Connect with us

Kodagu

ಕೊಡಗು ವಿವಿ ಮುಚ್ಚುವ ಪ್ರಸ್ತಾಪಕ್ಕೆ ವಿರಾಜಪೇಟೆ ಬಿಜೆಪಿ ತೀವ್ರ ವಿರೋಧ

Published

on

ಮಡಿಕೇರಿ : ಕೊಡಗು ವಿಶ್ವ ವಿದ್ಯಾಲಯವನ್ನು ಮುಚ್ಚುವ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ವಿರಾಜಪೇಟೆ ಬಿಜೆಪಿ ಮಂಡಲ ತೀವ್ರ ವಿರೋಧ ವ್ಯಕ್ತಪಡಿಸಿದೆ. ರಾಜ್ಯದ ಭವಿಷ್ಯದ ದೃಷ್ಟಿಯಿಂದ ಶಿಕ್ಷಣಕ್ಕೆ ಆದ್ಯತೆ ನೀಡುವಂತೆ ಒತ್ತಾಯಿಸಿದೆ.

ಪತ್ರಿಕಾ ಪ್ರಕಟಣೆ ನೀಡಿರುವ ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು, ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಹಿಂದಿನ ಬಿಜೆಪಿ ಸರ್ಕಾರ ಜಿಲ್ಲೆಗೊಂದು ವಿಶ್ವ ವಿದ್ಯಾಲಯ ಎಂಬ ಗುರಿಯೊಂದಿಗೆ ಕೊಡಗು ಸೇರಿದಂತೆ ೯ ಜಿಲ್ಲೆಗಳಲ್ಲಿ ನೂತನ ವಿವಿಯನ್ನು ಸ್ಥಾಪಿಸಿತು. ಆದರೆ ಇದೀಗ ರಾಜ್ಯವನ್ನು ಆಳುತ್ತಿರುವ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯವನ್ನು ಕಡೆಗಣಿಸಿ ವಿವಿಗಳನ್ನು ಮುಚ್ಚುವ ನಿರ್ಧಾರ ಮಾಡಿರುವುದು ಖಂಡನೀಯವೆಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅತ್ಯಂತ ಮಹತ್ವಾಕಾಂಕ್ಷೆಯಿಂದ ಬಡ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹಿಂದಿನ ಬಿಜೆಪಿ ಸರ್ಕಾರ ನೂತನ ವಿವಿಯನ್ನು ಸ್ಥಾಪಿಸಿತು. ಈ ಹಂತದಲ್ಲೇ ವಿಧಾನಸಭಾ ಚುನಾವಣೆಯೂ ಘೋಷಣೆಯಾದ ಹಿನ್ನೆಲೆ ವಿವಿಗಳಿಗೆ ನೀಡಬೇಕಾದ ಅನುದಾನ ಮತ್ತು ಸೌಲಭ್ಯಗಳನ್ನು ಪೂರೈಸಲು ಸಾಧ್ಯವಾಗಿರಲಿಲ್ಲ. ಒಂದು ವೇಳೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದರೆ ವಿವಿಗಳಿಗೆ ನೀಡಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡಿ ಸದೃಢಗೊಳಿಸಲಾಗುತ್ತಿತ್ತು. ಆದರೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಖಜಾನೆ ಖಾಲಿ ಮಾಡಿಕೊಂಡು ಕುಳಿತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಅನುದಾನ ನೀಡುತ್ತಿಲ್ಲ. ಇದೀಗ ಖರ್ಚು ವೆಚ್ಚವನ್ನು ಕುಗ್ಗಿಸುವ ಸಲುವಾಗಿ ಶಿಕ್ಷಣ ಮಂದಿರಕ್ಕೆ ಕೈಹಾಕಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವೇ ಕಳೆದಿದೆ. ಆದರೆ ನೂತನ ವಿವಿಗಳಿಗೆ ಬೇಕಾದ ಅನುದಾನ ಮತ್ತು ಸೌಲಭ್ಯಗಳನ್ನು ದೊರಕಿಸಿಕೊಡುವಲ್ಲಿ ವಿಫಲವಾಗಿದೆ. ಇದೇ ಕಾರಣದಿಂದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿರುವುದು ಸ್ಪಷ್ಟವಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸ್ಥಾಪನೆಯಾಗಿರುವ ವಿವಿಗಳಿಗೆ ಅಗತ್ಯ ಅನುದಾನ ನೀಡಲು ಸರ್ಕಾರ ಮುಂದಾಗಬೇಕು. ಯುವ ಸಮೂಹ ಶಿಕ್ಷಣದ ಮೂಲಕ ದೇಶ ಕಟ್ಟಬೇಕಾಗಿದೆ. ಕೊಡಗು ವಿವಿ ಮುಚ್ಚುವುದಕ್ಕೆ ಬಿಜೆಪಿ ಎಂದಿಗೂ ಬಿಡುವುದಿಲ್ಲ, ಒಂದು ವೇಳೆ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದಲ್ಲಿ ಹೋರಾಟ ಹಾದಿ ಹಿಡಿಯಬೇಕಾಗುತ್ತದೆ ಎಂದು ರಾಕೇಶ್ ದೇವಯ್ಯ ಎಚ್ಚರಿಕೆ ನೀಡಿದ್ದಾರೆ.

Continue Reading

Kodagu

ನೆಮ್ಮಲೆ ಬಳಿ ಕಾರು ಅಪಘಾತದಿಂದ ಪಾದಾಚಾರಿಗೆ ಡಿಕ್ಕಿ: ಓರ್ವ ಕಾರ್ಮಿಕ ಸಾ*ವು

Published

on

ಮಡಿಕೇರಿ: ಜಿಲ್ಲೆಯ ಟಿ. ಶೆಟ್ಟಿಗೇರಿ, ಬಿರುನಾಣಿ ಮುಖ್ಯ ರಸ್ತೆಯ ನೆಮ್ಮಲೆ ಬಳಿ ಕಾರು ಅಪಘಾತದಿಂದ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ದಾರಿಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಮಾರುತಿ ಬ್ರಿಜಾ ವಾಹನ ಡಿಕ್ಕಿ ಹೊಡೆದಿದ್ದು, ಟ್ರಾನ್ಸ್‌ಫರ್‌ಗೆ ಗುದ್ದಿದೆ. ಡಿಕ್ಕಿ ಹೊಡೆದ ರಭಸಕ್ಕೆ  ಕಾರು ಚಾಲಕನಿಗೂ ಗಂಭೀರ ಗಾಯವಾಗಿದೆ.

 

ಇನ್ನೂ  ವೆಸ್ಟ್ ನೆಮ್ಮಲೆ ನಿವಾಸಿ ಕಾರ್ಮಿಕ ಗಪ್ಪು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಲ್ಲದೇ ವಾಹನ ಚಾಲಕನಿಗೂ ಗಂಭೀರ ಗಾಯವಾಗಿರುವುದರಿಂದ ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

Continue Reading

Kodagu

ಅಪಹರಿಸಲಾಗದ ಸಂಪತ್ತು ವಿದ್ಯೆ – ಹರಪಳ್ಳಿ ಎನ್.ರವೀಂದ್ರ

Published

on

ಸುಂಟಿಕೊಪ್ಪ : ಪ್ರಪಂಚದಲ್ಲಿ ಒಬ್ಬರಿಂದ ಕಿತ್ತುಕೊಳ್ಳಲಾಗದ ಮತ್ತು ಅಪಹರಿಸಲಾಗದ ಸಂಪತ್ತು ಎಂದರೆ ಅದು ವಿದ್ಯೆ ಎಂದು ಸಮಾಜ ಸೇವಕ ಹರಪಳ್ಳಿ ಎನ್.ರವೀಂದ್ರ ಹೇಳಿದರು.

ಶನಿವಾರದಂದು ಇಲ್ಲಿಗೆ ಸಮೀಪದ ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ 61ನೇ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು ಹಳ್ಳಿಯಲ್ಲಿರುವ ಈ ಶಾಲೆ ಕನ್ನಡ ಮಾದ್ಯಮದಾಗಿದ್ದು, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಸಾಧನೆ ಮಾಡಿದೆ ಎಂದು ಪ್ರಶಂಸಿದರು.

ಬದುಕಿನಲ್ಲಿ ನಾವು ಕೊಟ್ಟು ಹೋಗಬೇಕು ಇಲ್ಲವೇ ಬಿಟ್ಟು ಹೋಗಬೇಕು. ತತ್ವಕ್ಕೆ ಅನುಸಾರವಾಗಿ ಬದುಕಬೇಕೆಂದು ಹೇಳಿದ ಅವರು ಸ್ವಾಮಿ ವಿವೇಕಾನಂದರು ಹೇಳಿದ ಮನುಷ್ಯನಲ್ಲಿರುವ ಪರಿಪೂರ್ಣತೆಯನ್ನು ಪ್ರಕಾಶಗೊಳಿಸುವುದೇ ವಿದ್ಯೆ ಎಂದರು.

ವಿದ್ಯೆಯಿಂದ ನಮ್ಮ ಬಾಳು ಮಾತ್ರವಲ್ಲ ಸಮಾಜವನ್ನು ಬೆಳಗುವಂತಾಗಬೇಕೆಂದು ಕಿವಿಮಾತು ಹೇಳಿದರು. ನಾವು ಏನೇ ಕಲಿತರು ಎಷ್ಟೇ ದೊಡ್ಡವರಾದರೂ ಸಮಾಜಕ್ಕಾಗಿ ಮತ್ತು ಪರಹಿತಕ್ಕಾಗಿ ನಾವು ನಮ್ಮನ್ನು ಸಮರ್ಪಿಸಿಕೊಳ್ಳುವುದು ನಮ್ಮ ವ್ಯಕ್ತಿತ್ವದ ಭಾಗವಾಗಬೇಕೆಂದು ಕರೆ ನೀಡಿದರು.

ಮುಖ್ಯ ಅತಿಥಿಗಳಲ್ಲಿ ಒಬ್ಬರಾಗಿ ಪಾಲ್ಗೊಂಡು ಶಾಲೆಯ 138 ಮಕ್ಕಳಿಗೆ ಟ್ರ್ಯಾಕ್ಶೂಟ್ ಕೊಡುಗೆಯಾಗಿ ನೀಡಿ ಮಾತನಾಡಿದ  ಅವರು,ಕಾಫಿ ಬೆಳೆಗಾರ ಮತ್ತು ಸಮಾಜ ಸೇವಕ ಟಿ.ಕೆ.ಸಾಯಿಕುಮಾರ್, ಸರಕಾರಿ ಶಾಲೆ ಮತ್ತು ಕನ್ನಡ ಮಾದ್ಯಮ ಶಾಲೆ ಎಂಬ ಕೀಳರಿಮೆ ಬೇಕಾಗಿಲ್ಲ. ಸುಂಟಿಕೊಪ್ಪ ನಾಡು ಪ್ರೌಢಶಾಲೆಯು ಈ ಸಮಾಜಕ್ಕೆ ಅತ್ಯುತ್ತಮ ನಾಗರೀಕರನ್ನು ಕೊಡುಗೆಯಾಗಿ ನೀಡಿದೆ ಎಂದರು.

ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ ಸಂತ ಅಂತೋನಿ ಹಿರಿಯ ಪ್ರಾಥಮಿಕ ಶಾಲೆಯ ರಾಜ್ಯ ಪ್ರಶಸ್ತಿ ಪುರಸ್ಕೃತ ಮುಖ್ಯೋಪಾದ್ಯಾಯನಿ ಜೋವಿಟಾ ವಾಸ್ ಅವರನ್ನು ಸನ್ಮಾನಿಸಲಾಯಿತು.

ಶಾಲಾಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಕೆ.ಎಸ್.ಮಂಜುನಾಥ್ ತಮ್ಮ ಅಧ್ಯಕ್ಷೀಯ ಮಾತುಗಳಲ್ಲಿ ಸರಕಾರಿ ಅನುದಾನಿತ ಶಾಲೆಗಳಿಗೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ಶಾಲೆಗಳಲ್ಲಿ ವರ್ಗಾವಣೆಯಾದರೆ ಅಥವಾ ವಯೋಸಹಜ ನಿವೃತ್ತಿ ಹೊಂದಿದ್ದರೆ ಆ ಹುದ್ದೆಗಳಿಗೆ ಮರು ನೇಮಕಾತಿಗೊಳಿಸುವ ಪ್ರಕ್ರಿಯೆಯನ್ನು ಕೈ ಬಿಟ್ಟಿದೆ. ಶಿಕ್ಷಕರ ವೇತನ ಹೊರತು ಪಡಿಸಿ ಬೇರೆ ಯಾವುದೇ ಅನುದಾನವನ್ನು ನೀಡುತ್ತಿಲ್ಲ.

ಶಾಲಾ ಆಡಳಿತ ಮಂಡಳಿಯು8 ಮತ್ತು 9 ನೇ ತರಗತಿಯ ವಿದ್ಯಾರ್ಥಿಗಳ ವಾರ್ಷಿಕ ಶಾಲಾ ಶುಲ್ಕವನ್ನು ಪಾವತಿಸಿದ್ದು, ಶಿಕ್ಷಕ ವೃಂದದವರು ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ಪ್ರಾಯೋಜಿಸಿದ್ದಾರೆಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಎಸ್.ಬಿ.ಶಂಕರ್, ಉಪಾಧ್ಯಕ್ಷ ಎಂ.ಎ.ಕುಟ್ಟಪ್ಪ, ಆಡಳಿತ ಮಂಡಳಿ ನಿರ್ದೇಶ ಎಂ.ಎಸ್.ಸುರೇಶ್ ಚಂಗಪ್ಪ, ಭಾರತೀಯ ಎಜುಕೇಷನ್ ಟ್ರಸ್ಟ್ನ ಕಾರ್ಯದರ್ಶಿ ಪಿ.ಎಂ.ರಂಜಿತ್ ಕಾರ್ಯಪ್ಪ, ಕಂಬಿಬಾಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿ ನಯನ, ಗಿರಿಧರ್ ಮತ್ತು ಧರ್ಮಪ್ಪ ಉಪಸ್ಥಿತರಿದ್ದರು.

ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನೆರೆದವರ ಮನಸೂರೆಗೊಳಿಸಿತು.

Continue Reading

Kodagu

ಫೀ.ಮಾ.ಕಾರ್ಯಪ್ಪ ಕಾಲೇಜು ಹಳೇ ವಿದ್ಯಾರ್ಥಿಗಳ ಸಂಘದ ಸಭೆ : ಸುಸಜ್ಜಿತ ಫೈರಿಂಗ್ ರೇಂಜನ್ನು ನಿರ್ಮಾಣ ಮಾಡಲು ನಿರ್ಧಾರ

Published

on

ಮಡಿಕೇರಿ: ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ವಿದ್ಯಾರ್ಥಿಗಳು ಹಾಗೂ ಎನ್‌ಸಿಸಿ ವಿದ್ಯಾರ್ಥಿಗಳಿಗಾಗಿ ಕಾಲೇಜು ಮತ್ತು ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜ್ ನ ಮೈದಾನದಲ್ಲಿ ಸುಸಜ್ಜಿತ ಫೈರಿಂಗ್ ರೇಂಜನ್ನು ನಿರ್ಮಾಣ ಮಾಡಲು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಳೇ ವಿದ್ಯಾರ್ಥಿಗಳ ಸಂಘ ನಿರ್ಧರಿಸಿದೆ.

ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಕಾಲೇಜ್ ನ ಸೆಮಿನಾರ್ ಹಾಲ್ ನಲ್ಲಿ ನಡೆದ ಸಂಘದ ಸಭೆಯಲ್ಲಿ ಮುಂಬರುವ ದಿನಗಳಲ್ಲಿ ನಡೆಸಲಾಗುವ ವಿವಿಧ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು.

ಸಾರ್ವಜನಿಕರು, ಹಳೇ ವಿದ್ಯಾರ್ಥಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳಿಗಾಗಿ ಗುಂಡು ಹೊಡೆಯುವ ಸ್ಪರ್ಧೆಯನ್ನು ಶೀಘ್ರ ಆಯೋಜಿಸಲು ಮತ್ತು ಹಳೇ ವಿದ್ಯಾರ್ಥಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಕ್ರೀಡೆ ಮತ್ತು ಮನೋರಂಜನಾ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಯಿತು.

ಹಳೇ ವಿದ್ಯಾರ್ಥಿ ಸಂಘಕ್ಕೆ ನೂತನ ಕಟ್ಟಡವನ್ನು ನಿರ್ಮಿಸುವ ಕುರಿತು ಚರ್ಚಿಸಿ, ಖಾತೆಯಲ್ಲಿ ಹೆಚ್ಚು ಹಣ ಇಲ್ಲದಿರುವ ಕಾರಣ ಮುಂದಿನ ದಿನಗಳಲ್ಲಿ ದಾನಿಗಳನ್ನು ಸಂಪರ್ಕಿಸಿ, ಸೂಕ್ತ ನಿರ್ಣಯ ಕೈಗೊಳ್ಳಲು ತೀರ್ಮಾನಿಸಲಾಯಿತು.

ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಮಾತನಾಡಿ, ಈ ಭಾರಿಯ ಮಹಾಸಭೆಯು ಅತ್ಯಂತ ಅಚ್ಚುಕಟ್ಟಾಗಿ ನಡೆದಿದ್ದು, ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.

ಮುಂದಿನ ಮಹಾಸಭೆಗೆ ಸದಸ್ಯತ್ವವನ್ನು ಹೆಚ್ಚಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸದಸ್ಯರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಆಡಳಿತ ಮಂಡಳಿಯ ಸದಸ್ಯರು ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಸಂಘ ಮತ್ತು ಕಾಲೇಜ್ ನ ಅಭಿವೃದ್ಧಿಗೆ ಕೈ ಜೋಡಿಸಬೇಕೆಂದು ಕೋರಿದರು.

ಬೈಲಾನುಸಾರ ನಿರಂತರ ಮೂರು ಸಭೆಗೆ ಗೈರು ಹಾಜರಾದ ಸದಸ್ಯರು ಸದಸ್ಯತ್ವವನ್ನು ಕಳೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಇದೇ ನಿಯಮವನ್ನು ಪಾಲಿಸುವುದಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಲೆಕ್ಕಪತ್ರ ಮಂಡಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು ಕಳೆದ ಸಭೆ ಹಾಗೂ ಮಹಾಸಭೆಯ ವರದಿ ವಾಚಿಸಿ, ಅನುಮೋದನೆ ಪಡೆದರು.

ಸಭೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ.ರಾಘವ ಬಿ, ಸಂಘದ ಉಪಾಧ್ಯಕ್ಷ ಬೊಟ್ಟಂಗಡ ಗಣಪತಿ, ನಿರ್ದೇಶಕರಾದ ಪೆಬ್ಬಟ್ಟೀರ ಶೀತಲ್ ಕಾರ್ಯಪ್ಪ, ಕೆ.ಹೆಚ್.ಖುರ್ಷಿದ್ ಬಾನು, ಲೋಹಿತ್ ಮಾಗಲು, ಆದರ್ಶ್ ಅದ್ಕಲೆಗಾರ್, ಎಸ್.ಆರ್.ವತ್ಸಲ ಹಾಗೂ ಬಲ್ಯದ ಚರಣ್ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕರಾದ ಐತಿಚಂಡ ರಶ್ಮಿ ಮೇದಪ್ಪ ಪ್ರಾರ್ಥಿಸಿದರು, ಸಬ್ಬಂಡ್ರ ಜಗದೀಶ್ ಸ್ವಾಗತಿಸಿದರು, ಆಪಾಡಂಡ ಜಾನ್ಸಿ ಗಣಪತಿ ವಂದಿಸಿದರು.

ಕ್ರೀಡಾ ಸಮಿತಿ ರಚನೆ:

ಮುಂದಿನ ದಿನಗಳಲ್ಲಿ ನಡೆಯಲಿರುವ ಕ್ರೀಡಾಕೂಟಗಳಿಗೆ ಸಭೆಯಲ್ಲಿ ಕ್ರೀಡಾ ಸಮಿತಿಯನ್ನು ರಚಿಸಲಾಯಿತು. ಸಂಚಾಲಕರನ್ನಾಗಿ ಸಬ್ಬಂಡ್ರ ಜಗದೀಶ್, ದಿಶಾಂತ್ ಗಾಳಿಬೀಡು, ಐಚಂಡ ರಶ್ಮಿ ಮೇದಪ್ಪ, ಆಪಾಡಂಡ ಜಾನ್ಸಿ ಗಣಪತಿ ಹಾಗೂ ಕರವಂಡ ಸೀಮಾ ಗಣಪತಿ ಅವರನ್ನು ನೇಮಕ ಮಾಡಲಾಯಿತು.

Continue Reading

Trending

error: Content is protected !!