Kodagu
ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಜನ-ಜಾನುವಾರು ರಕ್ಷಣೆಗೆ ಮುಂದಾಗಿ: ವೆಂಕಟ್ ರಾಜಾ
ಮಡಿಕೇರಿ : ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನ-ಜಾನುವಾರು ಹಾಗೂ ಆಸ್ತಿಪಾಸ್ತಿ ರಕ್ಷಣೆಗೆ ಮುಂದಾಗುವAತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ.
ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬAಧಿಸಿದAತೆ ವಿಡಿಯೋ ಸಂವಾದ ಮೂಲಕ ಶುಕ್ರವಾರ ಮಾತನಾಡಿದ ಅವರು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇನ್ನೂ ಎರಡು ಮೂರು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಈಗಾಗಲೇ ನಿಯೋಜಿಸಿರುವ ನೋಡಲ್ ಅಧಿಕಾರಿಗಳು ತಮ್ಮ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಸಾರ್ವಜನಿಕರ ರಕ್ಷಣೆ ಮಾಡುವುದು ಅತಿಮುಖ್ಯ. ಆ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಾಕೀತು ಮಾಡಿದರು.
ಜಿಲ್ಲೆಯ ೧೦೩ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟಾಸ್ಕ್ಪೋರ್ಸ್ ಸಮಿತಿಯನ್ನು ರಚಿಸಿ ಪ್ರವಾಹ, ಬರೆಕುಸಿತ ಮತ್ತಿತರ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದರು.
ಪ್ರಾಕೃತಿಕ ವಿಕೋಪ ಸಂಬAಧ ಯಾವುದೇ ರೀತಿಯ ವ್ಯತ್ಯಯ ಉಂಟಾಗದAತೆ ಎಲ್ಲಾ ಹಂತದ ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಪ್ರವಾಹ ಪೀಡಿತ ಪ್ರದೇಶದವರನ್ನು ಸ್ಥಳಾಂತರಿಸಲು ಕಾಳಜಿ ಕೇಂದ್ರ ತೆರೆಯಬೇಕು. ಕಾಳಜಿ ಕೇಂದ್ರದಲ್ಲಿ ವಿದ್ಯುತ್, ಶೌಚಾಲಯ, ಇತರ ಮೂಲ ಸೌಲಭ್ಯಗಳು ಇರುವಂತೆ ಗಮನಹರಿಸಬೇಕು ತಹಶೀಲ್ದಾರರು, ತಾ.ಪಂ.ಇಒಗಳು ಇತರರು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಕಾಳಜಿ ಕೇಂದ್ರದಲ್ಲಿ ಆರೋಗ್ಯ ಸೇವೆ ಕಲ್ಪಿಸಬೇಕು. ಆಂಬ್ಯುಲೆನ್ಸ್ ಸೇವೆ ಸಿದ್ಧವಾಗಿರಬೇಕು. ಸಂತ್ರಸ್ತರಿಗೆ ತಕ್ಷಣವೇ ಸ್ಪಂದಿಸುವ ಕಾರ್ಯ ಆಗಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಎಷ್ಟು ಹಾಸಿಗೆಗಳು ಇವೆ ಎಂದು ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಸೂಚಿಸಿದರು.
ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಯಾವುದೇ ರೀತಿ ತೊಂದರೆಯಾಗದAತೆ ಗಮನಹರಿಸಬೇಕು. ಜಿಲ್ಲಾಡಳಿತದಿಂದ ಕಾಲಕಾಲಕ್ಕೆ ಹೊರಡಿಸುವ ಆದೇಶವನ್ನು ಚಾಚುತಪ್ಪದೆ ಪಾಲಿಸಬೇಕು. ಸುಳ್ಯ ಕಡೆಯಿಂದ ಬರುವ ವಾಹನಗಳಿಗೆ ಮಾಹಿತಿ ಫಲಕ ಅಳವಡಿಸಬೇಕು ಎಂದು ಹೆದ್ದಾರಿ ವಿಭಾಗದ ಎಂಜಿನಿಯರ್‌ಗೆ ಸೂಚಿಸಿದರು.
ಬರೆಕುಸಿತ, ರಸ್ತೆಗೆ ಮಣ್ಣು ಬೀಳುವುದು, ಮರ ಬೀಳುವುದು, ವಿದ್ಯುತ್ ಕಂಬ ಬೀಳುವುದು ಇಂತವನ್ನು ಸಂಬAಧಪಟ್ಟ ಇಲಾಖೆಗಳ ಅಧಿಕಾರಿಗಳು ಕೂಡಲೇ ತೆರವುಗೊಳಿಸಲು ಮುಂದಾಗಬೇಕು ಎಂದರು.
ಶಾಲಾ-ಕಾಲೇಜು ರಜೆ ಇದೆ ಎಂದು ಸಿಬ್ಬಂದಿಗಳು ಗೈರು ಆಗಬಾರದು. ಸಿಬ್ಬಂದಿಗಳು ಶಾಲಾ-ಕಾಲೇಜಿಗೆ ಹಾಜರಾಗಬೇಕು. ಪ್ರಾಕೃತಿಕ ವಿಕೋಪವನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಡೆಂಗ್ಯೂ ಪ್ರಕರಣ ಸಂಬAಧಿಸಿದAತೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಅವರು ಪ್ರಾಕೃತಿಕ ವಿಕೋಪ ಜೊತೆ ಡೆಂಗ್ಯೂ ನಿಯಂತ್ರಣ ಬಗ್ಗೆ ಗಮನಹರಿಸಬೇಕು. ಅಗತ್ಯ ಔಷಧಿಗಳನ್ನು ದಾಸ್ತಾನು ಮಾಡಿಕೊಂಡು, ಆರೋಗ್ಯ ಸೇವೆ ಕಲ್ಪಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ಹೆದ್ದಾರಿಯಲ್ಲಿ ಸಾರಿಗೆ ಸಂಪರ್ಕಕ್ಕೆ ಯಾವುದೇ ರೀತಿ ತೊಂದರೆ ಆಗದಂತೆ ಗಮನಹರಿಸಲಾಗಿದೆ. ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬAಧ ಅಗತ್ಯ ಮುನ್ನೆಚ್ಚರ ವಹಿಸಲಾಗಿದೆ ಎಂದರು.
ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಪ್ರಾಕೃತಿಕ ವಿಕೋಪ ನಿರ್ವಹಣೆಯಲ್ಲಿ ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾ.ಪಂ.ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದ್ದು, ಜಿಲ್ಲಾಡಳಿತ ಜೊತೆ ಸದಾ ಕೈಜೋಡಿಸಲಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಪ್ರವಾಹ ಪೀಡಿತ ಸಂತ್ರಸ್ತರ ಆರೋಗ್ಯ ಕಾಳಜಿ ಬಗ್ಗೆ ಗಮನಹರಿಸಲಾಗಿದೆ. ಹಾಗೆಯೇ ಸರ್ಕಾರದ ನಿರ್ದೇಶನದಂತೆ ಡೆಂಗ್ಯೂ ನಿಯಂತ್ರಣಕ್ಕೆ ಹೆಚ್ಚಿನ ಮುತುವರ್ಜಿ ವಹಿಸಲಾಗಿದೆ ಎಂದು ಹೇಳಿದರು.
ತಾ.ಪಂ.ಇಒಗಳಾದ ಶೇಖರ್ ಮತ್ತು ಅಪ್ಪಣ್ಣ ಅವರು ಮಾತನಾಡಿ ಗ್ರಾ.ಪಂ.ಮಟ್ಟದಲ್ಲಿ ತುರ್ತು ಸಭೆಯನ್ನು ನಡೆಸಿ ಸ್ಥಳೀಯ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ. ಹಾಗೆಯೇ ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ಪೋರ್ಸ್ ಸಭೆಯನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.
ತಹಶೀಲ್ದಾರ್ ಪ್ರವೀಣ್ ಕುಮಾರ್, ಕಿರಣ್ ಗೌರಯ್ಯ, ರಾಮಚಂದ್ರ ಅವರು ಸ್ಥಳೀಯ ಮಟ್ಟದಲ್ಲಿ ಕಾಳಜಿ ಕೇಂದ್ರ ತೆರೆಯುವುದು, ಆಹಾರ ಕಿಟ್‌ಗಳ ವಿತರಣೆಗೆ ಕ್ರಮ ಮತ್ತಿತರ ಬಗ್ಗೆ ಮಾಹಿತಿ ನೀಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗರಾಜಾಚಾರಿ, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳು, ಇತರರು ವಿಡಿಯೊ ಸಂವಾದದಲ್ಲಿ ಪಾಲ್ಗೊಂಡಿದ್ದರು.
ವಿಡಿಯೊ ಸಂವಾದ ಬಳಿಕ ಜಿಲ್ಲೆಯಲ್ಲಿ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಶಾಲಾ ಕಟ್ಟಡಗಳ ಸ್ಥಿತಿಗತಿ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಪ್ಪ ಅವರಿಂದ ಮಾಹಿತಿ ಪಡೆದರು.
ಬಳಿಕ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರ ಜತೆ ನಡೆದ ವಿಡಿಯೊ ಸಂವಾದದಲ್ಲಿ ಪಾಲ್ಗೊಂಡು ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಪ್ರವಾಹ ಪೀಡಿತ ಸಂತ್ರಸ್ತರ ಸ್ಥಳಾಂತರ, ಕಾಳಜಿ ಕೇಂದ್ರ ಸ್ಥಾಪನೆ ಮತ್ತಿತರ ಬಗ್ಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾಹಿತಿ ನೀಡಿದರು.
Kodagu
ಕೊಡಗು ಮುಳುಗುತ್ತಿದೆ ರಾಜಕಾರಣ ಬಿಡಿ – ಸದನದಲ್ಲಿ ಎ.ಎಸ್.ಪೊನ್ನಣ್ಣ ಗುಡುಗು
ತೀವ್ರ ಮಳೆಯಿಂದ ಕೊಡಗು ಜಿಲ್ಲೆ ಮುಳುಗಿತ್ತಿದೆ. ಈ ಸಂಕಷ್ಟದ ಸಮಯದಲ್ಲಿ ನಿಮ್ಮ ರಾಜಕಾರಣ ಬಿಟ್ಟು ಕೊಡಗಿನ ಜನರ ರಕ್ಷಣೆಗೆ ಪೂರಕವಾದ ಚರ್ಚೆಗೆ ಬನ್ನಿ ಎಂದು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ವಿಧಾನ ಮಂಡಲ ಅಧಿವೇಶನದಲ್ಲಿ ವಿರೋಧ ಪಕ್ಷಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಶುಕ್ರವಾರ ಬೆಳಿಗ್ಗೆ ಸದನ ಆರಂಭವಾಗುತ್ತಿದ್ದಾಗ ಪ್ರತಿ ಪಕ್ಷಗಳು ಸಭಾಧ್ಯಕ್ಷರ ಪೀಠದ ಮುಂದೆ ಪ್ರತಿಭಟನೆ ನಡೆಸುತ್ತಿರುವುದಕ್ಕೆ ಆಕ್ಷೇಪ ಪಡಿಸಿದ ಎ.ಎಸ್.ಪೊನ್ನಣ್ಣ ಪ್ರಸ್ತುತ ನಾಲ್ಕು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿ ಜನ ಭಯಬೀತರಾಗಿದ್ದಾರೆ. ಊರು,ಕೇರಿ,ರಸ್ತೆ ಎಲ್ಲಾ ನೀರಿನಿಂದ ಮುಳುಗುತ್ತಿದೆ. ಇಂತಹ ಸಂಧರ್ಭದಲ್ಲಿ ಸರ್ಕಾರ ಜನರ ಜೀವ ಮತ್ತು ಆಸ್ತಿ ಪಾಸ್ತಿ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಬೇಕಿದೆ. ಕಳೆದ ನಾಲ್ಕು ದಿನದಿಂದ ವಿದ್ಯುತ್ ತಂತಿಗಳು ತುಂಡಾಗಿ ಕೊಡಗು ಕತ್ತಲೆಯ ಕೂಪವಾಗಿದೆ. ಜನರು ಮನೆಯಿಂದ ಹೊರಬಾರದ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜಕಾರಣ ಬೇಡ. ಮೊದಲು ಸಮಸ್ಯೆ ಬಗೆಹರಿಸಲು ಒಂದಾಗಿ ಪ್ರಯತ್ನಿಸುವ ಕೆಲಸ ಆಗಲಿ ಎಂದು ಸರ್ಕಾರ ಹಾಗೂ ಆಡಳಿತ ಮತ್ತು ವಿಪಕ್ಷಗಳ ಸದಸ್ಯರಿಗೆ ಸದನದಲ್ಲಿ ಒತ್ತಾಯಿಸಿದರು.
Kodagu
ಕಾವೇರಿ ನದಿ ಪ್ರವಾಹದ ಭೀತಿಯಲ್ಲಿ ಜನರು
ನಾಪೋಕ್ಲು ವ್ಯಾಪ್ತಿಯಲ್ಲಿ ವರುಣನ ಅಬ್ಬರ-ಕಾವೇರಿ ನದಿ ಪ್ರವಾಹದ ಭೀತಿಯಲ್ಲಿ ಜನರು
ನಾಪೋಕ್ಲು ವ್ಯಾಪ್ತಿಯ ಕಾವೇರಿ ನದಿ ಪ್ರವಾಹದಲ್ಲಿ ಮತ್ತಷ್ಟು ಏರಿಕೆ.ನಾಪೋಕ್ಲು -ಮೂರ್ನಾಡು ಸಂಪರ್ಕ ರಸ್ತೆಯಲ್ಲಿ ಪ್ರವಾಹ ಮತ್ತಷ್ಟು ಏರಿಕೆ.
ಕೊಟ್ಟಮುಡಿ ಜಂಕ್ಷನ್ ಬಳಿಯ ಮೂರ್ನಾಡು ರಸ್ತೆವರೆಗೂ ಆವರಿಸಿದ ಕಾವೇರಿ ನದಿ ಪ್ರವಾಹ.ಮೂರ್ನಾಡು ರಸ್ತೆಯ ಬೊಳಿಬಾಣೆ ರಸ್ತೆಯಲ್ಲಿ 6ಅಡಿಯಷ್ಟು ಬಂದ ಕಾವೇರಿ ನದಿ ಪ್ರವಾಹ.
ನಾಪೋಕ್ಲು ಕೊಟ್ಟಮುಡಿ ಬೆಟ್ಟಗೇರಿ ರಸ್ತೆಯಲ್ಲಿ ಪ್ರವಾಹ ಬರುವ ಸಾಧ್ಯತೆ. ಕೇವಲ 2ಅಡಿಯಷ್ಟು ನದಿ ನೀರು ಬಂದರೆ ನಾಪೋಕ್ಲು ಬೆಟ್ಟಗೇರಿ ಮಡಿಕೇರಿ ರಸ್ತೆ ಸಂಪರ್ಕ ಖಡಿತಗೊಳ್ಳುವ ಸಾಧ್ಯತೆ.
ಚೆರಿಯಪರಂಬು ಕಲ್ಲುಮೊಟ್ಟೆ ಸಂಪರ್ಕರಸ್ತೆಯ ಎರಡು ಕಡೆಗಳಲ್ಲಿ ರಸ್ತೆ ಸಂಪೂರ್ಣ ಜಲಾವೃತ. ಗ್ರಾಮದ ನದಿದಡದಲ್ಲಿ ವಾಸಿಸುವ ಜನರಲ್ಲಿ ಹೆಚ್ಚಿದ ಪ್ರವಾಹದ ಆತಂಕ.
ನಾಪೋಕ್ಲು -ಬಲಮುರಿ ಮಾರ್ಗದ ಮಕ್ಕಿಕಡವು ರಸ್ತೆಯಲ್ಲಿ ಮತ್ತಷ್ಟು ಏರಿಕೆ ಕಂಡ ಪ್ರವಾಹ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ನಾಪೋಕ್ಲು ಕೈಕಾಡು,ಪಾರಾಣೆ ರಸ್ತೆಯಲ್ಲಿರುವ ಎತ್ತುಕಡು ಹೊಳೆ ಪ್ರವಾಹ ರಸ್ತೆಗೆ ಬರಲು ಕೇವಲ ಒಂದು ಅಡಿಯಷ್ಟು ಮಾತ್ರ ಬಾಕಿಇದ್ದು ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
ನಾಪೋಕ್ಲು ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆಯಿಂದ ಮಳೆ ಬಿರುಸಿಕೊಂಡಿದ್ದು ಮತ್ತಷ್ಟು ಪ್ರವಾಹ ಬಂದು ನಾಪೋಕ್ಲು ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳು ಜಲಾವೃತಗೊಂಡು ನಾಪೋಕ್ಲು ಪಟ್ಟಣ ದ್ವೀಪವಾಗುವುದರಲ್ಲಿ ಯಾವುದೇ ಸಂಶಯವಿಲ್ಲ.
ಮಳೆ ಹಿನ್ನೆಲೆ ಜಿಲ್ಲಾಡಳಿತದಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಹರ್ಷ ವ್ಯಕ್ತಪಡಿಸಿದ ಮಕ್ಕಳ ಪೋಷಕರು.
Kodagu
ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ್ (PM USHA)ಗೆ ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಆಯ್ಕೆ
ಮಡಿಕೇರಿ : 2023-24ರ ಶೈಕ್ಷಣಿಕ ಸಾಲಿನಲ್ಲಿ ಕೇಂದ್ರ ಸರ್ಕಾರ ರಾಷ್ಟ್ರ ಮಟ್ಟದಲ್ಲಿ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ಸಲುವಾಗಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ್(PM USA) ಯೋಜನೆಯನ್ನು ಪ್ರಾರಂಭಿಸಿದೆ.ಈ ಯೋಜನೆಗೆ ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಅಯ್ಕೆಯಾಗಿದೆ.
ಈ ಯೋಜನೆಯಡಿ ಅಯ್ಕೆಯಾದ ಸಂಸ್ಥೆಗೆ ಮೂಲಭೂತ ಸೌಕರ್ಯ ಮತ್ತು ನವೀಕರಣ ಕಾಮಗಾರಿಗಾಗಿ 5 ಕೋಟಿ ರೂಪಾಯಿ ಅನುದಾನ ದೊರಕುತ್ತದೆ. ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜು, ಪ್ರಧಾನ ಮಂತ್ರಿ ಉಚ್ಛತರ ಶಿಕ್ಷಾ ಅಭಿಯಾನ್ ಯೋಜನೆಗೆ ಅಯ್ಕೆಯಾಗಿದ್ದು,ಯೋಜನೆಯ ಅಡಿಯಲ್ಲಿ 5 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ.ಸರಕಾರ
ಕಾಮಗಾರಿಯನ್ನು ಕರ್ನಾಟಕ ಗೃಹ ಮಂಡಳಿಯವರಿಗೆ ನೀಡಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ದಯಾನಂದ. ಕೆ.ಸಿಯವರು ತಿಳಿಸಿದ್ದಾರೆ.
-
Mysore3 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State5 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan3 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized1 month ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.