Connect with us

Mysore

ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಇಂದು ನಂಜನಗೂಡು ನಗರ ಪಟ್ಟಣ ಶ್ರೀರಾಂಪುರ ಯಿಂದ ಪಾದಯಾತ್ರೆ ಮುಖಾಂತರ ವಾರ್ಡ್ ನಂ.14, ವಾರ್ಡ್ ನಂ.15, ವಾರ್ಡ್ ನಂ.ಶಂಕರಪುರ

Published

on

ಚಾಮರಾಜನಗರ ಲೋಕಸಭಾ ಕ್ಷೇತ್ರ ಚುನಾವಣೆ ಹಿನ್ನೆಲೆಯ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಇಂದು ನಂಜನಗೂಡು ನಗರ ಪಟ್ಟಣ ಶ್ರೀರಾಂಪುರ ಯಿಂದ ಪಾದಯಾತ್ರೆ ಮುಖಾಂತರ ವಾರ್ಡ್ ನಂ.14, ವಾರ್ಡ್ ನಂ.15, ವಾರ್ಡ್ ನಂ.ಶಂಕರಪುರ
16, ಮುಖಾಂತರ ವಾರ್ಡ್ ನಂಬರ್ 17 , ನೀಲಕಂಠನಗರ ರವರೆಗೆ ನಂಜನಗೂಡು ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ರವರು ಮಾಜಿ ಶಾಸಕ ಕಳಲೆ ಕೇಶವಮೂತಿ೯, ಮತ್ತು ಮುಖಂಡರುಗಳ ಜೊತೆಗೂಡಿಕೊಂಡು ಪ್ರತಿ ಮನೆ ಮನೆಗೂ ತೆರಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಅವರ ಪರ ಮತಯಾಚನೆ ಮಾಡಿದರು.

ಬಳಿಕ ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ ನಮ್ಮ ಸರ್ಕಾರ ವಿಧಾನ ಸಭಾ ಚುನಾವಣೆಯಲ್ಲಿ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು.

ಅದೇ ರೀತಿ 10 ತಿಂಗಳಲ್ಲಿ 5 ಗ್ಯಾರಂಟಿಗಳನ್ನು ಜಾರಿ ಮಾಡಿ ನುಡಿದಂತೆ ನಡೆದಿದೆ ನಮ್ಮ ಕಾಂಗ್ರೆಸ್ ಪಕ್ಷ,

2019 ರ ಕೋವಿಡ್ ಸಂದರ್ಭದ ಕಷ್ಟದ ಸಮಯದಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಅರೋಗ್ಯ ಹಸ್ತ ಎಂಬ ಕಾರ್ಯಕ್ರಮದ ಮೂಲಕ ಜನರ ಕಷ್ಟಗಳಿಗೆ ಸ್ಪಂದಿಸಿ ಜನರ ನೆರವಿಗೆ ನಿಂತಿದ್ದ ಪಕ್ಷ ನಮ್ಮ ಕಾಂಗ್ರೆಸ್ ಪಕ್ಷ,

ನಮ್ಮ ತಂದೆ ದಿ. ಆರ್ ಧ್ರುವನಾರಾಯಣ್ ಅವರು ಎರಡು ಬಾರಿ ಸಂಸದರಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ.

ಇನ್ನೂ ಹೆಚ್ಚಿನ ಅಭಿವೃದ್ಧಿ ಹೊಂದುವ ಆಸೆ ಇಟ್ಟು ಕೊಂಡಿದ್ದ ಆರ್ ಧ್ರುವನಾರಾಯಣ್ ಅವರ ಕನಸನ್ನು ನನಸು ಮಾಡಲು ಸುನೀಲ್ ಬೋಸ್ ಅವರನ್ನು ಗೆಲ್ಲಿಸುವ ಹೊಣೆ ನಮ್ಮ ಕರ್ತವ್ಯವಾಗಿದೆ

ಆದ್ದರಿಂದ ಏ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಅವರನ್ನು ಅತಿ ಹೆಚ್ಚು ಮತಗಳಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ , ಕಾಂಗ್ರೆಸ್ ಪಕ್ಷದ ಜಿಲ್ಲಾ ಮಹಿಳೆ ಅಧ್ಯಕ್ಷ ಲತಾಸಿದ್ದಶೆಟ್ಟಿ, ನಗರಸಭೆ ಸದಸ್ಯರುಗಳಾದ ಎಂ. ಪ್ರದೀಪ್, ಶಂಕರಪುರ
ಶ್ರೀಕಂಠಸ್ವಾಮಿ(ಸ್ವಾಮಿ), ಕಾಂಗ್ರೆಸ್ ಪಕ್ಷದ ತಾಲೂಕು ಪ್ರಧಾನ ಕಾರ್ಯದರ್ಶಿ ಶ್ರೀರಾಂಪುರ ಮಹದೇವು, ಸುಧಾಕರ್(ಸುಧಾ),ನಗರ ಬ್ಲಾಕ್ ಅಧ್ಯಕ್ಷರಾದ ಸಿ. ಎಂ ಶಂಕರ್ , ದೇಬೂರು ಅಶೋಕ್,ಇಂಧನಬಾಬು,ಹೆಜ್ಜಿಗೆ ರವಿ, ಸೇರಿದಂತೆ ನಗರಸಭಾ ಸದಸ್ಯರುಗಳು,ವಿ, ಶ್ರೀನಿವಾಸ್ ಪ್ರಸಾದ್ ಅಭಿಮಾನ ಬಳಗದವರು,ಹಾಗೂ
ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು, ಮುಖಂಡರು, ಇದ್ದರು.

ನಂಜನಗೂಡು ಮಹದೇವಸ್ವಾಮಿ ಪಟೇಲ್.

Continue Reading
Click to comment

Leave a Reply

Your email address will not be published. Required fields are marked *

Mysore

ನಂಜನಗೂಡು ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ನೂತನ ಪಶು ಸಂಗೋಪನೆಯ ಆಸ್ಪತ್ರೆಯನ್ನು ಸಚಿವ ಕೆ ವೆಂಕಟೇಶ್ ,ಮತ್ತು ನಂಜನಗೂಡು ಕ್ಷೇತ್ರದ ಜನಪ್ರಿಯ ಶಾಸಕರಾದ ದರ್ಶನ್ ರವರುಗಳು ಉದ್ಘಾಟಿಸಿದರು.

Published

on

ನಂಜನಗೂಡು ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ನೂತನ ಪಶು ಸಂಗೋಪನೆಯ ಆಸ್ಪತ್ರೆಯನ್ನು ಸಚಿವ ಕೆ ವೆಂಕಟೇಶ್ ,ಮತ್ತು ನಂಜನಗೂಡು ಕ್ಷೇತ್ರದ ಜನಪ್ರಿಯ ಶಾಸಕರಾದ ದರ್ಶನ್ ರವರುಗಳು ಉದ್ಘಾಟಿಸಿದರು.

ಬಳಿಕ ಸಚಿವ ವೆಂಕಟೇಶ್ ಮಾತನಾಡಿ ಗ್ರಾಮೀಣ ಭಾಗದಲ್ಲಿ ಅತೀ ಹೆಚ್ಚು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಜಾನುವಾರುಗಳನ್ನು ಸಾಕುತ್ತಿದ್ದು ಅದರಲ್ಲೇ ಜೀವನ ಸಾಗಿಸುತ್ತಾರೆ ಈ ಗ್ರಾಮದಿಂದ ಜಾನುವಾರುಗಳಿಗೆ ಚಿಕಿತ್ಸೆ ಕೊಡಿಸಲು ಸುಮಾರು 20 ಕಿ ಮೀ ದೂರ ಹೋಗಬೇಕಾದ ದೃಷ್ಟಿಯಿಂದ ಈ ಕ್ಷೇತ್ರದ ಶಾಸಕರು ಒತ್ತಾಡದ ಮೇರೆಗೆ ಈ ಗ್ರಾಮಕ್ಕೆ ಪಶು ಸಂಗೋಪನೆ ಆಸ್ಪತ್ರೆಗೆ ಅನುದಾನ ನೀಡಲಾಗಿದೆ ಪ್ರತಿಯೊಬ್ಬ ರೈತರು ಸದ್ದುಪಯೋಗ ಪಡೆದುಕೊಳ್ಳಿ ಎಂದರಲ್ಲದೆ ನಮ್ಮ ಸರ್ಕಾರದಿಂದ ಜಾನುವಾರುಗಳು ಸಾವನ್ನಾಪ್ಪಿದರೆ 10 ಸಾವಿರ ಪರಿಹಾರ ನೀಡಲಾಗುತ್ತಿದೆ ಕುರಿ ಸಾವನ್ನಾಪ್ಪಿದರೆ 5 ಸಾವಿರ ಪರಿಹಾರವನ್ನು ನಮ್ಮ ಸರ್ಕಾರ ನೀಡುತ್ತಿದೆ ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಮತ್ತೊಂದು ಆಸ್ಪತ್ರೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿಯಾಗಬೇಕಿದೆ ಕಾಡಾಂಚಿನ ಗ್ರಾಮದಲ್ಲಿ ರೈತರು ಜಾನುವಾರುಗಳಿಗೆ ಚಿಕಿತ್ಸೆ ಕೊಡಿಸಲು ತುಂಭಾ ತೊಂದರೆಯಾಗಿರುವ ಬಗ್ಗೆ ನನಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸಚಿವರ ಗಮನಕ್ಕೆ ತಂದು ಆಸ್ಪತ್ರೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಕ್ಷೇತ್ರದ ಅಭಿವೃದ್ಧಿ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶಿವಕುಮಾರ್,
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಅದ್ಯಕ್ಷರಾದ ಕೆ ಜಿ ಮಹೇಶ್, ಶ್ರೀಕಂಠನಾಯಕ,ಗ್ರಾ ಪಂ ಅದ್ಯಕ್ಷ ಹರೀಶ್ ಕುಮಾರ್, ಸದಸ್ಯ ಕೃಷ್ಣಮೂರ್ತಿ,ಮಹದೇವು,ನಿಂಗಮಣಿ,ಮುಖಂಡರುಗಳಾದ ದೊರೆಸ್ವಾಮಿ ನಾಯಕ,ಸೇರಿದಂತೆ ಪ್ರಮುಖರು ಹಾಜರಿದ್ದರು.

ನಂಜನಗೂಡು ಮಹದೇವಸ್ವಾಮಿ ಪಟೇಲ್.

Continue Reading

Mysore

ಕಳ್ಳಿಮುದ್ದನಹಳ್ಳಿ ಸಣ್ಣ ಜವರಯ್ಯ ನಿಧನ 

Published

on

ವರದಿ : ಎಸ್ ಬಿ ಹರೀಶ್ ಸಾಲಿಗ್ರಾಮ
ಸಾಲಿಗ್ರಾಮ : ತಾಲೂಕಿನ ಕಳ್ಳಿಮುದ್ದನಹಳ್ಳಿ ಗ್ರಾಮದ ಸಣ್ಣ ಜವರಯ್ಯ (74 ವರ್ಷ ) ನಿಧಾನರಾದರು.

ಮೃತರು, ಪತ್ನಿ, ದಲಿತ ಸಂಫರ್ಷ ಸಮಿತಿ (ಅಂಭೇಡ್ಕರ್ ವಾದ)  ಸಂಘಟನೆಯ ಜಿಲ್ಲಾ ಸಂಚಾಲಕ ಚಂದ್ರು, ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ, ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಸ್ವಗ್ರಾಮದಲ್ಲಿ ನೆರವೇರಿತು.

ಎಸ್ ಸಿ ಘಟಕದ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಂಠಿ ಕುಮಾರ್, ಪತ್ರಕರ್ತರಾದ ಎಸ್ ಬಿ ಹರೀಶ್,ಲಕ್ಕಿಕುಪ್ಪೆ ರಮೇಶ್, ರಾಂಪುರ ಲೋಕೇಶ್ ಸಂತಾಪ ಸೂಚಿಸಿದ್ದಾರೆ.

Continue Reading

Mysore

ಟ್ರ್ಯಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Published

on

ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ

ಸಾಲಿಗ್ರಾಮ : ಟ್ರ್ಯಾಕ್ಟರ್ ಮಗುಚಿ ಬಿದ್ದ ಪರಿಣಾಮ ಚಾಲಕ  ಮೃತಪಟ್ಟಿರುವ ಘಟನೆ ಸಾಲಿಗ್ರಾಮ ತಾಲೂಕಿನ ಹಳೆ ಮಿರ್ಲೆ ಗ್ರಾಮದಲ್ಲಿ  ನಡೆದಿದೆ.


ಘಟನೆಯಲ್ಲಿ ಗ್ರಾಮದ ಕುಮಾರ್ ಎಂಬುವರ‌ ಪುತ್ರ ಮನೋಜ್ (23) ಎಂಬಾತನೇ ಮೃತಪಟ್ಟವನಾಗಿದ್ದಾನೆ.
ಮೃತ ಮನೋಜ್ ಜಮೀನು ಒಂದನ್ನು ಉಳುಮೆ ಮಾಡಲು ಚಾಮರಾಜ ನಾಲೆಯ ಏರಿಯ ಮೇಲೆ ಹೋಗುತ್ತಿದ್ದಾಗ ಆಕ್ಮಸಿಕವಾಗಿ ಟ್ಯಾಕ್ಟರ್ ಜಮೀನಿಗೆ ಉರುಳಿ, ಈ ಅವಘಡ ಸಂಭವಿಸಿದೆ.


ಘಟನೆ ನಡೆದ ತಕ್ಷಣವೇ ಮಗುಚಿ ಬಿದ್ದ ಟ್ಯಾಕ್ಟರ್ ನ ಅಡಿಯಲ್ಲಿ ಸಿಲುಕಿದ್ದ ಮನೋಜ್ ನನ್ನ ಮೇಲಕ್ಕೆ ಎತ್ತಿ ಹೆಚ್ಚಿನ ಚಿಕಿತ್ಸೆಗಾಗಿ ಕೆ.ಆರ್.ನಗರ ಆಸ್ವತ್ರೆಗೆ ಕರೆತಂದರು ಯಾವುದೇ ಪ್ರಯೋಜನವಾಗಲಿಲ್ಲ.
ಘಟನೆಯ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Trending

error: Content is protected !!