Connect with us

Chikmagalur

ಗ್ರಾ.ಪಂ.ಸದಸ್ಯ ಗಣೇಶ್ ಕೊಲೆ ಪ್ರಕರಣ: ಐವರ ಬಂಧನ, ಮೂವರಿಗಾಗಿ ತೀವ್ರ ಶೋಧ

Published

on

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಪಕ್ಷದ  ಗ್ರಾ.ಪಂ. ಸದಸ್ಯ ಗಣೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನ ಆರೋಪಿಗಳಲ್ಲಿ ಐವರನ್ನು ಬಂಧಿಸಿದ್ದು, ಮೂವರಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.

ಚಿಕ್ಕಮಗಳೂರು ಎಸ್‌ಪಿ ವಿಕ್ರಂ ಅಮಟೆ ಅವರು ನಾಲ್ಕು ತಂಡ ರಚಿಸಿ ತನಿಖೆಗೆ ಸೂಚಿಸಿದ್ದರು. ಹಾಗಾಗಿ ತಲೆಮರೆಸಿಕೊಂಡಿರೋ ಅಜಯ್, ನಿಥಿನ್ ಅಲಿಯಾಸ್ ಸೈನ್ಸ್, ದರ್ಶನ್ ಅಲಿಯಾಸ್ ಜಪಾನ್ ಗಾಗಿ ತೀವ್ರ ಶೋಧ ಕಾರ್ಯಾಚರಣೆ ಮಾಡಲಾಗುತ್ತಿದೆ. ಮೊನ್ನೆಯಿಂದ ತಲೆಮರೆಸಿಕೊಂಡಿರೋ ಮೂವರಿಗಾಗಿ ತೀವ್ರ ಹುಡುಕಾಟವನ್ನು ಸಖರಾಯಪಟ್ಟಣದಲ್ಲಿ ಮುಂದುವರಿಸಿದ್ದು,  ಪೊಲೀಸ್‌ರು ಬಿಗಿ ಬಂದೋಬಸ್ತ್ ಮಾಡಲಾಗಿದೆ.

ನಿನ್ನೆ 100 ಪೊಲೀಸರು, ಒಂದು ಕೆ.ಎಸ್.ಆರ್.ಪಿ ತುಕಡಿ ನಿಯೋಜಿಸಿದ್ದ ಪೊಲೀಸ್ ಇಲಾಖೆಯೂ, ಇಂದು ಮತ್ತೆ ಸಖರಾಯಪಟ್ಟಣದಲ್ಲಿ 80 ಪೊಲೀಸರ ನಿಯೋಜನೆ ಮಾಡಿದೆ. ಅಲ್ಲದೇ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದೆ.

 

Continue Reading

Chikmagalur

‘ದ್ವೇಷ ಭಾಷಣ’ ಆರೋಪ: ಸಿ.ಟಿ. ರವಿ ಬಂಧನಕ್ಕೆ ಮುಸ್ಲಿಮ್ ಒಕ್ಕೂಟ ಒತ್ತಾಯ

Published

on

ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ  ಸಿ.ಟಿ.ರವಿ  ಅವರು ನೀಡಿರುವ ಹೇಳಿಕೆಯನ್ನು ಖಂಡಿಸಿರುವ ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ, ಅದನ್ನು ದ್ವೇಷ ಭಾಷಣ ಎಂದು ಆರೋಪಿಸಿ ಅವರ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಂಡು ಬಂಧಿಸಬೇಕು ಎಂದು ಆಗ್ರಹಿಸಿದೆ.

ಒಕ್ಕೂಟದ ಪ್ರಕಾರ, ಸಿ.ಟಿ. ರವಿ ಅವರು “ಮುಲ್ಲಾನಿಗೂ ನೀಟ್ ಪರೀಕ್ಷೆಗೂ ಏನು ಸಂಬಂಧ? ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ” ಎಂದು ಹೇಳುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದು, ಸಮಾಜದಲ್ಲಿ ಧರ್ಮದ ಆಧಾರದಲ್ಲಿ ದ್ವೇಷ ಮತ್ತು ವಿಭಜನೆ ಸೃಷ್ಟಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಚಿಕ್ಕಮಗಳೂರಿನ ಜಾಮಿಯಾ ಮಸೀದಿ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು ಈಗಾಗಲೇ ದೂರು ದಾಖಲಿಸಿದ್ದಾರೆ. ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಕ್ಕೆ ಪ್ರಚೋದನೆ ನೀಡಿದ ಆರೋಪದಡಿ ಸಿ.ಟಿ. ರವಿ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒಕ್ಕೂಟ ಒತ್ತಾಯಿಸಿದೆ.

ನೀಟ್ ಪರೀಕ್ಷೆಯ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ, ಮೂಲ ವಿಷಯದಿಂದ ಗಮನ ಬೇರೆಡೆ ಸೆಳೆಯಲು ಮುಸ್ಲಿಮರನ್ನು ಗುರಿಯಾಗಿಸಿ ಹೇಳಿಕೆ ನೀಡಲಾಗಿದೆ ಎಂದು ಒಕ್ಕೂಟ ಆರೋಪಿಸಿದೆ. ಇದೇ ವೇಳೆ, ಮಾಜಿ ಸಂಸದ ಪ್ರತಾಪ್‌ ಸಿಂಹ ಅವರ ಹೇಳಿಕೆಯನ್ನು ಉಲ್ಲೇಖಿಸಿ, ಬಿಜೆಪಿ ನಾಯಕರು ಧಾರ್ಮಿಕ ವಿಭಜನೆಯ ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದೆ.

ಶಿಕ್ಷಣ, ಹಿಜಾಬ್ ಮತ್ತು ಮೀಸಲಾತಿ ಸೇರಿದಂತೆ ಹಲವು ವಿಷಯಗಳಲ್ಲಿ ಬಿಜೆಪಿಯ ನಿಲುವಿನಲ್ಲಿ ದ್ವಂದ್ವವಿದೆ ಎಂದು ಆರೋಪಿಸಿರುವ ಒಕ್ಕೂಟ, ಸಿ.ಟಿ. ರವಿ ಅವರ ಹೇಳಿಕೆಯಿಂದ ಸಮಾಜದಲ್ಲಿ ಅಶಾಂತಿ ಉಂಟಾಗುವ ಸಾಧ್ಯತೆ ಇರುವುದರಿಂದ ಸರ್ಕಾರ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

Continue Reading

Chikmagalur

ಜಮೀನು ವಿವಾದ; ಸಿಸಿ ಕ್ಯಾಮೆರಾ ಅಳವಡಿಸಿದ್ದಕ್ಕೆ ಯುವಕನ ಮೇಲೆ ಹಲ್ಲೆ, ಕೊಲೆ ಬೆದರಿಕೆ

Published

on

ಚಿಕ್ಕಮಗಳೂರು: ಜಮೀನು ವಿಚಾರದ ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿದಂತೆ, ತೋಟದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಘಟನೆ ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಿರುಗೂರು ಗ್ರಾಮದ ಚಂದ್ರಶೇಖರ್ ಎಸ್‌ಟಿ (35) ಹಲ್ಲೆಗೊಳಗಾದವರು. ಜುಲೈ 23 ರಂದು ಸಂಜೆ ಚಂದ್ರಶೇಖರ್ ತಮ್ಮ ಕಾಫಿ ತೋಟದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾವನ್ನು ಜಮೀನು ವಿವಾದದಲ್ಲಿರುವ ಸುರೇಶ್, ಬಸವರಾಜು, ಪ್ರೇಮ, ಮಂಜುಳ, ಲಲಿತಾ, ದಿಗಂತ್ ಹಾಗೂ ಇತರರು ಸೇರಿ ಧ್ವಂಸಗೊಳಿಸಿದ್ದಾರೆ. ಇದನ್ನು ಪ್ರಶ್ನಿಸಲು ಹೋದ ಚಂದ್ರಶೇಖರ್ ಹಾಗೂ ಗಲಾಟೆ ಬಿಡಿಸಲು ಬಂದ ಧರ್ಮೇಶ್ ಅವರ ಮೇಲೆ ಆರೋಪಿಗಳು ಕಲ್ಲು ಮತ್ತು ಕೈಯಿಂದ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಗಾಯಾಳು ಚಂದ್ರಶೇಖರ್ ನೀಡಿದ ಹೇಳಿಕೆಯ ಆಧಾರDಲಿ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Continue Reading

Chikmagalur

ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ – ಸಿ.ಟಿ. ರವಿ ವಿರುದ್ಧ ಎಸ್‌ಡಿಪಿಐ ದೂರು

Published

on

ಚಿಕ್ಕಮಗಳೂರು: ಯೂತ್ ಫಾರ್ ನೇಷನ್ ವತಿಯಿಂದ ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಅವರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸಿ.ಟಿ. ರವಿ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಸಂಸತ್ ಭವನದ ಬಳಿ ನಡೆದ ಪ್ರತಿಭಟನೆಗಳ ಕುರಿತು ವಾಗ್ದಾಳಿ ನಡೆಸುವ ವೇಳೆ ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ, “ನೀಟ್ ಪರೀಕ್ಷೆಗೂ ಹಾಗೂ ಮುಲ್ಲಾಗಳಿಗೂ ಏನು ಸಂಬಂಧ, ಅವರ ಎದೆ ಸೀಳಿದರೆ ಮೂರು ಅಕ್ಷರವೂ ಇಲ್ಲ, ಅಂತಹವರು ನೀಟ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ” ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಯಿಂದ ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ, ಸಮುದಾಯವನ್ನು ಅವಹೇಳನ ಮಾಡಲಾಗಿದೆ ಹಾಗೂ ಸಮಾಜದಲ್ಲಿ ದ್ವೇಷ ಮತ್ತು ಅಶಾಂತಿ ಸೃಷ್ಟಿಸಲು ಯತ್ನಿಸಲಾಗಿದೆ ಎಂದು ಆರೋಪಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಜ್ವಾನ್ ಹುಸೇನ್ ಅವರು ಸಿ.ಟಿ. ರವಿ ವಿರುದ್ಧ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ದ್ವೇಷಪೂರಿತ ಭಾಷಣ ಮಾಡಿದ ಆರೋಪದಡಿ ಸಿ.ಟಿ. ರವಿ ವಿರುದ್ಧ ಸೂಕ್ತ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.

Continue Reading

Trending

error: Content is protected !!