Connect with us

Chikmagalur

ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸ್ಥಳದಲ್ಲೇ ಸಾವು

Published

on

ಎನ್ .ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಸೀಗೋಡು ಬಳಿಯ ಎಸ್ಟೇಟ್ ನಲ್ಲಿ ಘಟನೆ

ಮಹದೇವ್ (29) ಮೃತ ದುರ್ದೈವಿ

ಒಂದೂವರೆ ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಮಹದೇವ್

ಸೀಗೋಡು ಕೆಫೆ ಸಮೀಪ ಎಸ್ಟೇಟ್ ನಲ್ಲಿ ವಿದ್ಯುತ್ ಸಂಪರ್ಕ ದುರಸ್ತಿ ವೇಳೆ ಅವಘಡ

ಬಾಳೆಹೊನ್ನೂರು ಮೆಸ್ಕಾಂ ಘಟಕದ ಲೈನ್ ಮ್ಯಾನ್ ಮಹದೇವ್

ಬಾಳೆಹೊನ್ನೂರು ಭಾಗದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಮಹದೇವ್

ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕು

Continue Reading
Click to comment

Leave a Reply

Your email address will not be published. Required fields are marked *

Chikmagalur

ಐಸ್ ಕ್ರೀಂ ಮ್ಯಾನ್ ಎಂದೇ ಖ್ಯಾತರಾಗಿದ್ದ ರಘುನಂದನ್ ಕಾಮತ್ ನಿಧನ

Published

on

ಮಂಗಳೂರು: ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (70) ಅವರು ಮೇ 17ರಂದು ಮುಂಬಯಿಯಲ್ಲಿ ನಿಧನ ಹೊಂದಿದರು. ಅವರು ಪತ್ನಿ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ರಘುನಂದನ್ ಕಾಮತ್ ಅವರು 1954ರಲ್ಲಿ ಮೂಲ್ಕಿಯಲ್ಲಿ ಬಡ ಕುಟಂಬವೊಂದರಲ್ಲಿ ಜನಿಸಿದ್ದರು. ಅವರ ತಂದೆ ಹಣ್ಣಿನ ವ್ಯಾಪಾರಿಯಾಗಿದ್ದರು. ಕಾಮತ್ ಅವರು ತಮ್ಮ 15ನೇ ವಯಸ್ಸಿನಲ್ಲಿ ಅಣ್ಣನ ಹೊಟೇಲ್‌ಗೆ ಕೆಲಸಕ್ಕೆಂದು ಮುಂಬಯಿಗೆ ತೆರಳಿದ್ದರು. ಅನಂತರ ಹೊಟೇಲ್ ಉದ್ಯಮ ಆರಂಭಿಸಿ ಹಣ್ಣುಗಳಿಂದಲೇ ಐಸ್ ಕ್ರೀಂ ತಯಾರಿಸಿ ಜನಪ್ರಿಯರಾದರು.

ಮುಂಬಯಿಯಲ್ಲಿ 1984 ರಲ್ಲಿ ನ್ಯಾಚುರಲ್ಸ್ ಐಸ್ ಕ್ರೀಂ ಆರಂಭಿಸಿದ್ದರು. ಅದು ದೇಶದಾದ್ಯಂತ ಜನಪ್ರಿಯವಾಗಿ ದೊಡ್ಡ ಉದ್ಯಮವಾಗಿ ಬೆಳೆದಿದೆ. 40ಕ್ಕೂ ಅಧಿಕ ನಗರಗಳಲ್ಲಿ 140ಕ್ಕೂ ಅಧಿಕ ಮಳಿಗೆಗಳನ್ನು ನ್ಯಾಚುರಲ್ ಐಸ್‌ಕ್ರೀಂ ತನ್ನ ಔಟ್ ಲೆಟ್‌ಗಳನ್ನು ಹೊಂದಿದ್ದು 400 ಕೋಟಿ ರೂ.ಗಳಿಗೂ ಅಧಿಕ ವ್ಯವಹಾರ ನಡೆಸುತ್ತಿದೆ. ಕಾಮತ್ ಅವರು ಸ್ವತಃ ಕುಂಡಗಳಲ್ಲಿ ಹಣ್ಣುಗಳನ್ನು ಬೆಳೆಸುವ ಆಸಕ್ತಿ ಹೊಂದಿದ್ದು ಮಾವು, ಗೇರು, ಹಲಸು ಸಹಿತ ಹಲವಾರು ಹಣ್ಣಿನ ಗಿಡಗಳನ್ನು ಮನೆಯ ತಾರಸಿಯಲ್ಲಿ ಸ್ವತಃ ಬೆಳೆಸಿ ಯಶಸ್ಸು ಕಂಡಿದ್ದರು.


ಐಸ್ ಕ್ರೀಂಗಳಲ್ಲಿ ಕೃತಕ ಸಾಮಗ್ರಿಗಳು ಇಲ್ಲದ ಸ್ಥಳೀಯ ಸ್ವಾದದ ಬ್ರಾಂಡ್‌ಗಳನ್ನು ಸೃಷ್ಟಿಸಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು.

ಐಸ್‌ಕ್ರೀಂ ಮ್ಯಾನ್ ಆಫ್‌ ಇಂಡಿಯಾ

4 ದಶಕಗಳ ಹಿಂದೆ ಐಸ್ ಕ್ರೀಂ ಎನ್ನುವುದು ಒಂದು ವರ್ಗಕ್ಕೆ ಮಾತ್ರ ಸೀಮಿತವಾಗಿತ್ತು. ಕಾಮತ್ ಅವರು ಐಸ್‌ಕ್ರೀಂ ಅನ್ನು ಜಯಪ್ರಿಯಗೊಳಿಸಿ ಎಲ್ಲರಿಗೂ ಲಭ್ಯವಾಗುವಂತೆ ಮತ್ತು ಅದು ಸಮಾರಂಭಗಳಲ್ಲಿ ಒಂದು ಅಗತ್ಯದ ಪದಾರ್ಥ ಎಂಬಷ್ಟರ ಮಟ್ಟಿಗೆ ಬೆಳೆಸಿದರು.

ಐಸ್‌ಕ್ರೀಂನ ಗುಣಮಟ್ಟ ಮತ್ತು ಗ್ರಾಹಕರ ಸಂತೃಪ್ತಿಗೆ ಪ್ರಥಮ ಆದ್ಯತೆ ನೀಡಿದ್ದರು. ಅವರು ಹಲಸು, ಸೀಯಾಳ, ಗೇರುಹಣ್ಣು, ಇತ್ಯಾದಿ ಸ್ಥಳೀಯವಾದ ರುಚಿಗಳನ್ನು ಪರಿಚಯಿಸಿದ್ದರು. ಅವರು ಐಸ್‌ಕ್ರೀಂ ಮ್ಯಾನ್ ಆಫ್ ಇಂಡಿಯಾ ಎಂದೇ ಪ್ರಸಿದ್ಧಿಗಳಿಸಿದ್ದರು.

Continue Reading

Chikmagalur

ಜಯಪುರ ಗ್ರಾಮ ಪಂಚಾಯಿತಿ ಅಧಿಕಾರ ಸ್ವೀಕರಿಸಿದಾಗ ನಮಗೆ ಇದ್ದ ದೊಡ್ಡ ಸಮಸ್ಯೆ ತ್ಯಾಜ್ಯ ವಿಲೇವಾರಿ ಸಮಸ್ಯೆಯಾಗಿತ್ತು

Published

on

ಜಯಪುರ : ಜಯಪುರ ಗ್ರಾಮ ಪಂಚಾಯಿತಿ ಅಧಿಕಾರ ಸ್ವೀಕರಿಸಿದಾಗ ನಮಗೆ ಇದ್ದ ದೊಡ್ಡ ಸಮಸ್ಯೆ ತ್ಯಾಜ್ಯ ವಿಲೇವಾರಿ ಸಮಸ್ಯೆಯಾಗಿತ್ತು. ಸುಮಾರು 50-60 ವರ್ಷಗಳಿಂದ ಕಸವಿಲೆವಾರಿ ಮಾಡುತ್ತಿದ್ದ ಜಾಗದಲ್ಲಿಯೇ ಪ್ರಸ್ತುತ ನಾವು ಸಂಪೂರ್ಣ ವೈಜ್ಞಾನಿಕವಾಗಿ ಹಸಿ ಮತ್ತು ಒಣ ಕಸ ವಿಲೇವಾರಿ ಮಾಡುತ್ತಿದ್ದೇವೆ. ಆದರೆ ಇದಕ್ಕೆ ಕೆಲವರು ನ್ಯಾಯಾಲಯದಿಂದ ತಡೆ ಆಜ್ಞೆ ತಂದಿದ್ದಾರೆ ಎಂದು ಜಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಪತ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜಯಪುರ ಗ್ರಾಮ ಪಂಚಾಯತಿ ಆವರಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡುತ್ತಾ ಹಿಂದೆ ಕಸ ವಿಲೇವಾರಿ ಘಟಕದಿಂದ ಸಾರ್ವಜನಿಕರಿಗೆ ಅನೇಕ ತೊಂದರೆಗಳಾಗುತ್ತಿತ್ತು. ಆದರೆ ಪ್ರಸ್ತುತ ಕೇಂದ್ರ ಸರ್ಕಾರದ ಅನುದಾನದ ಮೂಲಕ ವೈಜ್ಞಾನಿಕವಾಗಿ ಕಸ ವಿಲೇವಾರಿ

ಮಾಡುತ್ತಿದ್ದೇವೆ. ಇದರ ಮೂಲಕ ಗ್ರಾಮವನ್ನು ಸ್ವಚ್ಛವಾಗಿ ಇಟ್ಟಿದ್ದೇವೆ. ಇಷ್ಟಿದ್ದರೂ ಕೆಲವರು ಕಸ ವಿಲೇವಾರಿ ಘಟಕಕ್ಕೆ ನ್ಯಾಯಾಲಯದಿಂದ ತಡೆ ಆಜ್ಞೆ ತಂದಿದ್ದಾರೆ. ಇದೇ ತಿಂಗಳ 27ನೇ ತಾರೀಕು ನ್ಯಾಯಾಲಯದಲ್ಲಿ ಜಯಪುರ ಗ್ರಾಮ ಪಂಚಾಯಿತಿ ಕಸ ವಿಲೇವಾರಿಯ ತೀರ್ಮಾನವಿದ್ದು, ಕಸ ವಿಲೇವಾರಿಯನ್ನು ವೈಜ್ಞಾನಿಕವಾಗಿ ಮಾಡುತ್ತಿರುವ ಸಂಪೂರ್ಣ ಮಾಹಿತಿಯನ್ನು ನ್ಯಾಯಾಲಯಕ್ಕೆ ನೀಡಲಿದ್ದು, ನ್ಯಾಯಾಲಯದ ತೀರ್ಪಿಗೆ ಗೌರವಿಸುತ್ತೇವೆಂದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಕುಮಾರ್ ಮಾತನಾಡಿ ಮೇಗುಂದಾ ಹೋಬಳಿ ಕೇಂದ್ರಸ್ಥಾನ ಜಯಪುರ ಆಗಿದ್ದು, ನಗರದಲ್ಲಿ ಸುಮಾರು 300ಕ್ಕೂ ಹೆಚ್ಚು ಮನೆಗಳು ಹಾಗೂ ಅನೇಕ ಅಂಗಡಿ ಮುಂಗಟ್ಟುಗಳಿವೆ. ಇಲ್ಲಿಯ ಕಸವನ್ನು ಅಲ್ಲಿಯೇ ಹಸಿ ಹಾಗೂ ಒಣ ಕಸವನ್ನು ಬೇರ್ಪಡಿಸಿ ಸಂಗ್ರಹಿಸಲಾಗುತ್ತಿದೆ. ಸುಮಾರು 50-60 ವರ್ಷಗಳಿಂದ ಸಂಗ್ರಹಿಸಲಾಗುತ್ತಿರುವ ಪ್ರದೇಶದಲ್ಲಿ

ಕಸವನ್ನು ಹಾಕಲಾಗುತ್ತಿದ್ದು, ಇದರಿಂದ ದುರ್ವಾಸನೆ ಬರುತ್ತಿದೆ ಎಂಬ ಸಾರ್ವಜನಿಕರ ದೂರಿನ ಮೇರೆಗೆ ಕಸ ಸಂಗ್ರಹ ಘಟಕವನ್ನು ವೈಜ್ಞಾನಿಕವಾಗಿ ಪ್ರಸ್ತುತ ಸುಮಾರು 25 ಲಕ್ಷ ರೂಗಳಿಗೂ ಹೆಚ್ಚು ಹಣವನ್ನು ಉಪಯೋಗಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿರ್ಮಿಸಲಾಗಿದೆ. ಸಮೀಪದಲ್ಲಿ ಅಂಗನವಾಡಿ ಕೇಂದ್ರವಿದ್ದು ಆ ಮಕ್ಕಳಿಗೆ ತೊಂದರೆಯಾಗದಂತೆ ನಗರದ ಮಧ್ಯ ಭಾಗದಲ್ಲಿ ಸುಮಾರು 3 ಲಕ್ಷ ರೂಗಳನ್ನು ಖರ್ಚು ಮಾಡಿ ಅಂಗನವಾಡಿ ಕೇಂದ್ರವನ್ನು ವರ್ಗಾಯಿಸಲಾಗಿದೆ.

ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂದು ವೈಜ್ಞಾನಿಕವಾಗಿ ನಿರ್ಮಿಸಿರುವ ಕಸದ ಘಟಕವನ್ನು ನಿರ್ವಹಣೆಗೆ ತಿಂಗಳಿಗೆ ಸುಮಾರು 50 ಸಾವಿರ ಹಣ ಖರ್ಚು ಮಾಡಲಾಗುತ್ತಿದೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕರುಣಾಕರ, ಸದಸ್ಯ ಶ್ರೀನಿವಾಸ್ ಇದ್ದರು.

 

Pradeep Hebbar, Jayapura

Continue Reading

Chikmagalur

ಶಿಕಾರಿಗೆ ತೆರಳಿದ್ದ ಯುವಕನಿಗೆ ಆಕಸ್ಮಿಕವಾಗಿ ಗುಂಡು

Published

on

ಚಿಕ್ಕಮಗಳೂರು: ತಾಲ್ಲೂಕಿನ ಉಲುವಾಗಿಲು ಬಳಿ ಶಿಕಾರಿಗೆ ತೆರಳಿದ್ದ ಯುವಕನಿಗೆ ಆಕಸ್ಮಿಕವಾಗಿ ಗುಂಡು ತಗುಲಿ ಮೃತಪಟ್ಟಿದ್ದಾನೆ.

ಕೆರೆಮಕ್ಕಿ ಗ್ರಾಮದ ಸಂಜು(33) ಮೃತ ಯುವಕ. ಹಂದಿ ಬೇಟೆಗೆ ತೆರಳಿದ್ದ ಯುವಕರ ಗುಂಪಿನಲ್ಲಿ ಒಬ್ಬರು ಹಾರಿಸಿದ ಗುಂಡು ಯುವಕನಿಗೆ ಬಿದ್ದಿದೆ.

ಎದೆಯ ಭಾಗಕ್ಕೆ ಗುಂಡು ತಗುಲಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Trending

error: Content is protected !!