Connect with us

Mandya

ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ – ಡಿಸಿ

Published

on

ಮಂಡ್ಯ: ಇದೇ ಏ.26 ರಂದು ನಡೆಯಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಎಲ್ಲಾ ಕೆಲಸಗಳನ್ನು ಬದಿಗಿಟ್ಟಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುಮತೆ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾ ಪಂಚಾಯತ್ ಮುಂಭಾಗದಲ್ಲಿ ಏರ್ಪಡಿಸಲಾಗಿದ್ದ ಮತದಾನ ಜಾಗೃತಿ ಕುರಿತು ವಿಕಲಚೇತನರ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮತದಾರರು ಯಾವುದೇ ಆಮಿಷ ಅಥವಾ ಯಾವುದೇ ಪ್ರಭಾವಕ್ಕೆ ಒಳಗಾಗದೆ ನಿಷ್ಪಕ್ಷಪಾತ ಹಾಗೂ ನಿರ್ಭೀತಿಯಿಂದ ನೇರವಾಗಿ ಮತಗಟ್ಟೆಗೆ ಹೋಗಿ ಮತ ಚಲಾಯಿಸುವಂತಹ ವಾತಾವರಣ ಸೃಷ್ಟಿಸಲು ಮತದಾರರಿಗೆ ತನ್ನ ಹೆಸರಿರುವ ಮತಗಟ್ಟೆಯ ಸಂಖ್ಯೆ ಮತ್ತು ಕ್ರಮ ಸಂಖ್ಯೆ ಹಾಗೂ ಮತದಾನದ ದಿನಾಂಕ ಮತ್ತು ಸಮಯವನ್ನು ನಮೂದಿಸಿ ವಾಟರ್ ಸ್ಲಿಪ್ ನ್ನು ವಿತರಿಸಲಾಗುತ್ತಿದೆ ಎಂದರು.

ಮತದಾರರಿಗೆ ಸಂಬಂಧಪಟ್ಟ ಗ್ರಾಮ ಆಡಳಿತಾಧಿಕಾರಿ/ಗ್ರಾಮ ಸಹಾಯಕ/ಮತಗಟ್ಟೆ ಮಟ್ಟದ ಅಧಿಕಾರಿಗಳ ಮೂಲಕ ವಾಟರ್ ಸ್ಲಿಪ್ ವಿತರಿಸಲಾಗುತ್ತಿದೆ.

ಸಕ್ಷಮ್ ಆ್ಯಪ್ ಮೂಲಕ ವಿಶೇಷಚೇತನ ಮತದಾರರಿಗೆ ಅನುಕೂಲವಾಗುವಂತೆ ಮತದಾರರ ಹೆಸರು, ವಿಳಾಸ ಮತ್ತು ಮೊಬೈಲ್ ವಿವರಗಳನ್ನು ಪ್ರಕಟಿಸಿ ಚುನಾವಣಾ ಮಾಹಿತಿಗಳನ್ನು ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.

ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಸುಗಮವಾಗಿ ಮತದಾನ ಮಾಡಲು ಪ್ರತಿ ಮತಗಟ್ಟೆಗೆ ಇಳಿಜಾರು ವ್ಯವಸ್ಥೆ ವೀಲ್ ಚೇರ್ ವ್ಯವಸ್ಥೆ ಮಾಡಲಾಗಿರುತ್ತದೆ.

ದೃಷ್ಟಿ ದೋಷವುಳ್ಳ ವಿಕಲಚೇತನರಿಗೆ ಮತದಾನ ಮಾಡಲು ಅವಶ್ಯಕವಾಗುವಂತೆ ಬ್ರೈಲ್ ಲಿಪಿಯುಳ್ಳ ವಿದ್ಯುನ್ಮಾನ ಮತಯಂತ್ರ ವ್ಯವಸ್ಥೆ ಹಾಗೂ ಡಮ್ಮಿ ಬ್ರೈಲ್ ಬ್ಯಾಲೆಟ್ ಪೇಪರ್ ವ್ಯವಸ್ಥೆ ಕಲ್ಪಿಸಲಾಗಿದೆ.

ಶ್ರವಣದೋಷವುಳ್ಳ ವಿಕಲಚೇತನರು ಮತದಾನ ಮಾಡಲು ಅವಶ್ಯಕ ವಿಷಯವನ್ನು ಮತದಾರರು ಕಫರಿದಲ್ಲಿ ಸಂಜ್ಞಾ ಭಾಷೆ ತಜ್ಞರಿಂದ ಸಂಜ್ಞಾ ಭಾಷೆ ಮೂಲಕ ಮಾಹಿತಿ ಕಲ್ಪಿಸಲಾಗುವುದು‌.

ಮಂದ ದೃಷ್ಟಿಯುಳ್ಳ ವಿಕಲಚೇತನರು ಮತದಾನ ಮಾಡಲು ಮತಗಟ್ಟೆ ಕೇಂದ್ರಗಳಲ್ಲಿ ಬೂತಕನ್ನಡಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ವಿಕಲಚೇತನರು, ಆಶಕ್ತರಿಗೆ ಮತ್ತು ಹಿರಿಯ ನಾಗರಿಕರಿಗೆ ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಲ್ಲದೆ ನೇರವಾಗಿ ಮತ ಚಲಾಯಿಸಲು ಅವಕಾಶ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಯೋಜನಾ ನಿರ್ದೇಶಕ ಸಂಜೀವಪ್ಪ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಸಹಭಾಗಿತ್ವದ ನೀರಾವರಿ ಆಡಳಿತ ನಡೆಸಲು ನೀರು ಬಳಕೆದಾರರ ಸಹಕಾರ ಸಂಘಗಳನ್ನು ಬಲವರ್ಧನೆ ಅತ್ಯಗತ್ಯ

Published

on

ಮಂಡ್ಯ: ಸಹಭಾಗಿತ್ವದ ನೀರಾವರಿ ಆಡಳಿತ ನಡೆಸಲು ನೀರು ಬಳಕೆದಾರರ ಸಹಕಾರ ಸಂಘಗಳನ್ನು ಬಲವರ್ಧನೆ ಅತ್ಯಗತ್ಯ ಎಂದು ಮಂಗಲ ನೀರು ಬಳಕೆದಾರರ ಸಹಕಾರ ಸಂಘದ ನಿರ್ದೇಶಕ ಮಂಗಲ ಯೋಗೇಶ್ ಆಗ್ರಹ ಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಭಾಗಿತ್ವದಲ್ಲಿ ನೀರಾವರಿ ಆಡಳಿತವನ್ನು ಪ್ರಾರಂಭಿಸಿ ಆ ಮೂಲಕ ರೈತರಲ್ಲಿ ನೀರು ನಿರ್ವಹಣೆ, ನೀರಿನ ಮಿತ ಬಳಕೆ ಮತ್ತು ಸದ್ಬಳಕೆ ಮಾಡುವ ಮಹತ್ವಾಕಾಂಕ್ಷೆಯೊಡನೆ ಪ್ರಾರಂಭಿಸಿದ ನೀರು ಬಳಕೆದಾರರ ಸಹಕಾರ ಸಂಘಗಳ ಬಲವರ್ಧನೆ ಅವಶ್ಯಕವಾಗಿದೆ. ಹಾಗಾಗಿ ನೀರು ಬಳಕೆದಾರರ ಸಹಕಾರ ಸಂಘಗಳನ್ನು ಬಲವರ್ಧನೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಕಳೆದ ಮೂರು ದಶಕಗಳಿಂದಲೂ ನೀರು ಬಳಕೆದಾರರ ಸಹಕಾರ ಸಂಘಗಳು ನಿರೀಕ್ಷಿತ ಪ್ರಮಾಣದಲ್ಲಿ ಯಶಸ್ಸು ಸಾಧಿಸಿಲ್ಲ .ಈ ಸಂಬಂಧ ನೀರು ಬಳಕೆದಾರರ ಸಹಕಾರ ಸಂಘ ,ವಿತರಣಾ ವ್ಯಾಪ್ತಿಯ ಒಕ್ಕೂಟ, ಅಣೆಕಟ್ಟೆ ವ್ಯಾಪ್ತಿಯಲ್ಲಿ ಯೋಜನಾ ಮಟ್ಟದ ಮಹಾಮಂಡಳ, ರಾಜ್ಯಮಟ್ಟದಲ್ಲಿ ಶೃಂಗ ಮಹಾ ಮಂಡಳಗಳ ರಚನೆಯನ್ನು ಜರೂರಾಗಿ ಮಾಡಬೇಕಿದೆ ಎಂದರು.

ವಿಕೇಂದ್ರಿತ ಸಂಘಗಳ ಕಾರ್ಯ ಚಟುವಟಿಕೆಗಳು ಪ್ರಸಕ್ತ ಪರಿಣಾಮಕಾರಿಯಾಗಿ ನಡೆಯಬೇಕಾದರೆ ಈ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಿದೆ. ಯೋಜನೆಗಿಂತ ಮುನ್ನ 2000ನೇ ಇಸವಿಯಲ್ಲಿ ಕರ್ನಾಟಕ ಸರ್ಕಾರ ನೀರಾವರಿ ಕಾಯಿದೆಗೆ ತಿದ್ದುಪಡಿ ತಂದಿರುವುದು ನೀರು ಬಳಕೆದಾರರ ಸಹಕಾರ ಸಂಘಗಳ ಬಲವರ್ಧನೆಗೆ ಸಹಕಾರಿಯಾಗಿದ್ದು, ಈ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ರಾಷ್ಟ್ರೀಯ ಬ್ಯಾಂಕುಗಳು ರೈತರಿಗೆ ಸಾಲ ವಿತರಿಸುವಾಗ ನೀರು ಬಳಕೆದಾರರ ಸಹಕಾರ ಸಂಘಗಳಿಂದಲೇ ಬಾಕಿ ಪ್ರಮಾಣಪತ್ರವನ್ನು ಪಡೆದುಕೊಳ್ಳುವಂತೆ ಸೂಚಿಸಬೇಕು. ಕೇಂದ್ರ ಸರ್ಕಾರದ ಧನಸಹಾಯದ ಕಾರ್ಯಕ್ರಮದಲ್ಲಿ ನೀರು ಬಳಕೆದಾರರ ಸಂಘಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು. ವಾರ್ಷಿಕ ಕಾರ್ಯ ಧನವನ್ನು 1 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಬೇಕು. ವಿಸಿ ನಾಲಾ ಆಧುನಿಕರಣ ಕಾಮಗಾರಿಯನ್ನು ನಿಲ್ಲಿಸಿ ಮುಂಗಾರಿನಲ್ಲಿ ನೀರು ಹರಿಸಲು ಕ್ರಮ ಕೈಗೊಳ್ಳಬೇಕು. ಮಹಾಮಂಡಲಗಳಿಗೆ ಶೇರುಧನವಾಗಿ ಒಂದು ಕೋಟಿ ರೂಪಾಯಿಗಳನ್ನು ಸರ್ಕಾರ ನೀಡಿ ಸಮರ್ಪಕವಾಗಿ ಕಾರ್ಯ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಕೊತ್ತತ್ತಿ ನೀರು ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷ ಕೆ ಎಸ್ ರವಿ, ಎಂ ಬಿ ಸುರೇಶ, ಚನ್ನಪ್ಪ, ಚಂದ್ರಶೇಖರ ಸೇರಿದಂತೆ ಇತರರು ಉಪಸ್ಥಿತರಿದ್ದರು

Continue Reading

Mandya

ಆರೋಗ್ಯಯುತವಾದ ಜೀವನಕ್ಕಾಗಿ 1 ಗಂಟೆ ಸಮಯವನ್ನು ಮೀಸಲಿಡಿ: ಡಾ: ಸೀತಾಲಕ್ಷ್ಮಿ

Published

on

ಮಂಡ್ಯ: ಆರೋಗ್ಯಯುತ ಜೀವನಕ್ಕಾಗಿ ಪ್ರತಿದಿನ ಯೋಗ, ವ್ಯಾಯಮ, ವಾಕ್ ಯಾವುದಾದರೂ ದೈಹಿಕ ಚಟುವಟಿಕೆಗೆ ಒಂದು ಗಂಟೆ ಮೀಸಲಿಡಿ ಎಂದು ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಸೀತಾ ಲಕ್ಷ್ಮಿ ಅವರು ಹೇಳಿದರು.

ಅವರು ಮಿಮ್ಸ್ ಇಲಾಖೆಯಲ್ಲಿ ಹಮ್ಮಿಕೊಂಡಿದ್ದ ಯೋಗೋತ್ಸವ ಕಾರ್ಯಕ್ರಮವನ್ನು ಕುರಿತು ಮಾತನಾಡಿ, 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಸಂಬಂಧ ಯೋಗೋತ್ಸವ ಕಾರ್ಯಕ್ರಮವನ್ನು ಮಂಡ್ಯ ಜಿಲ್ಲೆಯ ಮಿಮ್ಸ್ ಇಲಾಖೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಭಾಗವಹಿಸುವ ಎಲ್ಲಾ ವಿದ್ಯರ್ಥಿಗಳಿಗೂ ಡಿಜಿಟಲ್ ಪ್ರಮಾಣಪತ್ರ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಎಸ್.ಪಿ.ವೈ.ಎಸ್ ಎಸ್.ನ ಜಿಲ್ಲಾ ಸಂಚಾರಕರಾದ ಶಂಕರ ನಾರಾಯಣ ಶಾಸ್ತ್ರೀ, ಯೋಗ ತರಬೇತುದಾರ ಶಿವರುದ್ರ ಸ್ವಾಮಿ, ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮುಖ್ಯಸ್ಥರಾದ ರವಿ, ಮಿಮ್ಸ್ ನಿರ್ದೇಶಕ ಹಾಗೂ ಡೀನ್ ಡಾ.ಪಿ ನರಸಿಂಹಮೂರ್ತಿ, ಮಿಮ್ಸ್ ವೈದ್ಯಕೀಯ ಅಧೀಕ್ಷಕರು ಡಾ.ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು

Continue Reading

Mandya

ಕೃಷಿ ಸಚಿವರಿಂದ 2 ಕೋಟಿ ರೂ. ವೆಚ್ಚದ ಬೆಳ್ಳೂರು ರೈತ ಸಂಪರ್ಕ ಕೇಂದ್ರದ ಶಂಕುಸ್ಥಾಪನೆ

Published

on

ನಾಗಮಂಗಲ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಇಂದು 2 ಕೋಟಿ ರೂ. ವೆಚ್ಚದಲ್ಲಿ ಬೆಳ್ಳೂರು ರೈತ ಸಂಪರ್ಕ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದರು.

ರೈತರ ಹಿತ ಸಂರಕ್ಷಣೆ ಸರ್ಕಾರದ ಆದ್ಯತೆ: ಎನ್ ಚಲುವರಾಯಸ್ವಾಮಿ

ರೈತರ ಹಿತ ಸಂರಕ್ಷಣೆ ರಾಜ್ಯ ಸರ್ಕಾರದ ಮೊದಲ ಅದ್ಯತೆ ಎಂದು ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚುವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು.

ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ನೂತನ ರೈತ ಸಂಪರ್ಕ ಕೇಂದ್ರಕ್ಕೆ ಗುದ್ದಲಿ ಪೂಜೆ ನೇರವೇರಿಸಿ ಕೃಷಿಕರಿಗೆ ರಸಗೊಬ್ಬರ, ಬಿತ್ತನೆ ಬೀಜ, ಕೀಟನಾಶಕಗಳನ್ನು ವಿತರಿಸಿ ಸಚಿವರು ಮಾತನಾಡಿದರು.

ರೈತರರು ಸಮಗ್ರ ಬೇಸಾಯದ ಬಗ್ಗೆ ಗಮನ ಹರಿಸಬೇಕು. ಕಡ್ಡಾಯವಾಗಿ ಬೆಳೆ ವಿಮೆ ನೋಂದಣಿ ಮಾಡಿಸಿ ಅನಿರೀಕ್ಷಿತ ನಷ್ಟ ದಿಂದ ರಕ್ಷಣೆ ಪಡೆಯಬೇಕು ಎಂದು ಅವರು ಹೇಳಿದರು.

ಎಲ್ಲಾ ರೈತ ಸಂಪರ್ಕ ಕೇಂದ್ರಗಳ ಮೂಲಕ ಬಿತ್ತನೆ ಬೀಜಗಳು, ರಸಗೊಬ್ಬರ ಹಾಗೂ ರೈತರಿಗೆ ಸಿಗುವ ಸಬ್ಸಿಡಿ ಉಪಯೋಗವಾಗುವ ಇನ್ನಿತರ ಮಾಹಿತಿಯನ್ನು ನೀಡಲಾಗುತ್ತದೆ ಎಂದು ಎನ್.ಚಲುವರಾಯಸ್ವಾಮಿ ತಿಳಿಸಿದರು.

ತಾವು ಕೃಷಿ ಸಚಿವರಾದ ನಂತರ ರೈತರಿಗೆ ಎಲ್ಲಾ ಸೌಲಭ್ಯ ಒಂದೇ ಕಡೆ ಸಿಗವಂತೆ ಮಾಡಲು ರೈತ ಸಂಪರ್ಕ ಕೇಂದ್ರಗಳನ್ನು ಸಶಕ್ತಗೊಳಿಸಲಾಗುತ್ತಿದೆ ಎಂದು ಅವರು ಹೇಳಿದರು.

ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ‌ ಇಲಾಖೆಯಲ್ಲಿ 600 ಸಹಾಯಕ ಕೃಷಿ ಅಧಿಕಾರಿ ಹಾಗೂ ಕೃಷಿ ಅಧಿಕಾರಿಗಳ ನೇಮಕಾತಿಗೆ ಕ್ರಮವಹಿಸಲಾಗಿದೆ ಎಂದರು.

ರೈತರು ಮಳೆ ಪ್ರಮಾಣವನ್ನು ಅರಿತು ಕಡಿಮೆ ಮತ್ತು ದೀರ್ಘ ಅವಧಿಯಲ್ಲಿ ಬೆಳಗಳ ಬಗ್ಗೆ ನಿರ್ಧಾರ ಮಾಡಬೇಕಿದೆ. ಲಾಭದಾಯಕ ಕೃಷಿ ಬಗ್ಗೆ ರೈತ ಸಂಪರ್ಕ ಕೇಂದ್ರಗಳು ಮಾರ್ಗದರ್ಶನ ನೀಡುವ ಕಾರ್ಯ ನಿರ್ವಹಿಸಲಿವೆ ಎಂದು ಕೃಷಿ ಸಚಿವರು ತಿಳಿಸಿದರು.

ಬೆಳ್ಳೂರು ಹೋಬಳಿಯ ರೈತರಿಗೆ ಉಪಯೋಗ ವಾಗುವಂತೆ ರೈತ ಸಂಪರ್ಕ ಕೇಂದ್ರ ಕಟ್ಟಡಕ್ಕೆ ಶಂಕು ಸ್ಥಾಪನೆ ನೆರವೇರಿದೆ. ಮುಂದಿನ ದಿನಗಳಲ್ಲಿ ನಾಗಮಂಗಲ ತಾಲೂಕಿನ ಎಲ್ಲಾ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಪರಿಕರಗಳನ್ನು ಪೂರೈಸಲಾಗುವುದು ಎಂದು ಚಲುವರಾಯಸ್ವಾಮಿ ಹೇಳಿದರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಹಾಗೂ ಉಪ ನಿರ್ದೇಶಕಿ ಮಮತ, ನಾಗಮಂಗಲ ತಹಶೀಲ್ದಾರ್ ನಯೀಂ ಉನ್ನಿಸಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Continue Reading

Trending

error: Content is protected !!