Connect with us

Mandya

ಮತದಾನ ದೇಶದ ಉತ್ತಮ ಭವಿಷ್ಯಕ್ಕೆ ಬುನಾದಿ: ಲೋಕೇಶ್ ಮೂರ್ತಿ

Published

on

ಪಾಂಡವಪುರ: ದೇಶದ ಪ್ರಜಾ ಪ್ರಭುತ್ವಕ್ಕೆ ಮತದಾನ ಅತ್ಯಂತ್ಯ ಪ್ರಮುಖ. ಪ್ರತಿಯೊಂದು ಮತವೂ ದೇಶದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ. ಮತ ಚಲಾಯಿಸುವ ಮೂಲಕ ಕರ್ತವ್ಯ ನಿರ್ವಹಿಸಿ ಎಂದು ಪಾಂಡವಪುರ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲೋಕೇಶ್ ಮೂರ್ತಿ ರವರು ಹೇಳಿದರು.

ಪಾಂಡವಪುರ ತಾಲೂಕಿನ ಟಿ.ಎಸ್ ಛತ್ರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಟ್ಟಣಗೆರೆ ಗ್ರಾಮದ ನರೇಗಾ ಯೋಜನೆಯಡಿ ಅಭಿವೃದ್ದಿ ಮಾಡುತ್ತಿರುವ ಕುಂಬಾರ ಕಟ್ಟೆ ಕಾಮಗಾರಿ ಸ್ಥಳದಲ್ಲಿ ಸ್ವೀಪ್ ಚಟುವಟಿಕೆ ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರು ಏ.26 ರಂದು ತಪ್ಪದೇ ಮತದಾನ ಮಾಡಬೇಕು. ನರೇಗಾ ಯೋಜನೆಯಡಿ ಕೂಲಿಕಾರರಿಗೂ ಮತದಾನದ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದರು.

ಮತದಾನ ದಿವಸ ಎಲ್ಲಾ ಕೆಲಸವನ್ನು ಬದಿಗಿಟ್ಟು ಮತದಾನ ಮಾಡಬೇಕು. ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ತಪ್ಪದೆ ಮತ ಚಲಾಯಿಸಿ ಎಲ್ಲಾರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.

ನನ್ನ ಮತ ನನ್ನ ಹಕ್ಕು ಎಂಬ ಘೋಷವಾಕ್ಯದೊಡನೆ ಯುವಕ ಯುವತಿಯರು ಮತದಾನ ಮಾಡುವುದರ ಮೂಲಕ ದೇಶದ ಅಭಿವೃದ್ಧಿಗೆ ಸ್ವ-ಇಚ್ಚೆಯಿಂದ ಆರ್ಹ ಅಭ್ಯರ್ಥಿಗೆ ಮತ ಚಲಾಯಿಸಬೇಕು.

ಗ್ರಾಮೀಣ ಭಾಗದ ಜನರು ಮತದಾನ ಪ್ರಕ್ರಿಯೆಯಲ್ಲಿ ನಗರ ಪ್ರದೇಶಕ್ಕಿಂದ ಹೆಚ್ಚಾಗಿ ಭಾಗವಹಿಸುತ್ತಾರೆ. ಇದು ಉತ್ತಮ ಬೆಳವಣಿಗೆಯಾಗಿದ್ದು, ಇದರಿಂದ ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅನುಕೂಲಕರವಾಗುತ್ತದೆ . ಮತದಾನದಿಂದ ಯಾರು ಕೂಡ ವಂಚಿತರಾಗಬಾರದು ಎಂದು ತಿಳಿಸಿದರು. ಇದೇ ವೇಳೆ ಮತದಾನ ಪ್ರತಿಜ್ಞಾನ ವಿಧಿ ಬೋಧಿಸಲಾಯಿತು.

ಈ ವೇಳೆ ಸಹಾಯಕ ನಿದೇಶಕರಾದ ಸುರೇಂದ್ರ (ಗ್ರಾ.ಉ), ಪಿಡಿಓ ಮಹೇಶ , ನರೇಗಾ ಸಿಬ್ಬಂದಿ ಐಇಸಿ ಸಂಯೋಜಕಿ ಕುಸುಮ, ಟಿಎಇ ಹರೀಶ್ , ಪ್ರತಾಪ್ ಹಾಗೂ ಎನ್, ಆರ್ , ಎಲ್ , ಎಂ ಸಿಬ್ಬಂದಿಗಳು ನರಸಿಂಹ, ವಿಕಾಸ್ , ನಾರಾಯಣ್ ಮಂಜುನಾಥ್ ಮತ್ತು ಸುರೇಶ್ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಖಾಸಗಿ ಕಂಪನಿಗಳಲ್ಲಿ ಮೀಸಲಾತಿ ಬಗ್ಗೆ ರಾಜ್ಯ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬಾರದು

Published

on

ಮಂಡ್ಯ : ಖಾಸಗಿ ಕಂಪನಿಗಳಲ್ಲಿ ಮೀಸಲಾತಿ ನೀಡುವ ಬಗ್ಗೆ ರಾಜ್ಯ ಸಚಿವ ಸಂಪುಟ ತೆಗೆದುಕೊಂಡಿರುವ ನಿರ್ಧಾರದಿಂದ ಹಿಂದೆ ಸರಿಯಬಾರದು ಎಂದು ಮೈಶುಗರ್ ಕಬ್ಬು ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಎಸ್.ಎಂ.ವೇಣುಗೋಪಾಲ್ ತಾಕೀತು ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟ ತೆಗೆದುಕೊಂಡಿರುವ ತೀರ್ಮಾನದಿಂದ ಕನ್ನಡಿಗರಿಗೆ ಉದ್ಯೋಗ ಪಡೆಯಲು ಅನುಕೂಲವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ತೆಗೆದುಕೊಂಡಿರುವ ನಿರ್ಣಯದಿಂದ ಹಿಂದೆ ಸರಿಯಬಾರದು ಎಂದು ಆಗ್ರಹ ಪಡಿಸಿದರು.

ದಶಕಗಳಿಂದ ಖಾಸಗಿ ವಲಯದ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಸಿಗಬೇಕು ಎನ್ನುವುದು ನಮ್ಮ ಆಗ್ರಹವಾಗಿತ್ತು . ಮುಖ್ಯಮಂತ್ರಿಯ ಸಿದ್ದರಾಮಯ್ಯ ಅವರು ಖಾಸಗಿ ಉದ್ಯಮಗಳಲ್ಲಿ ಸಿ ಮತ್ತು ಡಿ ವಲಯಗಳಲ್ಲಿ ಶೇಕಡ 70ರಷ್ಟು ಹಾಗೂ ಎ ಮತ್ತು ಬಿ ಹುದ್ದೆಗಳಿಗೆ ಶೇಕಡ 50 ರಷ್ಟು ಮೀಸಲಾತಿ ಕಲ್ಪಿಸುವ ಬಗ್ಗೆ ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ತೀರ್ಮಾನ ಸಮಂಜಸವಾಗಿದೆ ಎಂದರು.

ಆದರೆ ಕಾರಣಾಂತರಗಳಿಂದ ಈ ತೀರ್ಮಾನದಿಂದ ರಾಜ್ಯ ಸರ್ಕಾರ ಹಿಂದೆ ಸರಿದಿರುವುದು ಕಂಡುಬಂದಿದ್ದು , ಹಾಗಾಗಿ ಯಾವುದೇ ಕಾರಣಕ್ಕೂ ಈ ದಿಟ್ಟ ಕ್ರಮದಿಂದ ಸರ್ಕಾರ ಹಿಂದೆ ಸರಿಯಬಾರದು ಎಂದು ಒತ್ತಾಯಿಸಿದರು.

ಅಪ್ರೆಂಟಿಸ್ ಮತ್ತು ಇಂಟರ್ಶಿಪ್ ತರಬೇತಿ ನೀಡಬೇಕು ಅನ್ನುತ್ತಿದ್ದಾರೆ ಆದರೆ ಕಂಪನಿಗಳೇ ನೀಡಬಹುದು ಎಂದು ತಿಳಿಸಿದರು.

ನಮ್ಮ ನೆಲ ನಮ್ಮ ಜಲ ಬಳಕೆ ಮಾಡಿಕೊಂಡು ಕೆಲಸ ನೀಡುವ ವಿಚಾರದಲ್ಲಿ ವಿರೋಧ ವ್ಯಕ್ತ ಪಡಿಸುತ್ತಿರುವುದು ಸರಿಯಲ್ಲ. ಕನ್ನಡಿಗರಿಗೆ ಸಿಗುವ ಸೌಲಭ್ಯವನ್ನು ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಕಾರ್ಯರೂಪಕ್ಕೆ ತರಬೇಕು ಎಂದು ತಾಕೀತು ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಎಸ್ ಕೃಷ್ಣ, ಶಿವಲಿಂಗಯ್ಯ , ಎಂ ಸಿ ರಮೇಶ್, ಮಂಜು ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

Mandya

ಕೆ ಆರ್ ಎಸ್ ಜಲಾಶಯದಿಂದ ನದಿಗೆ ಅಧಿಕ ನೀರು ಬಿಡುಗಡೆ ಹಿನ್ನೆಲೆ ಡಿಸಿ ಪರಿಶೀಲನೆ

Published

on

ಶ್ರೀರಂಗಪಟ್ಟಣ : ತಾಲ್ಲೂಕಿನ ಕೆ.ಆರ್ ಎಸ್ ಜಲಾಶಯದಿಂದ ಕಾವೇರಿ ನದಿಗೆ ಅಧಿಕ ನೀರು ಬಿಡುಗಡೆ ಮಾಡುತ್ತಿರುವ ಹಿನ್ನೆಲೆಯಲ್ಲಿ ನೆರೆ ಪರಿಸ್ಥಿತಿಯಿಂದ ಹಾನಿಯಾಗುವ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಡಾ;ಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಳಗೊಳ, ಪಶ್ಚಿಮ ವಾಹಿನಿ, ಬಲಮುರಿ, ಕರೇಕುರ, ಎಡಮುರಿ ಸೇರಿದಂತೆ ಕಾವೇರಿ ನದಿ ತೀರದ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಮುಂಜಾಗೃತಾ ಕ್ರಮವಾಗಿ ಕೈಗೊಂಡಿರುವ ಸಿದ್ದತೆಗಳ ಬಗ್ಗೆ ಅಧಿಕಾರಿಗಳು ಮಾಡಿಕೊಂಡಿರು ಸಿದ್ಧತೆ ಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಈಗಾಗಲೇ ತಗ್ಗು ಪ್ರದೇಶದ ಜನತೆ ಎಚ್ಚರ ವಹಿಸುವಂತೆ ನೀರಾವರಿ ಇಲಾಖೆ ಎಚ್ಚರಿಕೆ ನೀಡಿದ್ದು, ಮುಳುಗಡೆಯಾಗುವ ಪ್ರದೇಶಗಳ ಬಗ್ಗೆ ಜಿಲ್ಲಾಡಳಿತ ಅಗತ್ಯ ಕ್ರಮಕ್ಕೆ ಮುಂದಾಗಿದೆ.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರೆ ‌ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mandya

ವಿದ್ಯಾರ್ಥಿಗಳು ಗುರಿ ಮತ್ತು ಶಿಸ್ತನ್ನು ಅಳವಡಿಸಿಕೊಳ್ಳಿ – ಶಾಸಕ ಹೆಚ್.ಟಿ.ಮಂಜು

Published

on

ಕೆ.ಆರ್.ಪೇಟೆ : ವಿದ್ಯಾರ್ಥಿಗಳು ಗುರಿ ಮತ್ತು ಶಿಸ್ತನ್ನು ಅಳವಡಿಸಿಕೊಂಡು ಸತತ ಪರಿಶ್ರಮ ಹಾಗೂ ಅಭ್ಯಾಸದ ಮೂಲಕ ಯಸಸ್ಸುಗಳಿಸಿಕೊಳ್ಳಬೇಕು ಎಂದು ಶಾಸಕ ಹೆಚ್.ಟಿ.ಮಂಜು ಕಿವಿ ಮಾತು ಹೇಳಿದರು.

ಅವರು ತಾಲ್ಲೂಕಿನ ಶೀಳನೆರೆ ಗ್ರಾಮದಲ್ಲಿ ನಿರಂತರ ಫೌಂಡೇಶನ್ ಸಂಸ್ಥೆಯ ವತಿಯಿಂದ ಪ್ರೌಡಶಾಲೆ ಹಾಗೂ ಕಾಲೇಜಿಗೆ ಕಂಪ್ಯೂಟರ್ ಹಾಗೂ ಎರಡು ಪ್ರಜೆಕ್ಟರ್ ಸಾಮಗ್ರಿಗಳನ್ನು ಹಸ್ತಾಂತರಿಸಿ ಮಾತನಾಡಿ, ನಿರಂತರ ಸಂಸ್ಥೆ ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಶಾಲೆಗಳನ್ನು ಗುರುತಿಸಿ ಅವುಗಳಿಗೆ ಸಹಕಾರ ನೀಡುತ್ತಾ ಬರುತ್ತಿದೆ. ಒಂದು ಸರ್ಕಾರ ಮಾಡಲಾಗದ ಕೆಲಸವನ್ನು ಸ್ವಯಂ ಸೇವಾ ಸಂಸ್ಥೆ ಮಾಡುತ್ತಿರುವುದು ಶ್ಲಾಘನೀಯ ಹಾಗೂ ಸಂತಸದ ವಿಷಯ. ಅವರ ಸೇವೆ ನಿರಂತರವಾಗಿ ಹೀಗೆ ಮುಂದುವರೆಯಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅಶ್ವತ್ಥರಗಳನ್ನ ಈಡೇರಿಸುತ್ತಿರುವ ನಿರಂತರ ಸಂಸ್ಥೆ ಹೆಮ್ಮರವಾಗಿ ಬೆಳೆಯಲಿ ಎಂದು ಶುಭ ಕೋರಿದರುಕಾಲೇಜು ಕಟ್ಟಡಕ್ಕೆ ಮೇಲ್ಛಾವಣಿ ಹಾಗೂ ತುರ್ತು ರಿಪೇರಿ ಕೆಲಸ ಮಾಡಿಸಿ ಕೊಡಲಾಗುವುದು.

ನಿರಂತರ ಸಂಸ್ಥೆಯ ಶಿವಕುಮಾರ್ ಮಾತನಾಡಿ 2006-07 ಸಾಲಿನಲ್ಲಿ ಆರಂಭವಾದ ನಿರಂತರ ಫೌಂಡೇಶನ್ ಸಂಸ್ಥೆ ಹಲವಾರು ವ್ಯಕ್ತಿಗಳ ದುಡಿಮೆಯ ಶ್ರಮದ ಪ್ರತಿಫಲದಿಂದ ಕಟ್ಟಿದ ಸಂಸ್ಥೆಯಾಗಿದೆ. ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಶಿಕ್ಷಣ, ಆಹಾರ, ಚಿಗುರು, ವಸ್ತ್ರ ಮುಂತಾದ ಹೆಸರಿನಲ್ಲಿ ಸಾಕಷ್ಟು ಕೆಲಸಗಳನ್ನು ನೈಜ ಫಲಾನುಭವಿಗಳಿಗೆ ತಲುಪಿಸುವ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ನಿರಂತರ ಸಂಸ್ಥೆಯ ಜಗದೀಶ್. ರಾಜ್ಯ ಮಾರಾಟ ಮಹಾ ಮಂಡಳಿಯ ನಿರ್ದೇಶಕ ಎಸ್.ಎಲ್.ಮೋಹನ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾದ್ಯಕ್ಷ ಪ್ರಸನ್ನ, ಗ್ರಾಪಂ ಸದಸ್ಯ ಸಿದ್ದೇಶ್, ಕಾಲೇಜಿನ ಪ್ರಾಂಶುಪಾಲ ಎಂ.ಕೆ.ವಾಸು, ತಾಲ್ಲೂಕು ಉಪನ್ಯಾಸಕರ ಸಂಘದ ಅಧ್ಯಕ್ಷ ಮಂಜುನಾಥ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ನೀಲಮ್ಮ, ಎಸ್.ಡಿ.ಎಂಸಿ ಅಧ್ಯಕ್ಷ ಶಿವರಾಮು, ಎಂಡಿಸಿಸಿ ಬ್ಯಾಂಕ್ ಉದ್ಯೊಗಿ ಸೋಮಣ್ಣ, ಪ್ರಕಾಶ್ ಹಾಗೂ ಕಾಲೇಜಿನ ಉಪನ್ಯಾಸಕರು, ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Continue Reading

Trending

error: Content is protected !!