗಿ ವ್ಯಕ್ತಿ, ಅದನ್ನ ಹಾಗೆಯೇ ಇಡಲು ಬಯಸುತ್ತೇನೆ. ಆದರೆ ಮದುವೆಯನ್ನ ರದ್ದುಗೊಳಿಸಲಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕಾಗಿದೆ.
ಈ ವಿಚಾರವನ್ನು ಇಲ್ಲಿಗೆ ಮುಗಿಸಲು ನಾನು ಬಯಸುತ್ತೇನೆ, ನೀವೂ ಕೂಡ ಈ ವಿಷಯವನ್ನ ಇಲ್ಲಿಗೆ ಬಿಡಬೇಕೆಂದು ಮನವಿ ಮಾಡುತ್ತೇನೆ. ದಯವಿಟ್ಟು ಈ ಸಮಯದಲ್ಲಿ ಎರಡೂ ಕುಟುಂಬಗಳ ಗೌಪ್ಯತೆ ಗೌರವಿಸಿ. ನಮ್ಮದೇ ಹಾದಿಯಲ್ಲಿ ಮುಂದುವರಿಯಲು ನಮಗೆ ಅವಕಾಶ ಮಾಡಿಕೊಡಿ ಎಂದು ವಿನಂತಿಸಿಕೊಳ್ಳುತ್ತೇನೆ.
ನಮ್ಮೆಲ್ಲರನ್ನೂ ಮತ್ತು ನನ್ನನ್ನು ಮುನ್ನಡೆಸುವ ಒಂದು ಉನ್ನತ ಉದ್ದೇಶವಿದೆ ಎಂದು ನಾನು ನಂಬುತ್ತೇನೆ. ಅದು ಯಾವಾಗಲೂ ನನ್ನ ದೇಶವನ್ನು ಉನ್ನತ ಮಟ್ಟದಲ್ಲಿ ಪ್ರತಿನಿಧಿಸುತ್ತಿದೆ. ಸಾಧ್ಯವಾದಷ್ಟು ಕಾಲ ಭಾರತಕ್ಕಾಗಿ ಆಟವಾಡುವುದನ್ನ ಮತ್ತು ಟ್ರೋಫಿಗಳನ್ನು ಗೆಲ್ಲುವುದನ್ನು ಮುಂದುವರಿಸಬೇಕೆಂದು ನಾನು ಭಾವಿಸುತ್ತೇನೆ. ಅದರ ಕಡೆಗೆಯೇ ನನ್ನ ಗಮನ ಶಾಶ್ವತವಾಗಿರುತ್ತದೆ. ನಿಮ್ಮೆಲ್ಲರ ಬೆಂಬಲಕ್ಕೆ ಧನ್ಯವಾದಗಳು. ಇದು ಮುಂದುವರಿಯುವ ಸಮಯ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಹಿಂದೆ ನಡೆದಿದ್ದು ಏನು?
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಕಳೆದ ನ.23ರಂದು ಸ್ಮೃತಿ-ಪಲಾಶ್ ಮುಚ್ಚಲ್ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದರು. ಆದರೆ ಅಲ್ಲಿ ಆಗಿದ್ದೇ ಬೇರೆ. ಮದುವೆಗೆ ಕೆಲ ಗಂಟೆಗಳು ಬಾಕಿಯಿರುವಾಗಲೇ ಮಂಧಾನ ತಂದೆಗೆ ಲಘು ಹೃದಯಾಘಾತವಾಗಿತ್ತು. ಅವರು ಸಂಪೂರ್ಣ ಗುಣಮುಖರಾಗುವವರೆಗೆ ಮದುವೆ ಸಮಾರಂಭ ಮುಂದೂಡಲು ಸ್ಮೃತಿ ನಿರ್ಧರಿಸಿದ್ದರು. ಈ ಬೆನ್ನಲ್ಲೇ ಸ್ಮೃತಿ ಮಂಧಾನ ತನ್ನ ಇನ್‌ಸ್ಟಾಗ್ರಾಂ ಖಾತೆಯಿಂದ ಪಲಾಶ್ ಹಾಗೂ ವಿವಾಹಕ್ಕೆ ಸಂಬಂಧಿಸಿದ ಎಲ್ಲಾ ಫೋಟೋ ಹಾಗೂ ವಿಡಿಯೋಗಳನ್ನು ಡಿಲೀಟ್ ಮಾಡಿದ್ದರು.
ಇದರ ಮಧ್ಯೆ ಸ್ಮೃತಿ ಅವರ ಜೊತೆ ಮದುವೆ ನಿಶ್ಚಯವಾಗಿದ್ದರೂ ಪಲಾಶ್ ಮುಚ್ಚಲ್ ಬೇರೊಬ್ಬ ಯುವತಿ ಜೊತೆ ಚಾಟ್ ಮಾಡಿದ್ದಾರೆ ಎನ್ನಲಾದ ಸ್ಕ್ರೀನ್‌ಶಾಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಬಳಿಕ ಪಲಾಶ್ ತನ್ನ ಎಕ್ಸ್ ಗರ್ಲ್‌ಫ್ರೆಂಡ್ ಪ್ಲಾಸ್ಟಿಕ್ ಸರ್ಜನ್ ಬಿರ್ವಾ ಶಾ ಅವರಿಗೆ ಪ್ರಪೋಸ್ ಮಾಡಿದ್ದ ಫೋಟೋಗಳು ಹಾಗೂ ಆಕೆಯೊಂದಿಗೆ ರೊಮ್ಯಾಂಟಿಕ್ ಮೂಡ್‌ನಲ್ಲಿದ್ದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಬಳಿಕ ಮದುವೆ ರದ್ದಾಗಿದೆ ಎಂಬ ವಿಷಯ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಲೇ ಇತ್ತು. ಇದೀಗ ಈ ಎಲ್ಲ ವದಂತಿಗಳಿಗೆ ಖುದ್ದು ಸ್ಮೃತಿ ಮಂದಾನ ಅವರೇ ತೆರೆ ಎಳೆದಿದ್ದಾರೆ.
-
Hassan17 hours agoಎಲೈಟ್ ಸಂಸ್ಥೆಯ ನಾಗರಾಜ್ಗೆ ’ಕರ್ನಾಟಕ ಗುರುರತ್ನ ಪ್ರಶಸ್ತಿ-2025’
-
Mysore23 hours agoಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ಗೆ ಏಕವಚನ ಬಳಕೆ: ಸಿಎಂ ವಿರುದ್ಧ ಹೇಮಾ ನಂದೀಶ್ ಅಸಮಾಧಾನ
-
Mysore22 hours agoಚಾಮುಂಡಿಬೆಟ್ಟದ ವಿಶೇಷ ದರ್ಶನ, ಸೇವೆಗಳ ಶುಲ್ಕ ಹೆಚ್ಚಳ ವಿರೋಧಿಸಿ ಪ್ರತಿಭಟನೆ
-
Mandya15 hours agoಭತ್ತ ಮತ್ತು ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗಧಿ
-
Manglore14 hours agoದ.ಕ.ಜಿಲ್ಲೆಯಲ್ಲಿ ಪ್ರತೀಕಾರದ ಕೊಲೆಗೆ ಕುಮ್ಮಕ್ಕು: 16 ಇನ್ಸ್ಟ್ಗ್ರಾಮ್ ಪೇಜ್ಗಳ ವಿರುದ್ಧ FIR ದಾಖಲು
-
Sports13 hours agoInd v/s SA 1st T-20: ಸೌತ್ ಆಫ್ರಿಕಾ ಆಲೌಟ್, ಟೀಂ ಇಂಡಿಯಾಗೆ 101 ರನ್‌ಗಳ ಭರ್ಜರಿ ಜಯ
-
Hassan18 hours agoಈ ಶಿಕ್ಷಕ ಎಣ್ಣೆದಾಸ, ಆತನ ಹೆಂಡತಿ ಮಕ್ಕಳ ಪಾಲಿಗೆ ರಾಕ್ಷಸಿ: ಕಾನೂನು ಕ್ರಮಕೈಗೊಳ್ಳುವಂತೆ ಗ್ರಾಮಸ್ಥರಿಂದ ಆಗ್ರಹ
-
Hassan18 hours agoNOC ಇಲ್ಲದೇ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಜಿಲ್ಲಾಡಳಿತ ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಲಿ: ಆರ್. ಮರಿಜೋಸೆಫ್ ಆಗ್ರಹ

