Chamarajanagar
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡರುಗಳು ಜೆಡಿಎಸ್ ಪಕ್ಷ ತೊರೆದು ಮಾಜಿ ಶಾಸಕ ಆರ್ ನರೇಂದ್ರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡರುಗಳು ಜೆಡಿಎಸ್ ಪಕ್ಷ ತೊರೆದು ಮಾಜಿ ಶಾಸಕ ಆರ್ ನರೇಂದ್ರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ಪಕ್ಷ ಸೇರ್ಪಡೆ ನಂತರ ಮುಖಂಡ ವೆಂಕಟೇಶ್ ಮಾತನಾಡಿ ಸ್ಥಳೀಯ ಶಾಸಕ ಎಂಆರ್ ಮಂಜುನಾಥ್ ರವರ ಮೇಲೆ ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡು ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದೆವು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ, ವಿದ್ಯಾವಂತ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ದೊರಕಿಸಿ ಕೊಡುವುದೇ ನನ್ನ ಮೊದಲ ಆದ್ಯತೆ ಎಂದು ಇನ್ನಿಲ್ಲದ ಭರವಸೆಗಳನ್ನು ನೀಡಿದ್ದರು. ಆದರೆ ಕಳೆದ ಒಂದು ವರ್ಷದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ, ರಸ್ತೆ ತುಂಬಾ ದುರಸ್ತಿಗೊಂಡಿರುವುದರಿಂದ ದ್ವಿಚಕ್ರ ವಾಹನಗಳಲ್ಲಿಯೂ ಸಂಚಾರ ಮಾಡುವುದೇ ಕಷ್ಟವಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಬರಗಾಲವಿದ್ದರೂ ಜಾನುವಾರುಗಳಿಗೆ ಮೇವು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ, ನಿರುದ್ಯೋಗಿ ಯುವಕ ಯುವತಿಯರಿಗೆ ಯಾವುದೇ ಉದ್ಯೋಗ ಕಲ್ಪಿಸಿಕೊಡದೇ ಇರುವುದರಿಂದ ಬೇರೆ ಕಡೆ ವಲಸೆ ಹೋಗಿದ್ದಾರೆ, ಇವರು ಕೊಟ್ಟ ಭರವಸೆಯನ್ನು ಈಡೇರಿಸದೆ ಇರುವುದರಿಂದ ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುತ್ತಿದ್ದೇವೆ ಎಂದು ತಿಳಿಸಿದರು.

ಮಾಜಿ ಶಾಸಕ ಆರ್ ನರೇಂದ್ರ ಮಾತನಾಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರ್ಕಾರ, ನಾವು ಬೇರೆಯವರ ರೀತಿ ಇನ್ನಿಲ್ಲದ ಸುಳ್ಳು ಆಶ್ವಾಸಗಳನ್ನು ಕೊಡುವುದಿಲ್ಲ, ಬದಲಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿಯೇ ತೀರುತ್ತೇವೆ, ಮುಂದಿನ ದಿನಗಳಲ್ಲಿ ನಿಮ್ಮ ಕಷ್ಟಕ್ಕೆ ಧ್ವನಿಯಾಗಿ ಇರುತ್ತೇನೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರಿಗೆ ತಮ್ಮ ಗ್ರಾಮಗಳಲ್ಲಿ ಹೆಚ್ಚಿನ ಮತ ಕೊಡಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಹೂಗ್ಯಂ ಗ್ರಾಮದ ಹುಚ್ಚಯ್ಯ, ವೆಂಕಟೇಶ್, ಚಿನ್ನರಾಜು, ಕೃಷ್ಣ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಮುಕುಂದವರ್ಮ, ಈಶ್ವರ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ದೊರೆರಾಜು, ರಾಮಪುರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉದ್ದನೂರು ಸಿದ್ದರಾಜು, ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮಾದೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Chamarajanagar
ಮೆಕ್ಕೆಜೋಳ ಖರೀದಿಸಲು ನೊಂದಣಿ ಕೇಂದ್ರ ಕಾರ್ಯಾರಂಭ
ಚಾಮರಾಜನಗರ: ಕರ್ನಾಟಕ ಹಾಲು ಮಹಾಮಂಡಳಿಯು (ಕೆಎಂಎಫ್) ರೈತರಿಂದ ನೇರವಾಗಿ ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆ ಮೂಲಕ ಮೆಕ್ಕೆಜೋಳ ಖರೀದಿಸುತ್ತಿದ್ದು, ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (ಚಾಮುಲ್) ಸಹಕಾರ ಸಂಘಗಳ ಮೂಲಕವೂ ಖರೀದಿ ಕೇಂದ್ರ ತೆರೆಯಲಾಗಿದೆ.
ಚಾಮರಾಜನಗರದ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ನಿಯಮಿತವು ಕರ್ನಾಟಕ ಹಾಲು ಮಹಾಮಂಡಳಿಯ (ಕೆಎಂಎಫ್) ಒಡೆತನದ ಪಶು ಆಹಾರ ಘಟಕಗಳಿಗೆ ಪಶು ಆಹಾರ ಉತ್ಪಾದನೆಗೆ ಅವಶ್ಯವಿರುವ ಮೆಕ್ಕೆಜೋಳವನ್ನು ರಾಜ್ಯ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಲ್‍ಗೆ 2,400 ರೂ. ಗಳಂತೆ (ಮೂಲ ಬೆಲೆ, ಎರಡು ಗೋಣಿಚೀಲದ ಮೊತ್ತ ಮತ್ತು ಸಾಗಾಣಿಕೆ ಮೊತ್ತ ಸೇರಿದಂತೆ) ಗುಣಮಟ್ಟ ನಿಬಂಧನೆಗೊಳಪಟ್ಟು ರೈತರಿಂದ ನೇರವಾಗಿ ಖರೀದಿಸಲು ತೀರ್ಮಾನವಾಗಿರುತ್ತದೆ.

ಅದರಂತೆ ಜಿಲ್ಲೆಯ ರೈತರಿಂದ ಕರ್ನಾಟಕ ಹಾಲು ಮಹಾಮಂಡಳಿಯ ಹಾಸನ ಪಶು ಆಹಾರ ಘಟಕಕ್ಕೆ ನಿಗದಿಪಡಿಸಿದ ದರದಲ್ಲಿ ಮೆಕ್ಕೆಜೋಳ ಖರೀದಿಸಲು ಪ್ರಕ್ರಿಯೆ ಆರಂಭವಾಗಿರುತ್ತದೆ. ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಿಬ್ಬಂದಿ ಹಾಗೂ ಒಕ್ಕೂಟದ ನಿಯೋಜಿತ ಅಧಿಕಾರಿಗಳ ಸಮನ್ವಯದೊಂದಿಗೆ ಎನ್‍ಇಎಂಎಲ್ ಸಂಸ್ಥೆ ಅಭಿವೃದ್ಧಿಪಡಿಸಿದ ಇ-ಸಂವೃದ್ಧಿ ಹಾಗೂ ಸರ್ಕಾರದ ಫ್ರೂಟ್ಸ್ ತಂತ್ರಾಂಶದ ಮೂಲಕ ನೋಂದಣಿ ಮಾಡಿ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿ ನಂತರ ಖರೀದಿಸಲಾಗುವುದು.
ಮೆಕ್ಕೆಜೋಳ ಬೆಳೆದು ಬೆಳೆ ಸಮೀಕ್ಷೆಯಲ್ಲಿ ಮೆಕ್ಕೆಜೋಳ ಬೆಳೆ ಎಂದು ಆರ್.ಟಿ.ಸಿ ವಾರು ನಮೂದಾಗಿರುವ ರೈತರು ಮಾತ್ರ ಯೋಜನೆಗೆ ಅರ್ಹರಾಗಿರುತ್ತಾರೆ. ಯೋಜನೆಯಡಿ ಎಕರೆಗೆ 12 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಪ್ರಮಾಣದ ಎಫ್.ಎ.ಕ್ಯೂ ಗುಣಮಟ್ಟದ ಮೆಕ್ಕೆಜೋಳವನ್ನು ಮಾತ್ರ ಖರೀದಿಸಲಾಗುವುದು. ರೈತರ ಹೆಸರಿನ ಆಧಾರ್ ಸಂಖ್ಯೆಗೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಡಿಬಿಟಿ ಮೂಲಕ ಹಣ ಪಾವತಿಸಲಾಗುವುದು.

ಮೆಕ್ಕೆಜೋಳ ಮಾರಾಟ ಮಾಡಲು ಆಸಕ್ತ ರೈತರು ಚಾಮರಾಜನಗರದ ಜಿಲ್ಲಾ ಹಾಲು ಒಕ್ಕೂಟದ ವ್ಯಾಪ್ತಿಯ ತಾಲೂಕು ಉಪ ಕಚೇರಿಗಳನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಚಾಮುಲ್ ಮೊ.ಸಂ. 6366824213, ಚಾಮರಾಜನಗರ ಮತ್ತು ಯಳಂದೂರು ಮೊ.ಸಂ. 9945828993, ಗುಂಡ್ಲುಪೇಟೆ ಮೊ.ಸಂ. 9606098335, ಹನೂರು ಮೊ.ಸಂ 9740576484, ಕೊಳ್ಳೇಗಾಲ ಮೊ.ಸಂ. 6366824224 ಸಂಪರ್ಕಿಸುವಂತೆ ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾದ ರಾಜ್‍ಕುಮಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
Chamarajanagar
ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಚಾಮರಾಜನಗರ: ತಾಲೂಕಿನ ನಾಗವಳ್ಳಿ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಂಪ್ಯೂಟರ್, ಆರ್ಟ್ ಮತ್ತು ಕ್ರಾಫ್ಟ್, ನೃತ್ಯ ಮತ್ತು ಸಂಗೀತ ಹಾಗೂ ಇಂಗ್ಲೀಷ್ ವಿಷಯಕ್ಕೆ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಡಿ.7 ರಿಂದ ಡಿ.11ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ವಿದ್ಯಾರ್ಹತೆ ಉಳ್ಳವರು ತಮ್ಮ ಸ್ವ ವಿವರದೊಂದಿಗೆ ನೇರವಾಗಿ ಶಾಲೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ 8310434085, 9886824852, 9036375844 ಸಂಪರ್ಕಿಸಬಹುದೆಂದು ನಾಗವಳ್ಳಿ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Chamarajanagar
ಆರೋಗ್ಯಕ್ಕೆ ಮೊಲದ ಆದ್ಯತೆ ನೀಡಿ: ಕಾಗಲವಾಡಿ ಚಂದ್ರು ಸಲಹೆ
ಚಾಮರಾಜನಗರ: ರೋಟರಿ ಸಂಸ್ಥೆ ವತಿಯಿಂದ ನಗರದಲ್ಲಿ ಇಂದು ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು.
ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ರೋಟರಿ ಭವನದಲ್ಲಿ ರೋಟರಿ ಸಂಸ್ಥೆ, ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ, ಅರವಿಂದ ಕಣ್ಣಿನ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ 300 ಮಂದಿ ತಪಾಸಣೆ ಮಾಡಿಸಿಕೊಂಡರು. 170 ಮಂದಿ ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದು, ಅವರನ್ನು ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಶಿಬಿರದಲ್ಲಿ ವ್ಯವಸ್ಥೆ ಮಾಡಲಾಯಿತು.
ರೋಟರಿ ಸಂಸ್ಥೆ ಅಧ್ಯಕ್ಷ ಕಾಗಲವಾಡಿ ಚಂದ್ರು ಮಾತನಾಡಿ, ಆರೋಗ್ಯಕ್ಕೆ ಮೊಲದ ಆಧ್ಯತೆ ನೀಡಬೇಕು. ಪಂಚೇಂದ್ರಿಯಗಳಲ್ಲಿ ಕಣ್ಣು ಪ್ರಮುಖವಾದ ಅಂಗವಾಗಿದೆ. ಕಣ್ಣುಗಳನ್ನು ರಕ್ಷಿಸಿಕೊಳ್ಳವುದರ ಮೂಲಕ ಅಂಧತ್ವ ನಿವಾರಣೆ ಮಾಡಿಕೊಳ್ಳಬೇಕಿದೆ ಎಂದರು.

ರೋಟರಿ ಸಂಸ್ಥೆಯು ಪ್ರತಿ ತಿಂಗಳು ಮೊದಲನೆಯ ಭಾನುವಾರ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಅಯೋಜಿಸುತ್ತಿದ್ದು, ಸಾರ್ವಜನಿಕರು ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದದ್ದು ತುಂಬಾ ಸಂತಸವಾಗಿದೆ ಎಂದರು. ಈ ಶಿಬಿರದಲ್ಲಿ ಇಬ್ಬರು ವಿದ್ಯಾರ್ಥಿಗಳಾದ ಚಂದ್ರಶೇಖರ್, ಧನುಷ್ ಅವರಿಗೆ ಕನ್ನಡಕ ವಿತರಿಸಲಾಯಿತು.
ರೋಟರಿ ಸಂಸ್ಥಾಪಕ ಸದಸ್ಯರಾದ ಶ್ರೀನಿವಾಸಶೆಟ್ಟಿ, ಕೆ.ಎಂ.ಮಹಾದೇವಸ್ವಾಮಿ, ಸುರಬಿ ನಾಗರಾಜು, ಪ್ರಭಾಕರ್, ಸಿ.ಎ.ನಾರಾಯಣ್, ಸುರೇಶ್, ಅಂಕಶೆಟ್ಟಿ, ಎಲ್.ನಾಗರಾಜು, ಎ.ಶ್ರೀನಿವಾಸನ್, ರೂಪೇಶ್, ಮಹಾದೇವಸ್ವಾಮಿ, ಅಬ್ದುಲ್ ಅಜೀಜ್ ದೀನಾ, ರಾಜುವರ್ಗೀಸ್, ಡಾ.ಪರಮೇಶ್ವರಪ್ಪ, ಸವಿತಾ,
ಪಿಆರ್‌ಒ ವಿಜಯಕಾಂತ್ ಇತರರು ಹಾಜರಿದ್ದರು.
-
Mysore15 hours agoಉದ್ಯಮಿ ಅಪಹರಿಸಿ ಕೋಟಿ ರೂ.ಗಳಿಗೆ ಡಿಮ್ಯಾಂಡ್: ನಾಲ್ವರ ಬಂಧನ
-
Mysore18 hours agoಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ
-
Hassan17 hours agoHKS PUC ಕಾಲೇಜಿನಲ್ಲಿ ಜರುಗಿದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ ಸಮಾರೋಪ ಸಮಾರಂಭ
-
Special14 hours agoಮಹಿಳೆಯರಿಗೆ ದೊಡ್ಡ ಅವಕಾಶ! ಅಂಗನವಾಡಿಯ 571 ಹುದ್ದೆಗಳಿಗೆ ಅರ್ಜಿ ಅಹ್ವಾನ.
-
Chikmagalur18 hours agoಕಾಫಿನಾಡಲ್ಲಿ ನಿಲ್ಲದ ಕಾಡಾನೆ ದಾಳಿ: ಕಾರ್ಮಿಕ ಗಣಪತಿ ಪ್ರಾಣಾಪಾಯದಿಂದ ಪಾರು
-
Chikmagalur19 hours agoಗ್ರಾ.ಪಂ.ಸದಸ್ಯ ಗಣೇಶ್ ಕೊಲೆ ಪ್ರಕರಣ: ಐವರ ಬಂಧನ, ಮೂವರಿಗಾಗಿ ತೀವ್ರ ಶೋಧ
-
State20 hours agoನಾಳೆಯಿಂದ ಚಳಿಗಾಲದ ಅಧಿವೇಶನ: ಸುವರ್ಣಸೌಧದಲ್ಲಿ ಸುತ್ತ ಹೈ ಆಲರ್ಟ್ 6,000 ಪೊಲೀಸ್ ಭದ್ರತೆ
-
Mandya17 hours agoಮದ್ದೂರು ಬಳಿ ಭೀಕರ ಅಪಘಾತ : ಖಾಸಗಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
