Cultural
ಅ.1 ರಂದು ಎರಡನೇ ವರ್ಷದ ತಾಲೂಕು ಮಟ್ಟದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ಪಿರಿಯಾಪಟ್ಟಣ: ತಾಲೂಕು ಶ್ರೀ ವಿಶ್ವಕರ್ಮ ಸೇವಾ ಸಮಾಜ ವತಿಯಿಂದ ಅ.1 ರಂದು ಎರಡನೇ ವರ್ಷದ ತಾಲೂಕು ಮಟ್ಟದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ ಎಂದು ತಾಲೂಕು ವಿಶ್ವಕರ್ಮ ಸಮಾಜ ಅಧ್ಯಕ್ಷ ಮಹೇಶ್ ಆಚಾರ್ಯ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 8.30 ಗಂಟೆಗೆ ಪಟ್ಟಣದ ಒಳಕೋಟೆ ಶ್ರೀ ವಿನಾಯಕ ಕಾಳಿಕಾಂಬ ಕಮಟೇಶ್ವರ ದೇವಾಲಯದಿಂದ ಮೆರವಣಿಗೆ ಹೊರಟು ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಮಧ್ಯಾಹ್ನ 12 ಗಂಟೆಗೆ ಧಾರ್ಮಿಕ ಸಭೆ ನಡೆಯಲಿದೆ, ಅರಕಲಗೂಡು ತಾಲೂಕು ಅರೆಮಾದನಹಳ್ಳಿಯ ವಿಶ್ವಕರ್ಮ ಜಗದ್ಗುರು ಪೀಠದ ವಿಶ್ವ ಬ್ರಾಹ್ಮಣ ಮಹಾ ಸಂಸ್ಥಾನದ ಶ್ರೀ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದು ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವರಾದ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟದಲ್ಲಿದ್ದಾರೆ, ಸಂಸದ ಪ್ರತಾಪ್ ಸಿಂಹ ಅವರು ವಿಶ್ವಕರ್ಮ ಸ್ವಾಮಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದು ಮೆರವಣಿಗೆಗೆ ಮಾಜಿ ಶಾಸಕ ಕೆ.ಮಹದೇವ್ ಚಾಲನೆ ನೀಡಲಿದ್ದಾರೆ, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ
ಡಾ.ಡಿ.ತಿಮ್ಮಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ ವಿಜಯ್ ಕುಮಾರ್, ಮೈಮುಲ್ ಅಧ್ಯಕ್ಷ ಪಿ.ಎಂ ಪ್ರಸನ್ನ, ಪುರಸಭೆ ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಬಿಜೆಪಿ ಮುಖಂಡ ಕೌಲನಹಳ್ಳಿ ಸೋಮಶೇಖರ್ ಸೇರಿದಂತೆ ಜಿಲ್ಲೆಯ ವಿವಿಧೆಡೆಯ ತಾಲೂಕು ವಿಶ್ವಕರ್ಮ ಸಮಾಜ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದು ಕಾರ್ಯಕ್ರಮಕ್ಕೆ ತಾಲೂಕು ವಿಶ್ವಕರ್ಮ ಸಮಾಜದವರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದ್ದಾರೆ.
Cultural
ಶ್ರೀರಾಮನ ಚರಿತ್ರೆ ವಿಶ್ವಕ್ಕೆ ಸಾರಿದ ಶ್ರೀಮಹರ್ಷಿ ವಾಲ್ಮೀಕಿ — ಶಾಸಕ ದರ್ಶನ್ ಧ್ರುವನಾರಾಯಣ್

ನಂಜನಗೂಡು ನ.15
ಶ್ರೀ ರಾಮನ ಚರಿತ್ರೆಯನ್ನು ವಿಶ್ವಕ್ಕೆ ಸಾರಿದ ಮಹಾನ್ ನಾಯಕ ಶ್ರೀ ಮಹರ್ಷಿ ವಾಲ್ಮೀಕಿ ಅವರ ಆದರ್ಶ ಗುಣಗಳು ಪ್ರಜಾಪ್ರಭುತ್ವಕ್ಕೆ ಬಹು ಮುಖ್ಯವಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ನಂಜನಗೂಡು ತಾಲೂಕಿನ ಹುರ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಾಲ್ಮೀಕಿ ಸಮಾಜದ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ.ಅವುಗಳನ್ನು ಪ್ರತಿಯೊಬ್ಬರು ಸದ್ಬಳಕೆ ಪಡೆದುಕೊಳ್ಳುವ ಮೂಲಕ ಆರ್ಥಿಕ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು ಸಮಾಜದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವ ಮೂಲಕ ಎಲ್ಲಾ ರೀತಿಯ ಸಹಕಾರ ನೀಡುತ್ತೆನೆ ಎಂದರು.
ಸರ್ಕಾರಿ ಸೌಲಭ್ಯ ಪಡೆಯಲು ಯಾವುದೇ ಜಾತಿಭೇದ ಮಾಡಬೇಡಿ ಸಮಾಜಕ್ಕೆ ನಾವೆಲ್ಲರೂ ಒಂದೇ ಎಂಬ ಸಂದೇಶ ವಾಲ್ಮೀಕಿ ಸಮುದಾಯ ಸಾರಬೇಕು.ಎಲ್ಲರನ್ನೂ ಒಗ್ಗೂಡಿಸುವ ಮೂಲಕ ಯಾವುದೇ ಭಿನ್ನಾಭಿಪ್ರಾಯ ಬಾರದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಗ್ರಾಮದ ಎಲ್ಲ ನಾಯಕ ಸಮಾಜದವರನ್ನು ಒಟ್ಟಾಗಿ ಕರೆದೊಯ್ಯುವ ಜವಾಬ್ದಾರಿ ಇರಬೇಕು.ಶ್ರೀ ಮಹರ್ಷಿ ವಾಲ್ಮೀಕಿ ಅವರ ರಾಮಾಯಣದಲ್ಲಿ ಹೆಚ್ಚು ರೂಪಕ ಅಲಂಕಾರ ಬಳಕೆಯಾಗಿರುವುದ್ದರಿಂದ ಕಾಳಿದಾಸ ಕವಿ ಮಹರ್ಷಿ ವಾಲ್ಮೀಕಿ ಅವರನ್ನು ಕವಿಕುಲ ಚಕ್ರವರ್ತಿ ಎಂಬುದಾಗಿಯೋ ವರ್ಣಿಸಿದ್ದಾರೆ ಅಲ್ಲದೇ ಜಗತ್ತಿನ ಶ್ರೇಷ್ಠ ವಿಮಾರ್ಶಕ ಥಾಮಸ್ ಪ್ರಕಾರ ವಾಲ್ಮೀಕಿ ರಾಮಾಯಣ ಜಗತ್ತಿನ ಶ್ರೇಷ್ಠ ಕಾವ್ಯ ಸಂಪತ್ತು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕುಂಬ್ರಳ್ಳಿ ಸುಬ್ಬಣ್ಣ, ಶ್ರೀ ಕಂಠನಾಯಕ,ತಾ ಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್,ನಾಯಕ ಸಂಘದ ತಾಲ್ಲೂಕು ಅದ್ಯಕ್ಷ ಬಂಗಾರನಾಯಕ, ಕಾಂಗ್ರೆಸ್ ಯುವ ಘಟಕದ ಅದ್ಯಕ್ಷ ದೇಬೂರು ಆಶೋಕ್,ಗ್ರಾ ಪಂ ಅದ್ಯಕ್ಷೆ ತಾಯಮ್ಮ,
ದೊರೆಸ್ವಾಮಿನಾಯಕ,ಅಭಿನಂದನ್ ಪಾಟೀಲ್,ಗ್ರಾ ಪಂ ಸದಸ್ಯದೇವನಾಯಕ,ನಾಗನಾಯ್ಕ,ಶ್ರೀಕಂಠಸ್ವಾಮಿ,ಶಿವರಾಜು,ಪ್ರಕಾಶ್,ನಂಜುಂಡಸ್ವಾಮಿ, ಸಿದ್ದು,ಮಹೇಶ್, ಮಹೇಂದ್ರ, ಹಾಗೂ ಕಿಚ್ಚಿನ ಅಭಿಮಾನಿ ಬಳಗದವರು ಹಾಜರಿದ್ದರು.
ನಂಜನಗೂಡು ಮಹದೇವಸ್ವಾಮಿ ಪಟೇಲ್.
Cultural
ಪುರಾತನ ಕಾಲದ ಶ್ರೀ ನಂಜುಂಡೇಶ್ವರ ಸ್ವಾಮಿ ದೇಗುಲದಲ್ಲಿ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ

ಆಲೂರು : ನೂರಾರು ವರ್ಷಗಳ ಪುರಾತನ ಕಾಲದ ಶ್ರೀ ನಂಜುಂಡೇಶ್ವರ ಸ್ವಾಮಿ ದೇಗುಲದಲ್ಲಿ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.ತಾಲ್ಲೂಕಿನ ಕಸಬಾ ಹೋಬಳಿ ಸೊಂಪುರ ಗ್ರಾಮದ ಸಮೀಪದಲ್ಲಿರುವ ನಂಜದೇವರ ಕಾವಲಿನಲ್ಲಿ ಸುಕ್ಷೇತ್ರ ನಂಜುಂಡೇಶ್ವರ ದೇವಾಲಯದಲ್ಲಿ 52ನೇ ಹುಣ್ಣಿಮೆ ಮಹೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಬೆಳಗಿನ ಜಾವದಿಂದಲೇ ದೇವಾಲಯ ಶುಚಿಗೊಳಿಸಿ ವಿವಿಧ ಹೂಗಳಿಂದ ಅಲಂಕರಿಸಿ ಪೂಜಾ ವಿಧಿ ವಿಧಾನಗಳು ಪ್ರಾರಂಭವಾಗಿ ವಿವಿಧ ಅಭಿಷೇಕ ಸೇರಿದಂತೆ ಅಲಂಕಾರ ಮಹಾ ಮಂಗಳಾರತಿ ತೀರ್ಥ ಪ್ರಸಾದ ಹಾಗೂ ಅನ್ನಸಂತರ್ಪಣೆ ನಡೆಯಿತು.
ಆಲೂರು ತಾಲೂಕು ಸೇರಿದಂತೆ ಹಲವೆಡೆಗಳಿಂದ ನೂರಾರು ಭಕ್ತರ ದಂಡು ಅಗಮಿಸಿ ಪೂಜಾ ಕಾರ‍್ಯದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.ವಿಶೇಷ ಎಂದರೆ ಭಕ್ತಾಧಿಗಳು ತಮ್ಮ ಇಷ್ಟಾರ್ಥ ಕೋರಿಕೆಗಾಗಿ ಹರಕೆ ಹೊರುತ್ತಿದ್ದು. ಕೋರಿಕೆಗಳು ಈಡೇರಿದ ನಂತರ ಭಕ್ತರು ಪ್ರತಿ ಸೋಮವಾರ, ಶುಕ್ರವಾರ, ಅಮಾವಾಸ್ಯೆ, ಹುಣ್ಣಿಮೆಯ ದಿನಗಳಂದು ವಿಶೇಷ ಪೂಜೆ, ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಭಕ್ತಾಧಿಗಳೇ ಸ್ವಯಂ ಪ್ರೇರಿತರಾಗಿ ಹಮ್ಮಿಕೊಳ್ಳುತ್ತ ಬಂದಿದ್ದಾರೆ ಎಂದು ದೇಗುಲ ಟ್ರಸ್ಟ್ ಅಧ್ಯಕ್ಷ ಈರಣ್ಣಯ್ಯ ತಿಳಿಸಿದ್ದಾರೆ.
Cultural
ಬ್ರಹ್ಮ ಕುಮಾರೀಸ್ ಈಶ್ವರಿ ವಿಶ್ವವಿದ್ಯಾಲಯದ ವತಿಯಿಂದ ಪತ್ರಕರ್ತರ ಸಂಘದಲ್ಲಿ ರಕ್ಷಾಬಂಧನ

ಮಂಡ್ಯ: ನಗರದ ಬನ್ನೂರು ರಸ್ತೆಯಲ್ಲಿರುವ ಬ್ರಹ್ಮ ಕುಮಾರೀಸ್ ಈಶ್ವರಿಯ ವಿಶ್ವವಿದ್ಯಾಲಯದ ವತಿಯಿಂದ ಪತ್ರಕರ್ತರ ಸಂಘದಲ್ಲಿ ಸೋಮವಾರ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು .ಪತ್ರಕರ್ತರಿಗೆ ರಾಕಿ ಕಟ್ಟುವ ಮೂಲಕ ಕಾರ್ಯಕ್ರಮಕ್ಕೆ ಬ್ರಹ್ಮ ಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದ ಬಿ.ಕೆ.ಶ್ವೇತ ಚಾಲನೆ ನೀಡಿದರು.ನಂತರ ಬಿ.ಕೆ.ಶಾರದಾ ಅವರು ಮಾತನಾಡಿ, ನನ್ನ ಕರ್ಮ ನನ್ನನ್ನು ರಕ್ಷಣೆ ಮಾಡುತ್ತದೆ. ಪರಮಾತ್ಮನು ರಕ್ಷಿಸುತ್ತಾನೆ ಎಂದರು.ಸಮಾಜದಲ್ಲಿ ಕಾಮ, ಕ್ರೋಧ, ಮದ, ಮತ್ಸರಗಳು ಅತಿಯಾಗಿದೆ. ಹಾಗಾಗಿ ಪಂಚಕರ್ಮಗಳಿಂದ ನಮಗೆ ರಕ್ಷಣೆ ಬೇಕಿದೆ ಎಂದು ತಿಳಿಸಿದರು.
ಎಲ್ಲಾ ಆತ್ಮಗಳು ಒಳ್ಳೆಯ ಆತ್ಮಗಳಾಗಿದೆ. ಆದರೆ ಆತ್ಮದಲ್ಲಿನ ನಕರಾತ್ಮಕ ಭಾವನೆ ಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಆ ಶಕ್ತಿಯನ್ನು ಪಡೆದುಕೊಳ್ಳಬೇಕು ಎಂದರು. ವಿದ್ಯಾದೇವತೆ ಸರಸ್ವತಿಗೆ ಪರಮಾತ್ಮನ ಜ್ಞಾನವಿದೆ. ಹಾಗಾಗಿ ಆಕೆಯನ್ನು ವಿದ್ಯಾದೇವಿ ಎಂದು ಪೂಜಿಸುತ್ತೇವೆ ಎಂದು ತಿಳಿಸಿದ ಅವರು, ಆಧ್ಯಾತ್ಮಿಕ ಜ್ಞಾನವಿಲ್ಲದೆ ನಾವು ಏನನ್ನು ಸಾಧಿಸಲು ಆಗುವುದಿಲ್ಲ. ಈ ಜ್ಞಾನವಿದ್ದಲ್ಲಿ ವಿಕಾರಗಳಿಂದ ಮುಕ್ತಿ ಪಡೆಯಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಬಿಕೆ ಗೀತಾಂಜಲಿ, ಬಿಕೆ ಯಶೋಧ, ಬಿ.ಕೆ.ಪ್ರಶಾಂತ್ ಉಪಸ್ಥಿತರಿದ್ದರು.
-
Mysore13 hours ago
ಅರಣ್ಯ ಇಲಾಖೆಯ ವಾಚರ್ ಆತ್ಮಹ*ತ್ಯೆ
-
Mysore14 hours ago
ನಂಜನಗೂಡಿನ ಸಬ್ ರಿಜಿಸ್ಟರ್ ಕಛೇರಿಗೆ ಬೀಗ: ಲೋಕಾಯುಕ್ತ ದಾಳಿ
-
National - International7 hours ago
ಪಹಲ್ಗಾಮ್ ದಾಳಿ; ಉಗ್ರರ ಜೊತೆ ಗುಂಡಿನ ಕಾಳಗದಲ್ಲಿ ವೀರ ಯೋಧ ಹುತಾತ್ಮ
-
State11 hours ago
ಕಾಶ್ಮೀರದ ಪೆಹಲ್ಗಾಮನಲ್ಲಿ ನಡೆದ ಉಗ್ರರ ದಾಳಿ ಖಂಡನೀಯ – ಮುಖ್ಯಮಂತ್ರಿ ಸಿದ್ದರಾಮಯ್ಯ
-
National - International8 hours ago
ದಾಳಿ ನಡೆಸಿದ ಉಗ್ರರಿಗೆ ಊಹೆಗೂ ಮೀರಿದ ಶಿಕ್ಷೆ ನೀಡಲಾಗುವುದು: ಪ್ರಧಾನಿ ನರೇಂದ್ರ ಮೋದಿ
-
Kodagu23 hours ago
ಕೊಂಗಾಣದಲ್ಲಿ ಕಣ್ಣನೂರಿನ ಕೋಲಿಯಾ ಆಸ್ಪತ್ರೆಯ ಮಾಲೀಕನ ಕೊ*ಲೆ
-
Kodagu13 hours ago
ಜಿಲ್ಲಾ ಮಟ್ಟದ ಜ್ಞಾನಜ್ಯೋತಿ ಕಾರುಣ್ಯ ಕಾರ್ಯಕ್ರಮ
-
Chamarajanagar10 hours ago
ಚಾಮರಾಜನಗರ: ಮಲೆ ಮಹದೇಶ್ವರ ಸ್ವಾಮಿ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್