Connect with us

Mandya

ವಿದ್ಯಾರ್ಥಿಗಳಿಗೆ ಅಭಿನಂಧನಾ ಸಮಾರಂಭ

Published

on

ಹಲಗೂರು: ಇಲ್ಲಿನ ಚನ್ನಪಟ್ಟಣ ರಸ್ತೆಯಲ್ಲಿರುವ ಜೆ.ಜೆ ಪಬ್ಲಿಕ್ ಶಾಲೆಯಲ್ಲಿ 2023-24 ನೇ ಸಾಲಿನಲ್ಲಿ SSLC ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 15 ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಅಭಿನಂಧಿಸಲಾಯಿತು.

ಶಾಲೆಯ ಕಾರ್ಯದರ್ಶಿಗಳಾದ ಸೋಮಶೇಖರ್ ಹಾಗೂ ಪ್ರಾಂಶುಪಾಲರ ಲಲಿತಾಂಬ ಸೋಮಶೇಖರ್ ಮಕ್ಕಳಿಗೆ ಶಾಲು ಹಾಗೂ ಹಾರ ಹಾಕಿ ಅಭಿನಂದಿಸಿದರು.

ಶಾಲೆಯ ಮುಖ್ಯ ಶಿಕ್ಷಕರಾದ ಲಲಿತಾಂಬ ಸೋಮಶೇಖರ್ ಮಾತನಾಡಿ, ಈ ಬಾರಿಯ ಎಸ್.ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ರೇಷ್ಮಾ 615 ಅಂಕ ಪಡೆದು ಮಳವಳ್ಳಿ ತಾಲೂಕಿನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅಲ್ಲದೆ ನಮ್ಮ ಶಾಲೆಗೆ ಕೀರ್ತಿ ತಂದಿರುವುದು ನಮಗೆ ಸಂತಸದ ತಂದಿದೆ. ನಮ್ಮ ಶಾಲೆಗೆ ನೂರಕ್ಕೆ ನೂರು ಫಲಿತಾಂಶ ಬಂದಿದ್ದು, 11 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಸೇರ್ಕಡೆಯಾಗಿದ್ದಾರೆ. 9ನೇ ತರಗತಿಯಿಂದ 10ನೇ ತರಗತಿಗೆ ಪಾಸ್ ಆಗಿರುವ ಮಕ್ಕಳು ಇದಕ್ಕಿಂತ ಇನ್ನು ಹೆಚ್ಚು ಅಂಕಗಳಿಸಿ ಎಂದು ಸಂತಸ ಪಟ್ಟರು.

ಮಳವಳ್ಳಿ ತಾಲೂಕಿನಲ್ಲಿ ದ್ವಿತೀಯ ಸ್ಥಾನ ಪಡೆದ ಕುಮಾರಿ ರೇಷ್ಮಾ ರವರು ಮಾತನಾಡಿ, ನಾನು ಈ ಶಾಲೆಯಲ್ಲಿ ಪಿಕೆಜಿ ಯಿಂದ ಎಸ್ ಎಸ್ ಎಲ್ ಸಿ ವರೆಗೂ ವಿದ್ಯಾಭ್ಯಾಸ ನಡೆಸಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಈ ಬಾರಿ ತಾಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದೇನೆ. ನಾನು ದ್ವಿತೀಯ ಸ್ಥಾನ ಪಡೆಯಲು ನಮ್ಮ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರ ಪರಿಶ್ರಮ ಹೆಚ್ಚು. ಅದರಲ್ಲೂ ರಾತ್ರಿ ತರಗತಿ ನಡೆಸಿ, ಯಾವುದೇ ವೇಳೆಯಲ್ಲೂ ನಮ್ಮ ಶಿಕ್ಷಕರಿಗೆ ಕರೆ ಮಾಡಿ ನನಗೆ ಗೊತ್ತಿಲ್ಲದ ವಿಷಯವನ್ನು ತಿಳಿದುಕೊಳ್ಳುತ್ತಿದ್ದೆ ಎಂದರು.

ಇದೇ ಸಂದರ್ಭದಲ್ಲಿ ಕಾರ್ಯದರ್ಶಿ ಸೋಮಶೇಖರ್, ಪ್ರಾಂಶುಪಾಲರದ ಲಲಿತಾಂಬ ಸೋಮಶೇಖರ್. ಶಿವಮಣಿ. ಸುಮಿತ್ರ. ವಿಕಾಸು. ಮಧು. ಹಾಗೂ ಪೋಷಕರು ಹಾಜರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಡಿ.28 ರಂದು ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ನಾಗರಿಕರಿಗೆ ಸನ್ಮಾನ : ಪಾಪಣ್ಣ

Published

on

ಮಳವಳ್ಳಿ : ಇದೇ ಡಿ.28 ರಂದು ಬೆಂಗಳೂರಿನ ಲಕ್ಷ್ಮೀನಾರಾಯಣಪುರದ ಒಡಲೂರು ಶ್ರೀ ಜ್ಯೋತಿ ರಾಮಲಿಂಗ ಸ್ವಾಮಿಗಳ ಸಮರಸ ಸನ್ಮಾರ್ಗ ಸಂಘದ ಕಚೇರಿಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ನಾಗರಿಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಆರ್.ಆರ್ ವಧು- ವರರ ಕೇಂದ್ರದ
ಅಧ್ಯಕ್ಷ ಪಾಪಣ್ಣ ಅವರು ತಿಳಿಸಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ನಾರಾಯಣಪ್ಪ.ವಿ ಜಾಲಗೆರೆ ಮಾತನಾಡಿ, ಪಾಪಣ್ಣನವರ ಕಾರ್ಯಕ್ರಮಕ್ಕೆ ಸಂಪೂರ್ಣ ಬೆಂಬಲ ಹಾಗೂ ಸಹಭಾಗಿತ್ವವನ್ನು ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೇಳಿಕೊಂಡರು.

ಸುದ್ದಿಗೋಷ್ಠಿಯಲ್ಲಿ ಮಡಿವಾಳರ ಖಡ್ಗ ಪತ್ರಿಕೆಯ ಚಂದ್ರಶೇಖರ್, ಶಂಕರಮಠ ವಾರ್ಡ್ ಒಬಿಸಿ ಅಧ್ಯಕ್ಷ ಜಯರಾಮ್, ಬಿಜೆಪಿ ಮುಖಂಡ ಕೆಂಚಪ್ಪ, ಮುಖಂಡರಾದ ನಾಗರಾಜ ಮತ್ತು ಮುನಿರಾಜು, ವೆಂಕಟಾದ್ರಿ ಟೆಂಟ್ ಹೌಸ್ ಮಾಲೀಕ ವೆಂಕಟೇಶ್ ಉಪಸ್ಥಿತರಿದ್ದರು.

Continue Reading

Mandya

ವಿವಿಧ ಗಣ್ಯರ ಪುತ್ಥಳಿ, ಸರ್ಕಲ್ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಶಾಸಕ ಕೆ.ಎಂ.ಉದಯ್‌

Published

on

ಮದ್ದೂರು:  ತಾಲೂಕಿನ ನಗರ ವ್ಯಾಪ್ತಿಯ ವಿವಿಧ ಗಣ್ಯರ ಪುತ್ಥಳಿ ಹಾಗೂ ಸರ್ಕಲ್ ನಿರ್ಮಾಣಕ್ಕೆ ಶಾಸಕ ಕೆ. ಎಂ .ಉದಯ್  ಸ್ಥಳ  ಪರಿಶೀಲನೆ ನಡೆಸಿದ್ದಾರೆ.

ಮದ್ದೂರು ನಗರದ ಟಿ.ಬಿ. ಸರ್ಕಲ್‌ನಿಂದ ಪೇಟೆಬೀದಿ, ಕೊಲ್ಲಿ ಸರ್ಕಲ್‌ವರೆಗೆ 80 ಅಡಿ ರಸ್ತೆ ಮತ್ತು ಶಿವಪುರದ ಕೊಪ್ಪ ಸರ್ಕಲ್ ಸೇರಿದಂತೆ ನಗರದ ವಿವಿಧ ಪ್ರಮುಖ ಸರ್ಕಲ್‌ಗಳಲ್ಲಿ ಗಣ್ಯರ ಪುತ್ಥಳಿ ಹಾಗೂ ಸರ್ಕಲ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇಂದು ಸ್ಥಳ ಪರಿಶೀಲನೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ, ಶಿವಪುರದ ಕೊಪ್ಪ ಸರ್ಕಲ್ – ಭಕ್ತ ಕನಕದಾಸರು, ಕೊಲ್ಲಿ ಸರ್ಕಲ್ – ವಿಶ್ವಗುರು ಜಗಜ್ಯೋತಿ ಶ್ರೀ ಬಸವಣ್ಣ, ಹೂವಿನ ಸರ್ಕಲ್ – ಅಮರ ಶಿಲ್ಪಿ ಶ್ರೀ ಜಕಣಚಾರಿ, ಕೆಮ್ಮಣ್ಣು ನಾಲೆ ಸರ್ಕಲ್ – ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್, ಸ್ಟೇಡಿಯಂ ಸರ್ಕಲ್ – ಶ್ರೀ ಶ್ರೀ ಶ್ರೀ ಬಾಲ ಗಂಗಾಧರನಾಥ ಸ್ವಾಮಿಜೀ ಹಾಗೂ ಟಿ.ಬಿ. ಸರ್ಕಲ್ – ನಾಡಪ್ರಭು ಶ್ರೀ ಕೆಂಪೇಗೌಡರು ರವರುಗಳ ಪುತ್ಥಳಿ ಹಾಗೂ ಸರ್ಕಲ್ ನಿರ್ಮಾಣಕ್ಕೆ ಸಂಬಂಧಿಸಿದಂತೆ, ಅಯೋಧ್ಯೆಯ ಬಾಲರಾಮನ ಕೆತ್ತನೆಯ ಖ್ಯಾತ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್ ರವರ ಜೊತೆಗೂಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಪರಿಶೀಲನೆಯ ಮೂಲಕ ಯೋಜನೆಯ ವಿನ್ಯಾಸ, ಸ್ಥಳದ ಸೂಕ್ತತೆ, ಸಂಚಾರ ವ್ಯವಸ್ಥೆ ಹಾಗೂ ಅಗತ್ಯ ಮೂಲಸೌಕರ್ಯಗಳ ಬಗ್ಗೆ ಚರ್ಚಿಸಿ, ಮುಂದಿನ ಕ್ರಮಗಳಿಗೆ ಅಗತ್ಯ ಮಾರ್ಗದರ್ಶನ ಪಡೆದಿದ್ದಾರೆ.

Continue Reading

Mandya

ವಿಕಲಚೇತನ ಯುವತಿ ಮೇಲೆ ಅತ್ಯಾಚಾರ ಆರೋಪ : ದೂರು ದಾಖಲು

Published

on

ವರದಿ : ಅಲ್ಲಾಪಟ್ಟಣ ಸತೀಶ್

ಮಂಡ್ಯ :  ಜಿಲ್ಲೆಯ ಕೆ‌.ಆರ್.ಪೇಟೆ ತಾಲೂಕಿನಲ್ಲಿ ವಿಕಲಚೇತನ ಯುವತಿ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲುಗೊಂಡಿದೆ.

ಕೆ.ಆರ್.ಪೇಟೆ ತಾಲೂಕಿನ ಪುರ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಗ್ರಾಮದ ರಮ್ಯಾ(26) ದೂರು ನೀಡಿರುವ ಯುವತಿಯಾಗಿದ್ದಾಳೆ. ಅದೇ ಗ್ರಾಮದ ಪಕ್ಕದ ಮನೆಯ ಪೃಥ್ವಿ(27) ಎಂಬಾತ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದ್ದು,ಅತ್ಯಾಚಾರದ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದನು ಎಂದು ದೂರಿನಲ್ಲಿ ತಿಳಿಸಿದ್ದಾಳೆ.

ಮನೆಯಲ್ಲಿ ರಮ್ಯಾ ಒಬ್ಬಳೇ ಇರುವಾಗ ಅತ್ಯಾಚಾರವೆಸಗಿರುವುದಾಗಿ ಹೇಳಲಾಗಿದ್ದು, ಆಕೆ ಗರ್ಭಿಣಿಯಾದ ಬಳಿಕ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎನ್ನಲಾಗಿದೆ.

ಯಾರಿಗಾದರೂ ಹೇಳಿದರೆ ನಿಮ್ಮ ಅಪ್ಪ, ಅಮ್ಮನನ್ನ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾಗಿ ಯುವತಿ ತಿಳಿಸಿದ್ದಾಳೆ.

ಅಕ್ಟೋಬರ್ ತಿಂಗಳಲ್ಲಿ ರಮ್ಯಾಗೆ ವಾಂತಿ ಶುರುವಾಗಿದ್ದ ಹಿನ್ನೆಲೆಯಲ್ಲಿ ವೈದ್ಯರ ಬಳಿ ತಪಾಸಣೆ ಮಾಡಲಾಗಿ ವೈದ್ಯರ ಸಲಹೆಯಂತೆ ಸ್ಕ್ಯಾನಿಂಗ್ ಮಾಡಿಸಿದಾಗ ಗರ್ಭಿಣಿಯಾಗಿರುವುದು ದೃಢ ಪಟ್ಡಿದೆ ಎನ್ನಲಾಗಿದೆ.

ಬಳಿಕ ಮದುವೆ ಮಾಡುವಂತೆ ಪೃಥ್ವಿ ಮನೆಯವರೊಂದಿಗೆ ಮಾತುಕತೆ ನಡೆದಿದ್ದು, ಮದುವೆಗೆ ಒಪ್ಪಿ ಇದೀಗ ಮದುವೆಯಾಗದೆ ಮೋಸ ಮಾಡಿರುವುದಾಗಿ ಸಂತ್ರಸ್ತೆ  ಠಾಣೆಗೆ ದೂರು ನೀಡಿದ್ದಾಳೆ.

ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ‌.

Continue Reading

Trending

error: Content is protected !!